Tag: ಡಾ.ಶರಣಪ್ರಕಾಶ್ ಪಾಟೀಲ್

  • ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಂಕಪಟ್ಟಿ ಗೋಲ್‌ಮಾಲ್: ಛಲವಾದಿ ನಾರಾಯಣಸ್ವಾಮಿ ಆರೋಪ

    ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಅಂಕಪಟ್ಟಿ ಗೋಲ್‌ಮಾಲ್: ಛಲವಾದಿ ನಾರಾಯಣಸ್ವಾಮಿ ಆರೋಪ

    – ಮುದ್ರಣದ ಕೆಲಸವನ್ನೇ ಮಾಡದ ಬ್ಲ್ಯಾಕ್‌ಲಿಸ್ಟೆಡ್ ಕಂಪನಿಗೆ ಟೆಂಡರ್

    ಬೆಂಗಳೂರು: ರಾಜ್ಯ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಕಾನೂನುಬಾಹಿರವಾಗಿ ಟೆಂಡರ್‌ಗಳನ್ನು ಮಾಡುತ್ತಿದೆ. ತನಗೆ ಬೇಕಾದವರಿಗೇ ಅವಕಾಶ ನೀಡುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ(Chalavadi Narayanaswamy) ಆರೋಪಿಸಿದ್ದಾರೆ.

    ವಿಧಾನಸೌಧದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಪ್ರೊಕ್ಯರ‍್ಮೆಂಟ್ ಪೋರ್ಟಲ್‌ನಲ್ಲಿ ಟೆಂಡರ್‌ಗಳನ್ನು ಹಾಕುತ್ತಾರೆ. ಮಾರ್ಕ್ಸ್ ಕಾರ್ಡ್ ಪ್ರಿಂಟ್ ಮಾಡುವ ಕಾರ್ಯದಲ್ಲಿ ನಮ್ಮ ಸರ್ಕಾರ ಇರುವಾಗಲೂ ಟೆಂಡರ್ ನೀಡಿದ್ದು, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 9.45 ರೂ.ಗೆ ಟೆಂಡರ್ ಕೊಡಲಾಗಿತ್ತು. ಈ ಸರ್ಕಾರ ಬಂದ ಬಳಿಕ ಪ್ಯಾರಾ ಮೆಡಿಕಲ್ ಬೋರ್ಡ್ನ (Para Medical Board) ಟೆಂಡರ್ ಕರೆದಿದ್ದು, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 100 ರೂ. ಕೋರಲಾಗಿತ್ತು. ಮಾತುಕತೆ ಬಳಿಕ 91 ರೂ.ಗೆ ಇಳಿಸಲಾಗಿದೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: ಜಡ್ಜ್‌ ನಿವಾಸದಲ್ಲಿ ಕಂತೆ ಕಂತೆ ನಗದು ಪತ್ತೆ ಕೇಸ್ – ಸಿಜೆಐ ಕೈ ಸೇರಿದ ತನಿಖಾ ವರದಿ

    ಕೆಲವೆಡೆ ವಿಷಯ ಹೊರಬಂದುದರಿಂದ ಮತ್ತೆ ಮಾತುಕತೆ ಮಾಡಿ, ಒಂದು ಮಾರ್ಕ್ ಕಾರ್ಡ್ ಮುದ್ರಿಸಲು 44 ರೂ., ಡಿಪ್ಲೊಮಾ ಸರ್ಟಿಫಿಕೇಟ್‌ಗೆ 47 ರೂ. ಎಂದು ಬದಲಿಸಿದ್ದರು. ಇಂಟರ್ನ್ಶಿಪ್ ಸರ್ಟಿಫಿಕೇಟ್‌ಗೆ 44 ರೂ. ನಿಗದಿ ಮಾಡಿ ವರ್ಕ್ ಆರ್ಡರ್ ಕೊಟ್ಟಿದ್ದಾರೆ. ಕಳೆದ ನವೆಂಬರ್ 29ರಂದು ಈ ವರ್ಕ್ ಆರ್ಡರ್ ಕೊಡಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ವಿಕ್ಟೋರಿಯಾ ಆಸ್ಪತ್ರೆಯಿಂದ ಎಸ್ಕೇಪ್ ಆಗಿದ್ದ ವಿಚಾರಣಾಧೀನ ಕೈದಿ ಪೊಲೀಸ್ ವಶಕ್ಕೆ

    ನಗರದ ಸಂಜಯನಗರದ ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ಗೆ ಈ ವರ್ಕ್ ಆರ್ಡರ್ ಕೊಡಲಾಗಿದೆ. ಇದು ಗೊತ್ತಾಗಿ ಜನವರಿ 8ರಂದು ನಾನು ಸರ್ಕಾರದ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಕೆಟಿಪಿಪಿ ಕಾಯ್ದೆ ಉಲ್ಲಂಘನೆ ಆಗಿದೆ ಎಂದು ಅವರ ಗಮನ ಸೆಳೆದಿದ್ದೆ. ಇದುವರೆಗೂ ಉತ್ತರ ಕೊಟ್ಟಿಲ್ಲ. ಇದರ ಹಣಕಾಸಿನ ಬಿಡ್ 2024ರ ಏಪ್ರಿಲ್ 12ರಂದು ಅನುಮೋದನೆ ಪಡೆದಿದೆ. ಮೊದಲೇ ವರ್ಕ್ ಆರ್ಡರ್ ಕೊಡಲಾಗಿದೆ ಎಂದು ಆಕ್ಷೇಪಿಸಿ ಪತ್ರಗಳು ಹಾಗೂ ದಾಖಲೆಗಳನ್ನು ಪ್ರದರ್ಶಿಸಿದರು. ಇದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ರ ಖಾತೆಗೆ ಸೇರಿದ್ದು ಎಂದರು. ಇದನ್ನೂ ಓದಿ: ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು – ಆಸ್ಪತ್ರೆಗೆ ದಾಖಲು

    ಈ ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಎಂಬುದು ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ. ಟೆಂಡರ್ ಅನ್ನು ಊರ್ದವ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ವೆಂಕಟರೆಡ್ಡಿ ಡಿ. ಪಾಟೀಲ್‌ರಿಗೆ ಕೊಟ್ಟಿದ್ದು, ಅವರು ಸಚಿವ ಡಾ.ಶರಣಪ್ರಕಾಶ್ ಪಾಟೀಲ್‌ರ (Dr. ShrarnPraksh Patil) ಹತ್ತಿರದ ಸಂಬಂಧಿ ಎಂದು ಆರೋಪಿಸಿದರು.

    ಇದಕ್ಕೂ ಪ್ರಿಂಟಿಂಗ್‌ಗೂ ಏನೂ ಸಂಬಂಧ ಇಲ್ಲ. ಅವರು ಯಾವತ್ತೂ ಮುದ್ರಣದ ಕೆಲಸ ಮಾಡಿಲ್ಲ. ಸಚಿವರಿಗೆ ಬೇಕಾದವರಿಗೆ ಕೊಡಲು ಕ್ರಮ ಕೈಗೊಂಡಿದ್ದಾರೆ. ಇದು ಬ್ಲ್ಯಾಕ್ ಲಿಸ್ಟೆಡ್ ಕಂಪನಿ. ಇದರ ಮೇಲೆ ಸುಮಾರು 20ರಿಂದ 25 ಕೇಸ್‌ಗಳಿವೆ. ಇಂಥಾ ಕಂಪೆನಿಗೆ ಟೆಂಡರ್ ಕೊಡಲಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಯುದ್ಧ ಕಾರ್ಮೋಡ; ಭಾರತ ಸಮರಭ್ಯಾಸ – ಪಾಕ್‌ನಿಂದ ಫತಾಹ್ ಕ್ಷಿಪಣಿ ಪರೀಕ್ಷೆ

    ಬ್ಲ್ಯಾಕ್ ಲಿಸ್ಟೆಡ್ ಕಂಪೆನಿಗೆ ಟೆಂಡರ್ ಕೊಟ್ಟಿದ್ದಾರೆ. ಹಣಕಾಸಿನ ಬಿಡ್ ಇಲ್ಲದೆ ಟೆಂಡರ್ ನೀಡಿದ್ದಾರೆ. ಈ ಸಂಬಂಧ ನಾನು ಎರಡು-ಮೂರು ಪತ್ರ ಬರೆದರೂ ಮುಖ್ಯ ಕಾರ್ಯದರ್ಶಿ, ಇಲಾಖೆಯಿಂದ ಒಂದೇ ಒಂದು ಉತ್ತರ ಬಂದಿಲ್ಲ. ನಾವು 9 ರೂ. 45 ಪೈಸೆಗೆ ಕೊಟ್ಟಾಗ 2.45 ಲಕ್ಷ ರೂ. ಎಂದು ತಿಳಿಸಿದ್ದೆವು. ಈ ಬಿಡ್‌ನಲ್ಲಿ ಎಷ್ಟು ಸಂಖ್ಯೆಯ ಸರ್ಟಿಫಿಕೇಟ್ ಮುದ್ರಣ ಎಂದು ತಿಳಿಸಿಲ್ಲ. ಅಂದರೆ ಅವರು ಎಷ್ಟು ಬೇಕಿದ್ದರೂ ಸಂಖ್ಯೆ ಹೇಳಿಕೊಳ್ಳಬಹುದು ಎಂದು ಟೀಕಿಸಿದರು.

  • ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ – ಡಾ.ಶರಣಪ್ರಕಾಶ್ ಪಾಟೀಲ್

    ಫಿಸಿಯೋಥೆರಪಿ ಕೋರ್ಸ್‌ಗಳಿಗೆ ಈಗ ನೀಟ್ ಕಡ್ಡಾಯ – ಡಾ.ಶರಣಪ್ರಕಾಶ್ ಪಾಟೀಲ್

    -ಬೆಂಗ್ಳೂರಿನಲ್ಲಿ ಫಿಸಿಯೋಕಾನ್ -25 ಸಮ್ಮೇಳನ, ಸಾವಿರಾರು ಮಂದಿ ಭಾಗಿ

    ಬೆಂಗಳೂರು: ಫಿಸಿಯೋಥೆರಪಿ ಕೋರ್ಸ್‌ಗಳಿಗೆ (Physiotherapy course) ಪ್ರವೇಶ ಪಡೆಯುವುದು ಈಗ ನೀಟ್ ವ್ಯಾಪ್ತಿಗೆ ಬರಲಿದೆ. ಇದು ಪ್ರಮಾಣೀಕೃತ ವೈದ್ಯಕೀಯ ಶಿಕ್ಷಣದತ್ತ ರಾಷ್ಟ್ರೀಯ ನಡೆಗೆ ಪೂರಕವಾಗಿರುತ್ತದೆ. ಸಾಮರ್ಥ್ಯ ಆಧಾರಿತ ಕಲಿಕೆ ಮತ್ತು ಹೆಚ್ಚುವರಿ ಕ್ಲಿನಿಕಲ್ ಮಾನ್ಯತೆಗಾಗಿ ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ತಿಳಿಸಿದರು.

    ಬೆಂಗಳೂರು (Bengaluru) ಅರಮನೆ ಮೈದಾನದಲ್ಲಿ (Palace Ground) ನಡೆದ ಫಿಸಿಯೋಥೆರಪಿಯ ಅಂತಾರಾಷ್ಟ್ರೀಯ ಸಮ್ಮೇಳನವಾದ ಕರ್ನಾಟಕ ಫಿಸಿಯೋಕಾನ್-25 ಉದ್ಘಾಟನಾ ಸಮಾರಂಭದಲ್ಲಿ ಭಾಷಣ ಮಾಡಿದ ಅವರು, ಫಿಸಿಯೋಥೆರಪಿ ಕೋರ್ಸ್‌ಗಳ (Physiotherapy course) ಪ್ರವೇಶವನ್ನು ನೀಟ್ ವ್ಯಾಪ್ತಿಗೆ ಸೇರಿಸಲು ರಾಜ್ಯ ಸರ್ಕಾರದ ಬೆಂಬಲವಿದೆ. ಶೈಕ್ಷಣಿಕ ಗುಣಮಟ್ಟ ಮತ್ತು ವೃತ್ತಿಪರ ಮಾನದಂಡಗಳನ್ನು ಹೆಚ್ಚಿಸುವ ನೀಟ್ ಅಡಿಯಲ್ಲಿ ಭೌತಚಿಕಿತ್ಸೆಯ ಕೋರ್ಸ್ಗಳ ಏಕೀಕರಣವನ್ನು ನಾವು ಸ್ವಾಗತಿಸುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಕಾವೇರಿ ಆರತಿ ಅಧ್ಯಯನ ಸಮಿತಿ ಶಿಫಾರಸು ಜಾರಿಗೆ ಸಮಿತಿ ರಚನೆ

    ಹೆರಿಗೆಯಿಂದ ವೃದ್ಧರ ಆರೈಕೆಯವರೆಗೆ, ಆರೋಗ್ಯ ರಕ್ಷಣೆಯಲ್ಲಿ ಭೌತಚಿಕಿತ್ಸಕರು ಪ್ರಮುಖ ಪಾತ್ರ ವಹಿಸುತ್ತಾರೆ. ಭೌತಚಿಕಿತ್ಸಕರು ನರ ಮತ್ತು ಮೂಳೆಚಿಕಿತ್ಸೆ ಪುನರ್ ಆರೈಕೆ, ಹೃದಯ ಶ್ವಾಸಕೋಶ ಆರೈಕೆ, ಮಕ್ಕಳ ಚಿಕಿತ್ಸೆ, ಅಂಗವೈಕಲ್ಯ ಚಿಕಿತ್ಸೆ, ಫಿಟ್ನೆಸ್ ಮತ್ತು ಸಮುದಾಯ ಆಧಾರಿತ ಆರೈಕೆಗೆ ಗಣನೀಯ ಕೊಡುಗೆ ನೀಡುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ತರಬೇತಿ ಪಡೆದ ವೃತ್ತಿಪರರಿಗೆ ದೇಶೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆ ಇದೆ. ಇದನ್ನು ಪೂರೈಸಲು ಹೆಚ್ಚಿನ ಸರ್ಕಾರಿ ಕಾಲೇಜುಗಳಲ್ಲಿ ಭೌತಚಿಕಿತ್ಸೆಯ ಕೋರ್ಸ್‌ಗಳನ್ನು ಪರಿಚಯಿಸುವ ಚಿಂತನೆ ಇದೆ ಎಂದರು.

    ಇದೇ ವೇಳೆ ರಾಷ್ಟ್ರೀಯ ಅಲೈಡ್ & ಹೆಲ್ತ್ ಪ್ರೊಫೆಷನಲ್ಸ್ ಆಯೋಗದ ಅಧ್ಯಕ್ಷ ಡಾ. ಯಜ್ಞ ಶುಕ್ಲಾ ಮಾತನಾಡಿ, ಭೌತಚಿಕಿತ್ಸೆಯ ಶಿಕ್ಷಣದಲ್ಲಿ ಒಂದು ರಾಷ್ಟ್ರ, ಒಂದು ಪಠ್ಯಕ್ರಮ ಉಪಕ್ರಮವನ್ನು ಪರಿಚಯಿಸಲು ಆಯೋಗ ಚಿಂತನೆ ನಡೆಸಿದೆ. ಪಠ್ಯಕ್ರಮ ಸುಧಾರಣೆಯ ಮೂಲಕ ವಿದ್ಯಾರ್ಥಿಗಳು ಮತ್ತು ವೈದ್ಯರಿಗೆ ವಿಶೇಷ ಪ್ರಯೋಜನಗಳೊಂದಿಗೆ ವೃತ್ತಿಯನ್ನು ಉನ್ನತೀಕರಿಸುವ ಮಾನದಂಡವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

    ಸಮ್ಮೇಳನದಲ್ಲಿ ಇಸ್ರೇಲ್, ಆಸ್ಟ್ರೇಲಿಯಾ ಮತ್ತು ನೇಪಾಳದ ಭಾಷಣಕಾರರು, ಜಾಗತಿಕ ತಜ್ಞರು ಹಾಗೂ ಹತ್ತು ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು, 50 ರಾಷ್ಟ್ರೀಯ ತಜ್ಞರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ 800ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಾಯಿತು. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಫರೀದ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ. ಭಗವಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಾಸೀರ್ ಅಹ್ಮದ್ ಉಪಸ್ಥಿತರಿದ್ದರು.ಇದನ್ನೂ ಓದಿ: ಪಹಲ್ಗಾಮ್‌ಗೆ ರಾಹುಲ್ ಗಾಂಧಿ ಭೇಟಿ – ಉಗ್ರರ ದಾಳಿ ವೇಳೆ ಗಾಯಗೊಂಡವರ ಆರೋಗ್ಯ ವಿಚಾರಣೆ

  • ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

    ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಣ – ಸಿಎಂಗೆ ಅಭಿನಂದನೆ ಸಲ್ಲಿಸಿದ ಡಾ.ಶರಣಪ್ರಕಾಶ್ ಪಾಟೀಲ್

    -ವೈದ್ಯಕೀಯ ಕಾಲೇಜ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ

    ಬೆಂಗಳೂರು: ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು (Directorate of Medical Education) ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಘೋಷಣೆ ಮಾಡಿರುವುದಕ್ಕೆ ವೈದ್ಯಕೀಯ ಶಿಕ್ಷಣ ಜೀವನೋಪಾಯ ಹಾಗೂ ಕೌಶಲ್ಯಾಭಿವೃಧಿ ಮತ್ತು ರಾಯಚೂರು ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ (Sharan Prakash Patil) ಅಭಿನಂದನೆ ಸಲ್ಲಿಸಿದ್ದಾರೆ.

    ವೈದ್ಯಕೀಯ ಶಿಕ್ಷಣ ಕ್ಷೇತ್ರವು ಸರ್ಕಾರಿ ವಲಯವೆಂದು ವ್ಯಾಪಕ ಬೆಳವಣಿಗೆ ಹೊಂದಿದ್ದು, ಇಲಾಖೆ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ದಕ್ಷತೆ ತರುವ ಕಾರಣಕ್ಕಾಗಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲೇ ಪ್ರಥಮ- ಮೀನುಗಾರರ ರಕ್ಷಣೆಗೆ ಸಮುದ್ರ ಅಂಬುಲೆನ್ಸ್ ಖರೀದಿ: ಸಿಎಂ ಘೋಷಣೆ

    ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ವೈದ್ಯಕೀಯ ಕಾಲೇಜುಗಳ ನಿರ್ಮಾಣ ಮತ್ತು ಉಪಕರಣಗಳ ಖರೀದಿಗಾಗಿ 400 ಕೋಟಿ ರೂ. ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕಾಗಿ 350 ಕೋಟಿ ರೂ, ಮೈಸೂರಿನಲ್ಲಿರುವ 40 ಹಾಸಿಗೆ ಸಾಮರ್ಥ್ಯದ ನೆಪ್ರೊ ಯೂರಾಲಜಿ ಆಸ್ಪತ್ರೆ, 100 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲು ಮುಂದಾಗಿರುವುದು ಉತ್ತಮ ನಿರ್ಧಾರ ಎಂದು ಪಾಟೀಲ್ ಹೇಳಿದ್ದಾರೆ.

    ಕಲಬುರಗಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಕ್ಕಳ ಆರೋಗ್ಯ ಘಟಕವನ್ನು ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆ, ಬೆಂಗಳೂರು ಇವರ ತಾಂತ್ರಿಕ ನೆರವಿನೊಂದಿಗೆ ಸ್ಥಾಪನೆ. ಗದಗ, ಕೊಪ್ಪಳ ಹಾಗೂ ಚಾಮರಾಜನಗರದಲ್ಲಿ 450 ಹಾಸಿಗೆ ಸಾಮರ್ಥ್ಯದ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳ ಖರೀದಿಗಾಗಿ 150 ಕೋಟಿ ರೂ. ಅನುದಾನ ಒದಗಿಸಿದ್ದಾರೆ ಎಂದು ಹೇಳಿದ್ದಾರೆ.

    ಬೆಂಗಳೂರಿನ ನೆಪ್ರೊ ಯೂರಾಲಜಿ ಸಂಸ್ಥೆಯ ಶಸ್ತ್ರ ಚಿಕಿತ್ಸೆ ವಿಭಾಗದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ರೋಬೊಟಿಕ್ ಯಂತ್ರದ ಮೂಲಕ ಉತ್ತಮ ಚಿಕಿತ್ಸೆ ನೀಡಲು ಕ್ರಮ. ವೈದ್ಯಕೀಯ ಕಾಲೇಜಿನ ಆಸ್ಪತ್ರೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ 114 ಮಾಡೂಲರ್ ಓಟಿಗಳನ್ನು 177 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಮುಂದಾಗಿರುವುದು ಆಶಾದಾಯಕ ಬೆಳವಣಿಗೆ ಎಂದಿದ್ದಾರೆ.

    ಗದಗ ವೈದ್ಯಕೀಯ ಸಂಸ್ಥೆಯಲ್ಲಿ ಕ್ಯಾಥ್ಲಬ್ ಸೌಲಭ್ಯದೊಂದಿಗೆ ಸೂಪರ್ ಸ್ಪೆಷಾಲಿಟಿ ಕಾರ್ಡಿಯಾಕ್ ಯೂನಿಟ್ ಪ್ರಾರಂಭ, ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸಂಸ್ಥೆಗಳಲ್ಲಿ 64 ಅನೇಸ್ತೇಷಿಯಾ ವರ್ಕ್ ಸ್ಟೇಷನ್‍ಗಳನ್ನು 34 ಕೋಟಿ ರೂ. ವೆಚ್ಚದಲ್ಲಿ ಖರೀದಿಸಿ ಅಳವಡಿಕೆ, ಈಗಾಗಲೇ ನಾಲ್ಕು ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಹ್ಯೂಮನ್ ಮಿಲ್ಕ್ ಬ್ಯಾಂಕ್‍ಗಳನ್ನು ಇನ್ನು ಮುಂದೆ ಮೈಸೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಸ್ಥಾಪನೆ ಮಾಡಲು ಹೊರಟಿರುವುದು ಉತ್ತಮ ಬೆಳವಣಿಗೆ ಎಂದು ಪಾಟೀಲ್ ಹೇಳಿದ್ದಾರೆ.

    ಕೊಡಗು ವೈದ್ಯಕೀಯ ಸಂಸ್ಥೆಯಲ್ಲಿ ಅಪಾಯಕಾರಿ ಸಾಂಕ್ರಾಮಿಕ ರೋಗ, ಸೋಂಕುಗಳನ್ನು ಪತ್ತೆ ಹಚ್ಚಲು ವೈರಲ್ ರಿಸರ್ಚ್ ಮತ್ತು ಡಯಾಗ್ನಸ್ಟಿಕ್ ಲ್ಯಾಬರೋಟರಿ ನಿರ್ಮಾಣ, ಚಿತ್ರದುರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಅಗತ್ಯವಿರುವ ಹೊಸ ವೈದ್ಯಕೀಯ ಕಟ್ಟಡ, ವಿದ್ಯಾರ್ಥಿ ವಸತಿ ನಿಲಯ, ಸಿಬ್ಬಂದಿ, ವಸತಿ ಗೃಹ ನಿರ್ಮಾಣ ಕಾರ್ಯ ಪೂರ್ಣಗೊಳಿಸುತ್ತೇವೆ ಎಂದು ಹೇಳಿದ್ದಾರೆ.

    ಇನ್ನು ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸ್ಥಾಪಿಸಿದ ಮೈಸೂರು ವೈದ್ಯಕೀಯ ಮಹಾವಿದ್ಯಾಲಯದ ಶತಮಾನೋತ್ಸವದ ನೆನಪಿಗಾಗಿ ಕೆ.ಆರ್ ಆಸ್ಪತ್ರೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಹೊರರೋಗಿ ವಿಭಾಗದ ಕಟ್ಟಡ ನಿರ್ಮಾಣ ಮಾಡಲು ಮುಂದಾಗಿರುವುದು ಸ್ವಾಗತಾರ್ಹ ಎಂದು ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು BIECಯಿಂದ ತುಮಕೂರಿಗೆ, ಏರ್‌ಪೋರ್ಟಿಂದ  ದೇವನಹಳ್ಳಿಗೆ ಮೆಟ್ರೋ ರೈಲು!

  • ಕಲಬುರಗಿಯಲ್ಲಿ ಹೆಚ್ಚಾಗುತ್ತಿದೆ ಗರ್ಭಕೋಶ ತೆಗೆಯುವ ದಂಧೆ

    ಕಲಬುರಗಿಯಲ್ಲಿ ಹೆಚ್ಚಾಗುತ್ತಿದೆ ಗರ್ಭಕೋಶ ತೆಗೆಯುವ ದಂಧೆ

    – ಮಹಿಳಾ ಆಯೋಗವೇ ವರದಿ ಕೊಟ್ರೂ ಕಣ್ಮುಚ್ಚಿ ಕುಳಿತ ಸರ್ಕಾರ

    ಕಲಬುರಗಿ: ವೈದ್ಯಕೀಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತವರು ಜಿಲ್ಲೆಯಲ್ಲಿ ಗರ್ಭಕೋಶ ತೆಗೆಯುವ ದಂಧೆ ವ್ಯಾಪಕವಾಗಿ ನಡೆಯುತ್ತಿದೆ.ಕೆಲ ಖಾಸಗಿ ಆಸ್ಪತ್ರೆಗಳು ಈ ದಂಧೆಯಲ್ಲಿ ಶಾಮೀಲಾಗಿವೆ. ಖುದ್ದು ರಾಜ್ಯ ಮಹಿಳಾ ಆಯೋಗವೇ ಸರ್ಕಾರಕ್ಕೆ ವರದಿ ಸಲ್ಲಿಸಿ ತಿಂಗಳುಗಳು ಕಳೆದಿದೆ. ಆದ್ರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.

    ಸಾಮಾನ್ಯವಾಗಿ ಮಹಿಳೆಯರಿಗೆ ಆರೋಗ್ಯ ಸಮಸ್ಯೆ ಆದ್ರೆ ಅವರ ಜೀವ ಕಾಪಾಡುವ ದೃಷ್ಟಿಯಿಂದ ಗರ್ಭಕೋಶ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತದೆ. ಆದ್ರೆ ಕಲಬುರಗಿ ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳು ಇದನ್ನೇ ಬಂಡವಾಳ ಮಾಡಿಕೊಂಡಿದ್ದು, ಹೊಟ್ಟೆ ನೋವು ಹಾಗೂ ಬಿಳಿ ಮುಟ್ಟಿನ ಸಮಸ್ಯೆ ಎದುರಿಸುವ ಮಹಿಳೆಯರ ಗರ್ಭಕೋಶ ತೆಗೆಯುವ ದಂಧೆ ಮಾಡುತ್ತಿದ್ದಾರೆ.

    ರಾಜ್ಯ ಮಹಿಳಾ ಆಯೋಗ 2015ರಲ್ಲಿ ಕೆ.ನೀಲಾ ನೇತೃತ್ವದಲ್ಲಿ 6 ಜನರ ತಂಡ ರಚಿಸಿ ಈ ಬಗ್ಗೆ ವರದಿ ನೀಡುವಂತೆ ಸೂಚಿಸಿತ್ತು. ಜಿಲ್ಲೆಯಾದ್ಯಂತ ಸಂಚರಿಸಿದ ತಂಡಕ್ಕೆ ಸಿಕ್ಕ ಮಾಹಿತಿ ನಿಜಕ್ಕೂ ಬೆಚ್ಚಿ ಬೀಳಿಸುತ್ತಿದ್ದು, 1 ಸಾವಿರಕ್ಕೂ ಅಧಿಕ ಮಹಿಳೆಯರಿಗೆ ಬೇಕಾಬಿಟ್ಟಿ ಗರ್ಭಕೋಶ ತೆಗೆದಿರುವ ಪ್ರಕರಣಗಳು ಬೆಳಕಿಗೆ ಬಂದಿವೆ.

    ಗರ್ಭಕೋಶ ತೆಗೆಯುವ ಅನಿವಾರ್ಯತೆ ಎದುರಾದ್ರೆ ಹಲವು ವೈದ್ಯಕೀಯ ಪರೀಕ್ಷೆ ನಡೆಸಬೇಕಾಗುತ್ತದೆ. ಆದರೆ ಕಲಬುರಗಿ ಜಿಲ್ಲೆಯ ಕೆಲ ಖಾಸಗಿ ಆಸ್ಪತ್ರೆಗಳು ಹಣಕ್ಕಾಗಿ ಗರ್ಭಕೋಶ ತೆಗೆಯುವ ದಂಧೆ ನಡೆಸುತ್ತಿವೆ. ಇದನ್ನರಿತ ಜಿಲ್ಲಾಡಳಿತ 4 ಆಸ್ಪತ್ರೆಗಳ ಲೈಸೆನ್ಸ್ ಕೂಡ ರದ್ದು ಮಾಡಿತ್ತು. ಇಷ್ಟಾದ್ರೂ ವೈದ್ಯರು ಬೇರೆ ಹೆಸರಿನಲ್ಲಿ ಲೈಸೆನ್ಸ್ ಪಡೆದು ಮತ್ತೆ ದಂಧೆ ಮಾಡ್ತಿದ್ದಾರೆ.

    ಸಮಸ್ಯೆ ನಿವಾರಣೆಗೆ ಹೋಗುವ ಮಹಿಳೆಯರ ಗರ್ಭಕೋಶಕ್ಕೆ ಕತ್ತರಿ ಹಾಕಿ ದುಡ್ಡು ಮಾಡುವ ದಂಧೆಯನ್ನು ಆರೋಗ್ಯ ಇಲಾಖೆ ಮಟ್ಟ ಹಾಕಬೇಕಿದೆ. ಕಲಬುರಗಿ ಜಿಲ್ಲೆಯಲ್ಲಿ ಮಾತ್ರವಲ್ಲದೆ ಇನ್ನೂ ಬೇರೆ ಬೇರೆ ಜಿಲ್ಲೆಯಲ್ಲೂ ದಂಧೆ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ.