Tag: ಟ್ಯೂಶನ್

  • ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ – ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವು

    ಟ್ಯೂಶನ್ ಮುಗಿಸಿ ಹೋಗ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ ಡಿಕ್ಕಿ – ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವು

    ರಾಮನಗರ: ಟ್ಯೂಶನ್ (Tuition) ಮುಗಿಸಿ ಮನೆಗೆ ಹೋಗುತ್ತಿದ್ದ ಮಕ್ಕಳಿಗೆ ಗೂಡ್ಸ್ ವಾಹನ (Goods Vehicle) ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಗೊಂಡಿದ್ದ ಮತ್ತೊಂದು ಬಾಲಕ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ (Ramanagara) ನಡೆದಿದೆ.

    ಸುಚಿತ್ (10) ಮೃತ ದುರ್ದೈವಿ. ರಾಮನಗರ ತಾಲೂಕಿನ ಗೊಲ್ಲರದೊಡ್ಡಿ ಗ್ರಾಮದಲ್ಲಿ ಅಪಘಾತ ನಡೆದಿದ್ದು, ಸಾವಿನ ಸಂಖ್ಯೆ ಒಟ್ಟು ಮೂರಕ್ಕೆ ಏರಿದೆ. ಆಗಸ್ಟ್ 9ರಂದು ಟ್ಯೂಶನ್ ಮುಗಿಸಿಕೊಂಡು ಐವರು ಮಕ್ಕಳು ಮನೆಗೆ ಹೋಗುತ್ತಿದ್ದ ಸಂದರ್ಭ ಗೂಡ್ಸ್ ವಾಹನ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದರು. ಇದನ್ನೂ ಓದಿ: ರಾತ್ರಿ ತಡವಾಗಿ ಬಂದ ಮಗನಿಗೆ ಬುದ್ಧಿವಾದ ಹೇಳಿದ ತಾಯಿ- ಮನನೊಂದು ಯುವಕ ಆತ್ಮಹತ್ಯೆ

    ಘಟನೆಯಿಂದ ಬದುಕುಳಿದ ಮೂವರು ಮಕ್ಕಳಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ಸುಚಿತ್ ಗುರುವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇನ್ನಿಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕೂಲಿ ಕಾರ್ಮಿಕನ ಕುಟುಂಬದ ಮೇಲೆ ಮೇಸ್ತ್ರಿಯಿಂದ ಮಾರಣಾಂತಿಕ ಹಲ್ಲೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಟ್ಯೂಶನ್‍ಗೆ ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯಿಂದಲೇ ಕಿರುಕುಳ

    ಚಂಡೀಗಢ: ಟ್ಯೂಶನ್‍ಗೆಂದು ಬರುತ್ತಿದ್ದ ಬಾಲಕಿಯರಿಗೆ ಟೀಚರ್ ತಂದೆಯೇ ಲೈಂಗಿಕ ಕಿರುಕುಳ ನೀಡುತ್ತಿದ್ದ ಘಟನೆ ಛತ್ತೀಸ್‍ಗಢದ (Chhattisgarh) ದುರ್ಗ್ ಜಿಲ್ಲೆಯಲ್ಲಿ ನಡೆದಿದೆ.

    11 ಮತ್ತು 12 ವರ್ಷ ಬಾಲಕಿಯರು ಆರೋಪಿಯನ್ನು ತಮ್ಮ ಟ್ಯೂಶನ್ ಟೀಚರ್ ತಂದೆ ಎಂದು ತಿಳಿಸಿದ್ದಾರೆ. ಆಸಾರಾಮ್ ಬಾಪು ನಗರದಲ್ಲಿ ಮಹಿಳೆಯೊಬ್ಬರು ನಡೆಸುತ್ತಿದ್ದ ಟ್ಯೂಶನ್‍ಗೆ 11-12 ವರ್ಷದ ಬಾಲಕಿಯರು ಬರುತ್ತಿದ್ದರು. ಈ ವೇಳೆ ಬಾಲಕಿಯರಿಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪದಡಿ ಇದೀಗ ಮಹಿಳೆಯ ತಂದೆಯನ್ನು ಬಂಧಿಸಲಾಗಿದೆ ಎಂದು ಮುಖ್ಯ ಪೊಲೀಸ್ ಅಧೀಕ್ಷಕ (ಸಿಎಸ್‍ಪಿ) ಕಂಟೋನ್ಮೆಂಟ್ ಪ್ರಭಾತ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ನನ್ನನ್ನು ದೀದಿ ಮಾ ಅಂತ ಕರೆಯಿರಿ – ಕುಟುಂಬ ತ್ಯಜಿಸಿದ ಬಿಜೆಪಿ ನಾಯಕಿ ಉಮಾ ಭಾರತಿ

    ಅಸಾರಾಂ ಬಾಪು ನಗರದಲ್ಲಿರುವ (Asaram Bapu Nagar) ಭಿಲಾಯಿಯ ಜಮುಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ (Bhilai’s Jamul police station area) ಈ ಘಟನೆ ನಡೆದಿದೆ. ಮನೆಯ ಸುತ್ತಮುತ್ತಲಿರುವ ಮಕ್ಕಳಿಗೆ ಮಹಿಳೆಯೊಬ್ಬರು ಟ್ಯೂಶನ್ ಹೇಳಿಕೊಡುತ್ತಿದ್ದರು. ಈ ಮಧ್ಯೆ ಮನೆಕೆಲಸವನ್ನು ಮಾಡಲು ಒಳಗೆ ಹೋದಾಗ, ಮಹಿಳೆಯ ತಂದೆ ಹುಸೇನ್ ಚಾಕೊಲೇಟ್ ನೀಡಿ ಬಾಲಕಿಯರಿಗೆ ಕಿರುಕುಳ ನೀಡುತ್ತಿರುತ್ತಾನೆ ಎಂದು ಐದನೇ ತರಗತಿ ವಿದ್ಯಾರ್ಥಿನಿಯೊಬ್ಬಳು ತನ್ನ ಕುಟುಂಬಸ್ಥರಿಗೆ ಈ ಬಗ್ಗೆ ತಿಳಿಸಿದ್ದಾಳೆ. ಇದಾದ ಬಳಿಕ ಇತರ ಹುಡುಗಿಯರು ಕೂಡ ಈ ವಿಚಾರವನ್ನು ಮನೆಯವರ ಬಳಿ ಹೇಳಿಕೊಂಡಿದ್ದಾರೆ.

    ಬಳಿಕ ಅನೇಕ ಬಾಲಕಿಯರ ಕುಟುಂಬಸ್ಥರು ಜಮುಲ್ ಪೊಲೀಸ್ ಠಾಣೆಗೆ ಆಗಮಿಸಿ ಶಹದತ್ ಹುಸೇನ್ ವಿರುದ್ಧ ದೂರು ದಾಖಲಿಸಿ, ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ. ದೂರಿನನ್ವಯ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆತನ ವಿರುದ್ಧ ಸೆಕ್ಷನ್ 354 ಮತ್ತು ಪೋಕ್ಸೋ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಈ ಸಂಬಂಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮೆರಿಕದ ಬಾರ್‌ ಬಳಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ -12 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್

    ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್

    ಮಂಡ್ಯ: ಕಾಮುಕ ಟ್ಯೂಶನ್ ಶಿಕ್ಷಕನಿಂದ (Teacher) ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಮಳವಳ್ಳಿ (Malavalli) ಪಟ್ಟಣದ ಬಾಲಕಿ ನಿವಾಸಕ್ಕೆ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ (Zameer Ahmed Khan) ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

    ಮಂಡ್ಯ (Mandya) ಜಿಲ್ಲೆ ಮಳವಳ್ಳಿ ಪಟ್ಟಣದ ಮೈಸೂರು (Mysuru) ರಸ್ತೆಯಲ್ಲಿರುವ ಬಾಲಕಿ ನಿವಾಸಕ್ಕೆ ತೆರಳಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಮೃತ ಬಾಲಕಿ ಕುಟುಂಬಕ್ಕೆ ಶಾಸಕ ಜಮೀರ್ 5 ಲಕ್ಷ ರೂಪಾಯಿ ಪರಿಹಾರ ನೀಡಿದ್ದಾರೆ. ಇದನ್ನೂ ಓದಿ: ಮುರುಘಾಶ್ರೀ ವಿರುದ್ಧ ಮತ್ತೊಂದು ಕೇಸ್- ಮಠದ ಹಾಸ್ಟೆಲ್‍ನಲ್ಲಿ ಇಬ್ಬರು ಬಾಲಕಿಯರು ಪತ್ತೆ

    ಬಳಿಕ ಮಾತನಾಡಿದ ಜಮೀರ್ ಖಾನ್, ಕೃತ್ಯ ಎಸಗಿದ ಪಾಪಿಯನ್ನು ಸಾರ್ವಜನಿಕರ ಮುಂದೆ ತುಂಡು ತುಂಡಾಗಿ ಕತ್ತರಿಸಬೇಕು. ಬಾಲಕಿ ಪೋಷಕರ ಗೋಳು ನೋಡಲಾಗುತ್ತಿಲ್ಲ. ಮನುಷ್ಯರು ಯಾರೂ ಈ ಕೃತ್ಯ ಮಾಡಲ್ಲ. ಅವನು ಮನುಷ್ಯಲ್ಲ ರಾಕ್ಷಸನಿಗಿಂತ ಹೆಚ್ಚು. ಈಗ ಕಠಿಣ ಕಾನೂನು ತರದಿದ್ರೆ ಈ ರೀತಿಯ ಘಟನೆ ನಡೆಯುತ್ತಲೇ ಇರುತ್ತದೆ. ಈ ಪ್ರಕರಣಗಳಿಗೆ ಪ್ರತ್ಯೇಕ ಕಾನೂನು ತರಬೇಕು ಎಂದು ಸರ್ಕಾರಕ್ಕೆ ಜಮೀರ್ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    ರೇಪ್ ಮಾಡಿ ಬಾಲಕಿಯನ್ನು ಹತ್ಯೆಗೈದ – ಕಾಮುಕ ಕಾಂತರಾಜು ಗಲ್ಲಿಗೆ ಆಗ್ರಹ

    – ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರ
    – ಮರಣೋತ್ತರ ಪರೀಕ್ಷೆಯಲ್ಲಿ ದೃಢ

    ಮಂಡ್ಯ: ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಆಗಿರುವುದು ದೃಢಪಟ್ಟಿದ್ದು, ಟ್ಯೂಶನ್ ಮೇಲ್ವಿಚಾರಕ ಕಾಂತರಾಜು ಈ ಹೇಯ ಕೃತ್ಯವೆಸಗಿದ್ದಾನೆ ಎಂಬ ಸತ್ಯ ಬಹಿರಂಗಗೊಂಡಿದೆ.

    ಹೌದು, ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malvalli) ಪಟ್ಟಣದಲ್ಲಿ ಮಂಗಳವಾರ ಟ್ಯೂಶನ್‍ಗೆ ಹೋಗಿದ್ದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿದ್ದಳು. ಈ ಸಂಬಂಧ ಮೊದಲು ಸೆಕ್ಷನ್ 302 ಪ್ರಕರಣದಡಿ ಮಳವಳ್ಳಿ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವೇಳೆ ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ. ಹಾಗಾಗಿ 302 ಸೆಕ್ಷನ್ ಜೊತೆಗೆ ಪೋಸ್ಕೋ (Posco) ಹಾಗೂ 307 ಪ್ರಕರಣಗಳನ್ನು ಸೇರ್ಪಡೆಗೊಳಿಸಲಾಗಿದೆ. ಇದನ್ನೂ ಓದಿ: ಹರೀಶ್‌ ಪೂಂಜಾ ಕಾರನ್ನು ಅಡ್ಡಗಟ್ಟಿ ತಲವಾರು ಝಳಪಿಸಿ ದುಷ್ಕರ್ಮಿಯಿಂದ ಜೀವ ಬೆದರಿಕೆ

    ಮಂಗಳವಾರ ಟ್ಯೂಶನ್ ಎಷ್ಟು ಗಂಟೆಗಿದೆ ಎಂದು ವಿಚಾರಿಸಲು ಬಾಲಕಿ ಮೇಲ್ವಿಚಾರಕನಿಗೆ ಫೋನ್ ಮಾಡಿದ್ದಳು. ಸಂಜೆ 5 ಗಂಟೆಗೆ ಟ್ಯೂಶನ್ ಇದ್ದರೂ ಬೆಳಗ್ಗೆ 11.30ಕ್ಕೆ ಬರುವಂತೆ ಕಾಂತರಾಜು ಹೇಳಿದ್ದನು. ನಂತರ ಟ್ಯೂಷನ್‍ಗೆ ಬಂದ ಬಾಲಕಿ ಮೇಲೆ ಕಾಂತರಾಜು ಅತ್ಯಾಚಾರವೆಸಗಿದ್ದಾನೆ. ಬಳಿಕ ವಿಚಾರ ಬಹಿರಂಗವಾಗುತ್ತದೆ ಎಂದು ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯ ಕತ್ತು ಹಿಸುಕಿ, ಬಳಿಕ ಕಲ್ಲಿನಿಂದ ತಲೆಯ ಭಾಗಕ್ಕೆ ಹೊಡೆದು ಹತ್ಯೆಗೈದಿದ್ದಾನೆ. ಇದನ್ನೂ ಓದಿ: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್

    ಕೊಲೆ ನಂತರ ನಿರ್ಮಾಣ ಹಂತದ ಮನೆಯ ಸಂಪ್‍ಗೆ ಮೃತದೇಹ ಹಾಕಿ ಪರಾರಿಯಾಗಿದ್ದನು. ನೀಚ ಕೃತ್ಯ ನಡೆಸಿ ತನಗೇನು ಗೊತ್ತೇ ಇಲ್ಲ ಎಂಬಂತೆ ಬಾಲಕಿಯ ಕುಟುಂಬಸ್ಥರ ಜೊತೆ ಸೇರಿ ಆಕೆಗಾಗಿ ಹುಡುಕಾಟ ನಡೆಸಿದ್ದಾನೆ. ಅಲ್ಲದೇ ಪೊಲೀಸರು ಬಂದಾಗಲೂ ಸ್ಥಳದಲ್ಲೇ ಇದ್ದ ಕಾಂತರಾಜು ತನಗೇನು ಗೊತ್ತಿಲ್ಲ ಎಂಬಂತೆ ನಾಟಕ ಮಾಡಿದ್ದಾನೆ. ನಂತರ ಈ ಪ್ರಕರಣಕ್ಕೆ ಸಂಬಂಧ ಕಾಂತರಾಜು ಅನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಟ್ಯೂಷನ್ ಮೇಲೆನ ರೂಮ್‍ನಲ್ಲೇ ವಾಸವಿದ್ದ ಕಾಂತರಾಜು ಹೆಂಡತಿ, ಇಬ್ಬರು ಹೆಣ್ಣು ಮಕ್ಕಳಿಂದ ದೂರವಾಗಿ ಬದುಕುತ್ತಿದ್ದನು.

    ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಪೋಷಕರು, ನನ್ನ ಮಗಳು ಡಾಕ್ಟರ್ ಆಗುವ ಕನಸು ಕಂಡಿದ್ದಳು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ನನ್ನ ಮಗಳಿಗೆ ಆದ ಅನ್ಯಾಯ ಮತ್ಯಾರಿಗೂ ಆಗಬಾರದು. ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಗೆ ಮರಣ ದಂಡನೆ ವಿಧಿಸಬೇಕೆಂದು ಕಣ್ಣೀರು ಹಾಕಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಸಂಪ್‍ನಲ್ಲಿ ಶವವಾಗಿ ಪತ್ತೆ

    ಟ್ಯೂಶನ್‍ಗೆ ಹೋಗಿದ್ದ ಬಾಲಕಿ ಸಂಪ್‍ನಲ್ಲಿ ಶವವಾಗಿ ಪತ್ತೆ

    ಮಂಡ್ಯ: ಟ್ಯೂಶನ್‍ಗೆ ಹೋದ ಬಾಲಕಿ ನೀರಿನ ಸಂಪ್‍ನಲ್ಲಿ ಅನುಮಾನಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ (Malavalli) ಪಟ್ಟಣದಲ್ಲಿ ಜರುಗಿದೆ.

    ಮಳವಳ್ಳಿ ಪಟ್ಟಣದ ಎನ್‍ಇಎಸ್ ಬಡಾವಣೆಯ ಅಶ್ವಿನಿ ಮತ್ತು ಸುರೇಶ್ ಕುಮಾರ್ ದಂಪತಿಯ ಪುತ್ರಿ ದಿವ್ಯಾ(10) ಶವವಾಗಿ ಪತ್ತೆಯಾಗಿರುವ ಬಾಲಕಿಯಾಗಿದ್ದಾಳೆ. ಇಂದು ಬೆಳಗ್ಗೆ 11 ಗಂಟೆಗೆ ಟ್ಯೂಶನ್‍ಗೆ ಎಂದು ಮನೆಯಿಂದ ಹೋದ ಬಾಲಕಿ ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆ ಟ್ಯೂಶನ್ ಸೆಂಟರ್ ಸೇರಿದಂತೆ ಅಕ್ಕಪಕ್ಕದಲ್ಲಿ ವಿಚಾರಿಸಿದಾಗ ಬಾಲಕಿ ಪತ್ತೆಯಾಗಿಲ್ಲ. ಇದಾದ ಬಳಿಕ ಪೋಷಕರು ಎಲ್ಲಾ ಕಡೆ ತಮ್ಮ ಮಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಇಷ್ಟಾದರೂ ಸಹ ದಿವ್ಯಾ ಮಾತ್ರ ಪತ್ತೆಯಾಗಿಲ್ಲ.

    POLICE JEEP

    ಇದಾದ ನಂತರ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಮೈಸೂರು ರಸ್ತೆಯ ಮಯೂರ ಬೇಕರಿ ಹಿಂಭಾಗ ನಾಗರಾಜು ಎಂಬವರ ನಿರ್ಮಾಣ ಹಂತದ ಮನೆಯ ಕಟ್ಟಡದ ಸಮೀಪದಲ್ಲಿದ್ದ ನೀರಿನ ಸಂಪ್‍ನಲ್ಲಿ ಪರಿಶೀಲನೆ ನಡೆಸಿದಾಗ ಬಾಲಕಿಯ ಶವ ಪತ್ತೆಯಾಗಿದೆ. ಇದನ್ನೂ ಓದಿ: IIT ಉದ್ಘಾಟನೆಗೆ ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದ್ದೇನೆ: ಪ್ರಹ್ಲಾದ್ ಜೋಶಿ

    ಸದ್ಯ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇತ್ತ ಬಾಲಕಿ ಸಾವಿನ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದೆ. ಸ್ಥಳಕ್ಕೆ ಡಿವೈಎಸ್‍ಪಿ ಎನ್.ನವೀನ್ ಕುಮಾರ್, ಸಿಪಿಐ ಎ.ಕೆ.ರಾಜೇಶ್ ಭೇಟಿ ನೀಡಿ ಶ್ವಾನದಾಳದೊಂದಿಗೆ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಓಲಾ, ಊಬರ್ ಆಟೋ ಬಂದ್- ಸರ್ಕಾರದಿಂದಲೇ ಆಟೋ ದರ ನಿಗದಿ

    Live Tv
    [brid partner=56869869 player=32851 video=960834 autoplay=true]