ಬಾಲಿವುಡ್ ನ ಮತ್ತೊಂದು ಸಿನಿಮಾ ಎರಡೇ ದಿನಕ್ಕೆ ನೂರು ಕೋಟಿ ಕ್ಲಬ್ ಸೇರಿದೆ. ಸಲ್ಮಾನ್ ಖಾನ್ (Salman Khan) ನಟನೆಯ ‘ಟೈಗರ್ 3’ ಸಿನಿಮಾ ದೀಪಾವಳಿ ದಿನದಂದು ಜಗತ್ತಿನಾದ್ಯಂತ ಬಿಡುಗಡೆ ಆಗಿದೆ. ಸಿನಿಮಾ ರಿಲೀಸ್ ಗೂ ಮುನ್ನ ಸಾಕಷ್ಟು ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಅಡ್ವಾನ್ಸ್ ಬುಕ್ಕಿಂಗ್ ನಲ್ಲೇ (Box Office) ದಾಖಲೆ ರೀತಿಯಲ್ಲಿ ಟಿಕೆಟ್ ಗಳು ಮಾರಾಟವಾಗಿದ್ದವು. ಜೊತೆಗೆ ಹಬ್ಬವೂ ಕೂಡಿ ಬಂದಿದ್ದರಿಂದ ಮೊದಲ ದಿನದ ಗಳಿಕೆ ಎಷ್ಟಾಗಿರಬಹುದು ಎನ್ನುವ ಚರ್ಚೆ ಶುರುವಾಗಿತ್ತು.

ನಿರ್ಮಾಣ ಸಂಸ್ಥೆಯೇ ಪೋಸ್ಟರ್ ವೊಂದನ್ನು ಹಂಚಿಕೊಂಡಿದ್ದು, ಸಿನಿಮಾದ ಮೊದಲ ದಿನವೇ ಜಗತ್ತಿನಾದ್ಯಂತ 94 ಕೋಟಿ ರೂಪಾಯಿ ಕಮಾಯಿ ಮಾಡಿದೆ. ನಿನ್ನೆ ಕೂಡ ಸಾಕಷ್ಟು ಹಣ ಬಾಕ್ಸ್ ಆಫೀಸಿಗೆ ಹರಿದು ಬಂದಿದೆ. ಹಾಗಾಗಿ ಎರಡು ದಿನದಲ್ಲಿ ಸಿನಿಮಾ ನೂರು ಕೋಟಿ ಕ್ಲಬ್ ಸೇರಿದಂತಾಗಿದೆ.

ಟೈಗರ್ ಪ್ರದರ್ಶನ ವೇಳೆ ಅನಾಹುತ
ಟೈಗರ್ 3 ಸಿನಿಮಾ ವೇಳೆ ಥಿಯೇಟರ್ ಒಳಗೆ ಪಟಾಕಿ ಸಿಡಿಸಿದ ಘಟನೆ ನಡೆದಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ (Shah Rukh Khan) ಅತಿಥಿ ಪಾತ್ರವೊಂದನ್ನು ಮಾಡಿದ್ದಾರೆ. ಅವರ ಎಂಟ್ರಿಗೆ ಅಭಿಮಾನಿಗಳು ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹಾಗಾಗಿ ಥಿಯೇಟರ್ ತುಂಬಾ ಪಟಾಕಿಯ ಕಿಡಿಗಳು ಹಾರಾಡಿವೆ. ಹೊಗೆ ತುಂಬಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಮಹಾರಾಷ್ಟ್ರದ ಮಲೇಗಾಂವ್ (Malegaon) ನಲ್ಲಿ ಮೊನ್ನೆಯಿಂದ ಟೈಗರ್ 3 (Tiger 3) ಸಿನಿಮಾ ಪ್ರದರ್ಶನ ನಡೆಯುತ್ತಿದೆ. ನಿನ್ನೆ ದೀಪಾವಳಿ ಆಗಿದ್ದರಿಂದ ಸಾಕಷ್ಟು ಅಭಿಮಾನಿಗಳು ಥಿಯೇಟರ್ ಗೆ ಆಗಮಿಸಿ ನೆಚ್ಚಿನ ನಟನ ಚಿತ್ರವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈ ಸಮಯದಲ್ಲಿ ಕೆಲ ಕಿಡಿಗೇಡಿ ಅಭಿಮಾನಿಗಳು ಶಾರುಖ್ ಖಾನ್ ಎಂಟ್ರಿಗೆ ಭಾರೀ ಪ್ರಮಾಣದಲ್ಲಿ ಪಟಾಕಿ ಸಿಡಿಸಿದ್ದಾರೆ. ಹೀಗಾಗಿ ಥಿಯೇಟರ್ ತುಂಬೆಲ್ಲ ಪಟಾಕಿಯ ಕಿಡಿಗಳು ತುಂಬಿಕೊಂಡಿದ್ದವು.
ಈ ಕುರಿತು ಥಿಯೇಟರ್ ಮಾಲೀಕರು ಮಾಧ್ಯಮಗಳ ಜೊತೆ ಮಾತನಾಡಿ, ಅಭಿಮಾನಿಗಳಿಂದಾಗಿ ಥಿಯೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಾಕಷ್ಟು ಹಾನಿ ಕೂಡ ಆಗಿದೆ. ಈ ರೀತಿಯಲ್ಲಿ ಮಾಡುವುದು ಸರಿಯಲ್ಲ. ಅಭಿಮಾನಿಗಳು ಅಭಿಮಾನವನ್ನು ಥಿಯೇಟರ್ ಹೊರಗೆ ತೋರಿಸಬೇಕು. ಕೆಲವರಿಂದಾಗಿ ಹೆಚ್ಚಿನ ಜನರಿಗೆ ತೊಂದರೆ ಆಗಿದೆ ಎಂದಿದ್ದಾರೆ.















`ಪಠಾಣ್’ (Pathan) ಸಿನಿಮಾದ ಗೆಲುವಿನಿಂದ ಬಾಲಿವುಡ್‌ಗೆ ಹೊಸ ಶಕ್ತಿ ನೀಡಿತ್ತು. ಪಠಾಣ್‌ಗೆ ಸಲ್ಮಾನ್ ಎಂಟ್ರಿಯಿಂದ ಚಿತ್ರಕ್ಕೆ ತೂಕ ಹೆಚ್ಚಿಸಿತ್ತು. ಇವರಿಬ್ಬರ ಕಾಂಬಿನೇಷನ್ ಸಿನಿಮಾದಲ್ಲಿ ಕಮಾಲ್ ಮಾಡಿತ್ತು. ಇದೀಗ ಮತ್ತೆ ಈ ಖಿಲಾಡಿ ಜೋಡಿ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇದನ್ನೂ ಓದಿ:
ಸಲ್ಮಾನ್ ಖಾನ್-ಕತ್ರಿನಾ ಕೈಫ್ (Katrina Kaif) ನಟನೆಯ ಬಹುನಿರೀಕ್ಷಿತ ಸಿನಿಮಾ `ಟೈಗರ್ 3′ ಸಿನಿಮಾದಲ್ಲಿ `ಪಠಾಣ್’ ಸೂಪರ್ ಸ್ಟಾರ್ ಶಾರುಖ್ ಖಾನ್ ಕೂಡ ಮೇಜರ್ ರೋಲ್‌ನಲ್ಲಿ ನಟಿಸುತ್ತಿದ್ದಾರೆ. `ಟೈಗರ್ 3′ (Tiger-3)ಅಡ್ಡಾಗೆ ಶಾರುಖ್ ಎಂಟ್ರಿಯಾಗುತ್ತಿದೆ. ಸಿನಿಮಾದಲ್ಲಿ ಶಾರುಖ್ ಎಂಟ್ರಿಯಿಂದ ಬಿಗ್ ಟ್ವಿಸ್ಟ್ ಸಿಗಲಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

