ತುಮಕೂರು: ಮಿರರ್ (Mirror) ಇಲ್ಲದೆ ಬಂದ ಬೈಕ್ ಸವಾರ ಹಾಗೂ ಟ್ರಾಫಿಕ್ ಪೊಲೀಸರ (Traffic Police) ನಡುವೆ ದಂಡ (Penalty) ಕಟ್ಟುವ ವಿಚಾರವಾಗಿ ವಾಗ್ವಾದ ನಡೆದಿರುವ ಘಟನೆ ತುಮಕೂರಿನಲ್ಲಿ (Tumakuru) ನಡೆದಿದೆ.
ತುಮಕೂರಿನ ರಿಂಗ್ ರಸ್ತೆಯಲ್ಲಿ ಹರ್ಷ ಎಂಬ ಯುವಕ ಬೆಂಗಳೂರಿಂದ ಅರಸಿಕೆರೆಗೆ ಬೈಕಲ್ಲಿ ಹೋಗುತಿದ್ದ. ಯುವಕನ ಬೈಕ್‌ಗೆ ಎರಡೂ ಮಿರರ್ ಇರಲಿಲ್ಲ. ಹೀಗಾಗಿ ರಿಂಗ್ ರಸ್ತೆಯಲ್ಲಿ ನಗರ ಪೂರ್ವ ಸಂಚಾರಿ ಮಹಿಳಾ ಪಿಎಸ್‌ಐ ಸ್ಪಾಟ್ ಫೈನ್ ಹಾಕಿದ್ದಾರೆ. ಆದರೆ ಯುವಕ ತನ್ನ ಬಳಿ ಹಣ ಇಲ್ಲ, ರಶೀದಿ ಕೊಡಿ ಕೋರ್ಟ್‌ನಲ್ಲಿ ಕಟ್ಟುತ್ತೇನೆ ಎಂದು ಪೊಲೀಸರಿಗೆ ಮನವಿ ಮಾಡಿದ್ದಾನೆ. ಒಪ್ಪದ ಪೊಲೀಸರು ಸ್ಥಳದಲ್ಲೇ ದಂಡ ಕಟ್ಟಬೇಕು ಎಂದು ತಾಕೀತು ಮಾಡಿದ್ದಾರೆ. ಇದರಿಂದ ಪೊಲೀಸರು ಮತ್ತು ಸವಾರನ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ: ಕುರ್ಚಿ ಕದನ, ಅಭಿವೃದ್ಧಿ ಪತನ – 6 ತಿಂಗಳಲ್ಲಿ ಕೇವಲ ಶೇ.30ರಷ್ಟು ಮಾತ್ರ ಪ್ರಗತಿ
ಪೊಲೀಸರು ದೌರ್ಜನ್ಯ ಮಾಡಿದ್ದಾರೆ ಅಂತ ಯುವಕ ಸ್ಥಳದಲ್ಲೇ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದಾನೆ. ಇದರಿಂದಾಗಿ ಸುಮಾರು ಅರ್ಧ ಕಿ.ಮೀ ದೂರದಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾರ್ವಜನಿಕರಿಗೆ ತೊಂದರೆ ಆದ ಹಿನ್ನೆಲೆ ಜಯನಗರ ಪೊಲೀಸರು ಹರ್ಷನನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಹಾಗೂ ಸಾರ್ವಜನಿಕರಿಗೆ ತೊಂದರೆ ಹಿನ್ನೆಲೆ ಎಫ್‌ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ
ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ (Traffic Rules Break) ಮಾಡಿ ದಂಡ ಕಟ್ಟದೇ ಬಾಕಿ ಉಳಿಸಿಕೊಂಡಿದ್ದ ವಾಹನ ಸವಾರರಿಗೆ ಸರ್ಕಾರ 50% ಡಿಸ್ಕೌಂಡ್ ನೀಡಿತ್ತು. ಇದೀಗ ಒಂದೇ ವಾರದಲ್ಲಿ 21 ಕೋಟಿ 86 ಸಾವಿರ ರೂ. ದಂಡ ಸಂಗ್ರಹವಾಗಿದೆ.
ಬೆಂಗಳೂರು (Bengaluru) ವ್ಯಾಪ್ತಿಗೆ ಮಾತ್ರ ಈ ಡಿಸ್ಕೌಂಡ್ ನೀಡಿದ್ದು, ವಾಹನ ಸವಾರರ ರಿಯಾಕ್ಷನ್ ನೋಡಿಕೊಂಡು ಜಿಲ್ಲೆಗಳಿಗೂ ವಿಸ್ತರಣೆ ಮಾಡಬೇಕೇ ಬೇಡವೇ ಅನ್ನೋದು ತೀರ್ಮಾನ ಮಾಡುವ ಸಾಧ್ಯತೆ ಇದೆ. ಇನ್ನೂ ಹತ್ತು ದಿನಗಳ ಕಾಲ ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಅವಕಾಶವಿದ್ದು, ಸುಮಾರು 50 ಕೋಟಿಯಷ್ಟು ದಂಡ ಸಂಗ್ರಹವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
– ವಾಯು ಮಾಲಿನ್ಯ ನಿಯಂತ್ರಣಕ್ಕೆ ದೆಹಲಿ ಸರ್ಕಾರದಿಂದ ಹೊಸ ನಿಯಮ ಜಾರಿ – 350 ಪೆಟ್ರೋಲ್ ಪಂಪ್‌ನಲ್ಲಿ ಟ್ರಾಫಿಕ್ ಪೊಲೀಸ್ ನಿಯೋಜನೆ
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಳೆಯ ವಾಹನಗಳ (Old Vehicle) ಮೇಲಿನ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ದೆಹಲಿ ಸರ್ಕಾರವು ಇಂದಿನಿಂದ 15 ವರ್ಷಗಳಿಗಿಂತ ಹಳೆಯದಾದ ಪೆಟ್ರೋಲ್ ವಾಹನಗಳು ಮತ್ತು 10 ವರ್ಷಗಳಿಗಿಂತ ಹಳೆಯದಾದ ಡೀಸೆಲ್ ವಾಹನಗಳನ್ನು ರಸ್ತೆಯಲ್ಲಿ ಓಡಿಸುವುದನ್ನು ನಿಷೇಧಿಸಿದೆ.
ಇದರ ಭಾಗವಾಗಿ ದೆಹಲಿಯಲ್ಲಿ ಅವಧಿ ಮೀರಿದ ವಾಹನಗಳಿಗೆ ಪೆಟ್ರೋಲ್ ಅಥವಾ ಡೀಸೆಲ್ ಹಾಕದಿರಲು ನಿಯಮ ರೂಪಿಸಿದೆ. ಈ ನಿಯಮಗಳ ಕಟ್ಟುನಿಟ್ಟಿನ ಜಾರಿಯನ್ನು ಖಚಿತಪಡಿಸಿಕೊಳ್ಳಲು ದೆಹಲಿ ಸಾರಿಗೆ ಇಲಾಖೆ, ದೆಹಲಿ ಪೊಲೀಸ್ ಮತ್ತು ಸಂಚಾರ ಸಿಬ್ಬಂದಿಯೊಂದಿಗೆ (Traffic Police) ಸಮನ್ವಯದೊಂದಿಗೆ, ಜೀವಿತಾವಧಿಯ ವಾಹನಗಳಿಗೆ ಇಂಧನ ಪೂರೈಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಸಮಗ್ರ ಕಾರ್ಯತಂತ್ರವನ್ನು ಜಾರಿಗೆ ತಂದಿದೆ. ಇದನ್ನೂ ಓದಿ: ಮೈಸೂರು| ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಮದ್ಯ ಮಾರಾಟ
ಈಗಾಗಲೇ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ (Petrol Pump) ಜುಲೈ 1ರಿಂದ ಜೀವಿತಾವಧಿ ಮುಗಿದ ವಾಹನಗಳಿಗೆ ಇಂಧನವನ್ನು ವಿತರಿಸಲಾಗುವುದಿಲ್ಲ. 15 ವರ್ಷ ಹಳೆಯ ಪೆಟ್ರೋಲ್ ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳು ಎಂದು ಹೇಳುವ ಸೂಚನೆಯನ್ನು ಹಾಕಲಾಗಿದೆ. ಇದರ ಜೊತೆಗೆ, ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಜಾರಿಗೊಳಿಸಲು ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಾರ್ವಜನಿಕ ವಿಳಾಸ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದೆ. ಇದನ್ನೂ ಓದಿ: ಲಾರಿ ಓವರ್ ಟೇಕ್ ಮಾಡುವ ಭರದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ – ನಾಲ್ವರು ದುರ್ಮರಣ
ನಿಗದಿತ ಜೀವಿತಾವಧಿ ಮೀರಿದ ವಾಹನಗಳ ಇಂಧನ ತುಂಬುವಿಕೆಯನ್ನು ಮೇಲ್ವಿಚಾರಣೆ ಮಾಡಲು ಮತ್ತು ತಡೆಯಲು ಗುರುತಿಸಲಾದ 350 ಪೆಟ್ರೋಲ್ ಪಂಪ್‌ಗಳಲ್ಲಿ ತಲಾ ಒಬ್ಬ ಸಂಚಾರ ಪೊಲೀಸ್ ಅಧಿಕಾರಿಯನ್ನು ನಿಯೋಜಿಸಲಾಗುವುದು. ಯೋಜನೆಯ ಪ್ರಕಾರ, ದೆಹಲಿ ಪೊಲೀಸರು 1 ರಿಂದ 100 ಸಂಖ್ಯೆಯ ಇಂಧನ ಕೇಂದ್ರಗಳಲ್ಲಿ ನಿಯೋಜಿಸಲ್ಪಡುತ್ತಾರೆ. ಸಾರಿಗೆ ಇಲಾಖೆಯು 101 ರಿಂದ 159 ಸಂಖ್ಯೆಯ ಇಂಧನ ಕೇಂದ್ರಗಳಲ್ಲಿ ಮತ್ತು 59 ಎಮ್‌ಸಿಡಿ ತಂಡಗಳು ವಿವಿಧ ಇಂಧನ ಮಳಿಗೆಗಳಲ್ಲಿಯೂ ಇರುತ್ತವೆ. ಇದನ್ನೂ ಓದಿ: ಎತ್ತಿನಭುಜ ಚಾರಣಕ್ಕೆ ಪ್ರವಾಸಿಗರಿಗೆ ಬ್ರೇಕ್ – ಇಂದಿನಿಂದ 1 ತಿಂಗಳು ಸಂಪೂರ್ಣ ಬಂದ್
ಸಂಚಾರ ಸಿಬ್ಬಂದಿಗೆ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅಥವಾ ಅವಧಿ ಮುಗಿದ ವಾಹನದ ಮಾಲೀಕರಿಗೆ ಚಲನ್ ನೀಡುವ ಅಧಿಕಾರವಿರುತ್ತದೆ. ಇದಲ್ಲದೆ, ಜಾರಿ ಕಾರ್ಯಾಚರಣೆಯ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಪ್ರತಿ ಪೆಟ್ರೋಲ್ ಪಂಪ್‌ನಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ. ದೆಹಲಿಯಾದ್ಯಂತ ಇಂಧನ ಕೇಂದ್ರಗಳಲ್ಲಿ ಸ್ವಯಂಚಾಲಿತ ಕ್ಯಾಮೆರಾ ವ್ಯವಸ್ಥೆಗಳನ್ನು ಸ್ಥಾಪಿಸಲಾಗಿದ್ದು, ಇಂಧನ ಕೇಂದ್ರದ ಆವರಣಕ್ಕೆ ಪ್ರವೇಶಿಸುವ ಎಲ್ಲಾ ವಾಹನಗಳ ನೋಂದಣಿ ವಿವರಗಳನ್ನು ಸೆರೆಹಿಡಿಯಲಿದೆ. ಇದನ್ನೂ ಓದಿ: ಬಾಸ್ ಜೊತೆ ಅಕ್ರಮ ಸಂಬಂಧದ ಶಂಕೆ – ಲಿವ್ ಇನ್ ಗೆಳತಿಯ ಹತ್ಯೆಗೈದು ಶವದೊಂದಿಗೆ ಮಲಗಿದ್ದ 2 ಮಕ್ಕಳ ತಂದೆ
ಬೆಂಗಳೂರು: ‘ನಾನು ಹೆಲ್ಮೆಟ್ ಹಾಕಲ್ಲ, ನೀವ್ಯಾರು ಕೇಳೋಕೆ. ನಿಮಗೆ ಇಲ್ಲಿ ಫೈನ್ ಹಾಕೋಕೆ ಪರ್ಮಿಷನ್ ಕೊಟ್ಟವರಾರು..?’ ಎಂದು ಟ್ರಾಫಿಕ್ ಪೊಲೀಸರ ಜೊತೆ ಉದ್ಧಟತನ ತೋರಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೆಲ್ಮೆಟ್ ಧರಿಸದೇ ಬೈಕ್‌ನಲ್ಲಿ ಬಂದ ಸವಾರನನ್ನು ಪೊಲೀಸರು ತಡೆದಿದ್ದಾರೆ. ಆಗ, ‘ನಾನು ಯಶವಂತಪುರ ಜೆಡಿಎಸ್ ಘಟಕದ ಅಧ್ಯಕ್ಷ. ಬೇಕು ಅಂತಲೇ ನಾನು ಹೆಲ್ಮೆಟ್ ಹಾಕದೆ ಬಂದೆ ಏನಿವಾಗ. ನಿಮ್ ಇನ್ಸ್ ಪೆಕ್ಟರ್‌ಗೆ ಇಲ್ಲಿ ಗಾಡಿ ಹಿಡಿಯಬಾರದು ಅಂತಾ ಅವತ್ತೇ ಹೇಳಿದ್ದೀನಿ’.. ಹೀಗೆ ಟ್ರಾಫಿಕ್ ಪೊಲೀಸರ ಜೊತೆ ಉದ್ಧಟತನ ತೋರಿದ ನವೀನ್ ಗೌಡ ಎಂಬ ವ್ಯಕ್ತಿಯನ್ನು ಜ್ಞಾನಭಾರತಿ ಪೊಲೀಸರು ಬಂಧನ ಮಾಡಿದ್ದಾರೆ. ಇದನ್ನೂ ಓದಿ: ಆಂಧ್ರ ಮಾಜಿ ಸಿಎಂ ಜಗನ್ ರ‍್ಯಾಲಿ ವೇಳೆ ಅವಘಡ – ಕಾರಿನಡಿ ಸಿಲುಕಿ ವೃದ್ಧ ಸಾವು
ಘಟನೆ ಏನು?
21 ನೇ ತಾರೀಖು ಉಳ್ಳಾಲ ಮುಖ್ಯರಸ್ತೆಯಲ್ಲಿ ಜ್ಞಾನಭಾರತಿ ಸಂಚಾರ ಠಾಣೆಯ ಎಸ್‌ಐ ಹಾಗೂ ಟೀಂ ವೆಹಿಕಲ್ ಚೆಕಿಂಗ್ ಮಾಡ್ತಿತ್ತು. ಈ ವೇಳೆ ಹೆಲ್ಮೆಟ್ ಇಲ್ಲದೇ ಬಂದ ನವೀನ್ ಗೌಡ ಇಲ್ಲೇ ನಿಲ್ಲಿಸ್ಬೇಕಾ..? ಫೈನ್ ಕಟ್ಟಲ್ಲ. ನಾನು ಹೆಲ್ಮೆಟ್ ಹಾಕಲ್ಲ. ನಿಮಗೆ ಗಾಡಿ ಹಿಡಿಯೋಕೆ ಪರ್ಮಿಷನ್ ಕೊಟ್ಟವರ‍್ಯಾರು? ನಾನು ಯಶವಂತಪುರ ಜೆಡಿಎಸ್ ಘಟಕದ ಅಧ್ಯಕ್ಷ. ಯಾರನ್ನ ಕರೆಸ್ತೀರೊ ಕರೆಸು ಅಂತಾ ಪೊಲೀಸರಿಗೆ ಆವಾಜ್ ಬಿಟಿದ್ದ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಸಾರ್ವಜನಿಕವಾಗಿ ನಿಂದಿಸಿದ ಆರೋಪದ ಮೇಲೆ ಎಸ್‌ಐ ಕುಮಾರ್ ನೀಡಿದ ದೂರಿನ ಮೇಲೆ ಜ್ಞಾನಭಾರತಿ ಠಾಣೆಯಲ್ಲಿ ಎಫ್‌ಐಆರ್ ಆಗಿತ್ತು. ಸರ್ಕಾರಿ ಕೆಲಸಕ್ಕೆ ಅಡ್ಡಿ, ಸಾರ್ವಜನಿಕ ಅಧಿಕಾರಿಗೆ ನಿಂದನೆ ಆರೋಪದಲ್ಲಿ ಆರೋಪಿ ನವೀನ್ ಗೌಡನನ್ನ ಅರೆಸ್ಟ್ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಪೊಲೀಸರು ಕರೆದೊಯ್ದಿದ್ದಾರೆ. ಇದನ್ನೂ ಓದಿ: ಕೃಷಿ ಹೊಂಡದಲ್ಲಿ ತಾಯಿ-ಮಗಳ ಶವ ಪತ್ತೆ; ಪತಿ, ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ
ಮಂಡ್ಯದಲ್ಲಿ ಸತೀಶ್ ಬಾಬು ಎಂಬುವವರ ಸ್ಕೂಟರ್ ಕದ್ದು ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ. ಮಂಡ್ಯ ಜಿಲ್ಲೆ ಗಡಿದಾಟುವ ಮುನ್ನವೆ ಗೆಜ್ಜಲಗೆರೆ ಬಳಿ ಸ್ಕೂಟರ್ ಅಪಘಾತಕ್ಕೀಡಾಗಿದೆ. ಅಪಘಾತವಾದ ಬಳಿಕ ಮಂಜುನಾಥನನ್ನ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆಸ್ಪತ್ರೆಯಲ್ಲಿ ವಿಚಾರಣೆ ವೇಳೆ ಬೈಕ್ ಕಳ್ಳತನ ಬೆಳಕಿಗೆ ಬಂದಿದೆ.
ಬೆಂಗಳೂರು: ಹೆಲ್ಮೆಟ್ ಧರಿಸದಕ್ಕೆ ಸ್ಕೂಟಿ ತಡೆದ ಟ್ರಾಫಿಕ್ ಪೊಲೀಸರಿಗೆ ಮಹಿಳೆಯೊಬ್ಬರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನ (Bengaluru) ಮಾಗಡಿ ರಸ್ತೆ ಸಂಚಾರಿ ಠಾಣೆಯ ಮುಂಭಾಗ ನಡೆದಿದೆ.
ಮಾಗಡಿ ರೋಡ್‌ನಲ್ಲಿ (Magadi Road) ಸ್ಕೂಟಿ ಸವಾರೆ, ತನ್ನ ಸ್ನೇಹಿತೆ ಜೊತೆ ಬರುತ್ತಿದ್ದರು. ಈ ವೇಳೆ ಸ್ಕೂಟಿ ಸವಾರೆ ಹೆಲ್ಮೆಟ್ ಹಾಕಿದ್ರೆ, ಹಿಂದೆ ಕುಳಿತಿದ್ದ ಸ್ನೇಹಿತೆ ಹೆಲ್ಮೆಟ್ ಹಾಕಿರಲಿಲ್ಲ. ಇದನ್ನು ಗಮನಿಸಿದ ಟ್ರಾಫಿಕ್ ಪೊಲೀಸರು ಸ್ಕೂಟಿ ಅಡ್ಡಗಟ್ಟಿ, ದಂಡ ಕಟ್ಟುವಂತೆ ಹೇಳಿದ್ದಾರೆ. ಇದನ್ನೂ ಓದಿ: ಮದ್ವೆಗೆ ಹುಡ್ಗಿ ನೋಡಲು ಹೋಗಿದ್ದ ಯುವಕ – ಇಷ್ಟವಿಲ್ಲ ಅಂದಿದ್ದಕ್ಕೆ ಹುಡುಗಿ ತಲೆಗೆ ಗುಂಡಿಟ್ಟ..!
ಈ ವೇಳೆ 500 ರೂ. ದಂಡ ಕಟ್ಟುವಂತೆ ಪೊಲೀಸರು ಗಾಡಿ ಹಿಡಿದು ನಿಲ್ಲಿಸಿದ್ದರು. ಆದರೆ ಮಹಿಳೆ ಗಲಾಟೆ ಮಾಡಿ, ಗಾಡಿ ತೆಗೆದುಕೊಂಡು ಪರಾರಿಯಾಗಿದ್ದಾರೆ. ಸದ್ಯ ಮಹಿಳೆ ವಿರುದ್ಧ ಮಾಗಡಿ ಟ್ರಾಫಿಕ್ ಪೊಲೀಸರು ಹೆಲ್ಮೆಟ್ ರಹಿತ ಚಾಲನೆ ದಂಡ ವಿಧಿಸಿರುವ ಬಗ್ಗೆ ಮಾಹಿತಿ ದೊರೆತಿದೆ.
ಚಿಕ್ಕಬಳ್ಳಾಪುರ: ತಾಲೂಕಿನ ಅಗಲಗುರ್ಕಿ ಬಳಿ ಬೆಂಗಳೂರು ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ (National Highway) ಟಿಪ್ಪರ್ ಲಾರಿಯೊಂದು ಡಿವೈಡರ್ ಹಾರಿ ಎದುರು ಪಥದಲ್ಲಿ ಸಾಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಇದ್ರಿಂದ ಕಾರು ಹಾಗೂ ಬೈಕ್ ಸಹ ಅಪಘಾತಕ್ಕೀಡಾಗಿ ಸರಣಿ ಅಪಘಾತ ಸಂಭವಿಸಿದೆ.
ಅಂದಹಾಗೆ ಮಹಾಶಿವರಾತ್ರಿ ಹಬ್ಬದ ಜಾಗರಣೆ ಅಂಗವಾಗಿ ಚಿಕ್ಕಬಳ್ಳಾಪುರ (Chikkaballapur) ತಾಲೂಕಿನ ಆವಲಗುರ್ಕಿ ಬಳಿಯ ಆದಿಯೋಗಿ ಈಶಾ ಫೌಂಡೇಶನ್‌ಗೆ (Isha Foundation) ಭಕ್ತಸಾಗರವೇ ಹರಿದುಬಂದಿದೆ. ಇದ್ರಿಂದ ಮೊದಲೇ ಎಲ್ಲಾ ರಸ್ತೆಗಳು ಹೈವೇ ಸಹ ಸಂಪೂರ್ಣ ಟ್ರಾಫಿಕ್ ಮಯವಾಗಿದೆ. ಅದರಲ್ಲಿ ಅಪಘಾತ ಬೇರೆ ಆಗಿ ಹೈವೇ ಸಂಚಾರ ಸಂಪೂರ್ಣ ಬಂದ್ ಆಗಿತ್ತು. ಇದನ್ನೂ ಓದಿ: ಹೇಯ್ಲಿ ಮ್ಯಾಥ್ಯೂಸ್, ಬ್ರಂಟ್ ಫಿಫ್ಟಿ ಆಟ – ಯುಪಿ ವಿರುದ್ಧ ಮುಂಬೈಗೆ 8 ವಿಕೆಟ್‌ಗಳ ಜಯ
ಇನ್ನೂ ಸಂಚಾರ ನಿಯಂತ್ರಣಕ್ಕೆ ಟ್ರಾಫಿಕ್ ಪೊಲೀಸರು ಹೈರಾಣಾಗಿ ಹೋಗುವಂತೆ ಮಾಡಿದೆ. ಅದೃಷ್ಟವಶಾತ್ ಅಪಘಾತದಲ್ಲಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಟ್ರಾಫಿಕ್ ಪೊಲೀಸರು ಕ್ರೇನ್ ತರಿಸಿ ಲಾರಿಗಳನ್ನ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.
ಬೆಂಗಳೂರು: ಬೆಂಗಳೂರು (Bengaluru) ಸೇರಿದಂತೆ ರಾಜ್ಯಾದ್ಯಂತ ರೋಡ್ ರೇಜ್ ಪ್ರಕರಣಗಳು (Road Rage Cases) ದಿನೇ ದಿನೇ ಜಾಸ್ತಿ ಆಗುತ್ತಲೇ ಇವೆ. ಇದರಿಂದ ತನಿಖೆಗಾಗಿ ಟ್ರಾಫಿಕ್ ಪೊಲೀಸರಿಗೆ ಅವಕಾಶ ನೀಡುವಂತೆ ಪೊಲೀಸ್ ಇಲಾಖೆಯು ಗೃಹ ಇಲಾಖೆಗೆ (Home Dapartment) ಪತ್ರ ಬರೆದಿದೆ.ಇದನ್ನೂ ಓದಿ: ರಾಯಚೂರಿನಲ್ಲಿ ಅಪಘಾತಗಳ ಸಂಖ್ಯೆಯಲ್ಲಿ ಹೆಚ್ಚಳ – ಹೆಲ್ಮೆಟ್ ಬಳಕೆ ಕಡ್ಡಾಯಗೊಳಿಸಿದ ಪೊಲೀಸರು
ರೋಡ್ ರೇಜ್ ಪ್ರಕರಣಗಳನ್ನು ತಡೆಯಲು ಪೊಲೀಸ್ ಇಲಾಖೆ ಕೂಡ ಶತಪ್ರಯತ್ನ ಮಾಡುತ್ತಿದೆ. ಜೊತೆಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಇದನ್ನು ಗೂಂಡಾ ಆಕ್ಟ್ ಎಂದು ಪರಿಗಣನೆ ಮಾಡುತ್ತೇವೆ ಎಂದು ಹೇಳಿದ್ದರು. ಆದರೂ ದಿನಕ್ಕೆ ಐದಾರು ಪ್ರಕರಣಗಳು ವರದಿಯಾಗುತ್ತಿದೆ. ನಗರದಲ್ಲಿರುವ ಭಾರೀ ಟ್ರಾಫಿಕ್ ಜಾಮ್ ಇದಕ್ಕೆ ಪ್ರಮುಖ ಕಾರಣವಾಗಿದೆ.
ಸದ್ಯ ರೋಡ್ ರೇಜ್ ಪ್ರಕರಣಗಳನ್ನು ತಡೆಯುವ ಕೆಲಸವನ್ನು ಟ್ರಾಫಿಕ್ ಪೊಲೀಸರಿಗೆ (Traffic Police) ಕೊಡುವ ಬಗ್ಗೆ ಚಿಂತನೆ ನಡೆದಿದೆ. ಲಾ ಅಂಡ್ ಆರ್ಡರ್ ಪೊಲೀಸರಿಗೆ ದೂರು ಕೊಟ್ಟರೆ ಅವರು ಎಫ್‌ಐಆರ್ ದಾಖಲಿಸಿ, ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಬೇಕು. ಸಾಕ್ಷ್ಯಗಳು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ತನಿಖೆ ನಡೆಸಬೇಕಿದೆ. ಇದಕ್ಕೆಲ್ಲಾ ಅಲ್ಲಿನ ಟ್ರಾಫಿಕ್ ಪೊಲೀಸರ ಸಹಾಯಬೇಕಾಗುತ್ತದೆ. ಹಾಗಾಗಿ ಭಾರತೀಯ ನ್ಯಾಯ ಸಂಹಿತೆಯ 132, 118 ಅಡಿಯಲ್ಲಿ ತನಿಖೆ ನಡೆಸಲು ಅವಕಾಶ ನೀಡುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗಿದ್ದು, ಅವಕಾಶ ಸಿಕ್ಕರೆ ಟ್ರಾಫಿಕ್ ಪೊಲೀಸರು ರೋಡ್ ರೇಜ್ ಪ್ರಕರಣಗಳ ತನಿಖೆ ನಡೆಸಲಿದ್ದಾರೆ.ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ನ್ಯಾ.ಸಂಜೀವ ಖನ್ನಾ ಪ್ರಮಾಣವಚನ
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Hyderabad | ಮಗನ ಮೃತದೇಹದೊಂದಿಗೆ ನಾಲ್ಕು ದಿನ ಕಳೆದ ಅಂಧ ದಂಪತಿ
ಬೆಂಗಳೂರು: ಚಲಿಸುತ್ತಿರುವಾಗಲೇ ಬಿಎಂಟಿಸಿ ಚಾಲಕನಿಗೆ (BMTC Bus Driver) ಹೃದಯಾಘಾತ ಕಾಣಿಸಿಕೊಂಡಿದ್ದು, ಸಂಚಾರ ಪೊಲೀಸರ ಸಮಯ ಪ್ರಜ್ಞೆಯಿಂದ ಜೀವ ಉಳಿದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಶಾಂತಿನಗರದ ಜೋಡಿ ರಸ್ತೆ ಬಳಿ ಘಟನೆ ನಡೆದಿದೆ. KA51AJ6905 ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕ ವೀರೇಶ್‌ಗೆ ಏಕಾಏಕಿ ಹೃದಯಾಘಾತ (Heart Attack) ಸಂಭವಿಸಿದೆ. ನಡುರಸ್ತೆಯಲ್ಲೇ ಬಸ್ ಸ್ಲೋ ಆಗಿದ್ದನ್ನ ಕಂಡು ಸಮೀಪದಲ್ಲಿದ್ದ ಟ್ರಾಫಿಕ್ ಪೊಲೀಸರು ಓಡೋಡಿ ಬಂದಿದ್ದಾರೆ.
ಹಲಸೂರು ಟ್ರಾಫಿಕ್ ಪೊಲೀಸ್ (Halasur Traffic Police) ಆರ್. ರಘುಕುಮಾರ್ ಬಸ್ ಬಳಿ ನೋಡಿದಾಗ, ಚಾಲಕ ಎದೆ ಬಿಗಿ ಹಿಡಿದುಕೊಂಡು ಒಂದು ಕಡೆಗೆ ಚಾಲಕ ವಾಲಿದ್ದನ್ನು ನೋಡಿದ್ದಾರೆ. ಬಳಿಕ ಹ್ಯಾಂಡ್ ಬ್ರೇಕ್ ಹಾಕಿ ಬಸ್ ನಿಲ್ಲಿಸಿ, ಚಾಲಕನ್ನು ಕೆಳಗಿಳಿಸಿದ್ದಾರೆ. ನಂತರ ಅಂಬುಲೆನ್ಸ್‌ಗೂ ಕಾಯದೇ ಅಶೋಕ ನಗರ ಟ್ರಾಫಿಕ್ ಸಿಬ್ಬಂದಿ ಪ್ರಸನ್ನಕುಮಾರ್ ಸಹಾಯದಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಟ್ರಾಫಿಕ್ ಪೊಲೀಸರ ಸಮಯಪ್ರಜ್ಞೆಯಿಂದ 45 ಪ್ರಯಾಣಿಕರು ಬಚಾವ್ ಆಗಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದದಲ್ಲಿ ಮೀನಿನ ಎಣ್ಣೆ ಬೆರೆಸಿರುವುದು ಸ್ಪಷ್ಟವಾಗಿದೆ: ರಾಮಜನ್ಮಭೂಮಿ ಪ್ರಧಾನ ಅರ್ಚಕ