Tag: ಟೈಗರ್ ನಾಗೇಶ್ವರ ರಾವ್

  • ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ರವಿತೇಜ ಚೊಚ್ಚಲ ಪ್ಯಾನ್ ಇಂಡಿಯಾ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ತೆಲುಗು ಚಿತ್ರರಂಗದ ಮಾಸ್ ಮಹಾರಾಜ ರವಿತೇಜ (Raviteja)ನಟನೆಯ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಬಿಡುಗಡೆ (Release) ದಿನಾಂಕ ನಿಗದಿಯಾಗಿದೆ. ದಸರಾ ಹಬ್ಬಕ್ಕೆ ಟೈಗರ್ ನಾಗೇಶ್ವರ್ ರಾವ್ (Tiger Nageswara Rao) ಬಾಕ್ಸಾಫೀಸ್ ಬೇಟೆಗಿಳಿದಿದ್ದಾನೆ. ಅಂದರೆ ಅಕ್ಟೋಬರ್ 22ರಂದು ವಿಶ್ವಾದ್ಯಂತ ರವಿತೇಜ ಸಿನಿಮಾ ಬೆಳ್ಳಿತೆರೆಗಪ್ಪಳಿಸಲಿದೆ. ದಸರಾ ಹಬ್ಬದ ಸುಸಂದರ್ಭ ಹಾಗೂ ದಸರಾ ರಜೆ ಹಿನ್ನೆಲೆ ಪ್ಲಾನ್ ಮಾಡಿಕೊಂಡು ಚಿತ್ರ ರಿಲೀಸ್ ಮಾಡಲಾಗ್ತಿದೆ.

    ವಂಶಿ ನಿರ್ದೇಶನದಲ್ಲಿ ತಯಾರಾಗಿರುವ ಟೈಗರ್ ನಾಗೇಶ್ವರ್ ರಾವ್ ಸಿನಿಮಾವನ್ನು ಕಾಶ್ಮೀರಿ ಫೈಲ್ಸ್ ಹಾಗೂ ಕಾರ್ತಿಕೇಯ-2 ನಂತಹ ಎರಡು ಬ್ಲಾಕ್ ಬಸ್ಟರ್ ಹಿಟ್ ಚಿತ್ರ ನಿರ್ಮಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ಅಭಿಷೇಕ್ ಅಗವಾಲ್ ಆರ್ಟ್ಸ್ ನಡಿ ಅದ್ಧೂರಿಯಾಗಿ ನಿರ್ಮಿಸಿದ್ದಾರೆ. ತಾಂತ್ರಿಕವಾಗಿ ಶ್ರೀಮಂತಿಕೆಯಿಂದ ಸಿನಿಮಾ ಮೂಡಿಬಂದಿದ್ದು, ಅದಕ್ಕಾಗಿ ಐದು ಎಕರೆ ಜಾಗದಲ್ಲಿ ಹಳ್ಳಿಯೊಂದನ್ನು ರೀ ಕ್ರಿಯೇಟ್ ಮಾಡಿ ಕೋಟ್ಯಾತರ ರೂಪಾಯಿ ಬಜೆಟ್ ನಲ್ಲಿ ಸೆಟ್ ಹಾಕಿ ಚಿತ್ರೀಕರಿಸಲಾಗಿದೆ. ಇದನ್ನೂ ಓದಿ: ಪ್ರೀತಿಯ ಹೊಸ ಮಗ್ಗುಲಿಗೆ ಕಣ್ಣಾದ `ಚೌ ಚೌ ಬಾತ್’ ಸಿನಿಮಾ

    70ರ ಕಾಲಘಟ್ಟದ ಹೈದ್ರಾಬಾದ್ ದ ಸ್ಟುವರ್ಟ್ ಪುರಂ ಹಳ್ಳಿಯೊಂದರ ಕುಖ್ಯಾತ ಕಳ್ಳನ ಜೀವನಾಧಾರಿತ ಸಿನಿಮಾ ಇದಾಗಿದ್ದು, ಈ ಹಿಂದಿನ ಎಲ್ಲಾ ಚಿತ್ರಗಳಿಗಿಂತಲೂ ರವಿತೇಜ ಗೆಟಪ್, ಬಾಡಿ ಲಾಗ್ವೇಜ್ ಸಂಪೂರ್ಣವಾಗಿ ಭಿನ್ನವಾಗಿರಲಿದೆ. ನೂಪುರ್ ಸನೋನ್ ಮತ್ತು ಗಾಯತ್ರಿ ಭಾರದ್ವಾಜ್ ನಾಯಕಿಯರಾಗಿ ಮಾಸ್ ಮಹಾರಾಜನಿಗೆ ಸಾಥ್ ಕೊಟ್ಟಿದ್ದಾರೆ. ಆರ್ ಮಧಿ ಛಾಯಾಗ್ರಹಣ, ಶ್ರೀಕಾಂತ್ ವೀಸಾ ಸಂಭಾಷಣೆ, ವಿ ಪ್ರಕಾಶ್ ಕುಮಾರ್ ಸಂಗೀತ ಸಿನಿಮಾಕ್ಕಿದೆ. ಅವಿನಾಶ್ ಕೊಲ್ಲಾ ಕಾರ್ಯಕಾರಿ ನಿರ್ಮಾಪಕರಾಗಿದ್ದು, ಮಯಾಂಕ್ ಸಿಂಘಾನಿಯಾ ಸಹ ನಿರ್ಮಾಣದ ಜವಾಬ್ದಾರಿ ನಿಭಾಯಿಸಿದ್ದಾರೆ.

  • ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಸಿನಿಮಾ ರಂಗಕ್ಕೆ ಕಂಬ್ಯಾಕ್

    ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಸಿನಿಮಾ ರಂಗಕ್ಕೆ ಕಂಬ್ಯಾಕ್

    ಮಾಸ್ ಮಹಾರಾಜ ರವಿತೇಜ್ (Ravitej) ಅಕೌಂಟ್ ನಲ್ಲಿರುವ ಬಹುನಿರೀಕ್ಷಿತ ಸಿನಿಮಾ ‘ಟೈಗರ್ ನಾಗೇಶ್ವರ ರಾವ್’ ಅಂಗಳದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ವಂಶಿ (Vamshi) ಸಾರಥ್ಯದಲ್ಲಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ಪವನ್ ಕಲ್ಯಾಣ್ (Pawan Kalyan) ಮಾಜಿ ಪತ್ನಿ ರೇಣು ದೇಸಾಯಿ ಎಂಟ್ರಿ ಕೊಟ್ಟಿದ್ದಾರೆ. ರೇಣು ಸಿನಿಮಾದಲ್ಲಿ ಪ್ರಮುಖವಾದ ಪಾತ್ರವೊಂದು ಪ್ಲೇ ಮಾಡುತ್ತಿದ್ದು, ಅವರ ಇಂಟ್ರೂಡಕ್ಷನ್ ಟೀಸರ್ ರಿಲೀಸ್ ಆಗಿದೆ.

    ಭಾರತೀಯ ಸಾಮಾಜಿಕ ಕಾರ್ಯಕರ್ತೆ, ಲೇಖಕಿಯೂ ಆಗಿರುವ, ಅಸ್ಪೃಶ್ಯತೆ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿರುವ ಹೇಮಲತಾ ಲವಣಂ ಪಾತ್ರದಲ್ಲಿ ರೇಣು ದೇಸಾಯಿ (Renu Desai) ಅಭಿನಯಿಸುತ್ತಿದ್ದು, ಶುಭ್ರ ಬಿಳಿ ಬಣ್ಣದ ಸೀರೆಯುಟ್ಟು ಪವರ್ ಫುಲ್ ಎಂಟ್ರಿ ಕೊಟ್ಟಿರುವ ರೇಣು ದೇಸಾಯಿ ಟೀಸರ್ ಝಲಕ್‌ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ಕಾವ್ಯಶ್ರೀ ರೂಪೇಶ್‌ಗೆ ಪ್ರಪೋಸ್ ಮಾಡಿದ್ರೆ ಸಾನ್ಯಗ್ಯಾಕೆ ಸಿಟ್ಟು?

    ದಿ ಕಾಶ್ಮೀರಿ ಫೈಲ್ಸ್ ಸಿನಿಮಾ ನಿರ್ಮಾಣ ಮಾಡಿ ದೊಡ್ಡ ಮಟ್ಟದ ಖ್ಯಾತಿ ಗಳಿಸಿರುವ ಅಭಿಷೇಕ್ ಅರ್ಗವಾಲ್ ತಮ್ಮದೇ ‘ಅಭಿಷೇಕ್ ಅಗರ್ವಾಲ್ ಆರ್ಟ್ಸ್’ ಬ್ಯಾನರ್ ಮೂಲಕ  ‘ಟೈಗರ್ ನಾಗೇಶ್ವರ ರಾವ್’ (Tiger Nageswara Rao) ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡುತ್ತಿದ್ದು, ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ತಯಾರಾಗುತ್ತಿರುವ ಈ ಚಿತ್ರದ ಮೂಲಕ ರವಿ ತೇಜ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ದಿಬ್ಬಣ ಹೊರಡಲಿದ್ದಾರೆ.

    ಕುಖ್ಯಾತ ಹಾಗೂ ಧೈರ್ಯಶಾಲಿ ಕಳ್ಳನ ಕಥಾನಕವನ್ನು ಒಳಗೊಂಡಿರುವ ಈ ಚಿತ್ರದಲ್ಲಿ ರವಿತೇಜ ಸಂಪೂರ್ಣ ಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ. ಇವರಿಗೆ ಜೋಡಿಯಾಗಿ ನೂಪುರ್ ಸನೋನ್, ಗಾಯತ್ರಿ ಭಾರದ್ವಜ್ ನಟಿಸುತ್ತಿದ್ದು, ರೆಟ್ರೋ ಶೈಲಿಯಲ್ಲಿ ಸಿನಿಮಾ ಮೂಡಿಬರಲಿದೆ. ಆರ್.ಮ್ಯಾಥಿ ಐಎಸ್ಸಿ ಛಾಯಾಗ್ರಹಣ, ಜಿವಿ ಪ್ರಕಾಶ್ ಕುಮಾರ್ ಸಂಗೀತ ನಿರ್ದೇಶನ, ಶ್ರೀಕಾಂತ್ ವಿಸ್ಸಾ ಸಂಭಾಷಣೆಯ ಜವಾಬ್ದಾರಿ ಹೊತ್ತಿದ್ದಾರೆ. ಮಯಾಂಕ್ ಸಿಂಘಾನಿಯಾ ಸಹ-ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]