Tag: ಡಾ. ಯತೀಂದ್ರ ಸಿದ್ದರಾಮಯ್ಯ

  • ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಇಡೀ ವಿಶ್ವದಲ್ಲಿ ಜನರ ಖಾತೆಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು – ಯತೀಂದ್ರ

    ಮೈಸೂರು: ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ (Dr.Yathindra Siddaramaiah) ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ (MUDA) ವ್ಯಾಪ್ತಿಯ ಪ್ರದೇಶಗಳ ಅಭಿವೃದ್ಧಿಗೆ ಮಾತ್ರ ಮುಡಾ ಹಣ ಬಳಕೆಯಾಗಿದೆ. ಅದರಲ್ಲಿ ತಪ್ಪೇನಿದೆ? ಜನರ ಒಳತಿಗೆ ಬಳಸುವುದಕ್ಕಾಗಿಯೇ ಆ ಹಣವಿದೆ. ಬಳಕೆ ಮಾಡುವುದರಲ್ಲಿ ಯಾವ ತಪ್ಪುಗಳು ಆಗಿಲ್ಲ. ವಿಪಕ್ಷಗಳು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಅಷ್ಟೇ. ವಿಶ್ವದಲ್ಲೇ ಜನರ ಖಾತೆಗಳಿಗೆ ಹಣ ಹಾಕುತ್ತಿರುವ ಏಕೈಕ ಸರ್ಕಾರ ನಮ್ಮದು. ಇಂತಹ ಯೋಜನೆಗಳನ್ನ ಸಹಿಸಕೊಳ್ಳಲು ಆಗದೇ ವಿನಾಕರಣ ಆರೋಪಗಳನ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗೆ ಫುಲ್‌ ಡಿಮ್ಯಾಂಡ್‌ – 69 ಪ್ರಶಸ್ತಿಗೆ 2,000ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ

    ಸರ್ಕಾರದ ಮೇಲೆ ಮಾತನಾಡಲು ಯಾರಿಗೂ ಯಾವ ವಿಚಾರಗಳು ಸಿಗುತ್ತಿಲ್ಲ. ನಮ್ಮ ತಂದೆಯ ಮೇಲೆ ಮಾಡುತ್ತಿರುವ ಎಲ್ಲಾ ಆರೋಪಗಳು ಬೋಗಸ್. ಎಲ್ಲವುದಕ್ಕೂ ಸುಖಾಸುಮ್ಮನೆ ಆರೋಪಮಾಡುತ್ತಾ ಹೋದರೆ ಹೇಗೆ? ನಮ್ಮ ತಂದೆಯ ರಾಜೀನಾಮೆಯನ್ನ ಸುಖಾ ಸುಮ್ಮನೆ ಕೇಳುತ್ತಿದ್ದಾರೆ. ಅವರು ಯಾಕೆ ರಾಜೀನಾಮೆ ಕೊಡಬೇಕು? ಹೀಗೆ ಸಿಕ್ಕ ಸಿಕ್ಕ ಆರೋಪಗಳಿಗೆಲ್ಲಾ ರಾಜೀನಾಮೆ ಕೊಡುತ್ತಾ ಹೋದರೆ ಅದರಲ್ಲಿ ಅರ್ಥ ಇರುತ್ತಾ? ಎಂದು ಪ್ರಶ್ನೆ ಮಾಡಿದ್ದಾರೆ.

    ಇದೇ ವೇಳೆ ಮುನಿರತ್ನ ಪ್ರಕರಣದ (Munirathna Case) ಬಗ್ಗೆ ಮಾತನಾಡಿ, ನನಗೆ ಆ ಪ್ರಕರಣದ ಕುರಿತು ಅಷ್ಟಾಗಿ ಗೊತ್ತಿಲ್ಲ ಎಂದಿದ್ದಾರೆ.ಇದನ್ನೂ ಓದಿ: 70 ವರ್ಷದ ಹೆರಿಗೆ ಆಸ್ಪತ್ರೆಗೆ ಬೀಗ: 3 ವರ್ಷಗಳಿಂದ ದುರಸ್ತಿ ಹೆಸರಿನಲ್ಲಿ ಕಾಮಗಾರಿ ವಿಳಂಬ!

  • ಡಾ. ಯತೀಂದ್ರಗೆ ಎಂಎಲ್‍ಸಿ ಟಿಕೆಟ್ ಫಿಕ್ಸ್

    ಡಾ. ಯತೀಂದ್ರಗೆ ಎಂಎಲ್‍ಸಿ ಟಿಕೆಟ್ ಫಿಕ್ಸ್

    ಮೈಸೂರು: ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರಗೆ (Dr.Yathindra Siddaramaiah) ಎಂಎಲ್‍ಸಿ ಟಿಕೆಟ್ ಸಿಗೋದು ಫಿಕ್ಸ್ ಆಗಿದೆ. ಈ ವಿಚಾರವನ್ನು ಸ್ವತಃ ಅವರೇ ಒಪ್ಪಿಕೊಂಡಿದ್ದಾರೆ.

    ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಪರ ಪ್ರಚಾರಕ್ಕೆ ಯತೀಂದ್ರ ಅವರು ಟಿ ನರಸೀಪುರಕ್ಕೆ ಆಗಮಿಸಿದ್ದರು. ಈ ವೇಳೆ ಶಾಲೆಗೆ ಅನುದಾನ ಬಿಡುಗಡೆ ಮಾಡಿಕೊಡುವಂತೆ ಶಿಕ್ಷಕಿ ಮನವಿ ಮಾಡಿಕೊಂಡರು.

    ಈ ವೇಳೆ ನಾನು ಎಂಎಲ್ ಸಿ ಆಗಿ ಶಾಸಕನಾಗ್ತೀನಿ. ಶಾಸಕರ ಅನುದಾನದಲ್ಲಿ ಹಣ ಹಾಕುತ್ತೇನೆ. ನಮ್ಮ ತಂದೆಯವರ ಕ್ಷೇತ್ರಕ್ಕೆ ಶಾಲೆ ಬರೋ ಕಾರಣ ಅವರ ಬಳಿ ಮಾತನಾಡಿ ಅವರಿಂದಲೂ ಅನುದಾನ ಕೊಡಿಸ್ತೇನೆ ಎಂದು ಯತೀಂದ್ರ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಈ ಮೂಲಕ ಯತೀಂದ್ರ ತಾವು ಎಂಎಲ್ ಸಿ ಆಗೋದರ ಬಗ್ಗೆ ಸುಳಿವು ನೀಡಿದರು. ಇದನ್ನೂ ಓದಿ: ಶನಿವಾರ 57 ಸ್ಥಾನಗಳಿಗೆ ಕೊನೇ ಹಂತದ ಚುನಾವಣೆ – ಕಣದಲ್ಲಿರುವ ಘಟಾನುಘಟಿಗಳು ಯಾರು?

  • ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ- ಯದುವೀರ್ ಬಗ್ಗೆ ಯತೀಂದ್ರ ವ್ಯಂಗ್ಯ

    ಮೈಸೂರು: ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಈಗಾಗಲೇ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಅಂತೆಯೇ ಮೈಸೂರು ಪ್ರಚಾರ ಕಣದಲ್ಲಿ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಬಿಜೆಪಿ ಅಭ್ಯರ್ಥಿ ಯದುವೀರ್ (Yaduveer Krishnadatta Chamaraja Wadiyar) ವಿರುದ್ಧ ಟೀಕೆ ಮಾಡಿದ್ದಾರೆ.

    ಪ್ರಚಾರ ಭಾಷಣದಲ್ಲಿ ಯತೀಂದ್ರ (Dr. Yathindra Siddaramaiah) ಅವರು, ಬಿಜೆಪಿ ಅಭ್ಯರ್ಥಿ ರಾಜ ಮನೆತನದವರು. ದಂತದ ಗೋಪುರದಲ್ಲಿ ಇದ್ದಂತವರು. ಅವರಿಗೆ ಯಾವತ್ತೂ ಜನರ ಮಧ್ಯೆ ಇದ್ದು ಗೊತ್ತಿಲ್ಲ. ಅವರಿಗೆ ಜನರ ಸಮಸ್ಯೆಗಳು ಏನೂ ಅಂತ ಗೊತ್ತಿಲ್ಲ. ನೀವ್ಯಾರು ಅರಮನೆ ಮುಂದೆ ಹೋಗಿ ನಿಂತುಕೊಳ್ಳಲು ಆಗಲ್ಲ. ಕಾರ್ಯಕರ್ತರೇ ಹೋಗಿ ಭೇಟಿ ಮಾಡೊಕೆ ಆಗಲ್ಲ. ಇನ್ನು ಜನಸಾಮಾನ್ಯರು ಭೇಟಿ ಮಾಡಲು ಸಾಧ್ಯವಾ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

    ಅಂದು ಬಿಜೆಪಿ ಅಭ್ಯರ್ಥಿ ಯಾರು ಎಂದು ಗೊತ್ತಿಲ್ಲ ಅಂತಾ ಕಾಂಗ್ರೆಸ್ (Congress) ಸಚಿವ ಕೆ.ವೆಂಕಟೇಶ್ ಹೇಳಿದ್ದರು. ಇಂದು ಬಿಜೆಪಿ ಅಭ್ಯರ್ಥಿಗಿಂತಲೂ ನಮ್ಮ ಅಭ್ಯರ್ಥಿ ಎಂ.ಲಕ್ಷ್ಮಣ್ (M. Laxman) ಉತ್ತಮ ಎಂದು ಸಿಎಂ ಪುತ್ರ ಹೇಳಿದರು. ಇದನ್ನೂ ಓದಿ: ಪ್ರಚಾರಕ್ಕೆ ಮೋದಿ ಫೋಟೋ ಬಳಸಲು ಈಶ್ವರಪ್ಪರಿಂದ ಕೋರ್ಟ್‍ಗೆ ಕೆವಿಯಟ್ ಸಲ್ಲಿಕೆ

  • ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

    ಸಿದ್ದರಾಮನಹುಂಡಿಯಲ್ಲಿ ಕಾರು-ಬೈಕ್ ಡಿಕ್ಕಿಯಿಂದ ಜಗಳ: ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

    ಮೈಸೂರು: ಸಿದ್ದರಾಮನಹುಂಡಿಯಲ್ಲಿ (Siddaramana Hundi) ಕಾರು-ಬೈಕ್ ಡಿಕ್ಕಿಯಿಂದ ಜಗಳ ನಡೆದಿದೆ. ಬಿಜೆಪಿಯವರು (BJP) ಇದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿದ್ದಾರೆ ಎಂದು ವರುಣಾ ಶಾಸಕ ಡಾ.ಯತೀಂದ್ರ (Yathindra Siddaramaiah) ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

    ಸಿದ್ದರಾಮನಹುಂಡಿಯಲ್ಲಿ ಬಿಜೆಪಿ ಕಾರ್ಯಕರ್ತನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ಹಲ್ಲೆ ಆರೋಪ ವಿಚಾರವಾಗಿ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸಲು ನಿಸ್ಸೀಮರು. ಎಷ್ಟೇ ಪ್ರಚೋದನೆ ಮಾಡಿದರು ಅವರ ಪ್ರಚೋದನೆಗೆ ಕಾಂಗ್ರೆಸ್ (Congress) ಕಾರ್ಯಕರ್ತರು ಒಳಗಾಗಬಾರದು. ಬಿಜೆಪಿ ತನ್ನ ರಾಜಕೀಯ ಲಾಭಕ್ಕಾಗಿ ಈ ರೀತಿ ಕಾರ್ಯತಂತ್ರ ಮಾಡುತ್ತಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ರಣಾಂಗಣವಾದ ವರುಣಾ ಕಣ; ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ಬಿಜೆಪಿ ಹಸಿ ಸುಳ್ಳು ಹೇಳುತ್ತಾ ದ್ವೇಷ ಹುಟ್ಟುಹಾಕಿ ತನ್ನ ಬೇಳೆ ಬೇಯಿಸಿಕೊಳ್ಳುವ ತಂತ್ರ ಮಾಡುತ್ತಿದೆ. ಗಲಾಟೆ ನಡೆದ ವೇಳೆ ಸಿದ್ದರಾಮಯ್ಯ ಕುಟುಂಬದವರು ಯಾರೂ ಅಲ್ಲಿ ಇರಲಿಲ್ಲ. ಆದರೂ ದುರುದ್ದೇಶದಿಂದ ನಮ್ಮ ಕುಟುಂಬದ ಸದಸ್ಯರ ಮೇಲೆ ದೂರು ನೀಡಿದ್ದಾರೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮನಹುಂಡಿ ಏನು ಸಿದ್ದರಾಮಯ್ಯ ಸಂಸ್ಥಾನನಾ?: ಪ್ರತಾಪ್ ಸಿಂಹ ಕಿಡಿ

  • ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧರಾದ ಯತೀಂದ್ರ ಸಿದ್ದರಾಮಯ್ಯ

    ತಂದೆಗಾಗಿ ಕ್ಷೇತ್ರ ತ್ಯಾಗಕ್ಕೆ ಸಿದ್ಧರಾದ ಯತೀಂದ್ರ ಸಿದ್ದರಾಮಯ್ಯ

    ಮೈಸೂರು: ತಂದೆ ಸಿದ್ದರಾಮಯ್ಯ ಅವರಿಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟು ಕೊಡಲು ಸಿದ್ಧನಾಗಿದ್ದೇನೆ ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

    ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತಣಾಡಿದ ಅವರು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಾಗಿ ವರುಣಾ ಕ್ಷೇತ್ರವನ್ನು ಬಿಟ್ಟು ಕೊಡುತ್ತೇನೆ. ಜನ ಪಕ್ಷ ಅಪೇಕ್ಷಿಸಿದರೆ ಸಿದ್ದರಾಮಯ್ಯ ವರುಣಾದಲ್ಲಿಯೇ ಸ್ಪರ್ಧೆ ಮಾಡಲಿ. ನಾನು ಅವರ ಬೆಂಬಲಕ್ಕೆ ನಿಂತು ಅವರ ಗೆಲುವಿಗೆ ಶ್ರಮಿಸುತ್ತೇನೆ. ನಾನು ಬೇರೆ ಯಾವ ಕ್ಷೇತ್ರದಲ್ಲಿಯೂ ಸ್ಪರ್ಧೆ ಮಾಡುವುದಿಲ್ಲ. ಬದಲಾಗಿ ಸಿದ್ದರಾಮಯ್ಯ ಗೆಲ್ಲಿಸುವ ಕೆಲಸ ಮಾಡುತ್ತೇನೆ. ಅದು ನನ್ನ ಕರ್ತವ್ಯ. ಸಿದ್ದರಾಮಯ್ಯ ವರುಣಾಗೆ ಬಂದ ತಕ್ಷಣ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೋಗುತ್ತೇನೆ ಎಂಬುದು ಸುಳ್ಳು. ಆ ರೀತಿಯ ಯಾವ ಚಿಂತನೆಯನ್ನು ನಾನು ಮಾಡಿಲ್ಲ. ಕ್ಷೇತ್ರದ ಆಯ್ಕೆ ವಿಚಾರಕ್ಕೆ ಇನ್ನೂ ಬಹಳಷ್ಟು ಸಮಯ ಇದೆ. ಬಹಳಷ್ಟು ಕ್ಷೇತ್ರಗಳಿಂದ ಸಿದ್ದರಾಮಯ್ಯ ಅವರಿಗೆ ಆಹ್ವಾನ ಇದೆ. ಸಿದ್ದರಾಮಯ್ಯ ಮತ್ತು ಪಕ್ಷದ ಹೈಕಮಾಂಡ್ ಅಳೆದು ತೂಗಿ ಕ್ಷೇತ್ರ ಆಯ್ಕೆ ಮಾಡಿಕೊಳ್ಳುತ್ತಾರೆ. ಕ್ಷೇತ್ರದ ಆಯ್ಕೆ ಚರ್ಚೆ ತುರ್ತು ಈಗ ಏನು ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಶಾಲೆಯಲ್ಲಿ ಕಂಪ್ಯೂಟರ್‌ ಕಳವು- ತಾಕತ್ತಿದ್ರೆ ನಮ್ಮನ್ನ ಹಿಡೀರಿ ಎಂದು ನಂಬರ್ ಬರೆದಿಟ್ಟ ಕಳ್ಳರು

    ಇದೇ ವೇಳೆ ಸಿದ್ದರಾಮೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಶಕ್ತಿ ಪ್ರದರ್ಶನ ಅಲ್ಲ. ಇದು ಕೇವಲ ತಂದೆಯ ಹುಟ್ಟುಹಬ್ಬದ ಅಮೃತ ಮಹೋತ್ಸವ ಅಷ್ಟೇ. ಇದರಲ್ಲಿ ರಾಜಕೀಯ ಹುಡುಕಬೇಡಿ. ಕಾಕತಾಳಿಯವಾಗಿ ಚುನಾವಣೆಯ ವರ್ಷವೇ ಅವರ ಅಮೃತ ಮಹೋತ್ಸವ ಬಂದಿದೆ. ಹೀಗಾಗಿ ಈ ವಿಚಾರ ಚರ್ಚೆಯಾಗುತ್ತಿದೆ. ಎಲ್ಲಾ ಪಕ್ಷದವರನ್ನೂ ಸೇರಿಸಿಕೊಂಡು ಅಮೃತ ಮಹೋತ್ಸವ ಆಚರಿಸಿದರೆ ರಾಜಕೀಯವಾಗಿ ಬೇರೆ ರೀತಿಯ ಚರ್ಚೆಗಳು ಆಗುತ್ತದೆ. ಅಲ್ಲದೇ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಈ ಸಮಾರಂಭ ಆಯೋಜಿಸುತ್ತಿದ್ದೇವೆ. ಸಿಎಂ ಸ್ಥಾನದ ಆಕಾಂಕ್ಷಿ ಎಂದು ಬಿಂಬಿಸಿಕೊಳ್ಳುವ ಪ್ರಶ್ನೆಯೇ ಇದರಲ್ಲಿಲ್ಲ. ಪಕ್ಷಕ್ಕೆ ಮೊದಲು ಬಹುಮತ ಬರಬೇಕು. ನಂತರ ಶಾಸಕರು, ಶಾಸಕಾಂಗದ ನಾಯಕನನ್ನು ಆಯ್ಕೆ ಮಾಡಬೇಕು. ಹೈಕಮಾಂಡ್ ತನ್ನ ನಿಲುವು ತಿಳಿಸಿದವರು ಸಿಎಂ ಆಗುತ್ತಾರೆ. ಈಗಲೇ ಅದನ್ನು ಬಿಂಬಿಸಿಕೊಳ್ಳುವ ಅಗತ್ಯ ಯಾರಿಗೂ ಇಲ್ಲ ಎಂದಿದ್ದಾರೆ. ಇದನ್ನೂ ಓದಿ : ಗಣಿತ ನೋಟ್ಸ್ ತರದಿದ್ದಕ್ಕೆ ಶಿಕ್ಷಕನಿಂದ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ

    ಮೈಸೂರಿನಲ್ಲಿ ಸಂಸದ ಪ್ರತಾಪಸಿಂಹ ವರ್ಸಸ್ ಕಾಂಗ್ರೆಸ್ ವಿಚಾರವಾಗಿ ಮಾತನಾಡಿದ ಅವರು, ಪ್ರತಾಪ್‍ಸಿಂಹ ಮಾಡದ ಕೆಲಸ ಮಾಡಿದೆ ಅಂತಾ ಹೇಳುತ್ತಿದ್ದಾರೆ. ಮೈಸೂರಿಗೆ ಸಿದ್ದರಾಮಯ್ಯ ಏನು ಮಾಡಿದ್ದಾರೆ ಅಂತಾ ಪ್ರಶ್ನಿಸಿದ್ದರು. ಅದೇ ಕಾರಣಕ್ಕೇ ಈ ರೀತಿಯ ವಾತಾವರಣ ನಿರ್ಮಾಣವಾಗಿದೆ. ಪ್ರತಾಪಸಿಂಹ ಏನು ಮಹಾರಾಜರಾ? ದೊಡ್ಡ ನಾಯಕರೇ ಬೇಕು ಚರ್ಚೆಗೆ ಏನುವುದಕ್ಕೆ? ಸಿದ್ದರಾಮಯ್ಯ ಅವರೇ ಬರಬೇಕಾ? ಕೆಲಸ ಮಾಡಿದ್ದರೆ ಯಾರೇ ಕರೆದರು ಚರ್ಚೆಗೆ ಬರಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]