ಬೆಳಗಾವಿ: ರಮೇಶ್ ಕುಮಾರ್ ಅವರು ಎರಡು ಬಾರಿ ಸ್ಪೀಕರ್ ಆಗಿದ್ದವರು. ಮೌಲ್ಯಗಳಿಗೆ ರಾಯಭಾರಿ ಆಗಿದ್ದರು. ಅವರ ಬಗ್ಗೆ ನನಗೆ ವೈಯುಕ್ತಿಕ ದ್ವೇಷ ಇಲ್ಲ. ಅವರು ಮುಖವಾಡ ಹಾಕಿಕೊಂಡು ಬದುಕುತ್ತಿರುವುದರಲ್ಲಿ ಅನುಮಾನವಿಲ್ಲ ಎಂದು ಆರೋಗ್ಯ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ.
ನಿನ್ನೆ ಬೆಳಗಾವಿ ವಿಧಾನಸಭೆಯಲ್ಲಿ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದಿದ್ದರೆ, ಮಲಗಿ ಆನಂದಿಸಿ ಎಂದು ರಮೇಶ್ ಕುಮಾರ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ಸುವರ್ಣಸೌಧದಲ್ಲಿ ಮಾತನಾಡಿದ ಸುಧಾಕರ್, ರಮೇಶ್ ಕುಮಾರ್ ಬಗ್ಗೆ ನನಗೆ ವೈಯಕ್ತಿಕ ದ್ವೇಷ ಇಲ್ಲ. ಅವರು ಮುಖವಾಡ ಹಾಕಿಕೊಂಡು ಬದುಕುತ್ತಿದ್ದಾರೆ ಎಂದು ಖಂಡನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಅತ್ಯಾಚಾರ ಕುರಿತ ರಮೇಶ್ ಕುಮಾರ್ ಹೇಳಿಕೆಗೆ ಕಾಂಗ್ರೆಸ್ ನಾಯಕರಿಂದಲೇ ಟೀಕೆ
ಬೈರತಿ ಬಸವರಾಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿ, 13 ವರ್ಷದ ಹಿಂದೆ ಟ್ರಯಲ್ ಕೇಸ್‍ನಲ್ಲಿ, ಬೈರತಿ ಪರವಾಗಿ ಬಂದಿತ್ತು. ಆ ಬಳಿಕ ಹೈಕೋರ್ಟ್‍ನಲ್ಲಿ ಕೇಸ್ ಪೆಂಡಿಂಗ್ ಇತ್ತು. ಚುನಾಯಿತ ಪ್ರತಿನಿಧಿಗಳ ಕೋರ್ಟ್‍ನಲ್ಲಿ ಕೇಸ್ ಇದೆ. ಈಗ ಚರ್ಚೆ ಮಾಡಲು ಬರಲ್ಲ, ಕಾಂಗ್ರೆಸ್‍ನವರು ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಇನ್ಮುಂದೆ ಎಚ್ಚರಿಕೆಯಿಂದ ಮಾತಾಡ್ತೀನಿ- ಕ್ಷಮೆಯಾಚಿಸಿದ ರಮೇಶ್ ಕುಮಾರ್
ಓಮಿಕ್ರಾನ್ ಪ್ರಕರಣಗಳ ಹೆಚ್ಚಳದ ಬಗ್ಗೆ ಮಾತನಾಡಿ, ಓಮಿಕ್ರಾನ್ ಬಗ್ಗೆ ವಿಷಯವಾಗಿ ಆತಂಕ ಇಲ್ಲ. 8 ಮಂದಿಯಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಪರೀಕ್ಷೆ ಮಾಡಿ, ಅವರ ಮೂಲಕ ಬೇರೆಯವರಿಗೆ ಹರಡದಂತೆ ಕ್ರಮ ವಹಿಸಬೇಕಿದೆ. ತಾಂತ್ರಿಕ ಸಲಹಾ ಸಮಿತಿ ಜೊತೆ ಸಭೆ ಮಾಡಲಿದ್ದೇವೆ. ಸಿಎಂ ಜೊತೆ ಕೂಡ ಚರ್ಚೆ ಮಾಡಲಿದ್ದೇವೆ. ಯಾವ ಕ್ರಮ ತೆಗೆದುಕೊಳ್ಳಬೇಕು ಅಂತ ಸಲಹೆ ಪಡೆಯುತ್ತೇವೆ. ಕಡ್ಡಾಯವಾಗಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಿದೆ. ಜನ ಎಚ್ಚರಿಕೆಯಿಂದ ಇರಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ರಿಲೇಶನ್‌ಶಿಪ್‌ನಲ್ಲಿ ಡಿಸ್ಟೆನ್ಸ್ ಹೆಚ್ಚಾಗಿದ್ದಕ್ಕೆ ಪ್ರಿಯಕರನಿಗೆ ಗುಂಡಿಟ್ಟ ಕಿರಾತಕಿ
ಕೋಲಾರ: ನೀತಿ ಪಾಠ ಹೇಳುವ ಕೆಲ ಕಾಂಗ್ರೆಸ್ ಶಾಸಕರಿಗೆ ಖಾವಿ ಒಂದಿಲ್ಲ, ಖಾವಿ ಇದ್ದಿದ್ದರೆ ಸ್ವಾಮಿ, ಸ್ವಾಮಿ ಎನ್ನಬಹುದಿತ್ತು ಎಂದು ಸಚಿವ ಡಾ.ಕೆ ಸುಧಾಕರ್ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
ಕೋಲಾರದ ಪತ್ರಕರ್ತರ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಖಾವಿ ಹಾಕಿಕೊಳ್ಳದೆ ನೀತಿ ಹೇಳುವ ಅವರು ಎಂಎಲ್‍ಸಿ ಚುನಾವಣೆಗೆ ಜೆಡಿಎಸ್ ಹಾಗೂ ಎಂಪಿ ಚುನಾವಣೆಗೆ ಬಿಜೆಪಿ ಬೆಂಬಲ ನೀಡಿ ಈಗ ನೀತಿ ಪಾಠ ಮಾಡುತ್ತಾರೆ ಎಂದು ರಮೇಶ್ ಕುಮಾರ್ ವಿರುದ್ಧ ಸುಧಾಕರ್ ಕಿಡಿಕಾರಿದರು. ಇದನ್ನೂ ಓದಿ: ರಾಜ್ಯದಲ್ಲಿ ಬದಲಾವಣೆ ಅವಶ್ಯಕತೆ ಇದೆ: ಮಧು ಬಂಗಾರಪ್ಪ
ಕಳೆದ ಬಾರಿ ಆಯ್ಕೆಯಾಗಿದ್ದ ಪರಿಷತ್ ಸದಸ್ಯರನ್ನು ಬೂದು ಕನ್ನಡಿ ಹಾಕಿ ಹುಡುಕಿದರು ಕಾಣಿಸುತ್ತಿಲ್ಲ. ಈ ಚುನಾವಣೆಯಲ್ಲಿ ಜನರು ನಮ್ಮನ್ನು ನಂಬುತ್ತಾರೆ ನಮ್ಮ ಆಶಯ ಸ್ಪಷ್ಟವಾಗಿದೆ, ನಾವು ನುಡಿದಂತೆ ನಡೆದುಕೊಳ್ಳುತ್ತೇವೆ. ಕಳೆದ ಕಾಂಗ್ರೆಸ್ ಸರ್ಕಾರದಲ್ಲಿ ಆರೋಗ್ಯ ಮಂತ್ರಿಯಾಗಿದ್ದ ರಮೇಶ್ ಕುಮಾರ್ ಸಿಎಜೆ ವರದಿಯಲ್ಲಿ 500 ಕೋಟಿ ಭ್ರಷ್ಟಾಚಾರವಾಗಿದೆ ಎಂದು ಉಲ್ಲೇಖ ಮಾಡಿದ್ದಾರೆ ಅದನ್ನು ಚರ್ಚೆ ಮಾಡಬೇಕು, ನನ್ನ ಅಧಿಕಾರ ಅವಧಿಯಲ್ಲಿ ಒಂದೇ ಒಂದು ಲೈನ್ ಸಿಎಜೆ ವರದಿಯಲ್ಲಿ ಬಂದಿಲ್ಲ, ರಾಜಕೀಯ ದುರುದ್ದೇಶದಿಂದ ಇವರು ಪಡೆದುಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಇದನ್ನೂ ಓದಿ: ಪುಟಿನ್ ಭಾರತಕ್ಕೆ ಆಗಮನ – ವಾಯು ರಕ್ಷಣಾ ವ್ಯವಸ್ಥೆಯ ವಿಶೇಷತೆ ಏನು? ಎಷ್ಟು ಶಕ್ತಿಶಾಲಿ?
ಬಳಿಕ ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವರಾಗಿ ಶೇ.100 ರಷ್ಟು ಜಿಲ್ಲೆಗೆ ಒಳ್ಳೆಯ ಕೆಲಸ ಮಾಡುತ್ತೇನೆ. ಅಲ್ಲದೆ ನನ್ನ ಅವಧಿಯಲ್ಲಿ ಒಂದಷ್ಟು ಜಿಲ್ಲೆಯಲ್ಲಿ ಅಚ್ಚಳಿಯದಂತೆ ಇರುವ ಕೆಲಸಗಳನ್ನು ಮಾಡುತ್ತೇನೆ ಎಂದರು.
ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯಾಟದಲ್ಲಿ ಪದೆ ಪದೇ ಅಂಪೈರ್ ಎಡವಟ್ಟನ್ನು ಕಂಡು ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ನೀವು ಇಲ್ಲಿಗೆ ಬಂದು ಫೀಲ್ಡಿಂಗ್ ಮಾಡಿ ನಾನು ಅಲ್ಲಿಗೆ ಬಂದು ಅಂಪೈರಿಂಗ್ ಮಾಡುತ್ತೇನೆ ಎಂದು ಕಾಲೆಳೆದಿದ್ದಾರೆ.
ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ನ್ಯೂಜಿಲೆಂಡ್ ಬೌಲರ್ ಅಜಾದ್ ಪಟೇಲ್ ಎಸೆತದಲ್ಲಿ ವಿರಾಟ್ ಕೊಹ್ಲಿ ಎಲ್‍ಬಿಡಬ್ಲ್ಯೂ ಬಲೆಗೆ ಬಿದ್ದರು. ಇದನ್ನು ಆನ್‍ಫೀಲ್ಡ್ ಅಂಪೈರ್ ಔಟ್ ಎಂದು ಘೋಷಿಸಿದರು. ಕೊಹ್ಲಿ ಡಿಆರ್‌ಎಸ್ ತೆಗೆದುಕೊಂಡರೂ ಕೂಡ ಮೂರನೇ ಅಂಪೈರ್ ಆನ್‍ಫೀಲ್ಡ್ ಅಂಪೈರ್ ತೀರ್ಮಾನವನ್ನು ಎತ್ತಿಹಿಡಿದು ಔಟ್ ಎಂದು ನಿರ್ಧಾರ ಪ್ರಕಟಿಸಿದರು. ಆದರೆ ಚೆಂಡು ಮೊದಲು ಬ್ಯಾಟ್‍ಗೆ ತಾಗಿ ನಂತರ ಪ್ಯಾಡ್‍ಗೆ ಬಡಿದಿತ್ತು. ಹಾಗಾಗಿ ಇದು ವಿವಾದಾತ್ಮಕ ತಿರುವು ಪಡೆದುಕೊಂಡಿತ್ತು. ಇದನ್ನೂ ಓದಿ: 372 ರನ್ ಗಳ ಭರ್ಜರಿ ಜಯ – ಸರಣಿ ಜಯಿಸಿದ ಭಾರತ
ಆ ಬಳಿಕ ನ್ಯೂಜಿಲೆಂಡ್ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಭಾರತದ ಬೌಲರ್ ಅಕ್ಷರ್ ಪಟೇಲ್ ಎಸೆತವನ್ನು ಎದುರಿದ ರಾಸ್ ಟೇಲರ್ ಬ್ಯಾಟ್ ತಾಗದೆ ಕೀಪರ್ ವೃದ್ಧಿಮಾನ್ ಸಹಾ ಅವರನ್ನು ತಪ್ಪಿಸಿ ಬಾಲ್ ಬೌಂಡರಿ ಸೇರಿತ್ತು. ಆಗ ಅಂಪೈರ್ ಬೈ ರನ್ ನೀಡುವ ಬದಲು ಟೇಲರ್ ಬ್ಯಾಟ್‍ಗೆ ಎಡ್ಜ್ ಮಾಡಿದ್ದಾರೆ ಎಂದು ಟೇಲರ್ಗೆ ರನ್ ನೀಡಿದರು. ಆಗ ಆಕ್ರೋಶಗೊಂಡ ಕೊಹ್ಲಿ ಅಂಪೈರ್‌ಗೆ ‘ಯೇ ಕ್ಯಾ ಕರ್ತೇ ಹೈಂ ಯಾರ್ ಯೇ ಲೋಗ್ ಯಾರ್.. ಮೇನ್ ಉಧರ್ ಆಜಾತಾ ಹು, ತುಮ್ ಇಧರ್ ಆಜಾವೋ (ಹೇ ನೀವು ಏನು ಮಾಡುತ್ತಿದ್ದೀರಿ. ನಾನು ಅಲ್ಲಿಗೆ ಬರುತ್ತೇನೆ ನೀವು ಇಲ್ಲಿಗೆ ಬನ್ನಿ) ಎಂದು ತಮಾಷೆಯಾಗಿ ತರಾಟೆಗೆ ತೆಗೆದುಕೊಂಡರು. ಈ ಆಡಿಯೋ ಸ್ಟಂಪ್ ಮೈಕ್‍ನಲ್ಲಿ ರೇಕಾರ್ಡ್ ಆಗಿದೆ. ಇದನ್ನೂ ಓದಿ: ತಂಡಕ್ಕೆ ಗೆಲುವಿನ ಶ್ರೇಯಸ್ಸು ದೊರೆಯಬೇಕು: ರಾಹುಲ್ ದ್ರಾವಿಡ್
ಬೆಂಗಳೂರು: ಕೋವಿಡ್‍ನ ಹೊಸ ರೂಪಾಂತರಿ ಓಮಿಕ್ರಾನ್ ವೈರಾಣುವಿನ ಹರಡುವಿಕೆಗೆ ಸಂಬಂಧಿಸಿದಂತೆ ಎಲ್ಲ ಬಗೆಯ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ಕೋವಿಡ್ ಲಸಿಕೆಯನ್ನು ಎಲ್ಲರೂ ಪಡೆಯುವುದರೊಂದಿಗೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸ್ವಾನ, ಇಸ್ರೇಲ್, ಹಾಂಗ್ ಕಾಂಗ್ ಮೊದಲಾದ ದೇಶಗಳಲ್ಲಿ ಕಳೆದೊಂದು ವಾರದಿಂದ ಕೋವಿಡ್ ಹೊಸ ರೂಪಾಂತರಿ ವೈರಾಣು ಕಾಣಿಸಿದೆ. ನಿನ್ನೆ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ವಹಿಸಲು ಮಾರ್ಗಸೂಚಿ ರೂಪಿಸಿ ಬಿಡುಗಡೆ ಮಾಡಲಾಗಿದೆ. ಹೊಸ ವೈರಾಣು ಕಂಡುಬಂದಿರುವ ದೇಶಗಳಿಂದ ರಾಜ್ಯದ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು ಕೋವಿಡ್ ವರದಿ ತಂದಿದ್ದರೂ ಕೂಡ, ಅವರಿಗೆ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲಾಗುವುದು. ಅವರಿಗೆ ನೆಗೆಟಿವ್ ಬಂದರೆ ಮನೆಯಲ್ಲೇ ಒಂದು ವಾರ ಕಡ್ಡಾಯವಾಗಿ ಕ್ವಾರಂಟೈನ್ ಮಾಡಲಾಗುವುದು. ಈ ಸಮಯದಲ್ಲಿ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗುವುದು. ಏಳು ದಿನಗಳ ಬಳಿಕ ಮತ್ತೆ ಪರೀಕ್ಷೆ ಮಾಡಲಾಗುವುದು. ಅವರಿಗೆ ರೋಗದ ಲಕ್ಷಣ ಕಂಡುಬಂದರೆ ಆಸ್ಪತ್ರೆಗೆ ದಾಖಲಿಸಲಾಗುವುದು. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಆತಂಕ- ಅಂತಾರಾಷ್ಟ್ರೀಯ ವಿಮಾನಯಾನ ನಿರ್ಬಂಧ ಸಡಿಲಗೊಳಿಸುವ ಯೋಜನೆ ಪರಾಮರ್ಶಿಸಲು ಪ್ರಧಾನಿ ಸೂಚನೆ
ವಿಮಾನ ನಿಲ್ದಾಣಗಳಲ್ಲಿ ಕ್ರಮ ವಹಿಸುವ ಬಗ್ಗೆ ಮಾರ್ಗಸೂಚಿ ನೀಡಲಾಗಿದೆ. ನಮ್ಮ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೂ ಅಲ್ಲಿ ನಿಯೋಜಿಸಲಾಗಿದೆ. ಹೊಸ ವೈರಾಣು ಹರಡುವ ವೇಗ ಹೆಚ್ಚಿದೆ ಎಂದು ತಿಳಿದುಬಂದಿದೆ. ಆದರೆ ಇದ ತೀವ್ರತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಹೆಚ್ಚು ಆತಂಕಪಡಬೇಕಿಲ್ಲ. ನಮ್ಮ ದೇಶದಲ್ಲಿ ಈ ರೀತಿಯ ಹೊಸ ವೈರಾಣು ಕಂಡುಬಂದಿಲ್ಲ. ಎಲ್ಲರೂ ಕೋವಿಡ್‍ನ ಎರಡೂ ಡೋಸ್ ಗಳನ್ನು ಪಡೆಯಬೇಕು. ಕಡ್ಡಾಯವಾಗಿ ಕೋವಿಡ್ ಸುರಕ್ಷತಾ ಕ್ರಮಗಳನ್ನು ಜನರು ಅನುಸರಿಸಬೇಕು ಎಂದರು. ಇದನ್ನೂ ಓದಿ: ಲಸಿಕೆ ಪಡೆದವರಲ್ಲಿಯೂ ಒಮಿಕ್ರಾನ್ ಹೊಸ ತಳಿ ಪತ್ತೆ – ಆತಂಕ ಯಾಕೆ?
ಧಾರವಾಡದ ಕಾಲೇಜಿನಲ್ಲಿ ಸಮಾರಂಭ ನಡೆದ ವೇಳೆ ಕೋವಿಡ್ ಹರಡಿದೆ ಎನ್ನಲಾಗಿದೆ. ಸುಮಾರು 2,000 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಇದರಲ್ಲಿ 281 ವಿದ್ಯಾರ್ಥಿಗಳ ಮಾದರಿ ಪಾಸಿಟಿವ್ ಆಗಿದೆ. ಇನ್ನೂ ಹಲವರ ಪರೀಕ್ಷಾ ವರದಿ ಇನ್ನೂ ಬರಬೇಕಿದೆ. ಆದರೆ ಪಾಸಿಟಿವ್ ಆದವರಿಗೂ ಹೆಚ್ಚು ತೀವ್ರತೆ ಇಲ್ಲ. ಇದರಲ್ಲಿ ಕೆಲವನ್ನು ಜಿನೋಮಿಕ್ ಸೀಕ್ವೆನ್ಸಿಂಗ್‍ಗೆ ಕಳುಹಿಸಲಾಗುವುದು. ಡಿಸೆಂಬರ್ ಆರಂಭದಲ್ಲಿ ಈ ಪರೀಕ್ಷಾ ವರದಿ ನಿರೀಕ್ಷಿಸಲಾಗಿದೆ ಎಂದರು.
ಎರಡನೇ ಡೋಸ್ ಪಡೆಯಿರಿ:
ರಾಜ್ಯದಲ್ಲಿ 45 ಲಕ್ಷ ಜನರು ಎರಡನೇ ಡೋಸ್ ಪಡೆಯಬೇಕಿದೆ. ಅವರೆಲ್ಲರೂ ಲಸಿಕೆ ಪಡೆಯಬೇಕು. ಲಸಿಕೆ ಪಡೆಯುವ ವಿಚಾರದಲ್ಲಿ ಯಾರೂ ಉದಾಸೀನ ಮಾಡಬಾರದು. ಒಬ್ಬರಿಗೆ ಕೊರೊನಾ ಬಂದರೆ ಅದು ಇಡೀ ಕುಟುಂಬಕ್ಕೆ ಬರುವ ಸಾಧ್ಯತೆ ಇರುವುದರಿಂದ ಲಸಿಕೆ ಪಡೆಯಬೇಕು. ಮೂರನೇ ಅಲೆ ಬಂದಾಗ ಲಸಿಕೆ ಪಡೆಯದವರಿಗೆ ಸಮಸ್ಯೆಯಾಗಬಹುದು. ದೇಶದಲ್ಲಿ ಮೊದಲ ಡೋಸ್ ಸರಾಸರಿ ಶೇ.80 ಇದ್ದರೆ, ರಾಜ್ಯದಲ್ಲಿ ಶೇ.90 ಕ್ಕೂ ಅಧಿಕವಾಗಿದೆ. ಎರಡನೇ ಡೋಸ್ ನಲ್ಲಿ ದೇಶದ ಸರಾಸರಿ ಶೇ.42-43 ಇದ್ದು, ರಾಜ್ಯದಲ್ಲಿ ಶೇ.57 ಇದೆ. ಜನರು ಸ್ವಯಂಪ್ರೇರಿತರಾಗಿ ಲಸಿಕೆ ಪಡೆಯಬೇಕು ಎಂದರು.
ಸೋಮವಾರ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ಸಲಹೆಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ನಂತರ ಚರ್ಚೆ ನಡೆಸಿ ಅಗತ್ಯ ಕ್ರಮ ವಹಿಸಲಾಗುವುದು. ಕಳೆದೆರಡು ವರ್ಷದಿಂದ ಅನೇಕ ವಿಚಾರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸೂಕ್ತ ಮಾರ್ಗದರ್ಶನ ನೀಡಿದ್ದಾರೆ. ರಾಜ್ಯ ಸರ್ಕಾರ ಕೂಡ ಕೋವಿಡ್ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸಿದೆ. ಆದರೆ ಬೇರೆ ದೇಶಗಳಲ್ಲಿ ಹೊಸ ವೈರಾಣು ಕಂಡುಬಂದಿರುವುದರಿಂದ ಪ್ರಧಾನಿಗಳು ಸಭೆ ನಡೆಸಲಿದ್ದಾರೆ ಎಂದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿನ ಭೀತಿ – ಅಂತರಾಷ್ಟ್ರೀಯ ವಾಣಿಜ್ಯ ವಿಮಾನಗಳ ಹಾರಾಟ ಪುನಾರಂಭ ಅನುಮಾನ
25 ರೂಪಾಂತರಿ:
ಕೋವಿಡ್ ವೈರಸ್ 25 ಬಗೆಯ ರೂಪಾಂತರಿಗಳನ್ನು ಹೊಂದಿದೆ ಎಂದು ತಜ್ಞರೊಬ್ಬರು ತಿಳಿಸಿದ್ದಾರೆ. ಈ ಬಗ್ಗೆ ಇನ್ನಷ್ಟು ಅಧ್ಯಯನಗಳು ನಡೆಯಬೇಕಿದೆ. ಈಗ ಕಂಡುಬಂದಿರುವ ಹೊಸ ವೈರಾಣು ಬಗ್ಗೆಯೂ ಅಧ್ಯಯನಗಳಾಗುತ್ತಿದೆ. ಹೊಸ ವೈರಾಣುವಿನ ಮೇಲೆ ಈಗಿನ ಲಸಿಕೆ ಎಷ್ಟು ಪರಿಣಾಮಕಾರಿ ಎಂಬುದರ ಬಗ್ಗೆಯೂ ಅಧ್ಯಯನಗಳು ನಡೆಯಬೇಕಿದೆ. ಆದರೂ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕಿದೆ. ಜೊತೆಗೆ ಸುರಕ್ಷತಾ ನಿಯಮ ಪಾಲಿಸಬೇಕಿದೆ. ವಿಶ್ವ ಆರೋಗ್ಯ ಸಂಸ್ಥೆ ಈ ವೈರಾಣುಗೆ ಓಮಿಕ್ರಾನ್ ಎಂಬ ಹೆಸರು ನೀಡಿದ್ದಾರೆ. ಇದು ಎಷ್ಟು ತೀವ್ರತೆ ಹೊಂದಿದೆ ಎಂಬ ಬಗ್ಗೆಯೂ ಅಧ್ಯಯನ ನಡೆಯುತ್ತಿದೆ ಎಂದರು.
ಔಷಧಿ ಖರೀದಿ:
ಔಷಧಿ ಖರೀದಿ ಕುರಿತು ಸಭೆ ನಡೆಸಲಾಗಿದೆ. ಔಷಧಿಗಾಗಿ ಸುಮಾರು 38 ಕೋಟಿ ರೂ. ಅನ್ನು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನೀಡಲಾಗಿದೆ. ಕೋವಿಡ್ ನಿಂದಾಗಿ ಜನರಲ್ ಔಷಧಿಗಳನ್ನು ಖರೀದಿಸುವುದು ಈ ವರ್ಷ ಸ್ವಲ್ಪ ವಿಳಂಬವಾಗಿದೆ. ಕೋರ್ಟ್ ನಲ್ಲೂ ಪ್ರಕರಣ ಇದ್ದಿದ್ದರಿಂದ ಕೆಲ ಟೆಂಡರ್ ಗಳೂ ಆಗಿರಲಿಲ್ಲ. ಸ್ಥಳೀಯವಾಗಿಯೇ ಔಷಧಿ ಖರೀದಿಸಲು ಹಣ ನೀಡಲಾಗಿದೆ. ತಾಲೂಕು, ಜಿಲ್ಲಾಸ್ಪತ್ರೆ ಎಲ್ಲ ಆಸ್ಪತ್ರೆಗಳಲ್ಲಿ ಎರಡು ಮೂರು ದಿನಗಳಲ್ಲಿ ಔಷಧಿ ದೊರೆಯಲಿದೆ. ಯಾವುದೇ ಕೊರತೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.
ಬೆಂಗಳೂರು: ಪ್ರಿಯಾಂಕ್ ಖರ್ಗೆಯವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ, ಮಳೆ, ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವಿಟ್ಟರ್ ಮೂಲಕ ಟಾಂಗ್ ಕೊಟ್ಟಿದ್ದಾರೆ.
ಮಾನ್ಯ @PriyankKharge ಅವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ,ಮಳೆ,ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ, ಆದರೆ ಸಂಪುಟ ಸಚಿವರಿಗೆ ಸರ್ಕಾರದ ಪರವಾಗಿ ಮಾತನಾಡುವ ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? (1/3) pic.twitter.com/Iq7bDTTNOS
ಟ್ವೀಟ್‍ನಲ್ಲಿ ಏನಿದೆ?
ಪ್ರಿಯಾಂಕ್ ಖರ್ಗೆಯವರ ಸಾಂದರ್ಭಿಕ ಮರೆವು, ಜಾಣ ಕುರುಡು, ಕೀಳು ರಾಜಕೀಯದ ಆಲೋಚನೆಗಳು ಯಾರನ್ನು ಮೆಚ್ಚಿಸಲು ಎನ್ನುವುದು ಜನರಿಗೆ ತಿಳಿದಿದೆ. ಚಳಿ, ಮಳೆ, ಗಾಳಿಗಳ ಕಷ್ಟ ಅರಿಯದ ಅವರು ಆನುವಂಶಿಕ ನೆರಳಿನಲ್ಲೇ ವಿಹರಿಸಲಿ. ಆದರೆ ಸಂಪುಟ ಸಚಿವರಿಗೆ ಸರ್ಕಾರದ ಪರವಾಗಿ ಮಾತನಾಡುವ ಸಾಮೂಹಿಕ ಹೊಣೆಗಾರಿಕೆ ಇದೆ ಎನ್ನುವುದನ್ನು ಮರೆತದ್ದೇಕೆ? ಇದು ಕಾಂಗ್ರೆಸ್ ಮುಖಂಡರ ಹತಾಶೆ. ಜನರನ್ನು ಹೇಗಾದರೂ ದಾರಿ ತಪ್ಪಿಸಬೇಕೆನ್ನುವ ಆತುರದ ಪ್ರದರ್ಶನವಲ್ಲದೆ ಇನ್ನೇನೂ ಅಲ್ಲ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಅವರ ತಂದೆ ಮಾಡಿದ ಕೆಲಸ ಮರೆತಿದ್ದಾರೆ: ರಾಜೂಗೌಡ
ಈ ಕೀಳು ರಾಜಕೀಯ ಕಾಂಗ್ರೆಸ್ಸಿಗೆ ಸರಿ ಪ್ರಿಯಾಂಕ್ ಖರ್ಗೆ ಐಟಿ ಸಚಿವರಾಗಿದ್ದಾಗ, ನಂತರ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಕೇವಲ ಅವರ ಇಲಾಖೆ ಬಗ್ಗೆ ಮಾತ್ರ ಮಾತನಾಡಿದ್ದರೇ ಎಂದು ಒಮ್ಮೆ ನೆನೆಪು ಮಾಡಿಕೊಳ್ಳಲಿ. ಕಾಂಗ್ರೆಸ್ ಪಕ್ಷದ ಈ ಅಪಪ್ರಚಾರ, ಸುಳ್ಳಿನ ರಾಜಕಾರಣವನ್ನು ಬಿಜೆಪಿ ಸಹಿಸುವುದಿಲ್ಲ. ನಿಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಇನ್ನೊಬ್ಬರ ಮೇಲೆ ನೂರು ಸುಳ್ಳು ಹೇಳುವ ನಿಮ್ಮ ಕುತಂತ್ರಗಳನ್ನು ಜನರ ಮುಂದಿಡಲೇಬೇಕು. ಸಚಿವರು ಮಾತ್ರವಲ್ಲ, ಪ್ರತಿಯೊಬ್ಬ ಕಾರ್ಯಕರ್ತ ಕೂಡ ಕಾಂಗ್ರೆಸ್ ಪಕ್ಷದ ನಾಟಕವನ್ನು ಬಯಲಿಗೆಳೆಯಲು ಸಿದ್ಧರಾಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನದ್ದು ಹುಳಿ ಹಿಂಡುವ ರಾಜಕಾರಣ: ಸಚಿವ ಸಿ.ಸಿ.ಪಾಟೀಲ್ ಟೀಕೆ
ಬೆಂಗಳೂರು: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ
ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ 89% ಹಾಗೂ ಎರಡನೇ ಡೋಸ್ 48% ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ
ರಾಜ್ಯದ ಐತಿಹಾಸಿಕ ಮಿಂಟೋ ಕಣ್ಣಿನ ಆಸ್ಪತ್ರೆಯ 125ನೇ ವಾರ್ಷಿಕೋತ್ಸವದ ಅಂಗವಾಗಿ ಇಂದು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಪ್ರತಿದಿನ 500 ದಿಂದ 800 ಹೊರರೋಗಿಗಳಿಗೆ ಚಿಕಿತ್ಸೆ ನೀಡುತ್ತಾ, ಪ್ರತಿ ವರ್ಷ ಸುಮಾರು 10,000 ಶಸ್ತ್ರ ಚಿಕಿತ್ಸೆಗಳನ್ನು ಕೈಗೊಳ್ಳುವ ಮಿಂಟೋ ಆಸ್ಪತ್ರೆ ಕರ್ನಾಟಕದ ಹೆಮ್ಮೆಯ ಸಂಸ್ಥೆಯಾಗಿದೆ. pic.twitter.com/Qnv6LZAg9V
ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್
ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಹಾಲು ಉತ್ಪಾದಕರ ಸಹಕಾರ ಸಂಘ ಕೋಚಿಮುಲ್ ಕೊನೆಗೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಸ್ವಪ್ರತಿಷ್ಠೆಯಿಂದ ಪ್ರತ್ಯೇಕವಾಗಿದೆ.
ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸಿ ಸಚಿವ ಸಂಪುಟ ಸಭೆಯಲ್ಲಿ ಇಂದು ಒಪ್ಪಿಗೆ ಸೂಚಿಸಲಾಗಿದೆ. ಕೆಲ ನಿರ್ದೇಶಕರು ಹಾಗೂ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಒತ್ತಾಸೆಯಂತೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಜಿಲ್ಲೆಯ ಕೆಲ ನಾಯಕರಿಗೆ ಇದರಿಂದ ಹಿನ್ನೆಡೆಯಾಗಿದೆ. ಇದನ್ನೂ ಓದಿ: 119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ
ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕೋಚಿಮುಲ್ ವಿಭಜನೆಗೆ ಅನುಮೋದನೆ ನೀಡುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಹುದಿನದ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ, ಸಹಕಾರ ಸಚಿವ ಶ್ರೀ ಎಸ್.ಟಿ. ಸೋಮಶೇಖರ್ ಹಾಗೂ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಜಿಲ್ಲೆಯ ಸಮಸ್ತ ರೈತರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. pic.twitter.com/JqHz250iDx
ಕಳೆದ ಒಂದು ವರ್ಷದಿಂದ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ನಾಯಕರ ಮಧ್ಯೆ ಒಕ್ಕೂಟ ವಿಭಾಗದ ವಿಚಾರವಾಗಿ ಮುಸುಕಿನ ಗುದ್ದಾಟ ನಡೆಯುತಿತ್ತು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಕೋಲಾರದಿಂದ ಹಾಲು ಒಕ್ಕೂಟ ಪ್ರತ್ಯೇಕಿಸುವ ತೀರ್ಮಾನ ಮಾಡಿದ್ದು, ಲಕ್ಷಾಂತರ ರೈತರಿಂದ ಕಟ್ಟಿದ ಒಕ್ಕೂಟ ಇಂದು ಪ್ರತ್ಯೇಕವಾಗುವ ಮೂಲಕ ರಾಜಕೀಯ ಮೇಲಾಟಕ್ಕೆ ಕಾರಣವಾಗಿದೆ. ಇದನ್ನೂ ಓದಿ:ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಡವರಿಗೆ ಸ್ವಾಭಿಮಾನದಿಂದ ಜೀವನ ನಡೆಸಲು ಮತ್ತು ತಮ್ಮದೇ ಆದ ಮನೆ ನಿರ್ಮಿಸಿಕೊಳ್ಳುವ ಕನಸನ್ನು ನನಸು ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಸುಮಾರು 834 ಎಕರೆ ಸರ್ಕಾರಿ ಜಮೀನು ಗುರುತಿಸಿ ನಿವೇಶನಗಳನ್ನಾಗಿ ಹಂಚಲು ಮೀಸಲಿಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಪುರ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರತಿಯೊಬ್ಬ ವಸತಿ ರಹಿತ ಬಡವರಿಗೆ ಮನೆ ನಿರ್ಮಿಸಿಕೊಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಆರ್.ಲತಾ ಅವರು ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಮತ್ತು ರಾಜಸ್ವ ನಿರೀಕ್ಷಕರನ್ನು ಬೆನ್ನತ್ತಿ ಸರ್ಕಾರದ ಜಾಗವನ್ನು ಗುರುತಿಸಿ ಅದನ್ನು ನಿವೇಶನಗಳನ್ನಾಗಿ ವಿಂಗಡಿಸಲು ಕ್ರಮ ಕೈಗೊಂಡು ಸುಮಾರು 834 ಎಕರೆ ಜಮೀನು ಮಂಜೂರು ಮಾಡಲಾಗಿದೆ. ನಿವೇಶನ ಹಂಚಿಕೆ ಕಾರ್ಯ ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದೆ. ಮುಂದಿನ ಒಂದು ವರ್ಷದ ಒಳಗೆ ಜಿಲ್ಲೆಯ 38 ಸಾವಿರ ಕುಟುಂಬಗಳಿಗೆ ವಸತಿ ಭಾಗ್ಯ ಯೋಜನೆಗೆ ಪ್ರಥಮ ಆದ್ಯತೆ ಕಲ್ಪಿಸಲಾಗುತ್ತದೆ ಎಂದರು. ಇದನ್ನೂ ಓದಿ: ನಾಳೆ ಪುನೀತ್ 11ನೇ ದಿನದ ಪುಣ್ಯಾರಾಧನೆ – ಅಪ್ಪು ಕುಟುಂಬಸ್ಥರಿಂದ ಭಾರೀ ಸಿದ್ಧತೆ
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸ್ವಾತಂತ್ರ್ಯ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ 750 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳನ್ನಾಗಿ ಆಯ್ಕೆ ಮಾಡಿದ್ದಾರೆ. ಅದರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪುರ ಗ್ರಾಮ ಪಂಚಾಯಿತಿ ಸಹಿತ 18 ಗ್ರಾಮ ಪಂಚಾಯಿತಿಗಳನ್ನು ಅಮೃತ ಗ್ರಾಮ ಪಂಚಾಯಿತಿಗಳನ್ನಾಗಿ ಗುರುತಿಸಿ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಗಳ ನೀವೇಶನ, ಪಿಂಚಣಿ, ಸಾಗುವಳಿ, ಪಿಎಂ ಕಿಸಾನ್, ಭಾಗ್ಯಲಕ್ಷ್ಮೀ ಬಾಂಡ್, ಮಂಜೂರಾತಿ ಪತ್ರಗಳು ಸೇರಿದಂತೆ ಒಟ್ಟು 2,916 ಫಲಾನುಭವಿಗಳಿಗೆ ವಿವಿಧ ರೀತಿಯ ಸೌಲಭ್ಯಗಳನ್ನು ವಿತರಿಸಲಾಯಿತು. ಅದೇ ರೀತಿಯ ಸುಮಾರು 700 ಜನರಿಗೆ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ವಿಮೆ ಸೌಲಭ್ಯವನ್ನು ಸಹ ಕಲ್ಪಿಸಿ ಕಾರ್ಡ್‍ಗಳ್ನು ವಿತರಿಸಿದ ಸಚಿವರು ಜಿಲ್ಲಾಡಳಿತದ ಕ್ರಿಯಾಶೀಲ ಕಾರ್ಯವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಬೆಳ್ಳಂಬೆಳಗ್ಗೆ ರೌಡಿ ಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ
ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಣೆ ಮಾಡಿದ ವಿವರ:
* 700 ಫಲಾನುಭವಿಗಳಿಗೆ ಎ.ಬಿ.ಆರ್.ಕೆ ಕಾರ್ಡ್ ವಿತರಣೆ.
* ಆರೋಗ್ಯ ತಪಾಸಣೆ ಶಿಬಿರ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
* ಕೋವಿಡ್-19 ಗೆ ಸಂಬಂಧಿಸಿದಂತೆ ಜನರಲ್ಲಿ ಜಾಗೃತಿ ಮೂಡಿಸಲಾಯಿತು.
* ಪಿ.ಸಿ.ವಿ ವ್ಯಾಕ್ಸಿನ್ ಲಾಂಚ್ ಮಾಡಲಾಯಿತು.
* 10 ಮಕ್ಕಳಿಗೆ ಉಚಿತ ಕನ್ನಡಕ ವಿತರಿಸಲಾಯಿತು.
* ಆರ್.ಕೆ.ವೈ ಐ.ಎಫ್.ಎಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿಯಲ್ಲಿ 4 ರೈತರಿಗೆ ಕಾರ್ಯಾದೇಶ ವಿತರಣೆ.
* 122 ಫಲಾನುಭವಿಗಳಿಗೆ ಪಿಎಂ ಕಿಸಾನ್ ಮಂಜೂರಾತಿ ಆದೇಶ ವಿತರಣೆ.
* 10 ಫಲಾನುಭವಿಗಳಿಗೆ ಕೃಷಿ ಉಪಕರಣಗಳ ವಿತರಣೆ.
* 178 ಫಲಾಭವಿಗಳಿಗೆ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿಯಲ್ಲಿ ವಿತರಣೆ.
* 212 ಫಲಾನುಭವಿಗಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಣೆ.
* 1 ಅಪೌಷ್ಟಿಕ ಮಗುವಿಗೆ ಕಿಟ್ ವಿತರಣೆ.
* ರೇಷ್ಮೆ ಇಲಾಖೆಯಿಂದ ವಿವಿಧ ಯೋಜನೆಯಡಿಯಲ್ಲಿ 40 ಕಾರ್ಯಾದೇಶ ವಿತರಣೆ.
* 6 ಅಂತರ್ ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹ ಧನ ವಿತರಣೆ.
* ಸ್ಮಶಾನಕ್ಕೆ ರಸ್ತೆ ಕಾಮಗಾರಿಗೆ ಚಾಲನೆ.
* ವಸತಿ ನಿವೇಶನಕ್ಕೆ ಹೋಗುವ ರಸ್ತೆ ಕಾಮಗಾರಿಗೆ ಚಾಲನೆ.
* 44 ಫಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಣೆ.
* 122 ಫಲಾನುಭವಿಗಳಿಗೆ ಪೌವತಿ ಖಾತೆ, ಆರ್.ಟಿ.ಸಿ ಹಾಗೂ ಮ್ಯುಟೇಶನ್ ವಿತರಣೆ.
* ಸಾಮಾಜಿಕ ಭದ್ರತೆ ಯೋಜನೆಯಡಿಯಲ್ಲಿ ಮಂಜೂರು ಮಾಡಿದ ಒಟ್ಟು ಮಸಾಶನಗಳ ಸಂಖ್ಯೆ – 122.
* ಅಂತ್ಯ ಸಂಸ್ಕಾರ ಯೋಜನೆಯ ಫಲಾನುಭವಿಗಳ ಸಂಖ್ಯೆ- 62.
* ರಾಷ್ಟ್ರೀಯ ಕುಟುಂಬ ಯೋಜನೆಯಡಿಯಲ್ಲಿ ಮಂಜೂರು ಮಾಡಿದ ಸಂಖ್ಯೆ-15.
* ವಿವಿಧ ಇಲಾಖೆಗಳಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ, ಕಾರ್ಯಕ್ರಮದಡಿ ಸೌಲಭ್ಯ ಪಡೆಯುವ ಒಟ್ಟು ಫಲಾನುಭವಿಗಳ ಸಂಖ್ಯೆ-2916.
ಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಲವಾರು ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸೇರಿದಂತೆ ಹಲವಾರು ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ವಿವಿಧ ಇಲಾಖೆಗಳು ಮಾಹಿತಿ ಕೇಂದ್ರಗಳನ್ನು ಮತ್ತು ಮಳಿಗೆಗಳನ್ನು ತೆರೆದು ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಮೂಡಿಸಿದರು. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ
ಜಿಲ್ಲಾಧಿಕಾರಿ ಲತಾ ಅವರು ಕಾರ್ಯಕ್ರಮದ ಪ್ರಸ್ತಾವಿಕ ಭಾಷಣ ಮಾಡಿ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿದರು. ಜಿಲ್ಲಾಧಿಕಾರಿಗಳ ನಡೆ ಗ್ರಾಮದ ಕಡೆ ಕಾರ್ಯಕ್ರಮವನ್ನು ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಇದನ್ನೂ ಓದಿ: ಇರಾಕ್ ಪ್ರಧಾನಿ ನಿವಾಸದ ಮೇಲೆ ಡ್ರೋನ್ ದಾಳಿ!
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಅರಣ್ಯಾಧಿಕಾರಿ ಅರಸಲನ್, ಪುರ ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ವಿರುಪಾಕ್ಷಗೌಡ, ಉಪಾಧ್ಯಕ್ಷರಾದ ಮಾಲಾಶ್ರೀ, ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯರಾದ ಟಿ.ಎನ್. ಜಗನ್ನಾಥ್, ಕೆ.ಎಂ.ಎಫ್ ನಿರ್ದೇಶಕರಾದ ಸುಬ್ಬಾರೆಡ್ಡಿ, ಗೌರಿಬಿದನೂರು ತಾಲೂಕಿನ ತಹಶೀಲ್ದಾರ್ ಶ್ರೀನಿವಾಸ, ಕಂದಾಯ ಇಲಾಖೆ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮ ಪಂಚಾಯಿತಿಯ ಸದಸ್ಯರುಗಳು, ಜನಪ್ರತಿನಿಧಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಚಿಕ್ಕಬಳ್ಳಾಪುರ: ರಾಹುಲ್ ಗಾಂಧಿ ಎಲ್ಲಿ ಹೋಗಿದ್ದಾರೆ ಕಾಣಿಸ್ತಿಲ್ಲ. ಕಾಂಗ್ರೆಸ್ ಆಡಳಿತ ರಾಜ್ಯಗಳಲ್ಲಿ ಏಕೆ ತೈಲ ಬೆಲೆ ಇಳಿಸಿಲ್ಲ ಎಂದು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಗರದಲ್ಲಿ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಪ್ರಶ್ನಿಸಿದರು.
ಬೆಲೆ ಇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೈ ಎಲೆಕ್ಷನ್ ಫಲಿತಾಂಶದಿಂದ ತೈಲ ಬೆಲೆ ಇಳಿಸಿಲ್ಲ. ಎರಡು-ಮೂರು ತಿಂಗಳ ಹಿಂದೆಯೇ ಯಾವ ಪ್ರಮಾಣದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆ ಮಾಡಬೇಕು ಎಂಬ ಚರ್ಚೆ ಮಾಡಲಾಗಿತ್ತು. ವಿರೋಧ ಪಕ್ಷದವರು ಹೇಳುವ ಹಾಗೆ ಬೈ ಎಲೆಕ್ಷನ್ ಫಲಿತಾಂಶದಿಂದ ತೈಲ ಬೆಲೆ ಇಳಕೆ ಮಾಡಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಸೂಟ್ಕೇಸ್ ತೆಗೆದು ಪರಿಶೀಲಿಸಿದ ಪೊಲೀಸರಿಗೆ ಕಾದಿತ್ತು ಅಚ್ಚರಿ!
ಕೇಂದ್ರ ಹಣಕಾಸು ಸಚಿವೆಯಾದ ನಿರ್ಮಲಾ ಸೀತಾರಾಮನ್ ಅವರು, ನಾನು ಎರಡು ತಿಂಗಳ ಹಿಂದೆ ಸಿಎಂ ಬೊಮ್ಮಾಯಿ ಜೊತೆ ದೆಹಲಿಗೆ ಹೋದಾಗ ಈ ಬಗ್ಗೆ ಲೆಕ್ಕಾಚಾರ ಮಾಡ್ತೀದ್ದೀವಿ ಎಂದು ಹೇಳಿದ್ದರು. ಐದಾರು ಬೈ ಎಲೆಕ್ಷನ್ ರಿಸಲ್ಟ್ ಬಂದ ಕೂಡಲೇ 19 ರೂ. ಕಡಿತ ಮಾಡಲು ಸಾಧ್ಯವೇ? ತೈಲ ಬೆಲೆ ಇಳಿಕೆ ಮಾಡಿ ಎಂದು ಕಾಂಗ್ರೆಸ್ ಅವರು ಬಾಯಿ ಬಾಯಿ ಬಡಿದುಕೊಳ್ಳುತ್ತಿದ್ರಲ್ಲಾ? ಏಕೆ ಕಾಂಗ್ರೆಸ್ ಅಧಿಕಾರ ಇರುವ ರಾಜ್ಯದವರು ಕಡಿಮೆ ಮಾಡಲಿಲ್ಲ? ಬರೀ ಬಿಜೆಪಿಯವರು ಅಧಿಕಾರದ ರಾಜ್ಯಗಳಲ್ಲಿ ಮಾತ್ರ ಮಾಡಿದ್ದೇವೆ. ರಾಹುಲ್ ಗಾಂಧಿ ಅವರು ಎಲ್ಲಿ ಹೋಗಿದ್ದಾರೆ ಕಾಣಿಸ್ತಿಲ್ಲ? ಏಕೆ? ಅವರು ಕಾಂಗ್ರೆಸ್ ಅಧಿಕಾರದ ರಾಜ್ಯದವರಿಗೆ ಇಳಿಕೆ ಮಾಡಿ ಎಂದು ಆದೇಶ ಮಾಡಕ್ಕಗಲ್ವಾ? ಎಂದು ವ್ಯಂಗ್ಯವಾಡಿದರು.
ಪಂಜಾಬ್, ಛತ್ತೀಸ್ ಘಡದಲ್ಲಿ ಏಕೆ ಮಾಡಲಿಲ್ಲ? ಕಾಂಗ್ರೆಸ್ ಇರೋ ಕಡೆ ರಾಜ್ಯಗಳಲ್ಲೂ ಸಹ ಕೇಂದ್ರ ಸರ್ಕಾರದಿಂದ ಕಡಿಮೆ ಮಾಡಲಾಗಿದೆ. ಕರ್ನಾಟಕದಲ್ಲಿ 07 ರೂ. ಮಾಡಿದ್ದೇವೆ. ಕಾಂಗ್ರೆಸ್ ಅವರು ಏಕೆ ಮಾಡ್ತಿಲ್ಲ? ಇವರು ಡಂಬಾಚಾರಕ್ಕೆ ರಾಜಕೀಯ ದುರದ್ದೇಶಕ್ಕೆ ಪ್ರತಿಭಟಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ಜನರ ಹೊರೆ ಇಳಿಸೋ ಉದ್ದೇಶ ಅವರಿಗಿಲ್ಲ ಅನ್ನೋದು ಸ್ಪಷ್ಟ. ಹಾಗಾಗಿ ಚುನಾವಣೆಗೂ ಇದಕ್ಕೂ ಸಂಬಂಧವೇ ಇಲ್ಲ. ರಾಜಕಾರಣ ಮಾಡಲು ಮಾತ್ರ ಆರೋಪ ಮಾಡ್ತಿದ್ದಾರೆ. ರಾಜಕೀಯ ದಿವಾಳಿತನ ಪ್ರದರ್ಶನ ಮಾಡ್ತಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಗ್ಯಾಂಗ್ ವಾರ್‌ನಲ್ಲಿ ಸೇವಾ ಗನ್ ಬಳಸಿ ಇಬ್ಬರು ಪೊಲೀಸರು ಪರಾರಿ
ಹುಬ್ಬಳ್ಳಿ: ಮಹಾರಾಷ್ಟ್ರ, ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಮೂರನೇ ಅಲೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆಲವು ದೇಶಗಳಲ್ಲಿ ಈಗಾಗಲೇ 3ನೇ ಅಲೆ ಕುರಿತು ಮಾತುಗಳು ಕೇಳಿಬರುತ್ತಿದೆ. ರಷ್ಯಾ, ಇಂಗ್ಲೆಂಡ್ ರೀತಿಯಲ್ಲಿ ದೇಶದ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ ಕೊರೊನಾ ಹೊಸ ತಳಿ ಬಂದಿದೆ ಎಂಬ ವರದಿ ಬಂದಿದೆ. ಹೀಗಾಗಿ ನಮ್ಮ ತಜ್ಞರ ಮತ್ತು ತಾಂತ್ರಿಕ ಸಿಬ್ಬಂದಿ ಜೊತೆ ಮಾತನಾಡಿದ್ದೇನೆ. ಹೊಸ ತಳಿಯ ಲಕ್ಷಣಗಳ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ನಮ್ಮ ಗಮನಕ್ಕೆ ತರಲು ಸೂಚಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಮೊದಲ ಡೋಸ್ ವ್ಯಾಕ್ಸಿನ್ ಪಡೆದವರು ಎರಡನೇ ಡೋಸ್ ಕಡ್ಡಾಯ ಪಡೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಅವಶ್ಯಕತೆ ಬಿದ್ದರೆ ಮುಂದಿನ ದಿನಗಳಲ್ಲಿ ಪಠ್ಯ ಕಡಿತ: ಬಿ.ಸಿ.ನಾಗೇಶ್
ಶಾಲೆ ಆರಂಭ ಕುರಿತು ಮಾತನಾಡಿದ ಅವರು, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುತ್ತೆ. 4 ತಿಂಗಳಿನಿಂದಲೂ ಶಾಲೆಗಳು ಆರಂಭವಾಗಿದ್ದರೂ, ಈವರೆಗೆ ಮಕ್ಕಳಲ್ಲಿ ಅಂತಹ ಆತಂಕ ಕಂಡುಬಂದಿಲ್ಲ. ಮಕ್ಕಳಲ್ಲಿ ಗಂಭೀರ ಸಮಸ್ಯೆಗಳು ಕಾಣಿಸಿಕೊಂಡಿಲ್ಲ. ವಿದ್ಯಾರ್ಥಿಗಳ ಕಲಿಕೆ ಈಗಾಗಲೇ ನಿಂತುಹೋಗಿದೆ. ಹೀಗಾಗಿ ಸರ್ಕಾರದ್ದು, ಅತ್ಯಂತ ಜವಾಬ್ದಾರಿ ನಡೆ ಇದೆ. ಶಾಲೆಗಳಲ್ಲಿ 1 ಪ್ರತಿಶತಕ್ಕಿಂತ ಹೆಚ್ಚು ಪ್ರಕರಣಗಳು ಕಂಡುಬಂದರೆ ಅಂತಹ ಶಾಲೆಗಳನ್ನು ಬಂದ್ ಮಾಡಲಾಗುತ್ತದೆ. ಹಲವು ಮಾರ್ಗಸೂಚಿಗಳನ್ನು ಇಟ್ಟುಕೊಂಡು ಇದೀಗ ಶಾಲೆಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.
ಉಪಚುನಾವಣೆ ಹಿನ್ನೆಲೆ ವಿಧಾನಸೌಧ ಖಾಲಿ ವಿಚಾರವಾಗಿ ಮಾತನಾಡಿದ ಅವರು, ಇಂತಹ ಆರೋಪಗಳು ಸತ್ಯಕ್ಕೆ ದೂರವಾಗಿದೆ. ರಾಜ್ಯದಲ್ಲಿ ಎಲ್ಲ ಯೋಜನೆಯ ಕಾಮಗಾರಿಗಳು ಅನುಷ್ಠಾನಗೊಳ್ಳುತ್ತಿವೆ. ನಾನು ಎಲ್ಲೇ ಇದ್ದರೂ ಸಭೆಗಳನ್ನು ಮಾಡುತ್ತಿದ್ದೇನೆ. ಕಳೆದ ಎಂಟು ದಿನಗಳಿಂದ ಈ ಭಾಗದಲ್ಲಿದ್ದೇವೆ. ಇಲ್ಲಿ ಬಂದರೂ ಸಹ ಹಲವು ಜಿಲ್ಲೆಗಳಲ್ಲಿ ಆರೋಗ್ಯ ವಿಚಾರವಾಗಿ ಪರಿಶೀಲನೆ ಮಾಡುತ್ತಿದ್ದೇವೆ. ಉಪಚುನಾವಣೆ ಇದೇ ಮೊದಲಲ್ಲ. ಎಲ್ಲ ಸರ್ಕಾರಗಳು ಅಧಿಕಾರದಲ್ಲಿದ್ದಾಗಲೂ, ಉಪಚುನಾವಣೆ ಎದುರಿಸಿದ್ದಾರೆ. ಎಲ್ಲರೂ ಇದನ್ನೇ ಮಾಡಿದ್ದಾರೆ. ಉಪಚುನಾವಣೆಯಲ್ಲಿ ನಾಲ್ಕೈದು ಸಚಿವರುಗಳು ಬಂದು ಪ್ರಚಾರ ಕೈಗೊಳ್ಳುವುದು ವಿಶೇಷವೂ ಅಲ್ಲ, ಹೊಸದೂ ಅಲ್ಲ ಎಂದಿದ್ದಾರೆ. ಇದನ್ನೂ ಓದಿ:ತಂದೆ ಹಿಂದೂ, ತಾಯಿ ಮುಸ್ಲಿಂ, ನಾನು ಜಾತ್ಯತೀತ ಕುಟುಂಬಕ್ಕೆ ಸೇರಿದ್ದೇನೆ: ಸಮೀರ್ ವಾಂಖೆಡೆ ತೀಕ್ಷ್ಣ ಪ್ರತಿಕ್ರಿಯೆ
ಹಾನಗಲ್ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ಸಿಎಂ ಬೊಮ್ಮಾಯಿ ಈಗಾಗಲೇ ಇದು ನನ್ನ ಪ್ರತಿಷ್ಠೆಯಲ್ಲ, ಹಾನಗಲ್ ಜನರ ಅಭಿವೃದ್ದಿಯ ಪ್ರತಿಷ್ಠೆ ಎಂದಿದ್ದಾರೆ. ನಾನೂ ಕೂಡ ಸಿಎಂ ಮಾತಿಗೆ ಬದ್ಧನಾಗಿದ್ದೇನೆ. ಅದು ಅಲ್ಲದೇ ಕ್ಷೇತ್ರದ ಜನರಿಗೂ ಹೇಳಿದ್ದೇನೆ. ಈ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಬಿಜೆಪಿ ಅಭ್ಯರ್ಥಿ ಸರ್ಕಾರದ ಪರ ಇರುತ್ತಾರೆ. ಅವರನ್ನೇ ಗೆಲ್ಲಿಸಬೇಕು. ಒಂದು ಸೀಟು ಗೆದ್ದರೆ ಅಥವಾ ಸೋತರೆ ಸರ್ಕಾರಕ್ಕೇನೂ ಅಪಾಯವಿಲ್ಲ. ಆದರೂ ಕೂಡ ಯಾವುದೇ ಚುನಾವಣೆಯಲ್ಲಿ ಗೆದ್ದಾಗ ನೈತಿಕಸ್ಪೂರ್ತಿ ಹಾಗೂ ಧೈರ್ಯ ಹೆಚ್ಚಾಗುತ್ತೆ. ಬೊಮ್ಮಾಯಿ ಅವರು ಮೊದಲ ಬಾರಿಗೆ ಸಿಎಂ ಆದ ಬಳಿಕ ತಮ್ಮ ಕ್ಷೇತ್ರದಲ್ಲಿ ತೊಡಗಿಕೊಂಡಿರುವುದು ಸಹಜವಾಗಿ ಎಲ್ಲರಿಗೂ ಕುತೂಹಲ ಹೆಚ್ಚಾಗಿರುತ್ತೆ ಎಂದು ಹೇಳಿದ್ದಾರೆ.