Tag: ಟ್ರಾಫಿಕ್ ಜಾಮ್

  • ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ – ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌

    ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ 16 ಚಕ್ರದ ಲಾರಿ – ಕಿ.ಮೀಗಟ್ಟಲೆ ಟ್ರಾಫಿಕ್‌ ಜಾಮ್‌

    ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ (Charmadi Ghat) 16 ಚಕ್ರದ ಲಾರಿ ಕೆಟ್ಟು ನಿಂತ ಪರಿಣಾಮ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗಿದೆ.

    ಹುಬ್ಬಳ್ಳಿಯಿಂದ ಮಂಗಳೂರಿಗೆ (Hubballi-Mangaluru) ಹೋಗುತ್ತಿದ್ದ ಸಿಮೆಂಟ್ ಲಾರಿ ಬೆಳಗ್ಗೆ 8:30ರ ವೇಳೆಗೆ ಚಾರ್ಮಾಡಿ ಘಾಟಿಯ 10ನೇ ತಿರುವಿನಲ್ಲಿ ಕೆಟ್ಟು ನಿಂತಿದೆ. ಘಾಟಿಯ ತಿರುವಿನಲ್ಲಿ ಟರ್ನ್ ಮಾಡಲಾಗದೇ ಲಾರಿ ನಿಂತ ಕಾರಣ ಮುಂದೆಯೂ ಹೋಗಲಾಗದೆ, ಹಿಂದೆಯೂ ಹೋಗಲಾಗದೆ ವಾಹನಗಳ ಚಾಲಕರು ಈಗ ಪರದಾಡುತ್ತಿದ್ದಾರೆ.  ಇದನ್ನೂ ಓದಿ: ಒಂದಲ್ಲ ಎರಡು ಪ್ರಶಸ್ತಿ ಗೆದ್ದ ಕನ್ನಡತಿ ಶ್ರೇಯಾಂಕಾ ಪಾಟೀಲ್‌

    ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿನಲ್ಲಿ 10 ಚಕ್ರದ ವಾಹನಕ್ಕಿಂತ ದೊಡ್ಡ ವಾಹನಗಳು ಸಂಚಾರಕ್ಕೆ ನಿಷೇಧವಿದೆ. ಹೀಗಿದ್ದರೂ ಕೊಟ್ಟಿಗೆಹಾರ (Kottigehara) ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಇದ್ದರೂ ಈ ಲಾರಿಗೆ ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆ ಎದ್ದಿದೆ. ಪೊಲೀಸರು ವಾಹನ ಬಿಟ್ಟಿರುವುದಕ್ಕೆ ಸ್ಥಳೀಯರು ಅಸಮಾಧಾನಗೊಂಡಿದ್ದು ಬೆಳಗ್ಗೆಯಿಂದಲೂ ನೂರಾರು ವಾಹನ ಸವಾರರು ಪರದಾಡುತ್ತಿದ್ದಾರೆ. ಇದನ್ನೂ ಓದಿ: ದಾಖಲೆಯ ಮತಗಳಿಂದ ರಷ್ಯಾ ಅಧ್ಯಕ್ಷ ಪುಟಿನ್ ಗೆಲುವು

  • ಶಿವರಾತ್ರಿ ಹಬ್ಬ ಸೇರಿ 3 ದಿನ ರಜೆ- ಊರಿಗೆ ಹೊರಟ ಜನ, ಭಾರೀ ಟ್ರಾಫಿಕ್‌

    ಶಿವರಾತ್ರಿ ಹಬ್ಬ ಸೇರಿ 3 ದಿನ ರಜೆ- ಊರಿಗೆ ಹೊರಟ ಜನ, ಭಾರೀ ಟ್ರಾಫಿಕ್‌

    ಬೆಂಗಳೂರು: ಶಿವರಾತ್ರಿ ಹಬ್ಬ (Maha Shivratri) ಸೇರಿ ಮೂರು ದಿನಗಳ ಕಾಲ ರಜೆಯ ಹಿನ್ನೆಲೆಯಲ್ಲಿ ಜನ ಊರಿಗೆ ಹೊರಟಿದ್ದಾರೆ. ಈಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿಯಲ್ಲಿ ಭಾರೀ ಟ್ರಾಫಿಕ್‌ ಜಾಮ್‌ ಉಂಟಾಗಿದೆ.

    ಶಿವರಾತ್ರಿ ಹಬ್ಬ ಹಾಗೂ ಎರಡನೇ ಶನಿವಾರ ಹಾಗೂ ಭಾನುವಾರ ರಜೆ ಹಿನ್ನೆಲೆಯಲ್ಲಿ ಜನರು ಬೆಂಗಳೂರಿನಿಂದ ತಮ್ಮ ತಮ್ಮ ಊರಿಗೆ ಹೊರಟಿದ್ದಾರೆ. ಹೀಗಾಗಿ ಮೆಜೆಸ್ಟಿಕ್ ಸುತ್ತ ಮುತ್ತ, ಮೈಸೂರು ಬ್ಯಾಂಕ್, ಮೆಜೆಸ್ಟಿಕ್, ಆನಂದ್ ರಾವ್ ಸರ್ಕಲ್, ಉಪಾರಪೇಟೆಯಲ್ಲೂ ಟ್ರಾಫಿಕ್ ಜಾಮ್ ಉಂಟಾಗಿದ್ದು, ಜನ ಪರದಾಡುತ್ತಿದ್ದಾರೆ.

    ಹಬ್ಬದ ಹಿನ್ನೆಲೆಯಲ್ಲಿ ಕೆಎಸ್ಆರ್‌ಟಿಸಿ ಅಧಿಕಾರಿಗಳು ಈಗಾಗಲೇ ಹೆಚ್ಚುವರಿ ಬಸ್ ಗಳನ್ನು ಬಿಟ್ಟಿದ್ದಾರೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ನಾನಾ ಪ್ರದೇಶಗಳಿಗೆ ಇಂದಿನಿಂದ 10 ರವರೆಗೆ ಹೆಚ್ಚುವರಿಯಾಗಿ 1,500 ಬಸ್‌ಗಳನ್ನು ಕಾರ್ಯಾಚರಣೆಗೊಳಿಸಿದೆ. ಹಾಗೆಯೇ ಬೆಂಗಳೂರಿಗೆ ಬರುವವರಿಗಾಗಿ ಮಾರ್ಚ್‌ 10 ಮತ್ತು 11 ರಂದು ವಿಶೇಷ ಬಸ್‌ಗಳನ್ನು ಬಿಡಲಾಗುತ್ತಿದೆ.

    ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್‌ ಕಾಯ್ದಿರಿಸಿದರೆ 5% ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹೋಗುವ ಮತ್ತು ಬರುವ ಪ್ರಯಾಣ ಟಿಕೆಟ್‌ ಒಟ್ಟಿಗೆ ಕಾಯ್ದಿರಿಸಿದರೆ, 10% ರಷ್ಟು ರಿಯಾಯಿತಿ ಸಿಗಲಿದೆ ಎಂದು ಕೆಎಸ್‌ಆರ್‌ಟಿಸಿಯು ಪ್ರಕಟಣೆಯಲ್ಲಿ ತಿಳಿಸಿತ್ತು.

  • ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

    ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಾಫಿಕ್‌ ಜಾಮ್‌ – 3 ಕಿಮೀ ವರೆಗೆ ನಿಂತ ವಾಹನಗಳು; 2 ಗಂಟೆ ಪ್ರಯಾಣಿಕರ ಪರದಾಟ

    ಮೈಸೂರು: ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ (Bengaluru-Mysuru Expressway) ಸಂಚಾರ ದಟ್ಟಣೆ ಉಂಟಾಗಿ, ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.

    ಬೆಂಗಳೂರು ಕಡೆಯಿಂದ ಶನಿವಾರ ಸಾವಿರಾರು ವಾಹನಗಳು ಮೈಸೂರು ಕಡೆಗೆ ಪ್ರಯಾಣಿಸಿದವು. ಇದರಿಂದಾಗಿ ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಯಿತು. ಟೋಲ್‌ ಬಳಿ ಸುಮಾರು 3 ಕಿ.ಮೀ.ನಷ್ಟು ಟ್ರಾಫಿಕ್‌ ಜಾಮ್‌ ಆಯಿತು. ಇದನ್ನೂ ಓದಿ: ಹಿಜಬ್ ವಿಚಾರ ಸುಪ್ರೀಂ ಕೋರ್ಟ್‍ನಲ್ಲಿರುವಾಗ ಅನುಮತಿ ಕೊಡೋದು ಎಷ್ಟು ಸರಿ?: ರವಿಕುಮಾರ್

    ಸುಮಾರು 2 ಗಂಟೆಗಳ ವರೆಗೆ ವಾಹನ ಸವಾರರು ಸಂಚಾರ ದಟ್ಟಣೆಯಲ್ಲಿ ಸಿಲುಕಿ ಪರದಾಡಿದರು. ರಸ್ತೆಯುದ್ದಕ್ಕೂ ವಾಹನಗಳು ಕಿಕ್ಕಿರಿದು ನಿಂತಿದ್ದ ದೃಶ್ಯದ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ನೆಲಮಂಗಲ ಹೈವೇನಲ್ಲೂ ಕಿಲೋಮೀಟರ್‌ಗಟ್ಟಲೇ ಟ್ರಾಫಿಕ್ ಜಾಮ್‌ ಉಂಟಾಗಿತ್ತು.

    ಶನಿವಾರ ಮತ್ತು ಭಾನುವಾರ ರಜೆ. ಜೊತೆಗೆ ಕ್ರಿಸ್‌ಮಸ್‌ ಪ್ರಯುಕ್ತ ಸೋಮವಾರ ಕೂಡ ರಜೆ ಇದೆ. ಮೂರು ದಿನಗಳ ರಜೆ ಹಿನ್ನೆಲೆಯಲ್ಲಿ ಜನರು ಊರುಗಳತ್ತ ಮುಖ ಮಾಡಿದ್ದಾರೆ. ಬಸ್‌ ನಿಲ್ದಾಣಗಳಲ್ಲೂ ಅಪಾರ ಸಂಖ್ಯೆಯಲ್ಲಿ ಪ್ರಯಾಣಿಕರು ನೆರೆದಿದ್ದಾರೆ. ಬಸ್‌ಗಳು ಸಹ ರಶ್‌ ಆಗುತ್ತಿವೆ. ಇದನ್ನೂ ಓದಿ: ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗೆ ಹೋಗುವಂತೆ ನಾನು ಕರೆ ಕೊಡುತ್ತೇನೆ: ಯತ್ನಾಳ್‌

  • ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ

    ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಪಾಲಿಕೆ ಪ್ಲ್ಯಾನ್ – ಅಂಡರ್‌ಪಾಸ್, ಮೇಲ್ಸೇತುವೆ ನಿರ್ಮಾಣಕ್ಕೆ ಮುಂದಾದ ಪಾಲಿಕೆ

    ಬೆಂಗಳೂರು: ಬೆಂಗಳೂರಿನಲ್ಲಿ (Bengaluru) ಟ್ರಾಫಿಕ್  (Traffic) ಸಮಸ್ಯೆ ಜಾಸ್ತಿ ಆಗುತ್ತಿದೆ. ಯಾವ ಭಾಗಕ್ಕೆ ಹೋದರೂ ಸಂಚಾರ ದಟ್ಟಣೆ ಹೆಚ್ಚಾಗ್ತಿದೆ. ಬಿಬಿಎಂಪಿ (BBMP) ಟ್ರಾಫಿಕ್ ಸ್ಪಾಟ್‌ಗಳನ್ನು ಗುರುತಿಸಿ ಸರ್ವೆಗೆ ಮುಂದಾಗಿದೆ. ಸರ್ವೆ ನಡೆಸಲು ಟೆಂಡರ್ ಕರೆದಿದೆ. ಸರ್ವೆ ಮುಗಿದ ಬಳಿಕ 12 ಕಡೆ ಮೇಲ್ಸೇತುವೆ ಅಂಡರ್ ಪಾಸ್ (Underpass) ನಿರ್ಮಾಣಕ್ಕೆ ಮುಂದಾಗಿದೆ.

    ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಷ್ಟ್ರಮಟ್ಟದಲ್ಲಿ ಸಂಚಾರ ದಟ್ಟಣೆ ಬಗ್ಗೆ ಚರ್ಚೆ ಆಗುತ್ತಿದೆ. ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಈಗಾಗಲೇ ಹಲವಾರು ಕ್ರಮಗಳನ್ನು ಜರುಗಿಸಿದ್ದಾರೆ. ಈಗ ಮತ್ತೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಬಿಬಿಎಂಪಿ ನಗರದಲ್ಲಿ ಸರ್ವೆ ನಡೆಸಲು ಮುಂದಾಗಿದೆ. ಖಾಸಗಿ ಸಂಸ್ಥೆಗೆ ಟೆಂಡರ್ ನೀಡಿ ಎಲ್ಲೆಲ್ಲಿ ಟ್ರಾಫಿಕ್ ಜಾಮ್ ಆಗುತ್ತಿದೆ, ಪರಿಹಾರ ಏನು ಎಂಬುದನ್ನು ವರದಿ ನೀಡಲು ಸೂಚಿಸಿದೆ. ಶೀಘ್ರದಲ್ಲೇ ಸರ್ವೆ ಆರಂಭ ಆಗಲಿದೆ. ಇದನ್ನೂ ಓದಿ: ಹಣ ಲಪಟಾಯಿಸಿದ್ರೂ ಬಿಡದಿ ಇನ್ಸ್‌ಪೆಕ್ಟರ್‌ ಸಸ್ಪೆಂಡ್ ಯಾಕಿಲ್ಲ?- ಭ್ರಷ್ಟನಿಗೆ ರಾಜಕೀಯ ರಕ್ಷಣೆ ಎಂದ ಮಾಜಿ ಶಾಸಕ

    ಟ್ರಾಫಿಕ್ ಜಾಮ್ ಆಗುವ ರಸ್ತೆಯಲ್ಲಿ ದಿನಕ್ಕೆ ಎಷ್ಟು ವಾಹನ ಓಡಾಡುತ್ತಿವೆ. ಟ್ರಾಫಿಕ್ ಜಾಮ್ ಆಗಲಿಕ್ಕೆ ಕಾರಣ ಹುಡುಕಬೇಕಿದೆ. ಎಲ್ಲೆಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಬೇಕು. ಫ್ಲೈಓವರ್ ನಿರ್ಮಾಣ ಮಾಡಬೇಕು ಎಂದು ವರದಿ ನಿರ್ಧಾರ ಮಾಡಲಿದ್ದಾರೆ. ಈಗಾಗಲೇ ಗೊರಗುಂಟೆಪಾಳ್ಯ, ತುಮಕೂರು ರಸ್ತೆ, ಸ್ಯಾಂಡಲ್‌ಸೋಪ್ ಫ್ಯಾಕ್ಟರಿ, ಹೆಬ್ಬಾಳ, ಟಿನ್ ಫ್ಯಾಕ್ಟರಿ, ಸಿಲ್ಕ್ ಬೋರ್ಡ್ ಈ ಭಾಗಗಳಲ್ಲಿ ಫ್ಲೈಓವರ್ ಇದ್ದರೂ ಟ್ರಾಫಿಕ್ ಜಾಮ್ ಆಗುತ್ತಿದೆ. ಇದಕ್ಕೆ ಸೂಕ್ತ ಕಾರಣ ಪತ್ತೆ ಹಚ್ಚಿ ಪರಿಹಾರ ಏನು ಎಂದು ಕಂಡುಕೊಂಡು ವರದಿ ನೀಡಲಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಈ ಗ್ರಾಮದ 30 ಯುವಕರಿಗಿಲ್ಲ ಕಂಕಣ ಭಾಗ್ಯ

    ಬಿಬಿಎಂಪಿ ಟ್ರಾಫಿಕ್ ಜಾಮ್ ಬಗ್ಗೆ ಸರ್ವೆ ನಡೆಸಲು ಮುಂದಾಗಿದ್ದು, ಸರ್ವೆ ಆದ ಬಳಿಕ ಎಲ್ಲೆಲ್ಲಿ ಅಂಡರ್ ಪಾಸ್ ನಿರ್ಮಾಣ, ಮತ್ತೆ ಫ್ಲೈಓವರ್ ನಿರ್ಮಾಣ ಮಾಡಲಿದೆಯೋ ಕಾದು ನೋಡಬೇಕಿದೆ. ಇದನ್ನೂ ಓದಿ: ಕಡ್ಲೆಕಾಯಿ ಪರಿಷೆಯ ತುತ್ತೂರಿ ವಿರುದ್ಧ ಬಸವನಗುಡಿ ನಿವಾಸಿಗಳು ಗರಂ!

  • ಬೆಂಗಳೂರು ರಸ್ತೆ ಅಗಲೀಕರಣ ಕಾಮಗಾರಿ ತ್ವರಿತಗೊಳಿಸಿ.. ಸಂಚಾರ ದಟ್ಟಣೆ ನಿವಾರಿಸಿ: ಡಿಸಿಎಂಗೆ ಲೆಹರ್‌ ಸಿಂಗ್‌ ಪತ್ರ

    ಬೆಂಗಳೂರು ರಸ್ತೆ ಅಗಲೀಕರಣ ಕಾಮಗಾರಿ ತ್ವರಿತಗೊಳಿಸಿ.. ಸಂಚಾರ ದಟ್ಟಣೆ ನಿವಾರಿಸಿ: ಡಿಸಿಎಂಗೆ ಲೆಹರ್‌ ಸಿಂಗ್‌ ಪತ್ರ

    ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಬಾಕಿ ಇರುವ ರಸ್ತೆ ಅಗಲೀಕರಣ ಕಾಮಗಾರಿಯನ್ನು ತ್ವರಿತಗೊಳಿಸಿ ಸ್ಥಳೀಯರು ಹಾಗೂ ಪ್ರಯಾಣಿಕರನ್ನು ಸಂಚಾರ ದಟ್ಟಣೆಯಿಂದ ಪಾರು ಮಾಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಅವರಿಗೆ ಬಿಜೆಪಿ ಸಂಸದ ಲೆಹರ್‌ ಸಿಂಗ್‌ (Lahar Singh Siroya) ಪತ್ರ ಬರೆದು ಒತ್ತಾಯಿಸಿದ್ದಾರೆ.

    ಪ್ರತಿದಿನ ಟ್ರಾಫಿಕ್ ಜಾಮ್‌ನಿಂದಾಗಿ ಸಮಸ್ಯೆಗೊಳಗಾಗಿರುವ ಪ್ರಯಾಣಿಕರ ಹಿತದೃಷ್ಟಿಯಿಂದ ಈ ಕುರಿತು ಕ್ರಮ ವಹಿಸುವಂತೆ ಒತ್ತಾಯಿಸಿ ಲೆಹರ್‌ ಸಿಂಗ್‌ ಅವರು ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ನ.25 ರಂದು ಬೆಂಗಳೂರಿಗೆ ಬರಲಿದ್ದಾರೆ ಮೋದಿ

    ಬೆಂಗಳೂರಿನ ಹೃದಯ ಭಾಗದಲ್ಲಿರುವ ಪ್ರಮುಖ ರಸ್ತೆಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಮಸ್ಯೆಯನ್ನು ಸರ್ಕಾರದ ಗಮನಕ್ಕೆ ತಂದಿರುವ ಬಿಜೆಪಿ ಸಂಸದ ಲೆಹರ್ ಸಿಂಗ್, ಬೆಂಗಳೂರಿನಲ್ಲಿ ವಿಶೇಷವಾಗಿ ಮೇಖ್ರಿ ವೃತ್ತದಿಂದ ನಗರಕ್ಕೆ ಮತ್ತು ಬೆಂಗಳೂರು ಕಂಟೋನ್ಮೆಂಟ್ ನಿಲ್ದಾಣಕ್ಕೆ ಪ್ರಯಾಣಿಸುವವರ ಅನುಕೂಲಕ್ಕಾಗಿ ರಸ್ತೆ ಅಗಲೀಕರಣ ಯೋಜನೆಗಳನ್ನು ತ್ವರಿತಗೊಳಿಸುವಂತೆ ಆಗ್ರಹಿಸಿದ್ದಾರೆ.

    ಹೆಬ್ಬಾಳ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಬರುವ ರಸ್ತೆ ವಿಸ್ತಾರವಾಗಿದೆ. ಆದರೆ ಮೇಖ್ರಿ ವೃತ್ತದ ಅಂಡರ್‌ಪಾಸ್‌ ದಾಟಿ ನಗರದ ಕಡೆಗೆ ಬರುವಾಗ 6 ಪಥಗಳಿದ್ದ ರಸ್ತೆ 4 ಪಥಗಳಾಗಿ ಕಿರಿದಾಗುತ್ತದೆ. ಈ ಜಾಗದಲ್ಲಿ ಉಂಟಾಗುವ ಅಡಚಣೆಯು ನಿರಂತರ ಟ್ರಾಫಿಕ್ ಜಾಮ್‌ಗೆ ಕಾರಣವಾಗಿ ವಾಹನಗಳು ದೂರದವರೆಗೆ ಸರತಿಯಲ್ಲಿ ನಿಲ್ಲುವಂತಾಗಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಹಾಗೆಯೇ, ಮೇಖ್ರಿ ವೃತ್ತದಿಂದ ಕಂಟೋನ್ಮೆಂಟ್ ನಿಲ್ದಾಣದವರೆಗೆ ಹೆಚ್ಚು ಸಂಚಾರ ದಟ್ಟಣೆ ಉಂಟಾಗಿ ಬಳ್ಳಾರಿ ರಸ್ತೆಯಲ್ಲಿ ಸಮಸ್ಯೆ ಬಿಗಡಾಯಿಸುತ್ತದೆ. ಈ ಭಾಗದಲ್ಲಿ ರಸ್ತೆ ಅಗಲೀಕರಣ ಯೋಜನೆಗಳಿಗೆ ಬಿಬಿಎಂಪಿಯಿಂದ ಪ್ರಸ್ತಾವನೆ ರೂಪಿಸಿದ್ದರೂ, ಸುಪ್ರೀಂ ಕೋರ್ಟ್‌ನಿಂದ ಅನುಮೋದನೆ ಪಡೆದಿದ್ದರೂ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಅವರು ಗಮನ ಸೆಳೆದಿದ್ದಾರೆ.

    ರಸ್ತೆ ಅಗಲೀಕರಣ ಕಾಮಗಾರಿಯು ಡಿ.ಕೆ.ಶಿವಕುಮಾರ್‌ ಅವರ ಬ್ರ್ಯಾಂಡ್‌ ಬೆಂಗಳೂರಿನ ಗುರಿಗೆ ಪೂರಕವಾಗಿದೆ. ರಸ್ತೆ ಅಗಲೀಕರಣ ಕಾಮಗಾರಿ ಜೊತೆಗೆ ಮೇಖ್ರಿ ವೃತ್ತ ಹಾಗೂ ಕಾವೇರಿ ವೃತ್ತದ ಸುಂದರೀಕರಣ ಕಾಮಗಾರಿ ನಡೆದರೆ, ಅದಕ್ಕೆ ತಮ್ಮ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಕಳೆದ ಬಾರಿ ಬೆಳಗಾವಿಯಿಂದ ಬಿದ್ದಿತ್ತು, ಈ ಸಲ ದುಬೈ‌ನಿಂದ ಸರ್ಕಾರ ಬೀಳುತ್ತೆ: ಆರ್.ಅಶೋಕ್ ಹೊಸ ಬಾಂಬ್

    ತ್ವರಿತ ಕ್ರಮಕ್ಕೆ ಸಂಸದರ ಕರೆ
    ರಾಜ್ಯಸಭಾ ಸಂಸದರ ಈ ಮನವಿಯು ರಸ್ತೆ ವಿಸ್ತರಣೆ ಯೋಜನೆಗಳಿಗೆ ಸರ್ಕಾರ ಕೂಡಲೇ ಗಮನ ಹರಿಸುವಂತೆ ಕರೆ ನೀಡಿದೆ. ಸಂಚಾರ ದಟ್ಟಣೆಯನ್ನು ನಿವಾರಿಸುವಲ್ಲಿ ಮತ್ತು ಬೆಂಗಳೂರಿನ ನಿವಾಸಿಗಳಿಗೆ ಸುಲಲಿತವಾದ ಪ್ರಯಾಣದ ಅನುಭವ ದೊರಕಿಸಿಕೊಡುವ ಬಗ್ಗೆ ಈ ಪತ್ರ ಪ್ರಸ್ತಾಪಿಸಿದೆ.

  • ಬೆಂಗ್ಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್; ಗಂಟೆಗಟ್ಟಲೆ ನಿಂತಲ್ಲೇ ನಿಂತ ವಾಹನಗಳು

    ಬೆಂಗ್ಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್; ಗಂಟೆಗಟ್ಟಲೆ ನಿಂತಲ್ಲೇ ನಿಂತ ವಾಹನಗಳು

    ಆನೇಕಲ್: ಇಲ್ಲಿನ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ (Bengaluru Hosur Highway) ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಹೈರಾಣಾಗಿರುವ ಘಟನೆ ನಡೆದಿದೆ.

    ಚಂದಾಪುರದಿಂದ ಅತ್ತಿಬೆಲೆಯವರೆಗೂ ಟ್ರಾಫಿಕ್‌ ಜಾಮ್‌ (Traffic Jam) ಉಂಟಾಗಿದ್ದು, ವಾಹನ ಸವಾರರು ಕಿಲೋಮೀಟರ್ ಗಟ್ಟಲೇ ದಟ್ಟಣೆಯಲ್ಲಿ ಸಿಲುಕಿದ್ದಾರೆ. ಇದನ್ನೂ ಓದಿ: ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ, ಪೈಲಟ್ ತರಬೇತಿ ಸಂಸ್ಥೆ ಸ್ಥಾಪನೆ – ಬೋಯಿಂಗ್ ಕಂಪನಿಗೆ ಎಂ.ಬಿ.ಪಾಟೀಲ್ ಆಹ್ವಾನ

    ಮಧ್ಯಾಹ್ನ ಮೂರು ಗಂಟೆಯಿಂದಲೇ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಟ್ರಾಫಿಕ್ ದಟ್ಟಣೆ ಹೆಚ್ಚಾಗಿದ್ದು, ವಾಹನಗಳು ನಿಂತಲ್ಲೇ ನಿಂತಿವೆ. ಆದರೂ ಪೊಲೀಸರು (Traffic Police) ತಲೆ ಕೆಡಿಸಿಕೊಳ್ಳದಂತೆ ವರ್ತಿಸುತ್ತಿದ್ದಾರೆ ಎಂದು ಸಾರ್ವಜನಿಕರು ದೂರಿದ್ದಾರೆ. ಇದನ್ನೂ ಓದಿ: ನಮ್ಮ ರಾಜ್ಯವನ್ನು ತಮಿಳುನಾಡಿಗೆ ಅಡ ಇಟ್ಟಿದ್ದಾರೆ; ಸರ್ಕಾರದ ವಿರುದ್ಧ ಹೆಚ್.ಡಿ ರೇವಣ್ಣ ಕಿಡಿ

    ಎಲೆಕ್ಟ್ರಾನ್ ಸಿಟಿಯಿಂದ ಹಳೆ ಚಂದಾಪುರದ ತನಕವೂ ಟ್ರಾಫಿಕ್‌ ದಟ್ಟಣೆ ಹೆಚ್ಚಾಗಿದೆ. ಅತ್ತಿಬೆಲೆ, ಸೂರ್ಯ ನಗರ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲೇ ಈ ಘಟನೆ ನಡೆದಿದ್ದು, ಮೂರು ಠಾಣಾ ವ್ಯಾಪ್ತಿಯ ಪೊಲೀಸರಿಗೂ ತಲೆನೋವು ತಂದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರಮಾಣವಚನ ಹಿನ್ನೆಲೆ ಟ್ರಾಫಿಕ್ ಆತಂಕ

    ಬೆಂಗಳೂರು: ಶನಿವಾರ ಹಾಗೂ ಭಾನುವಾರ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ (CET Exam) ನಡೆಯಲಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಯನ್ನು ನಡೆಸುತ್ತಿದೆ.

    ಈ ಬಾರಿ ಸಿಇಟಿ ಪರೀಕ್ಷೆ ರಾಜ್ಯದ 592 ಕೇಂದ್ರಗಳಲ್ಲಿ ನಡೆಯಲಿದೆ. ಬೆಂಗಳೂರಿನಲ್ಲೇ (Bengaluru) 121 ಪರೀಕ್ಷಾ ಕೇಂದ್ರಗಳಿದ್ದು, ಉಳಿದ ಜಿಲ್ಲೆಗಳಲ್ಲಿ 471 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

    ರಾಜ್ಯಾದ್ಯಂತ ಪರೀಕ್ಷೆಗೆ 2,61,610 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. 592 ಅಬ್ಸವರ್ಸ್‌ಗಳು, 1,184 ವಿಶೇಷ ಸ್ಕ್ವಾಡ್ ಸಿಬ್ಬಂದಿ, 592 ಕಸ್ಟೋಡಿಯನ್, 10,900 ಇನ್ವಿಜಿಲೇಟರ್‌ಗಳು ಸೇರಿ 23,050 ಅಧಿಕಾರಿಗಳು ಪರೀಕ್ಷಾ ಕೇಂದ್ರಕ್ಕೆ ನಿಯೋಜನೆಗೊಂಡಿದ್ದಾರೆ.

    ಮೇ 22ರ ಬೆಳಗ್ಗೆ 11:30ರಿಂದ 12:30ರ ವರೆಗೆ ಹೊರನಾಡು ಹಾಗೂ ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ಬೆಂಗಳೂರು, ಬೆಳಗಾವಿ, ವಿಜಯಪುರ, ಬಳ್ಳಾರಿ ಹಾಗೂ ಮಂಗಳೂರು ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ. ಇದರಡಿ 2,084 ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಇದೇ 28ರಂದು ಹೊಸ ಸಂಸತ್ ಭವನ ಉದ್ಘಾಟಿಸಲಿದ್ದಾರೆ ಮೋದಿ

    ಬೆಂಗಳೂರು ಪರೀಕ್ಷಾ ಅಭ್ಯರ್ಥಿಗಳಿಗೆ ಟ್ರಾಫಿಕ್ ಆತಂಕ: ಸಿಇಟಿ ಪರೀಕ್ಷೆ ನಡೆಯಲಿರುವ ಮೊದಲ ದಿನ ಶನಿವಾರದಂದೇ ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಕಾರ್ಯಕ್ರಮ ನಡೆಸಲು ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

    ಈ ಹಿನ್ನೆಲೆ ರಾಜ್ಯ ಹಾಗೂ ರಾಜಧಾನಿಯ ಮೂಲೆ ಮೂಲೆಗಳಿಂದ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಬರುವ ಸಾಧ್ಯತೆ ಇರುವುದರಿಂದ ನಗರದಲ್ಲಿ ಟ್ರಾಫಿಕ್ ಆಗುವ ಸಾಧ್ಯತೆಯಿದೆ. ಇದೀಗ ಸಿಇಟಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸುತ್ತಿರುವ ಬೆಂಗಳೂರಿನ ಅಭ್ಯರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಟ್ರಾಫಿಕ್ ಜಾಮ್‌ನ ಭೀತಿ ಎದುರಾಗಿದೆ. ಇದನ್ನೂ ಓದಿ: ಇಂದು ಮತ್ತೆ ದೆಹಲಿಯತ್ತ ಸಿದ್ದರಾಮಯ್ಯ, ಡಿಕೆಶಿ- ಸಚಿವರ ಪಟ್ಟಿ ಅಂತಿಮಕ್ಕೆ ಸರ್ಕಸ್

  • ಮಾಜಿ ಪ್ರೇಯಸಿಯಿಂದ ಬ್ಲ್ಯಾಕ್‌ಮೇಲ್- ಟ್ರಾಫಿಕ್ ಜಾಮ್‌ನಲ್ಲಿ ಪತ್ನಿಯನ್ನು ತೊರೆದು ಪತಿ ಪರಾರಿ

    ಮಾಜಿ ಪ್ರೇಯಸಿಯಿಂದ ಬ್ಲ್ಯಾಕ್‌ಮೇಲ್- ಟ್ರಾಫಿಕ್ ಜಾಮ್‌ನಲ್ಲಿ ಪತ್ನಿಯನ್ನು ತೊರೆದು ಪತಿ ಪರಾರಿ

    ಬೆಂಗಳೂರು: ಟ್ರಾಫಿಕ್ ಜಾಮ್‌ನಲ್ಲಿ (Traffic Jam) ನವ ವಿವಾಹಿತ ವರ ತನ್ನ ಪತ್ನಿಯನ್ನು ಬಿಟ್ಟು ಓಡಿ ಹೋದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ.

    ಈ ಘಟನೆ ಬೆಂಗಳೂರಿನ ಮಹದೇವಪುರದ (Mahadevapura) ಟೆಕ್ ಕಾರಿಡಾರ್‌ನಲ್ಲಿ ನಡೆದಿದ್ದು, ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ಮೂಲದ ವರ ವಿಜಯ್ ಜಾರ್ಜ್ (Vijay George) (ಹೆಸರು ಬದಲಾಯಿಸಲಾಗಿದೆ) ಫೆಬ್ರವರಿ 16ರಂದು ಟೆಕ್ ಕಾರಿಡಾರ್‌ನ ಟ್ರಾಫಿಕ್ ಜಾಮ್‌ನಲ್ಲಿ ಕಾರ್ ಸಿಲುಕಿಕೊಂಡ ಸಂದರ್ಭ, ಕಾರಿನ ಬಾಗಿಲು ತೆರೆದು ಪತ್ನಿಯನ್ನು ಬಿಟ್ಟು ಓಡಿ ಹೋಗಿದ್ದಾನೆ. ಇದರಿಂದ ಗಾಬರಿಗೊಂಡ ಪತ್ನಿ ತಾನೂ ಕಾರಿನಿಂದ ಇಳಿದು ಅವನ ಹಿಂದೆ ಓಡಿದ್ದಾಳೆ. ಆದರೆ ಆತ ಅವಳ ಕೈಗೆ ಸಿಗದೆ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

    ವಿಜಯ್ ಜಾರ್ಜ್ ಅವರ ತಂದೆ ಕರ್ನಾಟಕ (Karnataka) ಮತ್ತು ಗೋವಾದಲ್ಲಿ (Goa) ಮ್ಯಾನ್ ಪವರ್ ಏಜೆನ್ಸಿಯನ್ನು ನಡೆಸುತ್ತಿದ್ದರು. ಈ ವಿಷಯವಾಗಿ ವಿಜಯ್ ತನ್ನ ತಂದೆಗೆ ಸಹಾಯ ಮಾಡುತ್ತಿದ್ದ. ಗೋವಾದಲ್ಲಿದ್ದಾಗ ತಮ್ಮ ಕಂಪೆನಿಯ ಕಾರ್ ಚಾಲಕನ ಪತ್ನಿಯ ಜೊತೆ ವಿಜಯ್ ಜಾರ್ಜ್ ಅಕ್ರಮ ಸಂಬಂಧ (Illicit Realtionship) ಹೊಂದಿದ್ದ. ಎರಡು ಮಕ್ಕಳ ತಾಯಿಯಾಗಿದ್ದ ಆ ಮಹಿಳೆ ಅದೇ ಕಂಪನಿಯಲ್ಲಿ ಕ್ಲರ್ಕ್ (Clerk) ಆಗಿ ಕೆಲಸ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

    ತಾಯಿಗೆ ವಿಷಯ ತಿಳಿದ ಬಳಿಕ ಜಾರ್ಜ್  ತಮ್ಮ ಸಂಬಂಧವನ್ನು ಕೊನೆಗೊಳಿಸುವುದಾಗಿ ಹೇಳಿದ್ದ. ಆದರೂ ಜಾರ್ಜ್ ಕದ್ದುಮುಚ್ಚಿ ಮಹಿಳೆಯನ್ನು ಭೇಟಿಯಾಗುತ್ತಿದ್ದ. ಈ ಸಂಬಂಧವನ್ನು ತಡೆಯಲು ಜಾರ್ಜ್ ಕುಟುಂಬವು ಬೇರೆ ಯುವತಿಯೊಡನೆ ಮದುವೆ ನಿಶ್ಚಯಿಸಿದರು. ಮದುವೆಗೆ ಮೊದಲೇ ವಿಜಯ್ ತಮ್ಮ ಪ್ರೇಮದ ಬಗ್ಗೆ ಯುವತಿಯೊಡನೆ ಹೇಳಿಕೊಂಡಿದ್ದ. ಅಲ್ಲದೇ ಆಕೆಯ ಜೊತೆಗಿನ ಸಂಬಂಧವನ್ನು ಕಡಿತಗೊಳಿಸುತ್ತೇನೆ ಎಂದು ಭರವಸೆ ನೀಡಿದ ಬಳಿಕ ಯುವತಿ ಈ ಮದುವೆಗೆ ಒಪ್ಪಿಗೆ ಸೂಚಿಸಿದ್ದರು. ಇದನ್ನೂ ಓದಿ: LACಯಲ್ಲಿ ಸಂಘರ್ಷ, ಭಾರತದಲ್ಲಿ ಉಗ್ರ ದಾಳಿ- ಅಮೆರಿಕ ಗುಪ್ತಚರ ಸಂಸ್ಥೆಯ ಎಚ್ಚರಿಕೆ

     

    ಆದರೆ ವಿಜಯ್ ಜಾರ್ಜ್ ನ ಮಾಜಿ ಪ್ರೇಮಿ ಅವರಿಬ್ಬರ ಖಾಸಗಿ ಕ್ಷಣಗಳ ವೀಡಿಯೋ ಹಾಗೂ ಫೋಟೋಗಳನ್ನು ಇಟ್ಟುಕೊಂಡು ವಿಜಯ್ ಅವರಿಗೆ ಬ್ಲ್ಯಾಕ್‌ಮೇಲ್ (Blackmail) ಮಾಡುತ್ತಿದ್ದರು. ಮದುವೆಯ ನಂತರ ತನ್ನ ಪತ್ನಿಯೊಡನೆ ವಿಜಯ್ ತನ್ನ ಮಾಜಿ ಪ್ರೇಮಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾಳೆಂದು ಹೇಳಿಕೊಂಡಿದ್ದ. ಇದಕ್ಕೆ ಪತ್ನಿ ಹಾಗೂ ಆಕೆಯ ತಂದೆ ಆತನ ಬೆಂಬಲಕ್ಕೆ ನಿಲ್ಲುವುದಾಗಿ ಭರವಸೆ ನೀಡಿದ್ದಳು. ಇದನ್ನೂ ಓದಿ: ಮೊದಲು ನಿಮ್ಮ ದೇಶವನ್ನು ನೋಡಿಕೊಳ್ಳಿ – ಪಾಕಿಸ್ತಾನಕ್ಕೆ ಭಾರತ ವಾರ್ನಿಂಗ್

    ಭರವಸೆಯ ಹೊರತಾಗಿಯೂ, ಮದುವೆಯ ಮರುದಿನ ದಂಪತಿ ಚರ್ಚ್‌ (Church)  ಭೇಟಿ ನೀಡಿ ಹಿಂದಿರುಗುವ ವೇಳೆ ಮಹಿಳೆಯ ಬ್ಲ್ಯಾಕ್‌ಮೇಲ್‌ಗೆ, ಟ್ರಾಫಿಕ್ ಜಾಮ್‌ನಲ್ಲಿ ವಿಜಯ್ ಜಾರ್ಜ್ ಓಡಿಹೋಗಿದ್ದಾನೆ ಎಂದು ಆತನ ಪತ್ನಿ ತಿಳಿಸಿದ್ದಾಳೆ.

    ಈ ಕುರಿತು ಎರಡು ವಾರಗಳಿಗೂ ಹೆಚ್ಚು ಕಾಲ ವಿಜಯ್ ಜಾರ್ಜ್ ಗಾಗಿ ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮಾರ್ಚ್ 5ರಂದು ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ & ವೈಟ್ ಫೋಟೋಶೂಟ್‌ನಲ್ಲಿ ಜಾನ್ವಿ ಕಪೂರ್ ಮಿಂಚಿಂಗ್

  • ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್

    ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್

    ಬೆಂಗಳೂರು: ಹಳೆಯ ಮೈಸೂರು (Mysuru) ರಸ್ತೆ ಕಿರಿದಾಯ್ತು ಎಂದು 8 ಪಥಗಳ ಹೊಸ ಹೆದ್ದಾರಿ (Bengaluru-Mysuru Expressway) ನಿರ್ಮಾಣವಾಗಿದೆ. ಹಿಂದೆ ಹಳೆ ಹೆದ್ದಾರಿಯಲ್ಲಿ ವೀಕೆಂಡ್ ಬಂತು ಎಂದರೆ ಕಿಮೀ ಗಟ್ಟಲೆ ಟ್ರಾಫಿಕ್ ಜಾಮ್ (Traffic Jam) ಉಂಟಾಗುತ್ತಿತ್ತು. ಇದೀಗ ಹಳೆ ಹೆದ್ದಾರಿಯಂತೆ ಹೊಸ ಹೆದ್ದಾರಿಯಲ್ಲೂ ಟ್ರಾಫಿಕ್ ಜಾಮ್ ಆಗಿದೆ.

    ಹೌದು, ಭಾನುವಾರ ಸಂಜೆ 6 ಗಂಟೆ ವೇಳೆಗೆ ಶ್ರೀರಂಗಪಟ್ಟಣದಿಂದ ಮಂಡ್ಯ ನಡುವಿನ ಹೆದ್ದಾರಿಯಲ್ಲಿ ಕಿಮೀ ಗಟ್ಟಲೆ ಟ್ರಾಫಿಕ್ ಬಿಸಿ ಉಂಟಾಗಿದೆ. ಭಾನುವಾರ ಸಂಜೆ ವೇಳೆಗೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಸವಾರರು ತಮ್ಮ ವಾಹನಗಳಲ್ಲೇ ಕಾಲ ಕಳೆದಿದ್ದಾರೆ. ಇದನ್ನೂ ಓದಿ: ಕ್ಷತ್ರಿಯ ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತೇವೆ: ಸಿಎಂ ಭರವಸೆ

    2 ಕಿಮೀ ಗೂ ಹೆಚ್ಚು ಉದ್ದದ ಟ್ರಾಫಿಕ್ ನಿಂದ ಪ್ರಯಾಣಿಕರು ಕಿರಿಕಿರಿ ಅನುಭವಿಸಿದ್ದಾರೆ. ಹೊಸ ಹೆದ್ದಾರಿಯಲ್ಲಿ ಟ್ರಾಫಿಕ್‌ಗೆ ಸಿಲುಕಿ ಜನರು ಹೈರಾಣಾಗಿದ್ದಾರೆ. ಭಾನುವಾರ ಆಗಿರುವುದರಿಂದ ಮೈಸೂರು ಕಡೆ ಹೋದವರು ವಾಪಸ್ ಬೆಂಗಳೂರಿಗೆ ಮರಳಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್‌ಗೆ ಸಿಲುಕಿ ನಿಂತಲ್ಲೇ ಗಂಟೆಗಟ್ಟಲೆ ಕಾರುಗಳಲ್ಲಿಯೇ ಪ್ರಯಾಣಿಕರು ಕಾದಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣ, ಹನುಮಂತ ಇಬ್ಬರೂ ಶ್ರೇಷ್ಠ ರಾಜತಾಂತ್ರಿಕರು: ಜೈಶಂಕರ್‌

    Live Tv 
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಬೆಂಗ್ಳೂರು ಟ್ರಾಫಿಕ್ ತಪ್ಪಿಸಲು ನಯಾ ಪ್ಲಾನ್- 273 ಕೋಟಿ ವೆಚ್ಚದಲ್ಲಿ ಬರಲಿದೆ ಫ್ರೀ ಕಾರಿಡಾರ್ ರಸ್ತೆ

    ಬೆಂಗ್ಳೂರು ಟ್ರಾಫಿಕ್ ತಪ್ಪಿಸಲು ನಯಾ ಪ್ಲಾನ್- 273 ಕೋಟಿ ವೆಚ್ಚದಲ್ಲಿ ಬರಲಿದೆ ಫ್ರೀ ಕಾರಿಡಾರ್ ರಸ್ತೆ

    ಬೆಂಗಳೂರು: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ದುಪ್ಪಟ್ಟಾಗ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಒಂದರಲ್ಲೇ 1 ಕೋಟಿಗೂ ಹೆಚ್ಚು ವಾಹನಗಳಿವೆ. ಈ ಮಧ್ಯೆ ಪ್ರತಿದಿನ ರಸ್ತೆ ಗುಂಡಿಗಳು (Potholes) ಹಾಗೂ ಪಾರ್ಕಿಂಗ್ (Parking) ಸಮಸ್ಯೆ ತಲೆದೂರುತ್ತಿದೆ. ಹೀಗಾಗಿ ನಗರದಲ್ಲಿ ವಾಹನ ಸವಾರರು ಸಂಚಾರ ದಟ್ಟಣೆ ಸಮಸ್ಯೆಯಿಂದಾಗಿ ಪ್ರತಿದಿನ ಪರದಾಡುತ್ತಿದ್ದಾರೆ. ಈ ಕಿರಿಕಿರಿಗೆ ಶಾಶ್ವತ ಪರಿಹಾರಕ್ಕಾಗಿ ಈಗ ಬಿಬಿಎಂಪಿ (BBMP) ಹಾಗೂ ಟ್ರಾಫಿಕ್ ಪೊಲೀಸ್ ಇಲಾಖೆ ನಯಾ ಪ್ಲಾನ್ ರೂಪಿಸಿದೆ.

    ಪಾಲಿಕೆ, ಸಂಚಾರಿ ಪೊಲೀಸರು ಗುರ್ತಿಸಿರುವ ನಗರದ 12 ಪ್ರಮುಖ ರಸ್ತೆಗಳಲ್ಲಿ ಅತಿ ಹೆಚ್ಚು ವಾಹನ ದಟ್ಟಣೆ ಇದೆ. ಹೀಗಾಗಿ ಈ ರಸ್ತೆಗಳಲ್ಲಿ ಟ್ರಾಫಿಕ್ (Bengaluru Traffic) ತಗ್ಗಿಸಲು ಯೋಜನೆ ರೂಪಿಸಲಾಗಿದೆ. 273 ಕೋಟಿ ವೆಚ್ಚದಲ್ಲಿ ಫ್ರೀ ಕಾರಿಡಾರ್ ರಸ್ತೆಗಳನ್ನ ನಿರ್ಮಿಸಲು ಸಜ್ಜಾಗಿದ್ದು, 3 ವರ್ಷದೊಳಗೆ ಈ ಯೋಜನೆ ಮುಗಿಸಲು ಸರ್ಕಾರ ಸೂಚನೆ ನೀಡಿದೆ.

    ಸದ್ಯ ಸಂಚಾರ ಪೊಲೀಸರು ಸಿದ್ಧಪಡಿಸಿರುವ ವರದಿ ಪ್ರಕಾರ, ಮ್ಯಾನ್‍ಹೋಲ್ (Manhole) ಹಾಗೂ ಮಳೆ ನೀರು (Rain Water) ಸರಾಗವಾಗಿ ಹರಿಯದೆ ರಸ್ತೆಯಲ್ಲಿ ನಿಲ್ಲುವುದರಿಂದಲೂ ಟ್ರಾಫಿಕ್ ಸಮಸ್ಯೆ ಜಾಸ್ತಿಯಾಗಿದೆ. ಸಂಚಾರ ಪೊಲೀಸರ ಪ್ರಕಾರ ನಗರದಲ್ಲಿ 11 ಮ್ಯಾನ್‍ಹೋಲ್‍ಗಳು ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆ ಉಂಟು ಮಾಡಿವೆ. ಜೊತೆಗೆ 206 ಕಡೆ ಮಳೆ ನೀರು ರಸ್ತೆಯಲ್ಲಿ ನಿಲ್ಲುತ್ತಿದ್ದು, ಮಳೆಗಾಲದಲ್ಲಿ ವಾಹನಗಳ ಓಡಾಟಕ್ಕೆ ಸಮಸ್ಯೆ ಎದುರಾಗಿದೆ.

    ಯಾವ ರಸ್ತೆಗಳಲ್ಲಿ ಹೆಚ್ಚು ಟ್ರಾಫಿಕ್..!?
    * ಬಳ್ಳಾರಿ ರಸ್ತೆ:- ಚಾಲುಕ್ಯ ವೃತ್ತದಿಂದ ಹೆಬ್ಬಾಳವರೆಗೆ
    * ಹಳೇ ಮದ್ರಾಸ್ ರಸ್ತೆ:- ಟ್ರಿನಿಟಿ ವೃತ್ತದಿಂದ ಕೆ.ಆರ್ ಪುರದವರೆಗೆ
    * ಹಳೇ ವಿಮಾನನಿಲ್ದಾಣ ರಸ್ತೆ:- ಎಎಸ್‍ಸಿ ಕೇಂದ್ರದಿಂದ ಕಾಡುಗೋಡಿವರೆಗೆ
    * ಸರ್ಜಾಪುರ ರಸ್ತೆ:- ಹೊಸೂರು ರಸ್ತೆಯ ಸೇಂಟ್ ಜಾನ್ಸ್ ಆಸ್ಪತ್ರೆಯಿಂದ ಕಾರ್ಮೆಲ್ ರಾಂ ಮೇಲ್ಸೇತುವೆವರೆಗೆ
    * ಹೊಸೂರು ರಸ್ತೆ:- ವೆಲ್ಲಾರ ಜಂಕ್ಷನ್‍ನಿಂದ ಕೇಂದ್ರ ರೇಷ್ಮೆ ಮಂಡಳಿವರೆಗೆ
    * ಬನ್ನೇರುಘಟ್ಟ ರಸ್ತೆ:- ಡೇರಿ ವೃತ್ತದಿಂದ ನೈಸ್ ರಸ್ತೆವರೆಗೆ
    * ಕನಕಪುರ ರಸ್ತೆ:- ಕೆ.ಆರ್ ರಸ್ತೆಯಿಂದ ನೈಸ್ ರಸ್ತೆವರೆಗೆ
    * ಮೈಸೂರು ರಸ್ತೆ:- ಹಡ್ಸನ್ ವೃತ್ತದಿಂದ ನೈಸ್ ರಸ್ತೆವರೆಗೆ
    * ಮಾಗಡಿ ರಸ್ತೆ:- ಹಳೇ ಬಿನ್ನಿಮಿಲ್‍ನಿಂದ ನೈಸ್ ರಸ್ತೆವರೆಗೆ
    * ತುಮಕೂರು ರಸ್ತೆ:- ಓಕಳಿಪುರದಿಂದ ಗೊರಗುಂಟೆಪಾಳ್ಯವರೆಗೆ
    * ವೆಸ್ಟ್ ಆಫ್ ಕಾರ್ಡ್ ರಸ್ತೆ:- ಸ್ಯಾಂಡಲ್ ಸೋಪ್ ಕಾರ್ಖಾನೆಯಿಂದ ಮೈಸೂರು ರಸ್ತೆವರೆಗೆ
    * ಹೊರವರ್ತುಲ ರಸ್ತೆ:- ಹೆಬ್ಬಾಳದಿಂದ ಕೆಆರ್ ಪುರ, ಕೇಂದ್ರ ರೇಷ್ಮೆ ಮಂಡಳಿ, ನಾಯಂಡಹಳ್ಳಿ ಜಂಕ್ಷನ್ ಮಾರ್ಗವಾಗಿ ಗೊರಗುಂಟೆ ಪಾಳ್ಯವರೆಗೆ ಟ್ರಾಫಿಕ್ ಜಾಮ್ ಹೆಚ್ಚಿರುತ್ತದೆ ಎಂದು ಗುರುತಿಸಲಾಗಿದೆ.

    ಹೀಗಾಗಿ ಈ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವುದನ್ನು ತಡೆಯಲು ಗ್ರೇಟಿಂಗ್‍ಗಳ ಅಳವಡಿಕೆ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ 273 ಕೋಟಿ ರೂಪಾಯಿ ವೆಚ್ಚದಲ್ಲಿ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಿಸಲಾಗುವುದು ಅಂತ ಬಿಬಿಎಂಪಿ ವಿಶೇಷ ಆಯುಕ್ತ ರವೀಂದ್ರ ತಿಳಿಸಿದ್ದಾರೆ. ಒಟ್ಟಿನಲ್ಲಿ ಸದ್ಯದಲ್ಲೆ ಈ ಕೆಲಸವೂ ಆರಂಭವಾಗಲಿದ್ದು, ಮೂರು ವರ್ಷದಲ್ಲಿ ಟ್ರಾಫಿಕ್ ದಟ್ಟಣೆಗೆ ಕಡಿವಾಣ ಬೀಳುತ್ತಾ ಅಥವಾ ಇದು ಮಗದೊಂದು ಭರವಸೆ ಕೊಟ್ಟು ಕೈತೊಳೆದುಕೊಳ್ಳುವ ಯೋಜನೆಯ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k