ನವದೆಹಲಿ: ರೈತರಿಗೆ ಕನಿಷ್ಠ ಬೆಂಬಲ ಬೆಲೆ (MSP) ಖಾತ್ರಿಪಡಿಸುವ ಕಾನೂನನ್ನು ಕೇಂದ್ರ ಸರ್ಕಾರ ಜಾರಿಗೆ ತರಬೇಕು ಇಲ್ಲದಿದ್ದಲ್ಲಿ ನಾಲ್ಕು ಲಕ್ಷ ಟ್ರ್ಯಾಕ್ಟರ್ ಗಳನ್ನೊಳಗೊಂಡ ಮತ್ತೊಂದು ಬೃಹತ್ ಪ್ರತಿಭಟನಾ ರ‍್ಯಾಲಿಯನ್ನು ಗಣರಾಜ್ಯೋತ್ಸವ ದಿನದಂದು ಎದುರಿಸಬೇಕುತ್ತದೆ ಎಂದು ಮೋದಿ ಸರ್ಕಾರಕ್ಕೆ ಭಾರತ್ ಕಿಸಾನ್ ಯೂನಿಯನ್ ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆ ನೀಡಿದ್ದಾರೆ.
ಮುಂಬೈನ ಆಜಾದ್ ಮೈದಾನದಲ್ಲಿ ನಡೆದ ಮಹಾಪಂಚಾಯತ್‍ನ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಸರ್ಕಾರ ಮೂರು ಕೃಷಿ ಕಾಯ್ದೆಯನ್ನು ಹಿಂಪಡೆದಿದೆ. ಆದರೆ ಈ ಬಿಲ್ ಸಂಸತ್‍ನಲ್ಲಿ ಪಾಸ್ ಆದ ಬಳಿಕ ನಮ್ಮ ಇತರ 6 ಬೇಡಿಕೆಗಳನ್ನು ಕೇಂದ್ರ ಸರ್ಕಾರ ಒಪ್ಪಿಕೊಳ್ಳಬೇಕು. ಆದರೆ ಸರ್ಕಾರ ಮಾತ್ರ ನಮ್ಮ ಚರ್ಚೆಯಿಂದ ಓಡಿಹೋಗುತ್ತಿದೆ. ಬೇಡಿಕೆ ಈಡೇರುವವರೆಗೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ಕೊಟ್ಟರು. ಇದನ್ನೂ ಓದಿ: ಟ್ರ್ಯಾಕ್ಟರ್ ರ‍್ಯಾಲಿ ಹಿಂಸಾಚಾರ- ರೈತ ಮುಖಂಡರಿಗೆ ಲುಕ್‍ಔಟ್ ನೋಟಿಸ್ ಜಾರಿ
ಮೋದಿ ಈ ಹಿಂದೆ ಗುಜರಾತ್‍ನ ಮುಖ್ಯಮಂತ್ರಿಯಾಗಿದ್ದಾಗ ಎಂಎಸ್‍ಪಿ ಕಾನೂನನ್ನು ಬೆಂಬಲಿಸುತ್ತಿದ್ದರು ಆದರೆ ಇದೀಗ ಮಾತ್ರ ಮೋದಿ ಈ ಬಗ್ಗೆ ಯಾವುದೇ ನಿರ್ಣಯಕೈಗೊಂಡಿಲ್ಲ. ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಮತ್ತೊಮ್ಮೆ ಜನವರಿ. 26 ರಂದು ಪ್ರತಿಭಟನೆ ನಡೆಸಲು ಸಿದ್ಧರಾಗಿದ್ದೇವೆ. 4 ಲಕ್ಷ ಟ್ರ್ಯಾಕ್ಟರ್‌ಗಳು ಹಾಗೂ ರೈತರು ಈಗಾಗಲೇ ರೆಡಿಯಾಗಿದ್ದಾರೆ ಗುಡುಗಿದ್ದಾರೆ. ಇದನ್ನೂ ಓದಿ: ಉಪಚುನಾವಣೆಯಲ್ಲಿ ಹಿನ್ನಡೆ, ಪಂಚರಾಜ್ಯಗಳ ಚುನಾವಣೆಯ ಮೇಲೆ ಕಣ್ಣು – ಕೃಷಿ ಕಾಯ್ದೆ ವಾಪಸ್!
ಕಳೆದ ವರ್ಷ 2021 ಜನವರಿ 26 ರಂದು ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ರ‍್ಯಾಲಿ ಘರ್ಷಣೆಗೆ ಕಾರಣವಾಗಿತ್ತು. ರೈತರು ಕೆಂಪುಕೋಟೆಗೆ ನುಗ್ಗಿ ಕಿಸಾನ್ ಮತ್ತು ಸಿಖ್ ಧ್ವಜ ಹಾರಿಸಿ ಹಿಂಸಾಚಾರಕ್ಕೆ ಕಾರಣವಾಗಿತ್ತು. ಬಳಿಕ ಪೊಲೀಸರು ಲಾಠಿಚಾರ್ಚ್ ಮಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಚಂಡೀಗಢ: ಕೇಂದ್ರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಗಣರಾಜ್ಯೋತ್ಸವ ದಿನದಂದು ಟ್ರ್ಯಾಕ್ಟರ್ ರ್‍ಯಾಲಿ ನಡೆಸಿ ಬಂಧನಕ್ಕೊಳಗಾಗಿರುವ 83 ರೈತರಿಗೆ ಆರ್ಥಿಕ ನೆರವು ನೀಡಲು ತಲಾ 2 ಲಕ್ಷ ರೂ. ಪರಿಹಾರವನ್ನು ಪಂಜಾಬ್ ಸರ್ಕಾರ ಘೋಷಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ, ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರೈತರ ಪರವಾಗಿ ನಮ್ಮ ಸರ್ಕಾರ ಇದೆ. ಟ್ರ್ಯಾಕ್ಟರ್ ರ್‍ಯಾಲಿಯಲ್ಲಿ ಬಂಧನಕ್ಕೊಳಗಾಗಿರುವ ರೈತರಿಗೆ ತಲಾ ಎರಡು ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಮೆರಿಕಗೆ ತೆರಳಿದ ಅಪ್ಪು ಮಗಳು ಧೃತಿ
Reiterating My Govt’s stand to support the ongoing #FarmersProtest against three black farm laws, We have decided to give Rs 2 lakh compensation to 83 people arrested by Delhi Police for carrying out a tractor rally in the national capital on 26th January, 2021.
ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಭಾಗಗಳಲ್ಲಿ ಪಂಜಾಬ್, ಹರಿಯಾಣ ರೈತರು ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಕೃಷಿ ಕ್ಷೇತ್ರವನ್ನು ಖಾಸಗಿಯವರ ಕೈಗಳಿಗೆ ನೀಡುವ ಹುನ್ನಾರ ಎಂದು ರೈತರು ಆರೋಪಿಸಿದ್ದಾರೆ. ಇದನ್ನು ಕೇಂದ್ರ ಸರ್ಕಾರ ಅಲ್ಲೆಗಳೆದಿದ್ದು, ಕಾಯ್ದೆಗಳಿಗೆ ಅಗತ್ಯ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಿದೆ. ಆದರೆ ಅವುಗಳನ್ನು ಹಿಂಪಡೆಯುವಂತೆ ರೈತರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ನನ್ನ ತಪ್ಪು ಸಾಬೀತಾದರೆ ಪದ್ಮಶ್ರೀ ಹಿಂದಿರುಗಿಸುವೆ: ಕಂಗನಾ ರಣಾವತ್
ರೈತರು ಜನವರಿ ವೇಳೆ ಟ್ರ್ಯಾಕ್ಟರ್ ರ್‍ಯಾಲಿ ಹಮ್ಮಿಕೊಂಡಿದ್ದರು. ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕುವ ರೈತರು ಯೋಜನೆ ರೂಪಿಸಿದ್ದರು. ಆಗ ಎಲ್ಲೆಡೆ ಬ್ಯಾರಿಕೇಡ್‍ಗಳನ್ನು ಹಾಕಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಅದನ್ನೂ ಲೆಕ್ಕಿಸದೇ ರೈತರು ಕೆಂಪು ಕೋಟೆ ಪ್ರವೇಶಿಸಿ ಧ್ವಜಾರೋಹಣ ಮಾಡಿದ್ದರು. ಈ ವೇಳೆ ಹಲವರನ್ನು ಬಂಧಿಸಲಾಗಿತ್ತು.
– ಟ್ರ್ಯಾಕ್ಟರ್ ರ‍್ಯಾಲಿ ಬಗ್ಗೆ ನಾಯಕರ ನಡುವೆ ಮಾತಿನ ಚಕಮಕಿ
ಗದಗ: ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಕಾಂಗ್ರೆಸ್ ನಾಯಕ ಎಚ್.ಕೆ.ಪಾಟೀಲ್ ನಡುವಿನ ವಾಕ್ ಸಮರ ತಾರಕಕ್ಕೇರಿದೆ.
ಟ್ರ್ಯಾಕ್ಟರ್ ರ‍್ಯಾಲಿಯೊಂದಿಗೆ ಡಿಸಿ ಕಚೇರಿಗೆ ನುಗ್ಗಿರುವ ಬಗ್ಗೆ ಕಾಂಗ್ರೆಸ್ ಹಿರಿಯ ಶಾಸಕ ಎಚ್.ಕೆ.ಪಾಟೀಲ್ ವಿರುದ್ಧ ಸಚಿವ ಸಿ.ಸಿ.ಪಾಟೀಲ್ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದರು. ಇಬ್ಬರೂ ಉತ್ತರಕ್ಕೆ, ಪ್ರತ್ಯುತ್ತರ ನೀಡುವುದು ಜೋರಾಗಿಯೇ ನಡೆಯುತ್ತಿತ್ತು. ಸಿ.ಸಿ.ಪಾಟೀಲ್ ಅವರಿಂದ ಹೆದರಿಸುವ ಪ್ರವೃತ್ತಿ ಆರಂಭವಾಗಿದೆ. ದೆಹಲಿಯಲ್ಲಿ ರೈತರನ್ನು ಪಾಕಿಸ್ತಾನಿ, ಖಲಿಕಿಸ್ತಾನಿ ಅಂದರು. ಅದೇ ಆರೋಪವನ್ನು ಇಲ್ಲಿ ಮಾಡುವ ಪ್ರಯತ್ನವನ್ನು ಸರ್ಕಾರದ ಸಚಿವರು ಮಾಡುತ್ತಿದ್ದಾರೆ ಎಂದು ಎಚ್.ಕೆ.ಪಾಟೀಲ್ ಆರೋಪಿಸಿದರು. ಇದನ್ನೂ ಓದಿ: ಕಾಂಗ್ರೆಸ್ ಟ್ರ್ಯಾಕ್ಟರ್ ರ‍್ಯಾಲಿಯಿಂದ ಗದಗವನ್ನು ದೆಹಲಿ ಆಗಲು ಬಿಡಲ್ಲ: ಸಿ.ಸಿ ಪಾಟೀಲ್
ಮನವಿ ನೀಡಲು ಬಂದ ವೇಳೆ ಡಿಸಿ ಇರಲಿಲ್ಲ. ಆ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳುವ ಬದಲು, ಪೊಲೀಸರಿಗೆ, ಪ್ರತಿಭಟನಾ ನಿರತ ರೈತರನ್ನು ಹೆದರಿಸುತ್ತಿದ್ದಾರೆ. ನಾವು ರೈತರು ಹೆದರಲ್ಲ. ಗದಗಿನ ಗಂಡು ಭೂಮಿಯಿಂದ ಬಂದವರು ಹೆದರಿ ಓಡಿ ಹೋಗುತ್ತಾರೆ ಎಂದುಕೊಂಡಿದ್ದೀರಾ? ಟ್ರ್ಯಾಕ್ಟರ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದರೆ ತಪ್ಪಾ? ಮರಳು ದಂಧೆಕೋರರು, ಮದ್ಯ ಮಾರಾಟಗಾರರು, ಇನ್ಯಾರೋ ಕಾರ್ ತೆಗೆದುಕೊಂಡು ಡಿಸಿ ಕಚೇರಿ ಒಳಗೆ ಬರುತ್ತಾರೆ. ಅದೇ ರೈತರು ಡಿಸಿ ಕಚೇರಿಗೆ ಬರುವುದು ತಪ್ಪಾ ಎಂದು ತಿರುಗೇಟು ನೀಡಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಸಹ ಹರಿಹಾಯ್ದು, ನನ್ನ ಟೀಕೆಗೆ ಸ್ಪಂದಿಸಿದ್ದಾರೆ ಎಂಬ ಸಮಾಧಾನವಿದೆ. ಆದರೆ ಅರ್ಧ ಟೀಕೆಗೆ ಸ್ಪಂದಿಸುವುದು, ಇನ್ನು ಅರ್ಧ ಟೀಕೆಗೆ ಸ್ಪಂದಿಸದೇ ಇರುವುದು ಸರಿಯಲ್ಲ. ನಿಮ್ಮ ಸರ್ಕಾರ ನುಡಿದಂತೆ ನಡೆಯಲಿಲ್ಲಾ, ಮೋದಿ ಅವರು ವಚನ ಭ್ರಷ್ಠರು ಎಂಬ ಆರೋಪದ ಬಗ್ಗೆ ಸ್ಪಷ್ಟನೆ ನೀಡಲಿಲ್ಲ. ಇದನ್ನು ನೋಡಿದರೆ ನಿಮ್ಮ ಸರ್ಕಾರ ಮಾತು ತಪ್ಪಿದ ಭ್ರಷ್ಠ ಸರ್ಕಾರ ಎಂದು ಒಪ್ಪಿಕೊಂಡಂತೆ ಎಂದು ಹರಿಹಾಯ್ದರು.
ಹರಿಯಾಣದ ಜಿಂದ್ ಜಿಲ್ಲೆಯ ಕರ್ಮವೀರ್ ಸಿಂಗ್ (52) ಆತ್ಮಹತ್ಯೆಗೆ ಶರಣಾದ ರೈತ. ಹರಿಯಾಣದ ಚರಕಿ ದಾದ್ರಿ ಮೈದಾನದಲ್ಲಿ ಈ ಘಟನೆ ನಡೆದಿದೆ. ಭಾರತ್ ಕಿಸಾನ್ ಯೂನಿಯನ್ ಜಿಂದಾಬಾದ್, ಸಮಸ್ಯೆ ಇತ್ಯರ್ಥಗೊಳಿಸದ ಮೋದಿ ಸರ್ಕಾರ ದಿನಾಂಕಗಳ ದಿನ ನೀಡುತ್ತಾ ಹೋಗುತ್ತಿದೆ. ಈ ಕಾನೂನುಗಳನ್ನ ಹಿಂಪಡೆಯುವ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಮೃತ ರೈತ ಡೆತ್ ನೋಟ್ ನಲ್ಲಿ ಬರೆದಿದ್ದಾರೆ ಎಂದು ವರದಿಯಾಗಿದೆ.
40 ಲಕ್ಷ ಟ್ರ್ಯಾಕ್ಟರ್: ಇತ್ತ ಮಹಾಪಂಚಾಯತ್ ನಲ್ಲಿ ಮಾತನಾಡಿದ ಭಾರತ್ ಕಿಸಾನ್ ಯೂನಿಯನ್ ಮುಂದಾಳು ರಾಕೇಶ್ ಟಿಕಾಯತ್, 2021ರ ರೈತ ಕ್ರಾಂತಿಗೆ ಕರೆ ಕೊಟ್ಟರು. ಜನವರಿ 26ರಂದು 20 ಸಾವಿರ ಟ್ರ್ಯಾಕ್ಟರ್ ಸೇರಿಸುವುದು ನಮ್ಮ ಗುರಿಯಾಗಿತ್ತು. ಆದ್ರೆ ಅನ್ನದಾತರು 2021ರ ಕಿಸಾನ್ ಕ್ರಾಂತಿಗೆ ಸಿದ್ಧರಾಗಬೇಕಿದೆ. ಈಗ 40 ಲಕ್ಷ ಟ್ರ್ಯಾಕ್ಟರ್ ಗಳ ರ‍್ಯಾಲಿ ನಡೆಸೋದು ನಮ್ಮ ಮುಂದಿನ ಗುರಿ ಎಂದು ಕರೆ ನೀಡಿದ್ದಾರೆ.
ನವದೆಹಲಿ: ಗಣರಾಜ್ಯೋತ್ಸವದ ದಿನ ರೈತರ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ನಡೆದ ಹಿಂಸಾಚಾರದ ಕುರಿತು ದೆಹಲಿ ಪೊಲೀಸರು ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ.
ದೆಹಲಿಯ ಟ್ರ್ಯಾಕ್ಟರ್ ರ‍್ಯಾಲಿ ವೇಳೆ ಕೆಂಪು ಕೋಟೆ ಮೇಲೆ ದಾಳಿ ನಡೆಸಿ, ಸಂಪೂರ್ಣವಾಗಿ ಧ್ವಂಸ ಮಾಡಲಾಗಿತ್ತು. ಈ ಹಿಂಸಾಚಾರದ ಕುರಿತು ಇದೀಗ ಪೊಲೀಸರು ದಂಗೆಕೋರರ ಚಿತ್ರಗಳನ್ನು ಬಿಡುಗಡೆ ಮಾಡಿದ್ದಾರೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಈ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಮುಖದ ಚಹರೆಯ ಆಧಾರದ ಮೇಲೆ ಶಂಕಿತರನ್ನು ಗುರುತಿಸಿದ್ದಾರೆ. ಒಟ್ಟು 42 ಜನರನ್ನು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್(ಸಿಐಎಸ್‍ಎಫ್) ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿದ್ದು, 20 ಜನರನ್ನು ವಾಟ್ಸಪ್ ವಿಡಿಯೋಗಳ ಮೂಲಕ ಪತ್ತೆ ಹಚ್ಚಲಾಗಿದೆ.
ಶಂಕಿತರ ಪತ್ತೆಗೆ ಈಗಾಗಲೇ ತಂಡ ರಚಿಸಿದ್ದು, ಕಾರ್ಯಾಚರಣೆ ನಡೆಸಲಾಗುತ್ತಿದೆ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಕೆಲ ಶಂಕಿತರು ದೆಹಲಿ ಬಿಟ್ಟು ಪರಾರಿಯಾಗಿದ್ದು, ಇನ್ನೂ ಹಲವರು ತಲೆ ಮರೆಸಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ದೆಹಲಿ ಪೊಲೀಸರಿಗೆ ಸಿಕ್ಕ ಮಾಹಿತಿ ಪ್ರಕಾರ ಇನ್ನೂ ಹಲವರು ಮರಳಿ ತಮ್ಮ ಮೂಲ ಸ್ಥಳಗಳಿಗೆ ತೆರಳಿದ್ದಾರೆ, ಬಂಧಿತ ಇಬ್ಬರ ಪೈಕಿ ಒಬ್ಬನನ್ನು ಧರ್ಮೇಂದ್ರ ಸಿಂಗ್ ಹರ್ಮಾನ್ ಎಂದು ಗುರುತಿಸಲಾಗಿದೆ. ಹಿಂಸಾಚಾರದ ವಿಡಿಯೋ ಆಧರಿಸಿ ಈ ಇಬ್ಬರನ್ನು ಬಂಧಿಸಲಾಗಿದೆ. ಅಲ್ಲದೆ ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿದ್ದರಲ್ಲಿ ಧರ್ಮೇಂದ್ರ ಸಿಂಗ್ ಹರ್ಮಾನ್ ಪಾತ್ರ ಸಹ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 26ರ ಗಣರಾಜ್ಯೋತ್ಸವದಂದು ನಡೆದ ಹಿಂಸಾಚಾರದ ವೇಳೆ ಸಾವಿರಾರು ಜನ ದೆಹಲಿಯ ಕೆಂಪು ಕೋಟೆಯನ್ನು ಧ್ವಂಸ ಮಾಡಿದ್ದು, ಪೀಠೋಪಕರಣಗಳನ್ನು ಸಂಪೂರ್ಣ ನಾಶ ಮಾಡಿದ್ದಾರೆ. ಅಲ್ಲದೆ ಕೆಂಪು ಕೋಟೆ ಮೇಲೆ ಸಿಖ್ ಧ್ವಜ ಹಾರಿಸಿ ಉದ್ಧಟತನ ಮೆರೆದಿದ್ದಾರೆ. ಪೊಲೀಸರು ಈ ವರೆಗೆ 124 ಜನರನ್ನು ಬಂಧಿಸಿದ್ದು, 44 ಎಫ್‍ಐಆರ್‍ಗಳನ್ನು ದಾಖಲಿಸಿದ್ದಾರೆ. ಅಲ್ಲದೆ ವಿವಿಧ ಸಾಮಾಜಿಕ ಜಾಲತಾಣಗಳ ಖಾತೆಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಂಗಳೂರು: ನಾಳಿನ ಟ್ರ್ಯಾಕ್ಟರ್ ರ‍್ಯಾಲಿ ಪ್ರತಿಭಟನೆಗೆ ಅವಕಾಶವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿದ್ದಾರೆ.
ವಿವಿಧ ರೈತ ಸಂಘಟನೆಗಳು ಕೇಂದ್ರದ ಕೃಷಿ ಕಾಯ್ದೆಯನ್ನು ವಿರೋಧಿ ನಗರದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಲು ಕರೆ ನೀಡಿದ್ದರು. ಈ ಸಂಬಂಧ ಇಂದು ಸಭೆ ನಡೆಸಿದ ಕಮಲ್ ಪಂಥ್ ನಾಳಿನ ಟ್ರ್ಯಾಕ್ಟರ್ ರ‍್ಯಾಲಿಗೆ ಅನುಮತಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.
ನಾಳೆ ಗಣರಾಜ್ಯೋತ್ಸವಕ್ಕೆ ಪರಿಸ್ಥಿತಿ ನೋಡಿಕೊಂಡು ಬಂದೋಬಸ್ತ್ ಮಾಡಲಾಗುತ್ತದೆ. ಇಂದು ಸಂಜೆಯಿಂದಲೇ ಬಂದೋಬಸ್ತ್ ವ್ಯವಸ್ಥೆ ಆಗಲಿದೆ. ನಗರದಲ್ಲಿ ಶಾಂತಿಯುತ ಪ್ರತಿಭಟನೆಗೆ ಮಾತ್ರ ಅವಕಾಶ. ಟ್ರ್ಯಾಕ್ಟರ್ ಮೂಲಕ ಪ್ರತಿಭಟನೆಗೆ ಬಂದರೆ ಅವರನ್ನು ನಗರದ ಒಳಗೆ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಸಾಂಕೇತಿಕವಾಗಿಯೂ ಟ್ರ್ಯಾಕ್ಟರ್‌ನಲ್ಲಿ ಪ್ರತಿಭಟನೆಗೆ ಅವಕಾಶವಿಲ್ಲ. ಹಿಂದೆ ಎಂದೂ ಟ್ರ್ಯಾಕ್ಟರ್ ಮೂಲಕ ನಗರದಲ್ಲಿ ಪ್ರತಿಭಟನೆ ಆಗಿಲ್ಲ. ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲು ಕೆಲವರು ಅರ್ಜಿ ನೀಡಿದ್ದಾರೆ. ಆ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಬೆಂಗಳೂರು: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ರಾಜ್ಯದ ರೈತರು ಮತ್ತೊಮ್ಮೆ ಬೀದಿಗಿಳಿಯಲಿದ್ದಾರೆ. ಜನವರಿ 26ರಂದು ಅಂದ್ರೆ ಗಣರಾಜ್ಯೋತ್ಸವದಂದೇ ಟ್ರ್ಯಾಕ್ಟರ್ ಮಾರ್ಚ್ ಮೂಲಕ ಬಿಸಿ ಮುಟ್ಟಿಸಲು ರೈತ ಸಂಘಟನೆಗಳು ಮುಂದಾಗಿವೆ. ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಸೇರಿದಂತೆ 25 ಸಾವಿರಕ್ಕೂ ಹೆಚ್ಚು ವಾಹನಗಳ ಮೂಲಕ ಅನ್ನದಾತರು ಬೃಹತ್ ರ‍್ಯಾಲಿ ಮಾಡಲಿದ್ದಾರೆ.
ಬೆಂಗಳೂರಿಗೆ ರಾಜ್ಯದ ಮೂಲೆ ಮೂಲೆಯಿಂದ ರೈತರು ಆಗಮಿಸಲಿದ್ದಾರೆ. ಐಕ್ಯ ಹೋರಾಟ ಸಮಿತಿ, ರೈತ ಸಂಘಟನೆ, ದಲಿತ ಸಂಘಟನೆಗಳು, ಕನ್ನಡ ಸಂಘಟನೆಗಳು ಹೋರಾಟ ನಡೆಸಲಿದ್ದು, ನೈಸ್ ರಸ್ತೆ ಜಂಕ್ಷನ್‍ನಿಂದ ಆರಂಭವಾಗುವ ರೈತರ ರ‍್ಯಾಲಿ, ಗೊರಗುಂಟೆಪಾಳ್ಯ, ಯಶವಂತಪುರ ಮಾರ್ಗವಾಗಿ ಫ್ರೀಡಂಪಾರ್ಕ್ ತಲುಪಲಿದೆ. ಕೇವಲ ನೈಸ್ ರೋಡ್ ಮಾತ್ರವಲ್ಲ.. ಬೆಂಗಳೂರಿನ ದಶ ದಿಕ್ಕುಗಳಿಂದಲೂ ರೈತ ಪ್ರವಾಹ ರಾಜಧಾನಿಗೆ ಹರಿದುಬರಲಿದೆ. ಸಿಎಂ ಯಡಿಯೂರಪ್ಪ ಭಾಷಣ ಮುಗಿಯುತ್ತಲೇ, ರಾಜಧಾನಿಯಲ್ಲಿ ಟ್ರ್ಯಾಕ್ಟರ್ ಮಾರ್ಚ್‍ಗೆ ರೈತ ಸಂಘಟನೆಗಳು ಸಕಲ ಪ್ಲಾನ್ ಮಾಡಿಕೊಂಡಿವೆ.
ರಾಜಧಾನಿಗೆ ಟ್ರ್ಯಾಕ್ಟರ್ ಪ್ರವಾಹ: ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ನೈಸ್ ರೋಡ್ ಜಂಕ್ಷನ್‍ನಿಂದ ಪ್ರತಿಭಟನೆ ಶುರುವಾಗಲಿದೆ. ಗೊರಗುಂಟೆಪಾಳ್ಯ – ಮಲ್ಲೇಶ್ವರಂ – ಫ್ರೀಡಂಪಾರ್ಕ್‍ವರೆಗೂ ಟ್ರ್ಯಾಕ್ಟರ್ ರ‍್ಯಾಲಿ ನಡೆಯಲಿದೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಮೈಸೂರಿನಿಂದಲೇ ರ‍್ಯಾಲಿ ಆರಂಭಗೊಂಡು ನಾಯಂಡಳ್ಳಿ ಮಾರ್ಗವಾಗಿ ಟ್ರ್ಯಾಕ್ಟರ್, ಎತ್ತಿನ ಗಾಡಿ ಮೂಲಕ ರೈತರು ಬೆಂಗಳೂರಿಗೆ ಎಂಟ್ರಿ ಕೊಡಲಿದ್ದಾರೆ. ಚಿಕ್ಕಬಳ್ಳಾಪುರ ರೈತರು ಹೆಬ್ಬಾಳ ಮಾರ್ಗವಾಗಿ ಮತ್ತು ಕೋಲಾರ ರೈತರು ಕೆ.ಆರ್ ಪುರಂ ಮಾರ್ಗವಾಗಿ ಪೆರೇಡ್ ನಡೆಸಲಿದ್ದಾರೆ. ಇನ್ನು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ರೈತರು ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಸೇರಿ ಬೃಹತ್ ರ್ಯಾಲಿ ನಡೆಸಲಿದ್ದಾರೆ.
ನಮ್ಮ ಪೆರೇಡ್ ಅನ್ನು ತಡೆದರೇ ಇಡೀ ಬೆಂಗಳೂರು ಲಾಕ್ ಆಗಲಿದೆ. ದೆಹಲಿ ಮಾದರಿಯಲ್ಲೇ ನಮ್ಮ ಹೋರಾಟ ಸಾಗಲಿದೆ ಎಂದು ಸರ್ಕಾರಕ್ಕೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಸಿದ್ದಾರೆ. ನಮ್ಮ ಬೃಹತ್ ಹೋರಾಟ ಶಾಂತಿಯುತವಾಗಿರಲಿದೆ. ಸರ್ಕಾರಕ್ಕೆ ರೈತರ ಮೇಲೆ ಕಾಳಜಿ ಇದ್ದರೆ ಈ ಕೂಡಲೇ ಕಾಯ್ದೆಯನ್ನು ವಾಪಸ್ ಪಡೆಯಬೇಕು ಎಂದು ರೈತರ ಮುಖಂಡ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.
‘ಖಾಕಿ’ ಬ್ರೇಕ್?: ಬೆಂಗಳೂರಿನಲ್ಲಿ ನಡೆಯಲಿರುವ ರೈತರ ಬೃಹತ್ ಟ್ರ್ಯಾಕರ್ ರ‍್ಯಾಲಿಗೆ ಇನ್ನೂ ಅನುಮತಿ ಸಿಕ್ಕಿಲ್ಲ. ಪೊಲೀಸ್ ಆಯುಕ್ತರಿಗೆ ಅನುಮತಿ ಕೋರಿ ಪತ್ರ ಬರೆಯಲಾಗಿದೆ. ಸೋಮವಾರ ಆಯುಕ್ತ ಕಮಲ್ ಪಂಥ್ ಸಭೆ ನಡೆಸಿ ನಿರ್ಧಾರ ತಿಳಿಸಲಿದ್ದಾರೆ. ಪಬ್ಲಿಕ್ ಟಿವಿಗೆ ಸಿಕ್ಕ ಮಾಹಿತಿ ಪ್ರಕಾರ, ಅನ್ನದಾತರ ಟ್ರ್ಯಾಕ್ಟರ್ ರ‍್ಯಾಲಿಗೆ ಬ್ರೇಕ್ ಹಾಕಲು ಖಾಕಿ ಪಡೆ ಪ್ಲಾನ್ ಮಾಡಿಕೊಂಡಿದೆ.
ಬೆಂಗಳೂರು ಹೊರ ಭಾಗದಲ್ಲೇ ಟ್ರ್ಯಾಕ್ಟರ್ ತಡೆಗೆ ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ. ಟ್ರ್ಯಾಕ್ಟರ್ ಬಿಟ್ಟು, ರೈತರು ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವ ಸಾಧ್ಯತೆಗಳಿವೆ. ರೈತರು ಬೈಕ್‍ಗಳಲ್ಲಿ ಬಂದರೇ ತಡೆ ಉಂಟು ಮಾಡಬಾರದು. ಬೆಂಗಳೂರು ಸುತ್ತಲಿನ ಜಿಲ್ಲಾ ಎಸ್‍ಪಿಗಳಿಗೆ ಆದೇಶ ರವಾನಿಸಲಾಗಿದೆ ಎನ್ನಲಾಗಿದೆ. ಜಿಲ್ಲೆಗಳಿಂದ ಟ್ರ್ಯಾಕ್ಟರ್ ಹೊರಡದಂತೆ ತಡೆಯಲು ಸೂಚನೆ ನೀಡಲಾಗಿದೆ ಎನ್ನಲಾಗಿದೆ.
ಯಾರ ಬೆಂಬಲ: ರೈತರ ಟ್ರ್ಯಾಕ್ಟರ್ ರಣಕಹಳೆಗೆ ಕಾಂಗ್ರೆಸ್ ಕಿಸಾನ್ ಘಟಕ ಬೆಂಬಲ ಸೂಚಿಸಿದೆ. ಇನ್ನುಳಿದಂತೆ ಕನ್ನಡ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆ, ದಲಿತ ಸಂಘಟನೆ, ಮಹಿಳಾ ಸಂಘಟನೆಗಳು ಮತ್ತು ಕನ್ನಡ ಸಂಘಟನೆಗಳು ರೈತರ ಹೋರಾಟಕ್ಕೆ ಬೆಂಬಲ ನೀಡಿವೆ. ಬೃಹತ್ ರ‍್ಯಾಲಿಯಿಂದ ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಆಗಲಿದೆ. ಸರ್ಕಾರಿ ರಜೆ ಅಂತ ಬೆಂಗಳೂರಿನಲ್ಲಿ ರಸ್ತೆಗಿಳಿದ್ರೆ ಮಂಗಳವಾರ ಟ್ರಾಫಿಕ್‍ನಲ್ಲಿ ಸಿಲುಕಿಕೊಳ್ಳುವುದು ಖಂಡಿತ.
ದೆಹಲಿಯಲ್ಲೂ ರೈತರ ಟ್ರ್ಯಾಕ್ಟರ್ ಪರೇಡ್‍ಗೆ ದೆಹಲಿ ಪೊಲೀಸರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. 1 ಲಕ್ಷಕ್ಕೂ ಅಧಿಕ ಟ್ರ್ಯಾಕ್ಟರ್ ಮೂಲಕ ರೈತರು ಕೇಂದ್ರದ ವಿರುದ್ಧ ಪ್ರತಿಭಟಿಸಲಿದ್ದಾರೆ. ಸಿಂಘು, ಠಿಕ್ರಿ, ಘಾಜಿಯಾಬಾದ್, ಬುರಾರಿ ಮೂಲಕ ಪೊಲೀಸರು ಸೂಚಿಸಿರುವ ನಿಗದಿತ ಮಾರ್ಗದಲ್ಲಿ ರೈತರು ಶಾಂತಿಯು ಹೋರಾಟ ನಡೆಸಲಿದ್ದಾರೆ. ಪಂಜಾಬ್, ಹರಿಯಾಣ, ಉತ್ತರಪ್ರದೇಶದಿಂದ ಟ್ರ್ಯಾಕ್ಟರ್ ಮೂಲಕ ರೈತರು ಆಗಮಿಸಲಿದ್ದಾರೆ. ಕೃಷಿ ಕಾಯ್ದೆ ವಿರುದ್ಧ ಅನ್ನದಾತನ ಕಿಚ್ಚು ಇನ್ನು ಆರಿಲ್ಲ. ದೆಹಲಿಯಲ್ಲಿ ದಾಖಲೆ ಪ್ರತಿಭಟನೆ ಮಾಡ್ತಿರುವ ರೈತರು ಮತ್ತೊಮ್ಮೆ ಸರ್ಕಾರದ ಗಮನ ಸೆಳೆಯಲು ಬೃಹತ್ ಹೋರಾಟಕ್ಕಿಳಿದಿದ್ದಾರೆ. ಜನವರಿ 26ರ ಗಣರಾಜ್ಯೋತ್ಸವದಂದು ಕಿಸಾನ್‍ರ ಹೋರಾಟಕ್ಕೆ ಪ್ರತಿಫಲ ಸಿಗುತ್ತದೋ ನೋಡಬೇಕು.