Tag: ಟ್ವೀಟ್

  • ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ

    ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ಏನೂ ಪ್ರಯೋಜನವಿಲ್ಲ: ಬಿಜೆಪಿ

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಎಷ್ಟೇ ದುಡಿದರೂ ಯಾವುದೇ ಪ್ರಯೋಜನವಿಲ್ಲ ಎಂದು ವೀಡಿಯೋ ಶೇರ್ ಮಾಡಿ ಬಿಜೆಪಿ ಸಲಹೆ ಕೊಟ್ಟಿದೆ.

    ಡಿ.ಕೆ.ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕೇಕ್ ಕತ್ತರಿಸಲು ಮುಂದಾಗಿದ್ದರು. ಈ ವೇಳೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಸಹ ಉಪಸ್ಥಿತರಿದ್ದರು. ಡಿಕೆಶಿ ಅವರು ಕೇಕ್ ಕಟ್ ಮಾಡಿದ ಮೇಲೆ ಪ್ರಿಯಾಂಕಾ ಗಾಂಧಿ ಬೇರೆಯವರ ಕೈಯಿಂದ ಕೇಕ್ ತಿನ್ನಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಬಿಜೆಪಿ ವೀಡಿಯೋ ಸರಣಿ ಟ್ವೀಟ್ ಮಾಡುವ ಮೂಲಕ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ. ಇದನ್ನೂ ಓದಿ: ಬಾಗಲಕೋಟೆ ಕೇಸ್‍ಗೆ ಟ್ವಿಸ್ಟ್ – ಮೊದಲು ಸಂಗೀತಾ ಹಲ್ಲೆ ಮಾಡಿದ್ದ ವೀಡಿಯೋ ವೈರಲ್

    ಸರಣಿ ಟ್ವೀಟ್‍ನಲ್ಲಿ ಏನಿದೆ?
    ಡಿ.ಕೆ.ಶಿವಕುಮಾರ್ ಅವರೇ, ಅವರ ಕೈಗೆ ಬಂದ ತುತ್ತು, ನಿಮ್ಮ ಬಾಯಿಗೆ ಬರುವುದಿಲ್ಲ. ಈ ಸತ್ಯವನ್ನು ಈಗಲಾದರೂ ಅರಿತುಕೊಳ್ಳಿ. ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ. ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ. ಅಸಹಾಯಕಡಿಕೆಶಿ ಇಷ್ಟೊಂದು ದುರ್ಬಲವೇ?

    ನೀವೆಷ್ಟೇ ಗುಲಾಮಗಿರಿ, ಚಮಚಾಗಿರಿ ಮಾಡಿದರೂ ನಕಲಿ ಗಾಂಧಿಗಳು ನಿಮ್ಮನ್ನು ಇಡುವಲ್ಲಿಯೇ ಇಡುತ್ತಾರೆ. ಹೈಕಮಾಂಡ್ ಮಟ್ಟದಲ್ಲಿ ಟ್ರಬಲ್ ಶೂಟರ್ ಎನಿಸಿಕೊಂಡಿರುವ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಕೇಕ್ ತಿನ್ನಿಸುವಷ್ಟೂ ಪ್ರಿಯಾಂಕಾ ಗಾಂಧಿಗೆ ಸೌಜನ್ಯವಿಲ್ಲ.

    ಮತ್ತೊಬ್ಬರ ಕೈಯಲ್ಲಿ ಕೇಕ್ ತಿನ್ನಿಸುವ ಪ್ರಮೇಯವೇನಿತ್ತು? ದೇಶ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಿಸುವ ಈ ಹೊತ್ತಿನಲ್ಲಿ, ನಕಲಿ ಗಾಂಧಿ ವಂಶದವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಮೂರನೇ ದರ್ಜೆಯವರಂತೆ ನಡೆಸಿಕೊಳ್ಳುತ್ತಿದ್ದಾರೆ. ಕನಕಪುರದ ಬಂಡೆ ಹೀಗೆ ಬಗ್ಗಿದ್ದು, ಕುಗಿದ್ದು ಅಸಹಾಯಕತನದ ಪರಮಾವಧಿಯಲ್ಲದೆ ಮತ್ತೇನು?. ಇದನ್ನೂ ಓದಿ: ಕಾಶ್ಮೀರದಲ್ಲಿ ನಡೆದ ಹಿಂಸಾಚಾರಕ್ಕೆ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವೇ ಕಾರಣ: ಮೆಹಬೂಬಾ ಮುಫ್ತಿ 

    ಕೇಕ್ ತಿನ್ನಿಸಲು ನಿರಾಕರಣೆ, ರಮ್ಯಾ ಟ್ವೀಟ್ ದಾಳಿ, ಎಂ.ಬಿ.ಪಾಟೀಲ್ ಸಿಡಿದೆದ್ದಿದ್ದು, ಸಿದ್ದರಾಮಯ್ಯ ಮತ್ತು ಬಣದ ಇತ್ತೀಚೆಗಿನ ನಡೆ, ಕೆಪಿಸಿಸಿ ಕಚೇರಿಯಲ್ಲಿ ಭ್ರಷ್ಟಾಚಾರದ ಆರೋಪ ಇದೆಲ್ಲವೂ ಡಿ.ಕೆ.ಶಿವಕುಮಾರ್ ಅವರನ್ನು ಹರಕೆಯ ಕುರಿ ಮಾಡುವ ತಂತ್ರ. ಈ ಎಲ್ಲ ಘಟನೆಗಳು ಏನೋ ಮುನ್ಸೂಚನೆ ನೀಡುತ್ತಿರುವುದು ನಿಜವಲ್ಲವೇ ಎಂದು ಸಂಶಯವನ್ನು ವ್ಯಕ್ತಪಡಿಸಿದೆ.

  • ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಭಾರತ್‌ ಜೋಡೋ ಯಾತ್ರೆ ಬೆನ್ನಲ್ಲೇ ʻಕಾಂಗ್ರೆಸ್‌ ಛೋಡೋʼ ಅಭಿಯಾನ ಶುರುವಾಗುತ್ತೆ: ಬಿಜೆಪಿ ವ್ಯಂಗ್ಯ

    ಬೆಂಗಳೂರು: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ `ಭಾರತ್ ಜೋಡೋ’ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ ಎಂದು ಬಿಜೆಪಿ ಕುಟುಕಿದೆ.

    ʼಕಾಶ್ಮೀರದಿಂದ ಕನ್ಯಾಕುಮಾರಿವರೆಗೂ ಭಾರತ್‌ ಜೋಡೋʼ ಯಾತ್ರೆ ಕೈಗೊಳ್ಳುವುದಾಗಿ ಕಾಂಗ್ರೆಸ್‌ ಘೋಷಿಸಿದೆ. ಕಾಂಗ್ರೆಸ್‌ ಯಾತ್ರೆ ಕುರಿತು ʼ#ಕಾಂಗ್ರೆಸ್‌ಛೋಡೋʼ ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಬಿಜೆಪಿ ಸರಣಿ ಟ್ವೀಟ್‌ ಮೂಲಕ ವ್ಯಂಗ್ಯವಾಡಿದೆ.

    ಟ್ವೀಟ್‌ನಲ್ಲಿ ಏನಿದೆ?
    ಕಾಂಗ್ರೆಸ್‌ ಅಧಿಕಾರದಲ್ಲಿರುವಾಗ ವೋಟ್‌ ಬ್ಯಾಂಕ್‌ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು. ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್‌ ಜೋಡೋ ಎಂದು ಹೊರಟಿದೆ. ಎಷ್ಟೊಂದು ನಾಟಕ ಮಾಡುವಿರಿ?

    ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ. ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ.

    ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್‌ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ?

    ಪಕ್ಷ ಸಂಕಟದಲ್ಲಿ ಇದ್ದಾಗಲೆಲ್ಲ ವಿದೇಶ ಪ್ರವಾಸ ಮಾಡುತ್ತಿದ್ದ ರಾಹುಲ್ ಗಾಂಧಿ ಈಗ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್‌ ಜೋಡೋ ಎಂಬ ಪಾದಯಾತ್ರೆಗೆ ಹೊರಟಿದ್ದಾರೆ. ವಯನಾಡು ತಲುಪುವವರೆಗೆಯಾದರೂ ಈ ಜೋಡಣೆ ಕಾರ್ಯ‌ ನಿರಾತಂಕವಾಗಿ ನಡೆಯುವುದೋ ಅಥವಾ ಮಧ್ಯದಲ್ಲಿ ಇನ್ನೊಂದು ವಿದೇಶ ಪ್ರವಾಸದ ಸಾಧ್ಯತೆ ಇರಬಹುದೋ?

    ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಯಲ್ಲಿ G23 ನಾಯಕರ ಪಾತ್ರವೇನು? ಕಾಂಗ್ರೆಸ್‌ ಛೋಡೋ ಎಂದಿರುವ ನಾಯಕರು ಭಾರತ್‌ ಜೋಡೋ ಯಾತ್ರೆಗೆ ಬರುವರೇ? ಭಾರತ್‌ ಜೋಡೋ ಕಾರ್ಯಕ್ರಮದ ಬೆನ್ನಲ್ಲೇ ಕಾಂಗ್ರೆಸ್‌ಛೋಡೋ ಅಭಿಯಾನ ಆರಂಭಗೊಳ್ಳಲಿದೆ!

    ಸ್ವಾತಂತ್ರದ ನಂತರದ ಭಾರತವನ್ನು ಅಖಂಡವಾಗಿಸಿದವರಲ್ಲಿ ರಾಷ್ಟ್ರಸೇವಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರೂ ಒಬ್ಬರು. ಸರ್ದಾರ್‌ ಅವರನ್ನೇ ಮರೆತ ಕಾಂಗ್ರೆಸ್‌ ಪಕ್ಷ ಭಾರತ್‌ ಜೋಡೋ ಅಭಿಯಾನ ಮಾಡುವುದು ಹಾಸ್ಯಾಸ್ಪದವಲ್ಲವೇ?

  • ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬಿಜೆಪಿ ವಿರುದ್ಧ ಹೋರಾಡಿ, ರಮ್ಯಾ ವಿರುದ್ಧ ಅಲ್ಲ – ಡಿಕೆಶಿ ಬೆಂಬಲಿಗರಿಗೆ ಮಹದೇವಪ್ಪ ಟಾಂಗ್

    ಬೆಂಗಳೂರು: ಕಾಂಗ್ರೆಸ್ ಯುವ ನಾಯಕರ ಒಳ ಜಗಳ ಈಗ ಬೀದಿಗೆ ಬಂದಿದೆ. ಈ ಬೀದಿ ಜಗಳವನ್ನು ಶಮನ ಮಾಡಲು ಈಗ ಹಿರಿಯ ನಾಯಕರು ಅಖಾಡಕ್ಕೆ ಧುಮುಕಿದ್ದಾರೆ.

    ರಮ್ಯಾ, ನಲಪಾಡ್ ಮಧ್ಯೆ ವಾಕ್ಸಮರದ ಬಳಿಕ ಎಂಬಿ ಪಾಟೀಲ್ ಟ್ವೀಟ್ ಮಾಡಿದ್ದರು. ಈಗ ಕಾಂಗ್ರೆಸ್‍ನ ಹಿರಿಯ ನಾಯಕ, ಮಾಜಿ ಸಚಿವ ಮಹದೇವಪ್ಪ ಎಂಟ್ರಿ ಕೊಟ್ಟಿದ್ದಾರೆ. ಇದನ್ನೂ ಓದಿ: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

     

    ಟ್ವೀಟ್ ಮಾಡಿದ ಅವರು, ನಮ್ಮ ಹೋರಾಟ ಬಿಜೆಪಿ ವಿರುದ್ಧ ಇರಬೇಕು ಹೊರತು ರಮ್ಯಾ ವಿರುದ್ಧ ಅಲ್ಲ ಎಂದು ಹೇಳುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಅವರ ಬೆಂಬಲಿಗರಿಗೆ ಟಾಂಗ್ ನೀಡಿದ್ದಾರೆ.

    DKS AND RAMYA

    ಎಂಬಿ ಪಾಟೀಲ್ ಅಶ್ವಥ್ ನಾರಾಯಣ ಭೇಟಿ ವಿಚಾರಕ್ಕೆ ಡಿಕೆಶಿ ಪ್ರತಿಕ್ರಿಯೆ ನೀಡಿದ ಬಳಿಕ ಕಾಂಗ್ರೆಸ್ ಒಳಜಗಳ ಈಗ ಬೀದಿಗೆ ಬಂದಿದೆ. ಡಿಕೆಶಿ ಹೇಳಿಕೆ ವಿರೋಧಿಸಿ ರಮ್ಯಾ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದರು. ಈ ಹಿನ್ನೆಲೆ ಮಾಧ್ಯಮಗಳ ಮೂಲಕ ರಮ್ಯಾ ಟ್ವೀಟ್‍ಗೆ ಉತ್ತರಿಸಿದ ಡಿಕೆ ಶಿವಕುಮಾರ್, ಯಾರ್ಯಾರಿಗೆ ಏನು ನೋವಿದೆಯೋ ಏನು ದುಗುಡ ಇದೆಯೋ ಗೊತ್ತಿಲ್ಲಾ ಎಂದಿದ್ದರು.

    ಇಬ್ಬರ ನಡುವಿನ ಟ್ವೀಟ್ ವಾರ್‌ಗೆ ಸಂಬಂಧಪಟ್ಟಂತೆ ಕಾಂಗ್ರೆಸ್‍ನ ಹಲವು ನಾಯಕರು ಪ್ರತಿಕ್ರಿಯಿಸಿದ್ದರು. ನಿನ್ನೆ ಉಡುಪಿಯಲ್ಲಿ ಮೊಹಮ್ಮದ್ ನಲಪಾಡ್ ಮಾತನಾಡಿ, ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಟಾಂಗ್ ಕೊಟ್ಟಿದ್ದರು.

  • ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೇಲ್‌ನಲ್ಲಿರುವ ಶಾಸಕರ ಪುತ್ರ ನನ್ನ ಪ್ರಾಮಾಣಿಕತೆ ಪ್ರಶ್ನಿಸುತ್ತಿದ್ದಾರೆ: ನಲಪಾಡ್‌ಗೆ ರಮ್ಯಾ ತಿರುಗೇಟು

    ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಪ್ರಶ್ನಿಸಿದ್ದಕ್ಕೆ ತಮ್ಮ ವಿರುದ್ಧ ಟೀಕಾಪ್ರಹಾರ ನಡೆಸಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ನಲಪಾಡ್‌ಗೆ ಟ್ವೀಟ್‌ ಮೂಲಕ ಕಾಂಗ್ರೆಸ್‌ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.

    ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಮೊಹಮ್ಮದ್‌ ನಲಪಾಡ್‌ ಮೇಲಿರುವ ಆರೋಪದ ಸುದ್ದಿಗಳ ಫೋಟೋಗಳನ್ನು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಶೇರ್‌ ಮಾಡಿರುವ ರಮ್ಯಾ, ನಲಪಾಡ್‌ ವಿರುದ್ಧ ಹರಿಹಾಯ್ದಿದ್ದಾರೆ. ಇದನ್ನೂ ಓದಿ: ನಟಿ ರಮ್ಯಾ ಕುರ್ಚಿಗೆ ಟವಲ್ ಹಾಕಲು ಬಂದಿದ್ದಾರೆ: ನಲಪಾಡ್ ಕಿಡಿ

    ಈತ ಮೊಹಮ್ಮದ್‌ ನಲಪಾಡ್‌. ಗೌರವಾನ್ವಿತ ಶಾಸಕ ಹ್ಯಾರಿಸ್‌ ಅವರ ಪುತ್ರ. ಯುವ ಕಾಂಗ್ರೆಸ್ ಅಧ್ಯಕ್ಷರೂ ಕೂಡ. ಬೇಲ್‌ ಮೇಲೆ ಹೊರಗಿರುವ ನಲಪಾಡ್‌ ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾರೆ ಎಂದು ಟ್ವೀಟ್‌ ಮಾಡಿ ಕುಟುಕಿದ್ದಾರೆ.

    ಸಚಿವ ಡಾ. ಸಿ.ಎನ್.ಅಶ್ವಥ್‌ ನಾರಾಯಣ್‌ ಅವರನ್ನು ಶಾಸಕ ಎಂ.ಬಿ.ಪಾಟೀಲ್‌ ಗೌಪ್ಯವಾಗಿ ಭೇಟಿಯಾಗಿದ್ದಾರೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೆ ನೀಡಿದ್ದರು. ಇದಕ್ಕೆ ರಮ್ಯಾ ಅವರು ಆಕ್ಷೇಪ ವ್ಯಕ್ತಪಡಿಸಿದ್ದರು. ಭೇಟಿಯಲ್ಲಿ ಸಮಸ್ಯೆ ಏನಿದೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ರಮ್ಯಾ ವಿರುದ್ಧ ನಲಪಾಡ್‌ ಹರಿಹಾಯ್ದಿದ್ದರು. ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಟಾಂಗ್‌ ಕೊಟ್ಟಿದ್ದರು. ಇದನ್ನೂ ಓದಿ: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

  • ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

    ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ಗಾಂಧಿ: ರಮ್ಯಾ

    ಬೆಂಗಳೂರು: ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿ ಎಂದು ಮಾಜಿ  ಸಂಸದೆ ರಮ್ಯಾ ಸರಣಿ ಟ್ವೀಟ್ ಮಾಡಿದ್ದಾರೆ.

    ಬೆಳಗ್ಗಿನಿಂದ ರಮ್ಯಾ ಟ್ವೀಟ್ ವಾರ್ ಪ್ರಾರಂಭಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಟಾಂಗ್ ಕೊಟ್ಟಿದ್ದರು. ಈಗ ಮತ್ತೆ ಮುಂದುವರಿದ ಅವರು, ನನಗೆ ಅವಕಾಶ ಕೊಟ್ಟಿದ್ದು, ಬೆನ್ನೆಲುಬಾಗಿ ನಿಂತಿದ್ದು ರಾಹುಲ್‍ ಗಾಂಧಿ. ನನಗೆ ಅವಕಾಶ ನೀಡಲಾಗಿದೆ ಅಂತ ಯಾರದ್ರೂ ಹೇಳಿದ್ರೆ ಅವರು ಅವಕಾಶವಾದಿಗಳು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:  ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ 

    ಕಾಂಗ್ರೆಸ್ ನಿಂದ 8 ಕೋಟಿ ಪಡೆದಿದ್ದೇನೆ ಅಂತಾ ಸುಳ್ಳುಸುದ್ದಿ ಹರಿಬಿಡಲಾಗಿದೆ. ನಾನು ಓಡಿ ಹೋಗಿದ್ದೇನೆ ಅಂತಾ ಸುಳ್ಳು ಸುದ್ದಿ ಹರಡಿಸಿದ್ರು. ನನ್ನ ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಲಾಯ್ತು. ನಾನು ಎಲ್ಲಿಯೂ ಓಡಿ ಹೋಗಿಲ್ಲ. ನನ್ನ ವೈಯಕ್ತಿಕ ಕಾರಣಕ್ಕೆ ರಾಜೀನಾಮೆ ನೀಡಿದೆ. ನಾನು ಮೌನವಾಗಿದ್ದೇ ತಪ್ಪಾಯ್ತು ಎಂದು ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ.

    ವೇಣುಗೋಪಾಲ್ ಜೀ ಮುಂದಿನ ಬಾರಿ ರಾಜ್ಯಕ್ಕೆ ಭೇಟಿ ನೀಡಿದಾಗ ಈ ಬಗ್ಗೆ ಸ್ಪಷ್ಟನೆ ಕೊಡಿ. ಈ ಸುಳ್ಳು ಸುದ್ದಿಯಿಂದ ನನ್ನನ್ನು ಮುಕ್ತಗೊಳಿಸಿ. ಇದು ನೀವು ನನಗೆ ಮಾಡಬಹುದಾದ ಕನಿಷ್ಠ ಸಹಾಯ. ಇಲ್ಲದೇ ಹೋದರೆ ನಾನು ನನ್ನ ಜೀವನದುದ್ದಕ್ಕೂ ಈ ನಿಂದನೆ ಮತ್ತು ಟ್ರೋಲಿಂಗ್‍ನೊಂದಿಗೆ ಇರಬೇಕಾಗುತ್ತೆ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ:  ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

  • ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ

    ಯಾರ್ಯಾರಿಗೆ ಏನು ನೋವಿದೆಯೋ ಗೊತ್ತಿಲ್ಲ: ರಮ್ಯಾ ಟ್ವೀಟ್‍ಗೆ ಉತ್ತರ ಕೊಟ್ಟ ಡಿಕೆಶಿ

    ಬೆಂಗಳೂರು: ಯಾರ್ಯಾರಿಗೆ ಏನು ನೋವಿದೆಯೋ, ಏನು ದುಗುಡ ಇದೆಯೋ ಗೊತ್ತಿಲ್ಲ ಎಂದು ರಮ್ಯಾ ಟ್ವೀಟ್‍ಗೆ ಉತ್ತರವನ್ನು ಕೊಟ್ಟಿದ್ದಾರೆ.

    ನನ್ನನ್ನು ಟ್ರೋಲ್ ಮಾಡಲು ನೀವು ಯಾವುದೇ ತೊಂದರೆ ತೆಗೆದುಕೊಳ್ಳಬೇಡಿ. ನನ್ನನ್ನು ನಾನೇ ಟ್ರೋಲ್ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದೆ ನಟಿ ರಮ್ಯಾ ಪರೋಕ್ಷವಾಗಿ ಡಿ.ಕೆ.ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಈ ಹಿನ್ನೆಲೆ ಮಾಧ್ಯಮಗಳ ಮೂಲಕ ರಮ್ಯಾ ಟ್ವೀಟ್‌ ಉತ್ತರಿಸಿದ ಅವರು, ಯಾರ್ಯಾರಿಗೆ ಏನು ನೋವಿದೆಯೋ ಏನು ದುಗುಡ ಇದೆಯೋ ಗೊತ್ತಿಲ್ಲಾ ಎಂದರು. ಇದನ್ನೂ ಓದಿ: ಕಾಂಗ್ರೆಸ್‍ನಿಂದಲೇ ಟ್ರೋಲ್‍ಗೆ ಕರೆ – ನನ್ನನ್ನು ನಾನೇ ಟ್ರೋಲ್ ಮಾಡ್ಕೋತಿನಿ ಎಂದ ರಮ್ಯಾ

    ಈ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡ್ತೀವಿ. ನನಗೆ ರಮ್ಯಾ ಟ್ವೀಟ್ ವಿಚಾರ ಯಾವುದು ಗೊತ್ತಿಲ್ಲ. ಎಂಬಿಪಿ, ರಮ್ಯಾ ಇಬ್ರೂ ನಮ್ಮ ಪಕ್ಷದವರು. ಟ್ವೀಟ್ ವಿಚಾರದಲ್ಲಿ ಎಲ್ಲೋ ಗೊಂದಲವಾಗಿದೆ. ಅದನ್ನ ನಾವು ಸರಿಪಡಿಸಿಕೊಳ್ತೇವೆ ಎಂದು ಉತ್ತರಿಸಿದರು.

    ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮಕ್ಕೆ ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್‌ ಬಿಟ್ಟು ಪ್ರಸನ್ನ ಅವರು ಕಾಂಗ್ರೆಸ್‍ಗೆ ಸೇರ್ಪಡೆಗೊಂಡಿದ್ದಾರೆ.

  • ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್  – ಆರೋಪಿ ಅರೆಸ್ಟ್

    ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ – ಆರೋಪಿ ಅರೆಸ್ಟ್

    ಚಿಕ್ಕೋಡಿ: ಹಿಂದೂ ದೇವರಾದ ಶ್ರೀ ಕೃಷ್ಣನ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಚಿಕ್ಕೋಡಿ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ವರುಣಾ ಗ್ರಾಮದಲ್ಲಿ ರವೀಂದ್ರ ಹಾರೋಹಳ್ಳಿ ಅನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಇದನ್ನೂ ಓದಿ: ರಷ್ಯಾ ಪಡೆ ನನ್ನನ್ನು ಸೆರೆ ಹಿಡಿಯಲು ಭಾರೀ ಹತ್ತಿರದಲ್ಲಿತ್ತು: ಝೆಲೆನ್ಸ್ಕಿ

    ಏನಿದು ಘಟನೆ?
    ಶ್ರೀ ಕೃಷ್ಣನ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದಕ್ಕೆ ರವೀಂದ್ರ ಹಾಗೂ ಕರೋಶಿ ಗ್ರಾಮದ ಚೇತನ್ ಹೊನ್ನಗೋಳ ವಿರುದ್ಧ 2017 ಡಿಸೆಂಬರ್‌ನಲ್ಲಿ ಚಿಕ್ಕೋಡಿ  ಪೊಲೀಸ್ ಠಾಣೆಯಲ್ಲಿ ಚಂದ್ರಶೇಖರ್ ಮುಂಡೆ ದೂರು ದಾಖಲಿಸಿದ್ದರು. ಇದನ್ನೂ ಓದಿ: ಚೀನಿಗಳಿಗೆ ವೀಸಾ ಬಂದ್ ಮಾಡಿದ ಬೆನ್ನಲ್ಲೇ ಭಾರತೀಯ ವಿದ್ಯಾರ್ಥಿಗಳಿಗೆ ಬನ್ನಿ ಎಂದ ಚೀನಾ

    ಈ ಹಿಂದೆ ಚೇತನ್ ಹೊನ್ನಗೋಳ ಕೋರ್ಟ್‍ಗೆ ಹಾಜರಾಗಿದ್ದನು. ಆದರೆ 2019ರಿಂದ ಇದುವರೆಗೂ ರವೀಂದ್ರ ಕೋರ್ಟ್‍ಗೆ ಹಾಜರಾಗಿರಲಿಲ್ಲ. 2019 ರಿಂದಲು ಚಿಕ್ಕೋಡಿ ಪೊಲೀಸರ ಕೈಗೆ ಸಿಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್‍ನ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಮೊನ್ನೆ ಜಿಗ್ನೇಶ್ ಮೇವಾನಿ ಇಂದು ಹಾರೋಹಳ್ಳಿ ರವೀಂದ್ರ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮಾಡಿದ ಕಾರಣಕ್ಕಾಗಿ ದಲಿತ ಪರ ಹೋರಾಟಗಾರರ ಬಂಧನ ಆಗಿದೆ. ಹೋರಾಟಗಾರರು ಬರಹಗಾರರನ್ನು ಗುರಿಯಾಗಿಸಿಕೊಂಡು ಬಂಧಿಸುತ್ತಿರುವ ಬಿಜೆಪಿ ಸರ್ಕಾರದ ಫ್ಯಾಸಿಸ್ಟ್ ನಡೆಯನ್ನು ಖಂಡಿಸುತ್ತೇನೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ನಡೆಸುತ್ತಿರುವ ದಾಳಿ. ಕೂಡಲೇ ರವೀಂದ್ರನನ್ನ ಬಿಡುಗಡೆ ಮಾಡಬೇಕು ಎಂದು ಟ್ವೀಟ್ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

  • ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ಬೆಂಗಳೂರು: ಬಿಜೆಪಿ ನಾಯಕರೇ, ಅಮಿತ್‌ ಶಾ ಅವರ ಗುಲಾಮರಾಗಬೇಡಿ. ಕನ್ನಡ ತಾಯಿಯ ಸ್ವಾಭಿಮಾನಿ ಮಕ್ಕಳಾಗಿ ಎಂದು ಹಿಂದಿ ಹೇರಿಕೆ ವಿಚಾರವಾಗಿ ಅಮಿತ್‌ ಶಾ ಪರವಾಗಿ ಮಾತನಾಡಿದ ಬಿಜೆಪಿಗರಿಗೆ ವಿಧಾನಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

    ಹಿಂದಿ ಭಾಷೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆಗೆ ಬೆಂಬಲವಾಗಿ ನಿಂತ ಬಿಜೆಪಿ ನಾಯಕರನ್ನು ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಿಂದಿ ಪರ ವಕಾಲತು ಮಾಡಿದ ಕೂಡಲೇ ರಾಜ್ಯದ ಬಿಜೆಪಿ ನಾಯಕರು ಅವರನ್ನು ಓಲೈಸಲು ಸಾಲಲ್ಲಿ ನಿಂತಿದ್ದಾರೆ. ಬಿಜೆಪಿ ನಾಯಕರೇ, ಅಮಿತ್ ಶಾ ಅವರ ಗುಲಾಮರಾಗಬೇಡಿ, ಕನ್ನಡ ತಾಯಿಯ‌ ಸ್ವಾಭಿಮಾನಿ ಮಕ್ಕಳಾಗಿ ಎಂದು ಹೇಳಿದ್ದಾರೆ.

    ಟ್ವೀಟ್‌ನಲ್ಲೇನಿದೆ?
    ಧರ್ಮ ರಾಜಕಾರಣದ ಹಸು ಬರಡಾಗುತ್ತಿರುವುದನ್ನು ಕಂಡ ಬಿಜೆಪಿ ನಾಯಕರು ಈಗ ಭಾಷಾ ರಾಜಕಾರಣದ ಹಸುವಿನ ಕೆಚ್ಚಲಿಗೆ ಕೈ ಹಾಕಿದ್ದಾರೆ. ಈ ಸ್ವಾರ್ಥ ರಾಜಕಾರಣಕ್ಕೆ ಸ್ವಾಭಿಮಾನಿ ಕನ್ನಡಿಗರು ತಕ್ಕ ಉತ್ತರ ನೀಡಲಿದ್ದಾರೆ.

    ಭಾಷೆ, ಪ್ರದೇಶಗಳ ನಮ್ಮ ನೀತಿ-ನಿಲುವು “ಜಯಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ”… ಎನ್ನುವ ಕುವೆಂಪು ಅವರ ಕವಿ ನುಡಿಯಿಂದ ಪ್ರೇರಿತವಾದುದು. ಕನ್ನಡ ಭಾಷೆ ನಮಗೆ ರಾಜಕಾರಣದ ಆಯುಧ ಅಲ್ಲ, ಇದು ನಮ್ಮ ಜೀವದ ಉಸಿರು.

    ಇಂಗ್ಲೀಷ್, ಹಿಂದಿ ಎಲ್ಲ ಭಾಷೆಗಳ ಬಗ್ಗೆ ನಮಗೆ ಗೌರವ ಇದೆ, ಇವೆಲ್ಲವೂ ಬೇಕು. ಈ ಭಾಷೆಗಳ ಮೂಲಕ ಹರಿದು ಬರುವ ಜ್ಞಾನದ ಅಮೃತವೂ ಬೇಕು. ಆದರೆ ಕನ್ನಡಕ್ಕೆ ಮೊದಲ ಆದ್ಯತೆ, ಮಾತೃಭಾಷೆಗೆ ಮೊದಲ ಪೂಜೆ.

    ನಮ್ಮದು ಒಕ್ಕೂಟ ವ್ಯವಸ್ಥೆಯ ದೇಶ. ರಾಜ್ಯಗಳು ಭಾಷೆಯ ಆಧಾರದಲ್ಲಿ ರಚನೆಯಾಗಿವೆ. ಭಾಷಾವಾರು ಪ್ರಾಂತದಲ್ಲಿ ಪ್ರಾದೇಶಿಕ ಭಾಷೆಯನ್ನು ಮನ್ನಿಸಬೇಕಾಗುತ್ತದೆ. ಕನ್ನಡ ನಮಗೆ‌ ಮಾತೃಭಾಷೆಯೂ ಹೌದು,‌ ಪರಿಸರದ ಭಾಷೆ ಕೂಡಾ.

    ಹಿಂದಿ ನಮ್ಮ ರಾಷ್ಟ್ರಭಾಷೆ ಅಲ್ಲ. ಪ್ರತಿಯೊಂದು ರಾಜ್ಯ ಭಾಷೆಯೂ ನಮ್ಮ ರಾಷ್ಟ್ರ ಭಾಷೆ, ನೆಲದ ಸಾರ್ವಭೌಮ ಭಾಷೆ. ಇದನ್ನೂ ಸಂವಿಧಾನವೂ ಅಂಗೀಕರಿಸಿದೆ. ಸಂವಿಧಾನವನ್ನೇ ವಿರೋಧಿಸುವ ದೇಶದ್ರೋಹಿಗಳಿಗೆ ಈ ಸಾಮಾನ್ಯ ಜ್ಞಾನದ ಅರಿವಿರಲಿ.

    ಮಾತೃಭಾಷೆ ಎನ್ನುವುದು ಕೇವಲ ವರ್ಣಮಾಲೆ ಅಲ್ಲ, ಮಾತೃಭಾಷೆ ಎಂದರೆ ನಮ್ಮ ಭಾವನೆ, ಸಂಬಂಧ, ತನ್ನತನದ ಪ್ರಜ್ಞೆ, ಸಂಸ್ಕೃತಿ, ಇತಿಹಾಸ, ನೆಲ, ಜಲ, ಸಂಪತ್ತು ಎಲ್ಲವನ್ನೂ ಒಳಗೊಂಡ ಅಸ್ಮಿತೆ. ಇದು ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಮೂರ್ಖರಿಗೆ ತಿಳಿದಿರಲಿ.

    ಹಿಂದಿ ಭಾಷೆಯ ವಕಾಲತು ಮಾಡಲು ಹೊರಟಿರುವ ಸಿ.ಟಿ.ರವಿ, ಮುರುಗೇಶ್ ನಿರಾಣಿ, ರಮೇಶ್ ಜಿಗಜಿಣಗಿ ಮೊದಲಾದವರಿಗೆ ಆ ಭಾಷೆಯ ಬಗ್ಗೆಯೂ ಪ್ರೀತಿ ಇಲ್ಲ. ಇವರೆಲ್ಲ ತಮ್ಮ ದೆಹಲಿ ದೊರೆಗಳನ್ನು ಓಲೈಸಲು ಹೊರಟಿದ್ದಾರೆ.

    ಕನ್ನಡ‌ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು,‌ ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ. ಕಳ್ಳರ ಜೊತೆ ಶಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ.

    ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ,‌‌ ಅಪ್ಪಿಕೊಂಡ ಪಕ್ಷ. ಒಂದು ಧರ್ಮ,‌ ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ‌ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.

    ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ.‌ ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ.

    ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ‌ ಯಶಸ್ಸು ಕಾಣುವುದನ್ನು‌ ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.

    ಒಮ್ಮಿಂದೊಮ್ಮೆಲೇ ಬಿಜೆಪಿಯ ರಾಷ್ಟ್ರ-ರಾಜ್ಯ ನಾಯಕರೆಲ್ಲರೂ ಗುಂಪು ಕಟ್ಟಿಕೊಂಡು ಕನ್ನಡವನ್ನು ಧಿಕ್ಕರಿಸಿ ಹಿಂದಿ ಭಾಷೆಯನ್ನು ತಲೆಮೇಲೆ ಹೊತ್ತು ಮೆರವಣಿಗೆ ಮಾಡಲು ಹೊರಟಿರುವುದನ್ನು ‘ಸಾಂಸ್ಕೃತಿಕ ಭಯೋತ್ಪಾದನೆ’ ಎನ್ನದೆ ಬೇರೇನು ಹೇಳಲು ಸಾಧ್ಯ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

  • ಬಾರಾಮುಲ್ಲಾದಲ್ಲಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಾಯ

    ಬಾರಾಮುಲ್ಲಾದಲ್ಲಿ ಬಸ್, ಟ್ರಕ್ ಮುಖಾಮುಖಿ ಡಿಕ್ಕಿ – ಓರ್ವ ಸಾವು, 6 ಮಂದಿಗೆ ಗಾಯ

    ಶ್ರೀನಗರ: ಬಸ್, ಟ್ರಕ್ ಮುಖಾಮುಖಿ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿ, 6 ಮಂದಿ ಗಾಯಗೊಂಡ ಘಟನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

    ಕುಪ್ವಾರ ಜಿಲ್ಲೆಯ ಸರಪಂಚ್ ಫಯಾಜ್ ಅಹ್ಮದ್ ಭಟ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಪೊಲೀಸರು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದಿಯನ್ನ ರಾಷ್ಟ್ರೀಯ ಭಾಷೆಯನ್ನಾಗಿ ಮಾಡಿದ್ರೆ ತಪ್ಪೇನಿಲ್ಲ: ಮುರುಗೇಶ್ ನಿರಾಣಿ

    ಘಟನೆ ಕುರಿತು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸರಪಂಚ್ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸರಪಂಚ್ ಫಯಾಜ್ ಅಹ್ಮದ್ ಭಟ್ ಅವರ ದುರದೃಷ್ಟಕರ ನಿಧನದಿಂದ ನೋವಾಗಿದೆ. ಈ ದುಃಖದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬದೊಂದಿಗೆ ಇವೆ. ಗಾಯಾಳುಗಳಿಗೆ ಸಾಧ್ಯವಾದಷ್ಟು ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದೇವೆ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭಾಷಾವಾರು ಪ್ರಾಂತ್ಯಗಳನ್ನು ರಚಿಸಿರುವುದನ್ನು ನೆನಪಿಸಬಯಸುತ್ತೇನೆ: ಡಿಕೆಶಿ

  • ಮೋದಿಯಿಂದ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಕಿಡಿ

    ಮೋದಿಯಿಂದ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ: ರಾಹುಲ್ ಕಿಡಿ

    ನವದೆಹಲಿ: ಪ್ರಧಾನಿ ಮೋದಿಯವರ ಕೆಲ ನಿರ್ಧಾರಗಳಿಂದಾಗಿ 45 ಕೋಟಿಗೂ ಹೆಚ್ಚು ಜನರು ಉದ್ಯೋಗ ಪಡೆಯುವ ಭರವಸೆ ಕಳೆದುಕೊಂಡಿದ್ದಾರೆ ಎಂದು ಪ್ರದಾನಿ ಮೋದಿಯವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ನಿರುದ್ಯೋಗ ಸಮಸ್ಯೆಯ ಬಗ್ಗೆ ಟ್ವೀಟ್ ಮಾಡಿ, ಕಳೆದ ಐದು ವರ್ಷಗಳಲ್ಲಿ 2.1 ಕೋಟಿ ಉದ್ಯೋಗಗಳು ಕಳೆದುಹೋಗಿವೆ. 45 ಕೋಟಿ ಜನರು ಉದ್ಯೋಗಕ್ಕಾಗಿ ಹುಡುಕುವುದನ್ನು ನಿಲ್ಲಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಆನೆ ದಂತದಲ್ಲಿ ಚೆಸ್ ಪಾನ್ ಕೆತ್ತನೆ – ಮಾರಾಟ ಮಾಡುವಾಗ ಸಿಕ್ಕಿಬಿದ್ದ

    MODi

    ಒಂದು ದಿನದ ಹಿಂದೆ, ರಾಹುಲ್ ಗಾಂಧಿ ಅವರು ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‍ಇ) ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದು ವಾಸ್ತವವಾಗಿ ‘ಸೆಂಟ್ರಲ್ ಬೋರ್ಡ್ ಆಫ್ ಸಪ್ರೆಸಿಂಗ್ ಎಜುಕೇಶನ್’ ಎಂದು ಹೇಳಿದರು. ಸಿಬಿಎಸ್‍ಸಿ ಬೋರ್ಡ್ 10 ಮತ್ತು 12 ನೇ ತರಗತಿಗಳ ಪಠ್ಯಕ್ರಮವನ್ನು ಮಾರ್ಪಡಿಸಿದ ಕೆಲವು ದಿನಗಳ ನಂತರ ಅವರು ಈ ಹೇಳಿಕೆ ನೀಡಿದ್ದಾರೆ.

    ಪಠ್ಯಕ್ರಮದ ಮಾರ್ಪಾಡಿನ ಕುರಿತು ಗಾಂಧಿ ವಂಶಸ್ಥರು ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಗುರಿಯಾಗಿಟ್ಟುಕೊಂಡು ಅದನ್ನು ‘ರಾಷ್ಟ್ರೀಯ ಶಿಕ್ಷಾ ಛೇದಕ’ ಎಂದು ಕರೆದರು. ಆಂಗ್ಲೋ-ಏಷ್ಯನ್ ಪ್ರಾಂತ್ಯಗಳಲ್ಲಿ ಇಸ್ಲಾಮಿಕ್ ಸಾಮ್ರಾಜ್ಯಗಳ ಉದಯ, ಮೊಘಲ್ ನ್ಯಾಯಾಲಯಗಳ ವೃತ್ತಾಂತಗಳು, ಶೀತಲ ಸಮರ ಮತ್ತು ಕೈಗಾರಿಕಾ ಕ್ರಾಂತಿಯನ್ನು 11 ಮತ್ತು 12 ನೇ ತರಗತಿಗಳ ಇತಿಹಾಸ ಮತ್ತು ರಾಜಕೀಯ ವಿಜ್ಞಾನ ಪಠ್ಯಕ್ರಮದಿಂದ ಸಿಬಿಎಸ್‍ಸಿ ತೆಗೆದುಹಾಕಿದೆ. ಆದ್ದರಿಂದ ರಾಹುಲ್ ಗಾಂಧಿ ಸಿಬಿಎಸ್‍ಸಿ ವಿರುದ್ಧ ಸಿಡಿದಿದ್ದರು. ಇದನ್ನೂ ಓದಿ:  ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ 

    ಎಪ್ರಿಲ್ 9 ರಂದು ದೆಹಲಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ರಾಹುಲ್ ಗಾಂಧಿ ಅವರು ಸಂವಿಧಾನವನ್ನು ಉಳಿಸಲು ನಾವು ಆರ್‍ಎಸ್‍ಎಸ್ ಕೈಯಲ್ಲಿರುವ ಸಂಸ್ಥೆಗಳನ್ನು ರಕ್ಷಿಸಬೇಕು ಎಂದು ಹೇಳುವ ಮೂಲಕ ಆರ್‍ಎಸ್‍ಎಸ್ ವಿರುದ್ಧ ವಾಗ್ದಾಳಿ ನಡೆಸಿದರು.