Tag: ಡಾ.ಆರ್.ಸೆಲ್ವಮಣಿ

  • ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಹಿಜಬ್ ತೀರ್ಪು: ಮಂಗಳವಾರ ಉಡುಪಿ, ಶಿವಮೊಗ್ಗ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

    ಉಡುಪಿ/ಶಿವಮೊಗ್ಗ: ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಿ ಎಂದು ಉಡುಪಿ ಮತ್ತು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆದೇಶ ಕೊಟ್ಟಿದ್ದಾರೆ.

    ಹೈಕೋರ್ಟ್‍ನಲ್ಲಿ ಹಿಜಬ್ ತೀರ್ಪು ವಿಚಾರ ನಾಳೆ ಬಹಿರಂಗವಾಗಲಿದೆ. ಈ ಹಿನ್ನೆಲೆ ಶಾಲೆ-ಕಾಲೇಜುಗಳಲ್ಲಿ ಗಲಾಟೆಯಾಗುವ ಸಾಧ್ಯತೆ ಇದೆ ಎಂಬ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಇಂದು ಸಂಜೆ ಈ ಆದೇಶವನ್ನು ಹೊರಡಿಸಿದ್ದಾರೆ. ಇದನ್ನೂ ಓದಿ: ನಾಳೆ ಬೆಳಗ್ಗೆ 10:30ಕ್ಕೆ ಹಿಜಬ್‌ ಹೈಕೋರ್ಟ್‌ ತೀರ್ಪು

    ಶಿವಮೊಗ್ಗದಲ್ಲಿಯೂ ಹಿಜಬ್ ಭಾರೀ ಸದ್ದು ಮಾಡಿರುವ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಅದರ ಜೊತೆಗೆ ಶಿವಮೊಗ್ಗ ಜಿಲ್ಲೆಯಾದ್ಯಂತ 144 ಸೆಕ್ಷನ್ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

    ಈ ಅವಧಿಯಲ್ಲಿ ಸಮವಸ್ತ್ರ ವಿವಾದ ವಿಚಾರವಾಗಿ ಸಾರ್ವಜನಿಕ ಸ್ಥಳಗಳಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಕೋರ್ಟ್ ತೀರ್ಪಿನ ವಿಚಾರವಾಗಿ ಯಾವುದೇ ರೀತಿಯ ಸಂಭ್ರಮಾಚರಣೆ ಅಥವಾ ಪ್ರತಿಭಟನೆಯನ್ನು ನಡೆಸುವಂತಿಲ್ಲ. ಶಾಲಾ ಕಾಲೇಜು ಆವರಣದ 200 ಮೀಟರ್ ವ್ಯಾಪ್ತಿಯಲ್ಲಿ ಶಾಲಾ ಕಾಲೇಜು ಸಿಬ್ಬಂದಿ, ಆಯಾ ಶಾಲಾ ಕಾಲೇಜು ವಿದ್ಯಾರ್ಥಿಗಳನ್ನು ಹೊರತುಪಡಿಸಿ, ಬೇರೆ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಗುಂಪುಗೂಡುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: RSS ಪಥಸಂಚಲನ – ರಸ್ತೆಯುದ್ದಕ್ಕೂ ರಂಗೋಲಿ ಬಿಡಿಸಿ ಹೂಹಾರ ಹಾಕಿ ಸ್ವಾಗತ

    ಹೈಕೋರ್ಟ್ ನೀಡುವ ತೀರ್ಪಿಗೆ ಜನರು ಬದ್ಧರಾಗಿದ್ದು, ಕಾನೂನು ಕೈಗೆತ್ತಿಕೊಳ್ಳದೆ ಶಾಂತಿ ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು. ಯಾವುದೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶವಿದೆ. ನಿಷೇಧಾಜ್ಞೆ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

  • 9 ಎಫ್‍ಐಆರ್, 7 ಮಂದಿ ಅರೆಸ್ಟ್‌ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ

    9 ಎಫ್‍ಐಆರ್, 7 ಮಂದಿ ಅರೆಸ್ಟ್‌ – ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ನಿಷೇಧಾಜ್ಞೆ

    ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ 9 ಎಫ್‍ಐಆರ್ ದಾಖಲು ಮಾಡಲಾಗಿದೆ.

    ಎಸ್‍ಪಿ ಲಕ್ಷ್ಮೀ ಪ್ರಸಾದ್ ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಜಂಟಿ ಸುದ್ದಿಗೋಷ್ಠಿ ನಡೆಸಿ ಹರ್ಷ ಕೊಲೆ ಸಂಬಂಧ ಆರೋಪಿಗಳ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಶಿವಮೊಗ್ಗ ನಗರದಲ್ಲಿ ಶುಕ್ರವಾರದ ವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಕಾರ್ಯಕರ್ತ ಕೊಲೆ ಪ್ರಕರಣ – 7ನೇ ಆರೋಪಿ ಅರೆಸ್ಟ್‌

    ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್‍ಪಿ ಲಕ್ಷ್ಮೀ ಪ್ರಸಾದ್, ಹಿಂಸಾಚಾರದ ಬಗ್ಗೆ 9 ಎಫ್‍ಐಆರ್ ದಾಖಲಾಗಿವೆ. 18 ವಾಹನಗಳು ಜಖಂ ಆಗಿವೆ ಈ ಬಗ್ಗೆ ಆರು ಮಂದಿ ದೂರು ನೀಡಿದ್ದಾರೆ. ಈಗಾಗಲೇ 7 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ. ಆರೋಪಿ ಪಟ್ಟಿಯಲ್ಲಿ  ಎ1-ಕಾಸೀಫ್, ಎ2-ನದೀಮ್, ಎ3-ಆಸೀಫ್ ಖಾನ್ ಅಲಿಯಾಸ್ ಚಿಕ್ಕೂ, ಎ4-ರಿಯಾನ್ ಷರೀಪ್ ಖಾಸೀ, ಎ5- ನಿಹಾನ್ ಮುಜಾಹೀದ್, ಎ6- ಅಬ್ದುಲ್ ಆಫಾನ್, ಎ7- ಜಿಲಾನಿ ಬಂಧಿತರೆಲ್ಲರು ಶಿವಮೊಗ್ಗದವರು. ಬಂಧಿತರಲ್ಲಿ ಎ-1 ಮತ್ತು ಎ-2 ಆರೋಪಿಗಳು 2016-17ರಲ್ಲಿ ನಡೆದ ಎರಡು ಕೇಸ್‍ಗಳಲ್ಲಿ ಆರೋಪಿಗಳಾಗಿದ್ದರು. ಎ1 ಮತ್ತು ಎ2 ಆರೋಪಿಗಳನ್ನು ಕೋರ್ಟ್‍ಗೆ ಹಾಜರು ಪಡಿಸಿ, ಕಸ್ಟಡಿಗೆ ಕೇಳಿದ್ದೇವೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಈಶ್ವರಪ್ಪನವರಿಗೆ ಹಾಗೂ ಸುಪಾರಿ ಕೊಟ್ಟವರಿಗೆ ಏನೋ ಸಂಬಂಧ ಇದೆ: ಎಸ್‍ಡಿಪಿಐ

    ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾತನಾಡಿ, ಹರ್ಷ ಕೊಲೆಯಿಂದ ಶಿವಮೊಗ್ಗದಲ್ಲಿ ಸಂಘರ್ಷ ನಡೆದಿದೆ. ಘಟನೆಯಲ್ಲಿ 18 ವಾಹನಗಳು ಜಖಂ ಆಗಿದೆ. ಆಸ್ತಿಪಾಸ್ತಿ ಹಾನಿ ಬಗ್ಗೆ 6 ಮಂದಿ ದೂರು ನೀಡಿದ್ದಾರೆ. 2 ಆರೋಪಿಗಳನ್ನು ಕೋರ್ಟ್‍ಗೆ ಹಾಜರು ಪಡಿಸಿ ಪೊಲೀಸ್ ಕಸ್ಟಡಿಗೆ ಕೇಳಲಾಗಿದೆ. ಶಿವಮೊಗ್ಗ ನಗರದಲ್ಲಿ ಶುಕ್ರವಾರದವರೆಗೆ ಕರ್ಫ್ಯೂ ನಿಯಮ ಜಾರಿಯಲ್ಲಿರಲಿದೆ. ಬೆಳಗ್ಗೆ 9 ಗಂಟೆಯ ತನಕ ಅತ್ಯಗತ್ಯ ವಸ್ತುಗಳ ಮಾರಾಟಕ್ಕಾಗಿ ಅವಕಾಶವಿದೆ. ಶುಕ್ರವಾರದವೆರಗೂ ಶಾಲಾ-ಕಾಲೇಜುಗಳು ರಜೆ ನೀಡಲಾಗಿದೆ ಎಂದರು.