Tag: ಡಾ ಕೆ ಸುಧಾಕರ್

  • IIMB ಯಿಂದ ‘ಹಾಸ್ಪಿಟಲ್ ಮ್ಯಾನೇಜ್‍ಮೆಂಟ್’ ಕೋರ್ಸ್ ಆರಂಭ – ಡಾ.ಕೆ.ಸುಧಾಕರ್ ಕನಸು ಸಾಕಾರ

    IIMB ಯಿಂದ ‘ಹಾಸ್ಪಿಟಲ್ ಮ್ಯಾನೇಜ್‍ಮೆಂಟ್’ ಕೋರ್ಸ್ ಆರಂಭ – ಡಾ.ಕೆ.ಸುಧಾಕರ್ ಕನಸು ಸಾಕಾರ

    ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳನ್ನು ನಿರ್ವಹಣೆ ಮಾಡುವುದರ ಜೊತೆಗೆ, ಇಡೀ ಆಸ್ಪತ್ರೆಯ ಆಡಳಿತದ ನಿರ್ವಹಣೆ ಮಾಡುವ ನಾಯಕತ್ವ ಹೊಂದಿರಬೇಕು ಎಂಬುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ಕನಸು. ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‍ಮೆಂಟ್ (ಐಐಎಂಬಿ) ನೆರವಿನಿಂದ ಸಚಿವರ ಕನಸು ಈಗ ಸಾಕಾರಗೊಂಡಿದೆ.

    ಐಐಎಂಬಿಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಹೊಸ ‘ಹಾಸ್ಪಿಟಲ್ ಮ್ಯಾನೇಜ್‍ಮೆಂಟ್’ ಕೋರ್ಸ್‍ಗೆ ಚಾಲನೆ ದೊರೆತಿದ್ದು, ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆಸ್ಪತ್ರೆಗಳಲ್ಲಿ ವೈದ್ಯರು ರೋಗಿಗಳಿಗೆ ತಪಾಸಣೆ, ಚಿಕಿತ್ಸೆಯ ಸೇವೆ ನೀಡುತ್ತಾರೆ. ಆದರೆ ಆಸ್ಪತ್ರೆಯ ಸ್ವಚ್ಛತೆಯ ನಿರ್ವಹಣೆ, ಔಷಧಿ ಪೂರೈಕೆ, ಯಂತ್ರೋಪಕರಣಗಳ ಸುಸ್ಥಿತಿ ಕಾಪಾಡುವುದು, ಸಿಬ್ಬಂದಿ ನಿರ್ವಹಣೆ ಸೇರಿದಂತೆ ಹಲವಾರು ಕಾರ್ಯಗಳಿಗೆ ಆಡಳಿತದ ಅನುಭವ ಅತಿ ಅಗತ್ಯ. ಆಸ್ಪತ್ರೆಯೊಂದರ ಸಮಗ್ರ ಪ್ರಗತಿಗೆ ವೈದ್ಯರೇ ಮುಂದಾಳತ್ವ ವಹಿಸಿ ನಿರ್ವಹಣೆ ಮಾಡುವುದು ಮುಖ್ಯ. ಇದಕ್ಕಾಗಿ ಒಂದು ವೃತ್ತಿಪರ ಕೋರ್ಸ್ ಆರಂಭಿಸಬೇಕೆಂದು ಸಚಿವರು ಐಐಎಂಬಿಯ ನಿರ್ದೇಶಕ ಪ್ರೊ.ರಿಷಿಕೇಶ ಟಿ.ಕೃಷ್ಣನ್ ಹಾಗೂ ಡಾ.ದೇವಿ ಶೆಟ್ಟಿ ಅವರೊಂದಿಗೆ ಈ ಹಿಂದೆ ಚರ್ಚೆ ನಡೆಸಿದ್ದರು. ವೈದ್ಯರು ಸೇರಿದಂತೆ ವೈದ್ಯಕೀಯ ಕ್ಷೇತ್ರದ ಎಲ್ಲರೂ ಆಡಳಿತದ ಕೌಶಲ್ಯ ಪಡೆಯಬೇಕು. ಮುಖ್ಯವಾಗಿ ಸರ್ಕಾರಿ ಆರೋಗ್ಯ ಕ್ಷೇತ್ರ ಪರಿಣಾಮಕಾರಿಯಾಗಿ ಕೆಲಸ ಮಾಡಲು ಈ ಕೌಶಲ್ಯ ತರಬೇತಿ ಅಗತ್ಯ ಎಂದು ಸಚಿವರು ಪ್ರತಿಪಾದಿಸಿದ್ದರು. ಅದರಂತೆ, ಈಗ ಕೋರ್ಸ್ ಆರಂಭವಾಗಿದೆ. ಇದನ್ನೂ ಓದಿ: ಇಂದಿನಿಂದ ಪಂಜಾಬ್ ಪ್ರತಿಮನೆಗೂ 300 ಯೂನಿಟ್ ಉಚಿತ ವಿದ್ಯುತ್ ಪೂರೈಕೆ: ಭಗವಂತ್ ಮಾನ್

    ಐಐಎಂಬಿಯ ಪರಿಣತ ಉಪನ್ಯಾಸಕರು ಈ ಕೋರ್ಸ್ ನಡೆಸಿಕೊಡಲಿದ್ದು, ವೈದ್ಯರಿಗೆ ಸೂಕ್ತ ತರಬೇತಿ ನೀಡಲಿದ್ದಾರೆ. ಇದರಿಂದಾಗಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳು ಹಾಗೂ ವೈದ್ಯಕೀಯ ಕಾಲೇಜ್‍ಗಳಲ್ಲಿ ಆಡಳಿತ ನಡೆಸುವ ಪರಿಣತಿಯನ್ನು ವೈದ್ಯರು ಹೊಂದಬಹುದಾಗಿದೆ. ಆಸ್ಪತ್ರೆಗಳಲ್ಲಿ ಉತ್ತಮ ಆಡಳಿತವೂ ಅಗತ್ಯ. ಆಡಳಿತದಲ್ಲಿ ದೋಷಗಳಿದ್ದರೆ ಅದು ರೋಗಿಗಳ ಚಿಕಿತ್ಸೆಯ ಮೇಲೂ ನಕಾರಾತ್ಮಕ ಪರಿಣಾಮ ಬೀರುತ್ತದೆ. ಐಐಎಂಬಿ ಆರಂಭಿಸಿರುವ ಈ ಕೋರ್ಸ್‍ನಿಂದ ನನ್ನ ಕನಸು ಸಾಕಾರಗೊಂಡಿದೆ ಎಂದರು. ಇದನ್ನೂ ಓದಿ: ಜುಲೈ 5ರ ವರೆಗೆ ರಾಜ್ಯದಲ್ಲಿ ಭಾರೀ ಮಳೆ

    ಕಾರ್ಪೊರೇಟ್‌ ಆಸ್ಪತ್ರೆಗಳು ಉತ್ತಮ ಆಡಳಿತ ವ್ಯವಸ್ಥೆ ಹೊಂದಿವೆ. ಖಾಸಗಿಗೆ ಹೋಲಿಸಿದರೆ, ಸರ್ಕಾರ ತನ್ನ ಆಸ್ಪತ್ರೆಗಳಿಗೆ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದರೆ ವೈದ್ಯರಿಗೆ ಆಡಳಿತದ ನಿರ್ವಹಣೆಯ ಕೊರತೆ ಇದೆ. ಆದ್ದರಿಂದ ಈ ಹೊಸ ಕೋರ್ಸ್ ವೈದ್ಯರಿಗೆ ಬಹಳ ನೆರವಾಗಲಿದೆ. ಈ ಕೋರ್ಸ್‍ನಿಂದ ರಾಜ್ಯ ಮಾತ್ರವಲ್ಲದೆ, ಇಡೀ ದೇಶದ ವೈದ್ಯರಿಗೆ ನೆರವಾಗಲಿದೆ. ಅಲ್ಲದೆ, ರಾಜ್ಯದ ಸರ್ಕಾರಿ ಆರೋಗ್ಯ ಕ್ಷೇತ್ರ ದೊಡ್ಡ ಸುಧಾರಣೆ ಕಾಣಲು ನೆರವಾಗಲಿದೆ ಎಂದು ಸ್ಪಷ್ಟಪಡಿಸಿದರು.

    Live Tv

  • ದೊಡ್ಡವರಾದವರು ತನಿಖಾ ಸಂಸ್ಥೆಗಳಿಗೆ ಹೋಗಬಾರದು ಅಂತ ಇದೆಯಾ?: ಕಾಂಗ್ರೆಸ್ ವಿರುದ್ಧ ಸುಧಾಕರ್ ವಾಗ್ದಾಳಿ

    ದೊಡ್ಡವರಾದವರು ತನಿಖಾ ಸಂಸ್ಥೆಗಳಿಗೆ ಹೋಗಬಾರದು ಅಂತ ಇದೆಯಾ?: ಕಾಂಗ್ರೆಸ್ ವಿರುದ್ಧ ಸುಧಾಕರ್ ವಾಗ್ದಾಳಿ

    ಚಿಕ್ಕಬಳ್ಳಾಪುರ: ರಾಹುಲ್ ಗಾಂಧಿ ಇಡಿ ವಿಚಾರಣೆಗೆ ತೆರಳುವ ವೇಳೆ ಕಾಂಗ್ರೆಸ್ ನಡೆಸಿದ ಪ್ರತಿಭಟನೆ ವಿಚಾರಕ್ಕೆ ಸಂಬಂಧಪಟ್ಟಂತೆ ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಇಡಿ, ಸಿಬಿಐ, ಐಟಿ ಎಲ್ಲವೂ ಇವತ್ತು. ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಯಾರ ಮೇಲೂ ಕೇಸ್ ಮಾಡಿಲ್ವಾ? ಎ ರಾಜಾ ಯಾರ ಕಾಲದಲ್ಲಿ ಜೈಲಿಗೆ ಹೋದರು? 2ಜಿ ಯಾರ ಅವಧಿಯಲ್ಲಿ ಆಯ್ತು? ಎಷ್ಟು ಜನ ಜೈಲಿಗೆ ಹೋಗಿಲ್ಲ? ಹೀಗಾಗಿ ಕಾಂಗ್ರೆಸ್‌ನವರು ಜೈಲಿಗೆ ಹಾಕಿಸಿದ್ರು ಎಂದು ಹೇಳೋಕೆ ಆಗುತ್ತಾ? ತನಿಖಾ ಸಂಸ್ಥೆಗಳ ಬಗ್ಗೆ ಗೌರವ ಇಟ್ಕೋಬೇಕು. ವಿಚಾರಣೆ ಮಾಡಲಿ, ಇನ್ನೂ ಏನು ಆಗಿಲ್ಲ. ಕುಂಬಳಕಾಯಿ ಕಳ್ಳ ಎಂದರೆ ಯಾಕೆ ಹೆಗಲು ಮುಟ್ಟಿಕೊಂಡು ನೋಡ್ಕೋತೀರಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಏನಿದು ಅನ್ಯಾಯ? ಏನು ಕ್ರೈಂ ಮಾಡಿದ್ದಾರೆ? ಅದು ರಾಷ್ಟ್ರದ ಆಸ್ತಿ, ಸ್ವಂತದ್ದಲ್ಲ: ಡಿಕೆಶಿ ಕೆಂಡಾಮಂಡಲ

    ಇಡೀ ದೇಶದಲ್ಲಿ ಕಾಂಗ್ರೆಸ್‌ನವರು ಯಾಕೆ ಪ್ರತಿಭಟನೆ ಮಾಡುತ್ತಿದ್ದೀರಾ? ಈ ದೇಶದಲ್ಲಿ ಯಾರ ಮೇಲೂ ಕೇಸ್ ಮಾಡಬಾರದಾ? ದೊಡ್ಡವರು ಉನ್ನತ ಸ್ಥಾನದಲ್ಲಿ ಇರುವವರು, ಶ್ರೀಮಂತರ ಮೇಲೆ ಕೇಸ್ ಮಾಡಬಾರದಾ? ಕಾನೂನು ತೆಗೆದುಬಿಡೋಣವಾ? ಎಲ್ಲಾ ಜನ ನೋಡುತ್ತಿದ್ದಾರೆ, ಎಚ್ಚರಿಕೆಯಿಂದ ಇರಬೇಕು. ವಿರೋಧ ಪಕ್ಷದ ನಾಯಕರುಗಳಿಗೆ ಮನವಿ ಮಾಡುತ್ತೇನೆ. ಇದೇ ರೀತಿ ಮುಂದುವರೆದರೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

    ಜನಸಾಮಾನ್ಯರ ಮಧ್ಯೆ ಕಾನೂನಿಗೆ ಗೌರವ ಕೊಡುವುದು, ಸಂವಿಧಾನಕ್ಕೆ ಗೌರವ ಕೊಡುವುದು ಒಳ್ಳೆಯದು. ಇವರು ಸಂವಿಧಾನದ ಪರವಾದ ಕೆಲಸ ಮಾಡುತ್ತಿದ್ದಾರಾ? ದೊಡ್ಡವರಾದವರು ತನಿಖೆ ಸಂಸ್ಥೆಗಳಿಗೆ ಹೋಗಬಾರದು ಅಂತ ಇದೆಯಾ ಎಂದು ಗುಡುಗಿದರು. ಇದನ್ನೂ ಓದಿ: ನ್ಯಾಷನಲ್‌ ಹೆರಾಲ್ಡ್‌ ಸೋನಿಯಾ, ರಾಹುಲ್‌ ಗಾಂಧಿ ವೈಯಕ್ತಿಕ ಆಸ್ತಿಯಲ್ಲ: ಮಲ್ಲಿಕಾರ್ಜುನ ಖರ್ಗೆ

    ಇದೇ ವೇಳೆ ವೀರಪ್ಪ ಮೊಯ್ಲಿಗೆ ಟಾಂಗ್ ನೀಡಿದ ಸುಧಾಕರ್, ವೀರಪ್ಪ ಮೊಯ್ಲಿ ಬಂದರೆ ಮತ್ತೆ ಎತ್ತಿನಹೊಳೆ ನೀರು ಬರುವುದಿಲ್ಲ. ವೀರಪ್ಪ ಮೊಯ್ಲಿ 10 ವರ್ಷ ಸುಳ್ಳು ಹೇಳಿ ಮನೆಗೆ ಹೋಗಿದ್ದಾರೆ. ಈಗ ಅವರು ಬರದೇ ಇದ್ದರೆ ಎತ್ತಿನಹೊಳೆ ನೀರು ಬರಲಿದೆ. ಅವರೇನಾದ್ರೂ ಮತ್ತೆ ಬಂದರೆ ನೀರು ಮಾಯವಾಗಲಿದೆ ಎಂದು ವೀರಪ್ಪ ಮೊಯ್ಲಿ ವಿರುದ್ಧ ಸಚಿವ ಸುಧಾಕರ್ ವ್ಯಂಗ್ಯ ಮಾಡಿದರು.

  • ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್‌ ದೆಹಲಿಗೆ ಹೊರಟ ಸಿಎಂ

    ನಿನ್ನೆ ರಾತ್ರಿ ರಹಸ್ಯ ಸಭೆ- ಇಂದು ದಿಢೀರ್‌ ದೆಹಲಿಗೆ ಹೊರಟ ಸಿಎಂ

    ಬೆಂಗಳೂರು: ಇಂದು ಮಧ್ಯಾಹ್ನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಪ್ರವಾಸ ಬೆಳಸಲಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.

    ದಾವೋಸ್ ಪ್ರವಾಸಕ್ಕೂ ಮುನ್ನ ಬೊಮ್ಮಾಯಿ ಅವರು ದೆಹಲಿಗೆ ದಿಢೀರ್ ಭೇಟಿ ನೀಡುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ. ನಿನ್ನೆ ರಾತ್ರಿ ಸಚಿವರೊಬ್ಬರ ಮನೆಯಲ್ಲಿ ಸಿಎಂ ರಹಸ್ಯ ಸಭೆ ನಡೆಸಿದ್ದು, ಈ ಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಸಿ.ಸಿ.ಪಾಟೀಲ್, ಆರ್.ಅಶೋಕ್ ಭಾಗಿಯಾಗಿದ್ದರು. ಇದನ್ನೂ ಓದಿ: ಬಿಪಿಎಲ್ ಇರಲಿ ಯಾವುದೇ ಕಾರ್ಡ್ ಇದ್ರೂ ಸರ್ಕಾರ ಪರಿಹಾರ ಕೊಡ್ಬೇಕು: ಸಿದ್ದರಾಮಯ್ಯ

    BASAVARAJ BOMMAI

    ನಿನ್ನೆ ಸಿಟಿ ರೌಂಡ್ಸ್, ಬಿಬಿಎಂಪಿ ಸಭೆ, ಅಧಿಕಾರಿಗಳ ಸಭೆಯಲ್ಲಿ ಸಿಎಂ ಬೊಮ್ಮಾಯಿ ನಿರತರಾಗಿದ್ದರು. ಆದರೆ ರಾತ್ರಿ ಆಗುತ್ತಿದ್ದಂತೆ ಆಪ್ತರ ಜೊತೆ ಡಿನ್ನರ್ ಪಾಲಿಟಿಕ್ಸ್ ನಡೆಸಿದರಾ ಎಂಬ ಪ್ರಶ್ನೆ ಇದೀಗ ಮೂಡುತ್ತಿದೆ. ದೆಹಲಿಗೆ ದಿಢೀರ್ ಆಗಿ ಪ್ರವಾಸ ಬೆಳೆಸಿರುವುದರ ಉದ್ದೇಶ, ಸಂಪುಟ ಪುನಾರಚನೆ ಚರ್ಚೆಯೋ ಅಥವಾ ಪರಿಷತ್ ಅಭ್ಯರ್ಥಿಗಳ ಚರ್ಚೆಯೋ, ಮತ್ತೇನಾದರೋ ಎಂಬುದು ಇದೀಗ ಚರ್ಚೆ ಆಗುತ್ತಿದೆ. ಈ ನಡುವೆ ನಿನ್ನೆಯೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೆಹಲಿ ತಲುಪಿ ಇಲಾಖೆಯ ವಿವಿಧ ಕಾರ್ಯಗಳಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಮಳೆ ರೌಂಡ್ಸ್ ಬಿಟ್ಟು ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ ಸಿಎಂ

  • ಚಿಕ್ಕಬಳ್ಳಾಪುರದಲ್ಲಿ ನಡೆದ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ: ಅರುಣ್ ಸಿಂಗ್ ಶ್ಲಾಘನೆ

    ಚಿಕ್ಕಬಳ್ಳಾಪುರದಲ್ಲಿ ನಡೆದ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ: ಅರುಣ್ ಸಿಂಗ್ ಶ್ಲಾಘನೆ

    ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನಡೆದ ಎರಡು ದಿನಗಳ ಆರೋಗ್ಯ ಮೇಳ ಜಾಗತಿಕ ದಾಖಲೆ ಬರೆದಿದೆ. ಪ್ರಧಾನ ಮಂತ್ರಿಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರ ಮೆಚ್ಚಿ ಶ್ಲಾಘಿಸುವಂತ ಮೇಳ ಇದಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಕಾರ್ಯಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ಪ್ರಧಾನ ಕಾರ್ಯದರ್ಶಿ  ಅರುಣ್ ಸಿಂಗ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.


    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಡಾ.ಕೆ.ಸುಧಾಕರ್ ಫೌಂಡೇಶನ್ ಸಹಯೋಗದಲ್ಲಿ ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿತ್ತು. ಚಿಕ್ಕಬಳ್ಳಾಪುರ ನಗರದ ಹೊರವಲಯದ ಎಸ್‍ಜೆಸಿಐಟಿ ಕಾಲೇಜ್ ಆವರಣದಲ್ಲಿ ಹಮ್ಮಿಕೊಂಡಿರುವ ಬೃಹತ್ ಆರೋಗ್ಯ ಮೇಳದ ಎರಡನೇ ದಿನವಾದ ಇಂದು ಅರುಣ್ ಸಿಂಗ್ ಭೇಟಿ ನೀಡಿ ಮೆಚ್ಚುಗೆ ಸೂಚಿಸಿದ್ದಾರೆ. ಇದನ್ನೂ ಓದಿ: ದಲಿತ ಸಿಎಂ ಆಗ್ತಾರೆ ಅಂತ ಕನಸು ಕಾಣೋನು ಹುಚ್ಚ: ಎ.ನಾರಾಯಣಸ್ವಾಮಿ

    ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅರುಣ್‍ಸಿಂಗ್, ಒಂದೇ ಸೂರಿನಡಿ ತಪಾಸಣೆ, ಚಿಕಿತ್ಸೆ, ಔಷಧ ವಿತರಣೆ ಮತ್ತು ಶಸ್ತ್ರಚಿಕಿತ್ಸೆಯಂತಹ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಲಕ್ಷಾಂತರ ಜನರಿಗೆ ಕಲ್ಪಿಸಲಾಗಿದೆ. ಉಚಿತವಾಗಿ ಊಟ ಮತ್ತು ಸಾರಿಗೆ ಮತ್ತಿತರ ಸೌಲಭ್ಯಗಳೊಂದಿಗೆ ಆರೋಗ್ಯ ಮೇಳ ನಡೆಸುವುದು ಸುಲಭದ ಕೆಲಸವಲ್ಲ. ಇಂತಹ ಬೃಹತ್ ಮೇಳ ಈ ಹಿಂದೆ ನಡೆದಿರಲು ಸಾಧ್ಯವಿಲ್ಲ. ಯೋಜಿತವಾಗಿ ದೂರದೃಷ್ಟಿಯಿಂದ ಬಡವರು ಮತ್ತು ಮಧ್ಯಮ ವರ್ಗದ ಮುಖ್ಯವಾಗಿ ಗ್ರಾಮೀಣ ಜನರಿಗೆ ವಿವಿಧ ವೈದ್ಯಕೀಯ ಸೇವೆ ಸೌಲಭ್ಯಗಳನ್ನು ಉಚಿತವಾಗಿ ತಲುಪಿಸಲು ಆಯೋಜಿಸಿರುವ ಈ ಆರೋಗ್ಯ ಮೇಳ ದೇಶಕ್ಕೆ ಮಾದರಿಯಾಗಿದೆ. ಕೇಂದ್ರ ಸರ್ಕಾರದ ಮಹತ್ವದ ಆಯುಷ್ಮಾನ್ ಭಾರತ್ ಕಾರ್ಡ್‍ಗಳ ನೋಂದಣಿಯೂ ಬಹುದೊಡ್ಡ ಪ್ರಮಾಣದಲ್ಲಿ ಆಗುತ್ತಿರುವುದು ಶ್ಲಾಘನೀಯ ಕಾರ್ಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ಹಿಂಭಾಗದಲ್ಲಿ ಹಿಂದೂ ದೇವಾಲಯ ಇರಬಹುದು: ಶ್ರೀಶೈಲ ಶ್ರೀ

    ಡಾ.ಕೆ.ಸುಧಾಕರ್ ಮಾತನಾಡಿ. ಚಿಕ್ಕಬಳ್ಳಾಪುರದಲ್ಲಿ ಪ್ರಾಯೋಗಿಕವಾಗಿ ಆಯೋಜಿಸಿರುವ ಎರಡು ದಿನಗಳ ಬೃಹತ್ ಆರೋಗ್ಯ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿ ಜಾಗತಿಕ ಮಟ್ಟದ ದಾಖಲೆಯನ್ನು ಬರೆದಿದೆ. ಈ ಪ್ರಯೋಗವನ್ನು ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಗೂ ವಿಸ್ತರಿಸಲು ಚಿಂತನೆ ನಡೆಸಿದ್ದು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

  • ಆರೋಗ್ಯಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳಿ: ಸುಧಾಕರ್

    ಆರೋಗ್ಯಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳಿ: ಸುಧಾಕರ್

    ಚಿಕ್ಕಬಳ್ಳಾಪುರ: ಮೇ 14 ಮತ್ತು 15 ರಂದು ಚಿಕ್ಕಬಳ್ಳಾಪುರ ನಗರದ ಶ್ರೀ ಆದಿಚುಂಚನಗಿರಿ ಮಠದ ಎಸ್‍ಜೆಸಿಐಟಿ ಕಾಲೇಜಿನಲ್ಲಿ ನಡೆಯಲಿರುವ ಉಚಿತ ಬೃಹತ್ ಆರೋಗ್ಯ ಮೇಳ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲರಿಗೂ ಉಚಿತ ಆರೋಗ್ಯ ಚಿಕಿತ್ಸೆ ಮತ್ತು ಔಷಧೋಪಾಚಾರ ಸೇವೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

    ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಚಿಕ್ಕಬಳ್ಳಾಪುರ ವಿಧಾನ ಸಭಾ ಕ್ಷೇತ್ರ ಮಟ್ಟದ ಉಚಿತ ಬೃಹತ್ ಆರೋಗ್ಯ ಮೇಳ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆಗಳು ಮತ್ತು ಸಲಹೆಗಳನ್ನು ನೀಡಿ ಮಾತನಾಡಿದರು. ಇದನ್ನೂ ಓದಿ:  ಆತಂಕದಿಂದ ಲಗೇಜ್ ತೆಗೆದುಕೊಂಡು ಎಲ್ಲಿಗೆ ಓಡಿದರು ಆಲಿಯಾ ಭಟ್ 

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 3.5 ಲಕ್ಷ ಜನಸಂಖ್ಯೆ ಇದ್ದು, ಈ ಪೈಕಿ 1.5 ಲಕ್ಷ ಜನರನ್ನು ಮೇಳಕ್ಕೆ ನೋಂದಾಯಿಸಬೇಕು. ಅವರೆಲ್ಲರಿಗೂ ಆರೋಗ್ಯ ತಪಾಸಣೆ ಮಾಡಿಸಿ ಅಗತ್ಯವಿದ್ದಲ್ಲಿ ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆ ಸೇರಿದಂತೆ ಸಕಲ ಆರೋಗ್ಯ ಸೇವೆಯನ್ನು ಉಚಿತವಾಗಿ ಒದಗಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

    ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರವನ್ನು ಹೊರತುಪಡಿಸಿ ಇತರ ಕ್ಷೇತ್ರಗಳಿಂದ ಯಾವುದೇ ವ್ಯಕ್ತಿ ಆರೋಗ್ಯ ಸೇವೆ, ಶಸ್ತ್ರಚಿಕಿತ್ಸೆ ಬಯಸಿ ಆರೋಗ್ಯ ಮೇಳಕ್ಕೆ ಆಗಮಿಸಿದರೆ, ಭೌತಿಕ ನೋಂದಣಿ ಮಾಡಿ ಅವರೆಲ್ಲರಿಗೂ ಆರೋಗ್ಯ ಸೇವೆಗಳನ್ನು ಉಚಿತವಾಗಿ ಒದಗಿಸಬೇಕು. ಯಾವುದೇ ಕಾರಣಕ್ಕೂ ಆರೋಗ್ಯ ಸೇವೆಯನ್ನು ಯಾರಿಗೂ ನಿರಾಕರಿಸುವಂತಿಲ್ಲ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

    ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳು, ಸರ್ಕಾರಿ ವೈದ್ಯಕೀಯ ಸಂಸ್ಥೆಗಳು ಸೇರಿದಂತೆ 100ಕ್ಕೂ ಹೆಚ್ಚು ಸಂಸ್ಥೆಗಳಿಂದ ಸುಮಾರು 1,500ಕ್ಕೂ ಹೆಚ್ಚು ವೈದ್ಯರು, 1,000ಕ್ಕೂ ಹೆಚ್ಚು ಪ್ರಯೋಗಾಲಯ ತಾಂತ್ರಿಕ ತಜ್ಞರು, ಆರೋಗ್ಯ ಸೇವೆ ನೀಡಲು ಮೇಳದಲ್ಲಿ ಅಂದು ಭಾಗವಹಿಸುತ್ತಿದ್ದಾರೆ. ಎಲ್ಲರು ಮೇಳದಲ್ಲಿ ಭಾಗವಹಿಸಿ ಆರೋಗ್ಯಕರ ಜೀವನ ನಿಮ್ಮದಾಗಿಸಿಕೊಳ್ಳುವಂತೆ ಸಚಿವರು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಶಿವಸೇನೆಗೆ ಹಿಂದುತ್ವವನ್ನು ಕಲಿಸುವ ಅಗತ್ಯವಿಲ್ಲ: ಸಂಜಯ್ ರಾವತ್

    ಸಭೆಯಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಾಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಉಪವಿಭಾಗಾಧಿಕಾರಿ ಡಾ.ಸಂತೋಷ್ ಕುಮಾರ್ ಹಾಗೂ ಜಿಲ್ಲೆಯ ಎಲ್ಲ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

  • ಪ್ರಿಯಾಂಕ್ ಖರ್ಗೆ ಇಲ್ಲದಿರುವ ವಿಷಯವನ್ನು ಸೃಷ್ಟಿಸಿಲು ಪ್ರಯತ್ನಿಸ್ತಿದ್ದಾರೆ: ಡಾ.ಕೆ.ಸುಧಾಕರ್

    ಪ್ರಿಯಾಂಕ್ ಖರ್ಗೆ ಇಲ್ಲದಿರುವ ವಿಷಯವನ್ನು ಸೃಷ್ಟಿಸಿಲು ಪ್ರಯತ್ನಿಸ್ತಿದ್ದಾರೆ: ಡಾ.ಕೆ.ಸುಧಾಕರ್

    ಶಿವಮೊಗ್ಗ: ಪ್ರಿಯಾಂಕ್ ಖರ್ಗೆ ಅವರು ಇಲ್ಲದಿರುವ ವಿಷಯಗಳನ್ನು ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಬಿಟ್ ಕಾಯಿನ್ ವಿಚಾರದ ಬಗ್ಗೆ ಸರಿಯಾದ ತನಿಖೆ ನಡೆದರೆ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ, ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರು ಮೊದಲು ಸತ್ಯವನ್ನು ಅರ್ಥ ಮಾಡಿಕೊಂಡು ಮಾತನಾಡುವುದನ್ನು ಕಲಿಯಬೇಕು. ಕೇಂದ್ರ ಸರ್ಕಾರ ಈ ಬಗ್ಗೆ ಸ್ಪಷ್ಟಪಡಿಸಿದೆ ಎಂದರು. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    ದೇಶದಲ್ಲಿ ಬಿಟ್ ಕಾಯಿನ್ ಕಳವಿನ ಬಗ್ಗೆಯಾಗಲಿ, ದುರುಪಯೋಗವಾಗಿದೆ ಎಂಬ ಬಗ್ಗೆಯಾಗಲಿ ಒಂದೇ ಒಂದು ದೂರು ಆದರೂ ದಾಖಲಾಗಬೇಕಿತ್ತು. ಅಂತಹ ಯಾವುದೇ ದಾಖಲಾತಿಗಳೇ ಆಗಿಲ್ಲ. ಭಾರತದಲ್ಲಿ ಸರ್ಕಾರ ಯಾವುದೇ ವಿದೇಶಿ ತನಿಖಾ ತಂಡ ಬಂದು ತನಿಖೆ ನಡೆಸಲು ಅವಕಾಶವಿದೆ ಅಂತ ಸ್ಪಷ್ಟಪಡಿಸಿದೆ ಎಂದರು. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

  • ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    ಬಡವರ ಆರೋಗ್ಯದ ಮೇಲೆ ಕೇಂದ್ರ, ರಾಜ್ಯ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ: ಸುಧಾಕರ್

    – ವೈದ್ಯಕೀಯ ಶಿಕ್ಷಣದಲ್ಲಿ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ

    ಬೆಂಗಳೂರು: ನರೇಂದ್ರ ಮೋದಿಯವರು ಆರಂಭಿಸಿರುವ ಆಯುಷ್ಮಾನ್ ಭಾರತ್ ಯೋಜನೆ ಎಲ್ಲರಿಗೂ ಉಚಿತ ಆರೋಗ್ಯ ವಿಮೆ ನೀಡುತ್ತಿದೆ. ಉಚಿತವಾಗಿ ಆರೋಗ್ಯ ವಿಮೆ ನೀಡುತ್ತಿರುವ ಏಕೈಕ ದೇಶ ಭಾರತವಾಗಿದೆ. ಶೂನ್ಯ ಪ್ರಿಮಿಯಂನಲ್ಲಿ 5 ಲಕ್ಷ ರೂಪಾಯಿ ತನಕ ಶಾಶ್ವತ ಆರೋಗ್ಯ ವಿಮೆಯನ್ನು ಸರ್ಕಾರ ನೀಡುತ್ತಿದೆ. ದೇಶದ ಬಡವರ ಆರೋಗ್ಯದ ಮೇಲೆ ಸರ್ಕಾರ ಹೆಚ್ಚಿನ ಗಮನವಿಟ್ಟಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.

    ಬೆಂಗಳೂರು ಮೆಡಿಕಲ್ ಕಾಲೇಜ್‍ನ ಪದವಿ ಪ್ರಧಾನ ಸಮಾರಂಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಇಂದು ತಾಂತ್ರಿಕ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಹೆಣ್ಣುಮಕ್ಕಳು ಹೆಚ್ಚಿನ ಸಾಧನೆ ಮಾಡುತ್ತಿದ್ದಾರೆ. ಇದು ದೇಶದಲ್ಲಿ ಮಹಿಳಾ ಸಬಲೀಕರಣದ ಸಂಕೇತ. ಸಮಾಜದಲ್ಲಿ ಬದಲಾವಣೆಗಳು ಆಗುತ್ತಿವೆ. ಬಡವರ ಮಕ್ಕಳು ಕೂಡ ವೈದ್ಯರಾಗಬೇಕೆಂಬ ಕನಸು ಈಡೇರುತ್ತಿದೆ. ಕಳೆದ 7 ವರ್ಷಗಳಲ್ಲಿ ದೇಶದಲ್ಲಿ ವೈದ್ಯಕೀಯ ಶಿಕ್ಷಣ ವ್ಯವಸ್ಥೆ ಬದಲಾವಣೆ ಕಂಡಿದೆ. ಪ್ರತೀ ವರ್ಷ 65,000 ಎಂಬಿಬಿಎಸ್ ವೈದ್ಯರು ಮತ್ತು 30,000 ವೈದ್ಯರು ಸ್ನಾತಕೋತ್ತರ ಪದವಿ ಪಡೆದು ಸೇವೆಗೆ ಲಭ್ಯರಾಗುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಒಂದು ಲಕ್ಷ ಉದ್ಯೋಗ ಸೃಷ್ಟಿಸುವ FMCG ಕ್ಲಸ್ಟರ್ ಯೋಜನೆ ಇದೇ ವರ್ಷ ಪ್ರಾರಂಭ: ಬೊಮ್ಮಾಯಿ

    ಬೆಂಗಳೂರು ಮೆಡಿಕಲ್ ಕಾಲೇಜು (ಬಿಎಂಸಿ) ದೇಶದ ಹೆಮ್ಮೆಯ ಕಾಲೇಜ್‍ಗಳಲ್ಲಿ ಒಂದು. ಇಲ್ಲಿ ಪ್ರವೇಶ ಪಡೆಯುವ ಕನಸು ಹಲವು ವಿದ್ಯಾರ್ಥಿಗಳಿಗೆ ಇರುತ್ತದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಅದೃಷ್ಟವಂತರಲ್ಲಿ ಅದೃಷ್ಟವಂತರು. ಅತ್ಯುತ್ತಮ ಸಂಸ್ಥೆಯಲ್ಲಿ ಕಲಿತವನ ಅನುಭವ ಜೊತೆಗೆ ಸಮಾಜದಲ್ಲಿ ವಿಭಿನ್ನ ಮತ್ತು ವಿಶಿಷ್ಟ ಗೌರವ ಸಿಗುತ್ತದೆ. ವೈದ್ಯರಿಗೆ ಸಮಾಜದ ಎಲ್ಲಾ ಕಡೆಯೂ ವಿಶಿಷ್ಟ ಗೌರವ ಇದೆ. ವೈದ್ಯ ವಿದ್ಯಾರ್ಥಿಗಳು, ಪದವಿ ಪಡೆದವರು ಈ ಸಮಾಜದ ಹೆಮ್ಮೆ ಎಂದು ತಿಳಿಸಿದರು.

    ಕರ್ನಾಟಕದಲ್ಲಿ ಒಟ್ಟು 65 ಮೆಡಿಕಲ್ ಕಾಲೇಜುಗಳಿವೆ. 4 ಸರ್ಕಾರಿ ಮೆಡಿಕಲ್ ಕಾಲೇಜ್‍ಗಳು ಶೀಘ್ರದಲ್ಲಿ ಆರಂಭವಾಗಲಿವೆ. ಖಾಸಗಿಯಲ್ಲಿ 3 ಹೆಚ್ಚುವರಿ ಮೆಡಿಕಲ್ ಕಾಲೇಜ್‍ಗಳಿಗೆ ಅನುಮತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ 9 ಜಿಲ್ಲೆಗಳಲ್ಲಿ ಹೊಸತಾಗಿ 9 ಮೆಡಿಕಲ್ ಕಾಲೇಜ್‍ಗಳು ಆರಂಭ ಮಾಡಲು ತಯಾರಿಗಳು ನಡೆಯುತ್ತಿವೆ. ದೇಶದ ವೈದ್ಯ ವಿದ್ಯಾರ್ಥಿಗಳಲ್ಲಿ ಶೇಕಡಾ 30.5 ರಷ್ಟು ಕೊಡುಗೆ ಕರ್ನಾಟಕದ್ದಾಗಿದೆ. ಮಹಾರಾಷ್ಟ್ರ, ಮಧ್ಯಪ್ರದೇಶ ನಂತರ ಕರ್ನಾಟಕದಲ್ಲಿ ಅತೀ ಹೆಚ್ಚು ವೈದ್ಯ ವಿದ್ಯಾರ್ಥಿಗಳಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    corona

    ಪ್ರಧಾನ ಮಂತ್ರಿ ನರೇಂದ್ರ ಮೋದಿ, ವೈದ್ಯಕೀಯ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. 2014ಕ್ಕೂ ಮೊದಲು ದೇಶದಲ್ಲಿ ಕೆಲವೇ ಕೆಲವು ಮೆಡಿಕಲ್ ಕಾಲೇಜ್‍ಗಳಿದ್ದವು. ಆದರೆ ಕಳೆದ 7 ವರ್ಷಗಳಲ್ಲಿ ಹೊಸತಾಗಿ 150ಕ್ಕೂ ಅಧಿಕ ಮೆಡಿಕಲ್ ಕಾಲೇಜ್‍ಗಳು ಆರಂಭವಾಗಿವೆ. 65,000 ಎಂಬಿಬಿಎಸ್ ಡಾಕ್ಟರ್‌ಗಳು ಪ್ರತೀ ವರ್ಷ ಹೊರ ಬರುತ್ತಾರೆ. 30,000 ಸ್ನಾತಕೋತ್ತರ ಪದವಿ ಪಡೆದ ವೈದ್ಯರು ಸಮಾಜ ಸೇವೆಗೆ ಲಭ್ಯರಾಗುತ್ತಿದ್ದಾರೆ. ವೈದ್ಯಕೀಯ ಶಿಕ್ಷಣದ ಕ್ಷೇತ್ರ ದುಬಾರಿ ವೆಚ್ಚವನ್ನು ಬಯಸುತ್ತಿದೆ. ಆದರೆ ಇದನ್ನು ಸರ್ಕಾರ ಹಂತ ಹಂತವಾಗಿ ಕಡಿಮೆ ಮಾಡಲು ಯೋಜನೆ ರೂಪಿಸಿದೆ. ಬಡವರಿಗೂ ಸಹ ವೈದ್ಯಕೀಯ ಶಿಕ್ಷಣ ಸಿಗಬೇಕು ಅನ್ನುವುದೇ ಪ್ರಧಾನಿ ನರೇಂದ್ರ ಮೋದಿಯವರ ಕನಸಾಗಿದೆ ಎಂದು ನುಡಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಮುಖಂಡರ ಫ್ಲೆಕ್ಸ್ ವಿರುದ್ಧ ಪ್ರತಾಪ್ ಸಿಂಹ ಗರಂ

    ಕೊರೊನಾ ಸಾಂಕ್ರಾಮಿಕ ರೋಗದ ವೇಳೆ ವೈದ್ಯಕೀಯ ವಿದ್ಯಾರ್ಥಿಗಳು ಅನನ್ಯ ಸೇವೆ ಸಲ್ಲಿಸಿದ್ದಾರೆ. ಜೀವನದಲ್ಲಿ ಎದುರಾಗಬಹುದುದಾದ ಸಂಕಷ್ಟಗಳು ಕಲಿಕೆಯ ಹಂತದಲ್ಲೇ ಅನುಭವಕ್ಕೆ ಬಂದಿದೆ. ಇದು ಜೀವನದ ಅಂತ್ಯವಲ್ಲ, ಆರಂಭ ಎಂದು ಪ್ರಧಾನಿಯವರು ಹೇಳಿದರಂತೆ ಎಲ್ಲಾ ವೈದ್ಯಕೀಯ ವಿದ್ಯಾರ್ಥಿಗಳ ಹೊಸ ಜೀವನ ಇಂದಿನಿಂದ ಆರಂಭವಾಗಿದೆ. ಕಳೆದ 5 ವರ್ಷಗಳಲ್ಲಿ ತೋರಿದ ಬದ್ಧತೆ, ಶ್ರದ್ಧೆ ಮತ್ತು ಅಧ್ಯಯನ ಶೀಲತೆಯನ್ನು ಬದುಕಿನ ಉದ್ದಕ್ಕೂ ಅಳವಡಿಸಿಕೊಳ್ಳಬೇಕು ಎಂದು ಆಶಿಸಿದರು.

    ಭಾರತ ವೈದ್ಯಕೀಯ ವಿಜ್ಞಾನಕ್ಕೆ ಅದ್ಭುತ ಇತಿಹಾಸವಿದೆ. ಆಯುರ್ವೇದದಲ್ಲಿ ಚರಕ, ಶುಶ್ರೂತರ ಕೊಡುಗೆ ಅಮೂಲ್ಯವಾದದ್ದು. ಬಿಎಂಸಿ ಕೂಡ ಕೇವಲ ವೈದ್ಯರನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡುತ್ತಿಲ್ಲ. ಬದಲಾಗಿ ಸಂಶೋಧನೆ ಮತ್ತು ಅಭಿವೃದ್ಧಿ ಕಡೆಗೂ ಗಮನ ಹರಿಸಿದೆ. ಕೊರೊನಾ ಸಾಂಕ್ರಾಮಿಕ ರೋಗದ ಸಮಯದಲ್ಲಿ ಬಿಎಂಸಿಯ ವಿದ್ಯಾರ್ಥಿಗಳು ನೀಡಿದ ಸೇವೆಗೆ ಧನ್ಯವಾಧಗಳು. ಇವರ ಶ್ರಮದಿಂದ ಲಸಿಕೆ ಬರುವ ಹಂತದ ವರೆಗೆ ಕೊರೊನಾವನ್ನು ಕಂಟ್ರೋಲ್ ಮಾಡಲು ಸಾಧ್ಯವಾಯಿತು ಎಂದರು.

    ವೈದ್ಯರ ಸೇವೆ ಸಮಾಜದಲ್ಲಿ ವಿಭಿನ್ನ ಗೌರವವನ್ನು ಹೊಂದಿದೆ. ಮನುಷ್ಯತ್ವ ಮತ್ತುಸೇವೆಯನ್ನು ಒಂದೇ ಕಾಲದಲ್ಲಿ ಅಪೇಕ್ಷೆ ಮಾಡುವ ಕೆಲಸ ಇದಾಗಿದೆ. ಇದರಲ್ಲಿ ಆತ್ಮ ತೃಪ್ತಿಯೂ ಇದೆ. ಎಲ್ಲವನ್ನೂ ಮರೆತು ಸಮಾಜಕ್ಕಾಗಿ, ಇನ್ನೊಬ್ಬರಿಗಾಗಿ ಕೆಲಸ ಮಾಡಬೇಕಾಗುತ್ತದೆ. ಎಲ್ಲಾ ತ್ಯಾಗವನ್ನು ಮಾಡಲು ಸದಾ ಸಿದ್ಧರಿರಬೇಕಾದ ಕೆಲಸ ಇದು. ಎಲ್ಲಾ ಕ್ಷಣದಲ್ಲೂ, ಎಲ್ಲಾ ದಿನವೂ ವೈದ್ಯರು ಸಮಾಜದ ಬಗ್ಗೆ ಮಾತ್ರ ಯೋಚನೆ ಮಾಡಬೇಕು ಎಂದು ಹೇಳಿದರು.

  • ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

    ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್

    ಬೆಂಗಳೂರು: ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

    ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ಇದೆ. ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇರುತ್ತಾರೆ. ನಾನು ಕೂಡಾ ಎರಡು ವಾರಗಳಿಂದ ನಮ್ಮ ಇಲಾಖೆ ಅಧಿಕಾರಿಗಳ ಜೊತೆ ಸತತವಾಗಿ ಸಂಪರ್ಕದಲ್ಲಿ ಇದ್ದೇನೆ. 4 ನೇ ಅಲೆ ಹೇಗೆ ರಿಯಾಕ್ಟ್ ಮಾಡುತ್ತದೆ. ಹೊಸ ಪ್ರಭೇಧ ಏನಾದರೂ ಇದೆಯಾ ಅಂತ ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಸಭೆಯಲ್ಲಿ ಮುನ್ನೆಚ್ಚರಿಕೆ ಕ್ರಮ, 4ನೇ ಅಲೆ ಎದುರಿಸಲು ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಚರ್ಚಿಸುತ್ತೇವೆ ಎಂದು ತಿಳಿಸಿದ್ದಾರೆ.

    ಜನರು ಮಾಸ್ಕ್ ಧರಿಸುತ್ತಿಲ್ಲ. ಕೋವಿಡ್ ಹೊರಟು ಹೋಗಿದೆ ಅಂತ ಅಂದುಕೊಂಡಿದ್ದಾರೆ. ಆದರೆ ಜನರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. ಅನೇಕ ಜನರು ಲಸಿಕೆ ಕೂಡಾ ಪಡೆದಿಲ್ಲ. 2ನೇ ಡೋಸ್ ಪಡೆದಿಲ್ಲದವರು ಎರಡನೇ ಡೋಸ್ ಪಡೆಯಬೇಕು. ಬೂಸ್ಟರ್ ಡೋಸ್ ಕೂಡಾ ಪಡೆಯಬೇಕು. 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ಪೋಷಕರು ಲಸಿಕೆ ಕೊಡಿಸಬೇಕು. ಆದಷ್ಟು ಬೇಗ 5 ವರ್ಷ ಮೇಲ್ಪಟ್ಟವರಿಗೂ ಲಸಿಕೆ ಬರಲಿದೆ. ಈ ಎಲ್ಲಾ ಅಂಶಗಳನ್ನು ಇವತ್ತಿನ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಕೊರೊನಾ ತಡೆಗಟ್ಟಲು ಯಾವ ಕ್ರಮಕೈಗೊಳ್ಳಬೇಕು ಮತ್ತು ನಿಯಮಗಳ ಬಗ್ಗೆ ತಜ್ಞರ ಸಲಹೆ ಪಡೆಯುತ್ತೇವೆ ಎಂದಿದ್ದಾರೆ.

    ಟೆಸ್ಟಿಂಗ್ ಪ್ರಮಾಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಾಸಿಟಿವಿಟಿ ದರದ ಆಧಾರದಲ್ಲಿ ಟೆಸ್ಟಿಂಗ್ ಜಾಸ್ತಿ ಮಾಡುತ್ತೇವೆ. ತಾಂತ್ರಿಕ ಸಲಹಾ ಸಮಿತಿ ಸಲಹೆ ಮೇರೆಗೆ ನಾವು ಟೆಸ್ಟಿಂಗ್ ಮಾಡುತ್ತಿದ್ದೇವೆ. ಅನಗತ್ಯವಾಗಿ ಟೆಸ್ಟ್ ಮಾಡಬೇಕಾಗಿಲ್ಲ. ನಮಗೆ 4ನೇ ಅಲೆ ಬಂದರೆ ಆಸ್ಪತ್ರೆಗೆ ಸೇರುವವರು ಹೆಚ್ಚಾಗುತ್ತಾರಾ ಎಂಬ ಬಗ್ಗೆ ಚರ್ಚೆ ಮಾಡಬೇಕಿದೆ. ಈ ಬಗ್ಗೆಯೂ ಇವತ್ತು ಮಾಹಿತಿ ಕಲೆ ಹಾಕುತ್ತೇವೆ. ದೆಹಲಿ ಸೇರಿದಂತೆ ಕೆಲ ರಾಜ್ಯಗಳಲ್ಲಿ ಸೋಂಕು ಹೆಚ್ಚಾಗಿದೆ. ಅಲ್ಲಿನ ಎಲ್ಲಾ ಮಾಹಿತಿ ಪಡೆದು ರಾಜ್ಯದ ಕ್ರಮಗಳ ಬಗ್ಗೆ ಇವತ್ತು ಚರ್ಚೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

    ನಮ್ಮಲ್ಲಿ ಓಮಿಕ್ರಾನ್ ಸಬ್ ವೇರಿಯಂಟ್ ಕಂಡು ಬಂದಿಲ್ಲ. ಈಗಾಗಲೇ ಲ್ಯಾಬ್‍ನಿಂದ ಕೇಂದ್ರಕ್ಕೆ ಮಾಹಿತಿ ರವಾನೆ ಆಗಿದೆ. ಕೇಂದ್ರದಿಂದ ಇನ್ನೂ ಅಧಿಕೃತವಾಗಿ ಯಾವುದೇ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ರಾಜ್ಯದಲ್ಲಿ ಹೊಸ ತಳಿ ಪತ್ತೆ ಬಗ್ಗೆ ಆತಂಕ ಇಲ್ಲ ಎಂದು ಹೇಳಿದ್ದಾರೆ. ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್

    ಕೊರೊನಾ 4ನೇ ಅಲೆ ಭೀತಿ ಹಿನ್ನಲೆ ಏರ್ ಪೋರ್ಟ್‍ಗಳಲ್ಲಿ ಕಠಿಣ ನಿಯಮಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ಸೋಂಕು ಹೆಚ್ಚು ಇರುವ 8 ದೇಶಗಳಿಂದ ಬರುವ ಪ್ರಯಾಣಿಕರಿಗೆ ನಿಯಮ ಜಾರಿ ಮಾಡಲಾಗಿದೆ. ಏರ್ ಪೋರ್ಟ್ ನಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳೇ ಮುಂದುವರಿಕೆ ಆಗುತ್ತವೆ. ದೆಹಲಿ ಸೇರಿದಂತೆ ಕೆಲ ರಾಜ್ಯದಲ್ಲಿ ಸೋಂಕು ಹೆಚ್ಚಳವಾಗಿದೆ. ನಾವು ದೆಹಲಿಗಿಂತ 2-3 ವಾರ ಹಿಂದೆ ಇದ್ದೇವೆ. 2-3 ವಾರ ಆದ ಮೇಲೆ ನಮ್ಮಲ್ಲಿ ಹೇಗೆ ಸೋಂಕು ಹೆಚ್ಚಳವಾಗುತ್ತದೆ ಎಂಬ ಬಗ್ಗೆ ಗೊತ್ತಾಗಲಿದೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮದಲ್ಲಿ ಒಳಗಾಗಿದ್ದವರು ಎಷ್ಟೇ ದೊಡ್ಡವರಾದ್ರೂ ರಕ್ಷಿಸುವ ಪ್ರಶ್ನೆಯಿಲ್ಲ: ಆರಗ ಜ್ಞಾನೇಂದ್ರ

    ರಾಜ್ಯದಲ್ಲಿ ಔಷಧಿ ಕೊರತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ರಾಜ್ಯದಲ್ಲಿ ಔಷಧಿ ಕೊರತೆ ಇಲ್ಲ. ಈಗಾಗಲೇ DHO,THOಗಳ ಅಕೌಂಟ್‍ಗೆ ಹಣ ಹಾಕಿದ್ದೇವೆ. ಸ್ಥಳೀಯವಾಗಿ ಅವಶ್ಯಕವಾದ ಔಷಧಿಗಳನ್ನು ಖರೀದಿಗೆ ಅನುಮತಿ ಕೊಟ್ಟಿದ್ದೇವೆ. ಅವರು ಔಷಧಿ ಖರೀದಿ ಮಾಡಬಹುದು ಎಂದು ತಿಳಿಸಿದ್ದಾರೆ.

  • ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

    ಆರೋಗ್ಯ ಇಲಾಖೆಯಲ್ಲಿ ಕೆಲಸ ಕದಿಯುವವರಿಗೆ ವೇತನ ಕಡಿತ ಶಿಕ್ಷೆ: ಸುಧಾಕರ್

    ಬೆಂಗಳೂರು: ನಿಜವಾದ ಕಾರಣಗಳಿಲ್ಲದೆ ಕೆಲಸ ಕದಿಯುವುದನ್ನು ಸಹಿಸಲು ಆಗುವುದಿಲ್ಲ. ಇಲಾಖೆಯಲ್ಲಿ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಎಲ್ಲ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.

    ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆ, ಇಲಾಖೆ ಕಚೇರಿ ಮತ್ತು ಸಂಸ್ಥೆಗಳಲ್ಲಿ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದಿರುವ ಬಗ್ಗೆ ಸಾರ್ವಜನಿಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಪೂಜೆ ವೇಳೆ ಶಬ್ದ ಮಾಲಿನ್ಯ ಆರೋಪ- ವೇಣುಗೋಪಾಲ ದೇಗುಲಕ್ಕೆ ನೊಟೀಸ್

    ಸರ್ಕಾರಿ ಅಧಿಕಾರಿಗಳ ಕರ್ತವ್ಯಲೋಪದಿಂದ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಆಗುತ್ತದೆ. ಹೀಗಾಗಿ ಕರ್ತವ್ಯದ ವೇಳೆಯಲ್ಲಿ ಹಾಜರಿಲ್ಲದ ಯಾರೇ ಆಗಲಿ ಅಂತಹವರ ವೇತನ ಕಡಿತಕ್ಕೆ ಸೂಚನೆ ನೀಡಲಾಗಿದೆ. ಇಲಾಖೆ ಅಡಿಯಲ್ಲಿ ಬರುವ ಎಲ್ಲ ಸಂಸ್ಥೆಗಳು ಮತ್ತು ಆಸ್ಪತ್ರೆಗಳಲ್ಲಿ ಪ್ರತಿಯೊಬ್ಬ ಅಧಿಕಾರಿ ಮತ್ತು ಸಿಬ್ಬಂದಿಗೂ ಅವರ ಆಧಾರ್ ಆಧರಿತ ಬಯೋಮೆಟ್ರಿಕ್ ಹಾಜರಾತಿ (ಎಇಬಿಎಎಸ್) ಕಡ್ಡಾಯಗೊಳಿಸಲಾಗಿದೆ. ಅದನ್ನು ಆಧರಿಸಿಯೇ ಇನ್ನು ಮುಂದೆ ವೇತನ ನೀಡುವಂತೆ ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದು ವಿವರಿಸಿದರು.

    ಕೋವಿಡ್ ಕಾರಣಕ್ಕೆ ಸ್ಥಗಿತಗೊಂಡಿದ್ದ ಬಯೋಮೆಟ್ರಿಕ್ ಹಾಜರಾತಿ ಪದ್ಧತಿಯನ್ನು ಕಳೆದ ಎರಡು ತಿಂಗಳ ಹಿಂದಿನಿಂದಲೇ ಮತ್ತೆ ಕಡ್ಡಾಯಗೊಳಿಸಲಾಗಿದೆ. ಅನೇಕ ಸಭೆಗಗಳಲ್ಲಿ ಮತ್ತು ಸುತ್ತೋಲೆ ಮೂಲಕವೂ ಈ ಬಗ್ಗೆ ಸೂಚನೆ ನೀಡಲಾಗಿದೆ. ಆದರೂ ಕೆಲ ಅಧಿಕಾರಿಗಳು ಮತ್ತು ಸಿಬ್ಬಂದಿ ತಮ್ಮ ಹಾಜರಾತಿ ದಾಖಲಿಸದಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗ ಸ್ಪಷ್ಟ ಎಚ್ಚರಿಕೆ ಜೊತೆಗೆ ಅಧಿಕೃತ ಆದೇಶ ನೀಡಿದ್ದು ಅಂತಹ ಪ್ರಕರಣಗಳನ್ನು ಗೈರು ಹಾಜರಿ ಎಂದು ಪರಿಗಣಿಸಿ ವೇತನ ಕಡಿತಗೊಳಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮೈಸೂರು ಸ್ಯಾಂಡಲ್ ಸೋಪ್ ಕಾರ್ಖಾನೆಯಲ್ಲೂ ಕಮಿಷನ್ ದಂಧೆ

    ಡಿಡಿಒ ಹೊಣೆ:
    ಇಲಾಖೆಯ ಆಸ್ಪತ್ರೆ, ಸಂಸ್ಥೆ ಮತ್ತು ಕೇಂದ್ರಗಳ ಜವಾಬ್ದಾರಿ ನಿರ್ವಹಿಸುವ ಡಿಡಿಒ (ಸ್ಯಾಲರಿ ಡ್ರಾಯಿಂಗ್ ಆಫೀಸರ್)ಗಳು ಪ್ರತೀ ತಿಂಗಳು ಎಇಬಿಎಎಸ್‍ನಲ್ಲಿ ತಮ್ಮ ವ್ಯಾಪ್ತಿಯ ಎಲ್ಲ ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಅದರ ಅನುಸಾರವೇ ವೇತನ ಪಾವತಿಗೆ ವರದಿ ಸಿದ್ಧಪಡಿಸಿ ಸಂಬಂಧಿಸಿದ ಅಧಿಕಾರಿಗಳ ಮೂಲಕ ಆಯಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗೆ (ಡಿಎಚ್‍ಒ) ಸಲ್ಲಿಸಬೇಕು. ಅವರು ಅದನ್ನು ಪರಿಶೀಲಿಸಿ ವೇತನ ಬಿಡುಗಡೆ ಮತ್ತು ಕಡಿತಕ್ಕೆ ಸೂಚನೆ ನೀಡಲಿದ್ದಾರೆ. ಡಿಎಚ್‍ಒ ಅವರು ಕೈಗೊಂಡ ಕ್ರಮಗಳನ್ನು ಮೇಲಿನ ಹಂತದ ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

    ಯಾರೇ ಆಗಲಿ ಶೇ.80ರಷ್ಟು ಹಾಜರಾತಿಗಿಂತ ಕಡಿಮೆ ಇದ್ದಲ್ಲಿ ಅವರ ವೇತನ ತಡೆ ಹಿಡಿಯಲಾಗುತ್ತದೆ. ನಂತರ ಮಾರ್ಗಸೂಚಿ ಅನ್ವಯ ಮುಂದಿನ ಕ್ರಮ ವಹಿಸಲಾಗುವುದು. ಒಂದು ವೇಳೆ ಶೇ.80ರಷ್ಟು ಹಾಜರಾತಿ ಇದ್ದಲ್ಲಿ ವೇತನ ಬಿಡುಗಡೆ ಮಾಡಿ ಉಳಿದ ಶೇ.20 ಹಾಜರಾತಿ ದಾಖಲು ಮಾಡದಿರುವುದಕ್ಕೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಲಾಗುತ್ತದೆ. ಸಿಬ್ಬಂದಿ ನೀಡುವ ಕಾರಣ ನಿಜವಾಗಿದ್ದಲ್ಲಿ ಪ್ರಕರಣ ಮುಕ್ತಾಯಗೊಳಿಸಲಾಗುವುದು. ಒಂದು ವೇಳೆ ಸಬೂಬು ನೀಡಿದರೆ ಅಥವಾ ನೀಡಿರುವ ಮಾಹಿತಿ ಸುಳ್ಳು ಆಗಿದ್ದಲ್ಲಿ ಮುಂದಿನ ತಿಂಗಳ ವೇತನದಲ್ಲಿ ನಿರ್ದಿಷ್ಟಪಡಿಸಿರುವ ಮೊತ್ತವನ್ನು ಕಡಿತಗೊಳಿಸಲಾಗುವುದು. ಒಂದು ವೇಳೆ ಎಇಬಿಎಎಸ್ ಅನುಷ್ಟಾನಗೊಳಿಸದೆ, ಹಾಜರಾತಿ ಪರಿಶೀಲಿಸದೆ ವೇತನ ಪಾವತಿಸಿದರೆ ಆಯಾ ಡಿಡಿಒಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳಲಾಗುವುದು. ಇದನ್ನು ಸರಿಯಾಗಿ ಉಸ್ತುವಾರಿ ಮಾಡದಿದ್ದಲ್ಲಿ ಡಿಎಚ್‍ಒಗಳ ವಿರುದ್ಧವೂ ಕ್ರಮ ಕೈಗೊಳ್ಳಲು ವರದಿ ನೀಡುವಂತೆ ಜಿಲ್ಲೆಗಳ ಉಸ್ತುವಾರಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

    ಪ್ರತಿ ವಾರ ಪರಿಶೀಲನೆ:
    ಪ್ರತಿ ವಾರ ಇಲಾಖೆ ಪ್ರಗತಿ ಪರಿಶೀಲನೆಯಲ್ಲಿ ಉಳಿದ ಅಂಶಗಳ ಜೊತೆಗೆ ಹಾಜರಾತಿ ಕಡ್ಡಾಯ ಮತ್ತು ವೇತನಕ್ಕೆ ಸಂಯೋಜನೆಗೊಳಿಸಿರುವ ವ್ಯವಸ್ಥೆಯನ್ನು ಪರಾಮರ್ಶೆ ಮಾಡಲಾಗುತ್ತಿದೆ. ಅನುಷ್ಟಾನದಲ್ಲಿ ಲೋಪ ಕಂಡರೆ ನಿರ್ದಾಕ್ಷಿಣ್ಯ ಕ್ರಮ ನಿಶ್ಚಿತ. ಆರೋಗ್ಯಸೌಧ ಸೇರಿದಂತೆ ಇಲಾಖೆ ವ್ಯಾಪ್ತಿಯ ಎಲ್ಲಾ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸೇವಾ ಸಿಬ್ಬಂದಿ ಮತ್ತು ಕಚೇರಿ ಸಿಬ್ಬಂದಿಗಳು ಎಇಬಿಎಎಸ್‍ನಲ್ಲಿ ದಿನಕ್ಕೆ ಮೂರು ಬಾರಿ ತಮ್ಮ ಹಾಜರಾತಿ ದಾಖಲಿಸಲು ಸೂಚಿಸಲಾಗಿದೆ. ಕಚೇರಿ, ಆಸ್ಪತ್ರೆಗಳಲ್ಲಿ ಪ್ರತ್ಯೇಕ ಸಮಯ ನಿಗದಿ ಮಾಡಲಾಗಿದೆ. ಇಲಾಖೆಯ ಹೊಣೆ ಹೊತ್ತಿರುವ ಆಯುಕ್ತ ರಂದೀಪ್ ಅವರೇ ಬಯೋಮೆಟ್ರಿಕ್ ಹಾಜರಾತಿ ನೋಂದಯಿಸಿ ಅನುಸರಿಸುವ ಮೂಲಕ ಉಳಿದ ಹಂತದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾದರಿಯಾಗಿದ್ದಾರೆ ಎಂದೂ ಸಚಿವ ಸುಧಾಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

  • ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಎಸ್ಟೋನಿಯಾ ದೇಶದ ಜೊತೆ ಒಡಂಬಡಿಕೆ: ಸುಧಾಕರ್

    ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಎಸ್ಟೋನಿಯಾ ದೇಶದ ಜೊತೆ ಒಡಂಬಡಿಕೆ: ಸುಧಾಕರ್

    ಬೆಂಗಳೂರು: ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನದ ಮೂಲಕ ಸುಧಾರಣೆ ತರುವ ಪ್ರಯತ್ನಕ್ಕೆ ಆರೋಗ್ಯ ಇಲಾಖೆ ಎಸ್ಟೋನಿಯಾದ ಜೊತೆ ಹೊಸ ಒಡಂಬಡಿಕೆಯನ್ನು ಮಾಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

    ಎಸ್ಟೋನಿಯಾ ದೇಶದ ಭಾರತದ ರಾಯಭಾರಿ ಕತ್ರಿನ್ ಕಿವ್ ನೇತೃತ್ವದ ಉನ್ನತ ನಿಯೋಗ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಿತು. ಎಸ್ಟೋನಿಯಾ ಚಿಕ್ಕ ದೇಶವಾದರೂ ಅತೀ ಹೆಚ್ಚು ನವೋದ್ಯಮಗಳನ್ನು ಹೊಂದಿದೆ. ಹಾಗೆಯೇ ತಂತ್ರಜ್ಞಾನಕ್ಕೆ ಹೆಸರಾಗಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಅಭಿವೃದ್ಧಿ ಸಾಧಿಸಿದೆ. ಹೀಗಾಗಿ ನಿಯೋಗದ ಭೇಟಿ ರಾಜ್ಯಕ್ಕೆ ಲಾಭವಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್‌ನವರ ಟೊಳ್ಳು ಬೆದರಿಕೆಗೆ ಯಾವುದೇ ಸಚಿವರು ಅಂಜುವುದಿಲ್ಲ: ಸುಧಾಕರ್

    ಎಸ್ಟೋನಿಯಾ ದೇಶದ ಎಲ್ಲಾ ಪ್ರಜೆಗಳು ಹೆಲ್ತ್ ರಿಜಿಸ್ಟ್ರಿ ಮಾಡಿಕೊಂಡಿದ್ದಾರೆ. ಆ ದೇಶದಲ್ಲಿ ಟೆಲಿ ಮೆಡಿಸಿನ್ ವ್ಯವಸ್ಥೆ ಇದೆ. 400 ವರ್ಷಗಳ ಹಳೆಯ ವಿಶ್ವವಿದ್ಯಾನಿಲಯ ಕೂಡ ಇವೆ. ಇಂತಹ ದೇಶದ ಜೊತೆ ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ Exchange Programme ಒಡಂಬಡಿಕೆಯನ್ನು ಮಾಡಿಕೊಂಡಿದೆ. ಇದರಿಂದ ಆ ದೇಶದ ಆರೋಗ್ಯ ವ್ಯವಸ್ಥೆ ಬಗ್ಗೆ ಪರಿಚಯ ಸಿಗುವುದರ ಜೊತೆಗೆ ನಮ್ಮ ದೇಶದ ಆರೋಗ್ಯ ವ್ಯವಸ್ಥೆಯ ಬಗ್ಗೆ ಅವರಿಗೂ ತಿಳಿವಳಿಕೆ ಸಿಗಲಿದೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಈಶ್ವರಪ್ಪನಿಗೆ ಸೆಟಲ್ಮೆಂಟ್ ಮಾಡುತ್ತೇನೆ ಎಂದು ಮಹಾನಾಯಕ ಈ ಹಿಂದೆ ಸವಾಲು ಹಾಕಿದ್ದರು: ಬಿಜೆಪಿ

    ಎಸ್ಟೋನಿಯಾದಲ್ಲಿ ಜೆನೊಮಿಕ್ ಲ್ಯಾಬ್ ಇದೆ. ವ್ಯಕ್ತಿಯ ಡಿಎನ್‍ಎ ಮೂಲಕ ಯಾವ ವ್ಯಕ್ತಿಗೆ ಕ್ಯಾನ್ಸರ್, ಪಾರ್ಕಿನ್ಸನ್, ಸಾಂಕ್ರಾಮಿಕ ರೋಗಗಳು ಸೇರಿದಂತೆ ಯಾವ ಕಾಯಿಲೆ ಬರಬಹುದು ಅನ್ನುವುದನ್ನು ಸಂಶೋಧನೆ ಮಾಡಲಾಗುತ್ತದೆ. ಈ ಮೂಲಕ ಕಾಯಿಲೆಯನ್ನು ಬೇಗನೆ ಪತ್ತೆ ಹಚ್ಚಿ ಅದಕ್ಕೆ ಚಿಕಿತ್ಸೆ ನೀಡುವ ವ್ಯವಸ್ಥೆ ಇದೆ. ಈ ವ್ಯವಸ್ಥೆಯನ್ನು ಹೇಗೆ ಅರ್ಥಪೂರ್ಣವಾಗಿ ಬಳಸಿಕೊಳ್ಳಬಹುದು ಅನ್ನುವ ಬಗ್ಗೆ ಮಾತುಕತೆ ನಡೆದಿದೆ. ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬಹುದು ಅನ್ನುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮಾಹಿತಿ ಹಂಚಿಕೊಂಡರು.