Tag: ಡಾ.ಪುನೀತ್ ರಾಜ್‌ಕುಮಾರ್

  • ಸಚಿನ್ ದಾಖಲೆ ಸರಿಗಟ್ಟಿದ್ದೇ ತಡ ಬೆಂಗ್ಳೂರಿನ ರಸ್ತೆಗಳಿಗೆ ಕೊಹ್ಲಿ ಹೆಸರಿಡಲು ಒತ್ತಾಯ

    ಸಚಿನ್ ದಾಖಲೆ ಸರಿಗಟ್ಟಿದ್ದೇ ತಡ ಬೆಂಗ್ಳೂರಿನ ರಸ್ತೆಗಳಿಗೆ ಕೊಹ್ಲಿ ಹೆಸರಿಡಲು ಒತ್ತಾಯ

    ಬೆಂಗಳೂರು: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ (Sachin Tendulkar) ಅವರ ಶತಕದ ದಾಖಲೆ ಸರಿಗಟ್ಟಿದ ವಿರಾಟ್ ಕೊಹ್ಲಿಗೆ (Virat Kohli) ಹೆಚ್ಚಿನ ಗೌರವ ಬೆಂಗಳೂರಿಗರು (Bengaluru) ನೀಡಬೇಕು. ಆರ್‌ಸಿಬಿಯ (RCB) ತಂಡದಲ್ಲೇ ಇರುವ ಕೊಹ್ಲಿಗೆ ಇನ್ನಷ್ಟು ಗೌರವವನ್ನು ನಮ್ಮ ಬಿಬಿಎಂಪಿ (BBMP), ಸರ್ಕಾರ ನೀಡಬೇಕು ಎಂದು ಪಾಲಿಕೆಗೆ ಮನವಿ ಬಂದಿದೆ.

    ವಿಶ್ವದಾಖಲೆಗಳ ಸರದಾರ ಕಿಂಗ್ ಕೊಹ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟಿದ್ದೆ ತಡ, ಅವರ ಹೆಸರನ್ನು ಬೆಂಗಳೂರಿನ ಕೆಲ ರಸ್ತೆಗಳಿಗೆ ಇಡಬೇಕು ಎನ್ನುವ ಒತ್ತಾಯ ಮತ್ತೆ ಮುನ್ನೆಲೆಗೆ ಬಂದಿದೆ. ವಿರಾಟ್ ಕೊಹ್ಲಿ ಹಾಗೂ ನಮ್ಮ ಹೆಮ್ಮೆಯ ಕರ್ನಾಟಕ ರತ್ನ ಡಾ. ಪುನೀತ್ ರಾಜ್‌ಕುಮಾರ್ (Dr.Puneeth Rajkumar) ಹೆಸರಿಡಲು ಪಾಲಿಕೆಗೆ ಈ ಹಿಂದೆಯೇ ಮನವಿ ಮಾಡಲಾಗಿತ್ತು. ಈ ಇಬ್ಬರ ಹೆಸರನ್ನು ಎರಡು ಪ್ರತ್ಯೇಕ ರಸ್ತೆಗಳಿಗೆ ಇರಿಸುವ ಮೂಲಕ ಅಭಿಮಾನಿಗಳ ಆಶಯ ಈಡೇರಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಇದನ್ನೂ ಓದಿ: ಸೋಲಿನ ಬೆನ್ನಲ್ಲೇ ಲಂಕಾಗೆ ಮತ್ತೆ ಶಾಕ್‌ – ಕ್ರಿಕೆಟ್‌ ಮಂಡಳಿಯನ್ನೇ ಅಮಾನತುಗೊಳಿಸಿದ ICC

    ಶಾಂತಿನಗರ ಬಸ್ ಟರ್ಮಿನಲ್ ಎದುರಿನ ರಸ್ತೆಗೆ ಡಾ. ಪುನೀತ್ ರಾಜ್‌ಕುಮಾರ್ ಅವರ ಹೆಸರು ಹಾಗೂ ವಿಲ್ಸನ್ ಗಾರ್ಡನ್‌ನ 8ನೇ ಅಡ್ಡರಸ್ತೆಗೆ ವಿರಾಟ್ ಕೊಹ್ಲಿ ಹೆಸರು ಇಡಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ, ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಪತ್ರ ಬರೆಯಲಾಗಿತ್ತು. ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತರು ಸರ್ಕಾರದ ಜೊತೆಗೆ ಚರ್ಚೆ ನಡೆಸಲು ಮುಂದಾಗಿದ್ದಾರೆ. ಆದರೆ ರಸ್ತೆಗಳಿಗೆ ಈವರೆಗೆ ಯಾವುದೇ ಅಧಿಕೃತ ಹೆಸರು ಇರಿಸಿಲ್ಲ. ದಯವಿಟ್ಟು ಈ ಇಬ್ಬರು ಸಾಧಕರ ಹೆಸರು ಇಟ್ಟರೇ ಸೂಕ್ತ ಎನ್ನುವ ಮನವಿ ಮಾಡಲಾಗಿತ್ತು. ಆದರೆ ಈ ಬಗ್ಗೆ ಯಾಕೋ ನಿರಾಸಕ್ತಿ ತೋರುತ್ತಿರುವ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಾಮಾಜಿಕ ಕಾರ್ಯಕರ್ತ ಅಮರೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆ ಒಬ್ಬ ಆಟಗಾರ 20-30 ಓವರ್‌ ಆಡಿದ್ರೆ, ಸೆಮಿಸ್‌ ಪ್ರವೇಶ ಮಾಡ್ತೀವಿ – ಬಾಬರ್‌ ಆಜಂ

    ನಿರಾಸಕ್ತಿ ತೋರುತ್ತಿರುವ ಅಧಿಕಾರಿಗಳ ವಿರುದ್ಧ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರಿಗೆ ದೂರು ಸಹ ನೀಡಲಾಗಿದೆ. ಇಬ್ಬರು ಸಾಧಕರ ಹೆಸರು ಇಡಬೇಕು ಎಂದು ಪತ್ರ ಬರೆದು ಒಂದು ವರ್ಷ ಕಳೆದರೂ ಹೆಸರಿಡಲು ಪಾಲಿಕೆ ನಿರಾಸಕ್ತಿ ತೊರುತ್ತಿದೆ. ಈಗ ಕೊಹ್ಲಿ ವಿಶ್ವ ದಾಖಲೆ ಮಾಡಿದ್ದಾರೆ. ಆದರೇ ಇನ್ನೂ ಹೆಸರು ಇಡದ ಕಾರಣ ಡಿಸಿಎಂ ಡಿಕೆಶಿಗೆ ದೂರು ನೀಡಿದ್ದಾರೆ. ಕೂಡಲೇ ನೀವು ಹೆಸರಿಡಲು ಸೂಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ: World Cup 2023: ಮೈಲಿಗಲ್ಲು ಸ್ಥಾಪಿಸಲು RO-KO ವೇಯ್ಟಿಂಗ್‌ – ಸೂಪರ್‌ ಸಂಡೇ ಡಬಲ್‌ ಧಮಾಕ..!

  • ಪುನೀತ್‌ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್  Hourನಲ್ಲಿ ಟ್ರೀಟ್ಮೆಂಟ್

    ಪುನೀತ್‌ ಹೆಸರಲ್ಲಿ ಯೋಜನೆ ಜಾರಿ- Heart Attack ಆದ್ರೆ ಗೋಲ್ಡನ್ Hourನಲ್ಲಿ ಟ್ರೀಟ್ಮೆಂಟ್

    –  ಚಿಕಿತ್ಸೆ ಹೇಗೆ?, ಖರ್ಚು ಎಷ್ಟು?, ಎಲ್ಲೆಲ್ಲಿ ಹಬ್‍ಗಳಿವೆ?

    ಬೆಂಗಳೂರು: ಇತ್ತಿಚೆಗೆ ಯುವಕರು ಹೆಚ್ಚು ಹೃದಯಾಘಾತಕ್ಕೆ ಒಳಗಾಗುತ್ತಿರುವುದೇ ಹೆಚ್ಚು. ಅಧ್ಯಯನದ ಪ್ರಕಾರ, ಹೃದಯಾಘಾತಕ್ಕೆ ಈಡಾಗುವರಲ್ಲಿ 35% ರಷ್ಟು ಮಂದಿ 40ರ ಆಸುಪಾಸಿನ ವಯಸ್ಸಿನವರು ಎಂಬುದು ಕಳವಳಿಕಾರಿ ಸಂಗತಿಯಾಗಿದೆ. ಹೃದಯಾಘಾತ (Heart Attack) ಸಂದರ್ಭಗಳಲ್ಲಿ ಸಾಧ್ಯವಾದಷ್ಟು ಜೀವಗಳನ್ನ ಉಳಿಸಬೇಕು. ಮತ್ತೆ ಗೋಲ್ಡನ್ ಹವರ್ ಒಳಗೆ, ಸಕಾಲಕ್ಕೆ ಅವರಿಗೆ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ (Health Department) ಮಹತ್ವದ ಹೆಜ್ಜೆಯಿಟ್ಟಿದೆ.

    ಪುನೀತ್ ರಾಜಕುಮಾರ್ (Dr. Puneeth Raj Kumar) ಅವರ ಹೆಸರಿನಲ್ಲೇ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯನ್ನ ಅನುಷ್ಠಾನಕ್ಕೆ ತರಲಾಗುತ್ತಿದೆ. ಎರಡು ರೀತಿಯಲ್ಲಿ ಕಾರ್ಯಕ್ರಮವನ್ನು ಜಾರಿಗೆ ತರಲಾಗುತ್ತಿದೆ. Hub & Spoke ಮಾದರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ AED ಸಾಧನಗಳಗಳನ್ನ ಅಳವಡಿಸುವ ಯೋಜನೆಯನ್ನು ಇಲಾಖೆ ಇಟ್ಟುಕೊಂಡಿದೆ.

    ಚಿಕಿತ್ಸೆ ಹೇಗೆ?, ಖರ್ಚು ಎಷ್ಟು..?: ಯಾರಿಗೆ ಎದೆನೋವು ಕಾಣಿಸಿಕೊಂಡ್ರೂ, ಅವರು Spoke ಕೇಂದ್ರಗಳಿಗೆ ಭೇಟಿ ನೀಡಿದರೆ ತಕ್ಷಣ ECG ಮಾಡಲಾಗುತ್ತೆ. ಜೊತೆಗೆ AIತಂತ್ರಜ್ಞಾನದ ಮೂಲಕ ಅವರ ಪರಿಸ್ಥಿತಿ ಕ್ರಿಟಿಕಲ್ ಇದೆಯಾ, ಇಲ್ವಾ ಅನ್ನೋದನ್ನ ಸ್ಥಳದಲ್ಲಿಯೇ ನಾಲ್ಕರಿಂದ ಐದು ನಿಮಿಷದೊಳಗೆ ಪತ್ತೆ ಹಚ್ಚಲಾಗುತ್ತೆ. Tricog ಸಂಸ್ಥೆಯವರ AI ತಂತ್ರಜ್ಞಾನದ ಸಹಾಯ ಪಡೆದು ಕ್ರಿಟಿಕಲ್ ಅಥವಾ ನಾನ್ ಕ್ರಿಟಿಕಲ್ ಅನ್ನೋದನ್ನ ಪತ್ತೆ ಹಚ್ಚುವ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಇದನ್ನೂ ಓದಿ: BMTC ಸಾರಥಿಗಳ ಹಾರ್ಟ್ ಇನ್ ಡೇಂಜರ್- ಜಯದೇವ ವೈದ್ಯರ ವರದಿಯಲ್ಲಿ ಬಹಿರಂಗ

    ಯಾರು ಕ್ರಿಟಿಕಲ್ ಹಂತದಲ್ಲಿದ್ದಾರೆ, ಅವರಿಗೆ  ಸ್ಫೋಕ್ ಕೇಂದ್ರಗಳಲ್ಲೇ ಅಂದ್ರೆ ತಾಲೂಕು ಆಸ್ಪತ್ರೆಗಳಲ್ಲೇ ಉಚಿತವಾಗಿ Tenecteplase ಇಂಜೆಕ್ಷನ್ ನ ಕೊಡಲಾಗುತ್ತೆ. ಈ ಇಂಜೆಕ್ಷನ್ ಹಠಾತ್ ಹೃದಯಾಘಾತ ಆಗುವುದನ್ನ ತಡೆಯುವಲ್ಲಿ ಅತ್ಯಂತ ಪರಿಣಾಮಕಾರಿಯಾಗಿದೆ. ಹೀಗಾಗಿ ಕ್ರಿಟಿಕಲ್ ಹಂತದಲ್ಲಿ ಇರುವವರಿಗೆ ತಕ್ಷಣಕ್ಕೆ ಹಾರ್ಟ್ ಅಟ್ಯಾಕ್ ಆಗದಂತೆ ನೋಡಿಕೊಳ್ಳುವಲ್ಲಿ ಈ ಚಿಕಿತ್ಸೆ ಸಹಕಾರಿಯಾಗಲಿದೆ. ಒಂದು Tenecteplase‌ ಚುಚ್ಚುಮದ್ದಿಗೆ ಖಾಸಗಿ ಆಸ್ಪತ್ರೆಗಳಲ್ಲಿ 30 ರಿಂದ 45 ಸಾವಿರ ಚಾರ್ಜ್ ಮಾಡ್ತಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಈ ಇಂಜೆಕ್ಷನ್ ಅನ್ನ ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ.

    ತಾಲೂಕು ಅಥವಾ ಜಿಲ್ಲಾಸ್ಪತ್ರೆಯ ಸ್ಪೋಕ್ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದ ನಂತರ ಹೆಚ್ಚಿನ ಚಿಕಿತ್ಸೆಗೆ ನಾವು ಸೂಪರ್ ಸ್ಪಾಷಾಲಿಟಿ ಆಸ್ಪತ್ರೆಯ ಹಬ್ ಕೇಂದ್ರಗಳಿಗೆ ಅಂಬುಲೆನ್ಸ್ ಸಹಾಯದೊಂದಿಗೆ ಕಳಿಸಿಕೊಡುವುದು. ಅಲ್ಲಿ ರೋಗಿಗಳಿಗೆ ಹೆಚ್ಚಿನ ವೈದ್ಯಕೀಯ ಸೇವೆಯನ್ನ ಕಲ್ಪಿಸಲಾಗುತ್ತೆ. ಆಂಜಿಯೋಗ್ರಾಮ್ ಅಥವಾ ಆಂಜಿಯೋಪ್ಲ್ಯಾಸ್ಟಿ, ಸೇರಿದಂತೆ ಉನ್ನತ ಮಟ್ಟದ ಹೃದಯ ಚಿಕಿತ್ಸೆಯನ್ನ ಈ Hub ಕೇಂದ್ರಗಳಲ್ಲಿ ಪಡೆಯಬಹುದಾಗಿದೆ.

    ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ Hub ಗಳಲ್ಲೂ ಕೂಡಾ ಬಿ.ಪಿ.ಎಲ್ ಕಾರ್ಡುದಾರರಿಗೆ ಉಚಿತ ಚಿಕಿತ್ಸೆ ದೊರೆಯಲಿದೆ. APL ಕಾರ್ಡುದಾರರು ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಅಡಿಯಲ್ಲಿ ಉಚಿತ ಚಿಕಿತ್ಸೆ ಪಡೆಯಬಹುದು. ಜಯದೇವ ಹೃದ್ರೋಗ ಸಂಸ್ಥೆಯ ಬೆಂಗಳೂರು, ಮೈಸೂರು ಮತ್ತು ಕಲಬುರಗಿ ಆಸ್ಪತ್ರೆಗಳ ಮೂರು ಹಬ್ ಗಳ ವ್ಯಾಪ್ತಿಗೆ 45 ಸ್ಪೋಕ್ ಕೇಂದ್ರಗಳನ್ನ ಸಂಪರ್ಕಿಸಲಾಗಿದೆ. ಇವುಗಳಲ್ಲಿ 35 ತಾಲೂಕು ಆಸ್ಪತ್ರೆಗಳು ಮತ್ತು 10 ಜಿಲ್ಲಾಸ್ಪತ್ರೆಗಳು ಸೇರಿವೆ.

    ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಧಾರವಾಡ,  ಬಾಗಲಕೋಟೆ, ಬೆಳಗಾವಿ, ಬೆಂಗಳೂರು, ಮೈಸೂರು ಹಾಗೂ ಕಲಬುರಗಿಯಲ್ಲಿ ಹಬ್‌ಗಳಿವೆ. ಒಟ್ಟಾರೆ ರಾಜ್ಯದ 31 ಜಿಲ್ಲೆಗಳ ವ್ಯಾಪ್ತಿಯಲ್ಲಿ 10 ಹಬ್ಸ್, ಹಾಗೂ 85 ತಾಲೂಕು ಮತ್ತು ಜಿಲ್ಲಾಸ್ಪತ್ರೆಗಳಲ್ಲಿ ಸ್ಪೋಕ್ ಕೇಂದ್ರಗಳನ್ನ ರೂಪಿಸುವ ಮೂಲಕ, ಹಠಾತ್ ಹೃದಯಘಾತಕ್ಕೆ ಒಳಗಾಗುವವರ ಜೀವ ಉಳಿಸುವಂತ ಒಂದು ಪರಿಣಾಮಕಾರಿ ಚಿಕಿತ್ಸಾ ಕಾರ್ಯಕ್ರಮವನ್ನ ಪುನಿತ್ ರಾಜಕುಮಾರ್ ಹೆಸರಿನಲ್ಲಿ ಜಾರಿಗೆ ತರುತ್ತಿದೆ.

    ಪುನೀತ್ ರಾಜಕುಮಾರ್ ಹೃದಯಜ್ಯೋತಿ ಕಾರ್ಯಕ್ರಮದ ಇನ್ನೊಂದು ಭಾಗವಾಗಿ 2 ಕೋಟಿ ವೆಚ್ಚದಲ್ಲಿ AED (Automated External Defibrillator) ಸಾಧನಗಳನ್ನ ಅಳವಡಿಸಲು ನಿರ್ಧರಿಸಲಾಗಿದೆ. ಬಸ್ ಸ್ಟಾಂಡ್, ರೈಲ್ವೇ ಸ್ಟೇಷನ್ಸ್, ಏರ್ ಪೋರ್ಟ್, ವಿಧಾನಸೌಧ, ಕೋರ್ಟ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಸ್ವಯಂ ಚಾಲಿತ ಡಿಫಿಬ್ರಿಲೇಟರ್ ಗಳನ್ನ ಅಳವಡಿಸಲಾಗುತ್ತಿದೆ. ಒಂದು AED ಸಾಧನ ಖರೀದಿಗೆ 1 ಲಕ್ಷದ 10 ಸಾವಿರದ ವರೆಗೆ ವೆಚ್ಚ ತಗುಲಬಹುದು ಎಂದು ಅಂದಾಜಿಸಲಾಗಿದೆ. ಈ ಸಾಧನಗಳನ್ನ ಖರೀದಿ ಪ್ರಗತಿಯಲ್ಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕರ್ಮಭೂಮಿಯಿಂದ ಪುಣ್ಯ ಭೂಮಿವರೆಗೂ ಅಮರ ಜ್ಯೋತಿ ಯಾತ್ರೆ: ಡಾ.ರಾಜ್ ಸಹೋದರಿ ನಾಗಮ್ಮರಿಂದ ಚಾಲನೆ

    ಕರ್ಮಭೂಮಿಯಿಂದ ಪುಣ್ಯ ಭೂಮಿವರೆಗೂ ಅಮರ ಜ್ಯೋತಿ ಯಾತ್ರೆ: ಡಾ.ರಾಜ್ ಸಹೋದರಿ ನಾಗಮ್ಮರಿಂದ ಚಾಲನೆ

    ಚಾಮರಾಜನಗರ: ಏಪ್ರಿಲ್ 24 ರಂದು ದಿವಂಗತ ಮೇರುನಟ ಡಾ.ರಾಜ್‍ಕುಮಾರ್ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಅವರ ಜನ್ಮಸ್ಥಳದಿಂದ ಸಮಾಧಿಯವರೆಗೆ ಅಮರ ಜ್ಯೋತಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಡಾ.ರಾಜ್ ಹಾಗೂ ಡಾ.ಪುನೀತ್ ರಾಜ್‍ಕುಮಾರ್ ಅವರ ಅಮರಜ್ಯೋತಿ ಯಾತ್ರೆಯನ್ನು ರಾಜ್ ಹುಟ್ಟೂರು ದೊಡ್ಡಗಾಜನೂರಿನಲ್ಲಿ ಇಂದು(ಗುರುವಾರ) ಚಾಲನೆ ನೀಡಲಾಯಿತು.

    ಗಾಜನೂರಿನಲ್ಲಿರುವ ಡಾ.ರಾಜ್ ಸಹೋದರಿ ನಾಗಮ್ಮರಿಂದ ಜ್ಯೋತಿ ಬೆಳಗಿಸಿ ಹಸ್ತಾಂತರಿಸುವ ಮೂಲಕ ಕರ್ಮಭೂಮಿಯಿಂದ ಪುಣ್ಯಭೂಮಿವರೆಗಿನ ಅಮರಜ್ಯೋತಿ ಯಾತ್ರೆ ಮೆರವಣಿಗೆಗೆ ಚಾಲನೆ ನೀಡಿದರು. ದೊಡ್ಮನೆ ಕುಟುಂಬದ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿರುವ ಈ ಯಾತ್ರೆ ಇಂದು ಗಾಜನೂರಿನಿಂದ ಹೊರಟು ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ ಮೂಲಕ ತೆರಳಿ ಏಪ್ರಿಲ್ 24 ರಂದು ಬೆಂಗಳೂರಿಗೆ ತೆರಳಿ ರಾಜ್ ಹಾಗೂ ಪುನೀತ್‍ ರಾಜ್‍ಕುಮಾರ್ ಸಮಾಧಿ ತಲುಪಲಿದೆ. ಇದನ್ನೂ ಓದಿ:  ಧ್ವಂಸಗೊಂಡ ಅಪ್ಪನ ಅಂಗಡಿಯಲ್ಲಿ ಕಾಯಿನ್ ಸಂಗ್ರಸುತ್ತಿದ್ದ ಬಾಲಕ – ಫೋಟೋ ವೈರಲ್ 

    ಡಾ.ರಾಜ್ ಹಾಗೂ ಡಾ.ಪುನೀತ್ ರಾಜ್‍ಕುಮಾರ್ ಎಂದೆಂದಿಗೂ ಅಮರ ಎಂದು ಸಾರಲು ಹಾಗೂ ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ಆಶಿಸಿ ಈ ಅಮರ ಜ್ಯೋತಿ ಯಾತ್ರೆ ನಡೆಸಲಾಗುತ್ತಿದೆ ಎಂದು ದೊಡ್ಮನೆ ಕುಟುಂಬದ ಅಭಿಮಾನಿಗಳ ಬಳಗದ ಅಧ್ಯಕ್ಷ ಮುನಿಯಪ್ಪ ತಿಳಿಸಿದರು.

  • ಒಂದು ಮಾತನಾಡದೆ ಮೌನ ಪ್ರೀತಿ ಮಾಡಿದೆ- ಹಾಡಿನ ಮೂಲಕ ಅಪ್ಪುಗೆ ಪೊಲೀಸ್ ನಮನ

    ಒಂದು ಮಾತನಾಡದೆ ಮೌನ ಪ್ರೀತಿ ಮಾಡಿದೆ- ಹಾಡಿನ ಮೂಲಕ ಅಪ್ಪುಗೆ ಪೊಲೀಸ್ ನಮನ

    ಮಡಿಕೇರಿ: ಪುನೀತ್ ರಾಜ್‍ಕುಮಾರ್ ಹುಟ್ಟುಹಬ್ಬದ ದಿನ ಅವರ ಕೊನೆಯ ಚಿತ್ರ ‘ಜೇಮ್ಸ್’ ವಿಶ್ವದ್ಯಾಂತ ತೆರೆಕಂಡು ಭರ್ಜರಿ ಪ್ರದರ್ಶನಗೊಳ್ಳುತ್ತಿದೆ. ಪುನೀತ್ ರಾಜ್‍ಕುಮಾರ್ ಅವರನ್ನು ‘ಜೇಮ್ಸ್’ ಸಿನಿಮಾದಲ್ಲಿ ನೋಡಿ ಅಭಿಮಾನಿಗಳು ಭಾವುಕವಾಗುತ್ತಿರುವುದು ಸಾಮಾನ್ಯವಾಗಿದೆ. ಇಲ್ಲೊಬ್ಬ ವೃತ್ತಿ ನಿರೀಕ್ಷಕ ಮಹೇಶ್ ಸಹ ಅವರೊಂದಿಗಿನ ಒಡನಾಟ ನೆನಪಿಸಿಕೊಂಡು ಭಾವುಕರಾಗಿ ಹಾಡುವ ಮೂಲಕ ಅಪ್ಪುಗೆ ನಮನ ಸಲ್ಲಿಸಿದ್ದಾರೆ.

    ಅಪ್ಪು ಅಗಲಿ ನಾಲ್ಕು ತಿಂಗಳು ಕಳೆದ್ರು ಅಪ್ಪುವಿನ ಮೇಲೆ ಅಭಿಮಾನಿಗಳು ಇಟ್ಟಿರುವ ಪ್ರೀತಿ ಕಡಿಮೆಯಾಗಿಲ್ಲ. ಅವರನ್ನು ಕಳೆದುಕೊಂಡ ಮೇಲೆ ಪೆÇಲೀಸ್ ಅಧಿಕಾರಿಗೆ ಅಪ್ಪು ಮಾಡಿರುವ ಸಮಾಜಸೇವೆ ನೆನೆದು ಭಾವುಕರಾಗಿ ಡಾ.ರಾಜ್‍ಕುಮಾರ್ ಹಾಡಿರುವ ರೀತಿಯಲ್ಲಿಯೇ ಹಾಡನ್ನು ಹಾಡಿ ಅಚ್ಚರಿ ಮೂಡಿಸಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ವೃತನೀರಿಕ್ಷಕರಾಗಿ ಕರ್ತವ್ಯ ಮಾಡುತ್ತಿರುವ ಮಹೇಶ್ ದೇವರು, ಪುನೀತ್ ರಾಜ್‍ಕುಮಾರ್ ಬಗ್ಗೆ ಅಪಾರವಾದ ಗೌರವ ಹಾಗೂ ಅಭಿಮಾನ ಇಟ್ಟುಕೊಂಡಿದ್ದಾರೆ. ಇದನ್ನೂ ಓದಿ: ಮೊದಲ ದಿನವೇ 30 ಕೋಟಿ ಕಲೆಕ್ಷನ್ – 100 ಕೋಟಿ ಕ್ಲಬ್ ಸೇರುತ್ತಾ ಜೇಮ್ಸ್..?

    ಪುನೀತ್ ರಾಜ್‍ಕುಮಾರ್ ಕೊನೆ ಚಿತ್ರ ‘ಜೇಮ್ಸ್’ ದೃಶ್ಯಗಳನ್ನು ಕೊಡಗು ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಚಿತ್ರೀಕರಣ ಮಾಡುವ ಸಂದರ್ಭದಲ್ಲಿ ಮಹೇಶ್ ಅವರು ಸ್ಥಳದಲ್ಲಿ ಇದ್ದರು. ಈ ವೇಳೆ ಅಪ್ಪು ಅವರೊಂದಿಗೆ ಒಂದಷ್ಟು ಸಮಯ ಕಳೆದಿದ್ದಾರೆ. ಆ ನೆನಪು ಇಂದಿಗೂ ಅವರನ್ನು ಕಾಡುತ್ತಿದೆ.

    ಪ್ರಸ್ತುತ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಬಗ್ಗೆ ಇಟ್ಟಿರುವ ಅಭಿಮಾನ ಕಂಡ ಪೆÇಲೀಸ್ ಅಧಿಕಾರಿ ಮಹೇಶ್ ದೇವರು ‘ಒಂದು ಮಾತನಾಡದೆ ಮೌನ ಪ್ರೀತಿ ಮಾಡಿದೆ, ಇಂದು ಮಾತನಾಡಿದೆ ಪ್ರೀತಿ ಮೌನವಾಗಿದೆ. ನೀನೆ ಜೀವ ಜೀವನ ನೀನೆ ಪ್ರೇಮ ಕಾರಣ’ ಎಂದು ಸಾಂಗ್ ಹಾಡುವ ಮೂಲಕ ಅಪ್ಪುಗೆ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಮಹೇಶ್ ಅವರು ಹಾಡಿರುವ ಈ ಸಾಂಗ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಅಗುತ್ತಿದೆ.

  • ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ

    ಡಾ.ಪುನೀತ್ ರಾಜ್‍ಕುಮಾರ್ ನೆನೆದು ಗುಣಗಾನ ಮಾಡಿದ ಪ್ರಿಯಾಂಕ್ ಖರ್ಗೆ

    ಕಲಬುರಗಿ: ಡಾ.ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ನೆನೆದು ಸಿನಿರಂಗದವರು ಮಾತ್ರವಲ್ಲ ಅವರ ಸಮಾಜಮುಖಿ ಕೆಲಸಗಳನ್ನು ನೆನೆದು ರಾಜಕೀಯ ಮುಖಂಡರು ಅವರನ್ನು ಗುಣಗಾನ ಮಾಡುತ್ತಿದ್ದಾರೆ. ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ಗಣ್ಯರು ಅಪ್ಪು ನೆನೆದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ಮಾಜಿ ಸಚಿವರು, ಶಾಸಕರು ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸಹ ಅಪ್ಪು ಹುಟ್ಟುಹಬ್ಬದ ಸಂದರ್ಭದಲ್ಲಿ ಅವರನ್ನು ನೆನೆದು ಭಾವುಕ ಪೋಸ್ಟ್ ಮಾಡಿದ್ದಾರೆ.

    ಖರ್ಗೆ ಅವರು ಟ್ವಿಟ್ಟರ್‌ನಲ್ಲಿ, ಕಾಂಗ್ರೆಸ್ ಯೂಥ್ ಐಕಾನ್, ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಮ್ಮನ್ನೆಲ್ಲಾ ಅಗಲಿರುವುದು ನಿಜಕ್ಕೂ ನಂಬಲಾರದ ಸತ್ಯ. ಅವರು ದೈಹಿಕವಾಗಿ ಇಂದು ನಮ್ಮೊಂದಿಗಿಲ್ಲದಿದ್ದರೂ ಅವರ ಆದರ್ಶಗಳು, ಅವರ ಯೋಚನೆಗಳು, ಯೋಜನೆಗಳು ಎಂದೆಂದಿಗೂ ನಮ್ಮೊಂದಿಗಿರುತ್ತದೆ ಎಂದು ಕರುನಾಡ ಕುವರನ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಸಾವಿರಾರು ಮಕ್ಕಳಿಗೆ ವಿದ್ಯೆ ನೀಡಿ, ಅನೇಕರಿಗೆ ತೆರೆಮರೆಯಲ್ಲಿ ನಿಂತು ಬದುಕು ಕಟ್ಟಿ ಕೊಟ್ಟ ರಾಜಕುಮಾರ, ಎಂದೆಂದಿಗೂ ಮರೆಯಲಾಗದ ಮಾಣಿಕ್ಯ ಡಾ.ಪುನೀತ್ ರಾಜ್‍ಕುಮಾರ್ ಅವರ ಜಯಂತಿಯಂದು ಅವರನ್ನ ಹೃದಯ ಪೂರ್ವಕವಾಗಿ ಸ್ಮರಿಸುತ್ತೇನೆ ಎಂದು ಫೇಸ್ ಬುಕ್‍ನಲ್ಲಿ ಬರೆದುಕೊಂಡಿದ್ದಾರೆ.

  • ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಅಪ್ಪು ಹುಟ್ಟುಹಬ್ಬಕ್ಕೆ ಕನಸಿನ ‘ಗಂಧದಗುಡಿ’ ಫಸ್ಟ್ ಲುಕ್ ರಿಲೀಸ್

    ಡಾ.ಪುನೀತ್ ರಾಜ್‌ಕುಮಾರ್ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಬಹುನಿರೀಕ್ಷಿತ ‘ಜೇಮ್ಸ್’ ಚಿತ್ರಮಂದಿರಕ್ಕೆ ಲಗ್ಗೆ ಇಟ್ಟಿದೆ. ಈ ಶುಭದಿನ ಅಪ್ಪು ಕನಸಿನ ಚಿತ್ರ ‘ಗಂಧದಗುಡಿ’ಯ ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಲಾಗಿದೆ. ಈ ಸುದ್ದಿ ತಿಳಿದ ಅಭಿಮಾನಿಗಳು ಸಖತ್ ಖುಷಿಯಾಗಿದ್ದು, ಡಬಲ್ ಧಮಾಕದಂತೆ ಕುಣಿದು ಕುಪ್ಪಳಿಸುತ್ತಿದ್ದಾರೆ.

    ಅಪ್ಪುನನ್ನು ಮತ್ತೆ ಬರಮಾಡಿಕೊಳ್ಳಲು ಅಭಿಮಾನಿಗಳು ತಿಂಗಳುಗಳಿಂದ ಭರದಿಂದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಕೊನೆಗೂ ಅವರ ಕನಸಿನ ದಿನ ಎಂಬಂತೆ ಅಪ್ಪು ಹುಟ್ಟಿದ ದಿನ ಬಂದಿದೆ. ಹಾಗಾಗಿ ತಮ್ಮ ಇಷ್ಟದ ರಾಜಕುಮಾರನನ್ನು ನಾನಾ ರೀತಿಯಲ್ಲಿ ಬರಮಾಡಿಕೊಂಡ ಪ್ರೇಕ್ಷಕರು ಸಿನಿಮಾವನ್ನು ಸಿನಿಮಾದ ರೀತಿ ನೋಡದೆ ಭಾವನಾತ್ಮಕವಾಗಿ ಕನೆಕ್ಟ್ ಆಗಿದ್ದಾರೆ. ಇದನ್ನೂ ಓದಿ: ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ 

     

    View this post on Instagram

     

    A post shared by PRK Productions (@prk.productions)

    ಈ ಜೊತೆಗೆ ಅಪ್ಪು ಕನಸಿನ ಪ್ರಾಜೆಕ್ಟ್ ‘ಗಂಧದಗುಡಿ’ ಫಸ್ಟ್ ಲುಕ್ ಅನ್ನು ಪಿಆರ್‌ಕೆ ಪ್ರೊಡೆಕ್ಷನ್ ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡಿದ್ದು, ಈ ದಿನದಂದು ನಾವು ನಮ್ಮ ಪ್ರೀತಿಯ ಅಪ್ಪುವಿನ ಹುಟ್ಟುಹಬ್ಬವನ್ನು ಅವರು ಪ್ರೀತಿಸುವ ಭೂಮಿ, ಜೀವಿಗಳು, ಸಾಹಸ ಮತ್ತು ಅದ್ಭುತ ಪ್ರಜ್ಞೆ ಮೂಲಕ ಸ್ವಾಗತ ಮಾಡಿಕೊಳ್ಳುತ್ತಿದ್ದೇವೆ ಎಂದು ಇನ್‌ಸ್ಟಾದಲ್ಲಿ ಬರೆದು ಅಪ್ಪು ಲುಕ್ ರಿವಿಲ್ ಮಾಡಿದ್ದಾರೆ.

    ಈ ಫೋಟೋದಲ್ಲಿ ನಗುಮುಖದ ಅಪ್ಪು ಪ್ರಕೃತಿಯನ್ನು ವೀಕ್ಷಿಸುತ್ತ ಜರಿ ನೀರಿನ ಮೇಲೆ ನಡೆದುಕೊಂಡು ಬರುತ್ತಿದ್ದಾರೆ. ಪ್ರಕೃತಿ ಸೂಬಗಿನ ಮಧ್ಯೆ ಅಪ್ಪು ಅಮರ ಎಂಬಂತೆ ಈ ಫೋಟೋ ಇದೆ. ಈ ಫೋಟೋ ನೋಡಿದ ಅಭಿಮಾನಿಗಳು ಭಾವನಾತ್ಮಕವಾಗಿ ಕಾಮೆಂಟ್ ಮಾಡಿದ್ದಾರೆ. ಅಪ್ಪು ಅವರಂತಹ ವ್ಯಕ್ತಿ ಮತ್ತೆ ಹುಟ್ಟಿಬರುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೂ ಕೆಲವರು ಡಾ.ಪುನೀತ್ ರಾಜ್‌ಕುಮಾರ್ ಎಂದು ಹೇಳಿ ಅಂತ ಕಾಮೆಂಟ್ ಮಾಡುವ ಮೂಲಕ ಅವರ ಅಭಿಮಾನವನ್ನು ತೋರಿಸಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ‘ಜೇಮ್ಸ್’ ಸಿನಿಮಾ: ಅಭಿಮಾನಿಗಳ ಫಸ್ಟ್ ರಿಯ್ಯಾಕ್ಷನ್