ನವದೆಹಲಿ: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾದಿಂದ ವಿಶೇಷ ವಿಮಾನದಲ್ಲಿ ತರಲಾದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕಾಡಿಗೆ ಬಿಡುವುದಕ್ಕೂ ಮುಂಚೆ, ಮನಮೋಹನ್ ಸಿಂಗ್ ಅವರು 2008-2009ರಲ್ಲಿಯೇ ಆಪರೇಷನ್ ಚೀತಾ ಪ್ರಸ್ತಾವನೆಯನ್ನು ಮಾಡಿದ್ದರು ಎಂದು ಎಐಸಿಸಿ ಮಾಧ್ಯಮ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ತಮಾಷೆ ಮಾಡುತ್ತಿದ್ದಾರೆ. 2009-11ರಲ್ಲಿಯೇ ಚೀತಾ ಪ್ರಾಜೆಕ್ಟ್ ಅನ್ನು ಕಾಂಗ್ರೆಸ್ ಕೈಗೆತ್ತಿಕೊಂಡಿತ್ತು. 2010ರ ಏಪ್ರಿಲ್ 25ರಂದು ಕೇಪ್ ಟೌನ್ ಹೋಗಿ ಚೀತಾಗಳನ್ನು ಭಾರತಕ್ಕೆ ತರಲು ಮಾತುಕತೆ ನಡೆಸಿತ್ತು. ಕಾಂಗ್ರೆಸ್ ಪ್ರಯತ್ನದ ಭಾಗವಾಗಿ ಭಾರತಕ್ಕೆ ಚೀತಾಗಳು ಬಂದಿವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕ್ರೆಡಿಟ್ ತೆಗೆದುಕೊಳ್ಳುತ್ತಿದ್ದಾರೆ. ಇದೊಂದು ಅನಗತ್ಯ ತಮಾಷೆ ಆಗಿದೆ. ರಾಷ್ಟ್ರೀಯ ಸಮಸ್ಯೆಗಳು, ಭಾರತ್ ಜೋಡೋ ಅಭಿಯಾನ ಮರೆಮಾಚಲು ಮೋದಿ ಪ್ರಯತ್ನಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚೀತಾ
PM hardly ever acknowledges continuity in governance. Cheetah project going back to my visit to Capetown on 25.04.2010 is the latest example. The tamasha orchestrated by PM today is unwarranted and is yet another diversion from pressing national issues and #BharatJodoYatra 1/2 pic.twitter.com/SiZQhQOu0N
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಟಾಪ್ ಹೋಟೆಲ್‍ಗಳಿಂದ 10 ವಿವಿಧ ರೀತಿಯ ದೋಸೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ನನಗೆ ಕಳುಹಿಸಿದ್ದಾರೆ. ಆದರೆ ಇಲ್ಲಿಯವರೆಗೂ ನನಗೆ ಯಾವುದೇ ದೋಸೆ ಪಾರ್ಸೆಲ್ ಬಂದಿಲ್ಲ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ಅನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ನಗರದಲ್ಲಿ ಮಳೆಹಾನಿಯಿಂದಾಗಿ ಜನ ಪರದಾಡುತ್ತಿದ್ದ ಸಂದರ್ಭದಲ್ಲಿ ಸಂಸದ ತೇಜಸ್ವಿಸೂರ್ಯ ದೋಸೆ ಸವಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದರಿಂದ ತೇಜಸ್ವಿ ಸೂರ್ಯ ಸಾಕಷ್ಟು ಟ್ರೋಲ್‍ಗೆ ಒಳಗಾಗಿದ್ದರು. ಈ ಮಧ್ಯೆ ಕಾಂಗ್ರೆಸ್ ಪಕ್ಷವು ಬೆಂಗಳೂರಿನಲ್ಲಿ ಮಳೆ ಹಾನಿಯಿಂದ ಜನರ ಪರದಾಡುತ್ತಿದ್ದರೆ ಸಂಸದರು ಹೋಟೆಲ್‍ನಲ್ಲಿ ದೋಸೆ ತಿನ್ನುವುದರಲ್ಲಿ ಬ್ಯುಸಿಯಾಗಿದ್ದಾರೆ. ಇದು ಇವರ ಬೇಜವಾಬ್ದಾರಿ ತನವನ್ನು ತೋರಿಸುತ್ತದೆ ಎಂದು ವಾಗ್ದಾಳಿ ನಡೆಸಿತ್ತು. ಇದನ್ನೂ ಓದಿ: ಮಿಸ್ಸಿಂಗ್ ಮಿನಿಸ್ಟರ್ಸ್ – ಬೆಂಗಳೂರು ಮಂತ್ರಿ, ಸಂಸದರ ವಿರುದ್ಧ ಕಾಂಗ್ರೆಸ್ ಕಿಡಿ
ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!
ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.
ಇದೀಗ ಈ ಕುರಿತಂತೆ ತೇಜಸ್ವಿ ಸೂರ್ಯ ಅವರು ತಮ್ಮ ಟ್ವಿಟ್ಟರ್‌ನಲ್ಲಿ ದೋಸೆ ತಿನ್ನುತ್ತಿರುವ ಫೋಟೋವನ್ನು ಹಂಚಿಕೊಂಡಿದ್ದು, ಕಾಂಗ್ರೆಸ್ ಕಾರ್ಯಕರ್ತರು ನನ್ನ ಮನೆಗೆ ಮಸಾಲೆ ದೋಸೆ ಪಾರ್ಸೆಲ್ ಕಳುಹಿಸಿದ್ದಾರೆ. ಆದರೆ 24 ಗಂಟೆಗಿಂತಲೂ ಹೆಚ್ಚು ಕಾಲ ಕಳೆದಿದೆ. ಇನ್ನೂ ದೋಸೆ ಬಂದಿಲ್ಲ. ಇದರಲ್ಲಿಯೂ ಮೋಸ ಮಾಡಿದ್ದಾರೆ. ದೋಸೆಯನ್ನು ಸರಿಯಾಗಿ ಕಳುಹಿಸಲು ಕೂಡ ಅವರಿಗೆ ಸಾಧ್ಯವಾಗಲಿಲ್ಲ. ಇವರು ಆಡಳಿತವನ್ನು ನಡೆಸುವ ಕನಸು ಕಾಣುತ್ತಿದ್ದಾರೆ ಎಂದು ಕ್ಯಾಪ್ಷನ್‍ನಲ್ಲಿ ಬರೆದುಕೊಳ್ಳುವ ಮೂಲಕ ವ್ಯಂಗ್ಯವಾಡಿದ್ದಾರೆ.
ಇದರ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಂಸದರು, ನನ್ನ ಕ್ಷೇತ್ರದಲ್ಲಿ ಬೊಮ್ಮನಹಳ್ಳಿಯಲ್ಲಿ ಮಾತ್ರ ಸ್ವಲ್ಪ ಮಳೆ ಸಮಸ್ಯೆ ಆಗಿದೆ ಬೇರೆ ಕ್ಷೇತ್ರದಲ್ಲಿ ಜನ ಜೀವನ ಯಥಾಸ್ಥಿತಿ ನಡೆದುಕೊಂಡು ಬರುತ್ತಿದೆ. ನಾನು ನನ್ನ ಕ್ಷೇತ್ರದಲ್ಲಿ ದೋಸೆ ಅಂಗಡಿ ಉದ್ಘಾಟನೆ ಮಾಡಿದೆ. ನನ್ನ ಕ್ಷೇತ್ರದಲ್ಲಿ ಇರುವ ಅಂಗಡಿ ಉದ್ಘಾಟನೆ ನನ್ನ ಕರ್ತವ್ಯ, ಅದನ್ನು ನಿರ್ವಹಣೆ ಮಾಡಿರುವುದಾಗಿ ತಿಳಿಸಿದ್ದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನಮಗೆ ಸವಾಲು ಹಾಕುವ ಧಮ್ ನಿಮಗೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಜನ ಸ್ಪಂದನ ಕಾರ್ಯಕ್ರಮದ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಮರ್ದನ’ ಅಲ್ಲಲ್ಲ, `ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ವೀರಾವೇಶದ ಭಾಷಣ ಕೇಳಿ ಖುಷಿಯಾಯಿತು. ಸಂಘ ಪರಿವಾರ ಇಂತಹ ಜೋರು ಮಾತುಗಳನ್ನು ಸಹಿಸವುದಿಲ್ಲ, ಇದೇ ರೀತಿ ಮಾತನಾಡಿಯೇ ಪಾಪ ಯಡಿಯೂರಪ್ಪ ಜೈಲು ಸೇರಿದ್ದು ಎನ್ನುವುದು ನೆನಪಿರಲಿ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಲಕ್ನೋ ಅಗ್ನಿ ದುರಂತ – ನಿರ್ಲಕ್ಷ್ಯವಹಿಸಿದ 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಯೋಗಿ
ಧಮ್ ಇದ್ದರೆ ಯಾತ್ರೆ ನಿಲ್ಲಿಸಿ ಎಂಬ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಬೇಕು. ಸಮಾವೇಶದಲ್ಲಿ ಖಾಲಿ ಕುರ್ಚಿ ನೋಡಿದರೆ, ನಿಮ್ಮ ಜಾತ್ರೆಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಅಂತ ಅನಿಸಲ್ವಾ? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ನಮಗೆ ಸವಾಲು ಹಾಕುವ ಧಮ್ ನಿಮಗೆ ಇಲ್ಲ. ನಿಮಗೆ ನಿಜವಾದ ಧಮ್ ಇದ್ದರೆ ಖಾಲಿ ಸ್ಥಾನಗಳನ್ನು ಮೊದಲು ತುಂಬಿ. ಯತ್ನಾಳ್ ವಿರುದ್ಧ ಕ್ರಮ ತೆಗದುಕೊಳ್ಳಿ. ಆಮೇಲೆ ನಿಮ್ಮ ಧಮ್ ನೋಡೋಣ ಎಂದು ಸವಾಲೊಡ್ಡಿದ್ದಾರೆ.
ನನ್ನ ಆಡಳಿತ ಕಾಲದ ಹಗರಣ ತನಿಖೆ ಬಯಲಿಗೆಳೆಯುತ್ತೇನೆ ಎಂದು ಹೇಳುತ್ತಿದ್ದಾರೆ. ಮೊನ್ನೆ ಮಾಜಿ ಸಿಎಂ ಬಿಎಸ್‍ವೈ ನೋಟಿಸ್ ಕೊಟ್ಟಿದ್ದು ನೋಡಿದರೆ, ನೀವು ಹೇಳಿದ್ದು ನನಗೋ, ಯಡಿಯೂರಪ್ಪನವರಿಗೆ ಎಂದು ಗೊಂದಲವಾಗುತ್ತಿದೆ ಅಂತ ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ಸಿನವರಿಗೆ ತಾಕತ್, ಧಮ್ ಇದ್ದರೇ ನಮ್ಮನ್ನು ತಡೆಯಲಿ: ಬೊಮ್ಮಾಯಿ ಸವಾಲು
ನನ್ನ ಅಧಿಕಾರವಧಿಯ ಹಗರಣಗಳನ್ನ ಬಯಲಿಗೆಳೆಯುತ್ತೇವೆ ಎಂದು ಧಮ್ಕಿ ಹಾಕುತ್ತಿದ್ದೀರಾ. ನಿಮಗೆ ಧಮ್ ಇದ್ದರೆ ಮೊದಲು ತನಿಖೆ ಮಾಡಿಸಿ. ಆ ಸವಾಲು ಸ್ವೀಕಾರ ಮಾಡಲು ನಾನು ಸಿದ್ಧ. ಈ ಬ್ಲಾಕ್ ಮೇಲ್ ತಂತ್ರಗಳನ್ನ ನಿಮ್ಮವರು ಮೇಲೆ ಬಳಸಿಕೊಳ್ಳಿ ಎಂದು ಹರಿಹಾಯ್ದಿದ್ದಾರೆ.
ನಮ್ಮ ಸರ್ಕಾರದ ಹಗರಣವನ್ನು ಬಯಲಿಗೆಳೆಯುವ ಮೊದಲು ಬಿಜೆಪಿ ನಾಯಕರ ಮೇಲೆ ನ್ಯಾಯಾಲಯದಲ್ಲಿ ಇರುವ ಸಾಲು ಸಾಲು ಹಗರಣಗಳನ್ನು ಮೊದಲು ನೀವು ಇತ್ಯರ್ಥಪಡಿಸಿಕೊಂಡು ಬನ್ನಿ. ಬೀಸುವ ಕತ್ತಿ ನಿಮ್ಮ ಕುತ್ತಿಗೆಯನ್ನೇ ಕೊಯ್ಯದಿರಲಿ ಎಂದಿದ್ದಾರೆ.
ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕ ಚರ್ಚೆಗೆ ನೀವು ಸಿದ್ಧರಿದ್ದಿರಾ ಬೊಮ್ಮಾಯಿ ಅವರೇ? ನಮ್ಮ ಪಕ್ಷ ಸಿದ್ಧ ಇದೆ. ನೀವು ಸಿದ್ಧ ಇದ್ದರೆ ಸಾರ್ವಜನಿಕ ಚರ್ಚೆಗೆ ಸ್ಥಳ-ಸಮಯ ನೀವೇ ನಿರ್ಧರಿಸಿ ತಿಳಿಸಿ ನಾನು ಬರುತ್ತೇನೆ. ಧಮ್ ಎಂದರೆ ಧಮ್ ಬಿರಿಯಾನಿ ಎಂದು ನೀವು ತಿಳಿದುಕೊಂಡ ಹಾಗಿದೆ. ಭ್ರಷ್ಟಾಚಾರವನ್ನೇ ವಿಷಯವನ್ನಾಗಿಟ್ಟು ಚುನಾವಣೆ ಎದುರಿಸುವ ಧಮ್ ನಿಮಗಿದೆಯೇ ಬೊಮ್ಮಾಯಿ ಅವರೇ? ನಿಮಗೆ ಆ ಧಮ್ ಇಲ್ಲ. ಕೊನೆಗೆ ಹಿಂದೂ-ಮುಸ್ಲಿಂ, ಮಂದಿರ ಮಸೀದಿ, ಹಿಜಾಬ್ – ಕೇಸರಿ ಶಾಲುಗಳ ವಿವಾದದಲ್ಲಿಯೆ ನಿಮ್ಮ ಪ್ರಚಾರ ಕೊನೆಗೊಳ್ಳುವುದು. ಬೇರೆ ದಾರಿ ನಿಮಗಿಲ್ಲ. ಇದು ಜನಮರ್ದನ ಸರ್ಕಾರ ಎಂದು ಕಿಡಿಕಾರಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ವರುಣನ ಆರ್ಭಟಕ್ಕೆ ಬೆಂಗಳೂರಿನ ಸ್ಥಿತಿ ಅಧೋಗತಿ ತಲುಪಿದೆ. ಈ ನಡುವೆ `ಬೆಂಗಳೂರು ರಕ್ಷಿಸಬೇಕಾದ ಬೆಂಗಳೂರು ಸಚಿವರು ಕಾಣೆಯಾಗಿದ್ದಾರೆ’ ಎಂದು ಮಿಸ್ಸಿಂಗ್ ಮಿನಿಸ್ಟರ್ಸ್ ಹ್ಯಾಷ್‍ಟ್ಯಾಗ್‍ನಡಿ ಬಿಜೆಪಿ ಸಚಿವರು, ಸಂಸದರ ವಿರುದ್ಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ಮಿಂಗ್ ಮಾಡುತ್ತಿದ್ದರು. ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ. ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ ಎಂದು ವ್ಯಂಗ್ಯವಾಡಿದ್ದಾರೆ.
ಸಚಿವ @mla_sudhakar ಅವರು ಕೋವಿಡ್ ಕಾಲದಲ್ಲಿ ಸ್ವಿಮ್ಮಿಂಗ್ ಪೂಲ್‍ನಲ್ಲಿ ಸ್ವಿಮ್ಮಿಂಗ್ ಮಾಡ್ತಿದ್ರು.
ಈಗ ಬೆಂಗಳೂರು ಸ್ವಿಮ್ಮಿಂಗ್ ಪೂಲ್ ಆಗಿದೆ, ಜನತೆ ಸ್ವಿಮ್ಮಿಂಗ್ ಮಾಡುವ ಸ್ಥಿತಿ ಇದೆ, ಸಚಿವರು ನಾಪತ್ತೆಯಾಗಿದ್ದಾರೆ.
ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ. ಸ್ವಕ್ಷೇತ್ರದಲ್ಲಿ ಠಿಕಾಣಿ ಹೂಡಿದ ಆರಗ ಜ್ಞಾನೇಂದ್ರ ಅವರು ಗೃಹಸಚಿವರಾಗಿ ಕೆಲಸ ಮಾಡಲು ಆರಂಭಿಸುವುದು ಯಾವಾಗ ಎಂದು ಪ್ರಶ್ನಿಸಿದ್ದಾರೆ.
ಕಳೆದ ಒಂದು ವಾರದಿಂದ ಮಳೆಯಲ್ಲಿ ಜನತೆ ಮುಳುಗಲು ಶುರುವಾದಾಗಿನಿಂದ ರಾಜ್ಯದ ಗೃಹಸಚಿವರು ನೆರೆ ಪೀಡಿತ ಪ್ರದೇಶದಲ್ಲಾಗಲಿ, ಬೆಂಗಳೂರಿನಲ್ಲಾಗಲಿ, ವಿಧಾನಸೌಧದಲ್ಲಾಗಲಿ ಕಾಣಿಸಲಿಲ್ಲ.
ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ ಆರ್. ಅಶೋಕ್ ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ. ಜನರಿಗೆ ಕಷ್ಟದ ಸಮಯವೆಂದರೆ ಬಿಜೆಪಿಗೆ ವಿಶ್ರಾಂತಿಯ ಸಮಯ, ಮಳೆ ಮುಗಿದ ನಂತರ ಹಿಜಾಬ್, ಹಲಾಲ್‍ಗಳಿಗೆ ಕ್ರಿಯಾಶೀಲರಾಗುತ್ತಾರೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಮಹಾ ಮಳೆಗೆ ವ್ಯಂಗ್ಯ – #LeaveBengaluru ಅಭಿಯಾನ ಆರಂಭಿಸಿದ ಕನ್ನಡಿಗರು
ಬೆಂಗಳೂರಿನ ಜನರು ಕೊಟ್ಟ ಅಧಿಕಾರವನ್ನು ಅನುಭವಿಸುತ್ತಿರುವ @RAshokaBJP ಅವರು ಯಾವ ಬಡಾವಣೆ, ಗಲ್ಲಿಗಳಲ್ಲೂ ಕಾಣಿಸಿಕೊಳ್ಳಲಿಲ್ಲ, ಜನತೆಯ ನೆರವಿಗೆ ನಿಂತಿದ್ದು ಕಾಣಲಿಲ್ಲ.
ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ? ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ ‘ನಾನೇ ಸಿಎಂ’ ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ. “ಗಂಡಸ್ಥನವನ್ನು ಕೆಲಸದಲ್ಲಿ ತೋರಿಸಿ” ಎಂದವರೇ ಕೆಲಸ ಮಾಡದಿದ್ದರೆ ಏನೆಂದು ಕರೆಯಬೇಕು ಡಾ. ಅಶ್ವಥ್‍ನಾರಾಯಣ್ ಅವರೇ ಎಂದು ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಜನತೆಯ ಮತಬಿಕ್ಷೆ ಪಡೆದು ಜನತೆಗೇ ದ್ರೋಹವೆಸಗುವುದು ಸರಿಯೇ ಸಚಿವರೇ?
ಬೆಂಗಳೂರಿನ ಜನತೆ ಮಳೆಯಿಂದ ಕಂಗೆಟ್ಟಿರುವಾಗ 'ನಾನೇ ಸಿಎಂ' ಎನ್ನುವ ಸಚಿವರು ನಾಪತ್ತೆಯಾಗಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ. ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ. ಕೆಲಸಕ್ಕೆ ಕರೆಯಬೇಡಿ, ದೋಸೆ ತಿನ್ನೋಕೆ ಕರೆಯೋದು ಮರೆಯಬೇಡಿ ಎಂಬುದು ಇವರ ಮನವಿ ಎಂದು ಕಾಲೆಳೆದಿದ್ದಾರೆ.
ಸಂಸದ @Tejasvi_Surya ಅವರನ್ನು ಸಂಸದರನ್ನಾಗಿಸಿದ್ದು, ಆಡುವ ಮಕ್ಕಳನ್ನು ಶಾಲೆಗೆ ಸೇರಿಸಿದಂತಾಗಿದೆ!
ಹಿಂದೆ ಕೋವಿಡ್ ಕಾಲದಲ್ಲಿ ಫುಟ್ಬಾಲ್ ಆಡಲು ಹೋಗಿದ್ದರು, ಅತಿವೃಷ್ಟಿಯ ಕಾಲದಲ್ಲಿ ದೋಸೆ ತಿನ್ನಲು ಹೋಗಿದ್ದಾರೆ.
ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ ಎಸ್.ಟಿ. ಸೋಮಶೇಖರ್ ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ. ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ. ಸಚಿವರೇ ಜನರತ್ತ ನೋಡುವುದು ಯಾವಾಗ ಎಂದಿದ್ದಾರೆ.
ಬೆಂಗಳೂರನ್ನು ಪ್ರತಿನಿಧಿಸುವ ಮತ್ತೊಬ್ಬ ಸಚಿವ @STSomashekarMLA ಮಳೆ ಅವಾಂತರದಿಂದ ನಲುಗಿದ ಯಾವುದೇ ಏರಿಯಾಗಳಲ್ಲಿ ಇದುವರೆಗೂ ಕಾಣಿಸಿಕೊಂಡಿಲ್ಲ. ಜನತೆ ಹುಡುಕುತ್ತಿದ್ದಾರೆ.
ಜನರ ಮನೆಯಲ್ಲಿ ಮಳೆ ನೀರು ನುಗ್ಗಿದರೆ, ಇವರ ಮನದಲ್ಲಿ ಸನ್ಮಾನದ ಆಸೆ ನುಗ್ಗಿದೆ!
ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ ವಿ. ಸೋಮಣ್ಣ ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ? ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ? ಜನರಿಗೆ ಕಷ್ಟ ಬಂದಾಗ ಬಿಜೆಪಿಗರಿಗೆ ವಿಶ್ರಾಂತಿಯ ಸಮಯವೇ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸೋತಿದ್ದಕ್ಕೆ ಕ್ರೀಡಾಂಗಣದಲ್ಲಿ ಅಫ್ಘಾನ್ ಅಭಿಮಾನಿಗಳ ಹುಚ್ಚಾಟ – ಚಯರ್‌ನಲ್ಲೇ ಪಾಕಿಗಳ ಮೇಲೆ ಹಲ್ಲೆ
ಬೆಂಗಳೂರಲ್ಲೇ ಬೆಳೆದು, ಬೆಂಗಳೂರಲ್ಲೇ ಅಧಿಕಾರ, ಆಸ್ತಿ, ಅಂತಸ್ತು ಕಂಡುಕೊಂಡ ಸಚಿವ @VSOMANNA_BJP ಅವರು ಬೆಂಗಳೂರನ್ನೇ ಕಡೆಗಣಿಸಿದರೆ ಹೇಗೆ?
ಬೆಂಗಳೂರು ಉಸ್ತುವಾರಿಗಾಗಿ ಹಂಬಲಿಸುವ ಇವರ ಮನ ಜನರ ಕಷ್ಟಕ್ಕೆ ಮಿಡಿಯದಿರುವುದೇಕೆ?
ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ ಗೋಪಾಲಯ್ಯ.ಕೆ ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ. ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಾಪತ್ತೆಯಾಗಿದ್ದೆಲ್ಲಿ? ಸಿಎಂ ಸಚಿವರೆಲ್ಲರನ್ನೂ ‘ಮಳೆಯಲಿ, ಚಳಿಯಲ್ಲಿ, ಬೆಚ್ಚಗೆ ಮಲಗಲಿ’ ಎಂಬಂತೆ ಬಿಟ್ಟಿದ್ದಾರೆಯೇ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನ ಜನರ ಋಣ ಹೊತ್ತಿರುವ ಸಚಿವರಾದ @GopalaiahK ಇದುವರೆಗೂ ಯಾವುದೇ ನೆರೆ ಸಂತ್ರಸ್ತ ಜನರ ಬಳಿ ಹೋಗಿದ್ದು ಎಲ್ಲೂ ಕಾಣಲಿಲ್ಲ.
ಪರಿಹಾರ ಕಾರ್ಯಗಳನ್ನು ನಡೆಸಬೇಕಾದವರು ನಪತ್ತೆಯಾಗಿದ್ದೆಲ್ಲಿ?
ಒಂದೇ ಒಂದು ಬಾರಿ ಸಿಎಂ ಜೊತೆಯಲ್ಲಿ ನೆಪಮಾತ್ರದ ಸಿಟಿ ರೌಂಡ್ಸ್ ಹೊಡೆದಿದ್ದು ಬಿಟ್ಟರೆ ಬೆಂಗಳೂರಿನ ಸಚಿವರಾದ ಭೈರತಿ ಬಸರಾಜ ಅವರು ಮತ್ತೆ ಎಲ್ಲಿಯೂ ಕಾಣಿಸಿಕೊಳಲಿಲ್ಲ. ನೀರು ನುಗ್ಗಿದ ಮನೆಗಳಿಗೆ ಪರಿಹಾರವೇನು? ನೀರು ನಿಂತ ರಸ್ತೆಗಳಿಗೆ ಮುಕ್ತಿ ಏನು? ಸಚಿವರು ಜನರ ಕಷ್ಟ ಆಲಿಸಲು ಹೋಗದಿರುವುದೇಕೆ ಎಂದು ಹರಿಹಾಯ್ದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಠ ಜಾತಿ, ಪಂಗಡದ ಹಾಸ್ಟೆಲ್‍ಗಳಲ್ಲಿ ದಿಂಬು, ಚೆಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರವನ್ನು ಸ್ವಲ್ಪ ನೆನಪಿಸಿಕೊಳ್ಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯಗೆ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದರು.
ಇಂಧನ ಇಲಾಖೆ ಯೋಜನೆಗಳ ಸಂಬಂಧ ಸಿದ್ದರಾಮಯ್ಯರಿಂದ ಟ್ವೀಟ್ ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಅವರೇ, ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ ನೀವು ಸಮಾಜವನ್ನು ಕೊಂಡೊಯ್ಯುವುದು ಯಾವಾಗ?, ಪರಿಶಿಷ್ಠ ಜಾತಿ ಹಾಗೂ ಪಂಗಡದ ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್ ವಿದ್ಯುತ್ ನೀಡುವ ಆದೇಶವನ್ನು ವಾಪಸ್ ಪಡೆಯಲಾಗಿದೆ ಎಂದು ಸುಳ್ಳು ಪ್ರಚಾರ ಮಾಡಿ ನೀವು ಸಾಧಿಸುವ ಸಾಮಾಜಿಕ ನ್ಯಾಯವಾದರೂ ಏನು ಎಂದು ಪ್ರಶ್ನಿಸಿದರು.
ಹಿಂದಿನ ಆದೇಶ ವಾಪಸ್ ಪಡೆಯುವುದಕ್ಕೂ, ಘೋಷಿತ ಯೋಜನೆ ಸ್ಥಗಿತಗೊಳಿಸುವುದಕ್ಕೂ ಇರುವ ಆಡಳಿತಾತ್ಮಕ ವ್ಯತ್ಯಾಸವೂ ಗೊತ್ತಿಲ್ಲದಷ್ಟು ಅಜ್ಞಾನ ನಿಮ್ಮನ್ನು ಕಾಡುತ್ತಿದೆಯೇ?, ನಿಮ್ಮ ಪಕ್ಷದ ಸಾಮಾಜಿಕ ಜಾಲತಾಣದ ಕೆಲ “ಪೆದ್ದರು” ಕೊಟ್ಟ ದಾಖಲೆಯನ್ನೇ ಆಧಾರವಾಗಿಟ್ಟುಕೊಂಡು ಜನರನ್ನು ಹಾದಿ ತಪ್ಪಿಸಲು ಹೊರಟಿದ್ದೀರಿ ಎಂದು ಕಿಡಿಕಾರಿದರು. ಇದನ್ನೂ ಓದಿ: 2024ರಲ್ಲಿ ಬಿಜೆಪಿಯೇತರ ಸರ್ಕಾರ ಬಂದ್ರೆ ರೈತರಿಗೆ ಉಚಿತ ವಿದ್ಯುತ್ – ಕೆಸಿಆರ್ ಭರವಸೆ
ಇರಲಿ ಪರವಾಗಿಲ್ಲ, ಆದರೆ ನಿಮ್ಮ ಸರ್ಕಾರದ ಅವಧಿಯಲ್ಲಿ ಪರಿಶಿಷ್ಠ ಜಾತಿ, ಪಂಗಡದ ಹಾಸ್ಟೆಲ್ ಗಳಲ್ಲಿ ದಿಂಬು, ಚೆಂಬು ಖರೀದಿಯಲ್ಲೂ ನಡೆದ ಭ್ರಷ್ಟಾಚಾರವನ್ನು ಸ್ವಲ್ಪ ನೆನಪಿಸಿಕೊಳ್ಳಿ. ಆಗ ನಿಮ್ಮ ಜೇಬಿಗೆ ಸೇರಿದ ಕಮಿಷನ್ ಎಷ್ಟು ಪರ್ಸೆಂಟ್? ಎಂದು ವಿವರಿಸಬಹುದೇ ಎಂದು ಸಿದ್ದರಾಮಯ್ಯ ಅವರನ್ನು ಸುನಿಲ್ ಕುಮಾರ್ ಪ್ರಶ್ನಿಸಿದರು.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ಶಾಸಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸರಣಿ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಇಂದು ಮಂಗಳೂರಿಗೆ ಬರುತ್ತಿರುವ ಮೋದಿಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ. ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು. ಮೋದಿಯವರೇ ಇಂದಾದರೂ ಹೇಳಿದ್ದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ ಎಂದು ವ್ಯಂಗ್ಯವಾಡಿದ್ದಾರೆ.
1 ಇಂದು ಮಂಗಳೂರಿಗೆ ಬರುತ್ತಿರುವ #Modi ಯವರಿಗೆ ಸ್ವಾಗತ. ಯಥಾಪ್ರಕಾರ ಇಂದೂ ಕೂಡ ಮೋದಿಯವರ ಬುರುಡೆ ಭಾಷಣ ಚರ್ವಿತ ಚರ್ವಣದಂತೆ ರಿಪೀಟ್ ಆಗಲಿದೆ.
ಆದರೂ ಮೋದಿಯವರ ಬುರುಡೆ ಭಾಷಣ ಕೇಳುವ ಅನಿವಾರ್ಯ ಕರ್ಮ ಕನ್ನಡಿಗರದ್ದು.
ಮೋದಿಯವರೆ ಇಂದಾದರೂ ಹೇಳಿದನ್ನೇ ಹೇಳುವ ಕಿಸಬಾಯಿ ದಾಸ ಎಂಬಂತೆ ಸುಳ್ಳು ಭಾಷಣ ಬಿಟ್ಟು ಸತ್ಯ ಮಾತನಾಡುತ್ತೀರಾ?
ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯ ಬಿಜೆಪಿ ಸರ್ಕಾರದ 40% ಕಮಿಷನ್ ದಂಧೆ, ಪಿಎಸ್‍ಐ ಹಗರಣ, ಕೆಪಿಟಿಸಿಎಲ್ ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೇ ವಚನ ವಂಚನೆಯ ಬಗ್ಗೆ ಮಾತಾಡುವಿರಾ? ನಿಮ್ಮ ಪಾರದರ್ಶಕತೆಗೆ ಸವಾಲು ಇದು ಎಂದಿದ್ದಾರೆ.
2 ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ @BJP4Karnataka ಸರ್ಕಾರದ 40% ಕಮೀಷನ್ ದಂಧೆ, PSI ಹಗರಣ, KPTCL ನೇಮಕಾತಿ ಹಗರಣ, ಉಪನ್ಯಾಸಕರ ನೇಮಕಾತಿ ಹಗರಣ, ಜ್ಯೂ.ಇಂಜಿನಿಯರ್ ನೇಮಕಾತಿ ಹಗರಣ ಹಾಗೂ ನಿಮ್ಮ ಪಕ್ಷ 2018ರ ಪ್ರಣಾಳಿಕೆಯಲ್ಲಿ 600 ವಚನ ಕೊಟ್ಟು ಒಂದನ್ನೂ ಈಡೇರಿಸದೆ ವಂಚನೆಯ ಬಗ್ಗೆ ಮಾತಾಡುವಿರಾ? ನಿಮ್ಮ ಪಾರದರ್ಶಕತೆಗೆ ಸವಾಲು ಇದು.
ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ ಜಿಎಸ್‍ಟಿ ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುದಾನ ರಾಜ್ಯಕ್ಕೆ ಕೊಡದಿರುವುದು ಯಾಕೆ? 2014ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ? ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಜ್ರಕುಮಾರ್ ಇನ್ನಿಲ್ಲ
3#Modi ಯವರೆ, ಇಂದಿನ ನಿಮ್ಮ ಭಾಷಣದಲ್ಲಿ ರಾಜ್ಯಕ್ಕೆ ಕೇಂದ್ರದಿಂದ #GST ಬಾಕಿ ಯಾಕೆ ಕೊಟ್ಟಿಲ್ಲ, 15ನೇ ಹಣಕಾಸು ಆಯೋಗ ನೀಡಿದ್ದ ವಿಶೇಷ ಅನುಧಾನ ರಾಜ್ಯಕ್ಕೆ ಕೊಡದಿರುವುದು ಯಾಕೆ?
2014 ರಲ್ಲಿ 52 ಲಕ್ಷ ಕೋಟಿ ಇದ್ದ ದೇಶದ ಸಾಲ ನಿಮ್ಮ ಅಧಿಕಾರಾವಧಿಯಲ್ಲಿ 1.42 ಲಕ್ಷ ಕೋಟಿ ಏರಿಕೆಯಾಗಿದ್ದು ಯಾಕೆ ಎಂಬ ಬಗ್ಗೆ ದಯವಿಟ್ಟು ಮಾತನಾಡುವಿರಾ?
ಮೋದಿಯವರೇ, ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ? 80 ರೂ. ಇದ್ದ ಅಡುಗೆ ಎಣ್ಣೆ 180 ರೂ. ಗಡಿ ದಾಟಿದ್ದು ಯಾಕೆ? 400 ರೂ. ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ? 30 ರೂ. ಇದ್ದ ಸಾಬೂನು 60 ರೂ. ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸ್ತಮೈಥುನ ಮಾಡಿಕೊಳ್ಳುವುದು ಲೈಂಗಿಕ ಉದ್ದೇಶವನ್ನು ಸೂಚಿಸುತ್ತದೆ: ಮುಂಬೈ ಕೋರ್ಟ್
4 ಮೋದಿಯವರೆ,ಇಂದಿನ ನಿಮ್ಮ ಭಾಷಣದಲ್ಲಿ ತೈಲಬೆಲೆ ಯದ್ವಾತದ್ವಾ ಏರಿಕೆಯಾಗಿದ್ದು ಯಾಕೆ? ₹80 ಇದ್ದ ಅಡುಗೆ ಎಣ್ಣೆ ₹180 ರ ಗಡಿ ದಾಟಿದ್ದು ಯಾಕೆ? ₹400 ರೂ ಇದ್ದ ಸಿಲಿಂಡರ್ ಬೆಲೆ ಸಾವಿರ ತಲುಪಿದ್ದು ಹೇಗೆ? ₹30 ಇದ್ದ ಸಾಬೂನು ₹60 ಆಗಿದ್ದು ಹೇಗೆ? ತಿನ್ನುವ ಅನ್ನಕ್ಕೂ ನಿಮ್ಮ ಸರ್ಕಾರ GST ಹಾಕಿ ದೋಚುತ್ತಿರುವ ಬಗ್ಗೆ ಮಾತನಾಡುವಿರಾ?
ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ ಪಿಎಂ ಕೇರ್ಸ್ ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು? ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು? ಬಿಜೆಪಿಯವರ ಮೇಲೆ ಇಡಿ, ಐಟಿ & ಸಿಬಿಐ ದಾಳಿ ನಡೆಯದ ರಹಸ್ಯವೇನು? ರೈತರ ಸಾಲ ಮನ್ನಾ ಮಾಡದೇ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ ಎಂದಿದ್ದಾರೆ.
5 ಮೋದಿಯವರೆ, ಇಂದಿನ ನಿಮ್ಮ ಭಾಷಣದಲ್ಲಿ #PMCares ಹೆಸರಲ್ಲಿ ಸಂಗ್ರಹಿಸಿದ ಸಾವಿರಾರು ಕೋಟಿ ಹಣ ಎಲ್ಲಿ ಹೋಯಿತು?
ಆಪರೇಷನ್ ಕಮಲಕ್ಕೆ ಬಳಕೆಯಾಗುವ ದುಡ್ಡಿನ ಮೂಲ ಯಾವುದು?#BJP ಯವರ ಮೇಲೆ ED,IT & CBI ದಾಳಿ ನಡೆಯದ ರಹಸ್ಯವೇನು?
ರೈತರ ಸಾಲ ಮನ್ನಾ ಮಾಡದೆ ಕಾರ್ಪೋರೆಟ್ ಕುಳಗಳ ಲಕ್ಷ ಲಕ್ಷ ಕೋಟಿ ತೆರಿಗೆ ಮನ್ನಾ ಮಾಡಿದ ಬಗ್ಗೆ ಮಾತನಾಡುವಿರಾ?
ಡಿಸ್ಪೂರ್: ರೈಲಿನಲ್ಲಿ ಬರುವ ಪಾರ್ಸೆಲ್‍ಗಳನ್ನು ಕೆಲಸಗಾರರು ಬೀಸಾಡುವ ವೀಡಿಯೋವೊಂದು ಇತ್ತೀಚೆಗಷ್ಟೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೀಗ ಈ ವೀಡಿಯೋ ಕುರಿತಂತೆ ಈಶಾನ್ಯ ಫ್ರಾಂಟಿಯರ್ ರೈಲ್ವೆ ಸ್ಪಷ್ಟನೆ ನೀಡಿದೆ.
ಹೌದು, ಗುವಾಹಟಿ ನಿಲ್ದಾಣದಲ್ಲಿ ರೈಲ್ವೆ ನಿಲ್ದಾಣಕ್ಕೆ ರೈಲಿನಲ್ಲಿ ಬಂದ ರಾಶಿಗಟ್ಟಲೆ ಪಾರ್ಸೆಲ್‍ಗಳನ್ನು ಕೆಳಗಿಳಿಸುವಾಗ ಕೆಲಸಗಾರರು ಬೇಜವಾಬ್ದಾರಿಯಿಂದ ಇಷ್ಟಬಂದಂತೆ ಬೀಸಾಡಿದ್ದರು. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಟ್ವೀಟ್ ಮಾಡುವ ಮೂಲಕ ರೈಲ್ವೆ ಇಲಾಖೆ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಈ ವೀಡಿಯೋ 2 ಮಿಲಿಯನ್‍ಗಿಂತಲೂ ಹೆಚ್ಚು ವೀವ್ಸ್ ಪಡೆದುಕೊಂಡಿತ್ತು.
See how well railways treat your parcels.
It is at Guwahati Railway Station.
Time is 2030 hrs on 24th Mar 22 and the train is New Delhi Dibrugarh Rajdhani Express(12424).
ರೈಲಿನಲ್ಲಿ ಬರುವ ನಿಮ್ಮ ಪಾರ್ಸೆಲ್‍ಗಳನ್ನು ಎಷ್ಟು ಚೆನ್ನಾಗಿ ಪರಿಗಣಿಸುತ್ತಾರೆ ಎಂಬುವುದನ್ನು ನೋಡಿ. ಈ ವೀಡಿಯೋ ಮಾರ್ಚ್ 22ರ ಗುವಾಹಟಿ ರೈಲ್ವೆ ನಿಲ್ದಾಣದ್ದಾಗಿದೆ. ನವದೆಹಲಿ ದಿಬ್ರುಗಢ ರಾಜಧಾನಿ ಎಕ್ಸ್‍ಪ್ರೆಸ್ (12424) ರೈಲಿನಲ್ಲಿ ಬಂದ ಈ ಪಾರ್ಸೆಲ್‍ಗಳು ಅಮೆಜಾನ್, ಫ್ಲಿಪ್‍ಕಾರ್ಟ್ ಮುಂತಾದ ಎಲ್ಲಾ ಚಿಲ್ಲರೆ ವ್ಯಾಪಾರಿಗಳಿಂದ ಬಂದಿವೆ ಎಂದು ವೀಡಿಯೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ: ಕೇಂದ್ರ ಸಚಿವರ ಮನೆಯಲ್ಲಿ ಗಣೇಶನಿಗೆ ಆರತಿ ಮಾಡಿದ ಮೋದಿ
This is an old video from March, 2022. Rajdhani Express at Guwahati Station. The persons handling parcels are representatives of concerned party.
Railways offers booking of parcel space on contract basis to various parties. 1/2 https://t.co/1VES8n3yBR
ಈ ವೀಡಿಯೋಗೆ ಅನೇಕ ಮಂದಿ ಕಾಮೆಂಟ್ ಮಾಡಿದ್ದರು. ಭಾರತೀಯ ರೈಲ್ವೆಗೆ ನಾಚಿಕೆಯಾಗಬೇಕು. ಇವರನ್ನೆಲ್ಲಾ ಗುರುತಿಸಿ ಶಿಕ್ಷೆ ನೀಡಬೇಕು. ಇದರಿಂದಾಗಿ ಅನೇಕ ಬಾರಿ ಗ್ರಾಹಕರು ಮುರಿದು ಹೋಗಿರುವ ವಸ್ತುಗಳನ್ನು ಪಡೆದು, ತೊಂದರೆ ಪಡುತ್ತಾರೆ ಎಂದು ಕಿಡಿಕಾರಿದ್ದರು.
As per guidelines issued in Freight Marketing Circular No. 05 of 2022 dated: 22 Feb, 2022.
It is the sole responsibility of the party to load/unload their parcels from SLR/parcel vans at destination or intermediate station(s). 2/2
ಇದೀಗ ಈ ವೀಡಿಯೋಗೆ ಸ್ಪಷ್ಟನೆ ನೀಡಿರುವ ಈಶಾನ್ಯ ಫ್ರಾಂಟಿಯರ್ ರೈಲ್ವೆ, ಇದೊಂದು ಹಳೆಯ ವೀಡಿಯೋ. ಪಾರ್ಸೆಲ್‍ಗಳನ್ನು ಕೆಳಗಿಳಿಸುತ್ತಿರುವವರು ರೈಲ್ವೆ ಉದ್ಯೋಗಿಗಳಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜನಮನ ಸೆಳೆಯುತ್ತಿದೆ 60 ಸಾವಿರ ಗೋಲಿಗಳಿಂದ ಮಾಡಿದ ಗಣೇಶ ಮೂರ್ತಿ!
ಇದು ಮಾರ್ಚ್ 2022ರ ಹಳೆಯ ವೀಡಿಯೋ ಆಗಿದ್ದು, ಗುವಾಹಟಿ ನಿಲ್ದಾಣದಲ್ಲಿ ರಾಜಧಾನಿ ಎಕ್ಸ್‍ಪ್ರೆಸ್‍ನಲ್ಲಿ ಬಂದ ಪಾರ್ಸೆಲ್‍ಗಳನ್ನು ಕೆಳಗಿಳಿಸುತ್ತಿರುವ ವ್ಯಕ್ತಿಗಳು ವಸ್ತುಗಳಿಗೆ ಸಂಬಂಧಪಟ್ಟವರಾಗಿದ್ದಾರೆ. ರೈಲ್ವೆಯು ವಿವಿಧ ಪಾರ್ಟಿಗಳಿಗೆ ಗುತ್ತಿಗೆ ಆಧಾರದ ಮೇಲೆ ಪಾರ್ಸೆಲ್ ಜಾಗವನ್ನು ಬುಕ್ಕಿಂಗ್ ನೀಡುತ್ತದೆ ಎಂದು ಈಶಾನ್ಯ ಫ್ರಾಂಟಿಯರ್ ರೈಲ್ವೆಯ ಟ್ವೀಟ್ ಮಾಡಿದೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಪ್ರಧಾನಿ ನರೆಂದ್ರ ಮೋದಿ ಅವರು ಕರ್ನಾಟಕಕ್ಕೆ ಬರುವ ಹಿನ್ನೆಲೆ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಅವರು ಬೆಂಗಳೂರಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡು, ದಯವಿಟ್ಟು ಬೆಂಗಳೂರನ್ನು ಕಾಪಾಡಿ ಎಂದು ಮೋದಿಗೆ ಟ್ವೀಟ್ ಮಾಡಿದ್ದಾರೆ.
ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಆಗಮಿಸಲಿದ್ದು, ಈ ಹಿನ್ನೆಲೆ ಉದ್ಯಮಿ ಬೆಂಗಳೂರಿನ ಬಗ್ಗೆ ದೂರಿನ ಸರಮಾಲೆಯೇ ಮುಂದಿಟ್ಟಿದ್ದಾರೆ. ಮಳೆಗೆ ಕೆರೆಯಂತಾದ ಬೆಂಗಳೂರು. ಅತಿ ಹೆಚ್ಚು ಐಟಿಬಿಟಿ ಕಂಪನಿಗಳು ಇರುವ ಬೆಳ್ಳಂದೂರು, ಮಾರತ್ತಹಳ್ಳಿ, ಔಟರ್ ರಿಂಗ್ ರೋಡ್‌ನಲ್ಲಿ 2 ದಿನವಾದರೂ ಮಳೆ ನೀರು ತಗ್ಗಿಲ್ಲ. ಐಟಿಬಿಟಿಯಲ್ಲಿ ಕೃತಕ ನದಿಗಳು ಸೃಷ್ಟಿಯಾಗಿವೆ. ರಸ್ತೆಗಳು ಕಿತ್ತುಹೋಗಿದ್ದು, ರಾಜಕಾಲುವೆಯ ಹೂಳೆತ್ತದೇ ಬಿಬಿಎಂಪಿ ನಿರ್ಲಕ್ಷ್ಯವಹಿಸಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ವೀರ್ ಸಾವರ್ಕರ್ ಹವಾ
ಬೆಂಗಳೂರಿನ ಬಗ್ಗೆ ದಯವಿಟ್ಟು ಗಮನಹರಿಸಿ ಪ್ರಧಾನಿಗಳೇ ಎಂದು ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಮೋದಿಗೆ ಟ್ವೀಟ್ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯ ಅವರ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು ಅವರು, ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ ಎಂದು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಬಾಡಿಗೆ ಮನೆಯಲ್ಲಿ ಸುರಂಗ ನೋಡಿ ದಂಗಾದ ಮಾಲೀಕ – ಮಾದಕ ವಸ್ತು, ಮಾರಕಾಸ್ತ್ರ ಪತ್ತೆ
ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? 2/16
ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ? ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ ಎಂದಿದ್ದಾರೆ.
ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ? 3/16
ಯಾರೋ ಕಟ್ಟಿದ ಹುತ್ತಕ್ಕೆ ಕರಿ ನಾಗನಂತೆ ಸೇರಿಕೊಂಡ ನೀವು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಅಲ್ಪಸಂಖ್ಯಾತ ಸಮುದಾಯದ ಜಾಫರ್ ಷರೀಪ್, ಸೇರಿದಂತೆ ಹಲವರನ್ನು ಮುಗಿಸಿಯೇ ಮೇಲಕ್ಕೆ ಬಂದ ನಿಮ್ಮದು ಯಾವ ಸೀಮೆಯ ಅಹಿಂದ? ಬಿಡಿಸಿ ಹೇಳುತ್ತೀರಾ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಅನ್ನಭಾಗ್ಯ ಯೋಜನೆ ನಿಲ್ಲಿಸಲ್ಲ: ಉಮೆಶ್ ಕತ್ತಿ
ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ? 5/16
ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ‘ಬ್ರೂಟಸ್ ಮನಃಸ್ಥಿತಿ’, ಸಂದರ್ಭಕ್ಕೆ ತಕ್ಕಂತೆ ಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿ. ಅಧಿಕಾರ ಕೊಟ್ಟ ಪಕ್ಷಕ್ಕೆ ಬ್ಲಾಕ್ ಮೇಲ್ ಮಾಡುವ ಸ್ವಯಂಘೋಷಿತ ಮಹಾನಾಯರು ನೀವಲ್ಲವೇ? ಹೆಸರಿನಲ್ಲಿ ‘ರಾಮ’! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ ಎಂದು ಕಿಡಿಕಾರಿದ್ದಾರೆ.
ಹೆಸರಿನಲ್ಲಿ ʼರಾಮʼ! ಉಂಡ ಮನೆಗೆ ಪಂಗನಾಮ! ಸ್ವಯಂ ಘೋಷಿತ ಸತ್ಯಹರಿಶ್ಚಂದ್ರ ಎಷ್ಟೇ ಆದರೂ, ಸತ್ಯ ನಿಮಗೆ ಅಪಥ್ಯ ಅಲ್ಲವೇ? ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗುವುದಿಲ್ಲ ಎಂಬ ಹುಂಬುತನವೇ? ಸುಳ್ಳೇ ನಿಮ್ಮ ರಾಜಕೀಯ ಅಸ್ತಿತ್ವದ ಪ್ರತೀಕ. ಸುಳ್ಳು ಸುಳ್ಳೇ ನಿಮ್ಮ ನರಿಬುದ್ಧಿ ಅವಕಾಶವಾದಿ ರಾಜಕಾರಣ ನಿಜಸ್ವರೂಪ. 7/16
ದೇವರಾಜ್ ಅರಸ್ ನಂತರ ನಾನೇ ಅತ್ಯಂತ ಯಶಸ್ವಿ ಮುಖ್ಯಮಂತ್ರಿ ಎಂದು ಹಿಂಬಾಲಕರಿಂದ ಜೈಕಾರ ಹಾಕಿಸಿಕೊಳ್ಳುವ ಬುರಡೆರಾಮಯ್ಯವರೇ, 5 ವರ್ಷದ ಅವಧಿಯಲ್ಲಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನಿಮ್ಮಷ್ಟು ಚೂರಿ ಹಾಕಿದ ಸಿ.ಎಂ. ಮತ್ತೊಬ್ಬರಿಲ್ಲ ಎಂಬುದನ್ನು ಬಿಡಿಸಿ ಹೇಳಬೇಕೇ? ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ ಎಂದು ಹರಿಹಾಯ್ದಿದ್ದಾರೆ.
ನೀವು ಆಡಳಿತದಲ್ಲಿ ಇದ್ದಾಗ ಈ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದರೆ ಇಂದು ನಮ್ಮ ಸರ್ಕಾರದ ಬಗ್ಗೆ ಮಾತನಾಡುವ ಪ್ರಮೇಯವೇ ಬರುತ್ತಿರಲಿಲ್ಲ. ಜನರ ಕಣ್ಣಿಗೆ ಮಂಕುಬೂದಿ ಎರಚುವ ಕಲೆ ನಿಮಗಲ್ಲದೆ ಬೇರೆಯವರಗೆ ಹೇಗೆ ಬರಲು ಸಾಧ್ಯ? 9/16
ನಿಮ್ಮ ಅಧಿಕಾರದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ 160 ಕೋಟಿ ಖರ್ಚು ಮಾಡಿ ನಡೆಸಿದ್ದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಪೂರ್ಣಗೊಂಡಿದ್ದರೂ ಅದನ್ನು ಬಹಿರಂಗಗೊಳಿಸದೇ ಕಸದ ಬುಟ್ಟಿಗೆ ಹಾಕಿದ್ದು ಯಾವ ವಚನಭ್ರಷ್ಟತೆ? ಉತ್ತರ ಕೊಡುತ್ತೀರಾ ಸಿದ್ದರಾಮಯ್ಯನವರೇ. ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ, ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ ಎಂದಿದ್ದಾರೆ.
ವರದಿ ಬಿಡುಗಡೆ ಮಾಡದಂತೆ ನಿಮ್ಮ ಸಂಪುಟದ ಸಹೋದ್ಯೋಗಿಗಳೇ ಒತ್ತಡ ಹಾಕಿ ಕಾಂತರಾಜು ಅವರ ವರದಿಯನ್ನು ಶೈತ್ಯಗಾರಕ್ಕೆ ಹಾಕಿದ್ದು ವಚನಭ್ರಷ್ಟತೆ ಅಲ್ಲದೆ ಮತ್ತೇನು? ಇದನ್ನು ಮಾಧ್ಯಮಗಳಲ್ಲಿ ವ್ಯವಸ್ಥಿತ ಸೋರಿಕೆ ಮಾಡಿ, ಕೊನೆಗೆ ನಮಗೆಯೇ ತಿರುಗಬಾಣವಾದೀತು ಎಂದು ಮುಚ್ಚಿಹಾಕಿದ ಪ್ರಖರ ಪಂಡಿತರು ನೀವಲ್ಲವೇ? 11/16
ಈಗಲೂ ನನ್ನ ಮಾತಿಗೆ ನಾನು ಬದ್ದವಾಗಿದ್ದೇನೆ. ನನ್ನ ಸಮುದಾಯಕ್ಕೆ ಮೀಸಲಾತಿ ಪ್ರಮಾಣವನ್ನು ಶೇ. 3 ರಿಂದ 7.5ಕ್ಕೆ ಹೆಚ್ಚಿಸಲು ಸರ್ಕಾರದ ಮೇಲೆ ಎಲ್ಲಾ ರೀತಿಯ ಪ್ರಯತ್ನ ನಡೆಸಿದ್ದೇನೆ. ಅಧಿಕಾರಕ್ಕೀಂತ ಸಮುದಾಯದ ಹಿತ ಮುಖ್ಯ ಎಂಬುದು ನನಗೂ ಗೊತ್ತಿದೆ. ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ. ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಪಂಗಡದ ಜನಾಂಗದವರಿಗೆ ಮೀಸಲಾತಿ ಪ್ರಮಾಣವನ್ನು 3% ರಿಂದ 7.5% ಹೆಚ್ಚಿಸುವ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುಂತೆ ನಮ್ಮ ಜನಪ್ರಿಯ ಮುಖ್ಯಮಂತ್ರಿಗಳಾದ @BSBommai ಅವರಿಗೆ ಮನವಿ ಮಾಡಿಕೊಳ್ಳಲಾಗಿದೆ.ಅವರಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ. 13/16
ಮೀಸಲಾತಿ ಸಂಬಂಧ ನಾಗಮೋಹನ್ ದಾಸ್ ವರದಿ ನೀಡಿದ್ದಾರೆ. ಸುಭಾಷ್ ಆಡಿಯ ನೇತೃತ್ವದ ತ್ರಿಸದಸ್ಯ ಸಮಿತಿ ನೀಡಿರುವ ವರದಿ ಪರಿಶೀಲನಾ ಹಂತದಲ್ಲಿದೆ. ಅದಷ್ಟು ಶೀಘ್ರ ನಮ್ಮ ಸಮುದಾಯಕ್ಕೆ ಸಿಹಿ ಸುದ್ದಿಯನ್ನು ನಮ್ಮ ಸರ್ಕಾರವೇ ಕೊಡಲಿದೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ.! 15/16
ಈ ಬಗ್ಗೆ ಯಾರಿಗೂ ಸಂಶಯವೇ ಬೇಡ. ಮೀಸಲಾತಿ ಸಂಬಂಧ ನಾನು ಹೇಳಿರುವ ಮಾತಿನಿಂದ ಒಂದು ಇಂಚು ಹಿಂದೆ ಸರಿಯಲ್ಲ. ನಾನು ಅದಕ್ಕೆ ಬದ್ಧನಾಗಿದ್ದೇನೆ. ಇದು ಕಾನೂನಿನ ವಿಷಯವಾಗಿದ್ದು, ಸ್ವತಃ ವಕೀಲರಾಗಿರುವ ನಿಮಗೆ ಅರ್ಥವಾಗದಿರುವುದಕ್ಕೆ ನನಗೆ ವಿಷಾದವಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ? 16/16
ಚುನಾವಣೆ ಸಮೀಪಿಸುತ್ತಿರುವಾಗ ಇದನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳುತ್ತಿರುವುದು ನಿಮ್ಮ ರಾಜಕೀಯ ದಿವಾಳಿತನಕ್ಕೆ ಹಿಡಿದ ಕೈಗನ್ನಡಿ. ಕಡೆ ಪಕ್ಷ 5 ವರ್ಷ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಬಗ್ಗೆ ಒಂದು ಸಣ್ಣ ಆಲೋಚನೆ ನಿಮ್ಮ ತಲೆಯಲ್ಲಿ ಹೊಳೆದಿತ್ತೇ ಎಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಭಾರತ ತನ್ನ ಎದುರಾಳಿ ಪಾಕಿಸ್ತಾನ ವಿರುದ್ಧ ಅದ್ಭುತ ಪ್ರದರ್ಶನ ನೀಡಿದೆ. ಈ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾರತೀಯ ಆಟಗಾರರಿಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಮತ್ತೊಂದೆಡೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಅವರು, “ಹುರ್ರೇ! ನಾವು ಗೆದ್ದಿದ್ದೇವೆ. ಅದ್ಭುತವಾದಂತಹ ಪ್ರದರ್ಶನ ನೀಡಿ ಜಯಗಳಿಸಿದ ಟೀಂ ಇಂಡಿಯಾಗೆ ಅಭಿನಂದನೆಗಳು. ಚೆನ್ನಾಗಿ ಆಡಿದ್ದೀರಾ ಬ್ಲೂ ಬಾಯ್ಸ್. ಜೈ ಹಿಂದ್ ಎಂದು ಟ್ವೀಟ್ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]