Tag: ಟ್ರಾಕ್ಟರ್ ಟ್ರಾಲಿ

  • ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ – ನಾಲ್ವರು ಸಾವು, 15 ಮಂದಿಗೆ ಗಾಯ

    ಟ್ರಾಕ್ಟರ್ ಟ್ರಾಲಿಗೆ ಸ್ಲೀಪರ್ ಬಸ್ ಡಿಕ್ಕಿ – ನಾಲ್ವರು ಸಾವು, 15 ಮಂದಿಗೆ ಗಾಯ

    ಭೋಪಾಲ್: ಟ್ರಾಕ್ಟರ್ ಟ್ರಾಲಿಗೆ (Tractor Trolley) ಸ್ಲೀಪರ್ ಬಸ್ (Sleeper Bus) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿದೆ.

    ಮಧ್ಯ ಪ್ರದೇಶದ ಶಾಜಾಪುರದಲ್ಲಿ (Shajapur) ಈ ಘಟನೆ ನಡೆದಿದ್ದು, ಹಲವು ಪ್ರಯಾಣಿಕರನ್ನು ಒಳಗೊಂಡ ಸ್ಲೀಪರ್ ಬಸ್ ಅಹಮದಾಬಾದ್‌ಗೆ (Ahamedabad) ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ ಎಂದು ಮಕ್ಸಿ ಪೊಲೀಸ್ ಠಾಣೆಯ ಉಸ್ತುವಾರಿ ಗೋಪಾಲ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಇದನ್ನೂ ಓದಿ: ವಿವಾಹ ಸಮಾರಂಭದಲ್ಲಿ ವಧು-ವರರ ನಡುವೆ ವಿವಾದ- ವಿಷ ಕುಡಿದು ವರ ಸಾವು, ವಧು ಗಂಭೀರ

    ಬಸ್ ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಟ್ರಾಲಿಗೆ ಡಿಕ್ಕಿ ಹೊಡೆದಿದೆ. ತರಾನ, ಕಾಯ್ತ ಮತ್ತು ಮಕ್ಸಿ ಪೊಲೀಸ್ ಠಾಣೆಯ ತಂಡಗಳನ್ನು ಸ್ಥಳಕ್ಕೆ ಕಳುಹಿಸಿ ರಕ್ಷಣಾ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಘಟನೆಯಿಂದ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್ಸಿನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರನ್ನು ಹೊರತರಲು ಹರಸಾಹಸ ಪಟ್ಟಿದ್ದು, ಗ್ರಾಮಸ್ಥರು ಪೊಲೀಸರಿಗೆ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ – ಪಿಎಫ್‍ಐ ಸದಸ್ಯ ಅರೆಸ್ಟ್

    ಘಟನಾ ಸ್ಥಳಕ್ಕೆ ತುರ್ತು ಚಿಕಿತ್ಸಾ ದಳ ಆಗಮಿಸಿ ಗಾಯಾಳುಗಳಿಗೆ ನೆರವು ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಜ್ಜಯಿನಿಯ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ವಿಮಾನದಲ್ಲಿ ಬೀಡಿ ಸೇದಿದ ಪ್ರಯಾಣಿಕ – ಬೆಂಗ್ಳೂರಲ್ಲಿ ಇಳಿಯುತ್ತಿದ್ದಂತೆ ಪೊಲೀಸರಿಗೆ ಲಾಕ್‌

  • ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ತಾಯಿ

    ಭೋಪಾಲ್: ಸಕಾಲದಲ್ಲಿ ಅಂಬುಲೆನ್ಸ್ ಬಾರದ ಕಾರಣ 28 ವರ್ಷದ ಮಹಿಳೆಯೊಬ್ಬರು ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ದೇವಗಾಂವ್ ಗ್ರಾಮದಲ್ಲಿ ನಡೆದಿದೆ.

    ರಾಜ್ಯ ಸರ್ಕಾರದ ಜನನಿ ಎಕ್ಸ್‌ಪ್ರೆಸ್ ಅಂಬುಲೆನ್ಸ್ ಗೆ ಕರೆ ಮಾಡಿ ತಿಳಿಸಿದ್ದೆವು. ಆದರೆ ಜನನಿ ಎಕ್ಸ್‌ಪ್ರೆಸ್ ಸರಿಯಾದ ಸಮಯಕ್ಕೆ ಬರಲಿಲ್ಲ. ಹೀಗಾಗಿ ಮಹಿಳೆಯನ್ನು ಟ್ರ್ಯಾಕ್ಟರ್ ಟ್ರಾಲಿಯಲ್ಲೇ ಸಾಗಿಸಬೇಕಾಯಿತು ಎಂದು ಮಹಿಳೆಯ ಸಂಬಂಧಿ ಸಂತ್ರಮ್ ಪಟೇಲ್ ಹೇಳಿದ್ದಾರೆ. ಇದನ್ನೂ ಓದಿ: ದಿಢೀರ್ ಎರಡು ಹೋಳಾಗಿ ಧರೆಗುರುಳಿದ ನೂರಾರು ವರ್ಷದ ಅರಳಿಮರ

    ನಾನು ಮಧ್ಯಾಹ್ನ 1 ಗಂಟೆ ಸುಮಾರಿಗೆ ನಾಲ್ಕು ಬಾರಿ 108 (ಅಂಬುಲೆನ್ಸ್ ಸಹಾಯವಾಣಿ)ಗೆ ಕರೆ ಮಾಡಿದೆ. 10 ನಿಮಿಷದಲ್ಲಿ ಅಂಬುಲೆನ್ಸ್ ಬರುತ್ತೆ ಎಂಬ ಮಾಹಿತಿ ಸಿಕ್ಕಿತು. ಆದರೆ ಎರಡು ಗಂಟೆ ಕಳೆದರೂ ಅಂಬುಲೆನ್ಸ್ ಬರಲಿಲ್ಲ. ಕೊನೆಗೆ ಟ್ರ್ಯಾಕ್ಟರ್ ಟ್ರಾಲಿ ಮೂಲಕ ಆಕೆಯನ್ನು ಅಜಯ್‍ಗಢದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಿದ್ದೆವು. ಆದರೆ ಮಾರ್ಗ ಮಧ್ಯದಲ್ಲೇ ಹೆರಿಗೆಯಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸರ್ಕಾರಿ ನೌಕರರ ವಿರುದ್ಧ ಅವಾಚ್ಯ ಪದ ಬಳಕೆ – ರಮೇಶ್ ಕುಮಾರ್ ವಿಷಾದ ವ್ಯಕ್ತಪಡಿಸಲಿ

    ಆದರೆ ಈ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ ಕ್ರಮತೆಗೆದುಕೊಳ್ಳುತ್ತೇವೆ. ತನಿಖೆ ನಡೆಸುತ್ತೇವೆ ಎಂದು ಮುಖ್ಯ ಆರೋಗ್ಯಾಧಿಕಾರಿ ಆರ್.ಕೆ.ಪಾಂಡೆ ಹೇಳಿದ್ದಾರೆ.