Tag: ಟ್ವೀಟ್

  • ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ಶಿಂಜೋ ಅಬೆಗೆ ಗುಂಡೇಟು ಆಘಾತ ತಂದಿದೆ – ವಿಶ್ವ ನಾಯಕರ ಪ್ರತಿಕ್ರಿಯೆ

    ನವದೆಹಲಿ: ಜಪಾನ್‌ನ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾಷಣ ಮಾಡುತ್ತಿದ್ದ ಸಂದರ್ಭದಲ್ಲೇ ದುಷ್ಕರ್ಮಿಯೊಬ್ಬ ಎದೆಗೆ ಗುಂಡು ಹಾರಿಸಿದ್ದು, ಅಬೆಗೆ ತೀವ್ರ ರಕ್ತಸ್ರಾವವಾಗಿದೆ.

    ಈ ಆಘಾತಕಾರಿ ಘಟನೆಗೆ ವಿಶ್ವದ ನಾಯಕರು ಪ್ರತಿಕ್ರಿಯಿಸಿದ್ದಾರೆ. ಜಪಾನ್ ಮಾಜಿ ಪ್ರಧಾನಿಯ ಉಳಿವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ.

    ಘಟನೆ ಬಗ್ಗೆ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ, ನನ್ನ ಆತ್ಮೀಯ ಸ್ನೇಹಿತ ಅಬೆ ಶಿಂಜೋ ಮೇಲಿನ ದಾಳಿ ತೀವ್ರ ಆಘಾತ ತಂದಿದೆ. ನಮ್ಮ ಆಲೋಚನೆ ಹಾಗೂ ಪ್ರಾರ್ಥನೆಗಳು ಅವರೊಂದಿಗೆ, ಅವರ ಕುಟುಂಬ ಹಾಗೂ ಜಪಾನ್ ಜನರೊಂದಿಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆಗೆ ಗುಂಡೇಟು

    ಅಮೆರಿಕದ ರಾಯಭಾರಿ ರಹಮ್ ಇಮ್ಯಾನುಯೆಲ್, ಅಬೆ-ಸಾನ್ ಜಪಾನ್‌ನ ಅತ್ಯುತ್ತಮ ನಾಯಕ ಹಾಗೂ ಅಮೆರಿಕದ ಅಚಲ ಮಿತ್ರರಾಗಿದ್ದಾರೆ. ಅಮೆರಿಕ ಸರ್ಕಾರ ಹಾಗೂ ಅಮೆರಿಕದ ಜನರು ಅಬೆ-ಸಾನ್ ಅವರ ಕುಟುಂಬ ಹಾಗೂ ಜಪಾನ್‌ನ ಜನರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

    ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಟ್ವೀಟ್ ಮಾಡಿ, ಮಾಜಿ ಪ್ರಧಾನಿ ಶಿಂಜೊ ಅಬೆಗೆ ಗುಂಡು ಹಾರಿಸಲಾಗಿದೆ ಎಂದು ಜಪಾನ್‌ನಿಂದ ಬಂದ ಆಘಾತಕಾರಿ ಸುದ್ದಿ – ಈ ಸಮಯದಲ್ಲಿ ನಮ್ಮ ಆಲೋಚನೆಗಳು ಅವರ ಕುಟುಂಬ ಹಾಗೂ ಜಪಾನ್‌ನ ಜನರೊಂದಿಗೆ ಇದೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಬುಲೆಟ್ ಟ್ರೈನ್ ಯೋಜನೆ ಮುಖ್ಯಸ್ಥ ಸತೀಶ್ ಅಗ್ನಿಹೋತ್ರಿ ವಜಾ

    ತೈವಾನ್ ಅಧ್ಯಕ್ಷ ತ್ಸೈ ಇಂಗ್-ವೆನ್, ಎಲ್ಲರಿಗೂ ನನ್ನಂತೆಯೇ ಆಘಾತ ಹಾಗೂ ದುಃಖ ತಂದಿದೆ ಎಂದು ನಾನು ಭಾವಿಸುತ್ತೇನೆ. ತೈವಾನ್ ಹಾಗೂ ಜಪಾನ್ ಎರಡೂ ಕಾನೂನು ಆಳ್ವಿಕೆಯನ್ನು ಹೊಂದಿರುವ ಪ್ರಜಾಪ್ರಭುತ್ವ ರಾಷ್ಟ್ರಗಳು. ನನ್ನ ಸರ್ಕಾರದ ಪರವಾಗಿ, ನಾನು ಹಿಂಸಾತ್ಮಕ ಮತ್ತು ಕಾನೂನುಬಾಹಿರ ಕೃತ್ಯಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ವಿವಾದಾತ್ಮಕ ಟ್ವೀಟ್ – ಹರಿಯಾಣ ಬಿಜೆಪಿಯ ಐಟಿ ಸೆಲ್ ಮುಖ್ಯಸ್ಥ ವಜಾ

    ಚಂಡೀಗಢ: ಪ್ರವಾದಿ ಹಾಗೂ ಇಸ್ಲಾಂ ಧರ್ಮದ ಕುರಿತು 2017ರಲ್ಲಿ ಮಾಡಿದ್ದ ಟ್ವೀಟ್‌ಗೆ ಸಂಬಂಧಿಸಿದಂತೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಅರುಣ್ ಯಾದವ್‌ನನ್ನು ಬಿಜೆಪಿ ಪಕ್ಷದಿಂದ ವಜಾ ಮಾಡಿದೆ.

    ಇತ್ತೀಚೆಗೆ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು 4 ವರ್ಷಗಳ ಹಿಂದಿನ ಟ್ವೀಟ್‌ಗೆ ಸಂಬಂಧಿಸಿದಂತೆ ಬಂಧಿಸಿದ ಹಿನ್ನೆಲೆ ಅರುಣ್ ಯಾದವ್ ಬಂಧನಕ್ಕೂ ಸಾಮಾಜಿಕ ಮಾಧ್ಯಮಗಳಲ್ಲಿ ಕರೆಗಳು ಬಂದಿತ್ತು. ಈ ಒತ್ತಡದ ನಡುವೆ ಬಿಜೆಪಿ ಗುರುವಾರ ಸಂಜೆ ಹರಿಯಾಣದ ಐಟಿ ಸೆಲ್ ಮುಖ್ಯಸ್ಥ ಸ್ಥಾನದಿಂದ ಅವರನ್ನು ತೆಗೆದುಹಾಕಿದೆ. ಇದನ್ನೂ ಓದಿ: 51 ರನ್‌ ಚಚ್ಚಿ 4 ವಿಕೆಟ್‌ ಕಿತ್ತ ಪಾಂಡ್ಯ – ನಂಬರ್ ಗೇಮ್‍ನಲ್ಲಿ ಸೋತ ಆಂಗ್ಲರು

    ಟ್ವಿಟ್ಟರ್‌ನಲ್ಲಿ ಅರುಣ್ ಯಾದವ್‌ನನ್ನು ಬಂಧಿಸಿ ಎಂಬ ಕರೆ ಮೂಲಕ #ArrestArunYadav ಟ್ರೆಂಡಿಂಗ್‌ನಲ್ಲಿದೆ. ಈ ಹ್ಯಾಶ್ ಟ್ಯಾಗ್ ಮೇ ತಿಂಗಳಿನಿಂದ ಹಾಗೂ ಜುಬೇರ್ ಬಂಧನದ ಬಳಿಕ ತೀವ್ರವಾಗಿ ಹಂಚಿಕೊಳ್ಳಲಾಗುತ್ತಿದೆ. ಈ ಹ್ಯಾಶ್‌ಟ್ಯಾಗ್‌ನಲ್ಲಿ 50,000 ಕ್ಕೂ ಹೆಚ್ಚು ಟ್ವೀಟ್ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – 10 ಮಂದಿಗೆ ಗಾಯ

    ಕಳೆದ ತಿಂಗಳು ಪ್ರವಾದಿ ಮೊಹಮ್ಮದ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾರನ್ನು ತನ್ನ ಸ್ಥಾನದಿಂದ ಬಿಜೆಪಿ ಕಿತ್ತು ಹಾಕಿತ್ತು. ಬಳಿಕ ವಿವಾದಾತ್ಮಕ ಕಾಮೆಂಟ್ ಹಾಗೂ ಟ್ವೀಟ್ ಮಾಡಿದ್ದ ಮತ್ತೊಬ್ಬ ಕಾರ್ಯಕಾರಿ ನವೀನ್ ಜಿಂದಾಲ್ ಅವರನ್ನು ಬಿಜೆಪಿ ಹೊರ ಹಾಕಿತ್ತು.

    Live Tv
    [brid partner=56869869 player=32851 video=960834 autoplay=true]

  • ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

    ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ : ಬಿಜೆಪಿ ವ್ಯಂಗ್ಯ

    ಬೆಂಗಳೂರು: ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಯ್ಯ ವಿರುದ್ಧ ಬಿಜೆಪಿ ವ್ಯಂಗ್ಯವಾಡಿದೆ.

    ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ 75 ವರ್ಷ ತುಂಬಿದ ಹಿನ್ನೆಲೆ ಅವರ ಅಭಿಮಾನಿಗಳು, ಬೆಂಬಲಿಗರು ದಾವಣಗೆರೆಯಲ್ಲಿ ಬೃಹತ್ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ದೆಹಲಿಯಲ್ಲಿ ತಮ್ಮ ಪಕ್ಷದ ನಾಯಕ ರಾಹುಲ್ ಗಾಂಧಿಗೆ ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ. ಇದಕ್ಕೆ ರಾಹುಲ್ ಗಾಂಧಿ ಕೂಡ ಒಪ್ಪಿಗೆ ಸೂಚಿಸಿರುವುದಾಗಿ ನಾಯಕರು ತಿಳಿಸಿದ್ದಾರೆ. ಅಲ್ಲದೇ ಆಗಸ್ಟ್ 3ರಂದು ಸಿದ್ದರಾಮೋತ್ಸವ ಕಾರ್ಯಕ್ರಮವಿದೆ.

    ಈ ನಡುವೆ ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಮುಖ್ಯಮಂತ್ರಿ ಪದವಿಯ ಆಸೆಗಾಗಿ ಸಿದ್ದರಾಮಯ್ಯ ತಮ್ಮ ಹಳೆಯ ಅಹಿಂದ ಕಾರ್ಡ್ ಬಳಸುತ್ತಿದ್ದಾರೆ. ಅಹಿಂದ ಕಾರ್ಡ್ ಎಕ್ಸ್‍ಪೈರ್ ಆಗಿದೆ. ಕಳೆದ ಬಾರಿ ಇದೇ ಕಾರ್ಡ್ ತೋರಿಸಿ ಮೋಸ ಮಾಡಿದ್ದನ್ನು ರಾಜ್ಯದ ಜನತೆ ಇನ್ನೂ ಮರೆತಿಲ್ಲ. ಇದು ಸಿದ್ದರಾಮೋತ್ಸವವಲ್ಲ, ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲಕ್ಕೆತ್ತುವ ಉತ್ಸವ ಅಷ್ಟೇ ಎಂದು ಟೀಕಿಸಿದೆ. ಇದನ್ನೂ ಓದಿ: 130 ಸ್ಥಾನ ಗೆದ್ದು ಕಾಂಗ್ರೆಸ್ ಸರ್ಕಾರ ರಚಿಸೋದು ಗ್ಯಾರಂಟಿ: ಸಿದ್ದರಾಮಯ್ಯ ವಿಶ್ವಾಸ

    ನಕಲಿ ಗಾಂಧಿ ಕುಟುಂಬಸ್ಥರು ಪ್ರತಿಬಾರಿಯೂ ರಾಜ್ಯ ಕಾಂಗ್ರೆಸ್ ನಾಯಕರಿಗೆ ಒಂದಾಗಿರಬೇಕೆಂದು ಸೂಚನೆ ನೀಡುತ್ತಾರೆ. ದೆಹಲಿಯಲ್ಲಿ ಹೂಂಗುಟ್ಟಿ ಬರುವ ಕಾಂಗ್ರೆಸ್ಸಿಗರು ಬೆಂಗಳೂರಿಗೆ ಬಂದ ಕೂಡಲೇ ಒಬ್ಬರ ವಿರುದ್ಧ ಇನ್ನೊಬ್ಬರು ಕತ್ತಿ ಮಸೆಯುತ್ತಾರೆ. ತಾಳಮೇಳ ಇಲ್ಲದ ಕೈ ನಾಯಕರಿಂದಾಗಿಯೇ ರಾಜ್ಯ ಕಾಂಗ್ರೆಸ್ ಮುಕ್ತವಾಗಲಿದೆ ಎಂದು ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

    ಬಿದ್ದಿರುವ ಸಿದ್ದರಾಮಯ್ಯರನ್ನು ಮೇಲೆತ್ತಲು ಸಿದ್ದರಾಮೊತ್ಸವ ಮೂಲಕ ವೇದಿಕೆ ಸಜ್ಜುಗೊಳಿಸುತ್ತಿರುವ ಸಿದ್ದರಾಮಯ್ಯ ಬಣದ ನಾಯಕರು ಒಂದೆಡೆಯಾದರೆ, ಇದೇ ಸಿದ್ದರಾಮಯ್ಯರನ್ನು ಕೆಡವಲು ಖೆಡ್ಡಾ ತೋಡುತ್ತಿರುವ ಡಿ.ಕೆ. ಶಿವಕುಮಾರ್ ಬಣದ ನಾಯಕರು ಮತ್ತೊಂದೆಡೆ. ಈ 2 ಬಣಗಳ ನಡುವೆ ದೆಹಲಿಯ ನಕಲಿ ಗಾಂಧಿಗಳ ಬಣ ಮೂಕ ಪ್ರೇಕ್ಷಕರಷ್ಟೇ ಎಂದು ಟೀಕಿಸಿದೆ.

    ಕಾಂಗ್ರೆಸ್ಸಿಗರು ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸುತ್ತಿದ್ದಾರೆ. ಮತವೇ ಇಲ್ಲದವರು ಬಹುಮತ ಗಳಿಸಲು ಹೇಗೆ ಸಾಧ್ಯ? 2023 ರಲ್ಲಿ ಕಾಂಗ್ರೆಸ್ ಸೋಲು ಖಚಿತ. ಟವಲ್ ಈಗಲೇ ಹಾಕಬೇಡಿ, ನಾಳೆಯ ದಿನ ಮುಖಭಂಗವಾದಾಗ ಒರೆಸಿಕೊಳ್ಳಲು ತುಂಡು ಬಟ್ಟೆಯೂ ಲಭಿಸದು ವ್ಯಂಗ್ಯವಾಡಿದೆ.  ಇದನ್ನೂ ಓದಿ: ಮದರಸಾಗಳಲ್ಲಿ ಮಕ್ಕಳಿಗೆ ರುಂಡ ಕತ್ತರಿಸುವ ಕಾನೂನನ್ನೇ ಬೋಧಿಸಲಾಗುತ್ತಿದೆ – ಆರಿಫ್ ಖಾನ್ ಕಿಡಿ

    2013ರ ಸೋಲನ್ನು ಪರಮೇಶ್ವರ್ ಮರೆತಿಲ್ಲ ಎನ್ನುವುದಕ್ಕೆ ಈ ವೀಡಿಯೋ ಸಾಕ್ಷಿ. ಸಿದ್ದರಾಮಯ್ಯ ಅವರೇ ನೀವು ಯಾರನ್ನೂ ಓವರ್ ಟೇಕ್ ಮಾಡಿದರೂ ಕಾಂಗ್ರೆಸ್ ಒಳಜಗಳ ನಿಮ್ಮನ್ನು ಓವರ್ ಟೇಕ್ ಮಾಡದೇ ಬಿಡದು. 2018 ರಲ್ಲಿ ಅನುಭವಿಸಿದ್ದೀರಿ, 2023 ರಲ್ಲಿ ಡಿಕೆಶಿ, ಖರ್ಗೆ, ಪರಮೇಶ್ವರ್ ಸೇರಿಕೊಂಡು ನಿಮ್ಮನ್ನು ಓವರ್ ಟೇಕ್ ಮಾಡಲಿದ್ದಾರೆ ಎಂದಿದೆ.

    ಕಾಂಗ್ರೆಸ್ ಪಕ್ಷದ ಮುಂಚೂಣಿ ನಾಯಕರು ಒಟ್ಟಾಗಿ ಚುನಾವಣೆ ಎದುರಿಸುವುದು ಎಂದರೆ ಕಪ್ಪೆಯನ್ನು ಹಿಡಿದು ತಕ್ಕಡಿಯಲ್ಲಿ ತೂಕ ಮಾಡಿದಂತೆ, ಇವರು ಒಟ್ಟಾಗುವುದಿಲ್ಲ, ಹೈಕಮಾಂಡ್ ಒಗ್ಗಟ್ಟಿನ ಜಪ ಬಿಡುವುದಿಲ್ಲ. ಕಾಂಗ್ರೆಸ್ ವರಿಷ್ಠರೀಗ ನೀರಲ್ಲಿ ಮುಳುಗಿ ಬಂದ ಬೆಕ್ಕಿನಂತಾಗಿದ್ದಾರೆ ಎಂದು ಹೇಳಿದೆ.

    ದಾವಣಗೆರೆಯಲ್ಲಿ ಸಿದ್ದರಾಮಯ್ಯ ಸಮಾವೇಶ ಆಯೋಜಿಸಿದ್ದಾರೆ ಎಂದರೆ ಬಂಡಾಯದ ಬಾವುಟ ಹಾರಿಸಿದ್ದಾರೆಂದೇ ಅರ್ಥ. ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದಾಗಲೂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಸಮಾವೇಶ ನಡೆಸಿ ವರಿಷ್ಠರಿಗೆ ಭರತನಾಟ್ಯ ಮಾಡಿಸಿದ್ದರು. ಸಿದ್ದರಾಮಯ್ಯನವರೇ, ಇದೆಲ್ಲವೂ ಸ್ವಾರ್ಥಕ್ಕಾಗಿ ಅಲ್ವೇ ಎಂದು ಪ್ರಶ್ನಿಸಿದೆ.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೇ, ನಿಮಗಿದು ಎಚ್ಚರಿಕೆ. ಸಿದ್ದರಾಮೋತ್ಸವದ ಬಳಿಕ ನಿಮ್ಮ ಪರಿಸ್ಥಿತಿ ಇದೇ ರೀತಿ ಆಗಲಿದೆ ಎಂದು ತಿಳಿಸಿದೆ.

    Live Tv

  • ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌ ಬ್ಯಾಟ್

    ಮಹಾರಾಷ್ಟ್ರ ಜನತೆ ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆಂಬ ಭರವಸೆ ನನಗಿದೆ: ಠಾಕ್ರೆ ಪರ ಪ್ರಕಾಶ್‌ ರಾಜ್‌ ಬ್ಯಾಟ್

    ಬೆಂಗಳೂರು: ಮಹಾರಾಷ್ಟ್ರ ಮೈತ್ರಿಕೂಟ ಸರ್ಕಾರದ ಮುಖ್ಯಮಂತ್ರಿ ಸ್ಥಾನಕ್ಕೆ ಉದ್ಧವ್‌ ಠಾಕ್ರೆ ರಾಜೀನಾಮೆ ನೀಡಿದ್ದನ್ನು ನಟ ಪ್ರಕಾಶ್‌ ರಾಜ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಟ್ವೀಟ್‌ ಮಾಡಿರುವ ಪ್ರಕಾಶ್‌ ರಾಜ್‌, ನೀವು ಒಳ್ಳೆಯ ಕೆಲಸ ಮಾಡಿದ್ದೀರಿ ಉದ್ಧವ್‌ ಠಾಕ್ರೆ ಸರ್.‌ ನೀವು ರಾಜ್ಯವನ್ನು ನಿಭಾಯಿಸಿದ ರೀತಿಗೆ ಮಹಾರಾಷ್ಟ್ರದ ಜನರು ನಿಮ್ಮ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಭರವಸೆ ನನಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಉದ್ಧವ್‌ ಠಾಕ್ರೆ ರಾಜೀನಾಮೆ ನಮಗೆ ಬೇಸರ ತರಿಸಿದೆ: ಶಿವಸೇನಾ ಬಂಡಾಯ ಶಾಸಕ

    ಚಾಣಕ್ಯರು (ಅಮಿತ್‌ ಶಾ) ಇಂದು ಲಡ್ಡುಗಳನ್ನು ತಿನ್ನಬಹುದು. ಆದರೆ ನಿಮ್ಮ ಪ್ರಾಮಾಣಿಕತೆ ಹೆಚ್ಚು ಕಾಲ ಉಳಿಯುತ್ತದೆ. ನಿಮಗೆ ಹೆಚ್ಚು ಶಕ್ತಿಯನ್ನೂ ನೀಡಲಿದೆ ಎಂದು ಠಾಕ್ರೆ ನಿಲುವನ್ನು ಸ್ವಾಗತಿಸಿದ್ದಾರೆ.

    ಮಹಾರಾಷ್ಟ್ರದಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗಿನ ಮೈತ್ರಿ ವಿರುದ್ಧ ಏಕನಾಥ್‌ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಬಂಡಾಯ ಎದ್ದಿದ್ದಾರೆ. ಶಿಂಧೆ ಬಣದಲ್ಲಿ ಶಿವಸೇನಾ ಬಂಡಾಯ ಶಾಸಕರು 40 ಮಂದಿ ಇದ್ದಾರೆ ಎನ್ನಲಾಗಿದೆ. ಪಕ್ಷೇತರರು ಸೇರಿ 50 ಬಂಡಾಯ ಶಾಸಕರಿದ್ದಾರೆ. ಇದನ್ನೂ ಓದಿ: ಶಿಂಧೆ ಬಣದ ಹೊಡೆತಕ್ಕೆ ಅಘಾಡಿ ಸರ್ಕಾರ ಪತನ – ಉದ್ಧವ್‌ ಠಾಕ್ರೆ ರಾಜೀನಾಮೆ

    ಮಹಾರಾಷ್ಟ್ರ ಸರ್ಕಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಉದ್ಧವ್‌ ಠಾಕ್ರೆಗೆ ರಾಜ್ಯಪಾಲರು ನಿನ್ನೆ ಸೂಚನೆ ನೀಡಿದ್ದರು. ರಾಜ್ಯಪಾಲರ ಸೂಚನೆ ವಿರುದ್ಧ ಠಾಕ್ರೆ ಸುಪ್ರೀಂ ಮೊರೆ ಹೋಗಿದ್ದರು. ಆದರೆ ಬಹುಮತ ಸಾಬೀತು ಸೂಚನೆಯನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯಿತು. ಬೇರೆ ದಾರಿಯಿಲ್ಲದೇ ಠಾಕ್ರೆ ಅವರು ನಿನ್ನೆ ರಾತ್ರಿ ರಾಜೀನಾಮೆ ನೀಡಿದ್ದಾರೆ.‌

    Live Tv

  • ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು: ಹರಿಪ್ರಸಾದ್‌ಗೆ ನಾಗೇಶ್ ಟಾಂಗ್

    ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು: ಹರಿಪ್ರಸಾದ್‌ಗೆ ನಾಗೇಶ್ ಟಾಂಗ್

    ಮಡಿಕೇರಿ: ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಕ್ಕೆ ಶಿಕ್ಷಣ ಇಲಾಖೆಯ ಹಣ ದುರ್ಬಳಕೆ ಮಾಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಟ್ವೀಟ್ ಮೂಲಕ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿರುಗೇಟು ನೀಡಿದ್ದಾರೆ.

    ಮಡಿಕೇರಿಯಲ್ಲಿ ಪ್ರತಿಕ್ರಿಯೆ ನೀಡಿದ ಬಿ.ಸಿ ನಾಗೇಶ್, ಬಿ.ಕೆ ಹರಿಪ್ರಸಾದ್ ಅವರ ಅವಾಂತರ ನಿಮಗೂ ಗೊತ್ತಿದೆ. ಅವರು ಯಾವಾಗಲೂ ಪೂರ್ಣ ಮಾಹಿತಿ ಇಲ್ಲದೆ ಮಾತನಾಡುತ್ತಾರೆ. ಅವರಿಗೂ ಎಕ್ಸ್‌ಕ್ಲ್ಯೂಸಿವ್ ಆಗಿ ಟ್ವೀಟ್ ಮಾಡಬೇಕೆಂಬ ಹುಚ್ಚು ಇರಬಹುದು. ಆದ್ದರಿಂದ ಹೀಗೆ ಟ್ವೀಟ್ ಮಾಡಿದ್ದಾರೆ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಅಗ್ನಿಪಥ್ ಪ್ರತಿಭಟನೆಯಲ್ಲಿ ಮೈಕ್ ಭಾಷಣಕ್ಕೆ ಬ್ರೇಕ್ ಹಾಕಿದ ಪೊಲೀಸರು

    ಅವರೊಬ್ಬ ವಿರೋಧ ಪಕ್ಷದ ನಾಯಕನಾಗಿ ತಾಳ್ಮೆ ವಹಿಸಬೇಕು. ಅದು ಇಲಾಖೆಯ ಸಾಮಾಜಿಕ ಜಾಲತಾಣ. ಅದರ ನಿರ್ವಹಣೆಗೆ ಸಂಬಂಧಿಸಿದಂತೆ ಯಾವ ಒಪ್ಪಂದವೂ ಆಗಿಲ್ಲ. ಯಾರಿಗೂ ಹಣವನ್ನೂ ಕೊಟ್ಟಿಲ್ಲ. ಹರಿಪ್ರಸಾದ್ ಅವರು ದೆಹಲಿಯಲ್ಲಿ ಇದ್ದವರು, ಈಗ ರಾಜ್ಯದಲ್ಲಿ ಎಲ್ಲರಿಗಿಂತ ಮೊದಲು ಟ್ವೀಟ್ ಮಾಡಬೇಕು ಎಂದು ಹೀಗೆ ಅವಾಂತರ ಮಾಡಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

    Live Tv

  • ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

    ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು: ದಿನೇಶ್ ಗುಂಡೂರಾವ್

    ಬೆಂಗಳೂರು: ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು, ಮಹಾರಾಷ್ಟ್ರದಲ್ಲಿ ಬಿಜೆಪಿ ಹೀನ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ದಿನೇಶ್ ಗುಂಡೂರಾವ್ ಆಕ್ರೋಶ ಹೊರಹಾಕಿದ್ದಾರೆ.

    ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಮಹಾರಾಷ್ಟ್ರದಲ್ಲಿ ಮತ್ತೆ ಕೊಳಕು ರಾಜಕೀಯ ಶುರು ಮಾಡಿರುವ ಬಿಜೆಪಿ ಆಪರೇಶನ್ ಕಮಲದ ಮೂಲಕ ಅಧಿಕಾರಕ್ಕೆ ಬರುವ ಯತ್ನ ಮಾಡುತ್ತಿದೆ. ಆಪರೇಷನ್ ಕಮಲ ಬಿಜೆಪಿಯವರ ಅನಿಷ್ಟ ಕೂಸು. ಮಧ್ಯಪ್ರದೇಶ, ಕರ್ನಾಟಕದಲ್ಲಿ ಈಗಾಗಲೇ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಹೀನ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ವರ್ತನೆ ಸಂವಿಧಾನ ಬಾಹಿರ ಎಂದು ಕಿಡಿಕಾರಿದ್ದಾರೆ.

    ನಾ ಖಾವೂಂಗಾ, ನಾ ಖಾನೇ ದೂಂಗಾ ಎಂದು ಬೊಗಳೆ ಭಾಷಣ ಬಿಗಿಯುವ ಮೋದಿಯವರು, ಆಪರೇಷನ್ ಕಮಲಕ್ಕೆ ಸುರಿಯುವ ಸಾವಿರಾರು ಕೋಟಿ ಹಣ ಯಾರು ತಿಂದು ವಿಸರ್ಜಿಸಿದ್ದು ಎಂದು ಹೇಳುತ್ತಾರೆಯೇ? ಮೋದಿಯವರು ಪ್ರಾಮಾಣಿಕರಾಗಿದ್ದರೆ ಮಹಾರಾಷ್ಟ್ರದಲ್ಲಿ ಈಗ ನಡೆಯುತ್ತಿರುವ ಆಪರೇಷನ್ ಕಮಲದಲ್ಲಿ ಕೈ ಬದಲಾಗುವ ಹಣದ ಮೂಲದ ಬಗ್ಗೆ ಇಡಿ ತನಿಖೆಗೆ ಆದೇಶಿಸಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತೆ ಕಾಡಂಚಿನಲ್ಲಿ ಪ್ರತ್ಯಕ್ಷ – ಮದ್ವೆಯಾಗೋದಾಗಿ ನಂಬಿಸಿ ಮೋಸ

    ಅಧಿಕಾರಕ್ಕಾಗಿ ಬಿಜೆಪಿ ಎಷ್ಟು ಕೀಳು ಮಟ್ಟಕ್ಕಾದರೂ ಇಳಿಯುತ್ತದೆ ಎಂಬುದಕ್ಕೆ ಮಹಾರಾಷ್ಟ್ರದ ಇಂದಿನ ರಾಜಕೀಯ ಸನ್ನಿವೇಶ ಮಗದೊಂದು ಉದಾಹರಣೆ. ಸಂವಿಧಾನಕ್ಕೆ ಸದಾ ಅಪಚಾರ ಎಸಗುತ್ತಾ, ಪ್ರಜಾಪ್ರಭುತ್ವ ಮೌಲ್ಯಗಳನ್ನು ಕತ್ತು ಹಿಸುಕುತ್ತಾ ಬಂದಿರುವ ಬಿಜೆಪಿ ಈಗ ಮಹಾರಾಷ್ಟ್ರದಲ್ಲೂ ಅನೈತಿಕ ರಾಜಕಾರಣದ ಮೂಲಕ ಅಧಿಕಾರಕ್ಕೆ ಬರಲು ಹವಣಿಸುತ್ತಿದೆ ಎಂದು ಹರಿಹಾಯ್ದಿದ್ದಾರೆ.

    ಸಂವಿಧಾನಬದ್ಧವಾಗಿ ಅಸ್ತಿತ್ವದಲ್ಲಿರುವ ಸರ್ಕಾರವನ್ನು ಅಸಂವಿಧಾನಿಕವಾಗಿ ಉರುಳಿಸುವ ಕೆಟ್ಟ ಸಂಪ್ರದಾಯ ಶುರುವಾಗಿದ್ದೇ ಕರ್ನಾಟಕದಲ್ಲಿ. ಆಪರೇಷನ್ ಕಮಲದ ಜನಕ ಯಡಿಯೂರಪ್ಪನವರು. ಬಿಎಸ್‍ವೈ ಸೃಷ್ಟಿಸಿದ ಪಿಡುಗನ್ನು ಇಂದು ದೇಶಾದ್ಯಂತ ಬಿಜೆಪಿಯವರು ಹಬ್ಬಿಸಿ ರಾಜಕೀಯ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದ್ದಾರೆ. ಇಂತಹ ಪಿಡುಗಿಗೆ ಜನರೇ ಕಡಿವಾಣ ಹಾಕಬೇಕು ಎಂದು ಕೆಂಡಕಾರಿದ್ದಾರೆ. ಇದನ್ನೂ ಓದಿ: ಯಾರು ಸ್ತ್ರೀಯರಿಗೆ ಅಪಮಾನ ಮಾಡುತ್ತಾರೋ ಅವರ ಪತನ ನಿಶ್ಚಿತ – ಕಂಗನಾ ಹಳೇ ವೀಡಿಯೋ ವೈರಲ್

    Live Tv

  • ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಮೋದಿ ನಾಟಕ ನಂಬಲು ಯುವಕರು ಮೂರ್ಖರಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಸರ್ಕಾರ ಪ್ರಾರಂಭಿಸಿರುವ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಆಕ್ರೋಶ ಹೊರ ಹಾಕಿದ್ದಾರೆ.

    ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಸೇನೆಯ ಅಲ್ಪಾವಧಿ ನೇಮಕ ಯೋಜನೆ ‘ಅಗ್ನಿಪಥ್’ ವಿರುದ್ಧ ದೇಶಾದ್ಯಂತ ಯುವಕರ ಆಕ್ರೋಶ ಭುಗಿಲೆದ್ದಿದೆ. ಯುವಕರ ಆಕ್ರೋಶ ಸಹಜವಾದದ್ದೆ. ಕಳೆದ ಎರಡು ವರ್ಷಗಳಿಂದ ಸೇನೆಗೆ ನೇಮಕಾತಿ ನಡೆದಿಲ್ಲ. ಈಗ ಅಗ್ನಿಪಥ್ ಯೋಜನೆಯ ಮೂಲಕ ನೇಮಕಾತಿಯಾದರೂ ಅದು ಅಲ್ಪಾವಧಿಯಷ್ಟೆ. ಕೇವಲ ನಾಲ್ಕು ವರ್ಷಕ್ಕೆ ಕಡ್ಡಾಯ ನಿವೃತ್ತಿಯಾಗಬೇಕು. ಆ ನಂತರ ಯುವಕರ ಭವಿಷ್ಯವೇನು ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು – 22 ರೈಲುಗಳ ಸಂಚಾರ ರದ್ದು

    ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸೇನೆಗೆ ಸೇರುವುದೇ ಬಡ ಮಧ್ಯಮ ವರ್ಗದ ಯುವಕರು. ಹೊಟ್ಟೆ ತುಂಬಿದ ಶ್ರೀಮಂತರ ಮಕ್ಕಳಾಗಲಿ, ನಕಲಿ ದೇಶಪ್ರೇಮದ ಭಾಷಣ ಬಿಗಿಯುವ ಸಂಘ ಪರಿವಾರದ ಹೆತ್ತ ಕುಡಿಗಳಾಗಲಿ ಸೈನ್ಯ ಸೇರುವುದಿಲ್ಲ. ಇದು ಕಟು ವಾಸ್ತವ. ಸೈನ್ಯಕ್ಕೆ ಸೇರಿದ ಬಡ ಮಧ್ಯಮ ವರ್ಗದ ಯುವಕರಿಗೆ ಸೇವಾ ಭದ್ರತೆ ಅತಿ ಅಗತ್ಯ. ಇದನ್ನು ಕೇಂದ್ರ ಅರಿಯಬೇಕು ಎಂದಿದ್ದಾರೆ.

    ಸೈನಿಕರ ಪಿಂಚಣಿ ಹೊರೆ ತಪ್ಪಿಸಿಕೊಳ್ಳಲು ಕೇಂದ್ರ ಅಗ್ನಿಪಥ್ ಯೋಜನೆ ಜಾರಿಗೆ ಮುಂದಾಗಿದೆ. ದೇಶದ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಸೇವೆ ಮಾಡಿದ ಸೈನಿಕರಿಗೆ ಪಿಂಚಣಿ ಕೊಡದಷ್ಟು ನಮ್ಮ ದೇಶ ನಿರ್ಗತಿಕವೇ? ತಮ್ಮ ರಾಜಕೀಯ ಲಾಭಕ್ಕೆ ಯೋಧರ ತ್ಯಾಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೋದಿಯವರಿಗೆ, ಸೈನಿಕರಿಗೆ ಪಿಂಚಣಿ ಕೊಡುವುದು ಬೇಕಿಲ್ಲವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ಯೋಜನೆ ವಿರೋಧಿಸಿ ತೀವ್ರ ಪ್ರತಿಭಟನೆ – ರೈಲಿಗೆ ಬೆಂಕಿ

    ವಾರ್ಷಿಕ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಮೋದಿ ಮಾತು ತಪ್ಪಿದ್ದಾರೆ. ಈಗ ಸಾರ್ವತ್ರಿಕ ಚುನಾವಣೆ ಹತ್ತಿರವಿರುವುದರಿಂದ ಮತ್ತೊಂದು ನಾಟಕಕ್ಕೆ ತಾಲೀಮು ನಡೆಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ಮೂಲಕ ಸೇನೆಯಲ್ಲಿ ಕಾಲ್ಪನಿಕ ಹುದ್ದೆ ಸೃಷ್ಟಿಸುವುದು ಈ ನಾಟಕದ ಒಂದು ಭಾಗ. ಆದರೆ ಮೋದಿಯವರ ಈ ನಾಟಕ ನಂಬಲು ಯುವಕರು ಮೂರ್ಖರಲ್ಲ ಎಂದು ಕಿಡಿಕಾರಿದ್ದಾರೆ.

    Live Tv

  • ನಕಲಿ ಗಾಂಧಿಗಳ ಮೇಲಿನ ಅನುಕಂಪ ದಲಿತ ನಾಯಕ ಖರ್ಗೆ ವಿಚಾರಣೆ ವೇಳೆ ಇರಲಿಲ್ಲವೇಕೆ? ಬಿಜೆಪಿ ಟಾಂಗ್‌

    ನಕಲಿ ಗಾಂಧಿಗಳ ಮೇಲಿನ ಅನುಕಂಪ ದಲಿತ ನಾಯಕ ಖರ್ಗೆ ವಿಚಾರಣೆ ವೇಳೆ ಇರಲಿಲ್ಲವೇಕೆ? ಬಿಜೆಪಿ ಟಾಂಗ್‌

    ಬೆಂಗಳೂರು: ಮಲ್ಲಿಕಾರ್ಜುನ ಖರ್ಗೆಗೆ ಇ.ಡಿ ವಿಚಾರಣೆ ವೇಳೆ ಪ್ರತಿಭಟನೆ ಮಾಡದ ವಿಚಾರವಾಗಿ ಟ್ವೀಟ್‌ ಮಾಡುವ ಮೂಲಕ ಕಾಂಗ್ರೆಸ್‌ ನಾಯಕ ಕಾಲೆಳೆದಿದೆ ಬಿಜೆಪಿ.

    ಮಾನ್ಯ ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರೇ, ನಕಲಿ ಗಾಂಧಿ ಕುಟುಂಬಸ್ಥರನ್ನು ಇ.ಡಿ ವಿಚಾರಣೆ ಮಾಡುತ್ತಿರುವಾಗ ಇದ್ದ ಅನುಕಂಪ, ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ವಿಚಾರಣೆ ಮಾಡುವಾಗ ಏಕಿರಲಿಲ್ಲ? ದಲಿತ ನಾಯಕ ಎಂಬ ಕಾರಣಕ್ಕಾಗಿ ಬೀದಿಗಿಳಿಯಲಿಲ್ಲವೇ ಎಂದು ಬಿಜೆಪಿ ಪ್ರಶ್ನಿಸಿದೆ. ಇದನ್ನೂ ಓದಿ: ದೊಡ್ಡವರಾದವರು ತನಿಖಾ ಸಂಸ್ಥೆಗಳಿಗೆ ಹೋಗಬಾರದು ಅಂತ ಇದೆಯಾ?: ಕಾಂಗ್ರೆಸ್ ವಿರುದ್ಧ ಸುಧಾಕರ್ ವಾಗ್ದಾಳಿ

    ಟ್ವೀಟ್‌ನಲ್ಲೇನಿದೆ?
    ನಕಲಿ ಗಾಂಧಿಗಳ ಮೇಲಿನ ಅಕ್ಕರೆ, ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ದಲಿತ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಪರವಾಗಿಲ್ಲವೇಕೆ? ರಾಜ್ಯ ಕಾಂಗ್ರೆಸ್ ನಾಯಕರು ಖರ್ಗೆ ಪರವಾಗಿ ಧ್ವನಿ ಎತ್ತಲಿಲ್ಲ. ಇದು ದಲಿತ ವಿರೋಧಿ ಧೋರಣೆಯಲ್ಲದೆ ಮತ್ತೇನು?

    ಮಾನ್ಯ ಪ್ರಿಯಾಂಕ್‌ಖರ್ಗೆ, #IndiaWithRahulGandhi ಎಂದೆನ್ನುವ ಮುನ್ನ ನಿಮ್ಮ ತಂದೆಯನ್ನು ಇ.ಡಿ ತನಿಖೆ ಮಾಡುವಾಗ ಕಾಂಗ್ರೆಸ್ ನಿಮ್ಮ ಕುಟುಂಬದ ಪರವಾಗಿ ನಿಲ್ಲಲಿಲ್ಲವೇಕೆ ಎಂದು ಎಂದಾದರೂ ಯೋಚಿಸಿದ್ದೀರಾ? ನೀವ್ಯಾಕೆ ಅಂದು ತಂದೆಯ ಪರವಾಗಿ ಧ್ವನಿ ಎತ್ತಿಲ್ಲ? ಜನ್ಮದಾತನಿಗಿಂತ ನಕಲಿ ಗಾಂಧಿಗಳು ಹೆಚ್ಚಾದರೇ? ಇದನ್ನೂ ಓದಿ: ಇದು ಇಟಲಿ ಅಲ್ಲ, ದೇಶದ ಕಾನೂನಿಗೆ ಬೆಲೆ ಕೊಡಬೇಕು: ಆರ್. ಅಶೋಕ್

    ಖರ್ಗೆಯವರನ್ನು ಇ.ಡಿ ತನಿಖೆ ಮಾಡುವಾಗ ಸಿದ್ದರಾಮಯ್ಯ ಹಾಗೂ ಡಿಕೆಶಿ ಜಾಣ ಮೌನವಹಿಸಿದ್ದರು. ಸಿಎಂ ಪದವಿಯ ಪ್ರಬಲ ಆಕಾಂಕ್ಷಿಯನ್ನು ತೆರೆಮರೆಗೆ ಸರಿಸುವ ಹುನ್ನಾರವಿತ್ತೇ?

    ನಕಲಿ ಗಾಂಧಿ ಕುಟುಂಬ ಎದುರಿಸುತ್ತಿರುವ ನ್ಯಾಷನಲ್ ಹೆರಾಲ್ಡ್‌ ಪ್ರಕರಣದ ವಾಸ್ತವಾಂಶವಿದು. ಇಷ್ಟೆಲ್ಲಾ ಅಕ್ರಮ ಮಾಡಿರುವ ನಕಲಿ ಗಾಂಧಿಗಳನ್ನು ನ್ಯಾಯಾಲಯದ ಆದೇಶದಂತೆ ವಿಚಾರಿಸುವುದರಲ್ಲಿ ತಪ್ಪೇನಿದೆ? ಇದನ್ನೂ ಓದಿ: ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಭೇದಿ ಮಾಡಿಕೊಳ್ಳೋದೇ ಆಯ್ತು: ಪ್ರತಾಪ್‌ಸಿಂಹ ತಿರುಗೇಟು

    https://twitter.com/BJP4Karnataka/status/1536643919194501120

    ನಕಲಿ ಗಾಂಧಿಗಳ ಕಾನೂನಾತ್ಮಕ ವಿಚಾರಣೆಯನ್ನು ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ದೇಶದ ಕಾನೂನು ವ್ಯವಸ್ಥೆಯನ್ನು ಅಣಕಿಸುತ್ತಿದೆ. ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಆಶಯಗಳಿಗೂ ಕಾಂಗ್ರೆಸ್‌ ಪಕ್ಷ ಕಳಂಕ ತರುತ್ತಿದೆ.

  • ಪರಿಷ್ಕೃತ ಪಠ್ಯದಿಂದ ಹಿಂದೂಗಳಿಗೆ ಮಾತ್ರವಲ್ಲ, ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ: ಸಿದ್ದರಾಮಯ್ಯ

    ಪರಿಷ್ಕೃತ ಪಠ್ಯದಿಂದ ಹಿಂದೂಗಳಿಗೆ ಮಾತ್ರವಲ್ಲ, ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ: ಸಿದ್ದರಾಮಯ್ಯ

    ಬೆಂಗಳೂರು: ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    bc nagesh

    ಪರಿಷ್ಕೃತ ಪಠ್ಯ ರದ್ದತಿಗೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

    ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಪರಿಷ್ಕೃತ ಪಠ್ಯ ರದ್ದು ಮಾಡಿ, ರೋಹಿತ್ ಚಕ್ರತೀರ್ಥರನ್ನು ವಜಾಗೊಳಿಸಬೇಕು – ಸಿದ್ದರಾಮಯ್ಯ ಆಗ್ರಹ

    ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ವಲ್ಲ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಎಂದಿದ್ದಾರೆ.

    ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ರಾಷ್ಟ್ರಭಕ್ತಿ ತುಂಬಿರುವ RSS ಜನರ ಸಂಕಷ್ಟಕ್ಕೆ ಸ್ಪಂದಿಸುವ ಸಂಘಟನೆ: ಬೊಮ್ಮಾಯಿ

    ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ಲವಾ ಎಂದು ಆಕ್ರೋಶ ಹೊರಹಾಕಿದ್ದಾರೆ.

    ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರೂವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ ಎಂದು ಕೆಂಡಕಾರಿದ್ದಾರೆ.

  • ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ – 9 ಸಾವು, 20 ಮಂದಿಗೆ ಗಾಯ

    ಲಕ್ನೋ: ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿದ್ದು, 20 ಜನರು ಗಾಯಗೊಂಡಿರುವ ಘಟನೆ ಇಂದು ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ನಡೆದಿದೆ.

    ದೆಹಲಿಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಹಾಪುರ್‍ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 20 ಮಂದಿ ಗಾಯಗೊಂಡಿದ್ದು, 9 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಘಟನೆಯ ಕುರಿತು ತನಿಖೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ್ ಇನ್‌ಸ್ಪೆಕ್ಟರ್ ಜನರಲ್ ಪ್ರವೀಣ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ ತನಿಖೆ CBIಗೆ ವಹಿಸುವಂತೆ ಬಿಜೆಪಿ ಒತ್ತಾಯ

    ಪ್ರಧಾನಿ ನರೇಂದ್ರ ಮೋದಿ ದುರಂತದ ಕುರಿತು ಸಂತಾಪ ಸೂಚಿಸಿದ್ದು, ರಾಜ್ಯ ಸರ್ಕಾರವು ಗಾಯಾಳುಗಳ ಚಿಕಿತ್ಸೆಗೆ ತ್ವರಿತವಾಗಿ ತೊಡಗಿಸಿಕೊಂಡಿದೆ. ಉತ್ತರ ಪ್ರದೇಶದ ಹಾಪುರದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ನಡೆದ ಘಟನೆ ಹೃದಯವಿದ್ರಾವಕವಾಗಿದೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಸಂತಾಪವನ್ನು ತಿಳಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಘಟನೆಯ ಕುರಿತು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಹ ಸಂತಾಪ ಸೂಚಿಸಿದ್ದು, ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಹೇಳಿದ್ದಾರೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ಸಾಧ್ಯವಾದಷ್ಟೂ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಷ್ಟೇ ಅಲ್ಲದೆ ಅಪಘಾತದ ಬಗ್ಗೆ ತಜ್ಞರಿಂದ ತನಿಖೆ ನಡೆಸುವಂತೆ ಟ್ವೀಟ್ ಮಾಡುವ ಮೂಲಕ ತಿಳಿಸಿದ್ದಾರೆ.