Tag: ಟ್ವೀಟ್

  • ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ

    ಮನ್ ಕಿ ಬಾತ್ ನಾರಿ ಶಕ್ತಿ ಸಂಭ್ರಮದ ವೀಡಿಯೋ ಶೇರ್ ಮಾಡಿದ ಮೋದಿ

    ನವದೆಹಲಿ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಹಿಳೆಯರನ್ನು ಶ್ಲಾಘಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ.

    ಅಂತರಾಷ್ಟ್ರೀಯ ಮಹಿಳಾ ದಿನದಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ರೇಡಿಯೊ ಕಾರ್ಯಕ್ರಮ ಮನ್ ಕಿ ಬಾತ್‌ನಲ್ಲಿ ಮಹಿಳೆಯರ ಸ್ಪೂರ್ತಿದಾಯಕ ಹಾಗೂ ಸಾಧನೆಯನ್ನು ಎತ್ತಿ ತೋರಿಸುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಹಿಳಾ ದಿನಾಚರಣೆ ಪ್ರಯುಕ್ತ ಕೇರಳದಲ್ಲಿ ಮಹಿಳೆಯರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣ

    ಮನ್ ಕಿ ಬಾತ್ ಕಾರ್ಯಕ್ರಮದ ವಿವಿಧ ಸಂಚಿಕೆಗಳಲ್ಲಿ ನಾವು ಮಹಿಳಾ ಸಬಲೀಕರಣದ ವಿವಿಧ ಅಂಶಗಳನ್ನು ತೋರಿಸಿದ್ದೇವೆ. ತಳಮಟ್ಟದಿಂದ ಮಹಿಳೆಯರನ್ನು ಪ್ರೇರೇಪಿಸುವ ಜೀವನ ಪಯಣವನ್ನು ಪ್ರದರ್ಶಿಸಿದ್ದೇವೆ. ಮನ್ ಕಿ ಬಾತ್ ಕಾರ್ಯಕ್ರಮ ನಾರಿ ಶಕ್ತಿಯ ಸಂಭ್ರಮವನ್ನು ಆಚರಿಸಿರುವ ವೀಡಿಯೋ ಇಲ್ಲಿದೆ ಎಂದು ಮೋದಿ ಟ್ವಿಟ್ಟರ್‌ನಲ್ಲಿ ಬರೆದಿದ್ದಾರೆ.

    ನಮ್ಮ ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡಿದೆ. ಇದಕ್ಕಾಗಿ ಮಹಿಳೆಯರಿಗೆ ಘನತೆ ಹಾಗೂ ಅವಕಾಶಗಳನ್ನೂ ನೀಡಿದೆ ಎಂದಿದ್ದಾರೆ. ಇದನ್ನೂ ಓದಿ:ವಿಶ್ವ ಯುದ್ಧ ನಂತ್ರ ಫಸ್ಟ್ ಟೈಂ ಏಸುಕ್ರಿಸ್ತನ ಶಿಲ್ಪ ಸ್ಥಳಾಂತರ

    ಮಹಿಳಾ ದಿನದಂದು ನಮ್ಮ ನಾರಿ ಶಕ್ತಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ನಾನು ವಂದಿಸುತ್ತೇನೆ. ಆರ್ಥಿಕ ಸೇರ್ಪಡೆಯಿಂದ ಸಾಮಾಜಿಕ ಭದ್ರತೆ, ಗುಣಮಟ್ಟದ ಆರೋಗ್ಯ ಸೇವೆಯಿಂದ ವಸತಿ, ಶಿಕ್ಷಣದಿಂದ ಉದ್ಯಮಶೀಲತೆಗೆ ನಾರಿ ಶಕ್ತಿ ಭಾರತವನ್ನು ಮುಂಚೂಣಿಯಲ್ಲಿಡಲು ಹಲವು ಪ್ರಯತ್ನಗಳನ್ನು ಮಾಡಿದೆ. ಮುಂದಿನ ದಿನಗಳಲ್ಲಿ ಈ ಪ್ರಯತ್ನಗಳು ಇನ್ನೂ ಹೆಚ್ಚಿನ ಹುರುಪಿನೊಂದಿಗೆ ಮುಂದುವರಿಯಲಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

  • ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ

    ಸುಳ್ಳಿನ ಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು?: ಬಿಜೆಪಿ ಟೀಕೆ

    ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಇಂದು ಮೂರನೇ ದಿನ. ಇಂದು ಆಧ್ವೈತ್ ಪೆಟ್ರೋಲ್ ಬಂಕ್‍ನಿಂದ ಪಾದಯಾತ್ರೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕೈ ನಾಯಕರ ಪಾದಯಾತ್ರೆಗೆ ಬಿಜೆಪಿ ಟೀಕೆ ವ್ಯಕ್ತಪಡಿಸಿದೆ.

    ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು ಎಮದು ಪ್ರಶ್ನಿಸಿದೆ. ಅಲ್ಲದೆ ಮೇಕೆದಾಟು- ಎಣ್ಣೆ ಘಾಟು ಎಂದು ಕಮಲ ಪಾಳಯ ವ್ಯಂಗ್ಯವಾಡಿದೆ. ಇದನ್ನೂ ಓದಿ: ರಷ್ಯಾದಲ್ಲಿ ಆನ್‍ಲೈನ್ ಮಾರಾಟ ಸ್ಥಗಿತಗೊಳಿಸಿದ ಆಪಲ್

    ಟ್ವೀಟ್‍ನಲ್ಲೇನಿದೆ..?
    ಮಾನ್ಯ ಡಿಕೆ ಶಿವಕುಮಾರ್ ಅವರೇ 6 ದಶಕಗಳ ಕಾಲ ಕಾಂಗ್ರೆಸ್ ಪಕ್ಷವನ್ನು ಸಹಿಸಿಕೊಂಡಿದ್ದಕ್ಕೆ, ದೇಶ ಇನ್ನೂ ತೊಂದರೆ ಅನುಭವಿಸುತ್ತಿದೆ. ನಿಮ್ಮ ರಾಜಕೀಯ ಲಾಭಕ್ಕೆ ಬೆಂಗಳೂರಿನ ಜನತೆಯನ್ನು ಕಷ್ಟಕ್ಕೆ ದೂಡಿ, ಮೂರು ದಿನ ತಡೆದುಕೊಳ್ಳಿ ಎಂದು ಬಿಟ್ಟಿ ಸಲಹೆ ನೀಡುತ್ತಿದ್ದೀರಿ. ಜನತೆ ನಿಮ್ಮನ್ನು ಕ್ಷಮಿಸುವರೇ? ಇದನ್ನೂ ಓದಿ: ನವೀನ್ ಭಾವಚಿತ್ರಕ್ಕೆ ಹೂವು ಹಾಕಿ, ಪೂಜೆ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸ್ತಿರೋ ಜನ

    ಮೇಕೆದಾಟು ಯಾತ್ರೆ ಸುಳ್ಳಿನ ಜಾತ್ರೆಯಾಗಿ ಬದಲಾಗಿ ಈಗ ವೈಯುಕ್ತಿಕ ಪ್ರತಿಷ್ಠೆಯ ಕಣವಾಗುತ್ತಿದೆ. ಡಿಕೆಶಿ & ಸಿದ್ದರಾಮಯ್ಯ ಬಣಗಳು ಜಾಗ ಇದ್ದಲ್ಲೆಲ್ಲ ಫ್ಲೆಕ್ಸ್, ಬ್ಯಾನರ್, ಕಟೌಟು, ಮೂಲಕ ತಮ್ಮ ತಮ್ಮ ನಾಯಕರ ಗುಣಗಾನ ಮಾಡುತ್ತಿವೆ. ಹೆಸರಿಗಷ್ಟೇ ನೀರು, ಇಲ್ಲಿ ಬರೀ ರಾಜಕೀಯ ಪುಡಾರಿಗಳ ದರ್ಬಾರು!. ಇದನ್ನೂ ಓದಿ: ನವೀನ್ ಕುಟುಂಬಕ್ಕೆ ಪರಿಹಾರ ಕೊಡ್ತೀವಿ: ಬೊಮ್ಮಾಯಿ

    ಅಡಿಗಡಿಗೊಂದು ತಂಪಾದ ಜ್ಯೂಸ್, ಐಸ್ ಕ್ರೀಮ್, ಎಳನೀರು, ಹಣ್ಣುಗಳು, ಬಾದಾಮಿ ಹಾಲು, ಮಜ್ಜಿಗೆ, ಇದು ಜಾತ್ರೆಯಲ್ಲ, ಇದು ಮೇಕೆದಾಟು ಪಾದಯಾತ್ರೆ! ಸುಳ್ಳಿನಜಾತ್ರೆಗೆ ಬಂದವರಿಗೆಲ್ಲ ಹಣದ ಆಮಿಷ, ಇದು ಬಂಡೆ & ಮಂಡೆ ಒಡೆದ ಹಣವಲ್ಲದೆ ಮತ್ತೇನು? ವಿಶೇಷವಾಗಿ, ಮೇಕೆದಾಟು – ಎಣ್ಣೆ ಘಾಟು!!!

    ಮೂರು ದಿನಗಳ ಕಾಲ ಬೆಂಗಳೂರು ನಗರವಾಸಿಗಳು ಟ್ರಾಫಿಕ್ ಜಾಮ್ ಸಹಿಸಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಕಾಂಗ್ರೆಸ್ ಟ್ರಾಫಿಕ್ ಬಾಂಬ್ ಎಸೆದಿದ್ದಾರೆ. 1 ನಿಮಿಷ ಸಂಚಾರ ಅಸ್ತವ್ಯಸ್ತಗೊಂಡರೆ ಗಂಟೆಗಟ್ಟಲೆ ಬವಣೆ ಪಡಬೇಕಾದ ಈ ಸಮಯದಲ್ಲಿ 3 ದಿನ ತಡೆದುಕೊಳ್ಳುವುದು ಸುಲಭದ ಮಾತೇ?, ಟ್ರಾಫಿಕ್ ಅನಾಹುತದ ಅರಿವಿದೆಯೇ? ಎಂದು ಬರೆದು ಜನ ವಿರೋಧಿ ಕಾಂಗ್ರೆಸ್ ಎಂದು ಹ್ಯಾಶ್ ಟ್ಯಾಗ್ ಹಾಕಿ ಬಿಜೆಪಿ ತೀವ್ರ ಟೀಕೆ ಮಾಡಿದೆ.

  • ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ

    ಬಿಕ್ಕಟ್ಟನ್ನು ಮಾತುಕತೆ ಮೂಲಕ ಪರಿಹರಿಸಿಕೊಳ್ಳಿ: ದಲೈಲಾಮಾ

    ನವದೆಹಲಿ: ಉಕ್ರೇನ್ ಮತ್ತು ರಷ್ಯಾ ನಡುವಿನ ಸಮಸ್ಯೆ ಹಾಗೂ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಿಕೊಳ್ಳಬೇಕು ಎಂದು ಟಿಬೆಟಿಯನ್ ಗುರು ದಲೈ ಲಾಮಾ ಸಲಹೆ ನೀಡಿದರು.

    ಈ ಬಗ್ಗೆ ಟ್ವೀಟ್ ಮಾಡಿದ ಅವರು ಉಕ್ರೇನ್‍ನಲ್ಲಿನ ಸಂಘರ್ಷದಿಂದ ತುಂಬಾ ಬೇಸರವಾಗಿದೆ. ನಮ್ಮ ಪ್ರಪಂಚವು ಪರಸ್ಪರ ಅವಲಂಬಿತವಾಗಿದೆ. ಆದರೆ ಎರಡು ದೇಶಗಳ ನಡುವಿನ ಹಿಂಸಾತ್ಮಕ ಸಂಘರ್ಷವು ಅನಿವಾರ್ಯವಾಗಿ ಉಳಿದ ದೇಶಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ಯುದ್ಧವು ಹಳೆದಾಗಿದ್ದು, ಅಹಿಂಸೆಯೊಂದೇ ಏಕೈಕ ಮಾರ್ಗವಾಗಿದೆ. ಇತರರನ್ನು ಸಹೋದರ, ಸಹೋದರಿಯರಂತೆ ಪರಿಗಣಿಸುವ ಮೂಲಕ ನಾವು ಏಕತೆಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಸಮಸ್ಯೆಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಉತ್ತಮವಾಗಿ ಪರಿಹರಿಸಲಾಗುತ್ತದೆ. ಪರಸ್ಪರ ತಿಳುವಳಿಕೆ ಮತ್ತು ಯೋಗಕ್ಷೇಮವನ್ನು ಗೌರವಿಸದರೆ ಮಾತ್ರ ನಿಜವಾದ ಶಾಂತಿ ಸಿಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಭಾರತೀಯರನ್ನು ತಾಯ್ನಾಡಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಮೋದಿ ಸರ್ಕಾರ ಮಾಡುತ್ತಿದೆ: ಖೂಬಾ

    ಉಕ್ರೇನ್‍ನಲ್ಲಿ ಶಾಂತಿ ಶೀಘ್ರದಲ್ಲಿ ಮರುಸ್ಥಾಪಿಸಲಿ ಎಂದ ಅವರು, ನಾವು ಈ ಬಗ್ಗೆ ಭರವಸೆ ಕಳೆದುಕೊಳ್ಳಬಾರದು. 20ನೇ ಶತಮಾನವು ಯುದ್ಧ ಮತ್ತು ರಕ್ತಪಾತದ ಶತಮಾನವಾಗಿತ್ತು. ಆದರೆ 21ನೇ ಶತಮಾನವು ಸಂಭಾಷಣೆಯ ಶತಮಾನವಾಗಿರಬೇಕು ಎಂದರು. ಇದನ್ನೂ ಓದಿ:  ಯುದ್ಧ ಭೂಮಿಯಿಂದ ಇನ್ನೂ ಬಾರದ ಮಗಳ ನೆನೆದೆ ಇಡೀ ಕುಟುಂಬ ಕಣ್ಣೀರು

  • ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ಉಕ್ರೇನ್‌ ಬಿಕ್ಕಟ್ಟು – ಬೆಂಗಳೂರು ವಿದ್ಯಾರ್ಥಿನಿಯ ವೀಡಿಯೋ ಶೇರ್‌ ಮಾಡಿ ಕೇಂದ್ರಕ್ಕೆ ರಾಗಾ ಮನವಿ

    ನವದೆಹಲಿ: ಯುದ್ಧ ಭೂಮಿ ಉಕ್ರೇನ್‌ನ ಬಂಕರ್‌ಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ತುರ್ತಾಗಿ ಅಲ್ಲಿಂದ ಸ್ಥಳಾಂತರಿಸಲು ಕ್ರಮವಹಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮನವಿ ಮಾಡಿದ್ದಾರೆ.

    ರಷ್ಯಾ ಯುದ್ಧ ಘೋಷಣೆಯಿಂದಾಗಿ ಉಕ್ರೇನ್‌ನ ಬಂಕ್‌ಗಳಲ್ಲಿ ತೊಂದರೆಗೆ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ರಾಹುಲ್‌ ಗಾಂಧಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ನಿನ್ನೆ ಮದುವೆಯಾಗಿ ಇಂದು ದೇಶ ಸೇವೆಗೆ ಗನ್‌ ಹಿಡಿದ ದಂಪತಿ

    ಬಂಕರ್‌ಗಳಲ್ಲಿ ಭಾರತೀಯ ವಿದ್ಯಾರ್ಥಿಗಳ ಪ್ರಾಣ ಭೀತಿಯ ದೃಶ್ಯಗಳು ಆತಂಕಕಾರಿಯಾಗಿವೆ. ಭಾರೀ ದಾಳಿಗೆ ಒಳಗಾಗಿರುವ ಪೂರ್ವ ಉಕ್ರೇನ್‌ನಲ್ಲಿ ಹಲವರು ಸಿಲುಕಿಕೊಂಡಿದ್ದಾರೆ. ಉಕ್ರೇನ್‌ನಲ್ಲಿ ಸಿಲುಕಿರುವವರ ಕುಟುಂಬದ ಸದಸ್ಯರ ಆತಂಕದ ಬಗ್ಗೆ ನಾನು ಯೋಚಿಸುತ್ತಿದ್ದೇನೆ. ಎಲ್ಲರ ತುರ್ತು ಸ್ಥಳಾಂತರಕ್ಕೆ ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿ ಮನವಿ ಮಾಡಿದ್ದಾರೆ.

    https://twitter.com/RahulGandhi/status/1497417864155832320

    ಬೆಂಗಳೂರಿನ ಮೇಘಾ ಎಂಬ ವಿದ್ಯಾರ್ಥಿನಿ ವೀಡಿಯೋವೊಂದನ್ನು ಶೇರ್‌ ಮಾಡಿದ್ದರು. ಭಾರತದ ನಾನಾ ಭಾಗಗಳ ಪ್ರಜೆಗಳು ಉಕ್ರೇನ್‌ನ ಬಂಕರ್‌ನಲ್ಲಿ ಸಿಲುಕಿದ್ದೇವೆ. ತಿನ್ನಲು ಅನ್ನವಿಲ್ಲ, ಕುಡಿಯಲು ನೀರಿಲ್ಲ. ನಮಗೆ ಸಹಾಯ ಬೇಕಾಗಿದೆ. ಸಹಾಯ ಮಾಡಲು ಯಾರೂ ಮುಂದಾಗುತ್ತಿಲ್ಲ. ನಮ್ಮನ್ನು ಕರೆದೊಯ್ಯಲು ಯಾವುದೇ ವಿಶೇಷ ವಿಮಾನ ಇಲ್ಲ. ಬಂಕರ್‌ಗಳಲ್ಲಿ ಇರುವುದು ತುಂಬಾ ಕಷ್ಟಕರವಾಗಿದೆ. ದಯಮಾಡಿ ನಮಗೆ ಸಹಾಯ ಒದಗಿಸಿ ಎಂದು ಅಂಗಲಾಚುತ್ತಿರುವ ವೀಡಿಯೋವನ್ನು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ. ಇದನ್ನೂ ಓದಿ: ಯುದ್ಧ ಬೇಡ: ತನ್ನ ದೇಶಕ್ಕೆ ರಷ್ಯಾ ಟೆನಿಸ್‌ ತಾರೆ ಮನವಿ

    ಯುದ್ಧಪೀಡಿತ ಉಕ್ರೇನ್‌ನಲ್ಲಿ ಭಾರತದ ಸಾವಿರಾರು ಮಂದಿ ಸಿಲುಕಿಕೊಂಡಿದ್ದಾರೆ. 15,000ಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸಿಲುಕಿದ್ದಾರೆ. ಅವರನ್ನು ಕರೆತರಲು ಏರ್‌ ಇಂಡಿಯಾ ಕಾರ್ಯಾಚರಣೆ ನಡೆಸುತ್ತಿದೆ. ನಾವು ತಿಳಿಸುವವರೆಗೂ ಯಾರು ಕೂಡ ದೇಶದ ಗಡಿ ಭಾಗಗಳಿಗೆ ಹೋಗಬೇಡಿ. ನೀವಿರುವ ಸ್ಥಳದಲ್ಲೇ ಇರಿ ಎಂದು ಭಾರತದ ರಾಯಭಾರಿ ಕಚೇರಿ ಸೂಚನೆ ನೀಡಿದೆ.

  • ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ವಿಶ್ವದ ನಂ.1 ಚೆಸ್ ಆಟಗಾರನ ವಿರುದ್ಧ ಗೆಲುವು – ಮೋದಿಯಿಂದ ಪ್ರಜ್ಞಾನಂದನಿಗೆ ಅಭಿನಂದನೆ

    ನವದೆಹಲಿ: ವಿಶ್ವ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಗೆದ್ದ 16 ವರ್ಷದ ಆರ್ ಪ್ರಜ್ಞಾನಂದನನ್ನು ಪ್ರಧಾನಿ ಮೋದಿ ಅಭಿನಂದಿಸಿದ್ದಾರೆ.

    ಯುವ ಪ್ರತಿಭೆ ಆರ್ ಪ್ರಜ್ಞಾನಂದ ಅವರ ಯಶಸ್ಸಿನ ಬಗ್ಗೆ ನಾವೆಲ್ಲರೂ ಸಂತೋಷಪಡುತ್ತಿದ್ದೇವೆ. ಹೆಸರಾಂತ ಚಾಂಪಿಯನ್ ಮ್ಯಾಗ್ನಸ್ ಕಾರ್ಲ್‍ಸೆನ್ ವಿರುದ್ಧ ಜಯಗಳಿಸಿದ ಅವರ ಸಾಧನೆಯ ಬಗ್ಗೆ ಹೆಮ್ಮೆಯಿದೆ. ಪ್ರತಿಭಾವಂತ ಪ್ರಜ್ಞಾನಂದ ಅವರ ಭವಿಷ್ಯದ ಪ್ರಯತ್ನಗಳಿಗೆ ನಾನು ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ವಿಶ್ವದ ನಂ.1 ಚೆಸ್ ಆಟಗಾರನಿಗೆ ಶಾಕ್ ಕೊಟ್ಟ 16ರ ಭಾರತೀಯ ಬಾಲಕ

    16 ವರ್ಷ ವಯಸ್ಸಿನ ಭಾರತೀಯ ಗ್ರ್ಯಾಂಡ್‍ಮಾಸ್ಟರ್ ಆರ್ ಪ್ರಜ್ಞಾನಂದ ಅವರು ಆನ್‍ಲೈನ್ ಮೂಲಕ ನಡೆಯುತ್ತಿರುವ ಚೆಸ್ ರ್ಯಾಪಿಡ್ ಪಂದ್ಯಾವಳಿಯ ಏರ್‍ಥಿಂಗ್ಸ್ ಮಾಸ್ಟರ್ಸ್‍ನಲ್ಲಿ ನಾಕೌಟ್‍ಗೆ ಅರ್ಹತೆ ಪಡೆಯುವಲ್ಲಿ ವಿಫಲರಾಗಿದ್ದಾರೆ. ಅವರು ಅಂಕಪಟ್ಟಿಯಲ್ಲಿ 11 ನೇ ಸ್ಥಾನದಲ್ಲಿದ್ದು, ರೌಂಡ್-ರಾಬಿನ್ ಹಂತದಿಂದ ಕೇವಲ ಎಂಟು ಮಂದಿ ಮಾತ್ರ ನಾಕೌಟ್‍ಗೆ ಅರ್ಹತೆ ಪಡೆದಿದ್ದಾರೆ. ಇದನ್ನೂ ಓದಿ: ಆರ್​ಸಿಬಿಯಲ್ಲಿ K.G.F ಸ್ಟಾರ್ಸ್

    ಕಾರ್ಲಸೆನ್‍ರ ಸತತ ಮೂರು ಗೆಲುವಿನ ಓಟವನ್ನು ನಿಲ್ಲಿಸಲು ಸೋಮವಾರದ ಆರಂಭದಲ್ಲಿ ನಡೆದ ಟಾರ್ರಾಸ್ಚ್ ವಿಭಾಗದ 8ನೇ ಸುತ್ತಿನ ಆಟದಲ್ಲಿ ಪ್ರಜ್ಞಾನಂದ ಅವರು 39 ನಡೆಗಳಲ್ಲಿ ಕಪ್ಪು ಕಾಯಿಗಳೊಂದಿಗೆ ಗೆದ್ದಿದ್ದರು.

    ಪ್ರಜ್ಞಾನಂದ ಅವರು ಪಂದ್ಯಾವಳಿಯ 10 ಮತ್ತು 12ರ ಸುತ್ತುಗಳಲ್ಲಿ ಆಂಡ್ರೆ ಎಸಿಪೆಂಕೊ ಮತ್ತು ಅಲೆಕ್ಸಾಂಡ್ರಾ ಕೊಸ್ಟೆನಿಯುಕ್ ವಿರುದ್ಧ ಇನ್ನೂ ಎರಡು ವಿಜಯಗಳನ್ನು ದಾಖಲಿಸಿದರು. ಆದರೆ ಮಂಗಳವಾರ ಅವರು ನೋಡಿರ್ಬೆಕ್ ಅಬ್ದುಸತ್ತೊರೊವ್ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವ ಮೂಲಕ ಟೂರ್ನಿಯಿಂದ ಹೊರಬಿದ್ದಿದ್ದಾರೆ.

  • ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್

    ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್

    ಡೆಹ್ರಾಡೂನ್: ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬರು ಅಂಚೆ ಮತ ಪತ್ರಗಳನ್ನು ತಿದ್ದುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ವೀಡಿಯೋ ವೈರಲ್ ಆಗುತ್ತಿದೆ.

    ಟ್ವೀಟ್‍ನಲ್ಲಿ ಏನಿದೆ?: ಎಲ್ಲರ ಮಾಹಿತಿಗಾಗಿ ಈ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಸೇನಾ ಕೇಂದ್ರದಲ್ಲಿ ಒಬ್ಬ ವ್ಯಕ್ತಿ ಹೇಗೆ ಹಲವಾರು ಮತಪತ್ರಗಳಿಗೆ ಟಿಕ್ ಹಾಗೂ ಸಹಿ ಹಾಕುತ್ತಿದ್ದಾನೆ ಎನ್ನುವುದರ ಕುರಿತು ಈ ವೀಡಿಯೋದಲ್ಲಿ ಮಾಹಿತಿಯಿದೆ. ಚುನಾವಣಾ ಆಯೋಗ ಇದನ್ನು ಗಮನಿಸುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

    ಈ ಬಗ್ಗೆ ರಾವತ್ ಅವರ ವಕ್ತಾರ ಸುರೇಂದ್ರ ಕುಮಾರ್ ಮಾತನಾಡಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ. ಆದರೆ ಅವರೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಬಹುದು. ಈ ವೀಡಿಯೋ ಉತ್ತರಾಖಂಡದಿಂದಲೇ ಬಂದಿದೆ ಎಂದ ಅವರು, ಈ ವೀಡಿಯೋದ ಮೂಲವನ್ನು ಬಹಿರಂಗ ಪಡಿಸಲು ನಿರಾಕರಿಸಿದರು.

    ಈ ವೀಡಿಯೋಕ್ಕೆ ಉತ್ತರಾಖಂಡ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರೀತಮ್ ಸಿಂಗ್ ಪ್ರತಿಕ್ರಿಯಿಸಿದ್ದು, ಈ ವೀಡಿಯೋ ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿದೆ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

    ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ, ಇದು ಕಾಂಗ್ರೆಸ್‍ನ ಹತಾಶೆಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿತ್ತು. ಇದರಿಂದ ಈ ರೀತಿ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

  • ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

    ರಾಷ್ಟ್ರಧ್ವಜ ಬದಲಿಸುವುದು ಕಾಂಗ್ರೆಸ್‌ ಅಜೆಂಡಾ, ಸಾಕ್ಷಿ ಇಲ್ಲಿದೆ ನೋಡಿ: ಬಿಜೆಪಿ

    ಬೆಂಗಳೂರು: ರಾಷ್ಟ್ರಧ್ವಜ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್‌ ಪಕ್ಷದ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್‌ ಪಕ್ಷದ ಹಿಡನ್‌ ಅಜೆಂಡಾ ಎಂದು ಬಿಜೆಪಿ ಟ್ವೀಟ್‌ ಮೂಲಕ ಗಂಭೀರ ಆರೋಪ ಮಾಡಿದೆ.

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ. ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಹೋಗಿ ಅಂತಾರೆ, ಪಾಕ್ ಇವರಪ್ಪನ ಮನೆನಾ..? – ರಾಜಕಾರಣಿಗಳ ವಿರುದ್ಧ ಉಡುಪಿ ವಿದ್ಯಾರ್ಥಿನಿಯರ ಕಿಡಿ

    ಹಿಜಾಬ್‌ ವಿವಾದ ನ್ಯಾಯಾಲಯದ ಮೆಟ್ಟಿಲೇರುವ ಹಿಂದೆ ಕಾಂಗ್ರೆಸ್‌ ಪಕ್ಷದ ಶ್ರಮವಿದೆ. ಕಾಂಗ್ರೆಸ್‌ ಪಕ್ಷದ ಪದಾಧಿಕಾರಿಗಳೇ ಹಿಜಾಬ್‌ ಪರವಾಗಿ ನ್ಯಾಯಾಲಯಕ್ಕೆ ಅರ್ಜಿಯ ಮೇಲೆ ಅರ್ಜಿ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಹಿಜಾಬ್‌ ಪರವಾಗಿ ಇರುವುದಕ್ಕಿಂತ ಹೆಚ್ಚಾಗಿ ಕುಂಕುಮ, ಬಳೆ, ಹೂವು ಮುಡಿಯುವುದರ ವಿರುದ್ದವಿದೆ. ಹಿಂದೂ ವಿರೋಧಿ ಕಾಂಗ್ರೆಸ್‌.

    ಹಿಜಾಬ್‌ ಪರವಾಗಿರುವ ಕಾಂಗ್ರೆಸ್‌, ಶೈಕ್ಷಣಿಕ ವಾತವಾರಣದಲ್ಲಿ ಹಿಜಾಬ್‌ ಧರಿಸಲು ಅವಕಾಶ ನಿರಾಕರಿಸುವುದೇ ಆದಲ್ಲಿ, ಹಿಂದೂಗಳು ಕುಂಕುಮ ಇಡಬಾರದು, ಬಳೆ, ಹೂವು ಮುಡಿಯಬಾರದು ಎನ್ನುವ ಅಸಮಂಜಸ ವಾದವನ್ನು ಸಮಾಜದ ಮುಂದಿಡುತ್ತಿದೆ. ಹಿಂದೂ ಸಂಸ್ಕೃತಿ, ಹಿಂದೂಗಳ ಬಗ್ಗೆ ಕಾಂಗ್ರೆಸ್‌ ಪಕ್ಷಕ್ಕೇಕೆ ಇಷ್ಟೊಂದು ಅಸಹನೆ?

    ರಾಷ್ಟ್ರ ಧ್ವಜವೇ ಇರದಿದ್ದ ಸ್ಥಂಭದಲ್ಲಿ, ರಾಷ್ಟ್ರ ಧ್ವಜವನ್ನು ಇಳಿಸಿ ಕೇಸರಿ ಧ್ವಜ ಹಾರಿಸಲಾಗಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿದ್ದು ತಿರಂಗಕ್ಕೆ ಮಾಡಿದ ಅವಮಾನವಲ್ಲವೇ? ತಿರಂಗಕ್ಕೆ ಅವಮಾನ ಮಾಡಿ, ಸದನದಲ್ಲಿ ರಾಜಕೀಯ ಕಾರಣಕ್ಕಾಗಿ ತಿರಂಗ ಬಳಸಿದ್ದು ದೇಶದ್ರೋಹವಲ್ಲದೆ ಮತ್ತೇನು? ಇದನ್ನೂ ಓದಿ: ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

    ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ಧ್ವಜವಾಗಿ ಪರಿವರ್ತಿಸಲು ಹೊರಟಿರುವ ಕಾಂಗ್ರೆಸ್ಸಿಗರಿಗೆ ಏನನ್ನಬೇಕು!? ಡಿಕೆಶಿ ಅವರ ಸಂಬಂಧಿ ಡಾ. ರಂಗನಾಥ್ ಅವರು ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡುತ್ತಿದ್ದಾರೆ. ಸಚಿವರ ಹೇಳಿಕೆ ಹಿಡಿದುಕೊಂಡು ಕಲಾಪಕ್ಕೆ ಅಡ್ಡಿ ಮಾಡಿದ ಕಾಂಗ್ರೆಸ್ಸಿಗರು ಇದಕ್ಕೇನು ಹೇಳುತ್ತಾರೆ?

    ರಾಷ್ಟ್ರ ಧ್ವಜವನ್ನು ಕೆಳಗಿಳಿಸಿ ಕೇಸರಿ ಧ್ವಜ ಹಾರಿಸಿದ್ದಾರೆ ಎಂದು ಡಿಕೆಶಿ ಸುಳ್ಳು ಪ್ರಚಾರ ನಡೆಸಿದರು. ಕಾಂಗ್ರೆಸ್‌ ಶಾಸಕ ಡಾ. ರಂಗನಾಥ್ ಅವರು ಒಂದು ಹೆಜ್ಜೆ ಮುಂದೆ ಹೋಗಿ ರಾಷ್ಟ್ರಧ್ವಜದಲ್ಲಿನ ಅಶೋಕ ಚಕ್ರವನ್ನೇ ಪಲ್ಲಟಗೊಳಿಸಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಇದಕ್ಕಿಂತ ದೊಡ್ಡ ಬೇರೆ ದೇಶದ್ರೋಹ ಬೇರೇನಿದೆ? ಇದನ್ನೂ ಓದಿ: ವಿಧಾನ ಪರಿಷತ್ ಕಲಾಪದಲ್ಲಿ ಜೈಶ್ರೀರಾಮ್, ಭಾರತ್ ಮಾತಾಕಿ ಜೈ ಘೋಷಣೆ

    ರಾಷ್ಟ್ರ ಧ್ವಜ ಬದಲಾಯಿಸುವುದು ಕಾಂಗ್ರೆಸ್ ಪಕ್ಷದ ಹಿಡನ್ ಅಜೆಂಡಾ ಎಂಬುದಕ್ಕೆ ಇಲ್ಲಿ ಸಾಕ್ಷಿ ಇದೆ ನೋಡಿ. ತಿರಂಗ ಧ್ವಜದಲ್ಲಿ ಕಾಂಗ್ರೆಸ್ ಚಿಹ್ನೆ ಹಾಕಿದ್ದಾರೆ. ಹಾಗಾದರೆ ದೇಶದ್ರೋಹಿಗಳು ಯಾರು ಎಂದು ಬಿಜೆಪಿ ಪ್ರಶ್ನಿಸಿದೆ.

  • ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

    ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳ ಶಿಕ್ಷಣ ಕಸಿಯುತ್ತಿದೆ ಬಿಜೆಪಿ: ಸಿದ್ದು

    ಬೆಂಗಳೂರು: ಹಿಜಬ್‌ ವಿವಾದ ಮತ್ತಷ್ಟು ಸ್ಫೋಟಗೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಬಿಜೆಪಿಯವರೇ ಸಂಘ ಪರಿವಾದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಸಿದ್ದು ಟ್ವೀಟ್‌ನಲ್ಲೇನಿದೆ?
    ರಾಜ್ಯದ ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗುವಂತೆ ಹೊರಡಿಸಿರುವ ಸುತ್ತೋಲೆಯನ್ನು ಕೂಡಲೇ ಹಿಂಪಡೆದು, ನ್ಯಾಯಾಲಯದ ಆದೇಶ ಪಾಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಒತ್ತಾಯಿಸುತ್ತೇನೆ. ಇದನ್ನೂ ಓದಿ: ಹಿಜಬ್ ಹಾಕಿಸೋಕೆ ಅಥವಾ ತೆಗಿಸೋಕೆ ಯಾರೇ ಬಂದ್ರು ಒದ್ದು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

    ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈ ಕೋರ್ಟ್ ನಲ್ಲಿ ಮಧ್ಯಂತರ ತೀರ್ಪು ಬಂದಿದೆ. ಶಾಲಾಭಿವೃದ್ಧಿ ಕಮಿಟಿ ಇರುವ ಕಡೆಗಳಲ್ಲಿ ಸಮಿತಿಯು ಸಮವಸ್ತ್ರ ನೀತಿ ರೂಪಿಸಿದ್ದರೆ ಅಲ್ಲಿ ಮಾತ್ರ ಈ ಆದೇಶ ಅನ್ವಯವಾಗುತ್ತದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

    ಅಲ್ಪಸಂಖ್ಯಾತ ಕಲ್ಯಾಣ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧೀನದಲ್ಲಿನ ವಸತಿ ಶಾಲಾ ಕಾಲೇಜುಗಳು, ಮೌಲಾನಾ ಆಜಾದ್ ಮಾದರಿ ಶಾಲೆಗಳು (ಆಂಗ್ಲ ಮಾಧ್ಯಮ) ಶಾಲೆಗಳಿಗೂ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ ಎಂದು ಸುತ್ತೋಲೆ ಹೊರಡಿಸಿದ್ದಾರೆ. ಇದನ್ನೂ ಓದಿ: ಸೈನ್ ಭಾಷೆ ಅರ್ಥಮಾಡಿಕೊಳ್ಳುವ ಎಐ ಮಾದರಿಯನ್ನು ರಚಿಸಿದ 20 ವರ್ಷದ ಯುವತಿ

    ಮೊದಲನೆಯದಾಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳಲ್ಲಿ ಶಾಲಾಭಿವೃದ್ಧಿ ಸಮಿತಿಯೇ ಇರುವುದಿಲ್ಲ, ಶಾಲಾಭಿವೃದ್ಧಿ ಸಮಿತಿ ರೂಪಿಸಿದ ಸಮವಸ್ತ್ರ ನೀತಿಗೆ ಮಾತ್ರ ಹೈಕೋರ್ಟ್ ತೀರ್ಪು ಅನ್ವಯವಾಗುತ್ತದೆ. ಹಾಗಾಗಿ ಈ ಸುತ್ತೋಲೆ ಘನ ನ್ಯಾಯಾಲಯದ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ.

    ಅಲ್ಪಸಂಖ್ಯಾತ ನಿಯೋಗದ ಜೊತೆ ನಾನು, ಡಿ.ಕೆ.ಶಿವಕುಮಾರ್‌ ಅವರು ಇಂದು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿ ಮಾಡಿ, ಗೊಂದಲ ನಿವಾರಿಸುವಂತೆ ಹೇಳಿದ್ದೇವೆ. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು ಎಂಬುದು ನಮ್ಮ ಕಾಳಜಿ. ಇದನ್ನೂ ಓದಿ:  ಹಿಜಬ್ ತೆಗೆದು ರೀಲ್ಸ್ ಮಾಡ್ತಾರೆ, ಈಗ ಹಿಜಾಬ್ ತೆಗೆಯೋಕಾಗಲ್ವಾ – ಬೆಳಗಾವಿ ವಿದ್ಯಾರ್ಥಿನಿಯರ ಪ್ರಶ್ನೆ

    ಪ್ರಧಾನಿ ಮೋದಿ ಅವರು ಭೇಟಿ ಬಚಾವೊ, ಭೇಟಿ ಪಡಾವೋ ಎನ್ನುತ್ತಾರೆ. ಬಿಜೆಪಿಯವರೇ ಸಂಘ ಪರಿವಾರದ ತಾಳಕ್ಕೆ ಕುಣಿಯುತ್ತಾ ಮುಸ್ಲಿಂ ಹೆಣ್ಣು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಲು ಹೊರಟಿದ್ದಾರೆ. ಹೆಣ್ಣು ಮಕ್ಕಳ ಶಿಕ್ಷಣದಲ್ಲಿ ಬಿಜೆಪಿಯ ನಿಲುವೇನು ಎಂದು ಮೋದಿಯವರೇ ಉತ್ತರಿಸಬೇಕು.

    ಹಿಜಾಬ್ ವಿವಾದದ ಹಿಂದೆ ಯಾವುದೇ ಸಂಘಟನೆ ಇದ್ದರೂ ಅದನ್ನು ಖಂಡಿಸುತ್ತೇನೆ. ಅದು ಆರ್.ಎಸ್.ಎಸ್ ಇರಲಿ, ಎಸ್.ಡಿ.ಪಿ.ಐ ಇರಲಿ, ಭಜರಂಗ ದಳವಿರಲಿ. ಮೂಲಭೂತವಾದಿ ಸಂಘಟನೆಗಳು ಸಾಮಾಜಿಕ ಸಾಮರಸ್ಯ ಮತ್ತು ಶಾಂತಿಗೆ ಮಾರಕ ಎಂದು ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

  • ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

    ನೆಲಮಂಗಲ ಫ್ಲೈಓವರ್ ಬಗ್ಗೆ ಮಾಹಿತಿ ನೀಡಿ ಟ್ವೀಟ್ ಡಿಲೀಟ್ ಮಾಡಿದ ಸಿಎಂ

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪೀಣ್ಯ ನೆಲಮಂಗಲ ಫ್ಲೈ ಓವರ್ ಮತ್ತೆ ಓಪನ್ ಮಾಡುವ ವಿಚಾರವಾಗಿ ಲಘು ವಾಹನಗಳಿಗೆ ಅವಕಾಶ ನೀಡುವುದಾಗಿ ಟ್ವೀಟ್ ಮಾಡಿ ಡಿಲೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿತ್ತು?: ನಾಳೆಯಿಂದ ಲಘು ವಾಹನ ಓಡಾಟಕ್ಕೆ ಫ್ಲೈ ಓವರ್‌ನಲ್ಲಿ ಅವಕಾಶ ನೀಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬ್ರಿಡ್ಜ್ ತಜ್ಞರು ಅಭಿಪ್ರಾಯ ಪಡೆದುಕೊಂಡು ಓಪನ್ ಮಾಡಲು ನಿರ್ಧರಿಸಿದ್ದಾರೆಂದು ಟ್ವೀಟ್ ಮಾಡಿದ್ದರು. ಆದರೆ ನಿನ್ನೆ ರಾತ್ರಿ ಹಾಕಿದ್ದ ಈ ಟ್ವೀಟ್‍ನ್ನು ಈಗ ಡಿಲೀಟ್ ಮಾಡಿದ್ದಾರೆ.

    ಡಿಸೆಂಬರ್ ಕೊನೆಯ ವಾರದ ವೇಳೆ ರಾಷ್ಟ್ರೀಯ ಹೆದ್ದಾರಿ-4ರಲ್ಲಿನ ನೆಲಮಂಗಲ-ಗೊರಗುಂಟೆಪಾಳ್ಯ ಫ್ಲೈಓವರ್‌ನ 102-103ನೇ ಪಿಲ್ಲರ್ ನಡುವಿನ ಸ್ಲಾಬ್‍ಗಳಲ್ಲಿ ಸೆಗ್ಮೆಂಟ್ ಜಾಯಿಂಟ್ ಸಮಸ್ಯೆ ಕಂಡುಬಂದಿತ್ತು. ಅದನ್ನು ಸರಿಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಫ್ಲೈಓವರ್‍ನ ಸಂಚಾರವನ್ನು ನಿರ್ಬಂಧ ಮಾಡಿತ್ತು. ಇದನ್ನೂ ಓದಿ: ಪೀಣ್ಯ ಫ್ಲೈಓವರ್‌ ಧ್ವಂಸವಾಗುತ್ತಾ?- ಅನಾಹುತ ಸಂಭವಿಸಿದರೆ ಹೊಣೆ ಯಾರು ಎಂದ ಸಿಎಂ

    ಪ್ರಾರಂಭದಲ್ಲಿ ಒಂದೇ ವಾರಕ್ಕೆ ದುರಸ್ಥಿ ಕಾರ್ಯ ಮುಗಿಸುವುದಾಗಿ ಹೇಳಿದ್ದ ಅಧಿಕಾರಿಗಳು ತಿಂಗಳಾದರೂ ರಿಪೇರಿ ಕಾರ್ಯ ಮುಗಿಸಿರಲಿಲ್ಲ. ಆದರೆ ಸದ್ಯ ಈಗ ಸಂಪೂರ್ಣ ರಿಪೇರಿ ಕಾರ್ಯ ಮುಗಿದಿದ್ದು, ತಾಂತ್ರಿಕ ದೋಷ ಇದ್ದ ಪಿಲ್ಲರ್‌ಗಳಿಗೆ ಸಪೋರ್ಟಿವ್ ಲಿಂಕ್ ಅಳವಡಿಸಿದ್ದಾರೆ. ಈಗಾಗಲೇ ದೆಹಲಿಯ ಇಂಜಿನಿಯರ್‍ಗಳು ಬಂದು ಪರಿಶೀಲನೆ ನಡೆಸಿದ್ದಾರೆ. ಆದರೂ ಈವರೆಗೂ ಫ್ಲೈ ಓವರ್ ಓಪನ್ ಮಾಡಿಲ್ಲ. ಇದರಿಂದಾಗಿ ಸವಾರರು ನಿತ್ಯವೂ ಕಿರಿಕಿರಿ ಅನುಭವಿಸುತ್ತಿದ್ದಾರೆ.  ಇದನ್ನೂ ಓದಿ: ನನ್ನ ಮಗನಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದರೆ ಗೆಲ್ಲುತ್ತಿದ್ದ: ಹರೀಶ್ ರಾವತ್

  • ಹಿಜಬ್‌ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ: ಬಿಜೆಪಿ ಪ್ರಶ್ನೆ

    ಹಿಜಬ್‌ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ: ಬಿಜೆಪಿ ಪ್ರಶ್ನೆ

    ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸುತ್ತಿರುವ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಕಿಡಿಕಾರಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಖಡಕ್‌ ಸೂಚನೆ ನೀಡಿದ್ದರೂ, ಕಾಂಗ್ರೆಸ್‌ ನಾಯಕರು ಹಿಜಬ್‌ ಬಗ್ಗೆ ಪ್ರತಿಕ್ರಿಯಿಸುತ್ತಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ ಎಂದು ಬಿಜೆಪಿ ಲೇವಡಿ ಮಾಡಿದೆ. ಇದನ್ನೂ ಓದಿ: ಹಿಜಬ್ ಹೈಡ್ರಾಮಾ ನೋಡಿ ಕೇಸರಿ ಶಾಲು ತೆಗೆದ ವಿದ್ಯಾರ್ಥಿ

    ಬಿಜೆಪಿ ಟ್ವೀಟ್‌ನಲ್ಲೇನಿದೆ?
    ಹಿಜಬ್ ವಿಚಾರದ ಬಗ್ಗೆ ಚರ್ಚಿಸುವುದಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಿರಿಯ ನಾಯಕರ ಸಭೆ ಕರೆದಿದ್ದಾರೆ. ಹಿಜಬ್ ಬಗ್ಗೆ ಯಾರೂ ಮಾತನಾಡಬಾರದು ಎಂಬ ಡಿ.ಕೆ.ಶಿವಕುಮಾರ್‌ ಆದೇಶಕ್ಕೆ ಸಿದ್ದರಾಮಯ್ಯ ಉಲ್ಟಾ ಹೊಡೆದಿದ್ದಾರೆ. ಅಸಮರ್ಥ ರಾಜ್ಯಾಧ್ಯಕ್ಷ ಡಿಕೆಶಿ ಅವರೀಗ ಹತಾಶೆಗೆ ಬಿದ್ದಿದ್ದಾರೆ.

    ಹಿಜಾಬ್ ಬಗ್ಗೆ ಮಾತನಾಡಬಾರದು ಎಂದು ಜಮೀರ್ ಅವರಿಗೆ ಡಿಕೆಶಿ ಕಟ್ಟಪ್ಪಣೆ ನೀಡಿದ್ದರು. ಆದರೆ ಸಿದ್ದರಾಮಯ್ಯ ಅವರು ಪಕ್ಷದ ವೇದಿಕೆಯಲ್ಲೇ ಹಿಜಾಬ್ ಸಭೆ ಕರೆದಿದ್ದಾರೆ. ಅದಕ್ಕೆ ಜಮೀರ್ ಅವರನ್ನೂ ಆಹ್ವಾನಿಸಿದ್ದಾರೆ. ಹಾಗಾದರೆ ಡಿಕೆಶಿ ಆದೇಶಕ್ಕೆ ಕಿಮ್ಮತ್ತಿಲ್ಲವೇ ಎಂದು ಬಿಜೆಪಿ ಟ್ವೀಟ್‌ ಮಾಡಿ ಪ್ರಶ್ನಿಸಿದೆ. ಇದನ್ನೂ ಓದಿ: ಹಿಜಬ್ ವಿವಾದದ ನಡುವೆಯೇ ಮಾದರಿಯಾದ ಮುಸ್ಲಿಂ ಶಿಕ್ಷಣ ಸಂಸ್ಥೆ

    ಹಿಜಬ್‌ ವಿಚಾರವಾಗಿ ಉಡುಪಿ ಕಾಲೇಜೊಂದರಲ್ಲಿ ಹಿಜಬ್‌ ವಿವಾದ ಶುರುವಾಯಿತು. ಹಿಜಬ್‌ ವಿರೋಧಿಸಿ ವಿದ್ಯಾರ್ಥಿಗಳ ಗುಂಪು ಕೇಸರಿ ಶಾಲು ಧರಿಸಿದ್ದು, ವಿವಾದ ಹೋರಾಟದ ಸ್ವರೂಪ ಪಡೆಯಿತು. ಸದ್ಯ ಹಿಜಬ್‌ ವಿವಾದ ಹೈಕೋರ್ಟ್‌ ವಿಚಾರಣೆಯಲ್ಲಿದೆ. ಆದರೆ ಇಡೀ ವಿಶ್ವದಾದ್ಯಂತ ಹಿಜಬ್‌ ಹೋರಾಟ ಸದ್ದು ಮಾಡಿದೆ.