ಬಾಲಿವುಡ್ ಬೆಡಗಿ ಜಾನ್ವಿ ಕಪೂರ್‌ಗೆ (Janhvi Kapoor) ಮತ್ತೊಂದು ಬಂಪರ್ ಅವಕಾಶ ಸಿಕ್ಕಿದೆ. ಟೈಗರ್ ಶ್ರಾಫ್ (Tiger Shroff) ನಟನೆಯ ಹೊಸ ಸಿನಿಮಾದಲ್ಲಿ ಜಾನ್ವಿ ನಾಯಕಿಯಾಗಿ ನಟಿಸುವ ಚಾನ್ಸ್ ಸಿಕ್ಕಿದೆ. ಇದನ್ನೂ ಓದಿ:
ಜಾನ್ವಿ ನಟಿಸುವ ಸಿನಿಮಾಗಳು ಬಾಕ್ಸಾಫೀಸ್‌ನಲ್ಲಿ ಗೆಲ್ಲದೇ ಇದ್ದರೂ ಅವರಿಗೆ ಬೇಡಿಕೆಯೂ ಕಮ್ಮಿಯಾಗಿಲ್ಲ. ಸದ್ಯ ಟೈಗರ್ ಶ್ರಾಫ್ ಜೊತೆ ಜೋಡಿಯಾಗಿ ನಟಿಸುವ ಅವಕಾಶ ಸಿಕ್ಕಿದೆ. ಇದೊಂದು ರಿವೆಂಜ್ ಲವ್ ಸ್ಟೋರಿಯಾಗಿದ್ದು, ಈ ವರ್ಷದ ಅಂತ್ಯದಲ್ಲಿ ಶೂಟಿಂಗ್ ಶುರುವಾಗಲಿದೆ. ಮುಂದಿನ ವರ್ಷ ಚಿತ್ರ ರಿಲೀಸ್ ಆಗಲಿದೆ. ಈ ಸಿನಿಮಾಗೆ ರಾಜ್ ಮೆಹ್ತಾ ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ:
ಅಮ್ಮ ಶ್ರೀದೇವಿಯಂತೆ ತಾವು ಕೂಡ ಬಹುಭಾಷೆಗಳಲ್ಲಿ ನಟಿಸಬೇಕು ಎಂದು ದಕ್ಷಿಣದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಹೊಸ ಬಗೆಯ ಕಥೆ ಮತ್ತು ಪಾತ್ರಕ್ಕೆ ನಟಿ ಹೆಚ್ಚು ಒತ್ತು ನೀಡುತ್ತಿದ್ದಾರೆ.
ಸಿದ್ಧಾರ್ಥ್ ಮಲ್ಹೋತ್ರಾ ಜೊತೆ ಸಿನಿಮಾ, ದೇವರ 2, ರಾಮ್ ಚರಣ್ ಜೊತೆ ‘ಪೆಡ್ಡಿ’ ಚಿತ್ರ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ನಟಿಯ ಕೈಯಲ್ಲಿವೆ.
ಜೈಪುರ: ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತು ನೀಡುತ್ತಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್ (Shah Rukh Khan), ಅಜಯ್ ದೇವಗನ್ (Ajay Devgn) ಮತ್ತು ಟೈಗರ್ ಶ್ರಾಫ್‌ಗೆ (Tiger Shroff) ಸಂಕಷ್ಟ ಎದುರಾಗಿದೆ. ಗಂಭೀರ ಕಾನೂನು ಪ್ರಕರಣವೊಂದರಲ್ಲಿ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ಮೂವರು ನಟರಿಗೆ ನೋಟಿಸ್ ಜಾರಿ ಮಾಡಿದೆ.
ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುವ ಹೇಳಿಕೆಗಳನ್ನು ನೀಡುವ ಜಾಹೀರಾತು ಪ್ರಕಟಿಸಲಾಗುತ್ತಿದೆ ಎಂದು ಆರೋಪಿಸಿ ಜೈಪುರ ನಿವಾಸಿ ಯೋಗೇಂದ್ರ ಸಿಂಗ್ ಬಡಿಯಾಲ್ ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ನೀಡಿದ್ದು, ದೂರಿನ ಅನ್ವಯ ನೋಟಿಸ್ ನೀಡಲಾಗಿದೆ.
ಮೂವರು ಬಾಲಿವುಡ್ ನಟರು ಈ ಗುಟ್ಕಾ ಬ್ರ‍್ಯಾಂಡ್ ಅನ್ನು ಪ್ರಚಾರ ಮಾಡುತ್ತಿದ್ದು, ಗ್ರಾಹಕರನ್ನು ಖರೀದಿಸುವಂತೆ ಆಕರ್ಷಿಸುತ್ತಿದ್ದಾರೆ. ಗುಟ್ಕಾ ಉತ್ಪನ್ನವು ಆರೋಗ್ಯಕ್ಕೆ ಹಾನಿಕಾರಕವಾಗಿದ್ದರೂ ಅದರಲ್ಲಿ ಕೇಸರಿ ಇದೆ ಎಂದು ದಾರಿತಪ್ಪಿಸುತ್ತಿದ್ದಾರೆ. ಈ ದಾರಿತಪ್ಪಿಸುವ ಜಾಹೀರಾತು ಗ್ರಾಹಕ ಸಂರಕ್ಷಣಾ ಕಾಯ್ದೆ 2019 ಅನ್ನು ಉಲ್ಲಂಘಿಸುತ್ತದೆ ಮತ್ತು ಸಾರ್ವಜನಿಕರನ್ನು ದಾರಿತಪ್ಪಿಸುತ್ತದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದೆ.
ಈ ಮೂವರು ನಟರು ಬಹಳ ಸಮಯದಿಂದ ಪಾನ್ ಮಸಾಲಾ ಮತ್ತು ಗುಟ್ಕಾ ಕಂಪನಿಯ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಾರೆ. “ಟೇಸ್ಟ್ ಆಫ್ ಬಿಗ್ ಬ್ರಾಂಡ್ಸ್” ಎಂಬ ಟ್ಯಾಗ್‌ಲೈನ್ ಅಡಿಯಲ್ಲಿ ಈ ಜಾಹೀರಾತುಗಳು ಇದನ್ನು “ಕೇಸರ್” ಉತ್ಪನ್ನವೆಂದು ಪ್ರಚಾರ ಮಾಡುತ್ತವೆ. ಆದರೆ ವಾಸ್ತವದಲ್ಲಿ ಇದು ಗುಟ್ಕಾ ಉತ್ಪನ್ನಗಳ ಪ್ರಚಾರವಾಗಿದೆ ಎಂದು ಯೋಗೇಂದ್ರ ಸಿಂಗ್ ಹೇಳಿದ್ದಾರೆ.
ಕಾನೂನು ಪರಿಣಾಮ ಏನಾಗಬಹುದು?
ಆಯೋಗದಲ್ಲಿ ಆರೋಪ ಸಾಬೀತಾದರೆ, ಈ ಜಾಹೀರಾತುಗಳನ್ನು ನಿಷೇಧಿಸಬಹುದು. ಇದರೊಂದಿಗೆ, ಸೆಲೆಬ್ರಿಟಿಗಳ ಮೇಲೆ ಆರ್ಥಿಕ ದಂಡವನ್ನು ವಿಧಿಸಬಹುದು. ಅದೇ ಸಮಯದಲ್ಲಿ, ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲು ಸಹ ಸಾಧ್ಯವಿದೆ.ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಎರಡು ಬಣಗಳಿವೆ – ಪಕ್ಷದ ವೇದಿಕೆಯಲ್ಲೇ ರಾಹುಲ್ ಗಾಂಧಿ ಅಸಮಾಧಾನ
‘ಬಡೆ ಮಿಯಾನ್ ಚೋಟೆ ಮಿಯಾನ್’ (Bade Miyan Chote Miyan) ಸಿನಿಮಾದ ಟ್ರೇಲರ್ ಈಗಾಗಲೇ ಕುತೂಹಲ ಹೆಚ್ಚಿಸಿದೆ. ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಜುಗಲ್ ಬಂದಿ ನೋಡೋದಿಕ್ಕೆ ಪ್ರೇಕ್ಷಕರು ಕಾತರರಾಗಿದ್ದಾರೆ. ಇದೇ ತಿಂಗಳ 11ರ ಈದ್ ಮಿಲ್ ಹಬ್ಬಕ್ಕೆ ಬಡೆ ಮಿಯಾನ್ ಚೋಟೆ ಮಿಯಾನ್ ತೆರೆಗೆ ಬರ್ತಿದೆ.
ಅಕ್ಕಿ ಹಾಗೂ ಟೈಗರ್ ಶ್ರಾಫ್ ನಾಯಕನಾಗಿ ನಟಿಸಿದ್ದು, ಪೃಥ್ವಿರಾಜ್ ಸುಕುಮಾರನ್ ಖಳನಾಯಕನಾಗಿ ಅಭಿಯಸಿದ್ದಾರೆ.ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ (Akshay Kumar) ಹಾಗೂ ಟೈಗರ್ ಶ್ರಾಫ್ (Tiger Shroff) ನಟನೆಯ ಬಡೆ ಮಿಯಾ ಚೋಟೆ ಮಿಯಾ (bade miyan chote miyan) ಸಿನಿಮಾದ ಟ್ರೇಲರ್ (Trailer) ರಿಲೀಸ್ ಆಗಿದೆ. ಹಿಂದಿ, ಕನ್ನಡ ಸೇರಿದಂತೆ ಐದು ಭಾಷೆಯಲ್ಲಿಯೂ ಮೊದಲ ನೋಟ ಅನಾವರಣಗೊಂಡಿದೆ. 3 ನಿಮಿಷ 3 ಸೆಕೆಂಡ್ ಇರುವ ಪವರ್ ಪ್ಯಾಕ್ಡ್ ಟ್ರೈಲರ್ ನಲ್ಲಿ ಅಕ್ಷಯ್ ಹಾಗೂ ಟೈಗರ್ ಭರ್ಜರಿ ಆಕ್ಷನ್ ಮೂಲಕ ಅಬ್ಬರಿಸಿದ್ದಾರೆ.
ಬಡೆ ಮಿಯಾ ಚೋಟೆ ಮಿಯಾ ಟ್ರೈಲರ್ ನಲ್ಲಿ ಮೈ ಜುಮ್ ಎನಿಸುವ ಹೈ ಆಕ್ಷನ್ ಸೀಕ್ವೆನ್ಸ್ ಹೈಲೆಟ್ ಆಗಿವೆ. ದೇಶಭಕ್ತಿ ಉಕ್ಕಿಸುವ ಈ ಝಲಕ್ ನಲ್ಲಿ ಕಿಲಾಡಿ ಟೈಗರ್ ಜುಗಲ್ ಬಂಧಿ ನೋಡುಗರಿಗೆ ಸಖತ್ ಕಿಕ್ ಕೊಡಲಿದೆ. ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದು, ಆದ್ರೆ ಟ್ರೇಲರ್ ನಲ್ಲಿ ಅವರ ಮುಖವನ್ನೇ ರಿವೀಲ್ ಮಾಡದೇ ಚಿತ್ರತಂಡ ಸೀಕ್ರೆಟ್ ಕಾಯ್ದುಗೊಂಡಿದೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಹಾಲಿವುಡ್ ರೇಂಜ್ಗೆ ಬಿಗ್ ಬಜೆಟ್ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಅನ್ನು ನಿರ್ಮಿಸಲಾಗಿದೆ. ಟೈಗರ್ ಜಿಂದಾ ಹೈ, ಸುಲ್ತಾನ್ ಸಿನಿಮಾಗಳನ್ನು ನಿರ್ದೇಶಿಸಿರುವ ಅಲಿ ಅಬ್ಬಾಸ್ ಜಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.
ವಶು ಭಗ್ನಾನಿ, ದೀಪಿಕ್ಷಾ ದೇಶ್ಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ. ವಶು ಭಗ್ನಾನಿ ಮತ್ತು ಪೂಜಾ ಎಂಟರ್ಟೈನ್ಮೆಂಟ್ ಎಎಝೆಡ್ ಫಿಲ್ಮ್ಸ್ ಸಹಯೋಗದಡಿ ಈ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. 2024ರ ಏಪ್ರಿಲ್ – ಈದ್ ಸಂದರ್ಭ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.
17ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ (IPL) ಅದ್ಧೂರಿಯಾಗಿ ಇಂದು (ಮಾ.22) ಚಾಲನೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್ (Akshay Kumar), ಟೈಗರ್ ಶ್ರಾಫ್ (Tiger Shroff) ಡ್ಯಾನ್ಸ್ ಮೂಲಕ ರಂಗೇರಿಸಿದ್ದಾರೆ. ಹಿಂದಿ ಚಿತ್ರದ ಸುಂದರ ಹಾಡುಗಳಿಗೆ ಇಬ್ಬರೂ ಹೆಜ್ಜೆ ಹಾಕಿದ್ದಾರೆ.
ಚೇಪಾಕ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ಆಯೋಜಿಸಿದೆ. ಮಾ.22ರ ಸಂಜೆ 6:30ಕ್ಕೆ ಸಮಾರಂಭ ಆರಂಭವಾಗಿದೆ. ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಹೆಜ್ಜೆ ಹಾಕುವ ಮೂಲಕ ಐಪಿಎಲ್ ಕ್ರಿಕೆಟ್ ಪ್ರೇಕ್ಷಕರಿಗೆ ರಂಜಿಸಿದ್ದಾರೆ. ವೇದಿಕೆಗೆ ಎಂಟ್ರಿ ಕೊಡುವಾಗಲೇ ತ್ರಿವರ್ಣ ಧ್ವಜ ಹಿಡಿದು ಅಕ್ಷಯ್ ಕುಮಾರ್ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ:ರಾಧಿಕಾ ಪಂಡಿತ್‌ಗೆ ಸಿಕ್ಕರು ಕ್ಯೂಟ್ ಫೋಟೋಗ್ರಾಫರ್
ಖ್ಯಾತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್, ಖ್ಯಾತ ಗಾಯಕ ಸೋನು ನಿಗಮ್ (Sonu Nigam) ಸೇರಿದಂತೆ ಪ್ರಮುಖರು ಪ್ರೇಕ್ಷಕರನ್ನು ರಂಜಿಸಿದ್ದಾರೆ. ಐಪಿಎಲ್ (IPL 2024) ಸುಂದರ ಸಂಜೆಗೆ ಎ.ಆರ್ ರೆಹಮಾನ್ ಮತ್ತು ಸೋನು ನಿಗಮ್ ಹಾಡು ಪ್ರೇಕ್ಷಕರಿಗೆ ಕಿಕ್ ಸ್ಟಾರ್ಟ್ ಕೊಟ್ಟಿದೆ.
ಇಂದಿನ ಮೊದಲ ಮ್ಯಾಚ್, ಚೆನ್ನೈ ಸೂಪರ್ ಕಿಂಗ್ಸ್ (CSK) ಎದುರು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸೆಣಸಾಡಲಿದೆ. ಈ ಪಂದ್ಯ ರಾತ್ರಿ 8 ಗಂಟೆಗೆ ಶುರುವಾಗಲಿದೆ.
ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಅವರು ‘ಬಡೇ ಮಿಯಾನ್ ಚೋಟೆ ಮಿಯಾನ್’ ಚಿತ್ರದ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಒಟಿಟಿ ಕಾರ್ಯಕ್ರಮವೊಂದಲ್ಲಿ ಮೊದಲ ಗರ್ಲ್‌ಫ್ರೆಂಡ್ ಬಗ್ಗೆ ಟೈಗರ್ ಶ್ರಾಫ್ ಬಾಯ್ಬಿಟ್ಟಿದ್ದಾರೆ. 25ನೇ ವಯಸ್ಸಿಗೆ ಎಂಗೇಂಜ್ ಆಗಿದ್ದರ ಬಗ್ಗೆ ನಟ ತಿಳಿಸಿದ್ದಾರೆ. ಇದನ್ನೂ ಓದಿ:ಸಾಯಿ ಪಲ್ಲವಿ ಬದಲು ಮೃಣಾಲ್‌ಗೆ ವಿಜಯ್ ಚಾನ್ಸ್ ಕೊಟ್ಟಿದ್ದೇಕೆ?
ಇತ್ತೀಚೆಗೆ ಒಟಿಟಿ ಕಾರ್ಯಕ್ರಮವೊಂದು ಅದ್ಧೂರಿಯಾಗಿ ನಡೆದಿದೆ. ಈ ಇವೆಂಟ್‌ಗೆ ಹಲವು ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದಾರೆ. ಸಿನಿಮಾ ಬಗ್ಗೆ ಮಾತನಾಡಿದ ಬಳಿಕ ಖಾಸಗಿ ವಿಚಾರವೊಂದು ಟೈಗರ್ ಶ್ರಾಫ್ ರಿವೀಲ್ ಮಾಡಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದಾರೆ. ಸದಾ ದಿಶಾ ಜೊತೆಗಿನ ಲವ್ ರಿಲೇಷನ್‌ಶಿಪ್ ಬಗ್ಗೆ ಸುದ್ದಿಯಾಗ್ತಿದ್ದ ಟೈಗರ್ ಶ್ರಾಫ್ ಈಗ ಮೊದಲ ಪ್ರೇಯಸಿ ಬಗ್ಗೆ ಮಾತನಾಡಿರೋದು ಅಕ್ಷರಶಃ ಬಾಲಿವುಡ್ ನಟ ವರುಣ್ ಧವನ್‌ಗೆ ಶಾಕ್ ಕೊಟ್ಟಿದೆ.
ವೇದಿಕೆಯಲ್ಲಿ ವರುಣ್ ಧವನ್ ಜೊತೆ ಮಾತನಾಡುವಾಗ ನಾನು ನಾಚಿಕೆ ಸ್ವಭಾವದ ವ್ಯಕ್ತಿ ಹಾಗಾಗಿ ನನಗೆ ಮೊದಲ ಗರ್ಲ್‌ಫ್ರೆಂಡ್ ಸಿಕ್ಕಿದ್ದೆ, 25 ವರ್ಷ ಆದಾಗ ಎಂದು ಟೈಗರ್ ಶ್ರಾಫ್ ಮಾತನಾಡಿದ್ದಾರೆ. ನೀನು ಸೀರಿಯಸ್ ಆಗಿ ಹೇಳ್ತಿದ್ದೀಯಾ? ಎಂದು ಶಾಕ್ ಆಗಿ ವರುಣ್ ಧವನ್ ಕೇಳಿದ್ದಾರೆ.
ನಿಜ ನನಗೆ ಮೊದಲ ಗರ್ಲ್‌ಫ್ರೆಂಡ್ ಸಿಕ್ಕಿದ್ದು 25 ವರ್ಷ ಆದಾಗ, ನನ್ನ ಮೊದಲ ಚಿತ್ರದ ಆಡಿಷನ್ ಸಮಯದಲ್ಲಿ ಎಂದು ಟೈಗರ್ ಶ್ರಾಫ್ ವಿವರಿಸಿದ್ದಾರೆ. ತಕ್ಷಣವೇ ಕೃತಿ ಸನೋನ್ ಅಲ್ವಾ? ಎಂದು ವರುಣ್ ಧವನ್ (Varun Dhawan) ಹೇಳಿದ್ದಾರೆ. ಅವರ ಮಾತನ್ನು ಟೈಗರ್ ಶ್ರಾಫ್ ತಳ್ಳಿಹಾಕಿದ್ದಾರೆ. ನಗುತ್ತಲೇ ಅವರಲ್ಲ ಬಿಡಿ ಎಂದು ನಟ ಸ್ಟಷ್ಟನೆ ನೀಡಿದ್ದಾರೆ. ಕಡೆಗೂ ಆ ಹುಡುಗಿ ಯಾರು ಎಂಬುದನ್ನು ಟೈಗರ್ ಶ್ರಾಪ್ ಗುಟ್ಟಾಗಿಯೇ ಇಟ್ಟಿದ್ದಾರೆ. ಸದ್ಯ ಈ ನಟ ಮಾತನಾಡಿರುವ ವಿಡಿಯೋ ಭಾರೀ ವೈರಲ್ ಆಗುತ್ತಿದೆ. ನಟ ಹೇಳದೇ ಇದ್ರೆ ಏನಂತೆ ದಿಶಾ ಪಟಾನಿ ಅವರ ಮೊದಲ ಗರ್ಲ್‌ಫ್ರೆಂಡ್ ಅಲ್ವಾ? ಎಂದು ನೆಟ್ಟಿಗರು ಕಾಲೆಳೆಯುತ್ತಿದ್ದಾರೆ.
ಅಂದಹಾಗೆ, ಟೈಗರ್ ಶ್ರಾಫ್ ಅವರು ‘ಹೀರೋಪಂತಿ’ ಚಿತ್ರದ ಮೂಲಕ ಬಾಲಿವುಡ್‌ಗೆ ಪಾದಾರ್ಪಣೆ ಮಾಡಿದ್ದರು. ಈ ಚಿತ್ರಕ್ಕೆ ಕೃತಿ ಸನೋನ್ ನಾಯಕಿಯಾಗಿದ್ದರು. ಹಾಗಾಗಿ ಕೃತಿ ಸನೋನ್ ಅಥವಾ ದಿಶಾ ಇರಬಹುದಾ ಎಂದು ಫ್ಯಾನ್ಸ್ ಯೋಚಿಸುತ್ತಿದ್ದಾರೆ. ದಿಶಾ ಪಟಾನಿ ಜೊತೆ ಟೈಗರ್ ಶ್ರಾಫ್ ಡೇಟಿಂಗ್ ಮಾಡಿದ್ದರು. ಕಳೆದ ವರ್ಷ ಇಬ್ಬರ ಪ್ರೀತಿಗೆ ಬ್ರೇಕ್ ಬಿದ್ದಿದೆ.
ಬಾಲಿವುಡ್ (Bollywood) ನಟ ಟೈಗರ್ ಶ್ರಾಫ್- ದಿಶಾ ಪಟಾನಿ (Disha Patani) ಸಿನಿಮಾಗಾಗಿ ಮತ್ತೆ ಒಂದಾಗಿದ್ದಾರೆ. ಬಿಟೌನ್‌ನಲ್ಲಿ ಕೈ ಕೈ ಹಿಡಿದು ಓಡಾಡಿಕೊಂಡಿದ್ದ ಜೋಡಿ ಕಳೆದ ವರ್ಷ ಬ್ರೇಕಪ್ ಮಾಡಿಕೊಳ್ಳುವ ಮೂಲಕ ಫ್ಯಾನ್ಸ್‌ಗೆ ಶಾಕ್ ಕೊಟ್ಟಿದ್ದರು. ಇದೀಗ ಮತ್ತೆ ಸಿನಿಮಾಗಾಗಿ ಟೈಗರ್ ಶ್ರಾಫ್-ದಿಶಾ ಜೊತೆಯಾಗಿರೋದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.
‘ಭಾಘಿ’ (Baaghi) ಸಿನಿಮಾ ಮೂಲಕ ಜೋಡಿಯಾಗಿ ಟೈಗರ್ ಶ್ರಾಫ್- ದಿಶಾ ಪಟಾನಿ ಕಮಾಲ್ ಮಾಡಿದ್ದರು. ಚಿತ್ರೀಕರಣ ವೇಳೆ ಇಬ್ಬರಿಗೂ ಪ್ರೇಮಾಂಕುರವಾಗಿತ್ತು. ಆದರೆ ಎಂದಿಗೂ ತಮ್ಮ ರಿಲೇಷನ್‌ಶಿಪ್ ಬಗ್ಗೆ ಖಾತ್ರಿಪಡಿಸಿರಲಿಲ್ಲ. ಕಳೆದ ವರ್ಷ ಬ್ರೇಕಪ್ ಮಾಡಿಕೊಳ್ಳುವ ಮೂಲಕ ಮತ್ತೆ ಸುದ್ದಿಯಾಗಿದ್ದರು. ಇದಾದ ಬಳಿಕ ಮತ್ತೆ ಮುನಿಸೆಲ್ಲಾ ಮರೆತು ಸಿನಿಮಾಗಾಗಿ ಒಂದಾಗಿದ್ದಾರೆ. ಸದ್ಯ ‘ಹೀರೋ ನಂ.1’ ಚಿತ್ರ ರದ್ದಾಗಿದೆ ಎಂದವರಿಗೆ ಡೈರೆಕ್ಟರ್ ಬಿಗ್ ಅಪ್‌ಡೇಟ್‌ವೊಂದನ್ನು ನೀಡಿದ್ದಾರೆ.
‘ಹೀರೋ ನಂ.1’ ಚಿತ್ರ ಮಾಡೋದಾಗಿ ಕೆಲ ತಿಂಗಳುಗಳ ಹಿಂದೆ ಅನೌನ್ಸ್ ಮಾಡಿದ್ದರು. ಟೈಗರ್ ಶ್ರಾಫ್(Tiger Shroff)- ದಿಶಾ ಪಟಾನಿ ಜೋಡಿಯಾಗಿ ಕಾಣಿಸಿಕೊಳ್ತಾರೆ ಎಂದು ಅನೌನ್ಸ್ ಆಗಿತ್ತು. ಆ ನಂತರ ಏನು ಅಪ್‌ಡೇಟ್ ಇಲ್ಲದ ಕಾರಣ, ಸಿನಿಮಾ ರದ್ದಾಗಿದೆ ಎಂದು ಸುದ್ದಿ ವೈರಲ್ ಆಯ್ತು. ಇದೀಗ ನಿರ್ದೇಶಕ ಜಗನ್ ಶಕ್ತಿ ಸ್ಪಷ್ಟನೆ ನೀಡಿದ್ದಾರೆ.
ಈ ಸಿನಿಮಾ ರದ್ದಾಗಿಲ್ಲ. ‘ಹೀರೋ ನಂ.1’ (Hero No.1) ಚಿತ್ರ ಇದೇ ಜುಲೈನಿಂದ ಶೂಟಿಂಗ್ ಶುರುವಾಗಲಿದೆ ಎಂದು ತಿಳಿಸಿದ್ದಾರೆ. ಅದಕ್ಕಾಗಿ ಸಕಲ ತಯಾರಿ ಮಾಡಿಕೊಳ್ಳುತ್ತಿರೋದಾಗಿ ನಿರ್ದೇಶಕ ಜಗನ್ ಶಕ್ತಿ (Jagan Shakti) ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಶೋಲ್ಡರ್ ಲೆಸ್ ಟಾಪ್, ತುಂಡು ಜೀನ್ಸ್‌ನಲ್ಲಿ ‘ಬೃಂದಾವನ’ ನಟಿ- ದಂಗಾದ ಫ್ಯಾನ್ಸ್
ಸದ್ಯ ಈ ಸುದ್ದಿ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ. ಟೈಗರ್ ಶ್ರಾಫ್-ದಿಶಾ (Disha Patani) ಸಿನಿಮಾ ಮಾಡಲಿ. ಬ್ರೇಕಪ್ ಆಗಿರುವ ಸಂಬಂಧ ಸರಿ ಹೋಗಲಿ ಎಂದು ಆಶಿಸುತ್ತಿದ್ದಾರೆ.
ಬಾಲಿವುಡ್ನ ಪವರ್ ಪ್ಯಾಕ್ಡ್ ಜೋಡಿಗಳಾದ ಅಕ್ಷಯ್ ಕುಮಾರ್ (Akshay Kumar) ಮತ್ತು ಟೈಗರ್ ಶ್ರಾಫ್ (Tiger Shroff)n ನಟನೆಯ ‘ಬಡೇ ಮಿಯಾನ್ ಚೋಟೆ ಮಿಯಾನ್’ ಸಿನಿಮಾದ ಟೈಟಲ್ ಟ್ರ‍್ಯಾಕ್ ರಿಲೀಸ್ ಆಗಿದೆ. ಬಾಸ್ಕೊ-ಸೀಸರ್ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಹಾಡಿಗೆ ಅಕ್ಷಯ್ ಮತ್ತು ಟೈಗರ್ ಶ್ರಾಫ್ ಹೆಜ್ಜೆ ಹಾಕಿದ್ದಾರೆ. ಅನಿರುದ್ಧ್ ರವಿಚಂದರ್ ಮತ್ತು ವಿಶಾಲ್ ಮಿಶ್ರಾ ಧ್ವನಿಯಾಗಿರುವ ಟೈಟಲ್ ಟ್ರ‍್ಯಾಕ್‌ಗೆ ವಿಶಾಲ್ ಮಿಶ್ರಾ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
‘ಬಡೇ ಮಿಯಾನ್ ಚೋಟೆ ಮಿಯಾನ್’ (Bade Miyan Chote Miyan) ಟೈಟಲ್ ಟ್ರ‍್ಯಾಕ್ ಡೆಹರೂಡನ್‌ನಲ್ಲಿ ಚಿತ್ರೀಕರಿಸಲಾಗಿರುವ ಹಾಡಿಗೆ 100ಕ್ಕೂ ಹೆಚ್ಚು ನೃತ್ಯಗಾರರು ಕುಣಿದು ಕುಪ್ಪಳಿಸಿದ್ದಾರೆ. ಕನ್ನಡದಲ್ಲಿಯೂ ಹಾಡು ಮೂಡಿಬಂದಿದ್ದು, ಸಂತೋಷ್ ವಿಶ್ವರತ್ನ ಸಾಹಿತ್ಯ ಬರೆದಿದ್ದು, ಅನಿರುದ್ಧ ಶಾಸ್ತ್ರಿ, ಅಭಿಷೇಕ್ ಎಂ.ಆರ್ ಹಾಗೂ ಋಷಿಕೇಶ ಬಿ.ಆರ್ ಹಾಡಿಗೆ ಧ್ವನಿಯಾಗಿದ್ದಾರೆ. ಇದನ್ನೂ ಓದಿ:ದರ್ಶನ್ ಹುಟ್ಟುಹಬ್ಬಕ್ಕೆ ಫ್ಯಾನ್ಸ್ ಕೊಟ್ಟ ದಿನಸಿ ಸಾಮಾಗ್ರಿ ಪೌರಕಾರ್ಮಿಕರಿಗೆ ವಿತರಣೆ
ಅಕ್ಷಯ್ ಕುಮಾರ್- ಟೈಗರ್ ಶ್ರಾಫ್ ನಾಯಕರಾಗಿ ನಟಿಸಿದ್ದು, ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಟಿಮಣಿಯರಾದ ಸೋನಾಕ್ಷಿ ಸಿನ್ಹಾ (Sonakshi Sinha), ಮಾನುಷಿ ಚಿಲ್ಲರ್ (Manushi Chhillar) ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಹಾಲಿವುಡ್ ರೇಂಜ್‌ಗೆ ದೊಡ್ಡ ಬಜೆಟ್‌ನಲ್ಲಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಚಿತ್ರ ನಿರ್ಮಿಸಿದ್ದಾರೆ. ಅಲಿ ಅಬ್ಬಾಸ್ ಝಫರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ವಶು ಭಗ್ನಾನಿ, ದೀಪಿಕ್ಷಾ ದೇಶಮುಖ್, ಜಾಕಿ ಭಗ್ನಾನಿ, ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ.
ವಶು ಭಗ್ನಾನಿ ಮತ್ತು ಪೂಜಾ ಫಿಲ್ಮ್ಸ್ ಸಹಯೋಗದಡಿ ‘ಬಡೇ ಮಿಯಾನ್ ಚೋಟೆ ಮಿಯಾನ್’ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಏಪ್ರಿಲ್ 2024 ಈದ್ ಸಂದರ್ಭದಲ್ಲಿ ಹಿಂದಿ, ಕನ್ನಡ, ತೆಲುಗು, ತಮಿಳು, ಮಲೆಯಾಳಂ ಭಾಷೆಯಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.
ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ (Akshay Kumar) ನಟನೆಯ ಬಡೇ ಮಿಯಾ ಚೋಟೆ ಮೀಯಾ (Bade Miya Chote Miya) ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಇದೇ ಮೊದಲ ಬಾರಿಗೆ ಅಕ್ಕಿ ಹಾಗೂ ಟೈಗರ್ ಶ್ರಾಫ್ ಒಟ್ಟಿಗೆ ಅಭಿನಯಿಸಿದ್ದಾರೆ. ಮೈ ಜುಮ್ ಎನಿಸುವ ಆಕ್ಷನ್ ಸೀಕ್ವೆನ್ಸ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿವೆ.
ಆಕ್ಷನ್ ಜೊತೆಗೆ ದೇಶಭಕ್ತಿ ಅಂಶಗಳನ್ನು ಸೇರಿಸಿ ಟೀಸರ್ ಕಟ್ ಮಾಡಲಾಗಿದೆ. ಸೈನಿಕರಾಗಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅಬ್ಬರಿಸಿದ್ದು, ಖಳನಾಯಕನಾಗಿ ಪೃಥ್ವಿರಾಜ್ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್ ಸ್ಥಳಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಹಾಲಿವುಡ್ ರೇಂಜ್ ಗೆ ದೊಡ್ಡ ಬಜೆಟ್ ನಲ್ಲಿ ಬಡೇ ಮೀಯಾ ಚೋಟೆ ಮೀಯಾ ಚಿತ್ರ ನಿರ್ಮಿಸಲಾಗಿದೆ. ಅಲಿ ಅಬ್ಬಾಸ್ ಝಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಶು ಭಗ್ನಾನಿ, ದೀಪಿಕ್ಷಾ ದೇಶಮುಖ್, ಜಾಕಿ ಭಗ್ನಾನಿ,ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ.
ವಶು ಭಗ್ನಾನಿ ಮತ್ತು ಪೂಜಾ ಎಂಟರ್ ಟೈನ್ಮೆಂಟ್ AAZ ಫಿಲ್ಮಂಸ್ ಸಹಯೋಗದಡಿ ಬಡೇ ಮಿಯಾ ಚೋಟೆ ಮೀಯಾ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಏಪ್ರಿಲ್ 2024 ಈದ್ ಸ್ಪೆಷಲ್ ಆಗಿ ಪಂಚ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.
ಟೈಗರ್ ಶ್ರಾಫ್ (Tiger Shroff) ಅಭಿಮಾನಿಗಳು ಬಹಳ ಕುತೂಹಲದಿಂದ ಕಾಯುತ್ತಿರುವ ಬಹುನೀಕ್ಷಿತ ಪ್ಯಾನ್ ಇಂಡಿಯಾ ಚಿತ್ರವಾದ ‘ಗಣಪತ್’ನ (Ganpath) ಟ್ರೈಲರ್ (Trailer) ಬಿಡುಗಡೆಯಾಗಿದೆ. ಟೈಗರ್ ಶ್ರಾಫ್‍ನ ಹೊಸ ಅವತಾರ, ಕೃತಿ ಸನನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್ (Amitabh Bachchan) ಅವರ ಉಪಸ್ಥಿತಿ ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.
ಇದುವರೆಗೂ ಹತ್ತು ಹಲವು ಜನಪ್ರಿಯ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ ಪೂಜಾ ಎಂಟರ್ ಟೈನ್ಮೆಂಟ್, ಇದೀಗ ‘ಗಣಪತ್’ ಚಿತ್ರದ ಮೂಲಕ ನಿರ್ಮಾಣ ಮೌಲ್ಯಗಳನ್ನು ಇನ್ನಷ್ಟು ಹೆಚ್ಚಿಸಿದೆ. ಹೊಸ ತಲೆಮಾರಿನ ಪ್ರೇಕ್ಷಕರಿಗೆ ಈ ಸಿನಿಮಾ ಮೂಲಕ ಹೊಸ ಸಿನಿಮಾ ಅನುಭವ ನೀಡುವುದಕ್ಕೆ ಸಜ್ಜಾಗಿದೆ.
‘ಗಣಪತ್’ ಚಿತ್ರವು ಅ.20ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದ್ದು, ಈಗ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಟ್ರೇಲರ್ ನೋಡಿ ಪ್ರೇಕ್ಷಕರು ಚಿತ್ರಕ್ಕಾಗಿ ಕುತೂಹಲದಿಂದ ಕಾಯುವಂತಾಗಿದೆ. ಈ ಟ್ರೇಲರ್ ನಲ್ಲಿ ಕಣ್ಸೆಳೆಯುವ ದೃಶ್ಯಗಳ ಜೊತೆಗೆ ಅದ್ಭುತ ತಾರಾಗಣವಿದೆ. ಈ ಚಿತ್ರವು ಪ್ರೇಕ್ಷಕರನ್ನು ಇದುವರೆಗೂ ಕಂಡುಕೇಳರಿಯದ ಹೊಸ ಪ್ರಪಂಚಕ್ಕೆ ಕರೆದುಕೊಂಡು ಹೋಗುತ್ತದೆ.
‘ಗಣಪತ್’ ಚಿತ್ರದ ಒಂದು ವಿಶೇಷತೆಯೆಂದರೆ, ಇದೊಂದು ಭವಿಷ್ಯದ ಚಿತ್ರವಾಗಿರುವುದು. ಚಿತ್ರದಲ್ಲಿ ಗ್ರಾಫಿಕ್ಸ್ ಕೆಲಸಗಳು ಹೆಚ್ಚಾಗಿದ್ದು, ಜಗತ್ತಿನಾದ್ಯಂತ ಇರುವ ನುರಿತ ಗ್ರಾಫಿಕ್ಸ್ ತಜ್ಞರು ಈ ಚಿತ್ರಕ್ಕೆ ಅಂತರರಾಷ್ಟ್ರೀಯ ಸ್ಪರ್ಶ ಕೊಟ್ಟಿದ್ದಾರೆ. ಇದುವರೆಗೂ ಯಾವುದೇ ಭಾರತೀಯ ಚಿತ್ರದಲ್ಲೂ ಕಂಡರಿಯದ ವಿಎಫ್‍ಎಕ್ಸ್ ಕೆಲಸ ಈ ಚಿತ್ರದಲ್ಲಿ ನೋಡಬಹುದಾಗಿದ್ದು, ಈ ನಿಟ್ಟಿನಲ್ಲಿ ‘ಗಣಪತ್’, ಭಾರತೀಯ ಚಿತ್ರರಂಗದಲ್ಲಿ ಹೊಸದೊಂದು ಮಾದರಿಯಾಗಿರಲಿದೆ. ಈ ಚಿತ್ರದ ಮೂಲಕ ಅಂತಾರಾಷ್ಟ್ರೀಯ ಮಟ್ಟದ ಸಿನಿಮಾ ಅನುಭವ ನೀಡುವ ಪ್ರಯತ್ನವನ್ನು ಮಾಡಲಾಗಿದೆ ಎಂದು ನಿರ್ಮಾಪಕರಲ್ಲೊಬ್ಬರಾದ ಜಾಕಿ ಭಗ್ನಾನಿ ಅವರ ಅನಿಸಿಕೆ.
ಈ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಅವರು, ‘’ಗಣಪತ್’ ಚಿತ್ರದ ಹಾಡು ಮತ್ತು ಟೀಸರ್ ಗೆ ಸಿಕ್ಕ ಅದ್ಭುತ ಪ್ರತಿಕ್ರಿಯೆ ನೋಡಿ ಹೃದಯ ತುಂಬಿ ಬಂದಿದೆ. ನಮ್ಮ ಕಲ್ಪನೆಯು ಪ್ರೇಕ್ಷಕರಿಗೂ ಇಷ್ಟವಾಗಿರುವುದನ್ನು ನೋಡಿ ಖುಷಿಯಾಗಿದೆ. ಟ್ರೇಲರ್ ಗೂ ಅದೇ ಮಟ್ಟದ ಪ್ರೀತಿ ಹಾಗೂ ಮೆಚ್ಚುಗೆ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ಚಿತ್ರದಲ್ಲಿ ಇನ್ನೂ ಸಾಕಷ್ಟು ವಿಷಯಗಳಿದ್ದು, ಮುಂದಿನ ದಿನಗಳಲ್ಲಿ ಒಂದರಹಿಂದೊಂದು ವಿಷಯವನ್ನು ಬಹಿರಂಗಪಡಿಸಲಾಗುವುದು’ ಎಂದು ಅವರು ಹೇಳಿದ್ದಾರೆ.
ಪೂಜಾ ಎಂಟರ್ ಪ್ರೈ ಸಸ್ ಅರ್ಪಿಸುತ್ತಿರುವ ‘ಗಣಪತ್” (ಎ ಹೀರೋ ಈಸ್ ಬಾರ್ನ್) ಚಿತ್ರವನ್ನು ವಾಶು ಭಗ್ನಾನಿ, ಜಾಕಿ ಭಗ್ನಾನಿ, ದೀಪಶಿಖಾ ದೇಶ್ ಮುಖ್ ಮತ್ತು ವಿಕಾಸ್ ಬಹ್ಲ್ ಜಂಟಿಯಾಗಿ ನಿರ್ಮಿಸಿದ್ದಾರೆ. ವಿಕಾಸ್ ಬಹ್ಲ್ ನಿರ್ದೇಶಿಸಿರುವ ಚಿತ್ರ ಹಿಂದಿ, ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ಅ.20ರಂದು ಬಿಡುಗಡೆಯಾಗುತ್ತಿದೆ.