Tag: ಟ್ರಕ್ ಟರ್ಮಿನಲ್

  • ರಾಯಚೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಿ: ಬೋಸರಾಜು

    ರಾಯಚೂರಿನಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಜಾಗ ಗುರುತಿಸಿ: ಬೋಸರಾಜು

    ಬೆಂಗಳೂರು: ರಾಯಚೂರು (Raichur) ನಗರದಲ್ಲಿ ಟ್ರಕ್ ಮತ್ತು ಲಾರಿಗಳ ಸಂಚಾರವನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಟ್ರಕ್ ಟರ್ಮಿನಲ್ (Truck Terminal) ಅಗತ್ಯವಿದ್ದು, ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಗುರುತಿಸುವಂತೆ  ಸಣ್ಣ ನೀರಾವರಿ,ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್ ಬೋಸರಾಜು (N.S.Boseraju) ಅಧಿಕಾರಿಗಳಿಗೆ ಸೂಚನೆ ನೀಡಿದರು.

    ವಿಕಾಸಸೌಧದಲ್ಲಿ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿಮಿಟೆಡ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಉದ್ದೇಶಿತ ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ಸೆ.18-22 ವಿಶೇಷ ಸಂಸತ್ ಅಧಿವೇಶನ- ಪ್ರಮುಖ 9 ವಿಷಯಗಳ ಚರ್ಚೆಗೆ ಸೋನಿಯಾ ಗಾಂಧಿ ಆಗ್ರಹ

    ಟ್ರಕ್ ಟರ್ಮಿನಲ್ ನಗರದ ಹೊರಭಾಗದಲ್ಲಿ ನಿರ್ಮಾಣವಾದರೆ ಸೂಕ್ತ. ಈ ಟರ್ಮಿನಲ್ ನಿರ್ಮಾಣಕ್ಕೆ ಸುಮಾರು 10 ಎಕರೆ ಜಾಗದ ಅವಶ್ಯಕತೆಯಿದೆ. 10 ಎಕರೆ ಜಾಗದಲ್ಲಿ ನಿರ್ಮಿಸಲಾಗುವ ಈ ಟ್ರಕ್ ಟರ್ಮಿನಲ್‌ನಲ್ಲಿ ಚಾಲಕರ ವಿಶ್ರಾಂತಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಸೂರ್ಯ, ಚಂದ್ರ, ಭೂಮಿ ಯಾವಾಗ ಹುಟ್ಟಿದೆ ಅಂತ ಕೇಳೋಕೆ ಆಗುತ್ತಾ? – ಪರಂ ವಿರುದ್ಧ ಮುತಾಲಿಕ್ ಕಿಡಿ

    ರಾಯಚೂರು ನಗರದ ಹೊರಭಾಗದಲ್ಲಿ ಅಗತ್ಯ ಭೂಮಿಯನ್ನು ಶೀಘ್ರವಾಗಿ ಗುರುತಿಸುವಂತೆ ಹಾಗೂ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡುವಂತೆ ಸಚಿವರು ರಾಯಚೂರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು. ಇದನ್ನೂ ಓದಿ: ಶಾಸಕರ ಅನಗತ್ಯ ಪತ್ರ ವ್ಯವಹಾರಕ್ಕೆ ಸಿಎಂ ಬ್ರೇಕ್?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

    ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು

    ಹಾಸನ: ಹಾಸನದಲ್ಲಿ ಟ್ರಕ್‌ಟರ್ಮಿನಲ್ ನಿರ್ಮಾಣ ವಿಚಾರವಾಗಿ ಮಾಜಿ ಸಚಿವ ಹೆಚ್‌ಡಿ.ರೇವಣ್ಣ ವರ್ಸಸ್ ಶಾಸಕ ಪ್ರೀತಂಗೌಡರ ನಡುವೆ ಜಟಾಪಟಿ ಜೋರಾಗಿರುವ ಹೊತ್ತಿನಲ್ಲೇ ಈ ಬಗ್ಗೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಿಂದ ಜಿಲ್ಲಾಧಿಕಾರಿಗೆ ಪತ್ರ ಬರೆಯಲಾಗಿದೆ.

    Preetam Gowda, Hassan, JDS, BJP, Revanna, (3)

    ಪತ್ರದಲ್ಲಿ ಹಾಸನದ ಕೆಂಚಟ್ಟಳ್ಳಿ ಗ್ರಾಮದ ಸರ್ವೆ ನಂಬರ್ 31 ರಲ್ಲಿ, 3 ಎಕರೆ 24 ಗುಂಟೆ ಸರ್ಕಾರಿ ಗೋಮಾಳವನ್ನು ಟ್ರಕ್‌ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಿರುವ ಬಗ್ಗೆ ಸರ್ಕಾರ ಈಗಾಗಲೇ ಪೂರ್ವಾನುನತಿ ನೀಡಿರುವ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಕಲಂ 71 ರಡಿ ಟ್ರಕ್ ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಲು ಸರ್ಕಾರ ಪೂರ್ವಾನುಮತಿ ನೀಡಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ನಾನು ಧರಣಿ ಕುಳಿತರು ಸ್ಥಳಕ್ಕೆ ಡಿಸಿ ಬರಲಿಲ್ಲ, ನಾನೇನು ದನಕಾಯೋನ: ಹೆಚ್‍ಡಿ.ರೇವಣ್ಣ

    ಜಿಲ್ಲಾಧಿಕಾರಿಗಳು ಸರ್ಕಾರದ ಆದೇಶದಂತೆ ಸದರಿ ಜಮೀನನ್ನು ಕಂದಾಯ ವ್ಯಾಪ್ತಿಯ ಸುಪರ್ದಿಯಲ್ಲೇ ಇರಿಸಿಕೊಳ್ಳತಕ್ಕದ್ದು. ಈ ಜಮೀನನ್ನು ಮುಂದೆ ಯಾವುದಾದರೂ ಸಂಸ್ಥೆ, ಇಲಾಖೆಗೆ ನೀಡಬೇಕಾದಲ್ಲಿ ಸರ್ಕಾರದ ಅನುಮತಿಗೆ ಸೂಕ್ತ ಪ್ರಸ್ತಾವನೆ ಸಲ್ಲಿಸಲು ಪತ್ರದಲ್ಲಿ ಸೂಚಿಸಲಾಗಿದೆ.

    Preetam Gowda, Hassan, JDS, BJP, Revanna, (2)

    ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂದೆ ನಡೆಯುತ್ತಿರುವ ಟ್ರಕ್‌ಟರ್ಮಿನಲ್ ಕಾಮಗಾರಿಗೆ ಹೆಚ್.ಡಿ.ರೇವಣ್ಣ, ಸ್ಥಳೀಯರು, ವಿದ್ಯಾರ್ಥಿಗಳು ಭಾರೀ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಟ್ರಕ್‌ಟರ್ಮಿನಲ್ ಕಾಮಗಾರಿ ಮಾಡಿಯೇ ಸಿದ್ಧ ಎಂದು ಶಾಸಕ ಪ್ರೀತಂಗೌಡ ಪಣತೊಟ್ಟಿದ್ದರು. ಹೀಗಾಗಿ ಸ್ಥಳೀಯರೊಂದಿಗೆ ಸ್ವತಃ ಹೋರಾಟಕ್ಕಿಳಿದಿದ್ದ ಹೆಚ್‌ಡಿ.ರೇವಣ್ಣ, ತಾತ್ಕಾಲಿಕವಾಗಿ ಕಾಮಗಾರಿ ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್ 

    HD REVANNA

    ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಗೊಳಿಸಲಾಗಿತ್ತು. ಇದರಿಂದ ಟ್ರಕ್‌ಟರ್ಮಿನಲ್ ನಿರ್ಮಾಣದಿಂದ ಸ್ಥಳವನ್ನು ಕಂದಾಯ ಸಚಿವರು ಖುದ್ದು ಪರಿಶೀಲನೆ ನಡೆಸಲಿ ಎಂದು ಪಟ್ಟು ಹಿಡಿದಿದ್ದ ರೇವಣ್ಣ, ಅಧಿಕಾರಿಗಳು ಒಪ್ಪಿದರೆ ಅಲ್ಲಿಯೇ ಟ್ರಕ್‌ಟರ್ಮಿನಲ್ ಕಾಮಗಾರಿ ನಡೆಸಲಿ ಎಂದು ಆಕ್ರೋಶ ಹೊರಹಾಕಿದ್ದರು. ಇದೀಗ ಕಂದಾಯ ಇಲಾಖೆಯಿಂದಲೇ ಕೆಂಚಟ್ಟಳ್ಳಿ ಗ್ರಾಮದ ಸರ್ವೆ ನಂಬರ್ 31 ರಲ್ಲಿ, 3 ಎಕರೆ 24 ಗುಂಟೆ ಸರ್ಕಾರಿ ಗೋಮಾಳವನ್ನು ಟ್ರಕ್‌ಟರ್ಮಿನಲ್ ಉದ್ದೇಶಕ್ಕೆ ಕಾಯ್ದಿರಿಸಿರುವ ಬಗ್ಗೆ ಸ್ಪಷ್ಟನೆ ನೀಡಲಾಗಿದೆ.

  • ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್

    ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್‍.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್

    ಹಾಸನ: ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಕೈಗೊಂಡ ಹಲವು ಕಾಮಗಾರಿಗಳಲ್ಲಿ ಹಾಸನದಲ್ಲಿ ಹಳೆತಾಲೂಕು ಕಚೇರಿ ಕೆಡವಿ ನೂತನವಾಗಿ ನಿರ್ಮಿಸುವುದು ಮತ್ತು ಟ್ರಕ್ ಟರ್ಮಿನಲ್ ಕೂಡ ಸೇರಿದ್ದವು. ಆದ್ರೆ ಇವೆರೆಡು ಕಾಮಗಾರಿಗಳನ್ನು ಮಾಜಿ ಸಚಿವ ಎಚ್‍.ಡಿ.ರೇವಣ್ಣ ವಿರೋಧಿಸುತ್ತಲೇ ಬಂದಿದ್ದರು. ಒಂದು ಕಡೆ ಟ್ರಕ್ ಟರ್ಮಿನಲ್ ಕಾಮಗಾರಿಯನ್ನು ತಾತ್ಕಾಲಿಕವಾಗಿ ನಿಲ್ಲಿಸಲು ರೇವಣ್ಣ ಯಶಸ್ವಿಯಾಗಿದ್ರು. ಆದ್ರೆ ರೇವಣ್ಣ ಅವರನ್ನೇ ಯಾಮಾರಿಸಿ ಇದೀಗ ರಾತ್ರೋ ರಾತ್ರಿ ಹಾಸನ ತಾಲೂಕು ಕಚೇರಿ ಕೆಡವಿದ್ದು ಹಾಸನದಲ್ಲಿ ಮತ್ತೊಂದು ಜಿದ್ದಾಜಿದ್ದಿಗೆ ಕಾರಣವಾದಂತಾಗಿದೆ.

    ಟ್ರಕ್ ಟರ್ಮಿನಲ್ ವಿರೋಧಿಸಿ ಎಚ್‍ಡಿ.ರೇವಣ್ಣ & ಸನ್ಸ್ ಹೋರಾಟಕ್ಕಿಳಿದ ಪರಿಣಾಮ ಇದೀಗ ಕೆಲಸವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂಭಾಗ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಮತ್ತು ವಿದ್ಯಾರ್ಥಿಗಳು ಹೋರಾಟ ನಡೆಸಿದ್ರು. ಅವರಿಗೆ ಎಚ್‍.ಡಿ.ರೇವಣ್ಣ ಬೆಂಬಲ ಸೂಚಿಸಿದ್ರು. ಆದ್ರೆ ಯಾವುದೇ ಕಾರಣಕ್ಕೂ ಟ್ರಕ್ ಟರ್ಮಿನಲ್ ನಿಲ್ಲಿಸಲ್ಲ ಎಂದು ಪ್ರೀತಂ ಗೌಡ ಸವಾಲು ಹಾಕಿದ್ರು. ಇದಾದ ನಂತರ ನಿನ್ನೆ ರೇವಣ್ಣ ಮತ್ತು ಅವರ ಪುತ್ರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಮಗಾರಿ ತಡೆದು, ಕಾಂಪೌಂಡ್ ಗೋಡೆ ಕೆಡವಲಾಗಿತ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಕಾಮಗಾರಿ ಕೆಲಸ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

    ಕೇವಲ ಟ್ರಕ್ ಟರ್ಮಿನಲ್ ವಿಚಾರವಲ್ಲ. ಹಾಸನದಲ್ಲಿ ಈಗಿರುವ ತಾಲೂಕು ಕಚೇರಿ ಕೆಡವಿ, ನೂತನವಾಗಿ ತಾಲೂಕು ಕಚೇರಿ ನಿರ್ಮಿಸಲು ಪ್ರೀತಂ ಗೌಡ ಯೋಜನೆ ರೂಪಿಸಿದ್ರು. ಆದ್ರೆ ಅದಕ್ಕೂ ಯಾವುದೇ ಕಾರಣಕ್ಕೂ ಅವಕಾಶ ಕೊಡಲ್ಲ. ಈಗಿರುವ ಹಳೆಯ ಕಟ್ಟಡವೇ ಇರಬೇಕೆಂದು ರೇವಣ್ಣ ಪಟ್ಟುಹಿಡಿದಿದ್ರು. ಯಾವಾಗ ಟ್ರಕ್ ಟರ್ಮಿನಲ್ ಕೆಲಸವನ್ನು ರೇವಣ್ಣ & ಸನ್ಸ್ ತಡೆಹಿಡಿದ್ರೋ, ಇದೀಗ ರಾತ್ರೋ ರಾತ್ರಿ ಹಾಸನ ತಾಲೂಕು ಕಚೇರಿಯನ್ನು, ಕಿಟಕಿ ಬಾಗಿಲುಗಳ ಸಮೇತವೇ ನೆಲಕ್ಕುರುಳಿಸುವ ಕೆಲಸ ಮಾಡಿಸಿರುವ ಪ್ರೀತಂಗೌಡ, ಎಚ್‍ಡಿ.ರೇವಣ್ಣನಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ

    ಒಟ್ಟಾರೆ ಚುನಾವಣೆ ಇನ್ನೂ ಒಂದು ವರ್ಷವಿರುವಾಗಲೇ ಹಾಸನದಲ್ಲಿ ಅಭಿವೃದ್ಧಿ ಹೆಸರಲ್ಲಿ ಪ್ರೀತಂಗೌಡ ಮತ್ತು ಎಚ್‍ಡಿ.ರೇವಣ್ಣ ನಡುವಿನ ಜಟಾಪಟಿ ಜೋರಾಗಿಯೇ ನಡೆಯುತ್ತಿದೆ. ನನ್ನ ಅಭಿವೃದ್ಧಿ ಕೆಲಸಕ್ಕೆ ರೇವಣ್ಣ ಬೇಕಂತಲೇ ಸಮಸ್ಯೆ ಮಾಡ್ತಿದ್ದಾರೆ ಅನ್ನೋದು ಪ್ರೀತಂಗೌಡ ಆರೋಪವಾದ್ರೆ, ಇದೆಲ್ಲ ಕೇವಲ ಹಣ ಮಾಡುವ ಕಾಮಗಾರಿ ಅನ್ನೋದು ರೇವಣ್ಣ ಆರೋಪವಾಗಿದೆ.

  • ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

    ನೀನು ದನ ಕಾಯೋನು, EO ಕೆಲಸದಲ್ಲಿ ಇದ್ದೀಯ – ಅಧಿಕಾರಿ ವಿರುದ್ಧ ಎಚ್‍.ಡಿ.ರೇವಣ್ಣ ಗರಂ

    ಹಾಸನ: ನೀನು ದನ ಕಾಯೋನು ಇಓ ಕೆಲಸದಲ್ಲಿ ಇದ್ದೀಯ. ದನಗೆ ಇಂಜೆಕ್ಷನ್ ಕೊಡೋಕೆ ಹೋಗು ಎಂದು ತಾ.ಪಂ ಇಓಗೆ ಏಕವಚನದಲ್ಲೇ ಮಾಜಿ ಸಚಿವ ಎಚ್.ಡಿ.ರೇವಣ್ಣ ತರಾಟೆಗೆ ತೆಗೆದುಕೊಂಡ ಘಟನೆ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ.

    ಹಾಸನದ ಕೆಂಚಟ್ಟಹಳ್ಳಿ ಬಳಿ ಇರುವ ಹೇಮಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಮುಂಭಾಗ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲಾಗುತ್ತಿದೆ. ಇದಕ್ಕೆ ವಿದ್ಯಾರ್ಥಿಗಳು, ಗ್ರಾಮಸ್ಥರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಈ ಕಾಮಗಾರಿ ವಿಚಾರವಾಗಿ ಜಿಲ್ಲಾಧಿಕಾರಿ ಕಚೇರಿ ಬಳಿ ಆಗಮಿಸಿ ಜಿಲ್ಲಾಧಿಕಾರಿ ಮತ್ತು ತಾಪಂ ಇಒ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ ಎಚ್.ಡಿ.ರೇವಣ್ಣ, ತಾಪಂ ಇಒ ಕುರಿತು ನೀನು ದನ ಕಾಯೋನು, ಇಓ ಕೆಲಸದಲ್ಲಿ ಇದ್ದೀಯ. ಹೆಣ್ಣುಮಕ್ಕಳನ್ನು ಹೆದರಿಸ್ತೀಯಾ, ದನ ಕಾಯಕೆ ಹೋಗು ಎಂದು ಗದರಿದ್ರು. ಅದಕ್ಕೆ ಇಒ ಕಾಮಗಾರಿ ನಡೆಸಲು ಡಿಸಿ ನಿರ್ದೇಶನ ನೀಡಿದ್ದರು ಹಾಗಾಗಿ ಕಾಮಗಾರಿ ನಡೆಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರಭು ಚವ್ಹಾಣ್ ಬಳಿ ಸಾಕ್ಷ್ಯ ಕೇಳಲ್ಲ ಯಾಕೆ – ಆರಗಗೆ ಪ್ರಿಯಾಂಕ್‌ ಖರ್ಗೆ ಸವಾಲು

    ಈ ಉತ್ತರ ಕೇಳಿ ಮತ್ತಷ್ಟು ಕೆರಳಿದ ರೇವಣ್ಣ, ಡಿಸಿ ಮನೆಗೆ ನುಗ್ಗು ಅಂತಾನೆ ಹೋಗಿ ನುಗ್ಗು ನೀನು. ಏ ಪಿಎ ಕರೆಯೋ ಅವನ್ಯಾರು? ಡಿಸಿ. ಇವರಿಬ್ಬರು ಸೇರಿಕೊಂಡು ಅದೇನ್ ಮಾಡ್ತರೆ ಮಾಡ್ಲಿ. ಎಷ್ಟು ಹೆಣ ಉರುಳಿಸುತ್ತಾರೆ ಉರುಳಿಸಲಿ. ವರ್ಗಾವಣೆಗೋಸ್ಕರ ಈ ರೀತಿ ಮಾಡ್ತೀರ ಎಂದು ಕಿಡಿಕಾರಿದರು. ಇದನ್ನೂ ಓದಿ: ಭಾರತದ 10, ಪಾಕಿಸ್ತಾನದ 6 ಯೂಟ್ಯೂಬ್ ಚ್ಯಾನೆಲ್‌ಗಳು ಬ್ಯಾನ್

    ಈ ವೇಳೆ ಜಿಲ್ಲಾಧಿಕಾರಿ ಆರ್.ಗಿರೀಶ್, ಸ್ವಲ್ಪ ಸಮಾಧಾನವಾಗಿ ಕೇಳಿ ಸರ್ ಎಂದು ರೇವಣ್ಣ ಅವರಿಗೆ ತಿಳಿಸಿದ್ರು. ಆಗ ರೇವಣ್ಣ ಜನ ವಿರೋಧ ಮಾಡುತ್ತಿದ್ದಾರೆ. ಟ್ರಕ್ ಟರ್ಮಿನಲ್ ಕಾಮಗಾರಿ ನಿಲ್ಲಿಸಿ. ಟ್ರಕ್ ಟರ್ಮಿನಲ್‍ಗೆ ಬೇರೆ ಕಡೆ ಜಾಗ ಕೊಡಿ. ಮಿನಿಸ್ಟರ್ ಹೇಳ್ತಾರೆ ಡಿಸಿ ಕಚೇರಿ ಎಂಎಲ್‍ಎಗೆ ಬರೆದು ಕೊಡಿ ಅಂತ, ಬರೆದು ಕೊಡುತ್ತೀರಾ? ಹಾಸನನ ಏನ್ ಎಂಎಲ್‍ಎಗೆ ಬರೆದುಕೊಟ್ಟಿದ್ದಾರ ಎಂದು ಪ್ರಶ್ನಿಸಿದರು. ಈ ವೇಳೆ ರೇವಣ್ಣ ಅವರಲ್ಲಿ ಮನವಿ ಮಾಡಿದ ಜಿಲ್ಲಾಧಿಕಾರಿ ಆರ್.ಗಿರೀಶ್, ನಾಳೆ, ನಾಡಿದ್ದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ಕರೆಯುತ್ತೇನೆ ಎಂದು ತಿಳಿಸಿದರು.

  • ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಾಣ: ಡಿ.ಎಸ್ ವೀರಯ್ಯ

    ಹುಬ್ಬಳ್ಳಿಯಲ್ಲಿ ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಾಣ: ಡಿ.ಎಸ್ ವೀರಯ್ಯ

    ನವದೆಹಲಿ: ರಾಜ್ಯದಲ್ಲಿ ಶೀಘ್ರ ಮೂರು ಅತ್ಯಾಧುನಿಕ ಟ್ರಕ್ ಟರ್ಮಿನಲ್‍ಗಳನ್ನು ನಿರ್ಮಿಸಲಾಗುವುದು ಎಂದು ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ ಅಧ್ಯಕ್ಷ ಡಿ.ಎಸ್ ವೀರಯ್ಯ ಹೇಳಿದ್ದಾರೆ.

    ನವದೆಹಲಿಯಲ್ಲಿ ಮಾತನಾಡಿದ ಡಿ.ಎಸ್ ವೀರಯ್ಯ ಅವರು, ರಾಜ್ಯದಲ್ಲಿ ಈಗಾಗಲೇ ನಾಲ್ಕು ಕಡೆ ಟ್ರಕ್ ಟರ್ಮಿನಲ್‍ಗಳನ್ನು ನಿರ್ಮಾಣ ಮಾಡಲಾಗಿದ್ದು ಅವು ಕಾರ್ಯ ನಿರ್ವಹಿಸುತ್ತಿದೆ. ಈಗ ಹೊಸಪೇಟೆ, ಹುಬ್ಬಳ್ಳಿ, ದಾಂಡೇಲಿಯಲ್ಲಿ ಹೊಸ ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ ಎಂದರು.

    ಸದ್ಯ ನಿರ್ಮಾಣವಾಗಿರುವ ಟ್ರಕ್ ಟರ್ಮಿನಲ್‍ಗಳಲ್ಲಿ ಅತ್ಯಾಧುನಿಕ ವ್ಯವಸ್ಥೆಗಳಿಲ್ಲದ ಕಾರಣ ಚಾಲಕರಿಗೆ ತೊಂದರೆಗಳಾಗುತ್ತಿದೆ. ಹೀಗಾಗಿ ಜಪಾನ್ ಮಾಡೆಲ್ ಟ್ರಕ್ ಟರ್ಮಿನಲ್ ಮಾಡುವ ಉದ್ದೇಶವನ್ನು ಹೊಂದಲಾಗಿದೆ. ಇದಕ್ಕಾಗಿ ಜಪಾನ್ ಹೋಗಿ ಅಧ್ಯಯನ ಮಾಡಿಕೊಂಡು ಬರಲಾಗಿದ್ದು ಅದೇ ಮಾದರಿಯಲ್ಲಿ ಟರ್ಮಿನಲ್ ನಿರ್ಮಾಣ ಮಾಡಲಾಗುವುದು. ಜಪಾನ್ ಮಾದರಿಯ ಅತ್ಯಾಧುನಿಕ ಟರ್ಮಿನಲ್‍ನಲ್ಲಿ ಪೆಟ್ರೋಲ್ ಬಂಕ್, ಸಿನಿಮಾ ಹಾಲ್, ಡಾರ್ಮೆಟ್ರಿ, ಗ್ಯಾರೇಜ್, ವಿಶ್ರಾಂತಿ ಗೃಹ, ಜಿಮ್, ಪಾರ್ಕ್, ಹೋಟೆಲ್ ಸೇರಿ ಹಲವು ಉತ್ತಮ ವ್ಯವಸ್ಥೆ ಮಾಡಲಾಗುವುದು. ಇದರಿಂದ ಚಾಲಕರಿಗೆ ಹಲವು ವ್ಯವಸ್ಥೆ ಒಂದೇ ಕಡೆ ಸಿಗಲಿದೆ ಟ್ರಕ್ ಟರ್ಮಿನಲ್ ಬಗ್ಗೆ ಸರ್ಕಾರ ಹೆಚ್ಚು ಆಸಕ್ತಿವಹಿಸಿಲ್ಲ, ಟರ್ಮಿನಲ್‍ಗಳ ನಿರ್ಮಾಣದಿಂದ ಟ್ರಕ್ ನಿಲುಗಡೆ ಉತ್ತಮ ಸ್ಥಳಾವಕಾಶ ಸಿಗಲಿದೆ. ಇದರಿಂದ ರಸ್ತೆ ಅಪಘಾತ ತಪ್ಪಲಿದೆ. ಅನಗತ್ಯ ಟ್ರಾಫಿಕ್ ಜಾಮ್ ಮತ್ತು ವಾಯು ಮಾಲಿನ್ಯ ಕೂಡಾ ಕಡಿಮೆ ಆಗಲಿದೆ ಎಂದು ಮಾಹಿತಿ ನೀಡಿದರು.ಇದನ್ನೂ ಓದಿ: ಮೇಕೆದಾಟು ಯೋಜನೆಗೆ ಅಡ್ಡಿಪಡಿಸಲು ತಮಿಳುನಾಡು ಸರ್ಕಾರದಿಂದ ಹೊಸ ತಂತ್ರ

    ಈ ಎಲ್ಲ ಅಂಶಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದು 500 ಕೋಟಿ ಅನುದಾನ ಕೇಳಲಾಗಿತ್ತು, ಆದರೆ ಸರ್ಕಾರ 100 ಕೋಟಿ  ಅನುದಾನ ನೀಡಿದೆ. ಒಂದು ಟರ್ಮಿನಲ್ ನಿರ್ಮಾಣಕ್ಕೆ 40 ಕೋಟಿ ವೆಚ್ಚವಾಗಲಿದ್ದು, ಭೂಮಿ ಖರೀದಿಗೆ ಪ್ರತ್ಯೇಕ ಹಣದ ಅವಶ್ಯಕತೆ ಇದೆ. ಆರ್ಥಿಕ ಸಂಕಷ್ಟದ ನಡುವೆಯೂ ರಾಜ್ಯದ್ಯಾಂತ ಹೆಚ್ಚು ಅತ್ಯಾಧುನಿಕ ಟ್ರಕ್ ಟರ್ಮಿನಲ್ ನಿರ್ಮಿಸಲು ಚಿಂತಿಸಲಾಗಿದೆ ಎಂದು ವೀರಯ್ಯ ಹೇಳಿದರು.