Tag: ಟ್ರಯಲ್ ಬ್ಲಾಸ್ಟ್

  • ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ಬ್ರೇಕ್

    ಮಂಡ್ಯ: ಜಿಲ್ಲೆಯ ಬೇಬಿ ಬೆಟ್ಟದಲ್ಲಿ (Baby Hills) ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದರೆ ಹಳೆ ಮೈಸೂರು ಭಾಗದ ಜೀವನಾಡಿಯಾದ ಕೆಆರ್‌ಎಸ್ (KRS) ಅಣೆಕಟ್ಟೆಗೆ ಅಪಾಯ ಎದುರಾಗುತ್ತೆ ಎಂದು ಬೇಬಿ ಬೆಟ್ಟದಲ್ಲಿನ ಟ್ರಯಲ್ ಬ್ಲಾಸ್ಟ್‌ಗೆ ರೈತ ಸಂಘಟನೆಗಳು ವಿರೋಧಿಸಿದ ಬೆನ್ನಲ್ಲೇ ಇದೀಗ ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ.

    ಇಂದು ಬೇಬಿ ಬೆಟ್ಟದ ಟ್ರಯಲ್ ಬ್ಲಾಸ್ಟ್ ವಿಚಾರ ಸಂಬಂಧ ಸಚಿವ ಚಲುವರಾಯಸ್ವಾಮಿ (Chaluvarayaswamy) ಮಂಡ್ಯ (Mandya) ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಈ ಸಭೆಯಲ್ಲಿ ಜನಪ್ರತಿನಿಧಿಗಳು, ರೈತ ಸಂಘಟನೆಯ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಭಾಗಿಯಾಗಿದ್ದರು. ಆರಂಭದಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ರೈತ ಸಂಘಟನೆಗಳ ಮುಖಂಡರು ಈ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಜು.23 ರಂದು ʼಮೋದಿ 3.0ʼ ಬಜೆಟ್‌ ಮಂಡನೆ

    ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಯನ್ನು ಮತ್ತೆ ಮಾಡಲು ಅವಕಾಶ ನೀಡಿದರೆ ಕೆಆರ್‌ಎಸ್ ಅಣೆಕಟ್ಟೆಗೆ ಅಪಾಯ ಎದುರಾಗೋದು ನಿಶ್ಚಿತವಾಗಿದೆ. ಕೆಆರ್‌ಎಸ್ ಡ್ಯಾಂ ಅನ್ನು ಲಕ್ಷಾಂತರ ಜನರು ಅವಲಂಬಿಸಿದ್ದಾರೆ. ಮೈಸೂರು ಮಹಾರಾಜರು ನಮಗೆ ನೀಡಿರುವ ಅಮೂಲ್ಯ ಕೊಡುಗೆ ಕೆಆರ್‌ಎಸ್ ಡ್ಯಾಂ ಆಗಿದೆ. ಇದೀಗ ಇಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿ ಮುಂದೆ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಡ್ಯಾಂಗೆ ಹಾನಿಯಾಗುತ್ತದೆ. ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡದೆ ಸುಗ್ರೀವಾಜ್ಞೆ ಜಾರಿಗೆ ತರಬೇಕೆಂದು ರೈತ ಸಂಘಟನೆಗಳ ಮುಖಂಡರು ಆಗ್ರಹ ಮಾಡಿದರು. ಇದನ್ನೂ ಓದಿ: ಕೀರ್ತಿ ಚಕ್ರ; ಪತಿಯ ಮರಣೋತ್ತರ ಪ್ರಶಸ್ತಿ ಸ್ವೀಕರಿಸುವಾಗ ಕ್ಯಾ.ಅನ್ಶುಮನ್‌ ಸಿಂಗ್‌ ಪತ್ನಿ ಭಾವುಕ

    ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಈ ಸಂಬಂಧ ಜುಲೈ 15ಕ್ಕೆ ಹೈಕೋರ್ಟ್ ವಿಚಾರಣೆ ಮುಂದೂಡಿದೆ. ಹೀಗಾಗಿ 15ರ ವರೆಗೆ ಟ್ರಯಲ್ ಬ್ಲಾಸ್ಟ್ ವಿಚಾರವನ್ನು ಮುಂದೂಡಲಾಗಿದೆ. ನಾವು ಸಹ ಕೋರ್ಟ್‌ಗೆ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲು ನಿರ್ಧಾರ ಮಾಡಿದ್ದೇವೆ. ಟ್ರಯಲ್ ಬ್ಲಾಸ್ಟ್ ಸಂಬಂಧ ತಜ್ಞರ ವರದಿ, ಇಲ್ಲಿನ ರೈತರ ಅಭಿಪ್ರಾಯಗಳನ್ನು ನ್ಯಾಯಲಯಕ್ಕೆ ತಿಳಿಸಿ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ನಮಗೂ ಸಹ ಗಣಿಗಾರಿಕೆ ಮೇಲೆ ಆಸಕ್ತಿ ಇಲ್ಲ. ಕೆಆರ್‌ಎಸ್ ಡ್ಯಾಂ ಉಳಿಸಿಕೊಳ್ಳುವುದೆ ನಮ್ಮ ನಿಲುವಾಗಿದೆ. ಜು.15ರವರೆಗೆ ಯಾವುದೇ ಟ್ರಯಲ್ ಬ್ಲಾಸ್ಟ್ ಮಾಡೋದಿಲ್ಲ ಎಂದು ಸಭೆ ಬಳಿಕ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇದನ್ನೂ ಓದಿ: ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

  • ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    ಮಂಡ್ಯದ ಬೇಬಿ ಬೆಟ್ಟದಲ್ಲಿ ಇಂದಿನಿಂದ 4 ದಿನ ಟ್ರಯಲ್ ಬ್ಲಾಸ್ಟ್ – ಕೆಆರ್‌ಎಸ್‌ಗೆ ಬಂದ ತಜ್ಞರ ತಂಡ

    – ರೈತ ಸಂಘ, ಬಿಜೆಪಿಯಿಂದ ಗೋ ಬ್ಯಾಕ್ ಚಳುವಳಿ

    ಮಂಡ್ಯ: ಇಲ್ಲಿನ ಬೇಬಿ ಬೆಟ್ಟದಲ್ಲಿ (Baby Betta) ಗಣಿಗಾರಿಕೆ (Mining) ನಡೆಯಬೇಕೋ ಬೇಡವೋ ಎಂದು ತೀರ್ಮಾನ ಮಾಡುವ ಉದ್ದೇಶದಿಂದ ಹೈಕೋರ್ಟ್ ಟ್ರಯಲ್ ಬ್ಲಾಸ್ಟ್ (Trail blast) ನಡೆಸಲು ಆದೇಶ ನೀಡಿದೆ. ಅದರಂತೆ ಇಂದಿನಿಂದ 4 ದಿನಗಳ ಟ್ರಯಲ್ ಬ್ಲಾಸ್ಟ್‌ಗೆ ಮುಹೂರ್ತ ಫಿಕ್ಸ್ ಆಗಿದೆ. ಈ ನಡುವೆ ಇದಕ್ಕೆ ತೀವ್ರ ವಿರೋಧ ಸಹ ವ್ಯಕ್ತವಾಗುತ್ತಿದೆ.

    ಮಂಡ್ಯ (Mandya) ಜಿಲ್ಲೆಯ ಪಾಂಡವಪುರ ತಾಲೂಕಿನ ಬೇಬಿ ಬೆಟ್ಟದಲ್ಲಿ ನಡೆಯುತ್ತಿದ್ದ ಗಣಿಗಾರಿಕೆಯಿಂದ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್ (KRS) ಅಣೆಕಟ್ಟೆಗೆ ಹಾನಿ ಆಗುತ್ತದೆ ಎಂದು ಹಲವು ಹೋರಾಟಗಳು ನಡೆದವು. ರೈತ ಸಂಘಟನೆಗಳು, ಸಂಸದೆ ಸುಮಲತಾ ಅಂಬರೀಶ್, ಸಾಮಾಜಿಕ ಕಾರ್ಯಕರ್ತರ ಹೋರಾಟದ ಪ್ರತಿಫಲವಾಗಿ ಹೈಕೋರ್ಟ್ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಿತ್ತು. ಇದೀಗ ಇದೇ ಹೈಕೋರ್ಟ್ ಬೇಬಿ ಬೆಟ್ಟದ ಗಣಿಗಾರಿಕೆಯಿಂದ ಕೆಆರ್‌ಎಸ್ ಅಣೆಕಟ್ಟೆಗೆ ಸಮಸ್ಯೆ ಆಗುತ್ತಾ ಎಂದು ತಿಳಿಯಲು ಟ್ರಯಲ್ ಬ್ಲಾಸ್ಟ್ ಮಾಡಿಸಲು ಸರ್ಕಾರಕ್ಕೆ ಆದೇಶ ನೀಡಿದೆ. ಇದನ್ನೂ ಓದಿ: ಸರ್‌, ನಾನು ನೂರಾರು ಕೋಟಿಗೆ ಬಾಳ್ತೀನಿ: ಪಾಕ್‌ ಪರ ಘೋಷಣೆ ಕೂಗಿದ್ದ ನಾಶಿಪುಡಿ ಯಾರು?

    ಸರ್ಕಾರವೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲು ಇಂದಿನಿಂದ 4 ದಿನ ಮುಹೂರ್ತ ಫಿಕ್ಸ್ ಮಾಡಿದೆ. ಈ ಸಂಬಂಧ ಹೊರ ರಾಜ್ಯದಿಂದ ತಜ್ಞರ ತಂಡ ಸೋಮವಾರ ರಾತ್ರಿಯೇ ಕೆಆರ್‌ಎಸ್‌ನ ರಾಯಲ್ ಆರ್ಕಿಡ್ ಹೊಟೇಲ್‌ನಲ್ಲಿ ವಾಸ್ತವ್ಯ ಹೂಡಿದೆ. ಇಂದು ಬೆಳಗ್ಗೆ ಕೆಆರ್‌ಎಸ್‌ನ ಕಾವೇರಿ ಸಭಾಂಗಣದಲ್ಲಿ ತಜ್ಞರು ಕಾವೇರಿ ನೀರಾವರಿ ನಿಗಮ, ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಬೇಬಿ ಬೆಟ್ಟಕ್ಕೂ ತಜ್ಞರು ಭೇಟಿ ನೀಡಲಿದ್ದಾರೆ. ಬುಧವಾರ ಹಾಗೂ ಗುರುವಾರ ಬೇಬಿ ಬೆಟ್ಟದ ಆಯ್ದ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಲಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಿಗಳು ಮೂರು ದಿನ ಪೊಲೀಸ್ ಕಸ್ಟಡಿಗೆ

    ಒಂದೆಡೆ ಹೈಕೋರ್ಟ್ ಆದೇಶದಂತೆ ಸರ್ಕಾರ ಇಂದಿನಿಂದ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಿಸುತ್ತಿದ್ದರೆ, ಇನ್ನೊಂದೆಡೆ ರೈತ ಸಂಘ (Farmers Association) ಹಾಗೂ ಬಿಜೆಪಿ (BJP) ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸರ್ಕಾರ ಗಣಿ ಮಾಲೀಕರ ಲಾಬಿಗೆ ಮಣಿದು ಟ್ರಯಲ್ ಬ್ಲಾಸ್ಟ್ ಮಾಡಿಸಲು ಮುಂದಾಗುತ್ತಿದೆ. ಟ್ರಯಲ್ ಬ್ಲಾಸ್ಟ್ ಮಾಡುವಾಗ ಕಡಿಮೆ ಸ್ಫೋಟ ಬಳಸಿ ಬ್ಲಾಸ್ಟ್ ಮಾಡಿ ಕೆಆರ್‌ಎಸ್‌ಗೆ ತೊಂದರೆ ಆಗಲ್ಲ ಎಂದು ವರದಿ ನೀಡುತ್ತಾರೆ. ಬಳಿಕ ಬೆಟ್ಟದಲ್ಲಿ ಮತ್ತೆ ಗಣಿಗಾರಿಕೆ ಆರಂಭವಾಗಿ ಅಪಾರ ಪ್ರಮಾಣದ ಸ್ಫೋಟಕ ಬಳಸಿ ಬ್ಲಾಸ್ಟ್ ಮಾಡುರತ್ತಾರೆ. ಇದರಿಂದ ಕೆಆರ್‌ಎಸ್‌ಗೆ ಹಾನಿಯಾಗುತ್ತದೆ. ಹೀಗಾಗಿ ಟ್ರಯಲ್ ಬ್ಲಾಸ್ಟ್ ಮಾಡಬಾರದು. ಈಗ ಇರುವಂತೆಯೇ ಶಾಶ್ವತವಾಗಿ ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ ನಿಲ್ಲಿಸಬೇಕೆಂದು ರೈತ ಸಂಘ ಹಾಗೂ ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: ಶಿಲ್ಪಿ ಅರುಣ್ ಯೋಗಿರಾಜ್‌ಗೆ ಪ್ರತಿಷ್ಠಿತ ‘ಅಭಿನವ ಅಮರಶಿಲ್ಪಿ’ ಪ್ರಶಸ್ತಿ ಪ್ರದಾನ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಗೋ ಬ್ಯಾಕ್ ಚಳುವಳಿ ನಡೆಸಲಿದ್ದಾರೆ. ಕೆಆರ್‌ಎಸ್ ಬೃಂದಾವನದ ಮುಖ್ಯ ದ್ವಾರದ ರಸ್ತೆಯಲ್ಲಿ ಈ ಚಳುವಳಿ ನಡೆಯಲಿದೆ. ರೈತಸಂಘ ಹಾಗೂ ಬೇಬಿ ಬೆಟ್ಟ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಟ್ರಯಲ್ ಬ್ಲಾಸ್ಟ್ ನಡೆಸದಂತೆ ಬೆಳಿಗ್ಗೆ 10 ಗಂಟೆಗೆ ಚಳುವಳಿ ಆರಂಭವಾಗಲಿದೆ. ಬಿಜೆಪಿಯಿಂದಲೂ ಪ್ರತ್ಯೇಕ ಪ್ರತಿಭಟನೆಗೆ ನಿರ್ಧಾರ ಮಾಡಿದ್ದು, ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ. ಟ್ರಯಲ್ ಬ್ಲಾಸ್ಟ್‌ಗೆ ಆಗಮಿಸಿರುವ ತಜ್ಞರು ವಾಪಸ್ ತೆರಳುವಂತೆ ಗೋ ಬ್ಯಾಕ್ ಚಳುವಳಿ ನಡೆಯಲಿದೆ. ಇದನ್ನೂ ಓದಿ: ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮೋದಿ ನರ ಕಟ್- ತಲ್ವಾರ್ ಹಿಡಿದು ಅವಾಜ್ ಹಾಕಿದವನಿಗಾಗಿ ಶೋಧ

    ಗಣಿ ಮಾಲೀಕರು ನಡೆಸುವ ಬ್ಲಾಸ್ಟ್‌ಗೂ ತಜ್ಞರು ನಡೆಸುವ ಬ್ಲಾಸ್ಟ್‌ಗೂ ತುಂಬಾ ವ್ಯತ್ಯಾಸ ಇದೆ. ಗಣಿಗಾರಿಕೆಗೆ ಅಪಾರ ಪ್ರಮಾಣದ ಸ್ಫೋಟಕ ಬಳಕೆ ಮಾಡುತ್ತಾರೆ. ಆದರೆ ತಜ್ಞರು ಟ್ರಯಲ್ ಬ್ಲಾಸ್ಟ್‌ನಲ್ಲಿ ಅಲ್ಪ ಪ್ರಮಾಣದ ಸ್ಫೋಟಕ ಬಳಸುತ್ತಾರೆ. ಟ್ರಯಲ್ ಬ್ಲಾಸ್ಟ್‌ನಲ್ಲಿ ಕೆಆರ್‌ಎಸ್ ಡ್ಯಾಂಗೆ ಅಪಾಯ ಇಲ್ಲ ಎಂಬ ವರದಿ ಬರುವ ಸಾಧ್ಯತೆ ಇದೆ. ಯಾವುದೇ ಕಾರಣಕ್ಕೂ ಟ್ರಯಲ್ ಬ್ಲಾಸ್ಟ್ ಮಾಡಬಾರದು ಎಂದು ಪ್ರತಿಭಟನೆ ನಡೆಯಲಿದೆ. ಇದನ್ನೂ ಓದಿ: ಬಿಜೆಪಿಯಲ್ಲಿ ಎಲ್ಲರೂ ಜೇಬಿನಲ್ಲಿ ಟಿಕೆಟ್‌ ಇಟ್ಕೊಂಡು ಓಡಾಡ್ತಿದ್ದಾರೆ: ಅನಂತ್‌ ಕುಮಾರ್‌ ಹೆಗಡೆ

  • ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ – ಪುಣೆ ಎಟಿಎಸ್‌ನಿಂದ ಇಬ್ಬರು ಶಂಕಿತ ಉಗ್ರರ ಬಂಧನ

    ಚಿಕ್ಕೋಡಿ: ಕರ್ನಾಟಕದಿಂದ (Karnataka) 70 ಕಿಲೋಮೀಟರ್ ದೂರದಲ್ಲಿರುವ ಮಹಾರಾಷ್ಟ್ರದ (Maharashtra) ಅರಣ್ಯದಲ್ಲಿ ಟ್ರಯಲ್ ಬ್ಲಾಸ್ಟ್ (Trial Blast) ನಡೆಸಿದ ಶಂಕೆಯ ಮೇರೆಗೆ ಇಬ್ಬರು ಶಂಕಿತ ಉಗ್ರರನ್ನು (Suspected Terrorists) ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ATS) ಬಂಧಿಸಿದೆ.

    ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಅಂಬೋಲಿ (Amboli) ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ದೊರೆತಿದ್ದು, ಶಂಕಿತ ಉಗ್ರರು ಬೆಳಗಾವಿ (Belagavi) ಜಿಲ್ಲೆಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಅಂಬೋಲಿಗೆ ಪ್ರಯಾಣ ಬೆಳೆಸಿದ್ದರು ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ. ಈ ಹಿನ್ನೆಲೆ ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರಕ್ಕೆ ಆಗಮಿಸಿ ಎಟಿಎಸ್ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾ ಸ್ನೇಹಿತನ ಭೇಟಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಅಪ್ರಾಪ್ತೆ ಪೊಲೀಸರ ವಶಕ್ಕೆ

    ಕಳೆದ ವಾರ ಪಟ್ರೋಲಿಂಗ್ (Patrolling) ಮಾಡುತ್ತಿದ್ದ ವೇಳೆ ಬೈಕ್ ಕಳ್ಳತನ ಪ್ರಕರಣದಲ್ಲಿ ಇಬ್ಬರನ್ನು ಪುಣೆ ಕೊಥ್‌ರೂಡ್ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್ ಕಳ್ಳತನ ಶಂಕೆಯಡಿಯಲ್ಲಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯೂನಿಸ್ ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಈ ವೇಳೆ ಇಬ್ಬರು ಆರೋಪಿಗಳಿಗೆ ಐಸಿಸ್ ಉಗ್ರ ಸಂಘಟನೆ ಜೊತೆ ನಂಟಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

    ಬಳಿಕ ಇಬ್ಬರು ಶಂಕಿತ ಉಗ್ರರನ್ನು ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ಅಂಬೋಲಿ ಅರಣ್ಯ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ್ದ ಮಾಹಿತಿ ಬಹಿರಂಗವಾಗಿದೆ. ಕೊಲ್ಲಾಪುರ ನಿಪ್ಪಾಣಿ ಆಜರಾ ಮಾರ್ಗವಾಗಿ ಅಂಬೋಲಿಗೆ ಪ್ರಯಾಣಿಸಿದ ಮಾಹಿತಿ ದೊರೆತ ಹಿನ್ನೆಲೆ ಶಂಕಿತ ಉಗ್ರರು ಪ್ರಯಾಣಿಸಿದ ಮಾರ್ಗವನ್ನು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಜುಲೈ 27ರಂದು ಮಹಾರಾಷ್ಟ್ರ ಎಟಿಎಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ಮಾಹಿತಿ ದೊರೆತಿದ್ದು, ಈ ಬಗ್ಗೆ ಬೆಳಗಾವಿ ಪೊಲೀಸರು ಯಾವುದೇ ಮಾಹಿತಿಯನ್ನು ಖಚಿತಪಡಿಸಿಲ್ಲ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    KRSಗೆ ಕಂಟಕದ ಆತಂಕ – ರೈತರ ಧರಣಿಗೆ ಮಣಿದು ಟ್ರಯಲ್ ಬ್ಲಾಸ್ಟ್‌ಗೆ ತಾತ್ಕಾಲಿಕ ತಡೆ

    ಮಂಡ್ಯ: ತೀವ್ರ ವಿರೋಧದ ನಡುವೆಯೂ ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್‍ಗೆ ಸಿದ್ಧತೆ ನಡೆಸಲಾಗಿದ್ದು, ರೈತರ ಧರಣಿಗೆ ಮಣಿದು ತಾತ್ಕಾಲಿಕ ತಡೆ ನೀಡಲಾಗಿದೆ. ಕೆಆರ್‍ಎಸ್ ವ್ಯಾಪ್ತಿಯ ಬೇಬಿ ಬೆಟ್ಟದಲ್ಲಿ ಬ್ಲಾಸ್ಟಿಂಗ್‍ಗೆ ತಯಾರಿ ನಡೆಸಲಾಗುತ್ತಿತ್ತು. ಇದೀಗ ತೀವ್ರ ವಿರೋಧದಿಂದಾಗಿ `ಟ್ರಯಲ್ ಬ್ಲಾಸ್ಟ್’ ಮುಂದೂಡಿಕೆ ಮಾಡಲಾಗಿದೆ.

    ತಾತ್ಕಾಲಿಕವಾಗಿ ಟ್ರಯಲ್ ಬ್ಲಾಸ್ಟ್ ಮುಂದೂಡಿಕೆ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘಟದಿಂದ ಅಹೋರಾತ್ರಿ ಧರಣಿ ವಾಪಸ್ ಪಡೆಯಲಾಗಿದೆ. ಆದರೆ ಟ್ರಯಲ್ ಬ್ಲಾಸ್ಟ್ ಬಗ್ಗೆ ಸ್ಪಷ್ಟ ತೀರ್ಮಾನ ಬರುವವರೆಗೆ ಹೋರಾಟ ಮುಂದುವರಿಸಲಿದ್ದಾರೆ. ಕೆಆರ್‍ಎಸ್ ಹಾಗೂ ಬೇಬಿ ಬೆಟ್ಟದ ಸುತ್ತಮುತ್ತ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು: ಸಿಎಂಗೆ ಸುಮಲತಾ ಪತ್ರ

    ಇಂದು ಕೆಆರ್‍ಎಸ್ ಬಳಿಯ ಕಟ್ಟೇರಿಯ ಬಳಿ ಸಂಪೂರ್ಣ ಟ್ರಯಲ್ ಬ್ಲಾಸ್ಟ್ ನಿಷೇಧವಾಗಬೇಕೆಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಜಿಲ್ಲಾಡಳಿತದ ನಿಲುವು ಬರುವವರೆಗೆ ಪ್ರತಿಭಟನೆ ಮುಂದುವರಿಯಲಿದ್ದು, ದಿನಕ್ಕೊಂದು ವಿಭಿನ್ನ ಪ್ರತಿಭಟನೆ ಮಾಡುವುದಾಗಿ ರೈತ ಮುಖಂಡರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತರು ಧರಣಿ ನಡೆಸುತ್ತಿದ್ದಂತೆಯೇ ಇತ್ತ ಪ್ರಮೋದಾದೇವಿ ಹಾಗೂ ಸಂಸದೆ ಸುಮಲತಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗಣಿ ಸಚಿವರಿಗೆ ಪತ್ರ ಬರೆದಿದ್ದಾರೆ. ಕೆಆರ್‍ಎಸ್ ವ್ಯಾಪ್ತಿಯ 20 ಕಿ.ಮೀ ಗಣಿನಿಷೇಧ ಪ್ರದೇಶವಾಗಿ ಯಥಾಸ್ಥಿತಿ ಕಾಪಾಡುವಂತೆ ಸಿಎಂ, ಗಣಿ ಸಚಿವರಿಗೆ ಸುಮಲತಾ ಅಂಬರೀಶ್ ಮನವಿ ಮಾಡಿದ್ದಾರೆ.

    ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸಂಶೋಧನಾ ಸಂಸ್ಥೆಗಳು ಕೆಆರ್‍ಎಸ್ ಸುತ್ತಮುತ್ತಲ ಗಣಿಗಾರಿಕೆಯಿಂದ ಡ್ಯಾಂಗೆ ಆಗುತ್ತಿರುವ ಅಪಾಯದ ಬಗ್ಗೆ ವರದಿ ನೀಡಿವೆ. ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಕೆಆರ್‍ಎಸ್ ಸುತ್ತಮುತ್ತ 20 ಕಿ.ಮೀ ವ್ಯಾಪ್ತಿ ಗಣಿಗಾರಿಕೆ ನಿಷೇಧದ ಪ್ರದೇಶವಾಗಿಯೆ ಇರಲಿ. ಇದೇ ನನ್ನ ಹಾಗೂ ರೈತ, ಪ್ರಗತಿಪರ ಸಂಘಟನೆಗಳ ನಿಲುವು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಆಕ್ಷೇಪಿಸಿ ರಾಜಮನೆತನ ಪತ್ರ

    ಮಂಡ್ಯ: ತೀವ್ರ ವಿರೋಧದ ನಡುವೆಯೂ ಕೆಆರ್‌ಎಸ್‌ ಜಲಾಶಯದ ಸುತ್ತಮುತ್ತ ಟ್ರಯಲ್ ಬ್ಲಾಸ್ಟ್ ಗೆ ಕ್ಷಣಗಣನೆ ಆರಂಭವಾಗಿದೆ. ಬೇಬಿ ಬೆಟ್ಟದಲ್ಲಿ ಪರೀಕ್ಷಾರ್ಥ ಪ್ರಯೋಗ ನಡೆಸಲು ಸೋಮವಾರ ಪರಿಶೀಲನೆಗೆ ಬಂದ ತಜ್ಞರ ವಿರುದ್ಧ ರೈತರು ಪರ, ವಿರೋಧ ಪ್ರತಿಭಟನೆಗಳು ತಾರಕಕ್ಕೇರಿದೆ.

    ಬ್ಲಾಸ್ಟಿಂಗ್ ವಿರುದ್ಧ ರೈತರ ಸಂಘದ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿದ್ದಾರೆ. ಇದನ್ನು ಕಾವೇರಿಪುರದ ಬಳಿ ಪೊಲೀಸರು ತಡೆದ್ರು. ಈ ವೇಳೆ ವಾಕ್ಸಮರ ನಡೀತು. ಇದೇ ಹೊತ್ತಲ್ಲಿ ಕಾವೇರಿಪುರ ಗ್ರಾಮಸ್ಥರು ನಮಗೆ ಗಣಿಗಾರಿಕೆ ಬೇಕು, ಟ್ರಯಲ್ ಬ್ಲಾಸ್ಟ್ ಮಾಡಿ ಎಂದು ಆಗ್ರಹಿಸಿದ್ರು. ಎರಡು ಗುಂಪುಗಳ ಮಧ್ಯೆ ಜಟಾಪಟಿ ನಡೀತು. ಕೊನೆಗೆ ಪೊಲೀಸರು ಲಾಠಿ ಬೀಸಿ ಗುಂಪನ್ನು ಚದುರಿಸಿದ್ರು. ಡಿಸಿ ನಡೆಸಿದ ಓಲೈಕೆ ಯತ್ನವೂ ವಿಫಲವಾಗಿದೆ. ಇದನ್ನೂ ಓದಿ: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ – ಸಿಎಂ ಬೊಮ್ಮಾಯಿ ಅಂಕಿತ

    ರೈತರು ಡಿಸಿ ಕಚೇರಿಯಲ್ಲಿಯೇ ಧರಣಿ ಕುಳಿತಿದ್ದಾರೆ. ಈ ಮಧ್ಯೆ ಮೈಸೂರಿನ ರಾಜಮನೆತನವೂ ಟ್ರಯಲ್ ಬ್ಲಾಸ್ಟಿಂಗ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಮಂಡ್ಯ ಡಿಸಿಗೆ ಪತ್ರ ಬರೆದಿದೆ. ನಮ್ಮ ಅನುಮತಿ ಪಡೆಯದೇ ಟ್ರಯಲ್ ಬ್ಲಾಸ್ಟ್ ಗೆ ಅನುಮತಿ ನೀಡಿರುವುದು ಕಾನೂನು ಬಾಹಿರ ಎಂದು ಪ್ರಮೋದಾದೇವಿ ತಗಾದೆ ತೆಗೆದಿದ್ದಾರೆ. ಕೂಡ್ಲೇ ಅನುಮತಿ ಹಿಂಪಡೆಯಬೇಕು. ಇಲ್ಲವಾದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್- ತೀವ್ರ ವಿರೋದಧ ನಡುವೆಯೂ ಪ್ರಾಯೋಗಿಕವಾಗಿ ಸಿದ್ಧತೆ

    ನಾಳೆ KRS ಸುತ್ತಮುತ್ತ ಟ್ರಯಲ್ ಬ್ಲಾಸ್ಟ್- ತೀವ್ರ ವಿರೋದಧ ನಡುವೆಯೂ ಪ್ರಾಯೋಗಿಕವಾಗಿ ಸಿದ್ಧತೆ

    ಮಂಡ್ಯ: ಸೋಮವಾರದಿಂದ ಕೆಆರ್‌ಎಸ್‌ ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯರಲ್ಲಿ ಆತಂಕ ಎದುರಾಗಿದೆ.

    ಕೆಆರ್‌ಎಸ್‌ನ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಜಾರ್ಖಂಡ್ ಮೂಲದ ಭೂ ವಿಜ್ಞಾನಿಗಳ ತಂಡದಿಂದ ಬೇಬಿ ಬೆಟ್ಟ ಸೇರಿದಂತೆ ಐದು ಕಡೆ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: ಸಂಚಾರ ದಟ್ಟಣೆ ತಡೆಗೆ ಟ್ರಾಫಿಕ್ ಡೈವರ್ಟ್- ವರ್ಕೌಟ್ ಆಗ್ತಿಲ್ಲ ಅಂತಿದ್ದಾರೆ ಸವಾರರು!

    ರೈತರ ವಿರೋಧದ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಯುತ್ತಿದ್ದು, ಇದನ್ನು ವಿರೋಧಿಸಿ ನಾಳೆ ರೈತರಿಂದ ಬೈಕ್ ‌Rally ಕೂಡ ನಡೆಯಲಿದೆ. ಕೆಆರ್‌ಎಸ್‌ನಿಂದ ಟ್ರಯಲ್ ಬ್ಲಾಸ್ಟ್ ನಡೆಯುವ ಸ್ಥಳದ ವರೆಗೆ ಬೈಕ್ Rally ನಡೆಯಲಿದ್ದು, ಬಳಿಕ ಟ್ರಯಲ್ ಬ್ಲಾಸ್ಟಿಂಗ್ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗಿದೆ.

    ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪ್ರತಿಭಟನೆ ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ ರೈತ ಸಂಘಟನೆ, ಪ್ರಗತಿಪರ ಸಂಘಟನೆ, ಕಾರ್ಮಿಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ. 2018 ರಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಬಂದಿದ್ದ ವೇಳೆ ರೈತರು ಗೋ ಬ್ಯಾಕ್ ಚಳುವಳಿ ನಡೆಸಿದ್ದರು. ಆ ವೇಳೆ ಚಳುವಳಿಗೆ ಸೋತು ಅಧಿಕಾರಿಗಳು ಜಾಗ ಖಾಲಿ ಮಾಡಿದ್ದರು.

    Live Tv
    [brid partner=56869869 player=32851 video=960834 autoplay=true]