Tag: ಟೆಲ್ ಅವಿವ್

  • ಏ.30 ರವರೆಗೆ  ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ಏ.30 ರವರೆಗೆ ಇಸ್ರೇಲ್‌ಗೆ ಏರ್ ಇಂಡಿಯಾ ಸೇವೆ ಸ್ಥಗಿತ

    ನವದೆಹಲಿ: ಇಸ್ರೇಲ್ ಮತ್ತು ಇರಾನ್ (Israel and Iran) ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿರುವುದರಿಂದ ಏಪ್ರಿಲ್ 30 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಬರುವ ಎಲ್ಲಾ ವಿಮಾನಗಳನ್ನು ಸ್ಥಗಿತಗೊಳಿಸಿದೆ.

    ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಏರ್‌ ಇಂಡಿಯಾ (Air India), ಮಧ್ಯಪ್ರಾಚ್ಯದಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ನಮ್ಮ ವಿಮಾನಗಳನ್ನು 30 ಏಪ್ರಿಲ್ ರವರೆಗೆ ಸ್ಥಗಿತಗೊಳಿಸಲಾಗುವುದು. ನಾವು ನಿರಂತರವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ. ಈ ಸಮಯದಲ್ಲಿ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಪ್ರಯಾಣಕ್ಕಾಗಿ ಬುಕಿಂಗ್‌ಗಳನ್ನು ದೃಢಪಡಿಸಿದ ನಮ್ಮ ಪ್ರಯಾಣಿಕರಿಗೆ ಬೆಂಬಲವನ್ನು ನೀಡುತ್ತಿದ್ದೇವೆ. ಏರ್ ಇಂಡಿಯಾದಲ್ಲಿ ನಮ್ಮ ಗ್ರಾಹಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಮೊದಲ ಆದ್ಯತೆಯಾಗಿದೆ ಎಂದು ತಿಳಿಸಿದೆ.

    ಕಳೆದ ಭಾನುವಾರವಷ್ಟೇ ಏರ್ ಇಂಡಿಯಾ ಅಧಿಕಾರಿಯೊಬ್ಬರು ದೆಹಲಿ ಮತ್ತು ಟೆಲ್ ಅವೀವ್ ನಡುವಿನ ನೇರ ವಿಮಾನಗಳನ್ನು ಸದ್ಯಕ್ಕೆ ಸ್ಥಗಿತಗೊಳಿಸಲಾಗಿದೆ ಎಂದು ಹೇಳಿದ್ದರು. ಇದನ್ನೂ ಓದಿ: ಇರಾನ್, ಇಸ್ರೇಲ್‍ಗೆ ಪ್ರಯಾಣಿಸದಂತೆ ನಾಗರಿಕರಿಗೆ ಕೇಂದ್ರದ ಸಲಹೆ

    ಟಾಟಾ ಸಮೂಹ-ಮಾಲೀಕತ್ವದ ವಾಹಕವು ಸುಮಾರು ಐದು ತಿಂಗಳ ಅಂತರದ ನಂತರ ಮಾರ್ಚ್ 3 ರಂದು ಇಸ್ರೇಲಿ ರಾಜಧಾನಿಗೆ ಸೇವೆಗಳನ್ನು ಮರುಪ್ರಾರಂಭಿಸಿತು. ಇಸ್ರೇಲಿ ನಗರದ ಮೇಲೆ ಹಮಾಸ್ ದಾಳಿಯ ಹಿನ್ನೆಲೆಯಲ್ಲಿ 2023 ರ ಅಕ್ಟೋಬರ್ 7 ರಿಂದ ಏರ್ ಇಂಡಿಯಾ ಟೆಲ್ ಅವೀವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಿತು.

  • ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    ಗಾಜಾ ಮೇಲೆ ಇಸ್ರೇಲ್ ಮಹಾಯುದ್ಧ – 30 ಪ್ಯಾಲೆಸ್ತೀನಿಯರು ಸಾವು

    – ಕಳೆದ 24 ಗಂಟೆಯಲ್ಲಿ 266 ಮಂದಿ ದುರ್ಮರಣ

    ಟೆಲ್ ಅವಿವ್: ಇಸ್ರೇಲ್ (Israel) ಸೋಮವಾರ ಮುಂಜಾನೆ ಗಾಜಾದ (Gaza) ಮೇಲೆ ಬಾಂಬ್ ದಾಳಿಯನ್ನು ಮುಂದುವರಿಸಿದ್ದು, ದಕ್ಷಿಣ ಲೆಬನಾನ್ (Southern Lebanon) ಅನ್ನು ರಾತ್ರಿಯಿಡೀ ಹೊಡೆದಿದೆ. ದಾಳಿಗಳು ಕೇಂದ್ರ ಮತ್ತು ಉತ್ತರದ ಮೇಲೆ ಕೇಂದ್ರೀಕೃತವಾಗಿವೆ ಎಂದು ವರದಿಗಳು ತಿಳಿಸಿವೆ.

    ಸೋಮವಾರ ಮುಂಜಾನೆ ಗಾಜಾ ಪಟ್ಟಿಯಲ್ಲಿರುವ ಮೂರು ಆಸ್ಪತ್ರೆಗಳ (Hospital) ಸಮೀಪದಲ್ಲಿ ಇಸ್ರೇಲ್ ಬಾಂಬ್ ದಾಳಿ ನಡೆಸಿದೆ ಎಂದು ಪ್ಯಾಲೇಸ್ತೀನಿಯನ್ ಮಾಧ್ಯಮ ವರದಿ ಮಾಡಿದೆ. ಆದರೆ ಬಾಂಬ್ ದಾಳಿಯಿಂದ ಆಸ್ಪತ್ರೆ ಹಾನಿಗೊಳಗಾಗಿದೆ ಎಂಬುದು ಸ್ಪಷ್ಟವಾಗಿಲ್ಲ. ಇಸ್ರೇಲ್ ಗಾಜಾ ನಗರದ ಶಿಫಾ ಮತ್ತು ಅಲ್-ಕುದ್ಸ್ ಆಸ್ಪತ್ರೆಗಳ ಬಳಿ ಮತ್ತು ಎನ್‌ಕ್ಲೇವ್‌ನ ಉತ್ತರದಲ್ಲಿರುವ ಇಂಡೋನೇಷಿಯನ್ ಆಸ್ಪತ್ರೆಯ ಬಳಿ ದಾಳಿ ಮಾಡಿದೆ ಎಂದು ವರದಿ ಹೇಳಿದೆ. ಇದನ್ನೂ ಓದಿ: Israel Hamas War: ಸಂಕಷ್ಟದಲ್ಲಿರುವ ಪ್ಯಾಲೆಸ್ತೀನಿಯರಿಗೆ ಭಾರತದಿಂದ ಮಾನವೀಯ ನೆರವು

    ಇದಕ್ಕೂ ಮೊದಲು, ಅಲ್-ಕುಡ್ಸ್ ಆಸ್ಪತ್ರೆಯನ್ನು ಸ್ಥಳಾಂತರಿಸಲು ಇಸ್ರೇಲ್ ಆದೇಶಿಸಿದೆ ಎಂದು ಪ್ಯಾಲೆಸ್ತೀನಿಯನ್ ರೆಡ್ ಕ್ರೆಸೆಂಟ್ ಸೊಸೈಟಿ ಹೇಳಿದೆ. ಗಾಜಾದಲ್ಲಿನ ವಸತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 30 ಪ್ಯಾಲೆಸ್ತೀನಿಯಾದವರು (Palestinians) ಸಾವನ್ನಪ್ಪಿದ್ದಾರೆ. ಜಬಾಲಿಯಾ ನಿರಾಶ್ರಿತರ ಶಿಬಿರದ ಅಲ್-ಶುಹಾದಾ ಪ್ರದೇಶದಲ್ಲಿ ಈ ಕಟ್ಟಡವಿತ್ತು. ಇದನ್ನೂ ಓದಿ: ಸಂಬಂಧವನ್ನು ಮರುಸ್ಥಾಪಿಸುತ್ತೇವೆ – NRIಗಳಿಗೆ ಕೆನಡಾ ವಿರೋಧ ಪಕ್ಷ ಭರವಸೆ

    ಎನ್‌ಕ್ಲೇವ್‌ನಲ್ಲಿ ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವೈಮಾನಿಕ ದಾಳಿಯಿಂದ 117 ಮಕ್ಕಳು ಸೇರಿದಂತೆ 266 ಪ್ಯಾಲೆಸ್ತೀನಿಯಾದವರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಸಚಿವಾಲಯ ತಿಳಿಸಿದೆ. ಹಮಾಸ್‌ನ ರಾಜಕೀಯ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಮತ್ತು ಇರಾನ್ ವಿದೇಶಾಂಗ ಸಚಿವ ಹೊಸೈನ್ ಅಮೀರ್-ಅಬ್ದುಲ್ಲಾಹಿಯಾನ್ ಅವರು ಗಾಜಾದ ಮೇಲೆ ಇಸ್ರೇಲಿ ದಾಳಿಯನ್ನು ಹೇಗೆ ನಿಲ್ಲಿಸಬೇಕು ಎಂಬುದರ ಕುರಿತು ಚರ್ಚಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಗಾಜಾಪಟ್ಟಿಗೆ ಜಾಗತಿಕ ನೆರವು – ಪ್ಯಾಲೆಸ್ತೇನಿಗಳಿಗೆ ಆಶ್ರಯ ನೀಡದ ನೆರೆ ದೇಶಗಳು

    ಅಕ್ಟೋಬರ್ 7 ರಂದು ಪ್ಯಾಲೇಸ್ತೀನಿಯನ್ ಗುಂಪು ಹಮಾಸ್ ಇಸ್ರೇಲ್ ಮೇಲೆ ಹಠಾತ್ ದಾಳಿಯನ್ನು ಪ್ರಾರಂಭಿಸಿ 1,400 ಜನರನ್ನು ಕೊಂದ ನಂತರ ಇಸ್ರೇಲ್ ತನ್ನ ದಾಳಿಯನ್ನು ಪ್ರಾರಂಭಿಸಿದೆ. ಎರಡು ವಾರಗಳ ಬಾಂಬ್ ದಾಳಿಯಲ್ಲಿ ಕನಿಷ್ಠ 4,600 ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾದ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೆಲುವಿನ ತನಕ ವಿರಮಿಸುವುದಿಲ್ಲ: ಇಸ್ರೇಲ್ ಪ್ರಧಾನಿ ಪ್ರತಿಜ್ಞೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್

    199 ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್

    ಟೆಲ್ ಅವಿವ್: ಹಮಾಸ್ ಬಂಡುಕೋರ (Hamas Militants) ಸಂಘಟನೆ 199 ಜನರನ್ನು ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಇಸ್ರೇಲಿ (Israel) ಮಿಲಿಟರಿ ವಕ್ತಾರ ಡೇನಿಯಲ್ ಹಗರಿ ಮಾಧ್ಯಮ ಸಭೆಯಲ್ಲಿ ಹೇಳಿದ್ದಾರೆ.

    ಇದಕ್ಕೂ ಮೊದಲು ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ಅವರು, 155 ಜನರನ್ನು ಹಮಾಸ್ ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಆರೋಪಿಸಿದ್ದರು. ಅಕ್ಟೋಬರ್ 7ರಂದು ಹಮಾಸ್ ರಾಕೆಟ್ ದಾಳಿ ನಡೆಸಿದ ಬಳಿಕ ಅಕ್ರಮವಾಗಿ ಇಸ್ರೇಲ್ ಗಡಿಯನ್ನು ನುಸುಳಿದೆ. ಇಲ್ಲಿ ಜನರ ಹತ್ಯೆ ಮಾಡುವುದಲ್ಲದೇ ಮಹಿಳೆಯರು ಮಕ್ಕಳು ಸೇರಿದಂತೆ ಇಸ್ರೇಲಿ ಪ್ರಜೆಗಳನ್ನು (Citizens) ಒತ್ತೆಯಾಳಾಗಿ ಇಟ್ಟುಕೊಂಡಿದೆ ಎಂದು ಡೇನಿಯಲ್ ಹಗರಿ ವಿವರಿಸಿದರು. ಇದನ್ನೂ ಓದಿ: ಮಿಷನ್‌ ಗಗನಯಾನ; ಅ.21 ಕ್ಕೆ ಮೊದಲ ಪರೀಕ್ಷಾರ್ಥ ಉಡಾವಣೆ

    ಯುದ್ಧ ಆರಂಭವಾದ ಬಳಿಕ ಗುಂಡು ಹಾರಿಸಿ, ಇರಿದು ಮತ್ತು ಸುಟ್ಟು 1,400 ಕ್ಕೂ ಜನರನ್ನು ಹಮಾಸ್ ಹತ್ಯೆ ಮಾಡಿದೆ. ಏಳು ದಿನಗಳ ನಿರಂತರ ಬಾಂಬ್ ದಾಳಿಯು ಹಮಾಸ್ ನೆಲೆಗಳನ್ನು ನಾಶಪಡಿಸಿದೆ. ಎರಡೂ ಕಡೆಗಳಲ್ಲಿ ಒಟ್ಟು 3,000 ಜೀವಗಳನ್ನು ಯುದ್ಧ ಬಲಿ ತೆಗೆದುಕೊಂಡಿದೆ. ಇದನ್ನೂ ಓದಿ: ತೆಲಂಗಾಣ ಚುನಾವಣೆ – ‘ಕೈ’ ಪ್ರಣಾಳಿಕೆಯಲ್ಲಿ ವಧುವಿಗೆ 10 ಗ್ರಾಂ ಚಿನ್ನ, ಮಕ್ಕಳಿಗೆ ಉಚಿತ ಇಂಟರ್ನೆಟ್?

    ಯುದ್ಧ ಉಲ್ಬಣಗೊಳ್ಳುತ್ತಿದ್ದಂತೆ ಇಸ್ರೇಲಿ ಸೈನ್ಯವು ಗಾಜಾ ಪಟ್ಟಿಯ (Gaza Stripe) ಉತ್ತರದಲ್ಲಿ 1.1 ಮಿಲಿಯನ್ ಪ್ಯಾಲೆಸ್ತೀನಿಯಾದವರಿಗೆ ಸ್ಥಳಾಂತರಿಸುವ ಆದೇಶಗಳನ್ನು ನೀಡಿತು. ಅದರ 2.4 ಮಿಲಿಯನ್ ಜನಸಂಖ್ಯೆಯ ಸರಿಸುಮಾರು ಅರ್ಧದಷ್ಟು ಜನರು ತಮ್ಮ ಸುರಕ್ಷತೆಗಾಗಿ ದಕ್ಷಿಣದ ಕಡೆಗೆ ಚಲಿಸುವಂತೆ ಒತ್ತಾಯಿಸಿದೆ ಎಂದರು. ಇದನ್ನೂ ಓದಿ: ದೆಹಲಿಗೆ ಬರ್ತಿದ್ದಂತೆ ಎಲ್ಲ ಭಾರ ಇಳಿದು ನೆಮ್ಮದಿ ಸಿಕ್ಕಿತು: ಇಸ್ರೇಲ್‌ ಯುದ್ಧ ಭೀಕರತೆ ಬಿಚ್ಚಿಟ್ಟ ಕನ್ನಡಿಗರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅಖಾಡಕ್ಕಿಳಿದ ಇಸ್ರೇಲ್ ಪ್ರಧಾನಿ – ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆ

    ಅಖಾಡಕ್ಕಿಳಿದ ಇಸ್ರೇಲ್ ಪ್ರಧಾನಿ – ಹಮಾಸ್ ಬಂಡುಕೋರರಿಗೆ ನೇರ ಎಚ್ಚರಿಕೆ

    ಟೆಲ್ ಅವಿವ್: ಪ್ಯಾಲೆಸ್ತೀನ್ (Palestine) ಮತ್ತು ಇಸ್ರೇಲ್ (Israel) ನಡುವೆ ಯುದ್ಧ ಮುಂದುವರೆದಿದ್ದು, 9ನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು (Benjamin Netanyahu) ಸ್ವತಃ ಯುದ್ಧಭೂಮಿಗಿಳಿದಿದ್ದು, ಹಮಾಸ್ ಬಂಡುಕೋರರಿಗೆ (Hamas Militants) ನೇರ ಎಚ್ಚರಿಕೆಯನ್ನು ನೀಡಿದ್ದಾರೆ.

    ಗಾಜಾ ಪಟ್ಟಿಯಲ್ಲಿರುವ (Gaza Stripe) ಇಸ್ರೇಲ್ ರಕ್ಷಣಾ ಪಡೆಗಳನ್ನು ಖುದ್ದು ಭೇಟಿ ಮಾಡಿದ ನೆತನ್ಯಾಹು ಸೈನಿಕರ ಸ್ಥೈರ್ಯವನ್ನು ಹೆಚ್ಚಿಸಿದ್ದಾರೆ. ಐಡಿಎಫ್ (IDF) ಸಿಬ್ಬಂದಿಯೊಂದಿಗಿನ ಸಂವಾದದ ದೃಶ್ಯಗಳನ್ನು ಇಸ್ರೇಲ್ ಪ್ರಧಾನಿ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಯುದ್ಧ ಪೀಡಿತ ಇಸ್ರೇಲ್‍ನಿಂದ 197 ಜನರನ್ನು ಹೊತ್ತು ದೆಹಲಿಯೆಡೆಗೆ ಹಾರಿದ 3ನೇ ವಿಮಾನ

    ಆಟ ಇನ್ನು ಮುಗಿದಿಲ್ಲ, ಅಸಲಿ ಆಟ ಇನ್ನು ಶುರು ಎನ್ನುವ ಮೂಲಕ ಸೈನಿಕರ ಜೊತೆಗಿನ ಸಂವಾದದಲ್ಲಿ ಹಮಾಸ್ ಬಂಡುಕೋರರಿಗೆ ನೆತನ್ಯಾಹು ಬಿಸಿ ಮುಟ್ಟಿಸಿದ್ದಾರೆ. ನಾವೆಲ್ಲರೂ ಸಿದ್ಧ ಎಂದು ತೀವ್ರ ಪ್ರತಿದಾಳಿಯ ಸಂದೇಶ ನೀಡಿದ್ದಾರೆ.

    ಗಾಜಾಪಟ್ಟಿಯಲ್ಲಿ ಇಸ್ರೇಲ್ ಏರ್‌ಸ್ಟ್ರೈಕ್ (Air Strike) ಮುಂದುವರೆದಿದ್ದು, ಬಾಂಬ್ ದಾಳಿಗೆ ಹಲವು ಸ್ಥಳಗಳು ಧ್ವಂಸವಾಗಿದೆ. ಜಬಾಲಿಯಾ, ಬೀಚ್ ಕ್ಯಾಂಪ್‌ನಲ್ಲಿ ಶನಿವಾರ ಇಸ್ರೇಲ್ ದಾಳಿ ನಡೆಸಿದ್ದು, ಹತ್ತಾರು ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ ನೂರಾರು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್ ಹತ್ಯೆ ಮಾಡಿದ ಇಸ್ರೇಲ್ ಭದ್ರತಾ ಪಡೆ

    ಇಸ್ರೇಲ್ ಹಮಾಸ್ ಉಗ್ರರ ವಿರುದ್ಧ ಪ್ರತಿಕಾರದ ಶಪಥ ಮಾಡಿದೆ. ಉತ್ತರ ಗಾಜಾದಲ್ಲಿ ವಾಯುಸೇನೆಯಿಂದ ಏರ್‌ಸ್ಟ್ರೈಕ್ ನಡೆದ ಪರಿಣಾಮ ಅಮಾಯಕ ಜೀವಗಳು ಬಲಿಯಾಗಿವೆ. ದಾಳಿಗೂ ಮುನ್ನ ಜನರು ಸ್ಥಳಾಂತರವಾಗುವಂತೆ ಸೂಚಿಸಿದ್ದು, ಸೇನೆ ಸ್ಥಳಾಂತರದ ಅವಧಿ ಮಧ್ಯೆ ಹಲವು ದಾಳಿ ನಡೆಸಿದೆ. ಮಕ್ಕಳ ಮೇಲೆ ಹಮಾಸ್ ವಿಕೃತಿ ಮೆರೆಯುತ್ತಿರುವ ವಿಡಿಯೋವನ್ನು ಇಸ್ರೇಲ್ ಭದ್ರತಾಪಡೆ ಹಂಚಿಕೊಂಡಿದ್ದು, ಇವರೇ ನಾವು ಸೋಲಿಸಲು ಹೊರಟಿರುವ ಭಯೋತ್ಪಾದಕರು ಎಂದು ಇಸ್ರೇಲ್ ಸೇನೆ ಹೇಳಿದೆ. ಗಾಯಗೊಂಡ ಮಕ್ಕಳನ್ನು ಒತ್ತೆಯಾಳಾಗಿಟ್ಟುಕೊಂಡ ಹಮಾಸ್ ವಿರುದ್ಧ ಪ್ರತಿಕಾರವನ್ನು ತೀರಿಸಿಕೊಳ್ಳಲು ಇಸ್ರೇಲ್ ಶಪಥ ಮಾಡಿದೆ.

    ಭೂ ಆಯ್ತು, ವಾಯುವಾಯ್ತು. ಇದೀಗ ಸಮುದ್ರ ಮಾರ್ಗದಲ್ಲೂ ಹಮಾಸ್ ಮತ್ತು ಇಸ್ರೇಲ್ ಮುಖಾಮುಖಿಯಾಗಿದ್ದು, ಇಸ್ರೇಲ್ ಗಡಿ ಪ್ರವೇಶಕ್ಕೆ ಪ್ರಯತ್ನಿಸಿದ ಹಮಾಸ್ ಮೇಲೆ ಇಸ್ರೇಲ್ ಗುಂಡಿನ ದಾಳಿ ನಡೆಸಿದೆ. ಸಮುದ್ರದಲ್ಲಿ ಹಮಾಸ್ ಮತ್ತು ಇಸ್ರೇಲ್ ನೇರಾನೇರಾ ಕಾದಾಡಿದ್ದು, ಭೀಕರ ಕಾಳಗದ ವಿಡಿಯೋ ಮೈ ಜುಮ್ ಎನ್ನಿಸುತ್ತದೆ. ಸಮುದ್ರ ಮಾರ್ಗದ ಮೂಲಕ ದಾಳಿಗೆ ಹಮಾಸ್ ಯತ್ನಿಸಿದ್ದು, ಹಮಾಸ್ ದೋಣಿಯನ್ನೇ ಇಸ್ರೇಲ್ ನಾಶ ಮಾಡಿದೆ. ಇದನ್ನೂ ಓದಿ: ಹಮಾಸ್ ಬಂಡುಕೋರರು ಶುದ್ಧ ದುಷ್ಠರು: ಬೈಡನ್ ಕೆಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್ ಹತ್ಯೆ ಮಾಡಿದ ಇಸ್ರೇಲ್ ಭದ್ರತಾ ಪಡೆ

    ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ ಅಬು ಮುರಾದ್ ಹತ್ಯೆ ಮಾಡಿದ ಇಸ್ರೇಲ್ ಭದ್ರತಾ ಪಡೆ

    ನವದೆಹಲಿ/ಟೆಲ್ ಅವಿವ್: ಹಮಾಸ್ ಬಂಡುಕೋರರ  (Hamas Militants) ಗುಂಪಿನ ಹಿರಿಯ ಸದಸ್ಯ, ಹಮಾಸ್‌ನ ವೈಮಾನಿಕ ಶ್ರೇಣಿಯ ಮುಖ್ಯಸ್ಥ (Senior Military Commander) ಅಬು ಮುರಾದ್‌ನನ್ನು (Abu Murad)  ಇಸ್ರೇಲ್ (Israel) ಭದ್ರತಾ ಪಡೆಗಳು ಹತ್ಯೆ ಮಾಡಿವೆ.

    ಶನಿವಾರ ಬೆಳಗ್ಗಿನ ಜಾವ ಗಾಜಾ ಪಟ್ಟಿಯಲ್ಲಿ ಇಸ್ರೇಲ್ ವಾಯುಸೇನೆ ನಡೆಸಿದ ಏರ್‌ಸ್ಟ್ರೈಕ್‌ನಲ್ಲಿ (Air Strike) ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಇಸ್ರೇಲ್ ರಕ್ಷಣಾ ಪಡೆಗಳು ಗಾಜಾ ಪಟ್ಟಿಯಲ್ಲಿ ರಾತ್ರಿಯಿಡೀ ವೈಮಾನಿಕ ದಾಳಿ ನಡೆಸಿತು. ದಾಳಿಯು ಭಯೋತ್ಪಾದಕ ಗುಂಪು ತನ್ನ ವೈಮಾನಿಕ ಚಟುವಟಿಕೆಯನ್ನು ನಿರ್ವಹಿಸುತ್ತಿದ್ದ ಪ್ರಧಾನ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು. ಈ ದಾಳಿಯಲ್ಲಿ ಅಬು ಮುರಾದ್‌ನನ್ನು ಹತ್ಯೆಗೈಯಲಾಗಿದೆ ಎಂದು ವರದಿ ಮಾಡಿದೆ. ಇದನ್ನೂ ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ – ಬಸ್‌ಗೆ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು

    ಅಬು ಮುರಾದ್ ಕಳೆದ ಶನಿವಾರ ನಡೆದ ರಾಕೆಟ್ ದಾಳಿ ಮತ್ತು ಇಸ್ರೇಲಿ ಪ್ರಜೆಗಳ ಹತ್ಯಾಕಾಂಡದ ಸಮಯದಲ್ಲಿ ಬಂಡುಕೋರರನ್ನು ನಿರ್ದೇಶಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸಿದರು. ಅಕ್ಟೋಬರ್ 7ರಂದು ಇಸ್ರೇಲ್‌ಗೆ ಒಳನುಸುಳುವಿಕೆಗೆ ಕಾರಣವಾದ ಹಮಾಸ್‌ನ ಕಮಾಂಡೋ ಪಡೆಗಳಿಗೆ ಸೇರಿದ ಹತ್ತಾರು ಸೈಟ್‌ಗಳನ್ನು ಪ್ರತ್ಯೇಕ ದಾಳಿಗಳಲ್ಲಿ ಹೊಡೆದಿದೆ ಎಂದು ಐಡಿಎಫ್ ಹೇಳಿದೆ. ಇದನ್ನೂ ಓದಿ: ಬೃಹತ್ ದಾಳಿಯ ಮುನ್ಸೂಚನೆ ನೀಡಿದ ಇಸ್ರೇಲ್

    ಹಮಾಸ್ ಶನಿವಾರ ಇಸ್ರೇಲ್ ಮೇಲೆ ದಾಳಿ ಅರಂಭಿಸಿದ ಬಳಿಕ ದಶಕಗಳಲ್ಲೇ ಸಂಘರ್ಷದ ಅತಿದೊಡ್ಡ ಸಂಘರ್ಷ ಉಲ್ಬಣವಾಗಿದೆ. ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇಸ್ರೇಲ್ ಪ್ರತಿ-ವೈಮಾನಿಕ ದಾಳಿಯಲ್ಲಿ ಗಾಜಾದಲ್ಲಿ 1,530ಕ್ಕೂ ಹೆಚ್ಚು ಜನರನ್ನು ಕೊಂದಿದೆ. ಇಸ್ರೇಲ್‌ನಲ್ಲಿ ಸುಮಾರು 1,500 ಹಮಾಸ್ ಉಗ್ರಗಾಮಿಗಳು ಕೊಲ್ಲಲ್ಪಟ್ಟರು ಎಂದು ಇಸ್ರೇಲ್ ಹೇಳಿಕೊಂಡಿದೆ. ಇದನ್ನೂ ಓದಿ: ನಿಮ್ಮ ಜೀವ ಉಳಿಸಿಕೊಳ್ಳಲು ದಕ್ಷಿಣಕ್ಕೆ ತೆರಳಿ- ಗಾಝಾ ನಿವಾಸಿಗಳಿಗೆ ಇಸ್ರೇಲ್ ಮಹತ್ವದ ಸೂಚನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಮಾಸ್ ವಿರುದ್ಧ ಫೀಲ್ಡ್‌ಗಿಳಿದ ಇಸ್ರೇಲ್‍ನ ಮಾಜಿ ಪ್ರಧಾನಿ

    ಹಮಾಸ್ ವಿರುದ್ಧ ಫೀಲ್ಡ್‌ಗಿಳಿದ ಇಸ್ರೇಲ್‍ನ ಮಾಜಿ ಪ್ರಧಾನಿ

    ಟೆಲ್ ಅವಿವ್: ಹಮಾಸ್ ಉಗ್ರರ (Hamas Terrorists) ವಿರುದ್ಧ ಹೋರಾಡಲು ಸೇನೆಯೊಂದಿಗೆ ಇಸ್ರೇಲ್‍ನ (Israel) ಮಾಜಿ ಪ್ರಧಾನಿ ನಫ್ತಾಲಿ ಬೆನೆಟ್ ಸೇನೆಯೊಂದಿಗೆ ಕೈಜೋಡಿಸಿದ್ದಾರೆ.

    ಸೇನೆಯೊಂದಿಗೆ ಕಾರ್ಯಕ್ಕಿಳಿದು ಸೈನಿಕರೊಂದಿಗೆ ಆಪ್ತವಾಗಿ ಚರ್ಚಿಸಿದ್ದಾರೆ. ಬಳಿಕ ಹಮಾಸ್ ವಿರುದ್ಧದ ಸೇನೆಯ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ವಿದ್ಯುತ್‌, ಆಹಾರ, ನೀರು ಪೂರೈಕೆ ಇಲ್ಲ; ಗಾಜಾ ಸಂಪೂರ್ಣ ಸೀಜ್‌ಗೆ ಇಸ್ರೇಲ್ ಆದೇಶ

    ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಎಲ್ಲಾ ಹಮಾಸ್ ತಾಣಗಳಿಂದ ದೂರ ಹೋಗುವಂತೆ ಗಾಜಾ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಆ ನಗರವನ್ನು ಸಂಪೂರ್ಣವಾಗಿ ನಾಶ ಮಾಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಇದರ ಸಲುವಾಗಿ ಸುಮಾರು ಹತ್ತು ಸಾವಿರ ಸಂಖ್ಯೆಯಷ್ಟು ಸೈನಿಕರು ಮುತ್ತಿಗೆ ಹಾಕಿದ್ದಾರೆ.

    ಆಪರೇಷನ್ ಅಲ್-ಅಕ್ಸಾ ಎಂದು ಹೆಸರಿಟ್ಟು ಮುನ್ನುಗುತ್ತಿರುವ ಹಮಾಸ್ ಉಗ್ರರು ಅರಬ್ ಮತ್ತು ಇಸ್ಲಾಮಿಕ್ ರಾಷ್ಟ್ರಗಳು ಕೈಜೋಡಿಸುವಂತೆ ಕರೆ ನೀಡಿದ್ದಾರೆ. ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ನಾವು ಗೆಲುವಿನ ಅಂಚಿನಲ್ಲಿದೆ ಎಂದು ಘೋಷಿಸಿಕೊಂಡಿದ್ದಾನೆ.

    ಯುದ್ಧದಲ್ಲಿ (War) ಎರಡೂ ಕಡೆಗಳಲ್ಲಿ ಕನಿಷ್ಠ 1,200 ಜನರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಳೆದ 14 ವರ್ಷಗಳಿಂದ ಇದ್ದು, ಭಯ ಇಲ್ಲ: ಇಸ್ರೇಲಿನಲ್ಲಿದ್ದ ಕನ್ನಡಿಗನ ಮಾತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಇಸ್ರೇಲ್‌ನಲ್ಲಿ ಹಮಾಸ್ ಉಗ್ರರ ದಾಳಿ – ಅ.14 ರವರೆಗೆ ಏರ್ ಇಂಡಿಯಾ ವಿಮಾನ ರದ್ದು

    ಟೆಲ್ ಅವಿವ್: ಇಸ್ರೇಲ್‌ನಲ್ಲಿ (Israel) ಹಮಾಸ್ ಉಗ್ರರು (Hamas Militants) ದಾಳಿ ನಡೆಸಿರುವ ಹಿನ್ನೆಲೆ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ (Tel Aviv) ಮತ್ತು ಅಲ್ಲಿಂದ ಹೊರಡುವ ವಿಮಾನವನ್ನು ರದ್ದುಗೊಳಿಸಿರುವುದಾಗಿ ಏರ್ ಇಂಡಿಯಾ (Air India) ಭಾನುವಾರ ತಿಳಿಸಿದೆ.

    ಶನಿವಾರ ಇಸ್ರೇಲ್‌ನಲ್ಲಿ ಹಮಾಸ್ ಉಗ್ರರು ದಾಳಿ ನಡೆಸಿದ್ದು, ಅನೇಕ ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ವಿಮಾನಯಾನವನ್ನು ರದ್ದುಗೊಳಿಸಲಾಗಿದೆ. ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ 2023ರ ಅಕ್ಟೋಬರ್ 14 ರವರೆಗೆ ಟೆಲ್ ಅವಿವ್‌ಗೆ ಮತ್ತು ಅಲ್ಲಿಂದ ಹೊರಡುವ ವಿಮಾನಗಳನ್ನು ಸ್ಥಗಿತಗೊಳಿಸಲಾಗುವುದು ಎಂದು ಏರ್‌ಲೈನ್ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನನ್ನು ಸಾಯಿಸ್ಬೇಡಿ- ಬೇಡಿಕೊಂಡ್ರೂ ಬಿಡದೆ ಯುವತಿ ಅಪಹರಿಸಿದ ಹಮಾಸ್ ಉಗ್ರರು

    ಅಲ್ಲದೇ ಈ ಅವಧಿಯಲ್ಲಿ ಯಾವುದೇ ವಿಮಾನದಲ್ಲಿ ಬುಕ್ಕಿಂಗ್ ದೃಢಪಡಿಸಿದ ಪ್ರಯಾಣಿಕರಿಗೆ ಸಾಧ್ಯವಿರುವ ಎಲ್ಲಾ ಬೆಂಬಲವನ್ನು ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಹಮಾಸ್ ಉಗ್ರರಿಂದ ಮಗಳ ಬೆತ್ತಲೆ ಮೆರವಣಿಗೆ- ಸಾರ್ವಜನಿಕರಲ್ಲಿ ತಾಯಿ ಮನವಿ

    ಏರ್ ಇಂಡಿಯಾ ರಾಷ್ಟ್ರೀಯ ರಾಜಧಾನಿಯಿಂದ ಟೆಲ್ ಅವಿವ್‌ಗೆ ಸೋಮವಾರ, ಮಂಗಳವಾರ, ಗುರುವಾರ, ಶನಿವಾರ ಮತ್ತು ಭಾನುವಾರ ಸೇವೆಯನ್ನು ಒದಗಿಸುತ್ತದೆ. ಇದನ್ನೂ ಓದಿ: ತೆರೆದ ಟ್ರಕ್‌ನಲ್ಲಿ ಮಹಿಳೆಯ ಬೆತ್ತಲೆ ದೇಹ ಮೆರವಣಿಗೆ ಮಾಡಿದ ಹಮಾಸ್ ಉಗ್ರರು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]