ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಕೆ.ಸುಧಾಕರ್ ಹೇಳಿದರು.
ರಾಜ್ಯದಲ್ಲಿ ಕೋಮು ಸೌಹಾರ್ದ ಕದಡುವ ಘಟನೆಗಳಿಂದ ಶ್ರೀಲಂಕಾದಲ್ಲಾದಂತೆ ತುರ್ತು ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂಬ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದರು. ಈ ಹೇಳಿಕೆಗೆ ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸುಧಾಕರ್ ಅವರು, ಮೊದಲು ಶ್ರೀಲಂಕಾ ಪರಿಸ್ಥಿತಿ ಏನು ಎಂಬುದನ್ನು ಕುಮಾರಸ್ವಾಮಿ ಅವರು ಅರ್ಥ ಮಾಡಿಕೊಳ್ಳಲಿ. ದೇಶ ದಿವಾಳಿ ಆಗಿ ತುರ್ತು ಪರಿಸ್ಥಿತಿ ಬಂದಿದೆ. ಆದರೆ ನಮ್ಮ ದೇಶ ಸುಸ್ಥಿತಿಯಲ್ಲಿ ಚೆನ್ನಾಗಿದ್ದಾಗಲೂ ತುರ್ತು ಪರಿಸ್ಥಿತಿ ಹೇರಿದ್ದವರು ಕಾಂಗ್ರೆಸ್ ನವರು, ಹೀಗಾಗಿ ಇತಿಹಾಸವನ್ನು ಹೆಚ್‍ಡಿಕೆ ಅರ್ಥ ಮಾಡಿಕೊಳ್ಳಬೇಕು. ಶ್ರೀಲಂಕಾದಲ್ಲಿ ಏನಾಗುತ್ತಿದೆ, ಪಾಕಿಸ್ತಾನದಲ್ಲಿ ರಾಜಕೀಯ ಅರಾಜಕತೆ ಉಂಟಾಗಿದೆ. ಮಿಲಿಟರಿ ಆಡಳಿತ ಸರ್ಕಾರವನ್ನು ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ. ಆದರೆ ನಮ್ಮ ಭಾರತ ದೇಶ ಸುಂದರ ದೇಶ, ಇದರಿಂದ ಈ ರೀತಿ ಹೋಲಿಕೆ ಮಾಡುವುದು ಸರಿಯಲ್ಲ ಎಂದರು. ಇದನೂ ಓದಿ: ಕೇಜ್ರಿವಾಲ್ ಸಮ್ಮುಖದಲ್ಲಿ ಆಪ್ ಸೇರಿದ ಭಾಸ್ಕರ್ ರಾವ್
ಇದೇ ವೇಳೆ ರಾಜ್ಯಕ್ಕೆ ಕೇಂದ್ರ ಗೃಹ ಇಲಾಖೆ ಹಾಗೂ ಸಹಕಾರ ಇಲಾಖೆ ಸಚಿವ ಅಮಿತ್ ಶಾ ಬಂದು ಹೋದ ಮೇಲೆ ಬಿಜೆಪಿಗೆ ಹೊಸ ಉತ್ಸಾಹ ಮತ್ತುಷ್ಟು ಶಕ್ತಿ ಬಂದಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಇದ್ದು ಸಹಜವಾಗಿ ನಮ್ಮ ನಾಯಕರು ಬಂದಾಗ ರಾಜಕಾರಣದ ವಿಚಾರಗಳನ್ನು ಚರ್ಚೆ ಮಾಡಿ ಹೋಗಿದ್ದಾರೆ. ಇದರಿಂದ ನಮ್ಮಲ್ಲಿ ಮತ್ತಷ್ಟು ಹೊಸ ಚೈತನ್ಯ ಹುರುಪು ಬಂದಿದೆ. ಮೋದಿಯವರು ಸಹ ಬಂದರೆ ನಮಗೆ ಮತ್ತಷ್ಟು ಉತ್ಸಾಹ ಲವಲವಿಕೆ ಹೆಚ್ಚಾಗಲಿದೆ ಎಂದು ಹೇಳಿದರು.
ನಾನು ಬಿಜೆಪಿಗೆ ಯಾವುದೇ ನೀರಿಕ್ಷೆಗಳನ್ನು ಇಟ್ಟುಕೊಂಡು ಬಂದಿಲ್ಲ. ಪಕ್ಷ ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಯಾವುದೇ ಹುದ್ದೆ ನೀಡಿದರೂ ಸಮರ್ಪಕವಾಗಿ ನಿಭಾಯಿಸುವೆ ಎಂದು ತಿಳಿಸಿದರು. ಇದನೂ ಓದಿ: ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಅಪಘಾತದಲ್ಲಿ ಸಾವು
-ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚನೆ
ಬೆಂಗಳೂರು: ಉಕ್ರೇನ್ ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು, ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲೇ ಅವರ ಕಲಿಕೆ ಮುಂದುವರಿಸುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ವಿಧಾನಸೌಧದಲ್ಲಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ಹಾಗೂ ರಷ್ಯಾ ನಡುವೆ ನಿರಂತರವಾಗಿ ಯುದ್ಧ ನಡೆಯುತ್ತಿದೆ. ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 700ಕ್ಕೂ ಅಧಿಕ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲಾಗಿದೆ. ಅವರ ಶೈಕ್ಷಣಿಕ ಭವಿಷ್ಯ ರೂಪಿಸುವ ಬಗ್ಗೆ ಅವರೊಂದಿಗೆ ಚರ್ಚಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದರು. ಅದರಂತೆ ಚರ್ಚೆ ನಡೆಸಿದ್ದು, ತಾತ್ಕಾಲಿಕವಾಗಿ ಒಂದು ಅಭಿಪ್ರಾಯಕ್ಕೆ ಬರಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಉನ್ನತ ಮಟ್ಟದ ಸಮಿತಿ ರಚಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಅಲ್ಲ: ಆರಗ ಜ್ಞಾನೇಂದ್ರ
ಮೊದಲ ವರ್ಷದಿಂದ ಆರಂಭವಾಗಿ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು ಇಲ್ಲಿದ್ದಾರೆ. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿವೆ. ಈ ವಿದ್ಯಾರ್ಥಿಗಳು ಈ ಕಾಲೇಜುಗಳಲ್ಲಿ ತಮ್ಮ ವ್ಯಾಸಂಗವನ್ನು ಆಯಾ ವರ್ಷದಲ್ಲೇ ಮುಂದುವರಿಸುವಂತೆ ಕ್ರಮ ವಹಿಸುವಂತೆ ತೀರ್ಮಾನಿಸಲಾಗಿದೆ. ಈಗ ನಡೆಯುತ್ತಿರುವ ತರಬೇತಿಯನ್ನೇ ಮುಂದುವರಿಸಲಾಗುವುದು ಎಂದು ತಿಳಿಸಿದರು. ಇದರ ಜೊತೆಗೆ ಒಂದು ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನಿರ್ದೇಶಕರು ಹಾಗೂ ಮೆಡಿಕಲ್ ಕಾಲೇಜುಗಳ ಕೆಲ ಡೀನ್ ಗಳನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಉಕ್ರೇನ್‍ನಿಂದ ಹಿಂದಿರುಗಿದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು, ಎನ್‍ಎಂಸಿ ಹಾಗೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾದ ಬೇಡಿಕೆಗಳನ್ನು ಸಿದ್ಧಪಡಿಸುವ ಕೆಲಸವನ್ನು ಈ ಸಮಿತಿ ಮಾಡಲಿದೆ. ಈ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಹಾಗೂ ಕೇಂದ್ರ ಆರೋಗ್ಯ ಸಚಿವರ ಮುಂದೆ ಇಡಲಾಗುವುದು. ಈಗಾಗಲೇ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಕ್ರಮ ವಹಿಸುತ್ತಿದ್ದಾರೆ ಎಂದರು.
ಯುದ್ಧ ಬೇಗ ಕೊನೆಯಾಗಲಿ ಎಂಬುದೇ ಎಲ್ಲರ ಆಶಯ. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಮನಸ್ಥಿತಿ ಹೇಗಿರಲಿದೆ ಎಂದು ಗಮನಿಸಿ ಕಾನೂನಿನ ಚೌಕಟ್ಟಿನೊಳಗೆ ಕ್ರಮ ವಹಿಸಿ ಅವರ ಉತ್ತಮ ಭವಿಷ್ಯಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು. ವಿದ್ಯಾರ್ಥಿಗಳು ಸುರಕ್ಷಿತವಾಗಿ ಹಿಂದಿಗಿರುವುದೇ ದೊಡ್ಡ ಭಾಗ್ಯ. ನರೇಂದ್ರ ಮೋದಿಯವರು ಈ ವಿಚಾರದಲ್ಲಿ ಹೆಚ್ಚು ಆಸಕ್ತಿ ವಹಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲವಾಗಿ ಬೆಳಗಬೇಕಿದೆ. ಎಲ್ಲರೂ ಉತ್ತಮ ಮನೋಸ್ಥೈರ್ಯದಿಂದ ಇರಬೇಕು. ವಿದ್ಯಾರ್ಥಿಗಳಿಗೂ ವಿದ್ಯಾಭ್ಯಾಸದ ಬಗ್ಗೆ ಚಿಂತೆ ಇತ್ತು. ಈಗ ಸರ್ಕಾರ ಮಾಡಿರುವ ತೀರ್ಮಾನಕ್ಕೆ ವಿದ್ಯಾರ್ಥಿಗಳು ಕೂಡ ಒಪ್ಪಿದ್ದಾರೆ. ವೈದ್ಯಕೀಯ ಶಿಕ್ಷಣದಲ್ಲಿ ಮಾರ್ಪಾಡು ತರುವ ಬಗ್ಗೆ ವಿದ್ಯಾರ್ಥಿಗಳು ಸಲಹೆ ನೀಡಿದ್ದಾರೆ. ಈ ಬಗ್ಗೆಯೂ ಸಮಿತಿಯಲ್ಲಿ ಚರ್ಚೆ ಮಾಡಲಾಗುತ್ತದೆ ಎಂದು ನುಡಿದರು. ಇದನ್ನೂ ಓದಿ: ಮೂರು ಕೃಷಿ ಕಾಯ್ದೆಗಳಿಗೆ ಶೇ.86 ರೈತ ಸಂಘಟನೆಗಳ ಬೆಂಬಲವಿತ್ತು: ʻಸುಪ್ರೀಂʼ ಸಮಿತಿ ವರದಿ ಬಹಿರಂಗ
ಉಕ್ರೇನ್ ನಿಂದ ಮರಳಿರುವ ಕರ್ನಾಟಕದ ವೈದ್ಯಕೀಯ ವಿದ್ಯಾರ್ಥಿಗಳನ್ನು ಇಂದು ವಿಧಾನಸೌಧದಲ್ಲಿ ಭೇಟಿ ಮಾಡಲಾಯಿತು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಅತ್ಯಂತ ಕಳಕಳಿ ಇದ್ದು, ತಮ್ಮ ಶಿಕ್ಷಣವನ್ನು ಮುಂದುವರೆಸಲು ಅನುಕೂಲವಾಗುವಂತೆ ಶೀಘ್ರದಲ್ಲೇ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ಆತ್ಮಸ್ಥೈರ್ಯ ತುಂಬಲಾಯಿತು. pic.twitter.com/eILUEgUNdw
ಶುಲ್ಕ ಇಲ್ಲ:
ಸದ್ಯಕ್ಕೆ ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಈ ವಿದ್ಯಾರ್ಥಿಗಳನ್ನು ಅಧಿಕೃತವಾಗಿ ನೋಂದಣಿ ಮಾಡಿಕೊಳ್ಳುತ್ತಿಲ್ಲ. ಆದರೆ ಅವರ ಕಲಿಕೆ, ತರಬೇತಿಯನ್ನು ಇಲ್ಲಿ ಮುಂದುವರಿಸಲಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಯಾವುದೇ ಶುಲ್ಕ ಪಾವತಿ ಮಾಡಬೇಕಿಲ್ಲ. ಉಚಿತವಾಗಿಯೇ ಶಿಕ್ಷಣ ಮುಂದುವರಿಸಬಹುದು. ಸಮಿತಿಯಿಂದ ಕೇಂದ್ರ ಸರ್ಕಾರಕ್ಕೆ ಎಲ್ಲ ಬಗೆಯ ಮನವಿಗಳನ್ನು ಸಲ್ಲಿಸಲಾಗುವುದು. ಈ ವಿಚಾರದಲ್ಲಿ ಕೇಂದ್ರ ಸರ್ಕಾರವೇ ತೀರ್ಮಾನ ಕೈಗೊಳ್ಳಲಿದೆ ಸ್ಪಷ್ಟಪಡಿಸಿದರು.
ಬೆಂಗಳೂರು: ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ನೆರವಾಗಲು ಹೊಸ ಸಮಿತಿ ರಚನೆ ಮಾಡಿರುವುದಾಗಿ ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿಕೆ ನೀಡಿದರು.
ಉಕ್ರೇನ್ ವಿದ್ಯಾರ್ಥಿಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಸುಧಾಕರ್, ಉಕ್ರೇನ್‌ನಿಂದ ಕರ್ನಾಟಕಕ್ಕೆ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇಫಾಗಿ ಬಂದಿದ್ದಾರೆ. ಅವರ ಜೊತೆ ಸಭೆ ನಡೆಸುವಂತೆ ಸಿಎಂ ಹೇಳಿದ್ದರು. ಹೀಗಾಗಿ ಇಂದು ಸಭೆ ನಡೆಸಿದ್ದೇವೆ ಎಂದರು.
ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಬಾರದು. ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳು ಇವೆ. ತಕ್ಷಣಕ್ಕೆ ಅದೇ ಕಾಲೇಜುಗಳಲ್ಲಿ ಉಕ್ರೇನ್‌ನಿಂದ ಬಂದಿರುವ ವಿದ್ಯಾರ್ಥಿಗಳು ಕಲಿಕೆ ಮುಂದುವರಿಸಬಹುದು. ವಿದ್ಯಾರ್ಥಿಗಳು ಇರುವ ಜಿಲ್ಲೆಗಳಲ್ಲೇ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಲಾಗುತ್ತದೆ ಎಂದರು. ಇದನ್ನೂ ಓದಿ: ಮಾಧುಸ್ವಾಮಿ ನನಗೆ ದೊಡ್ಡ ಭೂತದ ತರ ಕಾಣಿಸಿಬಿಟ್ರು: ಶಾಸಕ ರಂಗನಾಥ್
ನಾನು ಸಮಿತಿಯೊಂದನ್ನು ರಚನೆ ಮಾಡಿದ್ದೇನೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದಲ್ಲಿ ಈ ಸಮಿತಿ ರಚನೆಯಾಗಿದೆ. ಉಕ್ರೇನ್‌ನಿಂದ ವಾಪಸ್ ಆಗಿರುವ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಏನೇನು ಕ್ರಮಗಳನ್ನು ಕೈಗೊಳ್ಳಬಹುದು ಎಂದು ಸಮಿತಿ ವರದಿ ನೀಡಲಿದೆ. ಒಂದು ವಾರ ಅಥವಾ 10 ದಿನಗಳಲ್ಲಿ ಸಮಿತಿ ವರದಿ ಕೊಡಲಿದೆ. ಇದನ್ನ ನಾವು ಕೇಂದ್ರಕ್ಕೆ ಸಲ್ಲಿಸುತ್ತೇವೆ ಎಂದು ತಿಳಿಸಿದರು.
ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರ ಮೋದಿ ಪ್ರಯತ್ನ ನಡೆಸಿದ್ದಾರೆ. ಯುದ್ಧ ಬಹಳ ಬೇಗ ಮುಗಿಯುವ ಲಕ್ಷಣ ಇದೆ. ಇರುವ ನಿಯಮಗಳಡಿ ಅವರ ಭವಿಷ್ಯ ರೂಪಿಸುವ ಕೆಲಸ ಮಾಡುತ್ತೇವೆ. ಅವರು ಬದುಕಿ ಬಂದಿರುವುದೇ ನಮ್ಮ ಭಾಗ್ಯ. ನಿಮ್ಮ ಭವಿಷ್ಯ ಉಜ್ವಲವಾಗಬೇಕು. ಮಾನಸಿಕವಾಗಿ ಕುಗ್ಗಬಾರದು. ಎಲ್ಲಾ ರೀತಿಯ ಸಹಕಾರವನ್ನು ಕೊಡುವ ಕೆಲಸ ನಾವು ಮಾಡುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ತವರಿಗೆ ನವೀನ್ ಮೃತದೇಹ- ಪ್ರಧಾನಿಗೆ ಕರೆ ಮಾಡಿ ಕೃತಜ್ಞತೆ ಸಲ್ಲಿಸಿದ ಮುಖ್ಯಮಂತ್ರಿ
ಕಲಿಕೆ ಹಿಂದೆ ಬೀಳುತ್ತದೆ ಎಂಬ ಚಿಂತೆ ವಿದ್ಯಾರ್ಥಿಗಳಲ್ಲಿತ್ತು. ಇದೀಗ ಉತ್ತಮ ಭವಿಷ್ಯ ರೂಪಿಸುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ರಾಜ್ಯದಲ್ಲಿರುವ ಕಾಲೇಜುಗಳಲ್ಲಿ ಅವರ ನೋಂದಣಿ ಮಾಡಿಕೊಳ್ಳಲು ಅವಕಾಶವಿಲ್ಲ. ಆದರೆ ಮೆಡಿಕಲ್ ಕಾಲೇಜುಗಳಲ್ಲಿ ಕಲಿಕೆಗೆ ತಾತ್ಕಾಲಿಕ ಅವಕಾಶ ಮಾಡಿಕೊಡುತ್ತೇವೆ. ಎಲ್ಲವೂ ಉಚಿತವಾಗಿರುತ್ತದೆ. ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣದಲ್ಲಿ ಸುಧಾರಣೆ ತರಲು ಹಲವು ಸಲಹೆ ನೀಡಿದ್ದಾರೆ. ಅದನ್ನು ಸಮಿತಿಯ ಮುಂದೆ ಹೇಳಲು ಮನವಿ ಮಾಡಿಕೊಂಡಿದ್ದೆನೆ. ಈ ವಿದ್ಯಾರ್ಥಿಗಳು ಕಲಿಕೆಗೆ ಶುಲ್ಕ ಕೊಡಬೇಕಾಗಿಲ್ಲ ಸಮಿತಿ ವರದಿ ಬಂದ ಬಳಿಕ ಶಾಶ್ವತ ಪರಿಹಾರ ನೀಡುತ್ತೆವೆ ಎಂದರು.
ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯಲ್ಲಿ ನಿರಂತರವಾಗಿ ನಡೆಯುತ್ತಿರುವ ವಿವಿಧ ಅಕ್ರಮಗಳಿಗೆ ಸಂಬಂಧಿಸಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ. ಸುಧಾಕರ್‌ರವರಿಂದ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ ಆಗ್ರಹಿಸಿದೆ.
ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಾರ್ಟಿಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ, ಆರೋಗ್ಯ ಇಲಾಖೆಯ ವೈದ್ಯರು, ಅರೆವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ, ಬಡ್ತಿ ಹಾಗೂ ವರ್ಗಾವಣೆಯಲ್ಲಿ ಭ್ರಷ್ಟಾಚಾರವು ಎಗ್ಗಿಲ್ಲದೇ ನಡೆಯುತ್ತಿದೆ. ವೈದ್ಯಕೀಯ ಉಪಕರಣಗಳು ಹಾಗೂ ಔಷಧಿಗಳ ಖರೀದಿ, ನಿರ್ಮಾಣ ಕಾಮಗಾರಿ, ಹಾಗೂ ಮೂಲಸೌಕರ್ಯ ಕಲ್ಪಿಸುವುದರಲ್ಲಿ ಭಾರೀ ಪ್ರಮಾಣದ ಅಕ್ರಮವಾಗುತ್ತಿದೆ. ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಪಡೆಯಲು ರೋಗಿಗಳು ಲಂಚ ನೀಡಬೇಕಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಯುದ್ಧಭೂಮಿಯಿಂದ ಕನ್ನಡಿಗರನ್ನು ಕರೆತಂದದ್ದು ಮೋದಿ ಭಗೀರಥ ಪ್ರಯತ್ನ: ಸಿಎಂ
ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಹಾಗೂ ಬಿಜೆಪಿಯ ಮಾಜಿ ಶಾಸಕ ಡಾ. ಸಾರ್ವಭೌಮ ಬಗಲಿಯವರು ಕೋವಿಡ್ ಮೊದಲ ಮತ್ತು ಎರಡನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಉಪಕರಣ ಹಾಗೂ ಔಷಧಿ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ 40 ದೂರು ನೀಡಿದ್ದಾರೆ. ಈ ಸಂಬಂಧ ತನಿಖೆಯೇ ನಡೆಯದಿರುವುದು ದುರದೃಷ್ಟಕರ. ಆರೋಗ್ಯ ಸಚಿವರು ರಾಜೀನಾಮೆ ನೀಡಿ, ನಿಷ್ಪಕ್ಷಪಾತ ತನಿಖೆ ನಡೆದರೆ ಆರೋಗ್ಯ ಇಲಾಖೆಯಲ್ಲಿನ ಕೋಟಿಗಟ್ಟಲೆ ಅವ್ಯವಹಾರ ಬಯಲಾಗುತ್ತದೆ. ರಾಜ್ಯಪಾಲರು ಶೀಘ್ರವೇ ಈ ವಿಚಾರದಲ್ಲಿ ಮಧ್ಯಪ್ರವೇಶಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನಿವೃತ್ತ ಕೆಎಎಸ್ ಅಧಿಕಾರಿ ಹಾಗೂ ಎಎಪಿಯ ರಾಜ್ಯ ಕಾರ್ಮಿಕ ಘಟಕದ ಅಧ್ಯಕ್ಷರಾದ ರವಿಶಂಕರ್ ಮಾತನಾಡಿ, ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಹಣದ ದಾಹಕ್ಕೆ ಸಾಮಾನ್ಯ ರೋಗಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಯಿಂದ ರೋಗಿಯ ಶವವನ್ನು ಹೊರತರಬೇಕಾದರೂ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಂಚ ನೀಡಬೇಕಾಗಿದೆ. ಆರೋಗ್ಯ ಇಲಾಖೆಯ ಟೆಂಡರ್ ಪ್ರಕ್ರಿಯೆಗಳಲ್ಲಿ ನಿಯಮಗಳನ್ನು ಗಾಳಿಗೆ ತೂರುವುದು ಸಾಮಾನ್ಯವಾಗಿದ್ದರೂ, ಯಾರ ವಿರುದ್ಧವೂ ತನಿಖೆ ನಡೆಯುತ್ತಿಲ್ಲ. ಭಷ್ಟ ಸಚಿವರಿಂದಾಗಿ ಇಲಾಖೆಯ ಇಡೀ ವ್ಯವಸ್ಥೆಯೇ ಭ್ರಷ್ಟವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಇದನ್ನೂ ಓದಿ: ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ – ಇಬ್ಬರು ಸಜೀವ ದಹನ ಓರ್ವ ಗಂಭೀರ
ಆಮ್ ಆದ್ಮಿ ಪಾರ್ಟಿ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ರಾಜಶೇಖರ್ ದೊಡ್ಡಣ್ಣ ಹಾಗೂ ಪಕ್ಷದ ಮಹಿಳಾ ಮುಖಂಡರಾದ ಅರ್ಚನಾ ಭಾಗವಹಿಸಿದ್ದರು.
ಬೆಂಗಳೂರು: ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯದ ಬಗ್ಗೆ ಕರ್ನಾಟಕ ಸರ್ಕಾರ ಹೊರಡಿಸಿದ್ದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ. ಕೆಲವರು ಮಕ್ಕಳೊಂದಿಗೆ ಪೋಷಕರನ್ನು ಉದ್ದೇಶಪೂರ್ವಕವಾಗಿ ಹಾದಿ ತಪ್ಪಿಸಿದ್ದರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಹಿಜಬ್ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಕ್ಕಳು ಶಾಲೆಗಳಲ್ಲಿ ಶಿಕ್ಷಣದ ಕಡೆ ಗಮನ ನೀಡಬೇಕು. ಶಿಕ್ಷಣದಿಂದ ಆರೋಗ್ಯಯುತ ಸಮಾಜದ ನಿರ್ಮಾಣ ಸಾಧ್ಯ. ದೇಶದ ಅಭಿವೃದ್ಧಿಯಲ್ಲೂ ಶಿಕ್ಷಣದ ಪಾತ್ರ ಬಹಳ ದೊಡ್ಡದಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಹಿಜಬ್ ಇಸ್ಲಾಂ ಧರ್ಮದ ಅಗತ್ಯದ ಆಚರಣೆ ಅಲ್ಲ: ಹೈಕೋರ್ಟ್ ಐತಿಹಾಸಿಕ ತೀರ್ಪು
ಶಾಲೆಗಳು ದೇಗುಲಗಳಿಗೆ ಸಮಾನ. ಇಲ್ಲಿ ಜಾತಿ, ಮತ ಮತ್ತು ಧರ್ಮದ ಭೇದವಿಲ್ಲ. ಸಮವಸ್ತ್ರ ಅನ್ನುವುದು ಏಕತೆ ಮತ್ತು ಸಮಾನತೆಯನ್ನು ಬಿಂಬಿಸಲು ಇರುವ ಸಣ್ಣ ಮಾರ್ಗ. ಹೀಗಾಗಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ಧರಿಸುವುದರ ಜೊತೆಗೆ ಕಲಿಕೆ ಬಗ್ಗೆ ಗಮನಕೊಡಬೇಕು. ವೈಜ್ಞಾನಿಕ ದೃಷ್ಟಿಕೋನ ಇಟ್ಟುಕೊಂಡು ಮಕ್ಕಳು ಶಾಲೆಯಲ್ಲಿ ಅನ್ಯೋನ್ಯ ಭಾವನೆಯಿಂದ ಶಿಕ್ಷಣ ಪಡೆಯಬೇಕು ಎಂದು ಹೇಳಿದರು. ಇದನ್ನೂ ಓದಿ: ಹಿಜಬ್ ಬಗ್ಗೆ ಎದ್ದಿದ್ದ 3 ಪ್ರಶ್ನೆಗಳಿಗೆ ಸಿಕ್ತು ಉತ್ತರ: ಅರ್ಜಿದಾರರು, ಸರ್ಕಾರ, ಹೈಕೋರ್ಟ್ ಹೇಳಿದ್ದೇನು?
ಶಾಲೆಗಳಲ್ಲಿ ಶಿಕ್ಷಣ ಹೊರತುಪಡಿಸಿ ಬೇರೆ ವಿಷಯಗಳಿಗೆ ಆದ್ಯತೆ ನೀಡಬಾರದು. ಧಾರ್ಮಿಕ ವಿಚಾರದಲ್ಲಿ ಯಾರೋ ಕೆಲವರು ಉದ್ದೇಶಪೂರ್ವಕವಾಗಿ ಮಕ್ಕಳು ಹಾಗೂ ಪೋಷಕರ ಹಾದಿ ತಪ್ಪಿಸಿದ್ದರು. ಸಮಾಜದ ಶಾಂತಿ ಕದಡಲು ಇಂತಹ ಕೃತ್ಯಗಳಿಗೆ ಇಳಿಯುವುದು ಸರಿಯಲ್ಲ ಎಂದರು.
ಉಡುಪಿಯಲ್ಲಿ ಆರಂಭವಾದ ಹಿಜಬ್ ವಿವಾದ ಬೇರೆ ಬೇರೆ ಕಾರಣಗಳಿಂದ ಅಂತರಾಷ್ಟ್ರೀಯ ಸುದ್ದಿಯಾಯಿತು. ಕೆಲ ರಾಜಕೀಯ ಪಕ್ಷಗಳು ಹಿಜಬ್ ಗಲಾಟೆಗೆ ಕುಮ್ಮಕ್ಕು ನೀಡಿದವು. ರಾಜಕೀಯ ಪಕ್ಷಗಳ ಆಟಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಸಮಾನ ಶಿಕ್ಷಣ ಮತ್ತು ಸಮಾಜದ ಅಭಿವೃದ್ಧಿ ಕಡೆ ಎಲ್ಲರೂ ಗಮನ ಕೊಡಬೇಕು. ಹೈಕೋರ್ಟ್ ತೀರ್ಪನ್ನು ಎಲ್ಲರೂ ಗೌರವಿಸಿ ಅದನ್ನು ಪಾಲಿಸಬೇಕು. ಸಮಾಜದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಬೇಕು. ಪೋಷಕರು ಕೂಡ ಮಕ್ಕಳ ವಿಚಾರ ಬಂದಾಗ ಯಾವುದೇ ವಿವಾದಕ್ಕೆ ಬೆಲೆ ಕೊಡದೆ ಮಕ್ಕಳ ಭವಿಷ್ಯವನ್ನು ಕಾಪಾಡಲು ಒತ್ತು ನೀಡಬೇಕು ಎಂದು ಸಚಿವರು ಮನವಿ ಮಾಡಿದರು.
ಬೆಂಗಳೂರು: ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ವಿದ್ಯಾರ್ಥಿಗಳಿಗೆ ಮೀಸಲಾತಿ ನೀಡದ ವಿಚಾರವಾಗಿ ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು ಎಂದು ವಿಧಾನಸಭೆಯಲ್ಲಿ ಶಾಸಕ ರಾಜುಗೌಡ ಆಕ್ರೋಶ ಹೊರಹಾಕಿದ್ದಾರೆ.
ರಾಯಚೂರಿನ ನವೋದಯ ಮೆಡಿಕಲ್ ಕಾಲೇಜಿನಲ್ಲಿ 371ಜೆ ಪ್ರಕಾರ ಮೀಸಲಾತಿ ನೀಡದ ವಿಚಾರವಾಗಿ ಶೂನ್ಯವೇಳೆಯಲ್ಲಿ ಶಿವರಾಜ್ ಪಾಟೀಲ್ ಪ್ರಸ್ತಾಪ ಮಾಡಿದರು. ರಾಯಚೂರು ನವೋದಯ ವೈದ್ಯಕೀಯ ಕಾಲೇಜು ಮಂಡಳಿ 371-ಜೆ ಕುತ್ತು ತರುವಂತೆ ನಡೆದುಕೊಂಡಿದೆ. ಹೈದರಾಬಾದ್ ಕರ್ನಾಟಕಕ್ಕೆ ಪ್ರತ್ಯೇಕ ಮೀಸಲಾತಿ ಕೊಡುವುದಕ್ಕೆ ಆಗಲ್ಲ ಎಂದು ಕೋರ್ಟ್‍ನಿಂದ ತಡೆಯಾಜ್ಞೆ ತಂದಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳ ಹಿತ ಕಾಪಾಡಬೇಕೆಂದು ಆಗ್ರಹಿಸಿದರು. ಈ ವೇಳೆ ಧ್ವನಿಗೂಡಿಸಿದ ಶಾಸಕ ರಾಜುಗೌಡ, ನಿಮಗೆಲ್ಲ ಸ್ವಾತಂತ್ರ್ಯ 1947ರಲ್ಲಿ ಸಿಕ್ಕರೆ ನಮಗೆ 1948ರಲ್ಲಿ ಸಿಕ್ಕಿರೋದು 371ಜೆ ನಮಗೆ ಹೋರಾಟದಿಂದ ಬಂದಿರುವುದು, ಇದನ್ನು ಪಡೆದುಕೊಳ್ಳಲು ಬಲಿದಾನ ಆಗಿದೆ ನಮ್ಮ ಸೌಲಭ್ಯ ತೆಗೆದುಕೊಂಡು ನಮ್ಮ ಮಕ್ಕಳಿಗೆ ಮೀಸಲಾತಿ ಕೊಡಲ್ಲ ಅಂದ್ರೆ ಹೇಗೆ? ಪ್ರಶ್ನಿಸಿದರು. ಇದನ್ನೂ ಓದಿ: ಜನ ಆಡಳಿತ ಪಕ್ಷದಲ್ಲಿ ಏನಾಗ್ತಿದೆ ಅಂತ ನೋಡ್ತಿದ್ದಾರೆ: ಯುಟಿ ಖಾದರ್
ನಮ್ಮ ಕ್ಷೇತ್ರದಲ್ಲಿ ನಾವು ಜನರ ಮುಂದೆ ಹೇಗೆ ಮುಖ ತೋರಿಸುವುದು? ಸರ್ಕಾರದ ವಕೀಲರು ಕೋರ್ಟ್‍ನಲ್ಲಿ ಸಮರ್ಥವಾಗಿ ವಾದ ಮಂಡನೆ ಮಾಡಬೇಕು. ಈ ಬಗ್ಗೆ ಸದನ ಸಮಿತಿ ರಚನೆ ಮಾಡಿ ಎಂದು ರಾಜುಗೌಡ ಆಗ್ರಹಿಸಿದರು. ಇದನ್ನೂ ಓದಿ: ಫಲಿತಾಂಶಕ್ಕೂ ಮೊದಲೇ ಕಾಂಗ್ರೆಸ್ ಹೈಕಮಾಂಡ್‍ನಿಂದ ಡಿಕೆಶಿಗೆ ಟಾಸ್ಕ್
ಇದಕ್ಕೆ ಉತ್ತರಿಸಿದ ಸಚಿವ ಡಾ.ಸುಧಾಕರ್, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದೆ. ಈಗಾಗಲೇ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದ ಬಳಿಕ ಪ್ರವೇಶಾತಿ ಮಾಡಿಸಿಕೊಂಡಿದ್ದಾರೆ. ಇಂದು ಕೋರ್ಟ್‍ಲ್ಲಿ ಕೇಸ್ ಸಹ ಇದೆ. ಅಡ್ವೋಕೇಟ್ ಜನರಲ್ ಖುದ್ದು ಇಂದು ಕೋರ್ಟ್‍ಲ್ಲಿ ಇದ್ದಾರೆ. ಯಾವುದೇ ಕಾರಣಕ್ಕೂ ಹೈದ್ರಾಬಾದ್ ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಎಂದು ಸದನಕ್ಕೆ ಭರವಸೆ ನೀಡಿದರು.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಇಂದು ಚಿಕ್ಕಬಳ್ಳಾಪುರ ತಾಲೂಕು ನಂದಿ ಗ್ರಾಮದಲ್ಲಿರುವ ಐತಿಹಾಸಿಕ ಪುರಾಣ ಪ್ರಸಿದ್ಧ ಶ್ರೀ ಭೋಗನಂದೀಶ್ವರ ದೇವಾಲಯದ ಆವರಣದಲ್ಲಿ ಶಿವೋತ್ಸವ ಕಾರ್ಯಕ್ರಮ ವಿಜ್ರಂಭಣೆಯಿಂದ ಆರಂಭವಾಗಿದೆ.
ಕ್ಷೇತ್ರದ ಶಾಸಕ, ಸಚಿವ ಡಾ.ಕೆ ಸುಧಾಕರ್ ಫೌಂಡೇಶನ್ ವತಿಯಿಂದ ಇದೇ ಪ್ರಪ್ರಥಮ ಬಾರಿಗೆ ಮಹಾಶಿವರಾತ್ರಿ ಹಬ್ಬದ ಅಂಗವಾಗಿ ನಂದಿ ಶಿವೋತ್ಸವ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಶಿವೋತ್ಸವಕ್ಕೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಸಿರಿಗೆರೆ ಶಿವಾಚಾರ್ಯ ಶ್ರೀಗಳು ಹಾಗೂ ಸದ್ಗುರು ಮಧುಸೂದನಸಾಯಿ ಶಂಖ ಊದುವ ಮೂಲಕ ಚಾಲನೆ ನೀಡಿದರು. ಇದನ್ನೂ ಓದಿ: ಗೋಕರ್ಣ, ಮುರುಡೇಶ್ವರದಲ್ಲಿ ವಿಜ್ರಂಭಣೆಯ ಶಿವರಾತ್ರಿ ಆಚರಣೆ
ಶಿವಲಿಂಗಕ್ಕೆ ಅಭಿಷೇಕ ಮಾಡುವ ಮೂಲಕ ಶಿವೋತ್ಸವ ಕಾರ್ಯಕ್ರಮ ಅರಂಭವಾಯಿತು. ಶಿವರಾತ್ರಿ ಜಾಗರಣೆ ಪ್ರಯುಕ್ತ ವೇದಿಕೆ ಕಾರ್ಯಕ್ರಮದ ನಂತರ ನಿರಂತರವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುಲಿವೆ. ಈ ನಂದಿ ಶಿವೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಹಾಡುಗಾರರಾದ ಅನನ್ಯ ಭಟ್, ರಘು ದೀಕ್ಷಿತ್, ವಿಜಯ್ ಪ್ರಕಾಶ್, ಭರತನಾಟ್ಯ ಕಲಾವಿದೆ ಲಕ್ಷ್ಮೀ ಗೋಪಾಲಸ್ವಾಮಿ, ಸೇರಿದಂತೆ ಹಲವು ಕಲಾವಿದರು ಭಾಗಿಯಾಗಿ ತಮ್ಮ ಕಲಾ ಪ್ರದರ್ಶನ ಮಾಡಲಿದ್ದಾರೆ. ಜೊತೆಗೆ ನಗೆ ಹಬ್ಬ ಕಾರ್ಯಕ್ರಮ ಸಹ ಆಯೋಜನೆ ಮಾಡಲಾಗಿದ್ದು ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಲೇಸರ್ ಶೋ ಹಾಗೂ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಶಿವರಾತ್ರಿ ಪ್ರಯುಕ್ತ ಜೆಪಿ ಪಾರ್ಕ್‌ನಲ್ಲಿ ಅಹೋರಾತ್ರಿ ಕಾರ್ಯಕ್ರಮ – 1 ಸಾವಿರ ಸಾಧಕರಿಗೆ ಸನ್ಮಾನ
ವೈಭವದ ಶಿವೋತ್ಸವದ ಅಂಗವಾಗಿ ಇಡೀ ದೇವಾಲಯಕ್ಕೆ ಹೂವಿನ ಅಲಂಕಾರ ಮಾಡಲಾಗಿದ್ದು, ನಾಳೆ ನಂದಿ ಶ್ರೀ ಭೋಗನಂದಿಶ್ವರನ ಜೋಡಿ ಬ್ರಹ್ಮ ರಥೋತ್ಸವ ನೆರವೇರಲಿದೆ. ಶಿವರಾತ್ರಿ ಹಿನ್ನೆಲೆ ಈಗಾಗಲೇ ಸಾವಿರಾರು ಮಂದಿ ಭಕ್ತರು ನಂದಿ ಗ್ರಾಮದ ಭೋಗನಂದೀಶ್ವರನ ಆಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಮಂತ್ರಾಲಯದಲ್ಲಿ ಮಹಾಶಿವರಾತ್ರಿ ವಿಶೇಷ ಪೂಜೆ – ಭಕ್ತರಲ್ಲಿ ಸಂಭ್ರಮ
ಚಿಕ್ಕಬಳ್ಳಾಪುರ: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು ಬಣ್ಣಿಸಲಾಗುತ್ತಿದೆ. ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯೂ ಒಂದು ಜಿಲ್ಲೆ, ಹಲವು ಜಗತ್ತು. ಪ್ರವಾಸಿ ತಾಣ, ದೇವಾಲಯ, ನದಿ, ಸರೋವರಗಳ ಜೊತೆ ಐತಿಹಾಸಿಕ ಸ್ಥಳಗಳು ಕೂಡ ಚಿಕ್ಕಬಳ್ಳಾಪುರದಲ್ಲಿವೆ. ನಂದಿ ಬೆಟ್ಟದಲ್ಲಿರುವ ಭೋಗನಂದೀಶ್ವರ ದೇವಸ್ಥಾನ ತನ್ನದೇ ಆದ ವಿಶಿಷ್ಠ ಪ್ರಾಮುಖ್ಯತೆ ಪಡೆದಿದೆ ಎಂದು ಹೇಳಿದರು. ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ ಹೆಸರಲ್ಲಿ ಕಾಂಗ್ರೆಸ್ ರಾಜಕೀಯವಾಗಿ ದುರ್ಬಳಕೆ : ಡಾ.ಕೆ.ಸುಧಾಕರ್
ಮಹಾಶಿವರಾತ್ರಿ ದಿನ ನಂದೀ ಕ್ಷೇತ್ರದಲ್ಲಿ ವಿಭಿನ್ನ ಮತ್ತು ವೈಭವದ ಶಿವೋತ್ಸವ ಆಚರಿಸಲು ತೀರ್ಮಾನ ಮಾಡಲಾಗಿದೆ. ಇಡೀ ಜಿಲ್ಲೆಯ ಹಾಗೂ ನಾಡಿನ ಜನತೆಗೆ ಶಿವನ ಅನುಗ್ರಹ ಸಿಗಬೇಕು ಅನ್ನುವ ಆಶಯದಿಂದ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಭೋಗನಂದೀಶ್ವರ ದೇವಾಲಯ ಪ್ರಾಚೀನ ದೇವಾಲಯ. ಈ ಕ್ಷೇತ್ರ, ಕದಂಬರು, ಚೋಳರು, ಹೊಯ್ಸಳರು, ವಿಜಯನಗರದ ಆಳ್ವಿಕೆಯನ್ನು ಕೂಡ ಕಂಡಿದೆ. ಈ ಬಾರಿ ಜಿಲ್ಲಾಡಳಿತದ ಸಹಕಾರದಿಂದ ಶಿವೋತ್ಸವ ನಡೆಸಲಾಗುತ್ತದೆ. ಮುಂದಿನ ವರ್ಷದಿಂದ ಸರ್ಕಾರವೇ ಇದರ ನಿರ್ವಹಣೆ ಮಾಡಲಿದೆ ಎಂದರು.
ರಾಜ್ಯದಲ್ಲಿ ಮೈಸೂರು ಚಾಮುಂಡೇಶ್ವರಿ ಕ್ಷೇತ್ರವು ದಸರಾ ಆಚರಣೆಗೆ ಪ್ರಸಿದ್ಧಿ ಹೊಂದಿದ್ದರೆ, ಹಂಪಿ ಕೂಡ ಹಂಪಿ ಉತ್ಸವಕ್ಕೆ ಜನಪ್ರಿಯತೆ ಪಡೆದಿದೆ. ಬೆಂಗಳೂರಿನಲ್ಲಿ ಕರಗ ಉತ್ಸವ ವಿಶ್ವಖ್ಯಾತಿ ಪಡೆದಿದೆ. ಈ ವರ್ಷದಿಂದ ಆರಂಭವಾಗುವ ಶಿವೋತ್ಸವ ಕೂಡ ಇದೇ ರೀತಿಯ ಖ್ಯಾತಿಯನ್ನು ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಬಾರಿಯ ಶಿವೋತ್ಸವಕ್ಕೆ ಥಾವರ್ ಚಾಂದ್ ಗೆಹ್ಲೋಟ್, ಚಾಲನೆ ಕೊಡಲಿದ್ದಾರೆ. ಮುಖ್ಯಮಂತ್ರಿಗಳಿಗೆ ಕೂಡ ಆಹ್ವಾನ ನೀಡಲಾಗಿದೆ. ಅನೇಕ ಸಂತರು, ಗುರುಗಳು ಇದರಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. ಸಿರಿಗೆರೆಯ ಮಹಾಸ್ವಾಮಿಗಳು, ಸತ್ಯ ಸಾಯಿ ಸಂಸ್ಥೆಯ ಮಧುಸೂದನ್ ಗುರುಗಳು ಕೂಡ ಶಿವೋತ್ಸವಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಪೋಷಕರನ್ನು ಕಳೆದುಕೊಂಡು ನಡುಬೀದಿಯಲ್ಲೇ ಬಾಲಕನ ಆಕ್ರಂದನ
ಮಾರ್ಚ 1ರ ಸಂಜೆ 6 ಗಂಟೆಗೆ ಆರಂಭವಾಗಿ, ಬೆಳಗ್ಗೆ ರಥೋತ್ಸವ ನಡೆಯುವ ತನಕ ನಿರಂತರವಾಗಿ ಸಾಂಸ್ಕೃತಿಕ, ಭಕ್ತಿ ಹಾಗೂ ಜಾಗರಣೆ ಕಾರ್ಯಕ್ರಮಗಳು ನಡೆಯಲಿವೆ. ರಾಷ್ಟ್ರೀಯ ಮಟ್ಟದ ಸಂಗೀತ, ನಾಟ್ಯ ಕಲಾವಿದರು, ಚಿತ್ರ ತಾರೆಯರು ಕೂಡ ಇದರಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 25 ಹೆಸರಾಂತ ವಿವಿಧ ತಂಡಗಳು ಭಾಗವಹಿಸಲಿವೆ. ನಗೆ ಹಬ್ಬ ಕೂಡ ಇರಲಿದೆ. ಜಾನಪದ ಕಲೆಗಳು, ಭರತ ನಾಟ್ಯ ಕೂಡ ಆಕರ್ಷಣೆಯಾಗಿರಲಿದೆ. ಮಧ್ಯಾಹ್ನ 1 ಗಂಟೆಯಿಂದ ಹಿಡಿದು, ಮುಂದಿನ ದಿನ ರಥೋತ್ಸವ ಆಗುವ ತನಕ ನಿರಂತರ ಅನ್ನ ಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.
ಮಹಾಶಿವರಾತ್ರಿ ಪ್ರಯುಕ್ತ ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ 'ನಂದಿ ಶಿವೋತ್ಸವ'ದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಳ್ಳಲಾಯಿತು.
ನಂತರ ಸಿದ್ಧತೆಗಳನ್ನು ಪರಿಶೀಲಿಸಲು ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಯಿತು. ಜಿಲ್ಲಾಧಿಕಾರಿ, ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/jFchs8nuf9
ದೀಪಾಲಂಕಾರ:
ನಂದಿ ಬೆಟ್ಟದಲ್ಲಿ ದೀಪಾಲಂಕಾರ ಮಾಡಲಾಗುತ್ತದೆ. ಬೆಟ್ಟದಲ್ಲಿ ಲೇಸರ್ ಶೋ ಇರಲಿದೆ. ಸುಮಾರು 2 ಲಕ್ಷ ಜನರು ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿರೀಕ್ಷೆ ಇದೆ. 20 ರಿಂದ 25 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ. 3 ಸಾವಿರ ಫೋರ್ ವಿಲರ್‌ಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. 5 ಸಾವಿರ ದ್ವಿಚಕ್ರವಾಹನಗಳ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು. ಊಟದ ವ್ಯವಸ್ಥೆಗೆ 25 ರಿಂದ 30 ಕೌಂಟರ್ 24 ಗಂಟೆಯೂ ಕಾರ್ಯನಿರ್ವಹಿಸಲಿದೆ ಎಂದು ಸಚಿವರು ವಿವರಿಸಿದರು.
ದೇವಾಸ್ಥಾನದ ಆವರಣದಲ್ಲಿ 25 ರಿಂದ 40 ಮಳಿಗೆಗಳು ಸ್ಥಳೀಯ ವಸ್ತುಗಳ ಪ್ರದರ್ಶನಕ್ಕೆ ಸೀಮಿತವಾಗಿರಲಿದೆ. ಜಿಲ್ಲೆಯ ವಿಶೇಷತೆಗಳನ್ನು ಇಲ್ಲಿ ಪ್ರದರ್ಶನಕ್ಕೆ ಇಡಲಾಗುವುದು ಎಂದರು.
ಕಾಂಗ್ರೆಸ್ ರಾಜಕೀಯ:
ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆ ರಾಜಕೀಯ ಉದ್ದೇಶ ಮತ್ತು ದುರ್ಬಳಕೆಯಾಗಿದೆ. ಅಧಿಕಾರದಲ್ಲಿದ್ದ 7 ವರ್ಷಗಳಲ್ಲಿ ಯೋಜನೆ ಮಾಡಿ ಮುಗಿಸಬಹುದಿತ್ತು. ಆದರೆ ಆ ಪಕ್ಷಕ್ಕೆ ಬದ್ಧತೆ ಇಲ್ಲ, ಜನರು ಮೂರ್ಖರಲ್ಲ. ಡಿಪಿಆರ್ ಮಾಡಲು ಕೇವಲ 3 ತಿಂಗಳು ಸಾಕು. ಆದರೆ 7 ವರ್ಷ ಕಾಲ ಹರಣ ಮಾಡಿ ಈಗ ಮೇಕೆದಾಟು ಯೋಜನೆ ಬಗ್ಗೆ ಹೋರಾಟ ಮಾಡುವ ನಾಟಕ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಭಯ ಬೇಡ:
ಉಕ್ರೇನ್ ಮತ್ತು ರಷ್ಯಾ ನಡುವೆ ಯುದ್ಧ ನಡೆಯುತ್ತಿದೆ. ರಾಜ್ಯದ ಹಲವು ವಿದ್ಯಾರ್ಥಿಗಳು ಅಲ್ಲಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರ ಹಾಗೂ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿದ್ದಾರೆ. ವಿದ್ಯಾರ್ಥಿಗಳು ತಾವೇ ನಿರ್ಧಾರ ಮಾಡಿಕೊಂಡು ಬೇರೆ ದೇಶದ ಗಡಿಗಳಿಗೆ ಬರಬಾರದು. ಸರ್ಕಾರದ ಮಾರ್ಗಸೂಚಿಯಂತೆ ಮುಂದುವರಿಯಬೇಕು. ಎಲ್ಲರೂ ಸುರಕ್ಷಿತವಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ತವರಿಗೆ ಕರೆ ತರಲಾಗುವುದು ಎಂದು ಹೇಳಿದರು.
ಬೆಂಗಳೂರು: ದೇಶ, ಧರ್ಮಕ್ಕೋಸ್ಕರ ಕೆಲಸ ಮಾಡಿದ ಯುವಕ ಇವತ್ತಿಲ್ಲ. ಧರ್ಮ ರಕ್ಷಣೆಗೆ ಯಾರು ಹೆದರಿಕೊಳ್ಳುವುದು ಬೇಡ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಶಿವಮೊಗ್ಗದಲ್ಲಿ ನಡೆದ ಘಟನೆ ಕುರಿತಾಗಿ ಮಾತನಾಡಿದ ಅವರು, ನೋವಿನ ಸಂಗತಿಯಾಗಿದೆ. ಇದು ಮೇಲ್ನೋಟಕ್ಕೆ ಪೂರ್ವ ನಿಯೋಜಿತ ದುಷ್ಕೃತ್ಯ ಎಂದು ಹೇಳಬಹುದು. ಕಳೆದೊಂದುವಾರದ ಬೆಳವಣಿಗೆಯ ಹಿನ್ನೆಲೆಯಲ್ಲಿ ಧರ್ಮದ ವಿಷಯ ಸಂಬಂಧಿಸಿಸಂತೆ ಕಾರ್ಯಕರ್ತನ ಹತ್ಯೆ ಮಾಡಿದ್ದಾರೆ ಅನ್ನಿಸುತ್ತದೆ. ಯಾರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಅವರ ಮೇಲೆ ನಿರ್ಧಾಕ್ಷ್ಯಣವಾಗಿ ಕ್ರಮ ತೆಗೆದುಕೊಳ್ಳಬೇಕು. ಇದರಿಂದ ಅನೇಕ ಕಾರ್ಯಕರ್ತರು ಭಯಭೀತರಾಗುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಬಾಲಕಿಗೆ ಕಿಡ್ನಿದಾನ ಮಾಡಿದ ತಾಯಿ!
ಇಂತಹ ಘಟನೆಗಳ ವೇಳೆ ನೊಂದವರ ಪರವಾಗಿ ನಾನು ನಿಂತುಕೊಳ್ಖುತ್ತೇನೆ ನಮ್ಮ ದೇಶದ ಅಶಾಂತಿ ವಾತಾವರಣಕ್ಕೆ ವಿದೇಶಿ ಸಂಚು ಸಹ ಕಾಣಿಸುತ್ತಿದೆ. ಧರ್ಮ ರಕ್ಷಣೆಗೆ ಯಾರು ಹೆದರಿಕೊಳ್ಳುವುದು ಬೇಡ. ಯಾವುದೇ ಜಿಲ್ಲೆಯಲ್ಲಿ ಈ ರೀತಿಯ ದೃಷೃತ್ಯ ನಡೆದಾಗ ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಹೀಗಾಗಿ ಜನರು ಬೀದಿಗೆ ಬರುತ್ತಿದ್ದಾರೆ. ಅದು ಸರಿ ಅಂತ ನಾನು ಹೇಳಲ್ಲ. ಅಮಾಯರ ಮೇಲೆ ಸಂಚು ಮಾಡುವವರಿಗೆ ಸರ್ಕಾರ ಕಠಿಣ ಶಿಕ್ಷೆ ಕೊಡುತ್ತದೆ ಎಂದು ಕಿಡಿಕಾರಿದ್ದಾರೆ.
ರಾಜ್ಯದಲ್ಲಿ ಅಶಾಂತಿಗೆ ದಾರಿಮಾಡಿಕೊಡೋ ವಿಚಾರ ನಮ್ಮ ಮುಂದೆ ಇಲ್ಲ. ಬೆಂಗಳೂರಿಗೆ ಬಂದಾಗ ಸಚಿವರನ್ನು ಭೇಟಿ ಆಗೋದು ಸಹಜ. ಅದಕ್ಕೆ ವಿಶೇಷ ಅರ್ಥ ಕಲ್ಪಿಸೋ ಅಗತ್ಯ ಇಲ್ಲ ಎಂದಿದ್ದಾರೆ.
ಹಿರಿಯ ನಾಯಕರು ಇಂತಹ ಸಮಯದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಬಾರದು. ನೊಂದ ಕುಟುಂಬಕ್ಕೆ ಮನೋಸ್ಥೈರ್ಯ ತುಂಬುವ ಕೆಲಸವನ್ನು ಪಕ್ಷಾತೀತವಾಗಿ ಮಾಡಬೇಕು. ಆದರೆ ಇದರಲ್ಲೂ ರಾಜಕೀಯ ಮಾಡಿದರೆ ಅದು ಹೇಯ ಕೃತ್ಯ. ಬಿಜೆಪಿ ರಾಷ್ಟ್ರೀಯ ಪಕ್ಷವಾಗಿದ್ದು, ಇದು ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಸಂಘಟನೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷ ಸಮಾಜದಲ್ಲಿ ವಿಷಬೀಜ ಬಿತ್ತುವ ಕೆಟ್ಟ ಪ್ರವೃತ್ತಿಯನ್ನು ಎಂದೂ ಮಾಡುವುದಿಲ್ಲ ಎಂದರು.
ಕೆಲ ವರ್ಷಗಳಿಂದ ದೇಶದಲ್ಲಿ ಹಿಂದೂ ಕಾರ್ಯಕರ್ತರನ್ನು ಪೂರ್ವ ನಿಯೋಜಿತವಾಗಿ ಕೊಲೆ ಮಾಡಲಾಗುತ್ತಿದೆ. ಇಂತಹ ಕೊಲೆಗಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇದಕ್ಕೆ ಯಾರೇ ಕಾರಣರಾಗಿದ್ದರೂ ಅಥವಾ ಯಾವುದೇ ಸಂಘಟನೆಯಾದರೂ ಕ್ರಮ ಕೈಗೊಳ್ಳಲೇಬೇಕು ಎಂದು ಸ್ಪಷ್ಟಪಡಿಸಿದರು.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂದರ್ಶನವೊಂದರಲ್ಲಿ ಹಿಜಾಬ್ ಕುರಿತು ಅಭಿಪ್ರಾಯ ಹೇಳಿದ್ದಾರೆ. ಕೋರ್ಟ್ ಆದೇಶವನ್ನು ಪಾಲಿಸಬೇಕು ಎಂದೂ ಅವರು ಹೇಳಿದ್ದಾರೆ. ಶಾಲೆಯಲ್ಲಿ ಸಮವಸ್ತ್ರದ ನಿಯಮವನ್ನು ಪಾಲಿಸಬೇಕು ಎಂದು ಅವರು ಹೇಳಿದ್ದಾರೆ. ಇದು ಸಹಜವಾದ ಹಾಗೂ ಸರಿಯಾದ ವಿಚಾರ. ಶಿಕ್ಷಣ ಸಂಸ್ಥೆಯ ಎಲ್ಲಾ ನಿಯಮಗಳನ್ನು ಮಕ್ಕಳು ಪಾಲಿಸಬೇಕು ಎಂದರು.
– ನೂತನ ತಂತ್ರಜ್ಞಾನಗಳ ಮೂಲಕ ಅಂಬುಲೆನ್ಸ್ ಸೇವೆಯ ಪುನಶ್ಚೇತನ
ಬೆಂಗಳೂರು: ರಾಜ್ಯದಲ್ಲಿ ತುರ್ತು ಆರೋಗ್ಯ ಸೇವೆಗೆ ಹೊಸ ರೂಪ ನೀಡಲು ಹಾಗೂ ಜನಸಾಮಾನ್ಯರ ಜೀವ ರಕ್ಷಣೆಗಾಗಿ ಆರೋಗ್ಯ ಕವಚ – 108ರ ಸೇವೆಯನ್ನು ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮೇಲ್ದರ್ಜೆಗೇರಿಸುವ ಮಹತ್ವದ ಯೋಜನೆಗೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ ಎಂದು ಆರೊಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿಯನ್ನು ಹತ್ಯೆ ಮಾಡಲೆಂದೇ ಉಗ್ರರಿಂದ ಆಸ್ಪತ್ರೆಯಲ್ಲಿ ಬಾಂಬ್ ಸ್ಫೋಟ!
ರಾಜ್ಯದಲ್ಲಿ 108-ಆರೋಗ್ಯ ಕವಚವು ತುರ್ತು ಆರೋಗ್ಯ ಸೇವೆಯನ್ನು ನೀಡುತ್ತಿದೆ. ಆಧುನಿಕ ಕಾಲದ ಆರೋಗ್ಯ ಸೇವೆಯ ಬೇಡಿಕೆಗಳಿಗೆ ಅನುಗುಣವಾಗಿ ಅಂಬುಲೆನ್ಸ್ ಸೇವೆಯನ್ನು ಉನ್ನತೀಕರಿಸುವ ಅಗತ್ಯತೆ ಕಂಡುಬಂದಿದೆ. ಹೀಗಾಗಿ ಹೊಸ ಮಾದರಿಯ ಅಂಬುಲೆನ್ಸ್ ಸೇವೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆಧುನಿಕ ತಂತ್ರಜ್ಞಾನಗಳ ಬಳಕೆ, ಹೊಸ ಸುಧಾರಣಾ ಕ್ರಮಗಳನ್ನು ಅಂಬುಲೆನ್ಸ್ ಸೇವೆಯಲ್ಲಿ ತರುವ ಉದ್ದೇಶವನ್ನು ಸರ್ಕಾರ ಹೊಂದಿದೆ. ರೋಗಿಯ ಜೀವ ಉಳಿಸಲು ಗೋಲ್ಡನ್ ಅವರ್ ತುಂಬಾ ಮಹತ್ವದ್ದಾಗಿರುತ್ತದೆ. ಈ ಅವಧಿಯಲ್ಲಿ ವ್ಯಕ್ತಿಗೆ ಸರಿಯಾದ ಚಿಕಿತ್ಸೆ ನೀಡಿದರೆ ಆತನ/ಆಕೆಯ ಜೀವ ಉಳಿಯುತ್ತದೆ. ಇಂತಹ ಸೇವೆಯನ್ನು ಸಕಾಲಕ್ಕೆ ನೀಡಲು ಸರ್ಕಾರ ಬದ್ಧವಾಗಿದ್ದು, ಅದಕ್ಕಾಗಿಯೇ ಅಂಬುಲೆನ್ಸ್ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಗೆ ಸರ್ಕಾರ ಮುನ್ನುಡಿ ಬರೆದಿದೆ. ಇದನ್ನೂ ಓದಿ: ಉಗ್ರ ಸಂಘಟನೆಗೆ ರಹಸ್ಯ ಮಾಹಿತಿ ಸೋರಿಕೆ – IPS ಅಧಿಕಾರಿ ಅರೆಸ್ಟ್
ಸರ್ಕಾರ ಆರೋಗ್ಯ ಕರ್ನಾಟಕ ನಿರ್ಮಿಸುವ ಉದ್ದೇಶದಿಂದ ಆರೋಗ್ಯ ವಲಯವನ್ನು ಎಲ್ಲಾ ಆಯಾಮಗಳಿಂದ ಅಭಿವೃದ್ಧಿಪಡಿಸುವ ಮಹತ್ವಕಾಂಕ್ಷೆ ಹೊಂದಿದೆ. ಈ ಹಿನ್ನೆಲೆಯಲ್ಲಿ, ತುರ್ತು ಆರೋಗ್ಯ ಸೇವೆಗೆ ಹೆಚ್ಚು ಆದ್ಯತೆ ನೀಡಿದ್ದು, ಈಗಾಗಲೇ ತಜ್ಞರ ಸಲಹಾ ಸಮಿತಿ ಹಾಗೂ ಅಧಿಕಾರಿಗಳ ಜೊತೆ ಹಲವು ಸುತ್ತಿನ ಸಭೆಗಳನ್ನು ನಡೆಸಿತ್ತು. ಆ ಬಳಿಕ ಹೊಸ ತಂತ್ರಜ್ಞಾನದ ಬಳಕೆ ಮತ್ತು ಅಂಬುಲೆನ್ಸ್ ಆಧುನಿಕರಣಕ್ಕೆ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಅಭಿಯಾನದ ಮಾರ್ಗಸೂಚಿ ಪ್ರಕಾರ, ಒಂದು ಲಕ್ಷ ಜನಸಂಖ್ಯೆಗೆ ಒಂದು ಬೇಸಿಕ್ ಲೈಫ್ ಸಪೋರ್ಟ್ (ಬಿ.ಎಲ್.ಎಸ್.) ಅಂಬುಲೆನ್ಸ್ ಮತ್ತು ಪ್ರತಿ 5 ಲಕ್ಷ ಜನಸಂಖ್ಯೆಗೆ ಒಂದು ಅಡ್ವಾನ್ಸ್ಡ್ ಲೈಫ್ ಸಪೋರ್ಟ್ ( ಎ.ಎಲ್.ಎಸ್) ಆಂಬ್ಯುಲೆನ್ಸ್ ಇರಬೇಕು. ಒಂದು ಆಂಬ್ಯುಲೆನ್ಸ್ 24 ಗಂಟೆಗಳಲ್ಲಿ ನಾಲ್ಕಕ್ಕಿಂತ ಹೆಚ್ಚು ಪ್ರಕರಣಗಳನ್ನು ನಿರ್ವಹಣೆ ಮಾಡಿದರೆ ಮತ್ತು 120 ಕಿ.ಮೀ. ಗಿಂತ ಹೆಚ್ಚು ದೂರ ಕ್ರಮಿಸಿದರೆ, ಅಂತಹ ಕಡೆ ಮತ್ತೊಂದು ಅಂಬುಲೆನ್ಸ್ ಒದಗಿಸಬೇಕಾಗುತ್ತದೆ. ಈ ಮಾರ್ಗಸೂಚಿಯನ್ನು ಯಥಾವತ್ತಾಗಿ ಅನುಷ್ಠಾನಕ್ಕೆ ತರುವ ಮಹತ್ವಕಾಂಕ್ಷೆ ಸರ್ಕಾರಕ್ಕಿದೆ. ಹೀಗಾಗಿ ಅಂಬ್ಯುಲೆನ್ಸ್ ಸಂಖ್ಯೆಯನ್ನು ಪ್ರಸ್ತುತದ 710 ರಿಂದ 750 ಕ್ಕೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಈ ಪೈಕಿ, 40% ಎ.ಎಲ್.ಎಸ್ ಮತ್ತು 60% ಬಿ.ಎಲ್.ಎಸ್.ಆಗಿರಲಿವೆ. ಸರ್ಕಾರ ಹೊಸದಾಗಿ 380 ಅಂಬುಲೆನ್ಸ್ ಗಳನ್ನು ಖರೀದಿ ಮಾಡಲಿದೆ. ಈ ಪೈಕಿ, 340 ಅಂಬುಲೆನ್ಸ್‌ಗಳ ಹಳೆಯ ಅಂಬುಲೆನ್ಸ್‌ಗಳ ಬದಲಿಯಾಗಿ ಬರಲಿವೆ. ಉಳಿದ 40 ಹೊಸ ಅಂಬುಲೆನ್ಸ್‌ಗಳಾಗಿರುತ್ತವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಕರೆ ಕೇಂದ್ರದ ಉನ್ನತೀಕರಣ: ಅಂಬುಲೆನ್ಸ್ ಸೇವೆಯಲ್ಲಿ ಕರೆ ಕೇಂದ್ರ ಅಥವಾ ಕಮಾಂಡ್ ಸೆಂಟರ್ ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಹಾಗೂ ಅಂಬುಲೆನ್ಸ್ ಸಿಬ್ಬಂದಿ ನಡುವೆ ಸೇತುವೆಯಂತೆ ಕೆಲಸ ಮಾಡುವ ಈ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಕಾಲ್ ಸೆಂಟರ್‍ನ ಸೀಟುಗಳ ಸಂಖ್ಯೆಯನ್ನು 54 ರಿಂದ 75 ಕ್ಕೆ ಏರಿಸಲಾಗುತ್ತದೆ. ಈ ಕಮಾಂಡ್ ಸೆಂಟರ್, ಅಂಬುಲೆನ್ಸ್ ನ ಜಿಪಿಎಸ್ ಟ್ರ್ಯಾಕಿಂಗ್, ಸಿಬ್ಬಂದಿಯ ಬಯೋಮೆಟ್ರಿಕ್ ಹಾಜರಾತಿ, ಅಂಬುಲೆನ್ಸ್ ಸೇವೆಯ ಲೈವ್ ಸ್ಟ್ರೀಮಿಂಗ್, ಆನ್ ಲೈನ್ ಮಾನವ ಸಂಪನ್ಮೂಲ ನಿರ್ವಹಣೆ, ರೋಗಿಗಳ ಆರೈಕೆಯ ಎಲೆಕ್ಟ್ರಾನಿಕ್ ದಾಖಲೆಗಳ ನಿರ್ವಹಣೆ, ಅಹವಾಲು ಸ್ವೀಕಾರ ಮೊದಲಾದ ಹೊಸ ಸೌಲಭ್ಯ ಹೊಂದಲಿದೆ.
ಹಿಂದೆ ಅಂಬುಲೆನ್ಸ್ ನಿರ್ವಹಣೆ ಮಾಡುವ ಏಜೆನ್ಸಿಯನ್ನು ದರದ ಆಧಾರದಲ್ಲಿ ಮಾತ್ರ ಪರಿಗಣಿಸಲಾಗುತ್ತಿತ್ತು. ಈಗ ದರ ಹಾಗೂ ಗುಣಮಟ್ಟದ ಕಾರ್ಯನಿರ್ವಹಣೆಯನ್ನು ಪ್ರಮುಖ ಮಾನದಂಡವಾಗಿ ಪರಿಗಣಿಸಲಾಗಿದೆ. ಯಾವುದೇ ಸರ್ಕಾರಕ್ಕೆ 6 ವರ್ಷಗಳ ಕಾಲ 100 ಸೀಟುಗಳ ಕಾಲ್ ಸೆಂಟರ್ ಸೇವೆ ಒದಗಿಸಿರುವುದು, ಯಾವುದೇ ಸರ್ಕಾರಕ್ಕೆ 500 ಅಂಬುಲೆನ್ಸ್ ಗಳ ಸೇವೆ ನೀಡಿರುವುದು ಸೇರಿದಂತೆ ಹಲವು ನಿಗದಿತ ಷರತ್ತುಗಳನ್ನು ಹೊಸ ಟೆಂಡರ್ ನಲ್ಲಿ ವಿಧಿಸಲಾಗುತ್ತಿದೆ. ಅಲ್ಲದೆ, ಸೇವೆ ನೀಡುವ ಏಜೆನ್ಸಿಯವರು, ತಂತ್ರಜ್ಞಾನವನ್ನು ಬಳಸಿ ಆಸ್ಪತ್ರೆಗಳನ್ನು ಮ್ಯಾಪ್ ಮಾಡಿರಬೇಕು. ಅಂಬುಲೆನ್ಸ್ ಸೇವೆ ನೀಡುವಾಗ ಅತಿ ಸಮೀಪದ ಆಸ್ಪತ್ರೆಯು ಸ್ವಯಂಚಾಲಿತವಾಗಿ ಆಯ್ಕೆಯಾಗುವಂತಹ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ಷರತ್ತು ವಿಧಿಸಲಾಗುತ್ತದೆ. ಇದರಿಂದ ಸೇವೆಯ ಗುಣಮಟ್ಟದಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.