Tag: ಟೋಲ್ ಗೇಟ್

  • ಇಂದಿನಿಂದ ವಾಹನ ಸವಾರರಿಗೆ ಟೋಲ್ ಬಿಸಿ – ಶೇ.5ರಷ್ಟು ದರ ಏರಿಕೆ

    ಇಂದಿನಿಂದ ವಾಹನ ಸವಾರರಿಗೆ ಟೋಲ್ ಬಿಸಿ – ಶೇ.5ರಷ್ಟು ದರ ಏರಿಕೆ

    ರಾಮನಗರ: ರಾಜ್ಯದಲ್ಲಿ ಬೆಲೆ ಏರಿಕೆ ನಡುವೆಯೇ ಇಂದಿನಿಂದ ವಾಹನ ಸವಾರರಿಗೆ ಟೋಲ್ ದರ ಏರಿಕೆ (Toll Rate Hike) ಬಿಸಿ ಕೂಡಾ ತಟ್ಟಲಿದೆ. ಶೇ. 5ರಷ್ಟು ಟೋಲ್ ದರ ಏರಿಕೆಯಾಗಿದೆ.

    ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ(NHAI) ವಾರ್ಷಿಕ ಟೋಲ್ ದರ ಏರಿಕೆಯು ಇಂದಿನಿಂದ (ಏ.1) ಅನ್ವಯವಾಗಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೆಯಲ್ಲೂ ಪರಿಷ್ಕೃತ ದರ ಜಾರಿ ಆಗಿದೆ. ಬೆಂಗಳೂರಿನಿಂದ ನಿಢಗಟ್ಟದವರೆಗಿನ 56ಕಿ.ಮೀ ಗೆ ಶೇ.5ರಷ್ಟು ಟೋಲ್ ದರ ಏರಿಕೆಯಾಗಿದ್ದು, ಬಿಡದಿ ಸಮೀಪದ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್‌ನಲ್ಲೂ ದರ ಏರಿಕೆ ಮಾಡಲಾಗಿದೆ. ಇದನ್ನೂ ಓದಿ: ಇಂದಿನಿಂದ ಹಾಲಿನ ದರ ಏರಿಕೆ – ಬೆಳಗ್ಗೆ ಸಪ್ಲೈ ಆದ ಹಾಲಿನಲ್ಲಿ ಪರಿಷ್ಕೃತ ದರ ಜಾರಿ ಆಗಿಲ್ಲ

    ಎಕ್ಸ್‌ಪ್ರೆಸ್‌ ಹೈವೆ ಟೋಲ್‌ನ ಹೊಸ ದರ ಹೀಗಿರಲಿದೆ:

    ಕಾರು/ಜೀಪು: ಏಕಮುಖ ಸಂಚಾರದ ಹೊಸ ದರ 180 ರೂ. ಆಗಿದ್ದು, ಹಳೆ ದರ 170 ರೂ. ಇತ್ತು. ಇದೀಗ 10 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 270 ರೂ. ಆಗಿದ್ದು, ಹಳೆ ದರ 255 ರೂ. ಇತ್ತು. 15 ರೂ. ಹೆಚ್ಚಿಸಲಾಗಿದೆ.

    ಲಘು ವಾಣಿಜ್ಯ ವಾಹನ: ಏಕಮುಖ ಸಂಚಾರ ಹೊಸ ದರ 290 ರೂ. ಆಗಿದ್ದು, ಹಳೆ ದರ 275 ರೂ. ಇತ್ತು. 15 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 430 ರೂ. ಆಗಿದ್ದು, ಹಳೆ ದರ 415 ರೂ. ಇತ್ತು. ಇದೀಗ 15 ರೂ. ಹೆಚ್ಚಿಸಲಾಗಿದೆ. ಇದನ್ನೂ ಓದಿ: ಮಾಜಿ ಪತ್ನಿಯರೊಡನೆ ಈದ್ ಹಬ್ಬ ಆಚರಿಸಿದ ಆಮೀರ್ ಖಾನ್

    ಬಸ್/ಟ್ರಕ್: ಏಕಮುಖ ಸಂಚಾರ ಹೊಸ ದರ 605 ರೂ. ಆಗಿದ್ದು, ಹಳೆ ದರ 580 ರೂ. ಇತ್ತು. 25 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 905 ರೂ. ಆಗಿದ್ದು, ಹಳೆ ದರ 870 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ.

    ಮೂರು ಆಕ್ಸಲ್ ವಾಣಿಜ್ಯ ವಾಹನ: ಏಕಮುಖ ಸಂಚಾರದ ಹೊಸ ದರ 660 ರೂ. ಆಗಿದ್ದು, ಹಳೆ ದರ 635 ರೂ. ಇತ್ತು. ಇದೀಗ 25 ರೂ. ಹೆಚ್ಚಿಸಲಾಗಿದೆ. ದ್ವಿಮುಖ ಸಂಚಾರದ ಹೊಸ ದರ 990 ರೂ. ಆಗಿದ್ದು, ಹಳೆ ದರ 950 ರೂ. ಇತ್ತು. ಇದೀಗ 40 ರೂ. ಹೆಚ್ಚಳವಾಗಿದೆ. ಇದನ್ನೂ ಓದಿ: ಜಾರ್ಖಂಡ್‌ | ಗೂಡ್ಸ್ ರೈಲುಗಳ ನಡುವೆ ಡಿಕ್ಕಿ – ಇಬ್ಬರು ಲೋಕೋ ಪೈಲಟ್‌ ಸೇರಿ 3 ಸಾವು

    ಮಲ್ಟಿ ಆಕ್ಸಲ್ ವೆಹಿಕಲ್ಸ್(4-6 ಆಕ್ಸಲ್): ಏಕಮುಖ ಸಂಚಾರದ ಹೊಸ ದರ 945 ರೂ. ಆಗಿದ್ದು, ಹಳೆ ದರ 910 ರೂ. ಇತ್ತು. ಇದೀಗ 35 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,420 ರೂ. ಆಗಿದ್ದು, ಹಳೆ ದರ 1,365 ಇತ್ತು. ಇದೀಗ 55 ರೂ. ಹೆಚ್ಚಿಸಲಾಗಿದೆ. ಇದನ್ನೂ ಓದಿ: 11 ನಗರಗಳ ಹೆಸರು ಮರುನಾಮಕರಣ – ಉತ್ತರಾಖಂಡ ಸಿಎಂ ಧಾಮಿ ಆದೇಶ

    ಭಾರಿ ವಾಹನಗಳು(7 ಆಕ್ಸೆಲ್ ಅಥವಾ ಅಧಿಕ): ಏಕಮುಖ ಸಂಚಾರದ ಹೊಸ ದರ 1,155 ರೂ. ಆಗಿದ್ದು, ಹಳೆ ದರ 1,110 ಇತ್ತು. 55 ರೂ. ಹೆಚ್ಚಳವಾಗಿದೆ. ದ್ವಿಮುಖ ಸಂಚಾರದ ಹೊಸ ದರ 1,730 ರೂ. ಆಗಿದ್ದು, ಹಳೆ ದರ 1,660 ರೂ. ಇತ್ತು. ಇದೀಗ 100 ರೂ. ಹೆಚ್ಚಿಸಲಾಗಿದೆ.

  • Mumbai | ಲಘು ಮೋಟರ್ ವಾಹನಗಳಿಗೆ ಟೋಲ್ ಫ್ರೀ ಪ್ರವೇಶ: ಸಿಎಂ ಶಿಂಧೆ

    Mumbai | ಲಘು ಮೋಟರ್ ವಾಹನಗಳಿಗೆ ಟೋಲ್ ಫ್ರೀ ಪ್ರವೇಶ: ಸಿಎಂ ಶಿಂಧೆ

    – ಅ.14 ಮಧ್ಯರಾತ್ರಿಯಿಂದ ಐದು ಟೋಲ್‌ಗಳ ಮೂಲಕ ಉಚಿತ ಪ್ರವೇಶ

    ಮುಂಬೈ: ಇಂದು (ಅ.14) ಮಧ್ಯರಾತ್ರಿಯಿಂದ ಲಘು ಮೋಟಾರು ವಾಹನಗಳ ಮೂಲಕ ಮುಂಬೈಗೆ ಉಚಿತ ಟೋಲ್ ಪ್ರವೇಶವನ್ನು ಪಡೆಯಬಹುದು ಎಂದು ಮಹಾರಾಷ್ಟ್ರ (Maharashtra) ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಘೋಷಿಸಿದರು.

    ವಿಧಾನಸಭೆ ಚುನಾವಣೆಗೂ ಮುನ್ನ ನಡೆದ ಮಹಾರಾಷ್ಟ್ರ ಸರ್ಕಾರದ ಕೊನೆಯ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧರಿಸಿದ್ದು, ಸೋಮವಾರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಮುಂಬೈ ಟೋಲ್ ನಾಕಾಗಳ ಪೈಕಿ 5 ಟೋಲ್ ನಾಕಾಗಳಲ್ಲಿ ಖಾಸಗಿ ಲಘು ವಾಹನಗಳಿಂದ ಟೋಲ್ ಸಂಗ್ರಹಿಸುವುದನ್ನು ನಿಲ್ಲಿಸುತ್ತೇವೆ. ಸೋಮವಾರ ರಾತ್ರಿಯಿಂದಲೇ ಈ ನಿಯಮ ಜಾರಿಯಾಗಲಿದ್ದು, ಐದು ಟೋಲ್‌ಗಳ ನಾಕಾಗಳ ಮೂಲಕ ಲಘು ವಾಹನಗಳು ಟೋಲ್ ಮುಕ್ತವಾಗಿ ಪ್ರವೇಶಿಸಬಹುದು.ಇದನ್ನೂ ಓದಿ:5 ವರ್ಷ ಸಿಎಂ ಆಗಿರುತ್ತಾರೆ ಎಂದು ಖರ್ಗೆ ಅವರಿಂದ ಹೇಳಿಸಿ ನೋಡೋಣ: ಬಿವೈವಿ

    ಲಘು ವಾಹನಗಳ ವರ್ಗದಲ್ಲಿ ಕಾರುಗಳು (ಹ್ಯಾಚ್‌ಬ್ಯಾಕ್‌ಗಳು, ಸೆಡಾನ್‌ಗಳು ಮತ್ತು ಎಸ್‌ಯುವಿಗಳು), ಜೀಪ್‌ಗಳು, ವ್ಯಾನ್‌ಗಳು, ಆಟೋ-ರಿಕ್ಷಾಗಳು, ಟ್ಯಾಕ್ಸಿಗಳು, ಡೆಲಿವರಿ ವ್ಯಾನ್‌ಗಳು ಮತ್ತು ಸಣ್ಣ ಟ್ರಕ್‌ಗಳು ಸೇರಿವೆ. ಪ್ರತಿನಿತ್ಯ ಆರು ಲಕ್ಷಕ್ಕೂ ಹೆಚ್ಚು ವಾಹನಗಳು ಮುಂಬೈ ದಾಟುತ್ತಿದ್ದು, ಅದರಲ್ಲಿ ಶೇ.80ರಷ್ಟು ಲಘು ಮೋಟಾರು ವಾಹನಗಳಾಗಿವೆ ಎಂದು ಸರ್ಕಾರ ಹೇಳಿದೆ.

    ಐದು ಟೋಲ್ ನಾಕಾಗಳಾದ ದಹಿಸರ್, ಮುಲುಂಡ್, ವಾಶಿ, ಐರೋಲಿ ಮತ್ತು ತಿನ್ಹಾಂತ್ ನಾಕಾದಿಂದ ಟೋಲ್ ಪಾವತಿಸದೇ ಲಘು ವಾಹನಗಳು ಪ್ರವೇಶಿಸಬಹುದು. ಇನ್ನುಳಿದ ಟೋಲ್ ನಾಕಾಗಳಿಂದ 45 ರೂ.ಯನ್ನು ಪಾವತಿಸಬೇಕು.

    ಲಘು ವಾಹನಗಳ ಮೂಲಕ ದಿನನಿತ್ಯ ಮುಂಬೈ (Mumbai) ನಗರಕ್ಕೆ ಪ್ರವೇಶಿಸುವ ಜನರಿಗೆ ಇದು ಪ್ರಯೋಜನಕಾರಿ ಹಾಗೂ ಇನ್ನುಳಿದ ಟೋಲ್ ನಾಕಾಗಳಲ್ಲಿ ಟೋಲ್ ಶುಲ್ಕದಲ್ಲಿ ವಿನಾಯಿತಿಯನ್ನು ಪಡೆಯುತ್ತಾರೆ. ಇಲ್ಲಿನ ಟೋಲ್ ನಾಕಾಗಳು ಮುಂಬೈನ ರಸ್ತೆ ಮೂಲಸೌಕರ್ಯದ ಮಹತ್ವದ ಭಾಗವಾಗಿದ್ದು, ಪ್ರತಿದಿನ ಸಾವಿರಾರು ವಾಹನಗಳಿಗೆ ಸೇವೆ ಸಲ್ಲಿಸುತ್ತಿವೆ.

    ಇದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ನಮನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನಿರ್ಧಾರದ ಕುರಿತು ಸಂತೋಷವನ್ನು ವ್ಯಕ್ತಪಡಿಸಿದ ಅವರು, ಅ.14 ಮಧ್ಯರಾತ್ರಿಯಿಂದ ಮುಂಬೈಗೆ ಪ್ರವೇಶಿಸುವ ಎಲ್ಲಾ ಐದು ಟೋಲ್ ಗೇಟ್‌ಗಳಲ್ಲಿ ಲಘು ವಾಹನಗಳು ಟೋಲ್ ಮುಕ್ತವಾಗಿರುತ್ತವೆ. ಮುಂಬೈನಲ್ಲಿ ವಾಸಿಸುವ ಎಲ್ಲಾ ನಾಗರಿಕರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.ಇದನ್ನೂ ಓದಿ:ಗದಗ, ಧಾರವಾಡದಲ್ಲಿ ಧಾರಾಕಾರ ಮಳೆ- ರಸ್ತೆ ಸಂಪರ್ಕ ಸಂಪೂರ್ಣ ಬಂದ್

  • ಗಾಳಿಯ ಹೊಡೆತಕ್ಕೆ ಕಿತ್ತೇ ಹೋಯ್ತು ಟೋಲ್ ಗೇಟ್‌ನ ಮೇಲ್ಛಾವಣಿ

    ಗಾಳಿಯ ಹೊಡೆತಕ್ಕೆ ಕಿತ್ತೇ ಹೋಯ್ತು ಟೋಲ್ ಗೇಟ್‌ನ ಮೇಲ್ಛಾವಣಿ

    ಧಾರವಾಡ: ತಾಲೂಕಿನ ಕೆಲವು ಕಡೆಗಳಲ್ಲಿ ಭಾರೀ ಗಾಳಿಯ (Wind) ಕಾರಣ ರಾಜ್ಯ ಹೆದ್ದಾರಿಯಲ್ಲಿರುವ ಟೋಲ್ ಗೇಟ್‌ನ (Toll Gate) ಮೇಲ್ಛಾವಣಿ (Rooftop) ಕಿತ್ತು ಹೋಗಿರುವ ಘಟನೆ ಮರೇವಾಡ ರಸ್ತೆಯಲ್ಲಿ ಸಂಭವಿಸಿದೆ.

    ಸಂಜೆ ಹೊತ್ತಿಗೆ ಧಾರವಾಡ ತಾಲೂಕಿನ ಕೆಲ ಗ್ರಾಮಗಳಲ್ಲಿ ಭಾರೀ ಗಾಳಿ ಎದ್ದಿದೆ. ಈ ವೇಳೆ ಟೋಲ್ ಗೆಟ್‌ನ ತಗಡಿನ ಮೇಲ್ಛಾವಣಿ ಕಿತ್ತು ಹೋಗಿದೆ. ಕಬ್ಬಿಣದ ರಾಡ್ ಸಮೇತ ತಗಡುಗಳು ಹೊಲದಲ್ಲಿ ಹಾರಿ ಬಿದ್ದಿವೆ. ಗಾಳಿಯ ರಭಸಕ್ಕೆ ಟೋಲ್ ಗೇಟ್ ಹತ್ತಿರವೇ ಇದ್ದ ಕೆಲ ವಿದ್ಯುತ್ ಕಂಬಗಳು ಸಹ ಮುರಿದು ಬಿದ್ದಿವೆ. ಇದನ್ನೂ ಓದಿ: ಬೆಂಗಳೂರು ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ

    ತಗಡಿನ ಮೇಲ್ಛಾವಣಿ ಹಾರಿ ಹೋಗುವ ಸಂದರ್ಭದಲ್ಲಿ ಟೋಲ್ ಸಿಬ್ಬಂದಿ ಕೂಡ ಒಳಗಡೆಯೇ ಇದ್ದರು. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಅನಾಹುತಗಳು ಸಂಭವಿಸಿಲ್ಲ. ಇದನ್ನೂ ಓದಿ: ಎಂಜಿನಿಯರ್ ಮನೆಯಲ್ಲಿ ಜಿಂಕೆ ಕೊಂಬು ಸಮೇತ 4.75 ಕೋಟಿ ರೂ. ಆಸ್ತಿ ಪತ್ತೆ

  • ವಿರೋಧದ ನಡುವೆಯೂ ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ವಸೂಲಿ – ಪ್ರತಿಭಟನಾಕಾರರ ಬಂಧನ

    ವಿರೋಧದ ನಡುವೆಯೂ ಎಕ್ಸ್‌ಪ್ರೆಸ್‌ವೇಯಲ್ಲಿ ಟೋಲ್ ವಸೂಲಿ – ಪ್ರತಿಭಟನಾಕಾರರ ಬಂಧನ

    ರಾಮನಗರ: ಭಾರೀ ವಿರೋಧದ ನಡುವೆಯೂ ಪಟ್ಟು ಬಿಡದ ಹೆದ್ದಾರಿ ಪ್ರಾಧಿಕಾರ ಮಂಗಳವಾರದಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ (Bengaluru Mysuru Expressway) ಟೋಲ್ (Toll) ಸಂಗ್ರಹ ಆರಂಭಿಸಿದೆ. ಟೋಲ್ ಆರಂಭಕ್ಕೆ ವಿವಿಧ ಕನ್ನಡಪರ ಸಂಘಟನೆಗಳೂ ಸೇರಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ (Protest) ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ರಸ್ತೆ ತಡೆದು ಪ್ರತಿಭಟನೆಗೆ ಮುಂದಾದ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್‌ನೊಂದಿಗೆ ಶುಲ್ಕ ವಸೂಲಾತಿ ಮುಂದುವರಿದಿದೆ.

    ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಮೊದಲ ಹಂತದ 55.63 ಕಿ.ಮೀ ರಸ್ತೆಯ ಟೋಲ್ ವಸೂಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ. ಬಿಡದಿ ಬಳಿಯ ಕಣಮಿಣಕಿ ಗ್ರಾಮ ಹಾಗೂ ಶೇಷಗಿರಿಹಳ್ಳಿ ಬಳಿಯ ಟೋಲ್ ಕಾರ್ಯಾಚರಣೆ ಆರಂಭವಾಗಿದೆ. ವಿವಿಧ ಬಗೆಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಮಾಡಿ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಆದರೆ ಟೋಲ್ ವಸೂಲಿಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಸರ್ವಿಸ್ ರಸ್ತೆ ಪೂರ್ಣಗೊಳಿಸದೇ ಶುಲ್ಕ ವಸೂಲಿ ವಿರೋಧಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ಮಾಡಿ ಹೈಡ್ರಾಮಾ ನಡೆಸಿವೆ.

    ದಶಪಥ ಹೆದ್ದಾರಿಯ ಕಾಮಗಾರಿ ಇನ್ನೂ ಮುಗಿದಿಲ್ಲ. ಅಲ್ಲದೇ ಹಲವೆಡೆ ಸಮರ್ಪಕ ಸರ್ವಿಸ್ ರಸ್ತೆ ಆಗದೇ ಟೋಲ್ ವಸೂಲಿ ಮಾಡುತ್ತಿರುವುದು ಸಾರ್ವಜನಿಕರ ಆಕ್ರೋಶ ಹೆಚ್ಚಿಸಿದೆ. ಜೊತೆಗೆ ದುಬಾರಿ ಟೋಲ್ ದರದ ವಿರುದ್ಧವೂ ಜನಸಾಮಾನ್ಯರು ಕಿಡಿಕಾರಿದ್ದಾರೆ. ಸರಿಯಾದ ಮೂಲಭೂತ ಸೌಕರ್ಯಗಳನ್ನು ನೀಡದೇ ದುಬಾರಿ ಶುಲ್ಕ ವಸೂಲಿ ಮಾಡುತ್ತಿರುವ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಬಿಡದಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಶೇಷಗಿರಿಹಳ್ಳಿ ಟೋಲ್ ಬಳಿ ರಸ್ತೆ ತಡೆಗೆ ಮುಂದಾಗಿದ್ದರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು, ಪ್ರತಿಭಟನಾಕಾರರ ಜೊತೆ ವಾಗ್ವಾದ ನಡೆಸಿದರು. ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪ್ರತಿಭಟನಾಕಾರರನ್ನು ಬಂಧಿಸಿ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಇದನ್ನೂ ಓದಿ: ಯುಗಾದಿಗೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ – ರಾಜ್ಯಾದ್ಯಂತ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    ಕಣಮಿಣಕಿ ಗ್ರಾಮದ ಟೋಲ್ ಬಳಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ, ನವನಿರ್ಮಾಣ ವೇದಿಕೆ, ಜನ ಸೈನ್ಯ ವೇದಿಕೆ, ಕನ್ನಡಿಗರ ರಕ್ಷಣಾ ವೇದಿಕೆ, ಕರುನಾಡ ಸೇನೆ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಪ್ರತಿಭಟನಾಕಾರರು ಟೋಲ್ ಬೂಮರ್ ಮುರಿದು ಆಕ್ರೋಶ ಹೊರಹಾಕಿದರು.

    ಇಷ್ಟು ಮಾತ್ರವಲ್ಲದೇ ಟೋಲ್ ಆರಂಭವಾದ ಮೊದಲ ದಿನವೇ ಸೆನ್ಸಾರ್ ವೈಫಲ್ಯದಿಂದ ಕೆಲ ವಾಹನಗಳಿಗೆ ಹಾನಿಯಾಗಿದ್ದು, ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಯಿತು. ಬೂಮರ್ ಸೆನ್ಸಾರ್ ವೈಫಲ್ಯದಿಂದ ಐದಾರು ಕಾರುಗಳ ಗಾಜು ಒಡೆದು ಹೋಗಿದ್ದು, ಕಾರಿನ ಮಾಲೀಕರು ಹೆದ್ದಾರಿ ಪ್ರಾಧಿಕಾರ ವಿರುದ್ಧ ತಿರುಗಿಬಿದ್ದರು. ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ವಾಹನ ಸವಾರರನ್ನು ಸಮಾಧಾನಪಡಿಸಿದರು. ಇದನ್ನೂ ಓದಿ: Bengaluru Mysuru Expressway- ಟೋಲ್ ಸಂಗ್ರಹ ಪ್ರಾರಂಭವಾದ ಮೊದಲ ದಿನವೇ ತಾಂತ್ರಿಕ ದೋಷ

    ಒಟ್ಟಾರೆ ದಶಪಥ ಹೆದ್ದಾರಿಯ ಟೋಲ್ ಬಳಿ ಇಂದು ಭಾರೀ ಹೈಡ್ರಾಮಾ ಏರ್ಪಟ್ಟಿತು. ಒಂದೆಡೆ ಪೊಲೀಸ್ ಭದ್ರತೆಯಲ್ಲಿ ಟೋಲ್ ವಸೂಲಿ ಮಾಡುತ್ತಿದ್ದರೆ, ಮತ್ತೊಂದೆಡೆ ದುಬಾರಿ ಟೋಲ್ ಕಟ್ಟಿದ ವಾಹನ ಸವಾರರು ಸರ್ಕಾರದ ವಿರುದ್ಧ ಹಿಡಿಶಾಪ ಹಾಕಿದ್ದಾರೆ.

  • ಹೋರಾಟಗಾರರೊಂದಿಗೆ ಕೂತು ಪ್ರಚಾರ ಪಡೆದು ಹೋದ ಯು.ಟಿ ಖಾದರ್‌ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೇ?: ಭರತ್ ಶೆಟ್ಟಿ

    ಹೋರಾಟಗಾರರೊಂದಿಗೆ ಕೂತು ಪ್ರಚಾರ ಪಡೆದು ಹೋದ ಯು.ಟಿ ಖಾದರ್‌ಗೆ ಟೋಲ್ ಗೇಟ್ ತೆರವು ಮಾಡಲು ಸಾಧ್ಯವಾಯಿತೇ?: ಭರತ್ ಶೆಟ್ಟಿ

    ಮಂಗಳೂರು: ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ (Toll Plaza) ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಶಾಸಕ ಯು.ಟಿ ಖಾದರ್ (U.T Khader) ಅವರಿಗೆ ಟೋಲ್ ಗೇಟ್ ತೆರವು ಪ್ರಕ್ರಿಯೆ ಆರಂಭಿಸಲು ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ಶಾಸಕ ಭರತ್ ಶೆಟ್ಟಿ ವೈ (Bharath Shetty), ಯು.ಟಿ ಖಾದರ್ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ ಖಾದರ್ ಹೇಳಿಕೊಂಡು ಬಂದಿದ್ದಾರೆ. ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ. ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‍ನಿಂದ (Congress) ಇಂತಹ ಆರೋಪಗಳು ನಿರೀಕ್ಷಿತ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ದುಬೈ ಅಥವಾ ನ್ಯೂಯಾರ್ಕ್‌ನಲ್ಲಿ ಕುಟುಂಬದ ಕಚೇರಿ ತೆರೆಯಲು ಮುಂದಾದ ಅದಾನಿ

    ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್‍ನಲ್ಲಿ ಹೆಜಮಾಡಿ ಟೋಲ್ ಗೇಟ್, ಜೂನ್‌ನಲ್ಲಿ ಸುರತ್ಕಲ್‍ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ (UPA) ಸರ್ಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ. ಅಂದೇ ಹಿಂಪಡೆಯಲು ಇದ್ದ ಅವಕಾಶವನ್ನು ಕೈ ಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

    60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರ್ಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ? ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲಿ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್‍ಗಳ ವಿಲೀನಕ್ಕೆ ಮುಂದಾಗಿರುವುದನ್ನು ಯು.ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ. ಇದನ್ನೂ ಓದಿ: ಶಾರುಖ್ ಮನೆಮುಂದೆ ಜಮಾಯಿಸಿದ ಜನಸಾಗರ ನೋಡಿ ಅಚ್ಚರಿಪಟ್ಟ `ಕಾಂತಾರ’ ಹೀರೋ

    ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ಅನ್ನು ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸುನಿಲ್ ಕುಮಾರ್ ಹೇಳಿಕೆ ವಂಚನೆಯ ಹೊಸ ವರಸೆ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

    ಸುನಿಲ್ ಕುಮಾರ್ ಹೇಳಿಕೆ ವಂಚನೆಯ ಹೊಸ ವರಸೆ: ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ

    ಮಂಗಳೂರು: ಸಚಿವ ಸುನಿಲ್ ಕುಮಾರ್ (Sunil Kumar) ಅವರು ನವೆಂಬರ್ ಅಂತ್ಯಕ್ಕೆ ಸುರತ್ಕಲ್ ಟೋಲ್ ಗೇಟ್ (Surathkal Tollgate)  ತೆರವುಗೊಳಿಸುವುದಾಗಿ ಹೇಳಿಕೆ ನೀಡುವ ಮೂಲಕ ದಕ್ಷಿಣ ಕನ್ನಡ (Dakshina Kannada), ಉಡುಪಿ (Udupi) ಜಿಲ್ಲೆಯ ಜನತೆಗೆ ಮತ್ತೊಂದು ಆಘಾತ ನೀಡಿದ್ದಾರೆ ಎಂದು ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸುರತ್ಕಲ್ ಟೋಲ್ ಗೇಟ್ ತೆರವುಗೊಳಿಸಲು ಸಂಸದ ನಳಿನ್ ಕುಮಾರ್ ಕಟೀಲ್ (Nalin Kumar Kateel) 20 ದಿನಗಳ ಕಾಲಾವಧಿ ನೀಡುವಂತೆ ಹೇಳಿಕೆ ನೀಡಿದ್ದರು. ಆದರೆ ಇದೀಗ ಈವರೆಗೆ ಟೋಲ್ ಸುಲಿಗೆಯ ಕುರಿತು ಒಂದು ಶಬ್ದವನ್ನೂ ಮಾತಾಡದಿರುವ ಸಚಿವ ಸುನಿಲ್ ಕುಮಾರ್ ಅವರು, ಈಗ 40 ದಿನಗಳ ಕಾಲಾವಧಿಯ ಹೇಳಿಕೆಯೊಂದಿಗೆ ಹೊಸ ವರಸೆ ಆರಂಭಿಸಿದ್ದಾರೆ ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ವಾಗ್ದಾಳಿ ನಡೆಸಿದರು.

    ಈ ರೀತಿಯ ಕಾಲಮಿತಿಗಳು 6 ವರ್ಷಗಳಿಂದ ಹಲವು ಬಾರಿ ಪುನರಾವರ್ತನೆಗೊಂಡಿದೆ. ತುಳುನಾಡಿನ ಜನತೆ ಇಂತಹ ಹೇಳಿಕೆಗಳ ಕುರಿತು ಯಾವುದೇ ನಂಬಿಕೆ ಹೊಂದಿಲ್ಲ. ಅ. 17ರಂದು 20 ದಿನಗಳ ಕಾಲಾವಧಿ ಕೊಡುವಂತೆ ಸಂಸದ ನಳಿನ್ ಕುಮಾರ್ ಹೇಳಿಕೆ ನೀಡಿದ್ದಾಗ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಎಲ್ಲಿದ್ದರು? ಟೋಲ್ ಗೇಟ್ ಮುತ್ತಿಗೆ ಸಂದರ್ಭ ಇಡೀ ತುಳುನಾಡು ಒಂದಾಗಿ ಟೋಲ್ ಗೇಟ್ ಮುಚ್ಚಲು ಆಗ್ರಹಿಸುತ್ತಿದ್ದಾಗ ಉಸ್ತುವಾರಿ ಸಚಿವರ ಜವಾಬ್ದಾರಿ ಮರೆತು ಕಾಣೆಯಾಗಿದ್ದ ಸುನಿಲ್ ಕುಮಾರ್ ಈಗ ದಿನ ಮುಂದೂಡುವ ಹೊಸ ಆಟದೊಂದಿಗೆ ರಂಗಕ್ಕಿಳಿದಿರುವುದರ ಮರ್ಮ ಸಣ್ಣ ಮಕ್ಕಳಿಗೂ ಅರ್ಥವಾಗುತ್ತದೆ. ಬಿಜೆಪಿ ಸಂಸದ, ಶಾಸಕರು ಇಂತಹ ಸುಳ್ಳುಗಳನ್ನು ನಂಬುವವರು ಈ ಜಿಲ್ಲೆಗಳಲ್ಲಿ ಈಗ ಯಾರೂ ಇಲ್ಲ ಎಂದು ಹೋರಾಟ ಸಮಿತಿ ತಿರುಗೇಟು ನೀಡಿದೆ. ಇದನ್ನೂ ಓದಿ: ಕಪಾಳಮೋಕ್ಷ ಪ್ರಕರಣಕ್ಕೆ ಟ್ವಿಸ್ಟ್- ಸಚಿವರು ನಂಗೆ ಹೊಡೆದಿಲ್ಲವೆಂದು ಮಹಿಳೆ ಸ್ಪಷ್ಟನೆ

    ಹೋರಾಟವನ್ನು ಕೈ ಬಿಟ್ಟರೆ ಟೋಲ್ ತೆರವು ಪ್ರಸ್ತಾಪವನ್ನೇ ಬಿಜೆಪಿ ಸರ್ಕಾರ ಕೈ ಬಿಡುತ್ತದೆ. ಜನತೆಯ ಒಗ್ಗಟ್ಟಿನ ಹೋರಾಟ ಮಾತ್ರ ಸುರತ್ಕಲ್ ಟೋಲ್ ಗೇಟ್ ಅನ್ನು ತೆರವುಗೊಳಿಸಬಲ್ಲದು. ಬಿಜೆಪಿ ಸಂಸದ, ಶಾಸಕರನ್ನು ನಂಬಿದರೆ ಟೋಲ್ ಸುಲಿಗೆ ಶಾಶ್ವತವಾಗಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಮಾತುಕೊಟ್ಟಂತೆ ಕಾಲಮಿತಿಯಲ್ಲಿ ಟೋಲ್ ತೆರವುಗೊಳಿಸುವಂತೆ ಒತ್ತಾಯಿಸಿ ಅಕ್ಟೋಬರ್ 28 ರಿಂದ ನಡೆಯಲಿರುವ ಹಗಲು ರಾತ್ರಿ ಸಾಮೂಹಿಕ ಧರಣಿಯನ್ನು ಜನತೆ ವ್ಯಾಪಕವಾಗಿ ಬೆಂಬಲಿಸುವ ಮೂಲಕ ಟೋಲ್ ಗೇಟ್ ತೆರವು ಹೋರಾಟಕ್ಕೆ ಬಲ ತುಂಬಬೇಕು ಎಂದು ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮುಕ್ತಾಯ

    Live Tv
    [brid partner=56869869 player=32851 video=960834 autoplay=true]

  • ಇನ್ನೂ ಮುಗಿಯದ ಸುರತ್ಕಲ್ ಟೋಲ್‍ಗೇಟ್ ವಿವಾದ- ಹೋರಾಟಗಾರರ ಮೇಲೆ ಎಫ್‍ಐಆರ್

    ಇನ್ನೂ ಮುಗಿಯದ ಸುರತ್ಕಲ್ ಟೋಲ್‍ಗೇಟ್ ವಿವಾದ- ಹೋರಾಟಗಾರರ ಮೇಲೆ ಎಫ್‍ಐಆರ್

    ಮಂಗಳೂರು: ಇಲ್ಲಿನ ಸುರತ್ಕಲ್ ಟೋಲ್‍ಗೇಟ್ (Surathkal Tollgate) ವಿವಾದ ಸದ್ಯದ ಮಟ್ಟಿಗೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಟೋಲ್‍ಗೇಟ್ ಕಿತ್ತೆಸೆಯಲು ಯತ್ನಿಸಿದ ಹಿನ್ನೆಲೆಯಲ್ಲಿ ಹೋರಾಟಗಾರರ ಮೇಲೆ ಎಫ್‍ಐಆರ್ (FIR) ದಾಖಲಾಗಿದೆ. ಹೀಗಾಗಿ ಟೋಲ್ ಸಂಗ್ರಹ ನಿಲ್ಲುವವರೆಗೂ ರಾತ್ರಿ- ಹಗಲು ಅನಿರ್ದಿಷ್ಟ ಧರಣಿಗೆ ನಿರ್ಧರಿಸಿದ್ದಾರೆ.

    ಅ.18 ರಂದು ಮಂಗಳೂರಿನ ಸುರತ್ಕಲ್ ಟೋಲ್‍ಗೇಟ್ ಬಳಿ ಭಾರೀ ಹೈಡ್ರಾಮಾವೇ ನಡೆದಿತ್ತು. ಸುರತ್ಕಲ್ ಟೋಲ್‍ಗೇಟ್ ಅಕ್ರಮ ಎಂದು ಟೋಲ್‍ಗೇಟ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ನಡೆದ ಹೋರಾಟ ಉಗ್ರ ಸ್ವರೂಪ ಪಡೆದಿತ್ತು. ಪೊಲೀಸರು ಹಾಕಿದ್ದ ತಡೆಬೇಲಿ ಮುರಿದು ಟೋಲ್‍ಗೇಟ್‍ನತ್ತ ನುಗ್ಗಿದ್ದ ಹೋರಾಟಗಾರರು, ಹೈಡ್ರಾಮಾ ನಡೆಸಿದ್ದು ಬಳಿಕ ಪೊಲೀಸರು ನೂರಾರು ಹೋರಾಟಗಾರರನ್ನು ಬಂಧಿಸಿ, ಬಿಡುಗಡೆಗೊಳಿಸಿದ್ರು. ಆದರೆ ಇದೀಗ ಟೋಲ್‍ಗೇಟ್‍ನ ಗುತ್ತಿಗೆದಾರ ಹಾಗೂ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ನೀಡಿದ ದೂರಿನಂತೆ ಹೋರಾಟಗಾರರ ಮೇಲೆ ಎರಡು ಎಫ್‍ಐಆರ್ ದಾಖಲಾಗಿದೆ.

    ಟೋಲ್‍ಗೇಟನ್ನು ನ.7ರೊಳಗಾಗಿ ಸ್ಥಗಿತಗೊಳಿಸುವ ಭರವಸೆಯನ್ನು ಜಿಲ್ಲಾಡಳಿತ ನೀಡಿದೆ. ಆದರೆ ಇಂತಹ ದಿನಾಂಕಗಳು ಕಳೆದ ಆರು ವರ್ಷದಿಂದ ಆಗಿರೋದ್ರಿಂದ ಇದರ ಬಗ್ಗೆ ನಂಬಿಕೆ ಇಲ್ಲ. ಹೀಗಾಗಿ ಹೋರಾಟ ಸಮಿತಿ ಸಭೆ ಸೇರಿ ಮುಂದಿನ ಹೋರಾಟದ ಭಾಗವಾಗಿ ಅಕ್ಟೋಬರ್ 28 ರಿಂದ ಟೋಲ್‍ಗೇಟ್ ಮುಂಭಾಗದಲ್ಲಿ ರಾತ್ರಿ ಹಗಲು ಅನಿರ್ದಿಷ್ಟ ಧರಣಿ ನಡೆಸಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಆಯೋಧ್ಯೆ ತೀರ್ಪು ವಿರೋಧಿಸಿ, ಗಲಾಟೆಗೆ ಕರಪತ್ರ ಹಂಚಿಕೆ – PFI ಸಂಘಟನೆಯ ಕುತಂತ್ರ ಮತ್ತಷ್ಟು ಬಯಲು

    ಟೋಲ್ ಗೇಟ್ ವಿಚಾರದಲ್ಲಿ ಈ ಬಾರಿ ಮಾಡು ಇಲ್ಲವೇ ಮಡಿ ಅನ್ನೋದಕ್ಕೆ ಹೋರಾಟಗಾರರ ಸಮಿತಿ ನಿರ್ಧರಿಸಿದೆ.

    Live Tv
    [brid partner=56869869 player=32851 video=960834 autoplay=true]

  • ತೀವ್ರ ಸ್ವರೂಪ ಪಡೆದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ- ನೂರಾರು ಹೋರಾಟಗಾರರ ಬಂಧನ

    ತೀವ್ರ ಸ್ವರೂಪ ಪಡೆದ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ- ನೂರಾರು ಹೋರಾಟಗಾರರ ಬಂಧನ

    ಮಂಗಳೂರು: ನಗರದ ಹೊರವಲಯದ ಸುರತ್ಕಲ್ ಟೋಲ್ ಗೇಟ್ (Surathkal Tollgate) ಮುತ್ತಿಗೆ ಹೋರಾಟ ಇಂದು ತೀವ್ರ ಸ್ವರೂಪ ಪಡೆದಿದೆ. ಟೋಲ್ ವಿರೋಧಿ ಹೋರಾಟಗಾರರು ಈ ಮೊದಲೇ ಹೇಳಿದಂತೆ ನೇರ ಕಾರ್ಯಾಚರಣೆಗೆ ಯತ್ನಿಸಿದ್ದಾರೆ. ಆದರೆ ಪೊಲೀಸರು ಈ ಕಾರ್ಯಾಚರಣೆಯನ್ನು ತಡೆದಿದ್ದು, ನೂರಾರು ಹೋರಾಟಗಾರರನ್ನು ಬಂಧಿಸಿದ್ದಾರೆ.

    ಇಂದು ಮುಂಜಾನೆಯೇ ಮಂಗಳೂರಿನ ಸುರತ್ಕಲ್ ಎನ್ ಐಟಿಕೆ (NITK) ಟೋಲ್ ಗೇಟ್ ಬಳಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅಕ್ರಮ ಟೋಲ್ ಗೇಟ್ ನ್ನು ಕಿತ್ತು ಬಿಸಾಡೋದಾಗಿ ಇಂದು ಹೋರಾಟ ಆರಂಭವಾಗಿತ್ತು. 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಒಂದೇ ಟೋಲ್ ಗೇಟ್ ಇರಬೇಕೆಂಬ ನಿಯಮ ಇದ್ದರೂ ಇಲ್ಲಿ ಒಟ್ಟು ಮೂರು ಟೋಲ್ ಗೇಟ್ ಗಳಿವೆ. ಹೆಜಮಾಡಿ ಟೋಲ್ ಗೇಟ್ (Hejamadi Tollgate) ಆರಂಭವಾದ ಬಳಿಕ ಈ ಟೋಲ್ ಗೇಟ್ ನ್ನು ತೆಗೆಯುತ್ತೇವೆ ಎಂದು ಹೇಳಿ 6 ವರ್ಷವಾದ್ರೂ ಇನ್ನೂ ಕಾರ್ಯಾಚರಿಸುತ್ತಿದೆ. ಹೀಗಾಗಿ ಈ ಟೋಲ್ ಗೇಟ್ ಅಕ್ರಮವಾಗಿದೆ.

    ಇದನ್ನು ತಕ್ಷಣವೇ ತೆರವುಗೊಳಿಸಬೇಕೆಂದು ಹೋರಾಟ ಸಮಿತಿ ಇಂದು ಬೃಹತ್ ಪ್ರತಿಭಟನೆಗೆ ತಯಾರಿ ನಡೆಸಿತ್ತು. ನೇರ ಕಾರ್ಯಾಚರಣೆಯನ್ನು ಮಾಡಿ ಟೋಲ್ ಗೇಟನ್ನು ಕಿತ್ತು ಬಿಸಾಡೋದಾಗಿ ಹೋರಾಟಗಾರರು ತಯಾರಿ ನಡೆಸಿದ್ರು. ಅದರಂತೆ ಇಂದು ಸುಮಾರು ಒಂದು ಗಂಟೆಗಳ ಕಾಲ ಘೋಷಣೆ ಕೂಗಿ ಬಳಿಕ ಏಕಾಏಕಿ ಪೊಲೀಸರ ಬ್ಯಾರಿಕೇಡ್ ನ್ನು ತಳ್ಳಿ ಟೋಲ್ ಗೇಟ್ ನತ್ತ ನೂರಾರು ಹೋರಾಟಗಾರರು ನುಗ್ಗಿ ಟೋಲ್ ಗೇಟ್ ಧ್ವಂಸಕ್ಕೆ ಮುಂದಾದರು. ಆದರೆ ಪೊಲೀಸರು ತಕ್ಷಣವೇ ಎಲ್ಲರನ್ನು ಬಂಧಿಸಿದ್ರು.

    ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದ್ದಂತೆ ಪೊಲೀಸರು ಅಲರ್ಟ್ ಆಗಿದ್ದರು. ಸುಮಾರು 500ಕ್ಕೂ ಹೆಚ್ಚು ಪೊಲೀಸರು ಇದ್ದರೂ ನೂರಾರು ಸಂಖ್ಯೆಯಲ್ಲಿ ನುಗ್ಗಿ ಬಂದ ಹೋರಾಟಗಾರರನ್ನು ತಡೆಯಲು ಸಾಧ್ಯವಾಗಿಲ್ಲ. ಟೋಲ್ ಗೇಟ್ ನ ಮುಂಭಾಗದಲ್ಲಿ ಎರಡು ತಡೆಬೇಲಿಗಳನ್ನು ಪೊಲೀಸರು ಹಾಕಿದ್ದರೂ ಹೋರಾಟಗಾರರು ಅದನ್ನೂ ಮುರಿದು ಒಳ ನುಗ್ಗಿದ್ದರು. ಆದರೆ ಟೋಲ್ ಗೇಟ್ ಧ್ವಂಸಕ್ಕೆ ಮುಂದಾಗಿದ್ದ ಕೆಲವನ್ನು ಮುಖಂಡರುಗಳು ತಡೆದಿದ್ದು, ಬಳಿಕ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ

    ಈ ವೇಳೆ ಪ್ರತಿಭಟನಾಕಾರರನ್ನು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ಕಾಂಗ್ರೆಸ್‌ (Congress), ಸಿಪಿಐಎಂ (CPIM), ಜೆಡಿಎಸ್ (JDS), ಆಪ್ (AAP) ಸೇರಿದಂತೆ ವಿವಿಧ ಪಕ್ಷ ಹಾಗೂ ಸಂಘಟನೆಗಳು ಭಾಗಿಯಾಗಿದ್ದವು. ಕಳೆದ ಹಲವು ವರ್ಷಗಳಿಂದ ಈ ಅಕ್ರಮ ಟೋಲ್ ಗೇಟ್ ತೆರವುಗೊಳಿಸಲು ಆಗದ ಅಧಿಕಾರಿಗಳು, ರಾಜಕಾರಣಿಗಳ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.

    ಇಂದಿನಿಂದಲೇ ಟೋಲ್ ನಲ್ಲಿ ಹಣ ಸಂಗ್ರಹ ಮಾಡೋದನ್ನು ನಿಲ್ಲಿಸಬೇಕೆಂದು ಹೋರಾಟಗಾರರು ಒತ್ತಾಯಿಸಿದ್ರೂ ಪ್ರತಿಭಟನೆಯ ಬಳಿಕ ಎಂದಿನಂತೆ ಹಣ ಸಂಗ್ರಹ ಆರಂಭವಾಗಿತ್ತು. ಜಿಲ್ಲಾಡಳಿತ ಈ ತಿಂಗಳ ಅಂತ್ಯಕ್ಕೆ ಈ ಟೋಲ್ ನ್ನು ತೆರವುಗೊಳಿಸೋದಾಗಿ ಹೇಳಿದ್ದು, ಅದು ಆಗುತ್ತಾ ಅನ್ನೋದನ್ನು ಕಾದುನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

  • ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ

    ಸುರತ್ಕಲ್ ಅಕ್ರಮ ಟೋಲ್‍ಗೇಟ್ ವಿವಾದ – ಟೋಲ್ ಪ್ಲಾಜಾ ಮೇಲೇರಿ ಮಿಥುನ್ ರೈ ಆಕ್ರೋಶ

    ಮಂಗಳೂರು: ದಕ್ಷಿಣ ಕ್ನನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಟೋಲ್ (Surathkal Toll gate) ಬಳಿ ಇಂದು ಭಾರೀ ಹೈಡ್ರಾಮಾ ನಡೆಯುತ್ತಿದೆ.

    ಸುರತ್ಕಲ್ ಅಕ್ರಮ ಟೋಲ್ ತೆರವು ಆಗ್ರಹಿಸಿ ಟೋಲ್ ವಿರೋಧಿ ಸಮಿತಿ ವತಿಯಿಂದ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಟೋಲ್ ಪ್ಲಾಜಾಗೆ ನುಗ್ಗಿದ್ದರು. ಇತ್ತ ಕಾಂಗ್ರೆಸ್ ಯುವ ಮುಖಂಡ ಮಿಥುನ್ ರೈ (Mithun Rai) ಟೋಲ್ ಪ್ಲಾಜಾ ಮೇಲೇರಿದರು. ಅಲ್ಲದೆ ಕಾರ್ಯಕರ್ತರು ಟೋಲ್ ಸಂಗ್ರಹ ವಸ್ತುಗಳನ್ನು ಪುಡಿಮಾಡಲು ಮುಂದಾದರು. ಇದನ್ನೂ ಓದಿ: ಪೊಲೀಸ್ ಬಲಪ್ರಯೋಗದಿಂದ ಹೋರಾಟ ಹತ್ತಿಕ್ಕಲು ಸಾಧ್ಯವಿಲ್ಲ: ಸುನೀಲ್ ಕುಮಾರ್ ಬಜಾಲ್

    ಕಾರ್ಯಕರ್ತರು ಮತ್ತು ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಇದೇ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ತಳ್ಳಾಟ ನಡೆಸಲಾಯಿತು. ಬ್ಯಾರಿಕೇಡ್ ಕಿತ್ತೆಸೆದು, ಟೋಲ್‍ಗೆ ಮುತ್ತಿಗೆ ಹಾಕಿದ 500ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್ ಮುಖಂಡರಾದ ಐವಾನ್ ಡಿಸೋಜ, ಮೊಯಿದ್ದೀನ್‍ಬಾವ, ಜೆ.ಆರ್ ಲೋಬೋ, ಮಿಥುನ್ ರೈ ಸೇರಿ ಹಲವರ ಬಂಧಿಸಲಾಗಿದೆ.

    ಪ್ರತಿಭಟನೆ ಹಿನ್ನೆಲೆಯಲ್ಲಿ ಟೋಲ್ ಸುತ್ತ ಭಾರೀ ಪೊಲೀಸ್ ಭದ್ರತೆ ಕೈಗೊಳಲಾಗಿದ್ದು, 6 ಕೆಎಸ್‍ಆರ್ ಪಿ, 5 ಸಿಎಆರ್, 250 ಸಿವಿಲ್, 4 ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿದಂತೆ 500ಕ್ಕೂ ಅಧಿಕ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಸುರತ್ಕಲ್ ಟೋಲ್ ಗೇಟ್ ಕಿತ್ತೆಸೆಯುತ್ತೇವೆ ಎಂದ ಹೋರಾಟಗಾರಿಗೆ ಬಿಸಿ ಮುಟ್ಟಿಸಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    ಟೋಲ್‍ಗೇಟ್‍ನಲ್ಲಿ ಅಂಬುಲೆನ್ಸ್ ಅಪಘಾತ ಪ್ರಕರಣ- ಸಾವಿನ ಸಂಖ್ಯೆ 4ಕ್ಕೆ ಏರಿಕೆ

    ಉಡುಪಿ: ಟೋಲ್‍ಗೇಟ್ ನಲ್ಲಿ ಅಂಬುಲೆನ್ಸ್ ಅಪಘಾತಕ್ಕೀಡಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

    ಘಟನೆ ಸಂಬಂಧ ಈಗಾಗಲೇ ಹೊನ್ನಾವರದ ಲೋಕೇಶ್, ಮಾಧವ ನಾಯ್ಕ ಹಾಗೂ ಜ್ಯೋತಿ ಲೋಕೇಶ್ ನಾಯ್ಕ್ ಈ ಮೂವರು ಮೃತಪಟ್ಟಿದ್ದಾರೆ. ಹೊನ್ನಾವರ ಮೂಲದ ಮಂಜುನಾಥ ಮಾದೇವ ನಾಯ್ಕ ಅವರು ಆಸ್ಪತ್ರೆ ಸಾಗಿಸುವಷ್ಟರಲ್ಲೇ ಸಾವನ್ನಪ್ಪಿದ್ದಾರೆ.

    ಗಜಾನನ ಲಕ್ಷ್ಮಣ್ ನಾಯ್ಕ್ ಎಂಬವರಿಗೆ ರಕ್ತದೊತ್ತಡ ಹೆಚ್ಚಾಗಿದ್ದವರಿಂದ ಅವರನ್ನು ಚಿಕಿತ್ಸೆಗೆಂದು ಕುಂದಾಪುರ ಆಸ್ಪತ್ರೆಗೆ ದಾಖಲಿಸಲು ತೆರಳುತ್ತಿದ್ದಾಗ ಈ ದುರಂತ ನಡೆದಿದೆ. ಘಟನೆಯಲ್ಲಿ ಟೋಲ್ ಸಿಬ್ಬಂದಿ ಶಂಬಾಜಿ ಸ್ಥಿತಿ ಗಂಭೀರವಾಗಿದ್ದು, ಅಂಬುಲೆನ್ಸ್ ಚಾಲಕ ರೋಶನ್ ಅವರಿಗೂ ಗಾಯಗಳಾಗಿದೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

    ಏನಿದು ಘಟನೆ..?
    ಹೊನ್ನಾವರದಿಂದ ಕುಂದಾಪುರಕ್ಕೆ ಬರುತ್ತಿದ್ದ ಅಂಬುಲೆನ್ಸ್, ಚಾಲಕನ ಅತೀವೇಗ ಮತ್ತು ಅಜಾಗರೂಕತೆಯಿಂದ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಂಬುಲೆನ್ಸ್ ಡಿಕ್ಕಿ ಹೊಡೆದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    Live Tv
    [brid partner=56869869 player=32851 video=960834 autoplay=true]