Tag: ಟ್ವೀಟ್

  • ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

    ಬ್ಯಾರಿಕೇಡ್ ಬಂಧಿಗಳಾದ ಬಿಜೆಪಿ ನಾಯಕರು: ಪ್ರಿಯಾಂಕ್ ಖರ್ಗೆ ವ್ಯಂಗ್ಯ

    ಕಲಬುರಗಿ: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಹಿನ್ನೆಲೆ ಇಸ್ರೋ (ISRO) ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದಿಸಲು ಆಗಮಿಸುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ (Bengaluru) ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿ ನಾಯಕರು ಬಂದೋಬಸ್ತ್‌ಗೆಂದು ಹಾಕಲಾಗಿದ್ದ ಬ್ಯಾರಿಕೇಡ್ ಒಳಗಿನಿಂದಲೇ ಮೋದಿ ಗಮನ ಸೆಳೆಯಲು ಪ್ರಯತ್ನಿಸುತ್ತಿರುವ ಸನ್ನಿವೇಶವನ್ನು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವ್ಯಂಗ್ಯವಾಡಿದ್ದಾರೆ.

    ಶನಿವಾರ ‘ಟ್ವೀಟ್’ (Tweet) ಮೂಲಕ ಬಿಜೆಪಿ ನಾಯಕರನ್ನು ಬ್ಯಾರಿಕೇಡ್ ಬಂಧಿಗಳು ಎಂದು ಕುಟುಕಿದ ಖರ್ಗೆ, ಪ್ರಧಾನಿ ಮುಂದೆ ಬ್ಯಾರಿಕೇಡ್ ಬಂಧಿಗಳಾಗಿ ಗಮನ ಸೆಳೆಯಲು ಹರಸಾಹಸ ಮಾಡುತ್ತಿರುವ ಬಿಜೆಪಿ ನಾಯಕರು ಸ್ವಾಭಿಮಾನ, ಆತ್ಮಗೌರವವನ್ನು ಬೀದಿಪಾಲು ಮಾಡಿಕೊಂಡಿದ್ದು ಕರುಣಾಜನಕವಾಗಿದೆ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲಾ ಹಳದಿಯೇ: ಕಾಂಗ್ರೆಸ್‌ ಗೇಲಿಗೆ ಬಿಜೆಪಿ ತಿರುಗೇಟು

    ರಾಜಕೀಯವಾಗಿ, ಸೈದ್ಧಾಂತಿಕವಾಗಿ ವಿರೋಧಿಗಳಾಗಿದ್ದರೂ ಕರ್ನಾಟಕ ಬಿಜೆಪಿ ನಾಯಕರ ದುರಾವಸ್ಥೆ ನೋಡಿ ಕರುಣೆ ಹುಟ್ಟುತ್ತಿದೆ. ನೂರು ದಿನಗಳಾದರೂ ಕೂಡಾ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡದ ಬಿಜೆಪಿಯನ್ನು ತೀಕ್ಷ್ಣವಾಗಿ ಟೀಕಿಸಿರುವ ಅವರು ಹೈಕಮಾಂಡ್‌ನಿಂದ ಇಷ್ಟೊಂದು ತಿರಸ್ಕಾರಕ್ಕೆ ಒಳಪಟ್ಟಿರುವಾಗ ವಿರೋಧ ಪಕ್ಷದ ನಾಯಕನ ಆಯ್ಕೆ ಸಾಧ್ಯವಾಗುವುದೇ ಎಂದು ಪ್ರಶ್ನಿಸಿ, ಈಗ ಸ್ವತಃ ಬಿಜೆಪಿಗರೂ ಸರ್ವಾಧಿಕಾರದ ಸಂತ್ರಸ್ತರಾಗಿದ್ದಾರೆ ಎಂದು ವಾಗ್ಬಾಣ ಬಿಟ್ಟಿದ್ದಾರೆ. ಇದನ್ನೂ ಓದಿ: ಕರ್ನಾಟಕದಿಂದ ಪಾಠ ಕಲಿತ ಬಿಜೆಪಿ ಹೈಕಮಾಂಡ್ – ಮಧ್ಯಪ್ರದೇಶದಲ್ಲಿ ಮಾಡಿದ ಬದಲಾವಣೆ ಏನು?

    ಬೀದಿಯಲ್ಲಿ ನಿಂತ ಬಿಜೆಪಿ ನಾಯಕರು ತಮ್ಮನ್ನು ತಾವೇ ಅವಮಾನಿಸಿಕೊಂಡಿದ್ದು, ಇದು ಮತ ನೀಡಿದ ಮತದಾರರಿಗೆ ಅವಮಾನ, ಕನ್ನಡಿಗರಿಗೆ ಅವಮಾನ, ಕಾರ್ಯಕರ್ತರಿಗೆ ಅವಮಾನ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಆಪರೇಷನ್ ಹಸ್ತ ಚರ್ಚೆ ಬೆನ್ನಲ್ಲೇ ರಹಸ್ಯವಾಗಿ ಸಿಎಂ ಭೇಟಿಯಾದ ಮತ್ತೊಬ್ಬ ಬಿಜೆಪಿ ಶಾಸಕ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ

    ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ- ಚಂದ್ರಯಾನ ಯಶಸ್ಸಿಗೆ ರಾಗಾ ಶ್ಲಾಘನೆ

    ನವದೆಹಲಿ: ಬಹುನಿರೀಕ್ಷಿತ ಚಂದ್ರಯಾನ-3 (Chandrayaan-3) ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಹಿನ್ನೆಲೆ ರಾಜಕಾರಣಿಗಳು ಸೇರಿದಂತೆ ಗಣ್ಯಾತಿಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ. ಅದೇ ರೀತಿ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಚಂದ್ರಯಾನ-3 ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ್ದು, ಟ್ವೀಟ್ (Tweet) ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

    ಚಂದ್ರಯಾನ-3 ವಿಕ್ರಂ ಲ್ಯಾಂಡರ್ (Vikram Lander) ಯಶಸ್ವಿಯಾಗಿ ಚಂದ್ರನ ಮೇಲೆ ಕಾಲಿಟ್ಟು ಇಡೀ ದೇಶಕ್ಕೆ ಕೀರ್ತಿಯನ್ನು ತಂದಿದೆ. ಈ ಕುರಿತು ರಾಹುಲ್ ಗಾಂಧಿ ಟ್ವೀಟ್ ಮೂಲಕ ಇಸ್ರೋ (ISRO) ಸಂಸ್ಥೆಗೆ ಹಾಗೂ ವಿಜ್ಞಾನಿಗಳಿಗೆ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನೂ ಓದಿ: ಚಂದ್ರಯಾನದ ಯಶಸ್ಸು ಸಂಭ್ರಮಿಸಿದ ಟೀಂ ಇಂಡಿಯಾ

    ಟ್ವೀಟ್‌ನಲ್ಲಿ ಏನಿದೆ?
    ಇಂದಿನ ಪ್ರವರ್ತಕ ಸಾಧನೆಗಾಗಿ ಇಸ್ರೋ ತಂಡಕ್ಕೆ ಅಭಿನಂದನೆಗಳು. ನಮ್ಮ ವೈಜ್ಞಾನಿಕ ಸಮುದಾಯದ ದಶಕಗಳ ಪ್ರಚಂಡ ಚತುರತೆ ಮತ್ತು ಕಠಿಣ ಪರಿಶ್ರಮದ ಫಲವಾಗಿ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಸಾಫ್ಟ್ ಲ್ಯಾಂಡಿಂಗ್ ಆಗಿದೆ. ಇದನ್ನೂ ಓದಿ: ಚಂದ್ರಯಾನ-3 ಮಿಷನ್ ಸಕ್ಸಸ್: ಅಭಿನಂದನೆ ಸಲ್ಲಿಸಿದ ರಷ್ಯಾ ಬಾಹ್ಯಾಕಾಶ ಸಂಸ್ಥೆ

    1962ರಿಂದ ಭಾರತದ ಬಾಹ್ಯಾಕಾಶ ಕಾರ್ಯಕ್ರಮವು ಹೊಸ ಎತ್ತರವನ್ನು ಅಳೆಯುವುದನ್ನು ಮುಂದುವರಿಸಿದೆ ಮತ್ತು ಯುವ ಕನಸುಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದು ಶ್ಲಾಘಿಸಿ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ವಿಕ್ರಮ್ ಲ್ಯಾಂಡ್ ಆದ ಬಳಿಕ ಮೊದಲ ಚಿತ್ರ ರಿಲೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

    ಚಂದ್ರಯಾನ ವ್ಯಂಗ್ಯ: ನಟ ಪ್ರಕಾಶ್ ರಾಜ್ ವಿರುದ್ಧ ದೂರು ದಾಖಲು

    ಚಂದ್ರಯಾನ 3 (Chandrayaan 3) ಯೋಜನೆ ಬಗ್ಗೆ ನಟ ಪ್ರಕಾಶ್ ರಾಜ್ (Prakash Raj) ವ್ಯಂಗ್ಯ ಮಾಡಿ ಟ್ವೀಟ್ ಮಾಡಿದ್ದರು. ಅವರ ಈ ಟ್ವೀಟ್  ಭಾರೀ ವೈರಲ್ ಆಗಿತ್ತು. ಜೊತೆಗೆ ಅನೇಕರು ಅದಕ್ಕೆ ಆಕ್ಷೇಪವನ್ನೂ ವ್ಯಕ್ತ ಪಡಿಸಿದ್ದರು. ಇಡೀ ಭಾರತವೇ ಹೆಮ್ಮೆ ಪಡುತ್ತಿರುವಾಗ ಪ್ರಕಾಶ್ ರಾಜ್ ಈ ರೀತಿ ವ್ಯಂಗ್ಯ ಮಾಡುವುದು ಸರಿಯಲ್ಲ ಎಂದು ಹಲವರು ಬುದ್ದಿವಾದ ಹೇಳಿದ್ದರು. ನೆಗೆಟಿವ್ ಕಾಮೆಂಟ್ ಹೆಚ್ಚಾದ ಬೆನ್ನಲ್ಲೇ ಮತ್ತೊಂದು ಟ್ವೀಟ್ ಮಾಡಿದ್ದರು ಪ್ರಕಾಶ್ ರಾಜ್. ಹಾಸ್ಯ ಪ್ರಜ್ಞೆ ಇಲ್ಲದವರು ಎಂದು ಟೀಕಿಸಿದ್ದರು.

    ಈ ಬೆಳವಣಿಗೆಯ ನಡುವೆಯೇ ಚಂದ್ರಯಾನ ಮತ್ತು ಭಾರತೀಯ ವಿಜ್ಞಾನಿಗಳನ್ನು ಅವಮಾನಿಸಿದ್ದಾರೆ ಎನ್ನುವ ಕಾರಣಕ್ಕಾಗಿ ಬಾಗಲಕೋಟೆ ಜಿಲ್ಲೆ ಬನಹಟ್ಟಿ (Banahatti) ಪೊಲೀಸ್ ಠಾಣೆಯಲ್ಲಿ ಪ್ರಕಾಶ್ ರಾಜ್ ವಿರುದ್ದ ದೂರು (Complaint) ದಾಖಲಾಗಿದೆ. ಹಿಂದು ಸಂಘಟನೆ ಮುಖಂಡ ನಂದು ಗಾಯಕವಾಡ ಹಾಗೂ ಇತರರಿಂದ ದೂರು ಸಲ್ಲಿಸಿದ್ದಾರೆ. ನಮ್ಮ ಹೆಮ್ಮೆಯ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಫೋಸ್ಟ್ ಮಾಡಿ ಪ್ರಕಾಶ್ ರಾಜ್ ತಮ್ಮ ವಿಕೃತಿ ಮೆರೆದಿದ್ದಾರೆ. ಅವರು ಮಾನಸಿಕ ಸ್ಥಿಮಿತವನ್ನು ಕಳೆದುಕೊಂಡಿದ್ದಾರೆ. ಕೂಡಲೇ ಅವರನ್ನ ಬಂಧಿಸುವಂತೆ ದೂರಿನಲ್ಲಿ ಆಗ್ರಹಿಸಿದ್ದಾರೆ. ಇಸ್ರೋ ಕಳುಹಿಸಿರುವ ಚಂದ್ರಯಾನ‌ ನೌಕೆಯಿಂದ ಭಾರತದ  ಶಕ್ತಿಯನ್ನು ಇಮ್ಮಡಿಗೊಳಿಸಿದ್ದಾರೆ. ಈ ಬಗ್ಗೆ ನಮ್ಮ ವಿಜ್ಞಾನಿಗಳನ್ನ ಎಲ್ಲರೂ ಹೊಗಳುತ್ತಿರುವಾಗ. ಪ್ರಕಾಶ್ ರಾಜ್ ವಿಜ್ಞಾನಿಗಳ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡುವ ಮೂಲಕ ವಿಕೃತಿ ಮೆರೆದಿದ್ದಾರೆ. ಅವರ ವಿರುದ್ದ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ.

    ನಿನ್ನೆಯಷ್ಟೇ ಸ್ಪಷ್ಟನೆ ನೀಡಿದ್ದ ಪ್ರಕಾಶ್ ರಾಜ್

    ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್‌ ಮತ್ತೊಂದು ಟ್ವೀಟ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.  ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‍ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

    ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.  ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ.

     

    ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಕಾಶ್‌ ರಾಜ್‌, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್‌ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿʼ ಎಂದು ಸ್ಪಷ್ಟನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Chandrayaan-3: ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ: ಪ್ರಕಾಶ್‌ ರಾಜ್‌

    Chandrayaan-3: ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ: ಪ್ರಕಾಶ್‌ ರಾಜ್‌

    ಬೆಂಗಳೂರು: ಚಂದ್ರಯಾನ-3 (Chandrayaan-3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದ (Controversy) ಮೈಮೇಲೆ ಎಳೆದುಕೊಂಡಿದ್ದ ದಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರಾಜ್‌ (Prakash Raj) ಮತ್ತೊಂದು ಟ್ವೀಟ್‌ ಮೂಲಕ ಸ್ಪಷ್ಟನೆ ಕೊಟ್ಟಿದ್ದಾರೆ. ದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ, ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ, ಬಾಲಿಶವಾಗಿ ವರ್ತಿಸುವುದನ್ನ ನಿಲ್ಲಿಸಿ ಎಂದು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

    ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‍ ವಾಲಾ’ ಫೋಟೋ ಹಾಕಿದ್ದ ಅವರ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

    ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಚಂದ್ರಯಾನ-3 ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಕಾಯುತ್ತಿದ್ದೇನೆ- ಕರೀನಾ ಕಪೂರ್

    ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ನ್ಯೂಯಾರ್ಕ್‌ನ 41ನೇ ಇಂಡಿಯಾ ಡೇ ಪರೇಡ್‌ನಲ್ಲಿ ಭಾಗಿಯಾದ ಸಮಂತಾ

    ಈ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಪ್ರಕಾಶ್‌ ರಾಜ್‌, ʻದ್ವೇಷಕ್ಕೆ ದ್ವೇಷ ಮಾತ್ರ ಕಾಣಿಸುತ್ತದೆ. ನಾನು ಉಲ್ಲೇಖಿಸಿದ್ದು ನಮ್ಮ ಕೇರಳದ ಚಾಯ್‌ವಾಲಾರನ್ನ ವಿಜೃಂಭಿಸುವ ಆರ್ಮ್‌ಸ್ಟ್ರಾಂಗ್ ಕಾಲದ ಜೋಕ್. ಟ್ರೋಲಿಗರ ಕಣ್ಣಿಗೆ ಕಾಣಿಸಿದ ಚಾಯ್‌ವಾಲಾ ಯಾರು? ನಿಮಗೆ ಜೋಕ್ ಅರ್ಥವಾಗದಿದ್ದರೆ, ಅದು ನಿಮ್ಮ ಮೇಲೆಯೇ ಮಾಡಿದ ಜೋಕ್ ಆಗುತ್ತದೆ. ಬಾಲಿಶವಾಗಿ ವರ್ತಿಸುವುದನ್ನು ನಿಲ್ಲಿಸಿʼ ಎಂದು ಸ್ಪಷ್ಟನೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಚಂದ್ರಯಾನ ಬಗ್ಗೆ ಪ್ರಕಾಶ್ ರೈ ವ್ಯಂಗ್ಯ: ತರಾಟೆಗೆ ತೆಗೆದುಕೊಂಡ ನೆಟ್ಟಿಗರು

    ಚಂದ್ರಯಾನ ಬಗ್ಗೆ ಪ್ರಕಾಶ್ ರೈ ವ್ಯಂಗ್ಯ: ತರಾಟೆಗೆ ತೆಗೆದುಕೊಂಡ ನೆಟ್ಟಿಗರು

    ಕ್ಷಿಣ ಭಾರತದ ಹೆಸರಾಂತ ನಟ ಪ್ರಕಾಶ್ ರೈ (Prakash Raj) ಚಂದ್ರಯಾನ (Chandrayaan 3) ಕುರಿತಂತೆ ಟ್ವೀಟ್ (Tweet) ಮಾಡಿ ವಿವಾದವನ್ನು (Controversy) ಮೈಮೇಲೆ ಎಳೆದುಕೊಂಡಿದ್ದಾರೆ. ಚಂದ್ರಯಾನ ಇದೀಗ ಕಳುಹಿಸಿರುವ ಫೋಟೋ ಎಂದು ಕ್ಯಾಪ್ಷನ್ ನೀಡಿ ‘ಚಾಯ್‍ ವಾಲಾ’ ಫೋಟೋ ಹಾಕಿದ್ದಾರೆ. ಅವರ ಈ ವರ್ತನೆಗೆ ಅನೇಕರು ಕಿಡಿಕಾರಿದ್ದಾರೆ.

    ಇಡೀ ದೇಶವೇ ಹೆಮ್ಮೆ ಪಡುವಂತೆ ನಿಮ್ಮ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಜಗತ್ತೇ ಈ ಕೆಲಸಕ್ಕಾಗಿ ಕೊಂಡಾಡುತ್ತಿದೆ. ಆದರೆ, ಪ್ರಕಾಶ್ ರೈ ಈ ರೀತಿ ಗೇಲಿ ಮಾಡುವುದು ಸರಿಯಲ್ಲ. ಭಾರತದ ಅಸ್ಮಿತೆಯನ್ನೇ ಪ್ರಶ್ನೆ ಮಾಡುವ ನಟನಿಗೆ ಸರಿಯಾದ ಶಿಕ್ಷೆಯಾಗಬೇಕು ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.

     

    ಪ್ರಕಾಶ್ ರೈ ಅವರ ಟ್ವೀಟ್ ಸೋಷಿಯಲ್ ಮೀಡಿಯಾದಲ್ಲಿ ಪರ ವಿರೋಧ ಚರ್ಚೆಗೆ ಕಾರಣವಾಗಿದೆ. ಹೆಸರಾಂತ ನಟನಾಗಿ ಯಾವ ರೀತಿಯಲ್ಲಿ ನಡೆದುಕೊಳ್ಳಬೇಕು ಎನ್ನುವುದನ್ನು ಕಲಿಸಬೇಕಿದೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಪ್ರಕಾಶ್ ರೈ ಪರವಾಗಿ ಕಾಮೆಂಟ್ ಮಾಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎನ್‌ಇಪಿ ರದ್ದು ಮಾಡುವ ಸಿಎಂ ಹೇಳಿಕೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ಷೇಪ

    ಎನ್‌ಇಪಿ ರದ್ದು ಮಾಡುವ ಸಿಎಂ ಹೇಳಿಕೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಆಕ್ಷೇಪ

    – ಕನ್ನಡದಲ್ಲೇ ಟ್ವೀಟ್ ಮಾಡಿ ಖಂಡನೆ

    ಬೆಂಗಳೂರು: ರಾಜ್ಯದಲ್ಲಿ ಎನ್‌ಇಪಿ ರದ್ದು ಮಾಡುವ ಬಗ್ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆ ಕುರಿತಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಎನ್‌ಇಪಿ (NEP) ರದ್ದು ಕುರಿತ ಸಿಎಂ ಹೇಳಿಕೆಗೆ ಕನ್ನಡದಲ್ಲಿ ಟ್ವೀಟ್ (Tweet) ಮಾಡುವ ಮೂಲಕ ಧರ್ಮೇಂದ್ರ ಪ್ರಧಾನ್ ವಿರೋಧಿಸಿದ್ದಾರೆ. ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕೇ ವಿನಃ ರಾಜಕೀಯದ ದಾಳವಾಗಬಾರದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಬಲಿಗರೇ ಬರುತ್ತೇವೆ ಎಂದ ಮೇಲೆ ಸೋಮಶೇಖರ್‌ ಕಾಂಗ್ರೆಸ್‌ನಲ್ಲಿರಲು ಸಾಧ್ಯವೇ : ಕೈ ಶಾಸಕ ಶ್ರೀನಿವಾಸ್‌

    ಟ್ವೀಟ್‌ನಲ್ಲಿ ಏನಿದೆ?
    ಶಿಕ್ಷಣವು ಪ್ರಗತಿಯ ದಾರಿದೀಪವಾಗಬೇಕೇ ವಿನಃ ರಾಜಕೀಯದ ದಾಳವಾಗಬಾರದು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಸ್ಥಗಿತಗೊಳಿಸುವ ಕರ್ನಾಟಕ ರಾಜ್ಯದ ಸಿಎಂ ಅವರ ರಾಜಕೀಯ ಪ್ರೇರಿತ ನಿರ್ಧಾರದ ಬಗ್ಗೆ ತಿಳಿದು ನಿರಾಶೆಯಾಗಿದೆ. ನಮ್ಮ ಶಿಕ್ಷಣ ವ್ಯವಸ್ಥೆಗೆ ವಿಕಸನದ ಅಗತ್ಯವಿದೆಯೇ ಹೊರತು ಹಿಂಜರಿಕೆಯಲ್ಲ. ಎನ್‌ಇಪಿ ಎಂಬುದು ಹಲವು ವರ್ಷಗಳ ಗಂಭೀರ ಸಮಾಲೋಚನೆಗಳನ್ನು ಜನರ ಆಶೋತ್ತರಗಳನ್ನು ಪ್ರತಿಬಿಂಬಿಸುವ ಫಲಿತಾಂಶವಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ಗೆ ಜಂಪ್ ಆಗ್ತಾರಾ ಬಾಂಬೆ ಫ್ರೆಂಡ್ಸ್? – ಬಿಜೆಪಿ ಸ್ಥಳೀಯ ನಾಯಕರ ವಿರುದ್ಧ ಎಸ್‍ಟಿಎಸ್ ಕೆಂಡ

    ಈ ನಿರ್ಧಾರವು ಕಾಂಗ್ರೆಸ್‌ನ ಸುಧಾರಣೆ-ವಿರೋಧಿ, ಭಾರತೀಯ ಭಾಷಾ ವಿರೋಧಿ ಮತ್ತು ಕರ್ನಾಟಕ ವಿರೋಧಿ ಗುಣಗಳನ್ನು ಬಹಿರಂಗಪಡಿಸುತ್ತದೆ. ಕರ್ನಾಟಕವು ಪ್ರಗತಿ ಶೀಲ ಮತ್ತು ಸರ್ವರನ್ನು ಒಳಗೊಳ್ಳುವಿಕೆಗೆ ಬೆಲೆಕೊಡುವ ನಾಯಕತ್ವವನ್ನು ಬಯಸುತ್ತದೆಯೇ ಹೊರತು ಕ್ಷುಲ್ಲಕ ರಾಜಕಾರಣವನ್ನಲ್ಲ. ವಿದ್ಯಾರ್ಥಿಗಳ ಭವ್ಯ ಭವಿಷ್ಯತ್ತಿಗೆ ಮೊದಲ ಆದ್ಯತೆಯನ್ನು ಕೊಡೋಣ. ಕ್ಷುಲ್ಲಕ ರಾಜಕಾರಣ ಮಾಡುವುದನ್ನು ನಿಲ್ಲಿಸೋಣ ಎಂದು ಬರೆದು ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಸರ್ಕಾರ ಮಾಡುವಾಗ ದಮ್ಮಯ್ಯ ಬನ್ನಿ ಅಂತಾ ಕರೆದ್ರು, ಈಗ ಬರ್ತೀವಿ ಅಂದ್ರೂ ಸೇರಿಸಿಕೊಳ್ಳೋರಿಲ್ಲ: ವಿಶ್ವನಾಥ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ

    ಅನ್ನಭಾಗ್ಯದ ಅಕ್ಕಿಯ ಮೊದಲ ತುತ್ತಿನಲ್ಲೇ ಕಲ್ಲು: ಬಸವರಾಜ ಬೊಮ್ಮಾಯಿ

    ಬೆಂಗಳೂರು: ರಾಜ್ಯ ಸರ್ಕಾರದ ಅನ್ನಭಾಗ್ಯ (Annabhagya) ಯೋಜನೆಯ ಮೊದಲ ತುತ್ತಿನಲ್ಲಿಯೇ ಕಲ್ಲು ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ (Congress) ಸರ್ಕಾರ ಅನ್ನಭಾಗ್ಯ ಯೋಜನೆ ನೀಡುವುದಾಗಿ ಭರವಸೆ ನೀಡಿತ್ತು. ಈಗ ಪೂರ್ಣ ಪ್ರಮಾಣದಲ್ಲಿ ಅಕ್ಕಿ ಸಿಗದ ಹಿನ್ನೆಲೆ 10 ಕೆಜಿ ಅಕ್ಕಿ ಬದಲಿಗೆ 5 ಕೆಜಿ ಅಕ್ಕಿ ಕೊಟ್ಟು ಉಳಿದ 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ನೀಡಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಿರ್ಧಾರದ ಕುರಿತು ಮಾಜಿ ಸಿಎಂ ಬೊಮ್ಮಾಯಿ ಟ್ವೀಟ್ (Tweet) ಮೂಲಕ ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ನೈತಿಕ ಹೊಣೆ ಹೊತ್ತು ಕಟೀಲ್‌ ರಾಜೀನಾಮೆ ನೀಡಬೇಕು: ರೇಣುಕಾಚಾರ್ಯ

    ಟ್ವೀಟ್‌ನಲ್ಲಿ ಏನಿದೆ?
    ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆ ಜಾರಿ ಮಾಡುವಲ್ಲಿ ಜನರಿಗೆ ದೋಖಾ ಮಾಡುವುದು ಮುಂದುವರೆಸಿದೆ. ಹತ್ತು ಕೆಜಿ ಅಕ್ಕಿ ಕೊಡುವ ಗ್ಯಾರೆಂಟಿ ನೀಡಿ ಈಗ ಒಬ್ಬರಿಗೆ 170 ರೂ. ಹಾಕುವುದಾಗಿ ಹೇಳಿರುವುದು ಸರ್ಕಾರದ ವಂಚನೆಯ ಇನ್ನೊಂದು ಮುಖ ಬಯಲಾಗಿದೆ. ಇದನ್ನೂ ಓದಿ: 15 ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ – ಕಂತೆ ಕಂತೆ ನೋಟುಗಳು ಪತ್ತೆ

    ರಾಜ್ಯ ಸರ್ಕಾರ ನೀಡುವ 170 ರೂ. ಗ್ರಾಮೀಣ ಮಹಿಳೆಯ ದಿನದ ಕೂಲಿಯ ಅರ್ಧದಷ್ಟು ಹಣವೂ ಆಗುವುದಿಲ್ಲ. ಸುಳ್ಳು ಗ್ಯಾರೆಂಟಿಗಳನ್ನು ಈಡೇರಿಸಲಾಗದೇ ಈಗ ಜನರಿಗೆ ದ್ರೋಹ ಮಾಡಲಾಗುತ್ತಿದೆ. ಇದನ್ನೂ ಓದಿ: ಐದಲ್ಲ, 10 ಕೆಜಿ ಅಕ್ಕಿಗೆ ಸರ್ಕಾರ ಹಣ ನೀಡಬೇಕು – ಜೋಶಿ ವಾಗ್ದಾಳಿ

    ಚುನಾವಣೆಯಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಹತ್ತು ಕೆಜಿ ಅಕ್ಕಿ ಕೊಡಿ, ಇಲ್ಲವೇ ಮಾರುಕಟ್ಟೆ ದರದಲ್ಲಿ ಪ್ರತಿ ಕೆಜಿಗೆ 60 ರೂ.ಗಳಂತೆ ಹತ್ತು ಕೆಜಿಗೆ ತಗುಲುವ ಹಣವನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಿ. ಇಲ್ಲದಿದ್ದರೆ ಮಾತಿಗೆ ತಪ್ಪಿದ್ದಕ್ಕಾಗಿ ಜನರಿಗೆ ಕ್ಷಮೆ ಕೇಳಿ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅಕ್ಕಿ ಕೊಡ್ತಾರೋ, ದುಡ್ಡು ಕೊಡ್ತಾರೋ ಅದು ಅವರ ಹಣೆಬರಹ: ಹೆಚ್‍ಡಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ- ವಿಜಯೇಂದ್ರ ಹೀಗಂದಿದ್ಯಾಕೆ..?

    ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ- ವಿಜಯೇಂದ್ರ ಹೀಗಂದಿದ್ಯಾಕೆ..?

    ಬೆಂಗಳೂರು: ರಾಜ್ಯದಲ್ಲಿ ಮಳೆ (Rain) ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಿ.ವೈ ವಿಜಯೇಂದ್ರ (BY Vijayendra) ಕಾಂಗ್ರೆಸ್ ಕಾಲೆಳೆದಿದ್ದಾರೆ.

    ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಖಾಸಗಿಯಿಂದ ತಂದ್ರೆ ದುಬಾರಿ – ಅನ್ನಭಾಗ್ಯ ಅಕ್ಕಿ ಹೊಂದಿಸಲು ಸೀಕ್ರೆಟ್ ಪ್ಲ್ಯಾನ್ ಇದೆಯಾ..?

    ಟ್ವೀಟ್‍ನಲ್ಲೇನಿದೆ..?; ಗ್ಯಾರಂಟಿ ಕಸರತ್ತಿನಲ್ಲಿ ಕಳೆದು ಹೋಗಿರುವ ಕಾಂಗ್ರೆಸ್ (Congress) ಸರ್ಕಾರಕ್ಕೆ ಶುಭ ಶಕುನವೇಕೋ ‘ಕೈ’ ಹಿಡಿದಂತಿಲ್ಲ. ವರುಣನ ಅವಕೃಪೆ ಇಡೀ ರಾಜ್ಯವನ್ನಾವರಿಸಿದೆ. ಬರಗಾಲ ತನ್ನ ಕೆನ್ನಾಲಿಗೆ ಚಾಚಲು ಆರಂಭಿಸಿದೆ. ನೀರಿಲ್ಲದೆ ತತ್ತರದಿಂದ ಮಹಿಳೆಯರು ಆಕ್ರೋಶಿತರಾಗಿದ್ದಾರೆ. ಮುಂಜಾಗ್ರತೆ ವಹಿಸದಿದ್ದರೆ, ಉದ್ಭವಿಸುವ ಭೀಕರತೆಗೆ ಸರ್ಕಾರವೇ ಹೊಣೆಯಾಗಲಿದೆ ಎಂದು ಕಿಡಿಕಾರಿದ್ದಾರೆ.

     

  • 5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ

    5 ಗ್ಯಾರಂಟಿ ಜಾರಿಗೆ 59 ಸಾವಿರ ಕೋಟಿ ವೆಚ್ಚವಾಗುತ್ತೆ: ಸಿದ್ದರಾಮಯ್ಯ

    ಬೆಂಗಳೂರು: 5 ಗ್ಯಾರಂಟಿಗಳನ್ನು (Guarantee Scheme) ಜಾರಿಗೊಳಿಸಲು ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    5 ಗ್ಯಾರಂಟಿ ಯೋಜನೆಗಳಿಗೆ ಎಷ್ಟು ಖರ್ಚಾಗಲಿದೆ? ಈ ಯೋಜನೆ ಜಾರಿಗೆ ಹಣ ಎಲ್ಲಿಂದ ತರುತ್ತೀರಿ ಎಂದು ಮಾಧ್ಯಮಗಳು ಈ ಹಿಂದೆ ಹಲವು ಬಾರಿ ಸರ್ಕಾರವನ್ನು ಪ್ರಶ್ನಿಸಿದ್ದವು. ಆದರೆ ಇಂದು ಸಿದ್ದರಾಮಯ್ಯ ಈ ಯೋಜನೆಗೆ ಅಂದಾಜು ವೆಚ್ಚವನ್ನು ತಿಳಿಸಿದ್ದಾರೆ. ಆದರೆ ಇಷ್ಟೊಂದು ಹಣವನ್ನು ಹೇಗೆ ಹೊಂದಾಣಿಕೆ ಮಾಡಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಇದನ್ನೂ ಓದಿ: ಮಂಗಳೂರಿನಲ್ಲಿ ಕೋಮು ದ್ವೇಷ ನಿಗ್ರಹ ದಳ ಸ್ಥಾಪನೆ: ಜಿ.ಪರಮೇಶ್ವರ್

    ಟ್ವೀಟ್‌ನಲ್ಲಿ ಏನಿದೆ?
    ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ.

    ಬಿಜೆಪಿ (BJP) ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು.

    ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ.

    ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು.

    ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್ (Congress) ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ನಮ್ಮ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ.

    ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದೆ. ವಸ್ತು ಸ್ಥಿತಿಯನ್ನು ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ.

    ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ. ಇದನ್ನೂ ಓದಿ: ನನ್ನ ಕುಟುಂಬಕ್ಕೆ ಉಚಿತ ಯೋಜನೆ ಬೇಡ, ಬಡವರಿಗೆ ಸಿಗಲಿ: ರೇಣುಕಾಚಾರ್ಯ

  • ಒಡಿಶಾ ರೈಲು ದುರಂತ- ಗಾಯಾಳುಗಳಿಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಯುವಜನತೆ

    ಒಡಿಶಾ ರೈಲು ದುರಂತ- ಗಾಯಾಳುಗಳಿಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಯುವಜನತೆ

    ಭುವನೇಶ್ವರ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಭೀಕರ ರೈಲು ಅಪಘಾತ (Train Accident) ನಡೆದಿದ್ದು, ಅಪಘಾತದ ನಂತರ ಗಾಯಾಳುಗಳಿಗೆ ರಕ್ತದಾನ (Blood Donation) ಮಾಡುವ ಸಲುವಾಗಿ ಜನರು ಸರತಿ ಸಾಲಿನಲ್ಲಿ ನಿಂತಿದ್ದಾರೆ.

    ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 261ಕ್ಕೆ ಏರಿಕೆಯಾಗಿದ್ದು, 900ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡು ಬಾಲಸೋರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆ ಜನರು ಸ್ವಯಂಪ್ರೇರಿತರಾಗಿ ಗಾಯಾಳುಗಳಿಗೆ ರಕ್ತದಾನ ಮಾಡಲು ಕ್ಯೂನಲ್ಲಿ ನಿಂತಿದ್ದಾರೆ. ಅಪಘಾತದ ಸುದ್ದಿ ಹೊರಬೀಳುತ್ತಿದ್ದಂತೆ ರಾತ್ರಿಯಿಂದಲೇ ಸ್ಥಳೀಯ ನಿವಾಸಿಗಳು, ಅದರಲ್ಲೂ ಯುವಕರು ರಕ್ತದಾನ ಮಾಡಲು ಆಸ್ಪತ್ರೆಗೆ ಬಂದು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ

    ಸುಮಾರು 25 ಸ್ವಯಂಸೇವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಬಂದಿದ್ದೇವೆ. ನಮ್ಮ ರಕ್ತ ಒಬ್ಬರ ಜೀವ ಉಳಿಸಿದರೆ ಅದಕ್ಕಿಂತ ಸಂತೋಷ ಮತ್ತೊಂದಿಲ್ಲ ಎಂದು ಸರತಿ ಸಾಲಿನಲ್ಲಿ ನಿಂತಿದ್ದ ಸ್ವಯಂ ಸೇವಕರೊಬ್ಬರು ಹೇಳಿದ್ದಾರೆ. ಒಡಿಶಾದ ಮುಖ್ಯ ಕಾರ್ಯದರ್ಶಿ ಪ್ರದೀಪ್ ಕುಮಾರ್ ಜೆನಾ (Pradeep Kumar Jena) ಕೂಡ ಇಂತಹ ದುರಂತದ ಸಮಯದಲ್ಲಿ ರಕ್ತದಾನ ಮಾಡಿದ ಸ್ವಯಂಸೇವಕರಿಗೆ ಟ್ವೀಟ್ ಮೂಲಕ ಧನ್ಯವಾದ ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬ, ಗಾಯಾಳುಗಳಿಗೆ ಪರಿಹಾರ ಘೋಷಣೆ

    ಬಾಲಾಸೋರ್‌ನಲ್ಲಿ ರಾತ್ರಿಯಿಡೀ 500 ಯೂನಿಟ್ ರಕ್ತವನ್ನು ಸಂಗ್ರಹಿಸಲಾಗಿದೆ. ಪ್ರಸ್ತುತ 900 ಯೂನಿಟ್  ದಾಸ್ತಾನು ಇದೆ. ಇದು ಅಪಘಾತಕ್ಕೊಳಗಾದವರಿಗೆ ಚಿಕಿತ್ಸೆ ನೀಡಲು ಸಹಾಯ ಮಾಡುತ್ತದೆ. ರಕ್ತದಾನ ಮಾಡಿದ ಎಲ್ಲಾ ಸ್ವಯಂಸೇವಕರಿಗೆ ನಾನು ವೈಯಕ್ತಿಕವಾಗಿ ಋಣಿಯಾಗಿದ್ದೇನೆ ಮತ್ತು ಕೃತಜ್ಞನಾಗಿದ್ದೇನೆ ಎಂದು ಜೆನಾ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರೈಲು ದುರಂತ – ಕನ್ನಡಿಗರ ಸುರಕ್ಷತೆ ಮೇಲ್ವಿಚಾರಣೆಗೆ ಸಚಿವ ಸಂತೋಷ್ ಲಾಡ್ ನಿಯೋಜನೆ