Tag: ಟ್ರಾಫಿಕ್ ಪೊಲೀಸರು

  • ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಡಿಎಲ್ ಅಮಾನತು!

    ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದ್ರೆ ಡಿಎಲ್ ಅಮಾನತು!

    ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ಚಲಾಯಿಸುವವರಿಗೆ ಬಿಸಿ ಮುಟ್ಟಿಸಲು ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ. ಇನ್ಮುಂದೆ ಫುಟ್‌ಪಾತ್‌ನಲ್ಲಿ ರೈಡಿಂಗ್ ಮಾಡಿದರೆ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

    ಫುಟ್‌ಪಾತ್ ಮೇಲೆ ಬೈಕ್, ಕಾರು ಓಡಿಸುವ ಸವಾರರಿಗೆ ಸಂಚಾರ ವಿಭಾಗದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪಾದಾಚಾರಿ ರಸ್ತೆಯಲ್ಲಿ ವಾಹನ ಚಲಾಯಿಸಿದರೆ ಡಿಎಲ್ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ.

    ಇದರ ಜೊತೆಗೆ ಕೇಸ್ ದಾಖಲಿಸಿ ಸೂಕ್ತ ದಂಡ ವಿಧಿಸಲಿದ್ದಾರೆ. ಫುಟ್‌ಪಾತ್ ರೈಡಿಂಗ್ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ಪೊಲೀಸರ ನಿರ್ಧಾರಿಸಿದ್ದಾರೆ. ಪಾದಚಾರಿಗಳ ಬಳಕೆಗೆ ಫುಟ್‌ಪಾತ್ ಇರೋದು. ಅಲ್ಲಿ ವಾಹನ ಚಲಾಯಿಸುವಂತಿಲ್ಲ ಎಂದು ಸೂಚಿಸಿದ್ದಾರೆ.

    ಪಾದಚಾರಿಗಳು ಹೊರತುಪಡಿಸಿ ಬೇರೆ ಯಾರೇ ಬಳಸಿದರೂ ಕ್ರಮ ಆಗಲಿದೆ. ಪಾದಚಾರಿಗಳ ಸುಗಮ ಓಡಾಟಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪೊಲೀಸರು ಕಠಿಣ ನಿಯಮ ರೂಪಿಸಿದ್ದಾರೆ.

    ಇತ್ತೀಚೆಗೆ ಟ್ರಾಫಿಕ್‌ನಿಂದ ತಪ್ಪಿಸಿಕೊಳ್ಳಲು ನಿಯಮ ಉಲ್ಲಂಘಿಸಿ ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿಕೊಂಡು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಪಾದಚಾರಿಗಳಿಗೆ ಓಡಾಟಕ್ಕೆ ಕಿರಿಕಿರಿಯಾಗುತ್ತಿದೆ. ಫುಟ್‌ಪಾತ್‌ನಲ್ಲಿ ಬೈಕ್ ಅಷ್ಟೇ ಅಲ್ಲ, ಕೆಲವರು ಕಾರುಗಳನ್ನೂ ಚಲಾಯಿಸಿರುವುದು ಕಂಡುಬಂದಿದೆ. ಇದೆಲ್ಲವನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಟ್ರಾಫಿಕ್ ಪೊಲೀಸರು ಮುಂದಾಗಿದ್ದಾರೆ.

  • ವಾಹನ ತಪಾಸಣೆ ವೇಳೆ ಬ್ಯಾರಿಕೇಡ್ ಎಳೆದ ಪೊಲೀಸರು – ಬೈಕ್‌ನಿಂದ ಬಿದ್ದ ಮಹಿಳೆ ಕೈ ಮೇಲೆ ಹರಿದ ಟಿಪ್ಪರ್

    ವಾಹನ ತಪಾಸಣೆ ವೇಳೆ ಬ್ಯಾರಿಕೇಡ್ ಎಳೆದ ಪೊಲೀಸರು – ಬೈಕ್‌ನಿಂದ ಬಿದ್ದ ಮಹಿಳೆ ಕೈ ಮೇಲೆ ಹರಿದ ಟಿಪ್ಪರ್

    ಮೈಸೂರು: ವಾಹನ ತಪಾಸಣೆ ವೇಳೆ ಸಂಚಾರಿ ಪೊಲೀಸರಿಂದ ಬ್ಯಾರಿಕೇಡ್ ಎಳೆದ ವೇಳೆ ಬೈಕ್‌ನಲ್ಲಿ ಹೋಗುತ್ತಿದ್ದ ಮಹಿಳೆ ಕೆಳಗೆ ಬಿದ್ದು, ಕೈ ಮೇಲೆ ಟಿಪ್ಪರ್ ಹರಿದಿರುವ ಘಟನೆ ಮೈಸೂರಿನಲ್ಲಿ (Mysuru) ನಡೆದಿದೆ.

    ಮೈಸೂರಿನ ಆರ್‌ಎಂಸಿ ವೃತ್ತದಲ್ಲಿ ಈ ಘಟನೆ ನಡೆದಿದೆ. ದೇವೇಗೌಡ ಸರ್ಕಲ್ ಕಡೆಯಿಂದ ಆರ್‌ಎಂಸಿ ವೃತ್ತದ ಕಡೆಗೆ ಬೈಕ್ ಬೈಕ್ ಹೋಗುತ್ತಿತ್ತು. ಬೈಕ್‌ನಲ್ಲಿ ಹೋಗುತ್ತಿದ್ದ ಸವಾರರು ಹೆಲ್ಮೆಟ್ ಧರಿಸಿರಲಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಮೆಕ್ಸಿಕೊದಲ್ಲಿ ಟ್ರಕ್‌ ಅಪಘಾತಕ್ಕೆ 10 ವಲಸಿಗರು ಬಲಿ

    ಹೆಲ್ಮೆಟ್ ಧರಿಸದ್ದಕ್ಕೆ ಪೊಲೀಸರು ತಡೆಯಲು ಮುಂದಾಗಿದ್ದಾರೆ. ಈ ವೇಳೆ ರಸ್ತೆಗೆ ಬ್ಯಾರಿಕೇಡ್ ಎಳೆದಿದ್ದಾರೆ. ಈ ವೇಳೆ ಬೈಕ್‌ನ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದಿದ್ದಾರೆ. ಆಗ ಅವರ ಎಡಗೈ ಮೇಲೆ ಟಿಪ್ಪರ್ ಚಕ್ರ ಹರಿದಿದೆ.

    ಘಟನೆಯಲ್ಲಿ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಸಂಚಾರಿ ಪೊಲೀಸರ ನಡೆಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಾಲಬಾಧೆ ತಾಳಲಾರದೇ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ

    2021 ರಲ್ಲೂ ಇದೇ ರೀತಿಯ ಅವಘಡ ನಡೆದಿತ್ತು. ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಪಘಾತ ಸಂಭವಿಸಿ, ಬೈಕ್ ಸವಾರನೊಬ್ಬ ಆಯತಪ್ಪಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ. ಇದರಿಂದ ರೊಚ್ಚಿಗೆದ್ದಿದ್ದ ಸಾರ್ವಜನಿಕರು ಪೊಲೀಸರಿಗೆ ಬಟ್ಟೆ ಹರಿದು ಥಳಿಸಿದ್ದರು. ಮೈಸೂರಿನ ವಿ.ವಿ.ಪುರಂ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ

    ದೆಹಲಿಯಲ್ಲಿ ಸೀಟ್ ಬೆಲ್ಟ್ ಕಡ್ಡಾಯ – ಧರಿಸದಿದ್ದರೆ 1,000ರೂ. ದಂಡ

    ನವದೆಹಲಿ: ಕಾರಿನಲ್ಲಿ ಪ್ರಯಾಣಿಸುವಾಗ ಹಿಂಬದಿ ಸೀಟ್ ಬೆಲ್ಟ್ ಧರಿಸದೇ ಇರುವ ಜನರಿಗೆ ದೆಹಲಿ ಟ್ರಾಫಿಕ್ ಪೊಲೀಸರು‌ (Delhi Traffic Police) 1,000 ರೂಪಾಯಿ ದಂಡವನ್ನು(Penalty) ವಿಧಿಸಿದ್ದಾರೆ.

    ಸೆಪ್ಟೆಂಬರ್ 4 ರಂದು ನಡೆದ ಭೀಕರ ಕಾರು ಅಪಘಾತದಲ್ಲಿ ಟಾಟಾ ಸನ್ಸ್‌ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ(Cyrus Mistry) ಅವರು ನಿಧನರಾದರು. ಈ ಘಟನೆಯ ಬಳಿಕ ಸೀಟ್ ಬೆಲ್ಟ್ (Seat Belts) ಧರಿಸದೇ ಹಿಂದಿನ ಸೀಟಿನಲ್ಲಿ ಕುಳಿತದ್ದರಿಂದ ಸೈರಸ್ ಮಿಸ್ತ್ರಿ ಅವರು ಸಾವನ್ನಪ್ಪಿದ್ದಾರೆ ಎಂದೂ ಕೂಡ ಹೇಳಲಾಗಿತ್ತು. ಇದರ ಬೆನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ: ವಿಚಾರಣೆ ವೇಳೆ ‘ಬೆತ್ತಲೆ ಫೋಟೋ’ ನಂದಲ್ಲ ಎಂದ ಬಾಲಿವುಡ್ ನಟ ರಣವೀರ್ ಸಿಂಗ್

    ದೆಹಲಿ ಟ್ರಾಫಿಕ್ ಪೊಲೀಸರು ಹಿಂದಿನ ಸೀಟ್‍ಗಳಲ್ಲಿ ಸೀಟ್ ಬೆಲ್ಟ್ ಧರಿಸುವ ನಿಯಮ ಕಡ್ಡಾಯ ಎಂದು ಜನರಿಗೆ ತಿಳಿಸಲು ಅಭಿಯಾನವನ್ನು ಪ್ರಾರಂಭಿಸಿದರು. ಒಂದು ವೇಳೆ ಸೀಟ್ ಬೆಲ್ಟ್ ಧರಿಸದೇ ಹೋದರೆ 1,000 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೆನಡಾದಲ್ಲಿ ಹಿಂದೂ ದೇವಾಲಯ ವಿರೂಪ – ಭಾರತ ವಿರೋಧಿ ಬರಹದ ಮೂಲಕ ದ್ವೇಷ ಬಿತ್ತನೆ

    ಬುಧವಾರ ಪೊಲೀಸರು ಕೇಂದ್ರ ದೆಹಲಿಯ ಕನ್ನಾಟ್ ಪ್ಲೇಸ್(Connaught Place) ಬಳಿಯ ಬರಾಖಂಬಾ ರಸ್ತೆಯಲ್ಲಿ(Barakhamba Road) ತಪಾಸಣೆ ನಡೆಸಿದರು. ಈ ವೇಳೆ ಅನೇಕ ಟ್ರಾಫಿಕ್ ಪೊಲೀಸರು ತಮ್ಮ ಕೈಯಲ್ಲಿ “ಹಿಂಬದಿ ಸೀಟ್ ಬೆಲ್ಟ್ ಧರಿಸುವುದು ಕಡ್ಡಾಯ ಎಂಬ ಫಲಕವನ್ನು ಹಿಡಿದುಕೊಂಡಿದ್ದರು. ನಗರದಾದ್ಯಂತ 10 ದಿನಗಳ ಕಾಲ ಟ್ರಾಫಿಕ್ ಪೊಲೀಸರು ಈ ಅಭಿಯಾನವನ್ನು ನಡೆಸಲಿದ್ದು, ಹಿಂಬದಿ ಸೀಟ್ ಬೆಲ್ಟ್ ಧರಿಸುವುದರ ಬಗೆಗಿನ ಮಹತ್ವವನ್ನು ಜನರಿಗೆ ತಿಳಿಸಲಿದ್ದಾರೆ.

    2019ರಿಂದಲೇ ಪ್ರಯಾಣಿಕರು ಹಿಂಬದಿ ಸೀಟ್ ಬೆಲ್ಟ್‌ಗಳನ್ನು ಧರಿಸುವುದು ಕಡ್ಡಾಯವಾಗಿದ್ದರೂ, ಸಾಕಷ್ಟು ಮಂದಿ ಈ ನಿಯಮವನ್ನು ಪಾಲಿಸುತ್ತಿಲ್ಲ.

    Live Tv
    [brid partner=56869869 player=32851 video=960834 autoplay=true]

  • ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ವಾಹನ ಸವಾರರಿಗೆ ಗುಡ್ ನ್ಯೂಸ್ – ಟ್ರಾಫಿಕ್ ಪೊಲೀಸರು ವಾಹನಗಳನ್ನು ತಡೆದು ದಾಖಲೆ ಪರಿಶೀಲಿಸುವಂತಿಲ್ಲ

    ಬೆಂಗಳೂರು: ನಗರದಲ್ಲಿ ಕೇವಲ ದಾಖಲೆ ಪರಿಶೀಲನೆಗೆ ಇನ್ಮುಂದೆ ಟ್ರಾಫಿಕ್ ಪೊಲೀಸರು ಗಾಡಿಯನ್ನು ನಿಲ್ಲಿಸ ಬಾರದು. ಕೇವಲ ಟ್ರಾಫಿಕ್ ರೂಲ್ಸ್‌ನ್ನು ಉಲ್ಲಂಘಿಸಿದವರ ವಾಹನಗಳನ್ನು ಮಾತ್ರ ಸ್ಟಾಪ್ ಮಾಡುವಂತೆ ಟ್ರಾಫಿಕ್ ಪೊಲೀಸರಿಗೆ ಖುದ್ದು ಡಿಜಿ & ಐಜಿಪಿ ಪ್ರವೀಣ್ ಸೂದ್ ಸೂಚನೆ ಹೊರಡಿಸಿದ್ದಾರೆ.

    ಈ ಬಗ್ಗೆ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿರುವ ಪ್ರವೀಣ್ ಸೂದ್, ನಗರದಲ್ಲಿ ವಾಹನಗಳ ತಡೆದು ಪರಿಶೀಲನೆ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ರಸ್ತೆಯಲ್ಲಿ ಬರುವ ವಾಹನಗಳನ್ನು ಸುಖಾಸುಮ್ಮನೆ ತಡೆದು ವಾಹನಗಳ ಪರಿಶೀಲನೆ ನಡೆಸುವಂತಿಲ್ಲ. ಡ್ರಿಂಕ್ ಆಂಡ್ ಡ್ರೈವ್ ಮಾಡುವ ವಾಹನಗಳಿಗೆ ಮಾತ್ರ ತಪಾಸಣೆ ನಡೆಸಿ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡುವಂತಹ ವಾಹನಗಳನ್ನು ತಡೆದು ಪರಶೀಲಿಸಿ ಎಂದು ನಗರದ ಪೊಲೀಸ್ ಕಮೀಷನರ್ ಹಾಗೂ ಟ್ರಾಫಿಕ್ ಜಂಟಿ ಆಯುಕ್ತರನ್ನು ಟ್ಯಾಗ್ ಮಾಡಿ ಡಿಜಿಪಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?

    ಬೆಂಗಳೂರಿನಲ್ಲಿ ಟ್ರಾಫಿಕ್ ಪೊಲೀಸರ ದಂಡ ಕಲೆಕ್ಷನ್ ಎಫೆಕ್ಟ್‌ನಿಂದಲೇ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ. ಎಲ್ಲೆಂದರಲ್ಲಿ ರೂಲ್ಸ್ ಉಲ್ಲಂಘನೆ ಮಾಡದೇ ಇದ್ರೂ ಟ್ರಾಫಿಕ್ ಪೊಲೀಸರು ವಾಹನ ಅಡ್ಡ ಹಾಕ್ತಾರೆ ಎಂದು ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿಬಂದಿತ್ತು. ನಿಯಮಗಳು ತಮಗೆ ಸಂಬಂಧವಿಲ್ಲವೆಂಬಂತೆ ವರ್ತಿಸುತ್ತಿರುವ ಬಹುತೇಕ ಸಂಚಾರ ಪೊಲೀಸರು, ದಾಖಲೆಗಳ ಪರಿಶೀಲನೆ ನೆಪದಲ್ಲಿ ಸಿಕ್ಕ ಸಿಕ್ಕ ವಾಹನಗಳನ್ನು ಅಡ್ಡಗಟ್ಟುತ್ತಿರುವುದು ಜನರ ಸಿಟ್ಟಿಗೆ ಕಾರಣವಾಗಿತ್ತು. ಸಾರ್ವಜನಿಕರು ಟ್ವೀಟ್ ಮೂಲಕ ಪೊಲೀಸ್ ಮಹಾನಿರ್ದೇಶಕರಿಗೆ ಈ ಬಗ್ಗೆ ದೂರು ದಾಖಲಿಸಿದ್ದರು. ಹಾಗಾಗಿ ಟ್ವೀಟ್ ಮೂಲಕ ಎಲ್ಲೆಂದರಲ್ಲಿ ದಾಖಲೆಯ ಪರಿಶೀಲನೆ ನೆಪದಲ್ಲಿ ಗಾಡಿಯನ್ನು ನಿಲ್ಲಿಸುವಂತಿಲ್ಲ. ಈ ಬಗ್ಗೆ ಬೆಂಗಳೂರು ನಗರ ಕಮೀಷನರ್‌ಗೆ ಹಾಗೂ ಟ್ರಾಫಿಕ್ ಪೊಲೀಸರಿಗೆ ತಕ್ಷಣ ಜಾರಿಗೊಳಿಸುವಂತೆ ಸೂಚನೆ ಕೊಡುತ್ತೇನೆ ಎಂದು ಬೆಂಗಳೂರಿಗರಿಗೆ ಪ್ರವೀಣ್ ಸೂದ್ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಜುಲೈ 1 ರಿಂದ ಟೋಲ್ ಶುಲ್ಕ ಹೆಚ್ಚಳ

    ಮೋಟಾರು ವಾಹನಗಳ ಕಾಯ್ದೆ ಏನು ಹೇಳುತ್ತೆ?
    ಮೋಟಾರು ವಾಹನಗಳ ಕಾಯ್ದೆಯಡಿ ದಾಖಲೆ ಪರಿಶೀಲನೆ ನೆಪದಲ್ಲಿ ಎಲ್ಲೆಂದರಲ್ಲಿ ಕೈ ಹಿಡಿದು ವಾಹನ ಅಡ್ಡ ಹಾಕುವಂತಿಲ್ಲ. ಕಣ್ಣಿಗೆ ಕಾಣುವಂತೆ ರೂಲ್ಸ್ ಬ್ರೇಕ್ ಮಾಡಿದರೆ ಮಾತ್ರ ವಾಹನ ಸವಾರರನ್ನು ಹಿಡಿಯಬೇಕು. ಹಿಡಿದು ಪರಿಶೀಲನೆ ನಡೆಸಿ ದಂಡ ವಿಧಿಸಬಹುದು.

    Live Tv

  • ಪೊಲೀಸರ ಕಣ್ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ- ಕಣ್ಣು ಕಳ್ಕೊಂಡ ಯುವಕ

    ಪೊಲೀಸರ ಕಣ್ತಪ್ಪಿಸಲು ಹೋಗಿ ಲಾರಿಗೆ ಡಿಕ್ಕಿ- ಕಣ್ಣು ಕಳ್ಕೊಂಡ ಯುವಕ

    ಬೆಂಗಳೂರು: ದಂಡ ಹಾಕುತ್ತಾರೆಂದು ಟ್ರಾಫಿಕ್ ಪೊಲೀಸರ ಕಣ್ತಪ್ಪಿಸಲು ಹೋಗಿ ಬೈಕ್ ಸವಾರ ಲಾರಿಗೆ ಡಿಕ್ಕಿ ಹೊಡೆದು ಕಣ್ಣು ಕಳೆದುಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ.

    ಕೆಂಗೇರಿಯ ವಿಷ್ಣುವರ್ಧನ್ ಸಮಾಧಿ ರಸ್ತೆ ಬಳಿ ಶುಕ್ರವಾರ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಟ್ರಾಫಿಕ್ ಪೊಲೀಸರಿಂದ ಕಣ್ಣು ತಪ್ಪಿಸಿಕೊಳ್ಳಲು ಹೋಗಿ ಬೈಕ್ ಸವಾರ ತನ್ನ ಕಣ್ಣೇ ಕಳೆದುಕೊಂಡು ಅವಾಂತರ ಮಾಡಿಕೊಂಡಿದ್ದಾನೆ.

    ರಸ್ತೆ ಅಪಘಾತದಿಂದ ಉಬ್ರಾನ್ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು, ಎರಡೂ ಕಣ್ಣುಗಳನ್ನು ಕಳೆದುಕೊಂಡಿರುವ ಸಾಧ್ಯತೆ ಇದೆ. ಸದ್ಯ ಉಬ್ರಾನ್‍ಗೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಕುಟುಂಬಸ್ಥರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಡ್ರಂಕ್ & ಡ್ರೈವ್ ಕೇಸ್‍ಗಳಿಗೆ ತಟ್ಟಿದ ಕೊರೊನಾ ಬಿಸಿ

    ಡ್ರಂಕ್ & ಡ್ರೈವ್ ಕೇಸ್‍ಗಳಿಗೆ ತಟ್ಟಿದ ಕೊರೊನಾ ಬಿಸಿ

    ಬೆಂಗಳೂರು: ಡೆಡ್ಲಿ ಕೊರೊನಾ ಭೀತಿಯ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ದಿನಕ್ಕೆ ನೂರಾರು ಸಂಖ್ಯೆಯಲ್ಲಿ ಪತ್ತೆಯಾಗುತ್ತಿದ್ದ ಡ್ರಂಕ್ & ಡ್ರೈವ್ ಕೇಸ್‍ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿವೆ.

    ಕೊರೊನಾ ಎಫೆಕ್ಟ್ ಹಂತ ಹಂತವಾಗಿ ಎಲ್ಲಾ ವಲಯಗಳಿಗೂ ತಟ್ಟುತ್ತಿದೆ. ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಪತ್ತೆಯಾದವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಡಿಡಿ ಕೇಸ್‍ಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿವೆ. ವಾಹನ ಸವಾರರಿಂದ ಎಲ್ಲಿ ನಮಗೆ ಕೊರೊನಾ ಬರುತ್ತೋ ಎನ್ನುವ ಭೀತಿಯಲ್ಲಿ ಟ್ರಾಫಿಕ್ ಪೊಲೀಸರು ಡಿಡಿ ಚೆಕ್ ಮಾಡುವುದಕ್ಕೆ ಹಿಂದೇಟು ಹಾಕಿದರು.

    ಅಲ್ಲದೆ ವಾಹನ ಸವಾರರು ಕೂಡ ಒಂದೇ ಅಲ್ಕೋಮೀಟರಿನಲ್ಲಿ ಎಲ್ಲರಿಗೂ ಚೆಕ್ ಮಾಡುತ್ತಾರೆ. ಹೀಗಾಗಿ ಬೇರೆ ವಾಹನ ಸವಾರರಿಂದ ನಮಗೂ ವೈರಸ್ ಬರುವ ಭೀತಿ ಇದೆ ಎಂದು ಡಿಡಿ ಚೆಕ್ ಮಾಡಿಸಿಕೊಳ್ಳುವುದಕ್ಕೆ ವಾಹನ ಸವಾರರು ಕೂಡ ಹಿಂದೇಟು ಹಾಕಿದರು. ಪ್ರಮುಖವಾಗಿ ಪೊಲೀಸರು ಮಾಸ್ಕ್ ಇಲ್ಲದೇ ಕೆಲಸ ಮಾಡುವುದಕ್ಕೆ ಬೇಸರ ವ್ಯಕ್ತಪಡಿಸಿ, ಮಾಸ್ಕ್ ಕೊಡಿಸುವಂತೆ ಮೇಲಾಧಿಕಾರಿಗಳ ಬಳಿ ಮನವಿ ಮಾಡಿಕೊಂಡಿದ್ದರು.

    ಇದನ್ನು ಅರಿತ ಪೊಲೀಸ್ ಇಲಾಖೆಯೇ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ಧರಿಸಿ ಡಿಡಿ ಚೆಕ್ ಮಾಡುವಂತೆ ಆದೇಶ ಹೊರಡಿಸಿ ಇಲಾಖೆ ಕಡೆಯಿಂದ ಮಾಸ್ಕ್‍ಗಳನ್ನು ನೀಡಿತ್ತು. ಇಷ್ಟದ್ರು ಕಳೆದ ಒಂದು ವಾರದಿಂದೀಚೆಗೆ ಡಿಡಿ ಕೇಸ್‍ಗಳ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ದಿನಕ್ಕೆ 400-500 ಕೇಸ್‍ಗಳು ಬುಕ್ ಆಗುತ್ತಿದ್ದ ಜಾಗದಲ್ಲಿ ದಿನಕ್ಕೆ ಕೇವಲ 30-40 ಕೇಸ್‍ಗಳು ಮಾತ್ರ ಪತ್ತೆಯಾಗುತ್ತಿವೆ. ಕಳೆದ ಶನಿವಾರ 494 ಡ್ರಂಕ್ & ಡ್ರೈವ್ ಕೇಸ್‍ಗಳು ಬುಕ್ ಆಗಿದ್ರೆ, ಈ ವಾರ ಕೇವಲ 28 ಕೇಸ್‍ಗಳು ಮಾತ್ರ ಬುಕ್ ಆಗಿವೆ.

  • ಕೊರೊನಾ ಭೀತಿ ಎಫೆಕ್ಟ್ – ಟ್ರಾಫಿಕ್ ಪೊಲೀಸರಿಗೆ ಖಡಕ್ ಆದೇಶ

    ಕೊರೊನಾ ಭೀತಿ ಎಫೆಕ್ಟ್ – ಟ್ರಾಫಿಕ್ ಪೊಲೀಸರಿಗೆ ಖಡಕ್ ಆದೇಶ

    ಬೆಂಗಳೂರು: ಕೊರೊನಾ ವೈರಸ್ ಕೇಸ್‍ಗಳ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಂಗಳೂರು ಟ್ರಾಫಿಕ್ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಸದಾ ಜನರ ನಡುವೆ ಕೆಲಸ ಮಾಡುವ ಟ್ರಾಫಿಕ್ ಪೊಲೀಸರಿಗೆ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಖಡಕ್ ಆದೇಶ ನೀಡಿದ್ದಾರೆ.

    ಠಾಣೆಗೆ ಬರುವವರನ್ನು ಬಾಗಿಲಲ್ಲೇ ತಡೆದು ಸ್ಯಾನಿಟೈಸರ್ ಹಾಕಿ ಒಳಗೆ ಬಿಡಬೇಕು. ಯಾವುದೇ ವ್ಯಕ್ತಿಯೊಂದಿಗೆ ಮಾತಾಡಬೇಕಾದರು ಕನಿಷ್ಟ ಮೂರು ಅಡಿ ದೂರದಲ್ಲಿ ನಿಂತು ಮಾತಾಡಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕರ್ವತ್ಯ ನಿರ್ವಹಿಸಬೇಕು. ಯಾವುದೇ ಸಿಬ್ಬಂದಿಗೆ ಕೆಮ್ಮು, ನೆಗಡಿ, ಶೀತ, ಜ್ವರದಂತ ಲಕ್ಷಣಗಳು ಕಾಣಿಸಿಕೊಂಡರೆ ಆ ಸಿಬ್ಬಂದಿ ಕಡ್ಡಯವಾಗಿ ರಜೆ ತಗೋಬೇಕು ಎಂದು ರವಿಕಾಂತೇಗೌಡ ಆದೇಶಿಸಿದ್ದಾರೆ.

    ರವಿಕಾಂತೇಗೌಡ ಅವರ ಈ ಆದೇಶ ಎಲ್ಲಾ ಸಿಬ್ಬಂದಿ ಪಾಲಿಸುತ್ತಿಲ್ಲ. ಬಹುತೇಕರು ಯಾವುದೇ ಮಾಸ್ಕ್ ಇಲ್ಲದೇ ಓಡಾಡುತ್ತಿದ್ದಾರೆ. ಠಾಣೆಗಳಲ್ಲೂ ಕೂಡ ಮಾಸ್ಕ್ ಇಲ್ಲದೇ ಕೆಲಸ ನಿರ್ವಹಿಸುತ್ತಿರುವುದು ಕಂಡು ಬಂದಿದ್ದು, ಮಾಸ್ಕ್ ಮತ್ತು ಸ್ಯಾನಿಟೈಜರ್ ಖರೀದಿಗೆ ನಾವೇ ಹಣ ಹಾಕಿಕೊಳ್ಳಬೇಕು ಎಂದು ಕೆಲ ಸಿಬ್ಬಂದಿ ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಕೆಲ ಸಿಬ್ಬಂದಿ ಕೂಡ ಕೊರೊನಾ ಬಗ್ಗೆ ಆತಂಕ ವ್ಯಕ್ತಪಡಿಸಿದ್ದು, ಮುಕ್ತವಾಗಿ ಕೆಲಸ ನಿರ್ವಹಿಸುವುದಕ್ಕೆ ಹಿಂದೇಟು ಹಾಕುತ್ತಿರುವುದು ಕಂಡುಬಂದಿದೆ.

  • ಕೊರೊನಾ ಬರುತ್ತೆ ಊದಲ್ಲ ಅಂದ್ರೆ ಊದಲ್ಲ- ಕುಡುಕರ ಪಟ್ಟು

    ಕೊರೊನಾ ಬರುತ್ತೆ ಊದಲ್ಲ ಅಂದ್ರೆ ಊದಲ್ಲ- ಕುಡುಕರ ಪಟ್ಟು

    ಬೆಂಗಳೂರು: ಕೊರೊನಾ ಎಫೆಕ್ಟ್, ಕುಡುಕರಿಗೂ ತಟ್ಟಿದ್ದು, ಮದ್ಯಪಾನ ಮಾಡಿ ವಾಹನ ಓಡಿಸುವವರು ಟ್ರಾಫಿಕ್ ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದ್ದಾರೆ. ಸರ್.. ನಮ್ಮನ್ನ ಬಿಟ್ಬಿಡಿ. ಡ್ರಿಂಕ್ ಆಂಡ್ ಡ್ರೈವ್ ಮಷೀನ್‍ಗೆ ಊದಿದ್ರೆ ನಮ್ಗೂ ಕೊರೊನಾ ವೈರಸ್ ಬರುವ ಸಾಧ್ಯತೆ ಇದೆ. ನಾವು ಊದಲ್ಲ ಅಂದ್ರೆ ಊದಲ್ಲ ಎಂದು ಪಟ್ಟು ಹಿಡಿದಿದ್ದಾರೆ.

    ಬೆಂಗಳೂರಿನ ಹಲಸೂರು ರಸ್ತೆಯಲ್ಲಿ ಟ್ರಾಫಿಕ್ ಪೊಲೀಸರು ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣಗಳ ಕುರಿತು ತಪಾಸಣೆ ಮಾಡುತ್ತಿದ್ದ ವೇಳೆ ಕೆಲವರು ಈ ರೀತಿ ಹೇಳುತ್ತಿದ್ದರು. ಕೆಲವರು ಮಷೀನ್‍ಗೆ ಊದಿ ಪೊಲೀಸರಿಗೆ ಸಹಕರಿಸಿದರೆ, ಇನ್ನೂ ಕೆಲವರು ಬಿಟ್ಬಿಡಿ ಸರ್.. ಊದಿದರೆ ನಮಗೂ ಕೊರೊನಾ ಬರುವ ಸಾಧ್ಯತೆ ಇದೆ ಎನ್ನುತ್ತಿದ್ದರು.

    ಉಸಿರಾಟ ಹಾಗೂ ಸ್ಪರ್ಶದಿಂದ ವೈರಸ್ ಹರಡಬಹುದು ಎಂಬ ಆತಂಕದಿಂದ ತಪಾಸಣಾ ಮಷೀನ್ ಗೆ ಊದಲು ಹಿಂದೇಟು ಹಾಕುತ್ತಿದ್ದಾರೆ. ಕೆಲ ದಿನಗಳಿಂದ ಡ್ರಿಂಕ್ ಆ್ಯಂಡ್ ಡ್ರೈವ್ ತಪಾಸಣೆಯನ್ನು ಸಂಚಾರಿ ಪೊಲೀಸರು ತಾತ್ಕಾಲಿಕವಾಗಿ ನಿಲ್ಲಿಸಿದ್ದರು. ಹೀಗಾಗಿ ಕೆಲ ಕುಡುಕರು ಫುಲ್ ಬಿಂದಾಸ್ ಆಗಿದ್ದರು. ಆದರೆ ಸಂಚಾರಿ ಪೊಲೀಸರು ಇದೀಗ ಮತ್ತೆ ಫೀಲ್ಡ್ ಗೆ ಇಳಿದಿದ್ದು, ವಾಹನ ಸವಾರರು ಸಂಚಾರಿ ಪೊಲೀಸರಿಗೆ ಸಹಕರಿಸುತ್ತಿಲ್ಲ. ಹೀಗಾಗಿ ರಾತ್ರಿ ಕುಡುಕರನ್ನು ಮನವೋಲಿಸಿ ಊದಿಸೋದೇ ಸಂಚಾರಿ ಪೊಲೀಸರಿಗೆ ದೊಡ್ಡ ಕೆಲಸವಾಗಿದೆ.

  • ಕೊರೊನಾ ವೈರಸ್ ಭೀತಿ -ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಮಾಸ್ಕ್

    ಕೊರೊನಾ ವೈರಸ್ ಭೀತಿ -ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೆ ಮಾಸ್ಕ್

    ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಎಫೆಕ್ಟ್ ಈಗ ಬೆಂಗಳೂರಿನ ಟ್ರಾಫಿಕ್ ಪೊಲೀಸರಿಗೂ ತಟ್ಟಿದೆ. ಬೆಂಗಳೂರಿನ ಟೆಕ್ಕಿಯೊಬ್ಬರಲ್ಲಿ ಕೊರೊನಾ ಪತ್ತೆಯಾಗಿದೆ ಎನ್ನುವ ಸುದ್ದಿ ಕೇಳಿದ ದಿನದಂದಿಲೂ ನಗರದ ಟ್ರಾಫಿಕ್ ಪೊಲೀಸರು ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ.

    ಟೆಕ್ಕಿಗೆ ಕೊರೊನಾ ವೈರಸ್ ಪತ್ತೆಯಾದಾಗಿನಿಂದ ಪೊಲೀಸರು ಯಾವುದೇ ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಕೂಡ ಮಾಡಿರಲಿಲ್ಲ. ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವಾಗ ವಾಹನ ಸವಾರರ ಬಳಿ ತೀರ ಹತ್ತಿರಕ್ಕೆ ಹೋಗಿ ಚೆಕ್ ಮಾಡಬೇಕಾಗುತ್ತೆ. ಒಂದು ವೇಳೆ ಆ ವ್ಯಕ್ತಿಗೆ ಕೊರೊನಾ ಇದ್ದರೆ ಅದು ನಮಗೂ ಬರುತ್ತೆ ಎಂದು ಆತಂಕ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಕೈದಿಗಳಿಗೂ ತಟ್ಟಿದ ಮಹಾಮಾರಿ ಕೊರೊನಾ ಎಫೆಕ್ಟ್

    ಅಲ್ಲದೆ ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕಿದೆ, ನಗರದಲ್ಲಿ ಕೆಲಸ ಮಾಡುವ ಎಲ್ಲಾ ಟ್ರಾಫಿಕ್ ಪೊಲೀಸರಿಗೂ ಇಲಾಖಾ ವತಿಯಿಂದ ಮಾಸ್ಕ್ ನೀಡುವಂತೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಹಿರಿಯ ಅಧಿಕಾರಿಗಳು, ಬೆಂಗಳೂರಿನಲ್ಲಿ ಡ್ರಂಕ್ ಆ್ಯಂಡ್ ಡ್ರೈವ್ ಚೆಕ್ ಮಾಡುವ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ನೀಡಿದೆ.

    ಈ ಹಿನ್ನೆಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಮಾಸ್ಕ್ ಹಾಕಿಕೊಂಡು ಎಲ್ಲಾ ಟ್ರಾಫಿಕ್ ಪೊಲೀಸರು ಡಿಡಿ ಚೆಕ್ ಮಾಡಿದ್ದರು. ಮಾಸ್ಕ್ ಇದ್ದರು ಕೂಡ ಕೆಲವರು ವಾಹನ ಸವಾರರ ತೀರಾ ಹತ್ತಿರಕ್ಕೆ ಹೋಗೋಕೆ ಹಿಂದೇಟು ಹಾಕ್ತಿರೋದು ಕಂಡುಬಂತು.

  • ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಲು ಪೊಲೀಸ್ ಸಹಾಯ – ನೆಟ್ಟಿಗರಿಂದ ಮೆಚ್ಚುಗೆ

    ವಿದ್ಯಾರ್ಥಿನಿ ಪರೀಕ್ಷೆಗೆ ಹಾಜರಾಗಲು ಪೊಲೀಸ್ ಸಹಾಯ – ನೆಟ್ಟಿಗರಿಂದ ಮೆಚ್ಚುಗೆ

    – ಸಹಾಯ ಮಾಡಿ ಬೆಸ್ಟ್ ಆಫ್ ಲಕ್ ಎಂದ ಪೇದೆ
    – ಇಲಾಖೆಯಿಂದಲೂ ಪ್ರಶಂಸೆ

    ಮುಂಬೈ: ಟ್ರಾಫಿಕ್ ಪೊಲೀಸರೆಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಇಲ್ಲೊಬ್ಬರು ಟ್ರಾಫಿಕ್ ಪೊಲೀಸ್ ಸಿಬ್ಬಂದಿ ವಿದ್ಯಾರ್ಥಿನಿ ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಸಹಾಯ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಈ ಘಟನೆ ಮುಂಬೈನಲ್ಲಿ ನಡೆದಿದ್ದು, ವಿದ್ಯಾರ್ಥಿನಿ ಎಸ್‍ಎಸ್‍ಸಿ ಬೋರ್ಡ್ ಪರೀಕ್ಷೆಗೆ ತೆರಳಲು ಖಾರ್ ಆಟೋ ನಿಲ್ದಾಣದಲ್ಲಿ ಸರತಿಯಲ್ಲಿ ನಿಂತಿದ್ದಳು. ಆಗ ವಿದ್ಯಾರ್ಥಿನಿಯ ದುಗುಡ ಕಂಡ ಟ್ರಾಫಿಕ್ ಪೊಲೀಸ್ ಪೇದೆ, ಪರೀಕ್ಷೆ ಇದೆಯೇ ಎಂದು ಪ್ರಶ್ನಿಸಿದ್ದಾರೆ. ಅವಳಿಗೆ ಎಸ್‍ಎಸ್‍ಸಿ ಬೋರ್ಡ್ ಪರೀಕ್ಷೆ ಇರುವುದು ತಿಳಿದಿದೆ. ಆಗ ವಿದ್ಯಾರ್ಥಿನಿಯನ್ನು ಸರತಿಯಿಂದ ಹೊರಗೆ ಬರುವಂತೆ ಸೂಚಿಸಿದ್ದಾರೆ. ನಂತರ ಹೋಗುತ್ತಿದ್ದ ಆಟೋ ರಿಕ್ಷಾ ನಿಲ್ಲಿಸಿ ವಿದ್ಯಾರ್ಥಿನಿಯನ್ನು ಹತ್ತಿಸಿದ್ದಾರೆ. ಈ ಮೂಲಕ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಲು ಸಹಾಯ ಮಾಡಿದ್ದಾರೆ. ಅಲ್ಲದೆ ವಿದ್ಯಾರ್ಥಿನಿ ಪರೀಕ್ಷೆಗೆ ಗುಡ್ ಲಕ್ ಎಂದು ವಿಶ್ ಮಾಡಿ ಕಳುಹಿಸಿದ್ದಾರೆ.

    ಮಿಸ್ಟರ್ ರ್ಯಾಟ್ಟಿ ಎಂಬ ಟ್ವಿಟ್ಟರ್ ಬಳಕೆದಾರರು ಈ ಘಟನೆಗೆ ಸಾಕ್ಷಿಯಾಗಿದ್ದು, ಈ ಕುರಿತು ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪರೀಕ್ಷೆಗೆ ತೆರಳಲು ವಿದ್ಯಾರ್ಥಿನಿ ಖಾರ್ ಆಟೋ ಸ್ಟೇಷನ್ ಬಳಿ ಸಾಲಿನಲ್ಲಿ ನಿಂತಿದ್ದಳು. ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರು ಪರೀಕ್ಷೆ ಇದೆಯೇ ಎಂದು ಕೇಳಿ, ನಂತರ ಬೇರೆ ಆಟೋದಲ್ಲಿ ಆಕೆಯನ್ನು ಪರೀಕ್ಷೆಗೆ ಕಳುಹಿಸಿದರು. ಅಲ್ಲದೆ ಬೆಸ್ಟ್ ಆಫ್ ಲಕ್ ಎಂದು ಹಾರೈಸಿದರು ಎಂದು ಬರೆದುಕೊಂಡಿದ್ದಾರೆ.

    ಈ ಘಟನೆ ಕುರಿತು ಮುಂಬೈ ಪೊಲೀಸ್ ಇಲಾಖೆ ಸಹ ಟ್ವೀಟ್ ಮಾಡಿದ್ದು, ಎಸ್‍ಎಸ್‍ಸಿ ಪರೀಕ್ಷೆಯ ಮೊದಲ ದಿನ ಹಲವು ಸವಾಲುಗಳಿರುತ್ತವೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಸಹಾಯ ಮಾಡಲು ಸಾಧ್ಯವಾಗಿದ್ದಕ್ಕೆ ಸಂತಸವಾಗುತ್ತಿದೆ. ಇಂದಿನಿಂದ ಎಸ್‍ಎಸ್‍ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ ಎಂದು ಪೊಲೀಸ್ ಇಲಾಖೆ ಶುಭ ಹಾರೈಸಿದೆ.

    ಪೊಲೀಸ್ ಪೇದೆಯ ಈ ಕೆಲಸಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಮುಂಬೈ ಪೊಲೀಸರಿಂದ ಇಂತಹ ಕೆಲಸಗಳನ್ನು ನಿರೀಕ್ಷಿಸಲು ಸಾಧ್ಯ ಎಂದು ಬಳಕೆದಾರರೊಬ್ಬರು ಕಮೆಂಟ್ ಮಾಡಿದರೆ, ಮತ್ತೊಬ್ಬರು ಇಂತಹ ಅಪರೂಪದ ಘಟನೆಗೆ ಪಾತ್ರರಾದ ಮುಂಬೈ ಪೊಲೀಸರಿಗೆ ಧನ್ಯವಾದ. ಅಗತ್ಯವಿರುವಾಗ ಯಾವಾಗಲೂ ಈ ರೀತಿಯ ಸಹಾಯ ಮಾಡಿ ಎಂದು ಪ್ರತಿಕ್ರಿಯಿಸಿದ್ದಾರೆ.