Tag: ಟ್ರೇಲರ್ ರಿಲೀಸ್

  • ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌

    ಕಾಂತಾರ-1 ಪ್ರಚಾರಕ್ಕೆ ಸಾಥ್ ಕೊಟ್ಟ ಸೂಪರ್‌ಸ್ಟಾರ್ಸ್‌

    ಕಾಂತಾರ ಚಾಪ್ಟರ್-1 ಸಿನಿಮಾ ಇದೇ ಅಕ್ಟೋಬರ್ 2ರಂದು ವಿಶ್ವದಾದ್ಯಂತ ತೆರೆಗೆ ಬರಲು ಭರ್ಜರಿಯಾಗಿ ತಯಾರಿ ಮಾಡಿಕೊಂಡಿದೆ. ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸಿನಿಮಾದಲ್ಲಿ ಅತಿದೊಡ್ಡ ತಾರಾಗಣವಿದೆ. ಸಿನಿಮಾ ತೆರೆಗೆ ಬರೋಕೆ ದಿನಗಣನೆ ಆರಂಭವಾಗಿದೆ. ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದೆ. ಹೀಗಾಗಿ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಭಾರತೀಯ ಚಿತ್ರರಂಗದ ಸೂಪರ್‌ಸ್ಟಾರ್ಸ್‌ಗಳನ್ನು ಕಣಕ್ಕಿಳಿಸುತ್ತಿದೆ ಹೊಂಬಾಳೆ ಸಂಸ್ಥೆ.

     

    View this post on Instagram

     

    A post shared by Hombale Films (@hombalefilms)

    ಇದೇ ಸೆ.22ರಂದು ಕಾಂತಾರ ಚಾಪ್ಟರ್-1 ಚಿತ್ರದ ಟ್ರೇಲರ್ ರಿಲೀಸ್ ಆಗುತ್ತಿದೆ. ಈ ಸಿನಿಮಾದ ಟ್ರೇಲರ್ ಬಹುಭಾಷೆಯಲ್ಲಿ ಒಟ್ಟಿಗೆ ರಿಲೀಸ್ ಆಗಲಿದೆ. ಹಿಂದಿ ಟ್ರೇಲರ್‌ನ್ನ ಬಾಲಿವುಡ್ ನಟ ಹೃತಿಕ್ ರೋಷನ್ ರಿಲೀಸ್ ಮಾಡುತ್ತಿದ್ದಾರೆ. ತಮಿಳು ವರ್ಷನ್ ಟ್ರೇಲರ್‌ನ್ನ ನಟ ಶಿವಕಾರ್ತಿಕೇಯನ್ ರಿಲೀಸ್ ಮಾಡಲಿದ್ದಾರೆ. ಇನ್ನು ಮಲಯಾಳಂ ಟ್ರೇಲರ್‌ನ್ನು ಬಹುತೇಕ ಪೃಥ್ವಿರಾಜ್ ಅಥವಾ ಮೋಹನ್‌ಲಾಲ್ ಅವರು ರಿಲೀಸ್ ಮಾಡಲಿದ್ದಾರೆ. ಇನ್ನು ತೆಲುಗು ವರ್ಷನ್ ಟ್ರೇಲರ್‌ನ್ನ ಜೂ.ಎನ್‌ಟಿಆರ್ ಅಥವಾ ಪ್ರಭಾಸ್ ರಿಲೀಸ್ ಮಾಡಿ ಚಿತ್ರತಂಡಕ್ಕೆ ಸಪೋರ್ಟ್ ಮಾಡಲಿದ್ದಾರೆ.ಇದನ್ನೂ ಓದಿ: ಕಾಂತಾರದಿಂದ ಗುಡ್ ನ್ಯೂಸ್ : ಟ್ರೇಲರ್ ರಿಲೀಸ್ ಡೇಟ್ ಫಿಕ್ಸ್

     

    View this post on Instagram

     

    A post shared by Hombale Films (@hombalefilms)

    ಚಿತ್ರದ ಟೈಟಲ್ ಟೀಸರ್ ಹಾಗೂ ಪೋಸ್ಟರ್‌ಗಳ ಮೂಲಕವೇ ಕ್ಯೂರಿಯಾಸಿಟಿ ಹುಟ್ಟಿಸಿರುವ ಕಾಂತಾರ ಸಿನಿಮಾ ಅಕ್ಟೋಬರ್ 2ರಂದು ಗ್ರ್ಯಾಂಡ್‌ ರಿಲೀಸ್‌ ಆಗಿ ತೆರೆಗಪ್ಪಳಿಸಲಿದೆ. ಕಾಂತಾರ ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿರುವ ಅಭಿಮಾನಿಗಳಿಗೆ ಟ್ರೇಲರ್ ಹೇಗಿರಲಿದೆ ಅನ್ನೋ ಕೌತುಕತೆ ದುಪ್ಪಟ್ಟಾಗಿದೆ. ಸದ್ಯ ಕಾಂತಾರ ಸಿನಿಮಾಗೆ ಭಾರತದಾದ್ಯಂತ ಸ್ಟಾರ್ಸ್‌ ಸಪೋರ್ಟ್ ಸಿಕ್ಕಿದೆ. ಟ್ರೇಲರ್ ಹೇಗಿರಲಿದೆ ಎಂದು ಕಾದು ನೋಡಬೇಕಿದೆ.

  • ಇಂದು ಕೆಜಿಎಫ್2 ಟ್ರೇಲರ್ ರಿಲೀಸ್ – ಕೋಟೆನಾಡಿನಲ್ಲಿ ಅಭಿಮಾನಿಗಳಿಂದ ಪೂಜೆ

    ಇಂದು ಕೆಜಿಎಫ್2 ಟ್ರೇಲರ್ ರಿಲೀಸ್ – ಕೋಟೆನಾಡಿನಲ್ಲಿ ಅಭಿಮಾನಿಗಳಿಂದ ಪೂಜೆ

    ಚಿತ್ರದುರ್ಗ: ಸ್ಯಾಂಡಲ್‍ವುಡ್ ನಟ ಯಶ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್2 ಚಿತ್ರದ ಟ್ರೈಲರ್ ರಿಲೀಸ್‍ಗೆ ಅಭಿಮಾನಿಗಳು ಕಾತುರರಾಗಿದ್ದಾರೆ. ಯಶ್ ಫ್ಯಾನ್ಸ್ ಹಲವು ಸಿದ್ಧತೆ ಮಾಡಿಕೊಂಡು ಕಾಯುತ್ತಿದ್ದರೆ, ಇತ್ತ ಕೋಟೆನಾಡು ಚಿತ್ರದುರ್ಗದಲ್ಲಿ ನಟ ಯಶ್ ಅಭಿಮಾನಿಗಳು ಕೊಂಚ ವಿಭಿನ್ನವಾಗಿ ಸೆಲೆಬ್ರೆಟ್ ಮಾಡುತ್ತಿದ್ದಾರೆ.

    ಕೆಜಿಎಫ್2 ಚಿತ್ರದ ಟ್ರೈಲರ್ ರಿಲೀಸ್ ಆಗುತ್ತಿರುವ ಹಿನ್ನೆಲೆಯಲ್ಲಿ, ಕೋಟೆನಾಡು ಚಿತ್ರದುರ್ಗದಲ್ಲಿ ನಟ ಯಶ್ ಅಭಿಮಾನಿಗಳು, ನಗರದ ಆಂಜನೇಯ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಕೆಜಿಎಫ್2 ಪೋಸ್ಟರ್ ಹಿಡಿದು ವಿಶೇಷ ಪೂಜೆ ಸಲ್ಲಿಸಿ ಕೆಜಿಎಫ್2 ಚಿತ್ರಕ್ಕೆ ಶುಭ ಹಾರೈಸಿದ್ದಾರೆ.

    ಸಂಜೆ ನಗರದ ಬಸವ ಮಂಟಪದಲ್ಲಿ ಕೆಜಿಎಫ್2 ಟ್ರೈಲರ್ ವೀಕ್ಷಣೆ ಮಾಡಲು ತಯಾರಿ ಮಾಡಿಕೊಂಡಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಸಂಘದಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.  ಇದನ್ನೂ ಓದಿ :  ಕೆಜಿಎಫ್ 2 ಟ್ರೈಲರ್ ಬಿಡುಗಡೆಗೆ ಹೋಸ್ಟ್ ಮಾಡಲಿದ್ದಾರೆ ಕರಣ್ ಜೋಹಾರ್

    ಬೆಂಗಳೂರಿನ ಒರಾಯನ್ ಮಾಲ್‍ನಲ್ಲಿರುವ ಪಿವಿಆರ್ ಥಿಯೇಟರ್‌ನಲ್ಲಿ ಕೆಜಿಎಫ್ 2 ಚಿತ್ರದ ಟ್ರೈಲರ್ ರಿಲೀಸ್ ಆಗಲಿದೆ. ನಟ ಶಿವರಾಜ್‍ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಕರಣ್ ಅವರು ಕಾರ್ಯಕ್ರಮದ ನಿರೂಪಣೆ ಮಾಡಲಿದ್ದಾರೆ. ಚಿತ್ರದ ಹೀರೋ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

  • Exclusive Details- ಕೆಜಿಎಫ್ 2 ರಿಲೀಸ್: ಮಾ.27ಕ್ಕೆ ಟ್ರೇಲರ್ ಲಾಂಚ್, 7 ಸಾವಿರ ಚಿತ್ರಮಂದಿರಗಳಲ್ಲಿ ರಿಲೀಸ್, ಯಾರೆಲ್ಲ ಗೆಸ್ಟ್?

    Exclusive Details- ಕೆಜಿಎಫ್ 2 ರಿಲೀಸ್: ಮಾ.27ಕ್ಕೆ ಟ್ರೇಲರ್ ಲಾಂಚ್, 7 ಸಾವಿರ ಚಿತ್ರಮಂದಿರಗಳಲ್ಲಿ ರಿಲೀಸ್, ಯಾರೆಲ್ಲ ಗೆಸ್ಟ್?

    ಶ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ಏ.14 ರಂದು ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿಯಲ್ಲಿ ಈ ಸಿನಿಮಾ ಏಕಕಾಲಕ್ಕೆ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಮಾ.27ರಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾ ತಂಡ ಸಿದ್ಧತೆ ಮಾಡಿಕೊಂಡಿದೆ. ಅವತ್ತು ಬೆಂಗಳೂರಿಗೆ ಪ್ರತಿಷ್ಠತ ಸ್ಟಾರ್ ಹೋಟೆಲ್ ನಲ್ಲಿ ಕೇವಲ ಮಾಧ್ಯಮ ಗೋಷ್ಠಿ ಮಾಡುವ ಮೂಲಕ ಟ್ರೇಲರ್ ಬಿಡುಗಡೆ ಆಗುತ್ತಿದ್ದು ಭಾರತೀಯ ಭಾಷೆಯ 180ಕ್ಕೂ ಹೆಚ್ಚು ಬೇರೆ ಭಾಷೆಯ ಪತ್ರಕರ್ತರು ಅಂದು ಟ್ರೇಲರ್ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

    ಮಾರ್ಚ್ 27ರ ಸಂಜೆ 6.45ಕ್ಕೆ ಟ್ರೇಲರ್ ಬಿಡುಗಡೆ ಆಗಲಿದ್ದು, ಚಿತ್ರತಂಡದ ಪ್ರಮುಖ ಕಲಾವಿದರು, ತಂತ್ರಜ್ಞರು ಮತ್ತು ಕನ್ನಡದ ಹೆಸರಾಂತ ನಟರು ಹಾಗೂ ಮಂತ್ರಿಗಳು ಈ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ. ಇದನ್ನೂ ಓದಿ : ಕದ್ದುಮುಚ್ಚಿ ಮದುವೆ ಆಗಿಲ್ಲ, ಬಾಡಿಗೆ ತಾಯಿ ಸುಳ್ಳು : ನಯನತಾರಾ

    ಅತಿಥಿಗಳು ಯಾರು?

    ಟ್ರೇಲರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ್ ಮತ್ತು ಶಿವರಾಜ್ ಕುಮಾರ್ ಆಗಮಿಸುತ್ತಿದ್ದು, ಸಿನಿಮಾದ ಕಲಾವಿದರಾದ ಬಾಲಿವುಡ್ ನಟ ಸಂಜಯ್ ದತ್, ಮಲಯಾಳಂ ಹೆಸರಾಂತ ನಟ ಪೃಥ್ವಿರಾಜ್, ಬಾಲಿವುಡ್ ನಟಿ ರವೀನಾ ಟಂಡನ್, ನಟ ಯಶ್, ನಟಿ ಶ್ರೀನಿಧಿ ಶೆಟ್ಟಿ, ನಿರ್ದೇಶಕ ಪ್ರಶಾಂತ್ ನೀಲ್, ಸಂಗೀತ ನಿರ್ದೇಶಕ ರವಿ ಬಸ್ರೂರು, ನಿರ್ಮಾಪಕ ವಿಜಯ ಕಿರಗಂದೂರು ಟ್ರೇಲರ್ ಬಿಡುಗಡೆ ಸಂದರ್ಭದಲ್ಲಿ ವೇದಿಕೆಯ ಮೇಲೆ ಇರಲಿದ್ದಾರೆ. ಇದನ್ನೂ ಓದಿ:  ಕಾದಂಬರಿ ಆಧರಿತ ಸಿನಿಮಾದಲ್ಲಿ ಪ್ರಿಯಾಂಕಾ ಚೋಪ್ರಾ

    7 ಸಾವಿರ ಚಿತ್ರಮಂದಿರದಲ್ಲಿ ಸಿನಿಮಾ ರಿಲೀಸ್

    ಕೆಜಿಎಫ್ 2 ಸಿನಿಮಾ ಕನ್ನಡ, ಮಲಯಾಳಂ, ಹಿಂದಿ, ತಮಿಳು ಮತ್ತು ತೆಲುಗಿನಲ್ಲಿ ಬಿಡುಗಡೆ ಆಗುತ್ತಿದ್ದು ವಿಶ್ವದಾದ್ಯಂತ ಏಳು ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಮಾಡುವ ಪ್ಲ್ಯಾನ್ ಮಾಡಲಾಗಿದೆ ಅಂತಾರೆ ನಿರ್ಮಾಪಕ ವಿಜಯ್ ಕಿರಗಂದೂರು. ಕರ್ನಾಟಕದಲ್ಲೇ 450ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ರಿಲೀಸ್ ಆದರೆ, ತಮಿಳಿನಲ್ಲಿ ಸಾವಿರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಕೆಜಿಎಫ್ 2 ಪ್ರದರ್ಶನ ಕಾಣಲಿದೆ. ಹಾಗೆಯೇ ವಿವಿಧ ಭಾಷೆಯ ಚಿತ್ರಮಂದಿರಗಳಲ್ಲಿ ಸಾವಿರ ಸಾವಿರ ಥಿಯೇಟರ್ ನಲ್ಲಿ ಈ ಸಿನಿಮಾ ರಿಲೀಸ್ ಆಗುತ್ತಿರುವುದು ವಿಶೇಷ. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಅರೆಬಿಕ್ ಮತ್ತು ಇಂಗ್ಲಿಷ್ ನಲ್ಲಿ ಸಬ್ ಟೈಟಲ್

    ಐದು ಭಾಷೆಗಳ ಹೊರತಾಗಿ ಉಳಿದಂತೆ ಎಲ್ಲ ಭಾಷೆಯ ಚಿತ್ರಗಳಲ್ಲೂ ಇಂಗ್ಲಿಷ್ ನಲ್ಲಿ ಸಬ್ ಟೈಟಲ್ ಇರುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. ಆದರೆ, ದುಬೈನಲ್ಲಿ ಮಾತ್ರ ಸಬ್ ಟೈಟಲ್ ಭಾಷೆ ಬದಲಾಗಲಿದೆ. ಇಲ್ಲಿ ಅರೆಬಿಕ್ ಭಾಷೆಯ ಸಬ್ ಟೈಟಲ್ ನಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ. ಚೀನಾ ಸೇರಿದಂತೆ ಇತರ ಭಾಷೆಯ ಸಬ್ ಟೈಟಲ್ ಗೂ ಬೇಡಿಕೆಯಿದ್ದು, ಅಲ್ಲೆಲ್ಲ ಇಂಗ್ಲಿಷ್ ನಲ್ಲಿಯೇ ಚಿತ್ರವನ್ನು ವೀಕ್ಷಿಸಬಹುದಾಗಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    70 ದೇಶಗಳಲ್ಲಿ ಕೆಜಿಎಫ್ 2 ಬಿಡುಗಡೆ

    ಜಪಾನ್, ಅಮೆರಿಕಾ, ಇಂಗ್ಲೆಂಡ್, ದುಬೈ ಹೀಗೆ 70ಕ್ಕೂ ಹೆಚ್ಚು ದೇಶಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವ ಪ್ಲ್ಯಾನ್ ಮಾಡಿದ್ದಾರೆ ನಿರ್ಮಾಪಕರು. ಈಗಾಗಲೇ ಚಿತ್ರಕ್ಕೆ ಸಾಕಷ್ಟು ಬೇಡಿಕೆ ಬಂದಿದ್ದು, ಅಷ್ಟೂ ದೇಶಗಳಲ್ಲೂ ಏಕಕಾಲಕ್ಕೆ ಚಿತ್ರವನ್ನು ಬಿಡುಗಡೆ ಮಾಡುವ ಪ್ಲ್ಯಾನ್ ಮಾಡಲಾಗಿದೆ. ಚಿತ್ರಕ್ಕೆ ಹೆಚ್ಚಿನ ಹಣವೂ ವಿದೇಶದಿಂದಲೇ ಹರಿದು ಬರಲಿದೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

    ಪ್ರಿ ರಿಲೀಸ್ ಇವೆಂಟ್ ಇಲ್ಲ

    ಕೋವಿಡ್ ನಿಯಮ ಮತ್ತು ಅಪ್ಪು ನಿಧನದಿಂದಾಗಿ ಈ ಬಾರಿ ಪ್ರಿ ರಿಲೀಸ್ ಇವೆಂಟ್ ಇರುವುದಿಲ್ಲ ಎಂದು ತಿಳಿಸಿದ್ದಾರೆ ನಿರ್ಮಾಪಕ ವಿಜಯ್ ಕಿರಗಂದೂರ್. ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ನಿರ್ಮಾಪಕರಿಗೆ ಸಾಕಷ್ಟು ಒತ್ತಡವಿದ್ದು, ಬೇರೆ ಭಾಷೆಯಲ್ಲೂ ಪ್ರಿ ರಿಲೀಸ್ ಇವೆಂಟ್ ಮಾಡುವಂತೆ ಕೇಳುತ್ತಿದ್ದಾರೆ. ಆದರೆ, ಕೋವಿಡ್ ನಿಯಮ ಮತ್ತು ಅಪ್ಪು ನಿಧನದ ಕಾರಣದಿಂದಾಗಿ ಪ್ರಿ ರಿಲೀಸ್ ಇವೆಂಟ್ ಆಯೋಜನೆ ಮಾಡಿಲ್ಲ ಚಿತ್ರತಂಡ.