Tag: ಟೋಲ್ ದರ

  • ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ

    ಇಂದಿನಿಂದ ದೇಶಾದ್ಯಂತ ಎಕ್ಸ್‌ಪ್ರೆಸ್‌ವೇ, ಹೈವೇಗಳಲ್ಲಿ ಟೋಲ್‌ ದರ ಏರಿಕೆ

    ನವದೆಹಲಿ: ಇಂದಿನಿಂದ ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ (National Highways) ಮತ್ತು ಎಕ್ಸ್‌ಪ್ರೆಸ್‌ವೇಗಳಲ್ಲಿ (Expressways) ಟೋಲ್‌ ದರ (Toll Price) ಏರಿಕೆ ಆಗಲಿದೆ.

    ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು (NHAI) ರಾಷ್ಟ್ರೀಯ ಹೆದ್ದಾರಿ ಬಳಕೆದಾರರ ಶುಲ್ಕವನ್ನು3% ರಿಂದ 5% ರಷ್ಟು ಹೆಚ್ಚಿಸಿದ್ದು ಸೋಮವಾರದಿಂದಲೇ ಜಾರಿಗೆ ಬಂದಿದೆ. ಇದನ್ನೂ ಓದಿ: 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿಯನ್ನು ಬಂಧಿಸಿದ ಕಾಶ್ಮೀರ ಪೊಲೀಸರು

    18ನೇ ಲೋಕಸಭೆಯ ಚುನಾವಣೆಗೆ ಮತದಾನ ಮುಗಿದ ಒಂದು ದಿನದ ನಂತರ ಟೋಲ್ ಪ್ಲಾಜಾ ದರಗಳಲ್ಲಿ ಪರಿಷ್ಕರಣೆಯಾಗಿದೆ. ಪ್ರತಿ ವರ್ಷ ಏಪ್ರಿಲ್‌ 1 ರಿಂದ ಈ ದರ ಜಾರಿಗೆ ಬರುತ್ತದೆ. ಆದರೆ ಚುನಾವಣೆ ಇದ್ದ ಕಾರಣ ಬಳಕೆದಾರರ ಶುಲ್ಕವನ್ನು ತಡೆ ಹಿಡಿಯಲಾಗಿತ್ತು.

    ಸೋಮವಾರದಿಂದ ಸುಮಾರು 1,100 ಟೋಲ್ ಪ್ಲಾಜಾಗಳಲ್ಲಿ ಟೋಲ್‌ ದರ ಏರಿಕೆಯಾಗಲಿದೆ. ಪ್ರತಿ ವರ್ಷ ಹಣದುಬ್ಬರ ಸೇರಿದ ಇತರ ಮಾನದಂಡಗಳನ್ನು ಪರಿಗಣಿಸಿ ದರ ಪರಿಷ್ಕರಣೆಯಾಗುತ್ತದೆ.

    ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ (ದರಗಳು ಮತ್ತು ಸಂಗ್ರಹಣೆ) ನಿಯಮಗಳು, 2008 ರ ಅಡಿಯಲ್ಲಿ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಣೆಯಾಗುತ್ತಿರುತ್ತದೆ.

  • ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ಬೆಂ-ಮೈ ದಶಪಥ ಹೆದ್ದಾರಿ ಟೋಲ್ ಮತ್ತಷ್ಟು ದುಬಾರಿ- ಜೂನ್ 1ರಿಂದಲೇ ಪ್ರಯಾಣಿಕರ ಜೇಬಿಗೆ ಕತ್ತರಿ

    ರಾಮನಗರ: ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ಸಂಚಾರ ಮತ್ತಷ್ಟು ದುಬಾರಿಯಾಗಿದ್ದು ಹೆದ್ದಾರಿ ಪ್ರಾಧಿಕಾರ 22% ರಷ್ಟು ಟೋಲ್ ದರ ಏರಿಕೆ ಮಾಡಿದೆ.

    ಜೂನ್ 1 ರಿಂದಲೇ ದುಬಾರಿ ಶುಲ್ಕ ವಸೂಲಿ ಮಾಡಲಾಗುತ್ತಿದ್ದು, ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಲಾಗುತ್ತಿದೆ. ಫಾಸ್ಟ್ ಟ್ಯಾಗ್ (Fastag) ಇರೋ ಕಾರಣ ವಾಹನ ಸವಾರರ ಗಮನಕ್ಕೂ ಬಾರದೇ ಹಣ ವಸೂಲಿ ಮಾಡಲಾಗುತ್ತಿದೆ. ಕಾರ್, ವ್ಯಾನ್, ಜೀಪ್‍ಗಳ ಏಕಮುಖ ಸಂಚಾರಕ್ಕೆ 135 ರೂ.ನಿಂದ 165ಕ್ಕೆ ಏರಿಕೆ (30 ರೂ. ಹೆಚ್ಚಳ) ಮಾಡಲಾಗಿದೆ. ಲಘು ವಾಹನಗಳು, ಮಿನಿ ಬಸ್‍ಗಳ ಏಕಮುಖ ಟೋಲ್ 220 ರೂ.ನಿಂದ 270ಕ್ಕೆ ಏರಿಕೆ(50ರೂ ಹೆಚ್ಚಳ).

    ಟ್ರಕ್, ಬಸ್, 2 ಆಕ್ಸೆಲ್ ವಾಹನಗಳ ಏಕಮುಖ ಸಂಚಾರಕ್ಕೆ 460 ರೂ.ನಿಂದ 565ಕ್ಕೆ ಏರಿಕೆ(105 ಹೆಚ್ಚಳ). 3 ಆಕ್ಸೆಲ್ ವಾಣಿಜ್ಯ ವಾಹನಗಳ ಏಕಮುಖ ಸಂಚಾರ 500 ರೂ.ನಿಂದ 615ಕ್ಕೆ ಏರಿಕೆ (115 ರೂ ಹೆಚ್ಚಳ). ಭಾರೀ ವಾಹನಗಳ ಏಕಮುಖ ಸಂಚಾರ 720 ರೂ.ನಿಂದ 885ಕ್ಕೆ ಏರಿಕೆ (165 ಹೆಚ್ಚಳ). 7 ಅಥವಾ ಅದಕ್ಕಿಂತ ಹೆಚ್ಚಿನ ಆಕ್ಸೆಲ್ ವಾಹನಗಳ ಏಕಮುಖ ಸಂಚಾರ 880 ರೂ.ನಿಂದ 1,080ಕ್ಕೆ ಏರಿಕೆ (200 ಹೆಚ್ಚಳ) ಮಾಡಲಾಗಿದೆ.

    ಈ ಹಿಂದೆ ಏಪ್ರಿಲ್ 1ರಂದೇ ದರ ಏರಿಕೆ ಮಾಡಿದ್ದ ಹೆದ್ದಾರಿ ಪ್ರಾಧಿಕಾರ ಸಾರ್ವಜನಿಕರ ಭಾರೀ ಆಕ್ರೋಶ ಹಿನ್ನೆಲೆಯಲ್ಲಿ ದರ ಹೆಚ್ಚಳವನ್ನು ವಾಪಸ್ ಪಡೆದಿತ್ತು. ಇದೀಗ ಮತ್ತೆ ಟೋಲ್ ದರ (Toll Rate) ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎರಡು ತಿಂಗಳ GST ಪಾಲು ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ- ಕರ್ನಾಟಕಕ್ಕೆ ಸಿಕ್ಕಿದೆಷ್ಟು?

  • ಫೆ.28 ರಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭ – ಯಾವ ವಾಹನಕ್ಕೆ ಎಷ್ಟು ದರ?

    ಫೆ.28 ರಿಂದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭ – ಯಾವ ವಾಹನಕ್ಕೆ ಎಷ್ಟು ದರ?

    ರಾಮನಗರ: ಫೆ.28ರಿಂದ ಮೈಸೂರು-ಬೆಂಗಳೂರು (Bengaluru-Mysuru Expressway) ದಶಪಥ ಹೆದ್ದಾರಿಯ ಮೊದಲ ಟೋಲ್ ಆರಂಭವಾಗಲಿದೆ. ಬೆಂಗಳೂರು-ನಿಡಘಟ್ಟ ನಡುವಿನ ಶೇಷಗಿರಿಹಳ್ಳಿಯ ಟೋಲ್ ಕಾರ್ಯಾಚರಣೆ ಮಂಗಳವಾರದಿಂದ ಶುರುವಾಗಲಿದೆ. ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಕುರಿತು ಕೇಂದ್ರ ಹೆದ್ದಾರಿ ಪ್ರಾಧಿಕಾರದಿಂದ ಪ್ರಕಟಣೆ ಹೊರಡಿಸಿದೆ.

    ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿ ಪಡಿಸಿರುವ ಹೆದ್ದಾರಿ ಪ್ರಾಧಿಕಾರ ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು‌ ಪಥಗಳಿಗೆ ಶುಲ್ಕ ನಿಗದಿ ಮಾಡಿದೆ. ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕೃತಿಕ ನಗರಿ ಮೈಸೂರು ನಡುವೆ ಸಂಚಾರ ಸಮಯವನ್ನು ಕಡಿಮೆ ಮಾಡುವ ಸಲುವಾಗಿ ಸರ್ಕಾರ ನೂತನ ಎಕ್ಸ್‌ಪ್ರೆಸ್ ವೇ ನಿರ್ಮಾಣಕ್ಕೆ ಮುಂದಾಗಿತ್ತು. ಎರಡು ಹಂತದಲ್ಲಿ ನಿರ್ಮಾಣ ಮಾಡಲಾಗುತ್ತಿರುವ ಈ ಹೆದ್ದಾರಿಯ ಮೊದಲ ಹಂತದ ಕಾಮಗಾರಿಯು ಬಹುತೇಕ ಪೂರ್ಣಗೊಂಡಿದೆ. ಎರಡನೆ ಹಂತದ ಕಾಮಗಾರಿಯು ಚಾಲ್ತಿಯಲ್ಲಿದ್ದು, ಮುಕ್ತಾಯದ ಹಂತ ತಲುಪಿದೆ. ಎರಡು ಹಂತದ ಕಾಮಗಾರಿ ಮುಗಿಯುವ ಮುನ್ನವೇ ಸರ್ಕಾರ ಮೊದಲ ಹಂತದ ಸಂಚಾರಕ್ಕೆ ಟೋಲ್ ದರ ನಿಗದಿ ಪಡಿಸಿದೆ. ಫೆ.28ರ ಮಂಗಳವಾರದಿಂದಲೇ ಈ ನಿಯಮ ಜಾರಿಗೆ ಬರಲಿದೆ. ಇದನ್ನೂ ಓದಿ: ಬೆಂಗಳೂರಲ್ಲಿ ಅಪಾರ್ಟ್ಮೆಂಟ್‌ನ 10ನೇ ಮಹಡಿಯಿಂದ ಬಿದ್ದು ಯುವತಿ ಆತ್ಮಹತ್ಯೆ

    ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 11ರಂದು ನೂತನ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಹಾಗಾಗಿ ಈ ವೇಳೆಯೇ ಎರಡನೇ ಹಂತದ ಕಾಮಗಾರಿಯು ಮುಕ್ತವಾಗಲಿದೆ ಎಂದು ಹೇಳಲಾಗುತ್ತಿದೆ.

    ಹೀಗಿರಲಿದೆ ಟೋಲ್ ದರ!
    ದಶಪಥ ಹೆದ್ದಾರಿಯ ಮೊದಲ ಹಂತದ 55.63 ಕಿ.ಮೀ ರಸ್ತೆಗೆ ಶುಲ್ಕ ವಸೂಲಿ ಮಾಡಲು ನಿರ್ಧಾರ ಮಾಡಲಾಗಿದೆ. ಹಾಗಾಗಿ ವಿವಿಧ ಮಾದರಿಯ ವಾಹನಗಳಿಗೆ ಪ್ರತ್ಯೇಕ ದರ ನಿಗದಿಪಡಿಸಲಾಗಿದೆ. ಸರ್ವೀಸ್ ರಸ್ತೆ ಹೊರತುಪಡಿಸಿ, ಉಳಿದ ಆರು ಪಥಗಳಿಗೆ ಶುಲ್ಕ ಅನ್ವಯವಾಗಲಿದೆ. ಇದನ್ನೂ ಓದಿ: ಕೋರ್ಟ್ ಎಚ್ಚರಿಕೆ ಬಳಿಕವೂ ಸಿಂಧೂರಿ ವಿರುದ್ಧ ಗುಡುಗಿದ ರೂಪಾ

    ಕಾರು, ಜೀಪು, ವ್ಯಾನುಗಳಿಗೆ ಏಕಮುಖ ಸಂಚಾರಕ್ಕೆ 135 ರೂ. ನಿಗದಿ ಪಡಿಸಲಾಗಿದೆ. ಅದೇ ದಿನ ಮರು ಸಂಚಾರಕ್ಕೆ 205 ರೂ., ಸ್ಥಳೀಯ ವಾಹನಗಳಿಗೆ 70 ರೂ. ಒಂದು ತಿಂಗಳ 50 ಬಾರಿ ಏಕಮುಖ ಸಂಚಾರದ ಪಾಸ್‌ಗೆ 4,525 ರೂ. ದರ ನಿಗದಿ ಮಾಡಲಾಗಿದೆ.

    ಲಘು ವಾಣಿಜ್ಯ ವಾಹನಗಳು ಮತ್ತು ಲಘು ಸರಕು ವಾಹನಗಳ ಮಿನಿ ಬಸ್‌ಗಳಿಗೆ ಏಕಮುಖ ಸಂಚಾರಕ್ಕೆ 220 ರೂ. ನಿಗದಿ ಪಡಿಸಲಾಗಿದ್ದು, ಅದೇ ದಿನ ಮರು ಸಂಚಾರಕ್ಕೆ 320 ರೂ., ಸ್ಥಳೀಯ ವಾಹನಗಳಿಗೆ 110 ರೂ. ಹಾಗೂ ಒಂದು ತಿಂಗಳ 50 ಬಾರಿ ಏಕಮುಖ ಸಂಚಾರದ ಪಾಸ್‌ಗೆ 7,315 ರೂ. ದರ ನಿಗದಿ. ಭಾರಿ ನಿರ್ಮಾಣ ಯಂತ್ರ, ಭೂ ಅಗೆತ ಸಾಧನ, ಬಹು ಆಕ್ಸೆಲ್ ವಾಹನ (6ರಿಂದ 8 ಆಕ್ಸೆಲ್) ಏಕಮುಖ ಸಂಚಾರಕ್ಕೆ 720 ರೂ. ನಿಗದಿ ಮಾಡಲಾಗಿದೆ. ಜೊತೆಗೆ ಅದೇ ದಿನ ಮರು ಸಂಚಾರಕ್ಕೆ 1,080 ರೂ. ಸ್ಥಳೀಯ ವಾಹನಗಳಿಗೆ 360ರೂ. ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್‌ಗೆ 24,030 ರೂ. ದರ ನಿಗದಿಗೊಳಿಸಲಾಗಿದೆ.

    ಅತೀ ಗಾತ್ರದ ವಾಹನಗಳು (7ರಿಂದ ಹೆಚ್ಚಿನ ಆಕ್ಸೆಲ್) ಏಕಮುಖ ಸಂಚಾರಕ್ಕೆ 880 ರೂ. ಅದೇ ದಿನ ಮರು ಸಂಚಾರಕ್ಕೆ 1,315 ರೂ., ಸ್ಥಳೀಯ ವಾಹನಗಳಿಗೆ 440 ರೂ. ಒಂದು ತಿಂಗಳ 50 ಏಕಮುಖ ಸಂಚಾರದ ಪಾಸ್‌ಗೆ 29255ರೂ ದರ ನಿಗದಿ ಮಾಡಲಾಗಿದೆ. ಸರ್ಕಾರ ನಿಗದಿ ಪಡಿಸಿರುವ ಟೋಲ್ ದರಕ್ಕೆ ಜನಸಾಮಾನ್ಯರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ದಶಪಥ ರಸ್ತೆಯ ಸಂಚಾರವೂ ದುಬಾರಿಯಾಗಿರುವ ಕುರಿತು ಜನತೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ನಿಗದಿ ಮಾಡಿರುವ ಟೋಲ್ ದರ ಕಡಿಮೆ ಮಾಡಬೇಕೆಂಬ ಆಗ್ರಹವೂ ಕೇಳಿ ಬರುತ್ತಿದೆ. ಇದನ್ನೂ ಓದಿ: ಉತ್ತರ ಪ್ರದೇಶದ ಸಿಎಂ ಮದುವೆಯಾಗಿದ್ರೆ ಬೆಲೆ ಏರಿಕೆ ಆಗುತ್ತಿರಲಿಲ್ಲ – ಯೋಗಿ ಆದಿತ್ಯನಾಥ್ ವಿರುದ್ಧ ಇಬ್ರಾಹಿಂ ವ್ಯಂಗ್ಯ

  • ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ವಾರದೊಳಗೆ ಟೋಲ್ ದರ ಇಳಿಸದಿದ್ರೆ ಕಠಿಣ ಕ್ರಮ- ನೈಸ್ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ನೊಟೀಸ್

    ಬೆಂಗಳೂರು: ಏಳು ದಿನದೊಳಗೆ ಟೋಲ್ ದರ ಏರಿಕೆ ಹಿಂತೆಗೆದುಕೊಳ್ಳದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ನಂದಿ ಇನ್‍ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‍ಪ್ರೈಸಸ್ (ನೈಸ್)ಗೆ ಲೋಕೋಪಯೋಗಿ ಇಲಾಖೆ ನೋಟಿಸ್ ಜಾರಿ ಮಾಡಿದೆ.

    ನೈಸ್ ಕಂಪೆನಿ ಜುಲೈ 1 ರಿಂದ ಶೇ 33 ರಷ್ಟು ಟೋಲ್ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವುದರಿಂದ ಈ ಕಂಪೆನಿ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ.

    ಕ್ರಿಯಾ ಒಪ್ಪಂದ (ಫ್ರೇಮ್ ವರ್ಕ್ ಅಗ್ರಿಮೆಂಟ್) ಜಾರಿಗೊಳಿಸದೇ ಕರ್ತವ್ಯ ಲೋಪ ಎಸಗಿರುವ ಸಂಬಂಧ ಹೈಕೋರ್ಟ್‍ನಲ್ಲಿ ಸಲ್ಲಿಸಿರುವ ರಿಟ್ ಅರ್ಜಿ ಇನ್ನೂ ಇತ್ಯರ್ಥ ಆಗಿಲ್ಲ. ಅಷ್ಟರಲ್ಲೇ ಟೋಲ್ ದರ ಹೆಚ್ಚಿಸಿರುವುದು ಅಕ್ರಮ. ಕೂಡಲೇ ಈ ತೀರ್ಮಾನ ಹಿಂದಕ್ಕೆ ಪಡೆಯಬೇಕು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ.