Tag: ಟ್ವಿಟರ್ ಟ್ರೆಂಡಿಂಗ್

  • ಟ್ರೆಂಡಿಂಗ್ ಆಯ್ತು ಬೆಂಗಳೂರು ಹೋಟೆಲಿನ ಐಸ್ ಕ್ಯಾಂಡಿ ಇಡ್ಲಿ

    ಟ್ರೆಂಡಿಂಗ್ ಆಯ್ತು ಬೆಂಗಳೂರು ಹೋಟೆಲಿನ ಐಸ್ ಕ್ಯಾಂಡಿ ಇಡ್ಲಿ

    – ಆನಂದ್ ಮಹೀಂದ್ರಾ ಟ್ವೀಟ್‍ಗೆ ಭರ್ಜರಿ ಪ್ರತಿಕ್ರಿಯೆ

    ಬೆಂಗಳೂರು: ಗ್ರಾಹಕರನ್ನು ಸೆಳೆಯಲು ಹೋಟೆಲ್‍ಗಳು ವಿವಿಧ ರೀತಿಯ ಐಡಿಯಾಗಳನ್ನು ಮಾಡುತ್ತವೆ. ಅದೇ ರೀತಿ ಇಲ್ಲೊಂದು ಹೋಟೆಲ್ ಐಸ್ ಕ್ಯಾಂಡಿ ಆಕಾರದಲ್ಲಿ ಇಡ್ಲಿ ಮಾಡಿದ್ದು, ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಟ್ವಿಟ್ಟರ್ ನಲ್ಲಿ ಟ್ರೆಂಡಿಂಗ್‍ನಲ್ಲಿದೆ.

    ಈ ವಿಶೇಷ ಇಡ್ಲಿಯ ಫೋಟೋವನ್ನು ಮಹೀಂದ್ರಾ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಟ್ವೀಟ್ ಮಾಡಿದ್ದಾರೆ. ಫೋಟೋಗೆ ಅದ್ಭುತ ಸಾಲು ಬರೆದಿರುವ ಅವರು, ಬೆಂಗಳೂರು ಭಾರತದ ಇನೋವೇಶನ್ ಕ್ಯಾಪಿಟಲ್, ಹಲವು ಅನಿರೀಕ್ಷಿತ ವಲಯಗಳಲ್ಲಿ ಇದರ ಕ್ರಿಯೇಟಿವಿಟಿಯನ್ನು ತಡೆಯಲು ಎಂದಿಗೂ ಸಾಧ್ಯವಿಲ್ಲ.  ಐಸ್ ಕಡ್ಡಿಯ ಮೇಲೆ ಇಡ್ಲಿ, ಸಾಂಬಾರ್ ಹಾಗೂ ಚಟ್ನಿಯಲ್ಲಿ ಅದ್ದಿಕೊಂಡು ತಿನ್ನುವುದು. ಯಾರು ಇದರ ಪರವಾಗಿದ್ದೀರಿ, ಯಾರು ಇದರ ವಿರುದ್ಧವಾಗಿದ್ದೀರಿ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕೊರೊನಾ ಕಾಲದಲ್ಲೂ ಮಾದಪ್ಪನ ಹುಂಡಿಯಲ್ಲಿ 2.62 ಕೋಟಿ ಸಂಗ್ರಹ

    ಹೀಗೆ ಪ್ರಶ್ನೆ ಕೇಳಿದ್ದೇ ತಡ, ಹಲವರು ವಿವಿಧ ರೀತಿಯಲ್ಲಿ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ. ಹೀಗಾಗಿ ಟ್ವಿಟ್ಟರ್ ನಲ್ಲಿ ಫುಲ್ ಟ್ರೆಂಡ್ ಆಗಿದೆ. ಇಡ್ಲಿ ಕುರಿತು ಇದೀಗ ದೇಶಾದ್ಯಂತ ಚರ್ಚೆ ನಡೆಯುತ್ತಿದೆ. ಪರ ವಿರೋಧದ ಕಮೆಂಟ್‍ಗಳು ಬರುತ್ತಿವೆ.

    ತಟ್ಟೆಯಲ್ಲಿ ಮೂರು ಇಡ್ಲಿ ಇಡಲಾಗಿದ್ದು, ಇನ್ನೊಂದನ್ನು ಸಾಂಬಾರ್ ಕಪ್‍ನಲ್ಲಿ ಅದ್ದಿ ಇಡಲಾಗಿದೆ. ಇದರ ಪಕ್ಕ ಚಟ್ನಿಯ ಕಪ್ ಸಹ ಇಡಲಾಗಿದೆ. ಈ ಚಿತ್ರವನ್ನು ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ್ದಾರೆ.