ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಭೈರತಿ ರಣಗಲ್” (Bhairati Rangal) ಚಿತ್ರದ ಶೀರ್ಷಿಕೆ ಗೀತೆ (Title Song) ಬಿಡುಗಡೆಯಾಗಿದೆ.
ಕಿನ್ನಾಳ್ ರಾಜ್ ಅವರು ಬರೆದಿರುವ “ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು” ಎಂಬ ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ “ಭೈರತಿ ರಣಗಲ್” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.
ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ “ಭೈರತಿ ರಣಗಲ್” ಚಿತ್ರಕ್ಕಿದೆ.
ಗೌರಿಶಂಕರ್ (Gowrishankar) ನಾಯಕನಾಗಿ ನಟಿಸಿರುವ ಕೆರೆಬೇಟೆ (Kerebete) ಚಿತ್ರ ಈಗ ಸಿನಿಮಾ ಪ್ರೇಮಿಗಳ ಗಮನ ಸೆಳೆದುಕೊಂಡಿದೆ. ಇದೇ ಮಾರ್ಚ್ 15ರಂದು ತೆರೆಗಾಣಲಿರುವ ಈ ಚಿತ್ರದ ಟೈಟಲ್ ಸಾಂಗ್ (Title Song) ಇದೀಗ ಬಿಡುಗಡೆಗೊಂಡಿದೆ. ಎಲ್ಲವನ್ನೂ ಈ ಸಿನಿಮಾದ ಆಂತರ್ಯಕ್ಕನುಗುಣವಾಗಿಯೇ ಮಾಡಲಾಗುತ್ತಿದೆ. ಅದರ ಮುಂದುವರೆದ ಭಾಗವಾಗಿ ಪಕ್ಕಾ ಮಲೆನಾಡು ಸೀಮೆಯ ಹಳ್ಳಿ ಸೊಗಡಿನ ಹಿಮ್ಮೇಳದಲ್ಲಿ, ಸಂಸದರಾದ ಬಿ.ವೈ ರಾಘವೇಂದ್ರ ಅವರ ಸಮ್ಮುಖದಲ್ಲಿ ಕೆರೆಬೇಟೆಯ ಟೈಟಲ್ ಸಾಂಗ್ ಅನಾವರಣಗೊಂಡಿದೆ.
ಆರಂಭಿಕವಾಗಿ ಶಿವಮೊಗ್ಗದ ನಗರದಾದ್ಯಂತ ಕುದುರೆ ಗಾಡಿ ಹಾಗೂ ಬೈಕ್ ರ್ಯಾಲಿಯನ್ನು ಸಾಂಕೇತಿಕವಾಗಿ ನಡೆಸಲಾಯ್ತು. ವಿಶೇಷವೆಂದರೆ ರಿಯಲ್ ಕೆರೆಬೇಟೆ ಪಟುಗಳೇ, ಆ ಉಡುಗೆ ತೊಡುಗೆಗಳೊಂದಿಗೆ ಪ್ರತೀ ಜಿಲ್ಲೆಗಳಿಗೂ ಪ್ರಚಾರ ಕಾರ್ಯಕ್ಕೆ ಹೊರಟು ನಿಂತಿದ್ದಾರೆ. ಆ ಕಾರ್ಯಕ್ಕೂ ಈ ಸಂದರ್ಭದಲ್ಲಿಯೇ ಚಾಲನೆ ಸಿಕ್ಕಿದೆ. ಇದಲ್ಲದೇ ಮಲೆನಾಡು ಭಾಗದ ಕಹಳೆ, ಕೋಲಾಟದಂಥಾ ಕಲೆಗಳೂ ಕೂಡಾ ಈ ಸಂದರ್ಭದಲ್ಲಿ ಮೇಳೈಸಿವೆ. ನಂತರ ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಅಚ್ಚುಕಟ್ಟಾದ ಕಾರ್ಯಕ್ರಮದಲ್ಲಿ ಬಿ ವೈ ರಾಘವೇಂದ್ರ ಸೇರಿದಂತೆ ಗಣ್ಯರ ಸಮ್ಮುಖದಲ್ಲಿ ಶೀರ್ಷಿಕೆ ಗೀತೆ ಬಿಡುಗಡೆಗೊಂಡಿದೆ.
ಮಳಿ ಆತು ಬೆಳಿ ಆತು ಬ್ಯಾಸಗೀನೂ ಬ್ಯಾಸರಾತು… ಎಂಬ ಹಾಡು ನಿಜಕ್ಕೂ ಮಲೆನಾಡು ಭಾಷೆಯನ್ನು ಶಶಕ್ತವಾಗಿ ಹಿಡಿದಿಟ್ಟುಕೊಂಡಂತೆ ರೂಪುಗೊಂಡಿದೆ. ಈವರೆಗೂ ಮಲೆನಾಡು ಸೀಮೆಯ ಚಿತ್ರಣ ಸಿನಿಮಾವಾದರೂ ಕೂಡಾ ಅಲ್ಲಿನ ಭಾಷೆ ಪೂರ್ಣಪ್ರಮಾಣದಲ್ಲಿ ಬಳಕೆಯಾದದ್ದಿಲ್ಲ. ಆದರೆ, ಈ ಸಿನಿಮಾದುದ್ದಕ್ಕೂ ಅದರದ್ದೇ ಮೇಲುಗೈ. ಸದರಿ ಶೀರ್ಷಿಕೆ ಗೀತೆಯೂ ಕೂಡಾ ಮಲೆನಾಡು ಫ್ಲೇವರಿನಲ್ಲಿ ಅದ್ದಿ ತೆಗೆದಂತೆ ಮೂಡಿ ಬಂದಿದೆ. ಅದ್ಯಾವ ಸೀಮೆಯಲ್ಲೇ ಇದ್ದರೂ ಮಲೆನಾಡಿನ ನೆನಪನ್ನು ಎದೆಗಾನಿಸಿ ತಂಪಾಗಿಸುವಂಥಾ ಈ ಹಾಡು ಈ ದಿನಮಾನದ ಅತೀ ಅಪರೂಪದ ಗೀತೆಯಾಗಿ ದಾಖಲಾಗುವಂತಿದೆ.
ಕಾಂತಾರ ಖ್ಯಾತಿಯ ಪ್ರಮೋದ್ ಮರವಂತೆ ಈ ಹಾಡನ್ನು ಬರೆದಿದ್ದಾರೆ. ಗಗನ್ ಬಡೇರಿಯಾ ಸಂಗೀತ ಹಾಗೂ ಕರಿಬಸವ ಗಾಯನದೊಂದಿಗೆ ಈ ಹಾಡು ಮೂಡಿಬಂದಿದೆ. ಈಗಾಗಲೇ ಫಸ್ಟ್ ಲುಕ್, ಮೋಷನ್ ಪೋಸ್ಟರ್, ಮಲೆನಾಡು ಗೊಂಬೆಯಂಥಾ ವೀಡಿಯೋಈ ಸಾಂಗ್ ಮೂಲಕ ಕೆರೆಬೇಟೆ ಪ್ರೇಕ್ಷಕರನ್ನು ತಲುಪಿಕೊಂಡಿತ್ತು. ಇನ್ನೇನು ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಈ ಹೊತ್ತಿನಲ್ಲಿ ಲಾಂಚ್ ಆಗಿರುವ ಈ ಟೈಟ್ ಸಾಂಗ್ ಅತ್ಯಂತ ಪರಿಣಾಮಕಾರಿಯಾಗಿ ಮೂಡಿ ಬಂದಿದೆ. ಗೌರಿಶಂಕರ್ ಸಹೋದರ ಜೈಶಂಕರ್ ಪಟೇಲ್ ಜನಮನ ಸಿನಿಮಾಸ್ ಬ್ಯಾನರಿನಡಿಯಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ರಾಜಗುರು ಬಿ ಈ ಸಿನಿಮಾ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಬಿಂದು ಶಿವರಾಮ್ ನಾಯಕಿಯಾಗಿ ಜೊತೆಯಾಗಿದ್ದಾರೆ. ಇನ್ನುಳಿದಂತೆ, ಗಗನ್ ಬದೇರಿಯಾ ಸಂಗೀತ, ಕೀರ್ತನ್ ಪೂಜಾರಿ ಛಾಯಾಗ್ರಹಣ, ಜ್ಞಾನೇಶ್-ಯುವರತ್ನ ಸಂಕಲನ, ಕಂಬಿ ರಾಜು ನೃತ್ಯ ನಿರ್ದೇಶನ ಮತ್ತು ಗೋಪಾಲ್ ದೇಶಪಾಂಡೆ, ಹರಿಣಿ, ಸಂಪತ್ ಕುಮಾರ್, ರಘು ರಾಜಾನಂದ, ರಾಮ್ ದಾಸ್, ರಾಕೇಶ್ ಪೂಜಾರಿ, ಚಿಲ್ಲರ್ ಮಂಜು, ಗೌತಮ್ ರಾಜ್, ವರ್ಧನ್ ತೀರ್ಥಹಳ್ಳಿ, ರಣಧೀರ್ ಗೌಡ, ಶೇಖರ್ ಕೆ, ದೇವಿಪ್ರಕಾಶ್, ಆಶಾ ಸುಜಯ್, ವಿದ್ಯಾ, ಕಿರಣ್ ರಾವ್, ಗೀತಾ ಮೈಸೂರು ಮುಂತಾದವರ ತಾರಾಗಣವಿದೆ.
ವಸಿಷ್ಠ ಸಿಂಹ (Vasishtha) ನಾಯಕರಾಗಿ ಅಭಿನಯಿಸಿರುವ ‘ಲವ್ ಲಿ’ (Love Lee) ಚಿತ್ರದ ಟೈಟಲ್ ಹಾಡು (Title Song) ಇತ್ತೀಚೆಗೆ ಬಿಡುಗಡೆಯಾಗಿದ್ದು, ಜಾಲತಾಣದಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ವಿಶೇಷವಾದ ಈ ಗೀತೆಯನ್ನು ಬಿಡುಗಡೆ ಮಾಡಲು ಮುಖ್ಯ ಅತಿಥಿಗಳಾಗಿ ಕ್ರೇಜಿ ಸ್ಟಾರ್ ರವಿಚಂದ್ರನ್, ರಿಯಲ್ ಸ್ಟಾರ್ ಉಪೇಂದ್ರ, ನೆನಪಿರಲಿ ಪ್ರೇಮ್, ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಆಗಮಿಸಿದ್ದರು. ಅಭುವನಾಸ್ ಕ್ರೀಯೆಷನ್ಸ್ ಬ್ಯಾನರ್ ನಲ್ಲಿ ರವೀಂದ್ರ ಕುಮಾರ್ ನಿರ್ಮಿಸಿರುವ ಈ ಚಿತ್ರಕ್ಕೆ ಕಥೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ ಯುವ ಪ್ರತಿಭೆ ಚೇತನ್ ಕೇಶವ್.
‘ನಿರ್ಮಾಪಕರ ಸಹಕಾರದಿಂದ ಸಿನಿಮಾ ಇಷ್ಟು ಚೆನ್ನಾಗಿ ಬಂದಿದೆ. ಸಾಂಗ್ ನಂತೆ ಸಿನಿಮಾ ಕೂಡ ಕಲರ್ ಫುಲ್ ಆಗಿ ಬಂದಿದೆ. ಪ್ರೀತಿಯಲ್ಲಿ ಏನೆಲ್ಲಾ ಇರುತ್ತೆ ಎಂಬುದೇ ಸಿನಿಮಾ. ಮೊದಲ ಭಾಗದಲ್ಲಿ ರೋಮ್ಯಾಂಟಿಕ್ ಕಥೆ ಇದ್ದರೆ, ದ್ವಿತೀಯಾರ್ಧದಲ್ಲಿ ಕಂಟೆಂಟ್ ಬಗ್ಗೆ ಹೇಳಲಾಗಿದೆ. ನಾನು 9 ವರ್ಷದಿಂದ ಚಿತ್ರರಂಗದಲ್ಲಿದ್ದೀನಿ. ನಿರ್ದೇಶಕ ನರ್ತನ್ ಜೊತೆ ‘ಮಫ್ತಿ’ ಚಿತ್ರಕ್ಕೆ ಕೆಲಸ ಮಾಡಿದ್ದೇನೆ. ಸ್ಕೂಲ್ ದಿನಗಳಿಂದ ನನಗೆ ಸಿನಿಮಾ ಮಾಡುವ ಆಸೆ. ಉಪೇಂದ್ರ, ರವಿಚಂದ್ರನ್ ಅವರು ನನಗೆ ಸ್ಫೂರ್ತಿ. ಆದರೆ ನಾನು ಹೆಚ್ಚಾಗಿ ಆ್ಯಕ್ಷನ್ ಸಿನಿಮಾಗೆ ಕೆಲಸ ಮಾಡಿದ್ದೇನೆ. ಹಾಗಾಗಿ ಈ ಚಿತ್ರದಲ್ಲಿ ಮಾಸ್ , ಕ್ಲಾಸ್ ಎರಡನ್ನೂ ಬಳಸಿದ್ದೇನೆ. ಚಿತ್ರದಲ್ಲಿ ಸೋಷಿಯಲ್ ಮೆಸೇಜ್ ಕೂಡ ಇದೆ. ಮಂಗಳೂರು, ಬೆಂಗಳೂರು ಉಡುಪಿಯಲ್ಲಿ ಚಿತ್ರೀಕರಣ ಮಾಡಲಾಗಿದೆ. ಇನ್ನು ಲಂಡನ್ ನಲ್ಲಿ ಒಂದು ಸಾಂಗ್ ಶೂಟಿಂಗ್ ಮಾಡಲು ಯೋಜನೆ ಹಾಕಲಾಗಿದೆ. ರೌಡಿಸಂ, ಲವ್, ಡ್ರಾಮಾ ಹಾಗೂ ಫ್ಯಾಮಿಲಿ ಜಾನರ್ ನಲ್ಲಿ ಸಿನಿಮಾ ಸಾಗುತ್ತದೆ. ಪ್ರೀತಿ, ನಂಬಿಕೆ ಮೇಲೆ ಸಂಬಂಧಗಳು ಮುಖ್ಯ. ಅವುಗಳನ್ನು ಹೇಗೆ ಉಳಿಸಿಕೊಳ್ಳಬೇಕು? ಎಂಬುದು ಕಥೆಯಲ್ಲಿ ಇದೆ. ಸಿನಿಮಾ ಪ್ರೇಕ್ಷಕರಿಗೆ ಕನೆಕ್ಟ್ ಆಗುತ್ತದೆ. ಚಿತ್ರದಲ್ಲಿ ಮೂರು ಆ್ಯಕ್ಷನ್, ನಾಲ್ಕು ಹಾಡುಗಳಿವೆ’ ಎಂದು ನಿರ್ದೇಶಕ ಚೇತನ್ ಕೇಶವ್ (Chetan Keshav) ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ನಾಯಕ ವಸಿಷ್ಠ ಸಿಂಹ ಮಾತನಾಡಿ, ‘ನನ್ನನ್ನು ತುಂಬಾ ಕಾಡಿದಂತಹ ಸಿನಿಮಾ ಇದು. ಈಗ ಈ ಹಾಡಿನಿಂದ ಪ್ರಮೋಷನ್ ಶುರು ಮಾಡಿದ್ದು, ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಮಾಡುವ ಯೋಜನೆ ಇದೆ. ಇದು ಸುಂದರ ಪ್ರೇಮಕಥೆಯ ಚಿತ್ರ. ಕಥೆ ಕೇಳಿದಾಗ ತುಂಬಾ ಇಷ್ಟ ಆಯ್ತು. ನಿರ್ಮಾಪಕರು ಸೇರಿದಂತೆ ಚಿತ್ರತಂಡದ ಸಹಕಾರಕ್ಕೆ ಧನ್ಯವಾದ ಎಂದರು. ಇದನ್ನೂ ಓದಿ:ವರುಣ್, ಲಾವಣ್ಯ ನಿಶ್ಚಿತಾರ್ಥದಲ್ಲಿ ನಿಹಾರಿಕಾ ಪತಿ ಗೈರು- ಡಿವೋರ್ಸ್ ಸುದ್ದಿಗೆ ಸಿಕ್ತು ಸಾಕ್ಷಿ
ನಂತರ ನಾಯಕಿ ಸ್ಟೇಪಿ ಪಟೇಲ್ ‘ನಾನು ತಮಿಳು, ತೆಲುಗು ಸಿನಿಮಾಗಳಲ್ಲಿ ನಟಿಸಿದ್ದು ಕನ್ನಡ ಮೊದಲ ಸಿನಿಮಾ. ಒಳ್ಳೆ ತಂಡದ ಜೊತೆ ಕೆಲಸ ಮಾಡಿದ ಖುಷಿ ಇದೆ. ನಾನು ಇನ್ನಷ್ಟು ಸಿನಿಮಾ ಮಾಡಲು ನಿಮ್ಮ ಆಶಿರ್ವಾದ ಬೇಕು. ನಾನು ಈ ಚಿತ್ರದಲ್ಲಿ ಜನನಿ ಎಂಬ ಪಾತ್ರ ನಿರ್ವಹಿಸಿದ್ದೇನೆ’ ಎಂದು ಹೇಳಿದರು.
ಸಹ ನಿರ್ಮಾಪಕರಾದ ಬಾಲಕೃಷ್ಣ ಜಿ.ಎನ್, ಕೃಷ್ಣ, ಬೇಬಿ ವಂಶಿಕಾ ತಮ್ಮ ಅನುಭವ ಹಂಚಿಕೊಂಡರು. ಅಥಿತಿಗಳಾಗಿ ಆಗಮಿಸಿದ್ದ ರವಿಚಂದ್ರನ್ ಅಭುವನಾಸ್ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಿ ಚಿತ್ರ ‘ಲವ್ ಲಿ’ ಆಗಿರುತ್ತದೆ. ಹೊಸಬರಲ್ಲಿ ಉತ್ಸಾಹವಿದ್ದು, ಹಾಡು ಚೆನ್ನಾಗಿ ಬಂದಿದೆ. ತಂಡಕ್ಕೆ ಒಳ್ಳೆಯದಾಗಲಿ’ ಎಂದರು.
ಹಾಡು ಬಿಡುಗಡೆ ಮಾಡಿದ ಉಪೇಂದ್ರ ಅವರು ಮಾತನಾಡಿ ‘ಸಾಂಗ್ ಇಂಪಾಗಿದ್ದು, ಇಂಟ್ರೆಸ್ಟ್ ಆಗಿ ಕೂಡ ಇದೆ. ಸಾಂಗ್ ನೋಡುತ್ತಿದ್ದರೆ ನಂಗೆ ಸಿನಿಮಾ ನೋಡಬೇಕು ಅನಿಸುತ್ತಿದೆ’ ಎಂದರು. ನೆನಪಿರಲಿ ಪ್ರೇಮ್ ‘ತಂಡಕ್ಕೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಪ್ರಿಯಂಕಾ ಉಪೇಂದ್ರ ಹಾಗೂ ಹರಿಪ್ರಿಯ ಅವರು ಹಾಡಿನ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದರು.
ಬೆಂಗಳೂರು: ಪೈಲ್ವಾನ್ ನಂತರ ಕಿಚ್ಚ ಸುದೀಪ್ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಈ ಹಿಂದೆ ಟೀಸರ್ ಮೂಲಕ ಸೌಂಡ್ ಮಾಡಿದ್ದ ಸಿನಿಮಾ, ಇದೀಗ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗುತ್ತಿದೆ. ಈ ಬಾರಿ ಕಿಚ್ಚ ಸುದೀಪ್ ಬ್ಯಾಂಡ್ ಬಾರಿಸಲು ಸಿದ್ಧರಾಗಿದ್ದು, ಈ ಕುರಿತು ಆನಂದ್ ಆಡಿಯೋ ಮಾಹಿತಿ ಹಂಚಿಕೊಂಡಿದೆ. ಶೀಘ್ರವೇ ಸರ್ ಪ್ರೈಸ್ ನೀಡಲಿದ್ದೇವೆ ಎಂದು ತಿಳಿಸಿದೆ.
ಕಿಚ್ಚ ಸದೀಪ್‍ಗೆ ಎದುರಾಳಿಯಾಗಿ ರವಿಶಂಕರ್ ಕಾಣಿಕೊಳ್ಳುತ್ತಿದ್ದು, ಶಿವಕಾರ್ತಿಕ್ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮಲಯಾಳಂ ಹಾಗೂ ತಮಿಳು ನಟಿ ಮಡೋನ್ನಾ ಸೆಬಾಸ್ಟಿಯನ್, ಶ್ರದ್ಧಾ ದಾಸ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಕೋಟಿಗೊಬ್ಬ, ಕೋಟಿಗೊಬ್ಬ-2 ಚಿತ್ರಗಳ ಯಶಸ್ಸಿನ ನಂತರ ಕಿಚ್ಚಿ ಸುದೀಪ್ ಇದೀಗ ಮೂರನೇ ಭಾಗದಲ್ಲಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಸುದೀಪ್ ಅವರ ಪಾತ್ರ ಪ್ರಮುಖ ವಾಗಿದ್ದು, ಈ ಪಾತ್ರದ ಸುತ್ತಲೂ ಕಥೆ ಸುತ್ತುತ್ತದೆ ಎನ್ನಲಾಗಿದೆ.
ವಿಲನ್ ಪಾತ್ರದಲ್ಲಿ ರವಿಶಂಕರ್ ಕಾಣಿಸಿಕೊಳ್ಳುತ್ತಿದ್ದು, ಎದುರಾಳಿ ವಿರುದ್ಧ ಸೇಡು ತೀರಿಸಿಕೊಳ್ಳುವ ಪಾತ್ರವನ್ನು ಕಿಚ್ಚ ಸುದೀಪ್ ನಿರ್ವಹಿಸುತ್ತಿದ್ದಾರೆ. ಟೀಸರ್ ನಲ್ಲಿ ಕಿಚ್ಚ ಸುದೀಪ್ ಫುಲ್ ಮಾಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದರು. ಗೂಂಡಾಗಳ ಹೆಡೆಮುರಿ ಕಟ್ಟುವ ದೃಶ್ಯಗಳನ್ನು ತೋರಿಸಲಾಗಿತ್ತು. ಮಲೆಯಾಳಂ ಹಾಗೂ ತಮಿಳು ನಟಿ ಮಡೋನ್ನಾ ಸೆಬಸ್ಟಿಯನ್ ಈ ಚಿತ್ರದ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಶ್ರದ್ಧಾ ದಾಸ್ ಅವರು ಇಂಟರ್ ಪೋಲ್ ಅಧಿಕಾರಿಯ ಪಾತ್ರವನ್ನು ನಿಭಾಯಿಸುತ್ತಿದ್ದಾರೆ. ಅಫ್ತಾಬ್ ಶಿವದಾಸಿನಿ, ನವಾಬ್ ಶಹರೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
ಕೋಟಿಗೊಬ್ಬ-2 ಭಾರೀ ಸದ್ದು ಮಾಡುವ ಮೂಲಕ ಬಾಕ್ಸ್ ಆಫೀಸ್‍ನಲ್ಲಿ ಧೂಳೆಬ್ಬಿಸಿತ್ತು. ಇದೀಗ ಅದೇ ಟೈಟಲ್‍ನ ಮೂರನೇ ಅವತರಿಣಿಕೆ ಭರ್ಜರಿ ಸದ್ದು ಮಾಡುತ್ತಿದೆ. ಅಭಿಮಾನಿಗಳಲ್ಲಿ ಕುತೂಹಲ ಹಚ್ಚಲು ಕಾರಣವಾಗಿದೆ. ಚಿತ್ರದಲ್ಲಿ ಸುದೀಪ್ ಯಾವ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಸಿನಿಮಾ ಹೇಗಿರಲಿದೆ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮನೆ ಮಾಡಿದೆ. ಟೈಟಲ್ ಟ್ರ್ಯಾಕ್ ಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಅಭಿಮಾನಿಗಳ ನಿರೀಕ್ಷೆಯಂತೆ ಕೋಟಿಗೊಬ್ಬ-3 ಚಿತ್ರದ ಮೊದಲ ಹಾಡು ಬಿಡುಗಡೆಗೆ ಚಿತ್ರ ತಂಡ ತಯಾರಿ ನಡೆಸಿದ್ದು, ಈ ಬಗ್ಗೆ ಆನಂದ್ ಆಡಿಯೋ ಸಂಸ್ಥೆ ಪ್ರಕಟಣೆ ಹೊರಡಿಸಿ, ಕೋಟಿಗೊಬ್ಬ-3 ಚಿತ್ರದ ಟೈಟಲ್ ಟ್ರ್ಯಾಕ್ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದೆ. ಈಗಾಗಲೇ ಟೀಸರ್ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿರುವ ಸಿನಿಮಾದ ಟೈಟಲ್ ಟ್ರ್ಯಾಕ್ ಹೇಗಿರಲಿದೆ ಎಂದು ಅಭಿಮಾನಿಗಳು ತುದಿಗಾಲಲ್ಲಿ ಕಾಯುತ್ತಿದ್ದಾರೆ.
ಬೆಂಗಳೂರು: ಮಾಯಾಬಜಾರ್ ಚಿತ್ರದ ಹಾಡಿಗೆ ಅಮೆರಿಕಾದ ಡ್ಯಾನ್ಸರ್ಸ್ ನೃತ್ಯ ಮಾಡಿದ್ದು, ಪವರ್ ಸ್ಟಾರ್ ಪುನಿತ್ ರಾಜ್‍ಕುಮಾರ್ ಅವರು ಈ ವಿಡಿಯೋವನ್ನು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಪುನಿತ್ ರಾಜ್‍ಕುಮಾರ್ ಅವರು ನಿರ್ಮಾಣ ಮಾಡಿರುವ ಮಾಯಾಬಜಾರ್ ಚಿತ್ರ ಕಳೆದ ಶುಕ್ರವಾರ ತೆರೆಕಂಡು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈಗ ಈ ಚಿತ್ರದ ಟೈಟಲ್ ಸಾಂಗ್‍ಗೆ ಅಮೆರಿಕಾದ ಡ್ಯಾನ್ಸರ್ ನೃತ್ಯ ಮಾಡಿದ್ದು, ಈ ವಿಡಿಯೋವನ್ನು ಅಪ್ಪು ಅವರು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಪವರ್ ಸ್ಟಾರ್, ಮಾಯಾಬಜಾರ್ ಟೈಟಲ್ ಸಾಂಗ್ ಅನ್ನು ಅಮೆರಿಕಾದ ಮಿನ್ನಿಯಾಪೊಲೀಸ್ ಸಾಥ್ ಕೊರಿಯೋಗ್ರಫಿ ಶಾಲೆಯವರು ನೃತ್ಯ ಮಾಡಿದ್ದಾರೆ. ನನಗೆ ಬಹಳ ಇಷ್ಟವಾಯಿತು. ನಾವು ಮಾಯಾಬಜಾರ್ ಚಿತ್ರವನ್ನು ಇದೇ ಮಾರ್ಚ್ 6 ರಂದು ಅಮೆರಿಕಾದಲ್ಲಿ ಬಿಡುಗಡೆ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಪುನಿತ್ ಅವರು ನಿರ್ಮಾಣ ಎರಡನೇ ಸಿನಿಮಾ ಇದಾಗಿದ್ದು, ಈ ಸಿನಿಮಾವನ್ನು ರಾಧಕೃಷ್ಣ ರೆಡ್ಡಿ ನಿರ್ದೇಶನ ಮಾಡಿದ್ದಾರೆ. ವಸಿಷ್ಠ ಸಿಂಹ, ರಾಜ್ ಬಿ ಶೆಟ್ಟಿ, ಅಚ್ಚುತ್ ರಾವ್, ಪ್ರಕಾಶ್ ರಾಜ್ ಮತ್ತು ಚೈತ್ರರಾವ್ ಅವರು ಮಾಯಾಬಜಾರ್‍ನಲ್ಲಿ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
ಮನುಷ್ಯ ಬದುಕಲು ಹಣ ಬೇಕು, ಹಣವನ್ನು ಗಳಿಸಲು ಮನುಷ್ಯ ಏನ್ ಬೇಕಾದರೂ ಮಾಡುತ್ತಾನೆ. ಈ ಹಣದ ಸುತ್ತ ತಿರುಗುವ ಕಥೆಯೇ ಮಾಯಾಬಜಾರ್, ಇದರಲ್ಲಿ ಎಸಿಪಿ ಪಾತ್ರದಲ್ಲಿ ಪ್ರಕಾಶ್ ರಾಜ್ ಬಹಳ ಚೆನ್ನಾಗಿ ನಟಿಸಿದ್ದಾರೆ. ಪ್ರಾಮಾಣಿಕ ಪೊಲೀಸ್ ಪಾತ್ರಕ್ಕೆ ಅಚ್ಚುತ್ ರಾವ್ ಜೀವ ತುಂಬಿದ್ದಾರೆ. ರಾಜ್ ಬಿ ಶೆಟ್ಟಿ ಕಳ್ಳನ ಪಾತ್ರ ಮಾಡಿದ್ದಾರೆ. ಇವರ ಮಧ್ಯೆ ಯುವ ಪ್ರೇಮಿಗಳಾಗಿ ವಸಿಷ್ಠ ಸಿಂಹ ಮತ್ತು ಚೈತ್ರರಾವ್ ಮೋಡಿ ಮಾಡಿದ್ದಾರೆ.
ಈ ಚಿತ್ರದಲ್ಲಿ ಪುನಿತ್ ರಾಜ್ ಕುಮಾರ್ ಅವರು ಕೂಡ ಒಂದು ಹಾಡಿಗೆ ಹೆಜ್ಜೆ ಹಾಕಿದ್ದು, ಸಖತ್ ಸ್ಟೆಪ್ ಹಾಕಿದ್ದಾರೆ. ಬಿಡಿಗಡೆಯಾದ ಎರಡನೇ ದಿನದಲ್ಲಿ ಈ ಚಿತ್ರ ಪೈರಸಿಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಸಧ್ಯ ಪುನಿತ್ ಅವರು ಸಂತೋಷ್ ಆನಂದರಾಮ್ ನಿರ್ದೇಶನದ ಯುವರತ್ನ ಸಿನಿಮಾ ಮಾಡುತ್ತಿದ್ದಾರೆ.
-ಪ್ರೇಮ್ ಪಂಚಿಂಗ್ ಲಿರಿಕ್ಸ್, ಶಂಕರ್ ಮಹಾದೇವನ್ ಸೂಪರ್ ವಾಯ್ಸ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ಬಹುನಿರೀಕ್ಷೆಯ ಸಿನಿಮಾ `ದಿ ವಿಲನ್’. ಸೆಟ್ಟೇರಿದಾಗಿನಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸಖತ್ ಸೌಂಡ್ ಮಾಡುತ್ತಿರುವ ಈ ಚಿತ್ರ ಟೀಸರ್‍ನಿಂದ ಸೃಷ್ಟಿಸಿರುವ ಹವಾ ಅಷ್ಟಿಷ್ಟಲ್ಲ. ಸದ್ಯ ಈ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದೆ.
‘ಮಚ್ಚು ಗಿಚ್ಚು ಹಿಡಿದವನಲ್ಲ, ಆದ್ರೂ ಹವಾ ಇಟ್ಟವನಲ್ಲ, ಕೋಟೆ ಕಟ್ಟಿ ಮೆರೆದವನಲ್ಲ ಆದ್ರೂ ರಾಜ್ಯ ಆಳುತ್ತವನಲ್ಲ’ ಎಂದು ಸಾಗುವ ಈ ಹಾಡು ಜೋಗಿ ಪ್ರೇಮ್ ಲೇಖನದಲ್ಲಿ ಮೂಡಿ ಬಂದಿದೆ. ಶಂಕರ್ ಮಹಾದೇವನ್ ಕಂಠಸಿರಿಯಲ್ಲಿ ಮೂಡಿಬಂದಿರುವ ವಿಲನ್ ಟೈಟಲ್ ಟ್ರ್ಯಾಕ್ ಕೇಳುಗರಿಗೆ ಸಖತ್ ಕಿಕ್ ಕೊಡುತ್ತಿದೆ.
ರಿಲೀಸ್ ಆದ ಒಂದು ಗಂಟೆಯಲ್ಲಿ 1 ಲಕ್ಷಕ್ಕೂ ಅಧಿಕ ವ್ಯೂ ಪಡೆದುಕೊಂಡಿದೆ. ಈ ಹಾಡಿನಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರ್ತಾರಾ ಇಲ್ಲವೋ ಅನ್ನೋದನ್ನ ಪ್ರೇಮ್ ಸಸ್ಪೆನ್ಸ್ ಆಗಿಟ್ಟಿದ್ದಾರೆ. ಆದರೆ ರಿಲೀಸ್ ಆಗಿರುವ ಲಿರಿಕಲ್ ವಿಡಿಯೋದಲ್ಲಿ ಶಿವಣ್ಣ ಹಾಗೂ ಸುದೀಪ್ ಇಬ್ಬರು ಇರುವ ಮೇಕಿಂಗ್‍ನ ಬಳಸಿಕೊಂಡಿದ್ದಾರೆ.