Tag: ಡಾ. ಧರಮ್ ಸಿಂಗ್ ಸೈನಿ

  • ಯುಪಿ 3ನೇ ಸಚಿವ ರಾಜೀನಾಮೆ – ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ 9ಕ್ಕೆ ಏರಿಕೆ

    ಯುಪಿ 3ನೇ ಸಚಿವ ರಾಜೀನಾಮೆ – ರಾಜೀನಾಮೆ ನೀಡಿದ ಶಾಸಕರ ಸಂಖ್ಯೆ 9ಕ್ಕೆ ಏರಿಕೆ

    ಲಕ್ನೋ: ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜೀನಾಮೆ ಬಳಿಕ ಉತ್ತರ ಪ್ರದೇಶ ಬಿಜೆಪಿಯಲ್ಲಿ ರಾಜೀನಾಮೆ ಪರ್ವ ಆರಂಭವಾಗಿದೆ. ಈ ಬೆಳವಣಿಗೆ ಬೆನ್ನಲ್ಲೆ ಬಿಜೆಪಿಯ ಮತ್ತೋರ್ವ ಸಚಿವ ಡಾ. ಧರಮ್ ಸಿಂಗ್ ಸೈನಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರ ಬಂದಿದ್ದಾರೆ.

    ಸ್ವಾಮಿ ಪ್ರಸಾದ್ ಬಳಿಕ ಒಂಬತ್ತು ಮಂದಿ ಶಾಸಕರು ಹಾಗೂ ಸಚಿವರು ರಾಜೀನಾಮೆ ನೀಡಿದ್ದರು. ಸ್ವಾಮಿ ಪ್ರಸಾದ್ ಮೌರ್ಯ ಬಿಜೆಪಿ ತೊರೆದ ನಂತರ ಧರಂ ಸಿಂಗ್ ಸೈನಿ, ಮುಖೇಶ್ ವರ್ಮಾ, ವಿನಯ್ ಶಾಕ್ಯಾ, ರೋಷನ್ ಲಾಲ್ ವರ್ಮಾ, ಬ್ರಜೇಶ್ ಪ್ರಜಾಪತಿ, ಭಗವತಿ ಸಾಗರ್, ದಾರಾ ಸಿಂಗ್ ಚೌಹಾಣ್, ಅವತಾರ್ ಸಿಂಗ್ ಭದಾನ ಅವರು ರಾಜೀನಾಮೆ ನೀಡಿದ್ದಾರೆ.

    ಧರಮ್ ಸಿಂಗ್ ಸೈನಿ ರಾಜೀನಾಮೆ ನೀಡಿದ ಬಳಿಕ ಎಸ್‍ಪಿ ನಾಯಕ ಅಖಿಲೇಶ್ ಸಿಂಗ್ ಜೊತೆ ಕಾಣಿಸಿಕೊಂಡಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೆ ಮತ್ತೋರ್ವ ಶಾಸಕ ರಾಜೀನಾಮೆ ನೀಡಿ ಬಿಜೆಪಿಯಿಂದ ಹೊರಬಂದಿದ್ದಾರೆ. ಫಿರೋಜಾಬಾದ್ ಜಿಲ್ಲೆಯ ಶಿಕೋಹಬ್ದ್‍ನ ಶಾಸಕ ಮುಖೇಶ್ ವರ್ಮಾ ಈಗ ರಾಜೀನಾಮೆ ನೀಡಿದ ಏಳನೇ ಶಾಸಕ ಆಗಿದ್ದು, ಅವರು ಸ್ವಾಮಿ ಪ್ರಸಾದ್ ಮೌರ್ಯ ಹಾದಿಯನ್ನು ಹಿಡಿದಿದ್ದು ಸಮಾಜವಾದಿ ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು: ಯೋಗಿ ಆದಿತ್ಯನಾಥ್

    ರಾಜೀನಾಮೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ಸ್ವಾಮಿ ಪ್ರಸಾದ್ ಮೌರ್ಯ ನಮ್ಮ ನಾಯಕ, ಅವರು ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಬೆಂಬಲಿಸುತ್ತೇವೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ನಾಯಕರು ನಮ್ಮೊಂದಿಗೆ ಸೇರಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

    ಯೋಗಿ ಆದಿತ್ಯನಾಥ್ ಸರ್ಕಾರವು ಕಳೆದ ಐದು ವರ್ಷಗಳಲ್ಲಿ ದುರ್ಬಲ ವರ್ಗಗಳು, ಯುವಕರು, ರೈತರು, ದಲಿತರು ಮತ್ತು ಒಬಿಸಿಗಳ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರಿಗೆ ಬರೆದ ಪತ್ರದಲ್ಲಿ ವರ್ಮಾ ಆರೋಪಿಸಿದ್ದಾರೆ. ಆಡಳಿತದಲ್ಲಿ ಸಣ್ಣ ವ್ಯಾಪಾರಿಗಳು, ಉದ್ಯಮಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಅಸಮಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಳೆದ 24 ಗಂಟೆಯ ಅವಧಿಯಲ್ಲಿ ಯೋಗಿ ಸರ್ಕಾರದ ಎರಡು ಮಂತ್ರಿಗಳು ರಾಜೀನಾಮೆ