Tag: ಟೋಕಿಯೊ ಒಲಿಂಪಿಕ್ಸ್

  • NationalGames: ಚಿನ್ನ ಬೇಟೆಯಾಡಿದ ಮೀರಾಬಾಯಿ ಚಾನು

    NationalGames: ಚಿನ್ನ ಬೇಟೆಯಾಡಿದ ಮೀರಾಬಾಯಿ ಚಾನು

    ಗಾಂಧಿನಗರ: 2020ರ ಟೋಕಿಯೋ ಒಲಿಂಪಿಕ್ಸ್ (Olympics) ಪದಕ ವಿಜೇತೆ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ (Olympics, CommonWealth Games) ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದ ಸಾಯಿಕೋಮ್ ಮೀರಾಬಾಯಿ ಚಾನು (Mirabai Chanu) ಇದೀಗ ಗುಜರಾತ್‌ನಲ್ಲಿ ನಡೆಯುತ್ತಿರುವ ನ್ಯಾಷನಲ್ ಗೇಮ್ಸ್-2022 (National Games 2022) ಕ್ರೀಡಾಕೂಡದಲ್ಲಿ ಚಿನ್ನದ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

    49 ಕೆಜಿ ವೇಟ್‌ಲಿಫ್ಟಿಂಗ್ (WeightLifting) ವಿಭಾಗದಲ್ಲಿ ಒಟ್ಟು 191 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ (GoldMedal)ಕ್ಕೆ ಕೊರಳೊಡ್ಡಿದ್ದಾರೆ. ಸ್ನ್ಯಾಚ್‌ನಲ್ಲಿ 84 ಕೆಜಿ ಹಾಗೂ ಕ್ಲೀನ್ ಅಂಡ್ ಜೆರ್ಕ್‌ನಲ್ಲಿ 107 ಕೆಜಿ ಭಾರ ಎತ್ತುವ ಮೂಲಕ ಚಿನ್ನದ ಪದಕ ಬಾಚಿಕೊಂಡಿದ್ದಾರೆ. ಇದನ್ನೂ ಓದಿ: CommonwealthGames: ಚಿನ್ನದ ಬೇಟೆಯೊಂದಿಗೆ ದಾಖಲೆ ಬರೆದ ಮೀರಾಬಾಯಿ ಚಾನು

    ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೀರಾಬಾಯಿ ಚಾನು ಚಿನ್ನದ ಪದಕ ಗೆದ್ದು ಹೊಸ ದಾಖಲೆ ಬರೆದಿದ್ದರು. ಅಲ್ಲದೇ 2014ರ ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಬೆಳ್ಳಿ, 2018ರಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. 2017ರಲ್ಲಿ ವಿಶ್ವ ಚಾಂಪಿಯನ್‌ಶಿಪ್ ಚಿನ್ನದ ಪದಕ ನಂತರ ಏಷ್ಯನ್ ಚಾಂಪಿಯನ್‌ಶಿಪ್ ಪದಕಗಳನ್ನೂ ಬೇಟೆಯಾಡಿದ್ದಾರೆ. 2022ರ ಕಾಮನ್‌ವೆಲ್ತ್‌ ಗೇಮ್ಸ್‌  ಬಳಿಕ ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಮೀರಾಬಾಯಿ ಚಾನು, ಶೀಘ್ರದಲ್ಲೇ ಚೇತರಿಕೆ ಕಂಡು ಮತ್ತೆ ಚಿನ್ನದ ಪದಕ ಬಾಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ

    ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ನೀರಜ್‌ ಚೋಪ್ರಾಗೆ ಪರಮ ವಿಶಿಷ್ಟ ಸೇವಾ ಪದಕ

    ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್‌ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್‌ ಚೋಪ್ರಾ ಅವರು ಪರಮ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.

    NEERAJ

    ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಭವನದಲ್ಲಿ ರಾಮನಾಥ್‌ ಕೋವಿಂದ್‌ ಅವರು ಪದಕ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ 384 ರಕ್ಷಣಾ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಹಾಗೂ ವಿವಿಧ ಪ್ರಶಸ್ತಿಗಳನ್ನು ನೀಡಲಿದ್ದಾರೆ. ಇದನ್ನೂ ಓದಿ: ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್

    ಕಳೆದ ವರ್ಷ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ನೀರಜ್‌ ಚೋಪ್ರಾ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದರು.

    NEERAJ

    ಐತಿಹಾಸಿಕ ಸಾಧನೆಗಾಗಿ ನೀರಜ್‌ ಚೋಪ್ರಾ ಅವರಿಗೆ ಕ್ರೀಡಾ ಕ್ಷೇತ್ರದ ಅತ್ಯುತ್ತಮ ಪ್ರಶಸ್ತಿಯಾದ ಮೇಜರ್‌ ಧ್ಯಾನ್‌ಚಂದ್‌ ಖೇಲ್‌ ರತ್ನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಇದನ್ನೂ ಓದಿ: ಪ್ರೊ ಕಬಡ್ಡಿಗೆ ಕೊರೊನಾ ಅಡ್ಡಿ – ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ

  • ರೈಲ್ವೆ ಉದ್ಯೋಗ ತೊರೆದು ಪೊಲೀಸ್‌ ಇಲಾಖೆ ಸೇರಿದ ಟೋಕಿಯೊ ಒಲಿಂಪಿಕ್ಸ್‌ ಬೆಳ್ಳಿ ವಿಜೇತೆ

    ರೈಲ್ವೆ ಉದ್ಯೋಗ ತೊರೆದು ಪೊಲೀಸ್‌ ಇಲಾಖೆ ಸೇರಿದ ಟೋಕಿಯೊ ಒಲಿಂಪಿಕ್ಸ್‌ ಬೆಳ್ಳಿ ವಿಜೇತೆ

    ಇಂಪಾಲ್: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದುಕೊಟ್ಟ ಮೀರಾಬಾಯಿ ಚಾನು ಅವರು ಈಗ ಮಣಿಪುರ ಪೊಲೀಸ್‌ ಇಲಾಖೆಯಲ್ಲಿ ಅಡಿಷನಲ್‌ ಸೂಪರಿಂಟೆಂಡೆಂಟ್‌ ಆಫ್‌ ಪೊಲೀಸ್‌ (ಎಎಸ್‌ಪಿ) ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ವೇಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮೀರಾಬಾಯಿ ಬೆಳ್ಳಿ ಪದಕ ಜಯಿಸಿದ್ದರು. ಈ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಅವರದ್ದೇ ಮೊದಲ ಪದಕವಾಗಿತ್ತು. ಇದನ್ನೂ ಓದಿ: ಟೀಂ ಇಂಡಿಯಾದ ಟೆಸ್ಟ್ ನಾಯಕತ್ವ ತೊರೆದ ವಿರಾಟ್ ಕೊಹ್ಲಿ

    ಮೀರಾ ಭಾರತಕ್ಕೆ ಪದಕ ತಂದುಕೊಟ್ಟ ಸಾಧನೆಗಾಗಿ ಅವರಿಗೆ ಎಎಸ್‌ಪಿ ಹುದ್ದೆ ನೀಡುವುದಾಗಿ ಮಣಿಪುರ ಸರ್ಕಾರ ಘೋಷಿಸಿತ್ತು. ಆಗಾಗಲೇ ಮೀರಾಬಾಯಿ ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆ ವೃತ್ತಿಯನ್ನು ತೊರೆದು ಪೊಲೀಸ್‌ ಇಲಾಖೆಗೆ ಸೇರುವಂತೆ ಸಿಎಂ ಬಿರೇನ್‌ ಸಿಂಗ್‌ ಸಲಹೆ ನೀಡಿದ್ದರು.

    ಒಲಿಂಪಿಕ್ಸ್‌ ಕ್ರೀಡಾಕೂಟದಲ್ಲಿ 21 ವರ್ಷಗಳ ಬಳಿಕ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತಕ್ಕೆ ಪದಕ ತಂದುಕೊಟ್ಟು ಮೀರಾಬಾಯಿ ಸಾಧನೆ ಮಾಡಿದರು. ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದಿದ್ದ ಬಾಕ್ಸರ್ ಲವ್ಲಿನಾ ಈಗ ಡಿಎಸ್‌ಪಿ

  • ಚಿನ್ನದ ನೀರಜ್‍ಗೆ ಪ್ರಶಂಸೆಯ ಮಹಾಪೂರ – ಸರ್ಕಾರಗಳಿಂದ ಬಹುಮಾನಗಳ ಸುರಿಮಳೆ

    ಚಿನ್ನದ ನೀರಜ್‍ಗೆ ಪ್ರಶಂಸೆಯ ಮಹಾಪೂರ – ಸರ್ಕಾರಗಳಿಂದ ಬಹುಮಾನಗಳ ಸುರಿಮಳೆ

    – ಬಿಸಿಸಿಐ, ರೈಲ್ವೆ ಇಲಾಖೆಯಿಂದಲೂ ಭರ್ಜರಿ ಉಡುಗೊರೆ
    – ಭರ್ಜರಿ ಬಹುಮಾನ ಘೋಷಣೆ ಮಾಡುತ್ತಿರುವ ಸರ್ಕಾರಗಳು

    ನವದೆಹಲಿ: ಟೋಕಿಯೋ ಒಲಿಂಪಿಕ್ಸ್ ನಲ್ಲಿ 100 ವರ್ಷಗಳ ನಂತರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ನೀರಜ್ ಚೂಪ್ರಾ ಪಾತ್ರರಾಗಿದ್ದಾರೆ. ಈ ಹಿನ್ನೆಲೆ ವಿಶ್ವದ್ಯಾಂತ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದ್ದು, ಇವರ ಸಾಧನೆಗಾಗಿ ಸರ್ಕಾರ ಹಲವು ಕೊಡುಗೆಗಳನ್ನು ಘೋಷಿಸುತ್ತಿದೆ. ಹರಿಯಾಣ ಸಿಎಂ ಮನೋಹರ್‍ಲಾಲ್ ಖಟ್ಟರ್ ಹಾಗೂ ಆನಂದ್ ಮಹೀಂದ್ರ ಬಳಿಕ ರಾಜ್ಯ ಸರ್ಕಾರಗಳು, ಕ್ರೀಡಾ ಸಂಸ್ಥೆಗಳು ಹಾಗೂ ವಿವಿಧ ಸಂಸ್ಥೆಗಳು ಸಾಧಕರಿಗೆ ಭರ್ಜರಿ ಬಹುಮಾನ ನೀಡುತ್ತಿವೆ.

    6 ಕೋಟಿ ಘೋಷಿಸಿದ ಹರಿಯಾಣ ಸರ್ಕಾರ
    ಬರೋಬ್ಬರಿ 6 ಕೋಟಿ ನಗದು ಬಹುಮಾನದ ಜೊತೆಗೆ ನಿಯಮದಂತೆ ಸರ್ಕಾರದಲ್ಲಿ ಕ್ಲಾಸ್ ಒನ್ ಕೆಟಗರಿ ಕೆಲಸ ನೀಡುವುದಾಗಿ ಹರಿಯಾಣ ಸಿಎಂ ಘೊಷಿಸಿದ್ದಾರೆ. ಅಲ್ಲದೆ ಅಥ್ಲೆಟ್ಸ್‍ಗಳಿಗಾಗಿ ಪಂಚಕುಲದಲ್ಲಿ ಸೆಂಟರ್ ಆಫ್ ಎಕ್ಸೆಲೆನ್ಸ್ ಕಟ್ಟಡ ನಿರ್ಮಿಸುವುದಾಗಿ ತಿಳಿಸಿದ್ದಾರೆ. ಈ ಮೂಲಕ ನೀರಜ್‍ಗೆ ಗೌರವ ಸಲ್ಲಿಸಿದ್ದಾರೆ. ನೀರಜ್ ಅವರು ಬಯಸಿದರೆ ಹರಿಯಾಣ ಪ್ರದೇಶದ ಮುಖ್ಯಸ್ಥರನ್ನಾಗಿ ಮಾಡುವುದಾಗಿ ಹರಿಯಾಣ ಸಿಎಂ ಖಟ್ಟರ್ ತಿಳಿಸಿದ್ದಾರೆ. ಇದನ್ನೂ ಓದಿ: ರೈತನ ಮಗ 23 ವರ್ಷದ ನೀರಜ್ ಚೋಪ್ರಾ ಚಿನ್ನದ ಸಾಧನೆ

    ಪಂಜಾಬ್ ಸರ್ಕಾರದಿಂದ 2.25 ಕೋಟಿ
    ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು 2.25 ಕೋಟಿ ರೂ. ಘೋಷಿಸಿದ್ದು, ಭಾರತೀಯರು ಹೆಮ್ಮೆ ಪಡುವಂತಹ ವಿಚಾರವೆಂದು ಪ್ರಶಂಸಿದ್ದಾರೆ. ಬೆಳ್ಳಿ ಪದಕ ಗೆದ್ದವರಿಗೆ 1.5 ಕೋಟಿ ರೂ.ಗಳನ್ನು ಸಹ ಘೋಷಿಸಿದ್ದಾರೆ. ಇನ್ನು 26 ಅಥ್ಲಿಟ್ಸ್ ಆಟಗಾರರಿಗೆ 5 ಲಕ್ಷ ರೂ. ಘೋಷಿದ್ದಾರೆ.

    ಮಣಿಪುರ ಸರ್ಕಾರದಿಂದ 1 ಕೋಟಿ
    ಮಣಿಪುರ ಸಿಎಂ ಎನ್.ಬಿರೇನ್ ಸಿಂಗ್ ಅವರು ಚೋಪ್ರಾ ಅವರಿಗೆ 1 ಕೋಟಿ ರೂ. ಬಹುಮಾನ ನೀಡುವ ಮೂಲಕ ಗೌರವಿಸಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ತಿಳಿಸಿ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಹರಿಯಾಣ ಸರ್ಕಾರ 6 ಕೋಟಿ, ಆನಂದ್ ಮಹೀಂದ್ರ ಕಾರ್ ಗಿಫ್ಟ್- ಚಿನ್ನದ ನೀರಜ್‍ಗೆ ಭರ್ಜರಿ ಉಡುಗೊರೆ

    ಬಿಸಿಸಿಐನಿಂದ ಎಲ್ಲ ಆಟಗಾರರಿಗೂ ಗೌರವ
    ಬಿಸಿಸಿಐ ಕೂಡ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ಹೇಳಿದ್ದು, ಕಂಚಿನ ಪದಕ ವಿಜೇತರಾದ ಪಿವಿ ಸಿಂಧು ಅವರಿಗೆ 50 ಲಕ್ಷ ರೂ. ಚಾನು, ರವಿ ಧಾಹಿಯಾ ಮತ್ತು ಭಜರಂಗ್ ಪುನಿಯಾ ಅವರಿಗೆ 25 ಲಕ್ಷ ರೂ. ನೀಡುವುದಾಗಿ ಘೋಷಣೆ ಮಾಡಿದೆ. ಅಲ್ಲದೆ ಪುರುಷರ ಹಾಕಿ ತಂಡಕ್ಕೆ 1.25 ಕೋಟಿ ರೂ. ಕೊಟ್ಟು ಆಟಗಾರರನ್ನು ಗೌರವಿಸಿ ಎಲ್ಲರನ್ನೂ ಐಪಿಎಲ್‍ನ ಫೈನಲ್‍ಗೆ ಆಹ್ವಾನಿಸಲಾಗಿದೆ. ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ಸಹ ನೀರಜ್ ಅವರಿಗೆ 1 ಕೋಟಿ ರೂ. ನೀಡುವುದಾಗಿ ತಿಳಿಸಿದೆ.

    ಇಂಡಿಗೊದಿಂದ ವರ್ಷ ಉಚಿತ ಟಿಕೆಟ್
    ವಿಮಾನಯಾನ ಸಂಸ್ಥೆ ಇಂಡಿಗೋ ನೀರಜ್ ಅವರಿಗೆ ಒಂದು ವರ್ಷಗಳ ಕಾಲ, ಅಂದರೆ ಮುಂದಿನ ವರ್ಷ ಆಗಸ್ಟ್ 8ರ ವರೆಗೂ ಉಚಿತವಾಗಿ ಪ್ರಯಾಣ ಮಾಡಲು ಟಿಕೆಟ್‍ನ್ನು ಘೋಷಣೆ ಮಾಡಿದೆ.

    ಮಹೀಂದ್ರಾದಿಂದ ಉಚಿತ ಎಸ್‍ಯುವಿ
    ಮಹೀಂದ್ರಾ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರಾ ನೀರಜ್ ಅವರಿಗೆ ಮಹೀಂದ್ರಾ ನ್ಯೂ ಎಕ್ಸ್‍ಯುವಿ 700 ಅನ್ನು ಉಡುಗೊರೆಯಾಗಿ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಚಿನ್ನದ ಹುಡುಗನಿಗೆ ಬಹುಮಾನ ಘೋಷಿಸಿದ್ದಾರೆ.

    ಕುಸ್ತಿಯಲ್ಲಿ ಬಜರಂಗ್ ಪುನಿಯಾ ಸಾಧನೆ
    ಕಂಚಿನ ಪದಕ ಗೆದ್ದ ಕುಸ್ತಿಪಟು ಬಜರಂಗ್ ಪುನಿಯಾ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಇವರಿಗೂ ಸಹ ಹರಿಯಾಣದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಶೇ.50ರ ರಿಯಾಯಿತಿಯಲ್ಲಿ 2.5 ಕೋಟಿ ರೂ. ಮತ್ತು ಭೂಮಿಯೊಂದಿಗೆ ಸರ್ಕಾರಿ ಉದ್ಯೋಗವನ್ನು ಘೋಷಿಸಿದ್ದಾರೆ. ಇದರ ಜೊತೆಗೆ ರೈಲ್ವೆ ಇಲಾಖೆ 1 ಕೋಟಿ ರೂ. ಬಿಸಿಸಿಐ ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಶನ್ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿವೆ. ಇದರ ಜೊತೆಗೆ ಭಾರತೀಯ ಒಲಿಂಪಿಕ್ ಸಂಸ್ಥೆ(ಐಒಎ) ಚಿನ್ನ ಗೆದ್ದವರಿಗೆ 75 ಲಕ್ಷ ರೂ. ಬೆಳ್ಳಿ ಗೆದ್ದವರಿಗೆ 40 ಲಕ್ಷ ರೂ. ಮತ್ತು ಕಂಚಿನ ಪದಕ ಗೆದ್ದವರಿಗೆ 25 ಲಕ್ಷ ಬಹುಮಾನ ಘೋಷಿಸಿದೆ.

    ರೈಲ್ವೇ ಇಲಾಖೆಯಿಂದ ಆಟಗಾರರಿಗೆ, ಕೋಚ್‍ಗೆ ಭರ್ಜರಿ ಗಿಫ್ಟ್
    ರೈಲ್ವೇ ಇಲಾಖೆ ಚಿನ್ನದ ಪದಕ ಗೆದ್ದ ಆಟಗಾರನಿಗೆ 3 ಕೋಟಿ ರೂ. ಮತ್ತು ಅವರ ಕೋಚ್‍ಗೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಿದೆ. ಬೆಳ್ಳಿ ಗೆದ್ದ ಆಟಗಾರನಿಗೆ 2 ಕೋಟಿ ರೂ. ಮತ್ತು ಕೋಚ್‍ಗೆ 20 ಲಕ್ಷ ರೂ. ಹಾಗೂ ಕಂಚು ಗೆದ್ದ ಆಟಗಾರರಿಗೆ 1 ಕೋಟಿ ರೂ. ಮತ್ತು ಕೋಚ್‍ಗೆ 15 ಲಕ್ಷ ರೂ. ಬಹುಮಾನ ನೀಡುತ್ತಿದೆ. ಅಲ್ಲದೆ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಎಲ್ಲ ಆಟಗಾರರಿಗೆ 7.5 ಲಕ್ಷ ರೂ. ಕೊಡಲಾಗುವುದು ಎಂದು ರೈಲ್ವೆ ಇಲಾಖೆ ತಿಳಿಸಿದೆ.

    ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಒಲಿಂಪಿಕ್ಸ್ ನಲ್ಲಿ ಭಾಗವಹಿಸಿದ್ದ ಎಲ್ಲ 228 ಮಂದಿಯನ್ನು ತಮ್ಮ ನಿವಾಸಕ್ಕೆ ಆಹ್ವಾನಿಸಿದ್ದು, ಕ್ರೀಡಾಪಟುಗಳ ಜೊತೆ ಮಾತನಾಡಿದ್ದಾರೆ.