ಉಡುಪಿ: ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದ್ದು, ಜ್ವರದ ಲಕ್ಷಣಗಳು ಕಂಡುಬಂದಿಲ್ಲ ಎಂದು ಹೇಳಿದೆ.
ಉಡುಪಿ ಜಿಲ್ಲೆಯಲ್ಲಿ ಟೊಮೆಟೊ ಜ್ವರದ ಲಕ್ಷಣಗಳು ಕಂಡುಬಂದಿಲ್ಲ. ಈವರೆಗೆ ಯಾವುದೇ ಪ್ರಕರಣ ಜಿಲ್ಲೆಯಲ್ಲಿ ಕಾಣಿಸಿಕೊಂಡಿಲ್ಲ. ಆರೋಗ್ಯ ಇಲಾಖೆಯ ಸೂಚನೆಯಂತೆಯೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ಸಂಪೂರ್ಣ ತಪಾಸಣೆ ನಡೆಯುತ್ತದೆ. ಕೇರಳ ರಾಜ್ಯದ ಪ್ರವಾಸಿಗರ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲಾಗಿದೆ ಎಂದು ಜಿಲ್ಲಾ ಆರೊಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ?
ಏನಿದು ಘಟನೆ? – ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿತ್ತು. ಜ್ವರ ಕಾಣಿಸಿಕೊಂಡಿದ್ದ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೇರಳದಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಆರೋಗ್ಯ ಇಲಾಖೆ ಹೇಳಿತ್ತು.
ಬೆಂಗಳೂರು: ಕೊರೊನಾ 4ನೇ ಅಲೆಯ ಭೀತಿಯಲ್ಲಿರುವ ಕರ್ನಾಟಕದ ಜನತೆಗೆ ಇದೀಗ ಮತ್ತೊಂದು ಆತಂಕ ಶುರುವಾಗಿದೆ.
ಇಂದಿನಿಂದ ಶಾಲೆಗಳು ಪುನರಾರಂಭಗೊಳ್ಳುತ್ತಿದ್ದು, ಈ ಹೊತ್ತಿನಲ್ಲೇ ಟೊಮೆಟೊ ಜ್ವರ ಕಾಣಿಸಿಕೊಂಡಿದೆ. ಕೇರಳದಲ್ಲಿ ಈಚೆಗಷ್ಟೇ ಕಾಣಿಸಿಕೊಂಡ ಟೊಮೆಟೋ ಜ್ವರ ಉಡುಪಿ ಜಿಲ್ಲೆಯಲ್ಲಿ 4 ವರ್ಷದ ಮಗುವಿನಲ್ಲಿ ಕಾಣಿಸಿಕೊಂಡ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಭೂಮಿಯಿಂದ ಭೀಕರ ಶಬ್ಧ – ಬೆಚ್ಚಿಬಿದ್ದ ಚಿಕ್ಕಬಳ್ಳಾಪುರ ಜನ
ಸದ್ಯ ರಾಜ್ಯದಲ್ಲಿ ಈ ಜ್ವರ ಕಾಣಿಸಿಕೊಂಡಿರುವ ಬಗ್ಗೆ ಆರೋಗ್ಯ ಇಲಾಖೆ ಯಾವುದೇ ಅಧಿಕೃತ ಪ್ರಕಟಣೆ ಬಿಡುಗಡೆಯಾಗಿಲ್ಲ. ಸೋಂಕಿತ ಮಗುವನ್ನು ಐಸಿಯು (ನಿಗಾ ಘಟಕ) ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶಂಕಿತ ಪ್ರಕರಣ ಪತ್ತೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ 126 ಕೇಸ್ – 103 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಂಗಳೂರು, ಕೊಡಗು, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿಯೂ ಆರೋಗ್ಯ ಇಲಾಖೆ ಅಧಿಕಾರಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಜೊತೆಗೆ ಸಾಂಕ್ರಾಮಿಕ ರೋಗ ತಜ್ಞರು ಇದು ತಾನೇ ಕಡಿಮೆಯಾಗುವ ಸೋಂಕು, ಇದಕ್ಕೆ ನಿರ್ದಿಷ್ಟ ಔಷಧಿಯಿಲ್ಲ ಎಂದು ಹೇಳಿದ್ದಾರೆ.
ಆರೋಗ್ಯ ಇಲಾಖೆಗೆ ತಲೆನೋವು: ಟೊಮೆಟೊ ಫ್ಲೂ ಆರೋಗ್ಯಾಧಿಕಾರಿಗಳಿಗೆ ತಲೆನೋವು ತರಿಸಿದೆ. ಅದಕ್ಕಾಗಿ ಜ್ವರ ಬಂದವರನ್ನು ಹೇಗೆ ಗುರುತಿಸಬೇಕು? ಹೇಗೆ ಪರೀಕ್ಷೆ ಮಾಡಿಸಬೇಕು? ಎನ್ನುವ ಬಗ್ಗೆ ಇನ್ನೂ ಪ್ರಚಾರ ಕೈಗೊಳ್ಳಬೇಕಿದೆ. ಈ ಬಗ್ಗೆ ಇನ್ನೂ ಆರೋಗ್ಯಾಧಿಕಾರಿಗಳಲ್ಲಿಯೇ ಗೊಂದಲ ಇವೆ. ಕೇರಳದಲ್ಲಿ ಈವರೆಗೆ 50 ಪ್ರಕರಣ ಕಾಣಿಸಿಕೊಂಡಿದೆ.
ಜ್ವರ ಲಕ್ಷಣಗಳೇನು? ವಿಪರೀತ ಜ್ವರ, ನಿರ್ಜಲೀಕರಣ, ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು, ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳತ ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು ಆಯಾಸ, ದೇಹದಲ್ಲಿ ನೋವು.
ತಿರುವನಂತಪುರಂ: 2 ವರ್ಷಗಳಿಂದ ಕೊರೊನಾ ಸೋಂಕು ಬಂದು ಇಡೀ ವಿಶ್ವವನ್ನೆ ಬೆಚ್ಚಿ ಬೀಳಿಸಿತ್ತು. ಈ ಸೋಂಕು ಇಡೀ ವಿಶ್ವದಿಂದ ಸಂಪೂರ್ಣವಾಗಿ ಹೋಗಿಯೇ ಇಲ್ಲ. ಈ ನಡುವೆಯೇ ಹೊಸ ಸೋಂಕು ಕೇರಳದಲ್ಲಿ ಕಾಣಿಸಿಕೊಂಡಿದ್ದು, ಆತಂಕ ಮೂಡಿಸಿದೆ. ಈ ಸೋಂಕನ್ನು ‘ಟೊಮೆಟೊ ಜ್ವರ’ ಎಂದು ತಜ್ಞರು ಕರೆದಿದ್ದಾರೆ.
ಇತ್ತೀಚೆಗೆ ವಿಷಾಹಾರ ಸೇವನೆಯಿಂದ 58 ಮಂದಿ ಸಾವಿಗೀಡಾಗಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಆಘಾತಕ್ಕೊಳಗಾಗಿರುವ ಕೇರಳ ಇದೀಗ ಮತ್ತೊಂದು ನಿಗೂಢ ಕಾಯಿಲೆಗೆ ತುತ್ತಾಗುತ್ತಿದೆ. ಇದನ್ನು ತಜ್ಞರು ‘ಟೊಮೆಟೋ ಜ್ವರ’ ಎಂದು ಕರೆಯುತ್ತಿದ್ದಾರೆ. ಈಗಾಗಲೇ ಸೋಂಕಿಗೆ 80 ಕ್ಕೂ ಹೆಚ್ಚು ಮಕ್ಕಳು ತುತ್ತಾಗಿದ್ದಾರೆ. ಪ್ರಸ್ತುತ ಈ ಎಲ್ಲ ಪ್ರಕರಣಗಳು ಕೊಲ್ಲಂನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಎರಡೇ ದಿನದಲ್ಲಿ ಸಿಕ್ಸ್ ಪ್ಯಾಕ್ – ವೀಡಿಯೋ ನೋಡಿ ಶಾಕ್ ಆದ ನೆಟ್ಟಿಗರು
ಟೊಮೆಟೊ ಜ್ವರ ಎಂದರೇನು?
ಇದು ಅಪರೂಪದ ವೈರಲ್ ಕಾಯಿಲೆಯಾಗಿದೆ. ಈ ಕಾಯಿಲೆ ಬಂದಾಗ ಕೆಂಪು-ಬಣ್ಣದ ದದ್ದುಗಳು, ಚರ್ಮದಲ್ಲಿ ಕಿರಿಕಿರಿ ಉಂಟುಮಾಡುತ್ತದೆ. ಈ ಕಾಯಿಲೆ ಬಂದರೆ ಟೊಮೆಟೊಗಳಂತೆ ಗುಳ್ಳೆಗಳು ಬರುತ್ತೆ. ಅದಕ್ಕೆ ಇದನ್ನು ಟೊಮೆಟೊ ಜ್ವರ ಎಂದು ಕರೆಯಲಾಗಿದೆ. ಈ ಟೊಮೆಟೊ ಜ್ವರ ಕೇರಳದಲ್ಲಿ ಐದು ವರ್ಷದೊಳಗಿನ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರುತ್ತಿದೆ.
ರೋಗದ ಲಕ್ಷಣಗಳು
ಈ ಕಾಯಿಲೆ ಬಂದಾಗ ಟೊಮೆಟೊ ಗಾತ್ರದ ಗುಳ್ಳೆಗಳು ಬಂದು ಅವು ಕೆಂಪು ಬಣ್ಣಕ್ಕೆ ತಿರುಗುತ್ತೆ. ಇತರ ರೋಗಲಕ್ಷಣಗಳೆಂದರೆ ಅಧಿಕ ಜ್ವರ, ದೇಹದಲ್ಲಿ ನೋವು, ಕೀಲು ಊತ ಮತ್ತು ಆಯಾಸ ಇರುತ್ತೆ. ಈ ಕಾಯಿಲೆ ಚಿಕೂನ್‍ಗುನ್ಯಾದಂತೆಯೇ ಇರುತ್ತದೆ. ಆರ್ಯಂಕಾವು, ಅಂಚಲ್ ಮತ್ತು ನೆಡುವತ್ತೂರ್‌ನಲ್ಲೂ ಈ ಪ್ರಕರಣಗಳು ದಾಖಲಾಗಿದೆ. ಇದನ್ನೂ ಓದಿ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಎಂಪಿ ಶಿಕ್ಷಣ ಸಚಿವರ ಸೊಸೆ
ತಮಿಳುನಾಡು-ಕೇರಳ ಗಡಿಯಲ್ಲಿ ಕಣ್ಗಾವಲು
ಕೇರಳ ಜಿಲ್ಲೆಯೊಂದರಲ್ಲಿ ‘ಟೊಮೆಟೊ ಜ್ವರ’ ಹರಡುತ್ತಿರುವ ಹಿನ್ನೆಲೆ ತಮಿಳುನಾಡು-ಕೇರಳ ಗಡಿಯಲ್ಲಿರುವ ವಾಳಯಾರ್‍ನಲ್ಲಿ ಕಣ್ಗಾವಲು ಕಾಯಲಾಗುತ್ತಿದೆ. ಕೇರಳದಿಂದ ಕೊಯಮತ್ತೂರ್‌ಗೆ ಬರುವವರಿಗೆ ವೈದ್ಯಕೀಯ ತಂಡ ಪರೀಕ್ಷೆಗಳನ್ನು ನಡೆಸುತ್ತಿದೆ.
ಎಲ್ಲ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳ ತಂಡವನ್ನು ನಿಗದಿಪಡಿಸಲಾಗಿದೆ. ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಪರೀಕ್ಷಿಸಲು 24 ಸದಸ್ಯರ ತಂಡವನ್ನು ಸಹ ರಚಿಸಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
ಕರ್ನಾಟಕವು ಈ ಸೋಂಕಿನಿಂದ ಎಚ್ಚೆತ್ತುಕೊಳ್ಳುವುದು ತುಂಬಾ ಮುಖ್ಯ. ಏಕೆಂದರೆ ಕೇರಳ ಗಡಿ ಕರ್ನಾಟಕಕ್ಕೂ ಅಂಟಿಕೊಂಡಿದೆ. ಈ ಹಿನ್ನೆಲೆ ಕೇರಳದಿಂದ ಬಂದವರನ್ನು, ಅದರಲ್ಲಿಯೂ ಮಕ್ಕಳನ್ನು ಸರಿಯಾಗಿ ವೈದ್ಯಕೀಯ ಪರೀಕ್ಷೆ ಮಾಡಿಸುವುದು ತುಂಬಾ ಅವಶ್ಯಕ. ಇಲ್ಲದೇ ಹೋದರೆ ಸೋಂಕು ಕರ್ನಾಟಕದಲ್ಲಿಯೂ ಹರಡಿಕೊಳ್ಳಬಹುದು.