Tag: ಡಾ. ಶಿವಕುಮಾರ ಸ್ವಾಮೀಜಿ

  • ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ನಾನು ಅಯೋಧ್ಯೆಗೆ ಹೋಗಲ್ಲ: ಸಿದ್ಧಲಿಂಗ ಶ್ರೀ

    ಶಿವಕುಮಾರ ಶ್ರೀಗಳ ಪುಣ್ಯಸ್ಮರಣೆ ನಿಮಿತ್ತ ನಾನು ಅಯೋಧ್ಯೆಗೆ ಹೋಗಲ್ಲ: ಸಿದ್ಧಲಿಂಗ ಶ್ರೀ

    ತುಮಕೂರು: ಅಯ್ಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ನನಗೂ ಕೂಡ ಆಹ್ವಾನ ಬಂದಿದೆ. ಆದರೆ ನಾನು ಹೋಗಲು ಆಗುವುದಿಲ್ಲ.‌ ಕಾರಣ ಅದೇ ದಿನದಂದು ಲಿಂಗೈಕ್ಯ, ಪರಮ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ (Dr. Shivakumara Swamiji) 5ನೇ ವರ್ಷದ ಪುಣ್ಯ ಸ್ಮರಣೆ ಇರುವ ಕಾರಣ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಾನು ಹೋಗಲು ಆಗುವುದಿಲ್ಲ ಎಂದು ಸಿದ್ದಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ (Siddalinga Swamiji) ಅವರು ಸ್ಪಷ್ಟಪಡಿಸಿದರು.

    ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಉದ್ಘಾಟನೆಯ ಮುನ್ನ ದಿನವೇ ಅಂದರೆ ಜನವರಿ 20ರಂದು ಬಂದು ಅಯೋಧ್ಯೆಯಲ್ಲಿ ತಂಗುವಂತೆ ಮನವಿ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ಜನವರಿ 23 ರಂದೇ ಹಿಂದಿರುಗಲು ಹೇಳಿದ್ದಾರೆ. ಆದರೆ ನಾನು ಹೋಗಲು ಆಗುತ್ತಿಲ್ಲ. ಕಾರಣ, ಜನವರಿ 21ರಂದು ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಇದೆ. ಈ ಕಾರಣದಿಂದಾಗಿ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ಆದರೆ ಶ್ರೀ ಸಿದ್ದಗಂಗಾ ಮಠದಿಂದ ರಾಮ ಮಂದಿರ ಉದ್ಘಾಟನೆ ಯಶಸ್ವಿಯಾಗಿ ನೆರವೇರಲಿ ಎಂದು ಶುಭ ಹಾರೈಸಿ ಪತ್ರವನ್ನು ಕಳುಹಿಸಿಕೊಡಲಾಗಿದೆ ಎಂದು ಸ್ವಾಮೀಜಿ ಅವರು ಸ್ಪಷ್ಟನೆ ನೀಡಿದರು.

    ಅಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ಶ್ರೀ ರಾಮ ಭೂಮಿ ತೀರ್ಥ ಕ್ಷೇತ್ರದ ಟ್ರಸ್ಟ್ ನಿಂದ ಆಹ್ವಾನ ಬಂದಿದೆ. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರು ಅಧಿಕೃತವಾಗಿ ಅಂಚೆ ಮೂಲಕ ಆಹ್ವಾನ ಪತ್ರಿಕೆಯನ್ನು ಕಳುಹಿಸಿಕೊಟ್ಟಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ಆಗುತ್ತಿರುವುದು ಅಪಾರ ಸಂತಸ ತಂದಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವು ಗಮನಾರ್ಹ ಸಾಧನೆಯಾಗಿದೆ. ಭಾರತದ ಸಾಂಸ್ಕೃತಿಕ ಮತ್ತು ಧಾರ್ಮಿಕ ವೈವಿಧ್ಯತೆಯನ್ನು ಪ್ರದರ್ಶಿಸದೆ ಏಕತೆಯ ಸಂಕೇತವಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಸ್ವಾಮೀಜಿ ಪ್ರಶಂಸೆ ವ್ಯಕ್ತಪಡಿಸಿದರು.

    ರಾಮ ಮಂದಿರ ದೇವಾಲಯ ಪೂರ್ಣಗೊಂಡಿರುವುದು ಒಂದು ಐತಿಹಾಸಿಕ ಮೈಲುಗಲ್ಲು ಆಗಿದೆ. ರಾಮ ಮಂದಿರದ ವಾಸ್ತುಶಿಲ್ಪದ ವಿನ್ಯಾಸವು ಸಾಂಪ್ರದಾಯಕ ಹಾಗೂ ಆಧುನಿಕತೆಯ ಮಿಶ್ರಣಗೊಂಡಿರುವುದು ಖುಷಿ ತಂದಿದೆ ಎಂದು ಶ್ರೀಗಳು ಹರ್ಷ ವ್ಯಕ್ತಪಡಿಸಿದರು.

  • ಇಂದು ಸಿದ್ದಗಂಗಾ ಶ್ರೀಗಳ 4ನೇ ಪುಣ್ಮಸ್ಮರಣೆ- ಬೆಳಗ್ಗೆ 5 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭ

    ಇಂದು ಸಿದ್ದಗಂಗಾ ಶ್ರೀಗಳ 4ನೇ ಪುಣ್ಮಸ್ಮರಣೆ- ಬೆಳಗ್ಗೆ 5 ಗಂಟೆಯಿಂದಲೇ ಪೂಜಾ ಕೈಂಕರ್ಯಗಳು ಆರಂಭ

    ತುಮಕೂರು: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಮಹಾಶಿವಯೋಗಿ ಸಿದ್ದಗಂಗಾ ಮಠ (Siddaganga Mutt) ದ ಲಿಂಗೈಕ್ಯ ಡಾ.ಶಿವಕುಮಾರ (Dr. Shivakumara Swamiji) ಶ್ರೀಗಳ 4ನೇ ಪುಣ್ಯ ಸ್ಮರಣೆಗೆ ತುಮಕೂರು ಮಠ ಸಿದ್ಧಗೊಂಡಿದೆ.

    ಕೊರೊನಾ ಹಿನ್ನೆಲೆ ಕಳೆದೆರಡು ವರ್ಷದಿಂದ ಪುಣ್ಯಸ್ಮರಣೆಯನ್ನು ಸಾಧಾರಣವಾಗಿ ಆಚರಿಸಲಾಗಿತ್ತು. ಈ ವರ್ಷ ವಿಜೃಂಭಣೆಯಿಂದ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದಕ್ಕಾಗಿ ಮಠದಲ್ಲಿ ಭರ್ಜರಿ ಸಿದ್ಧತೆ ನಡೆಸಲಾಗಿದೆ. ಇಂದು ಪೂಜ್ಯರ ಗದ್ದುಗೆಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿದ್ದು, ಮುಂಜಾನೆ 5 ಗಂಟೆಯಿಂದ ಮಹಾರುದ್ರಾಭಿಷೇಕ ಮತ್ತು ರಾಜೋಪಚಾರ, ಬಿಲ್ವಾರ್ಚನೆ ಹಾಗೂ ಇತರೆ ವಿಶೇಷ ಪೂಜಾ ಕೈಂಕರ್ಯಗಳು ಜರುಗುತ್ತಿವೆ. ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಪರ್ಷಿಯನ್ ಬೋಟ್ ಮುಳುಗಡೆ – 17 ಮೀನುಗಾರರ ರಕ್ಷಣೆ

    ಬೆಳಗ್ಗೆ 8ಕ್ಕೆ ಬೆಳ್ಳಿರಥದಲ್ಲಿ ಶಿವಕುಮಾರ ಶ್ರೀಗಳ ಪುತ್ಥಳಿಯನ್ನಿಟ್ಟು ಮೆರವಣಿಗೆ ಮಾಡಲಾಗುತ್ತದೆ. ಬೆಳಗ್ಗೆ 10ಕ್ಕೆ ವೇದಿಕೆ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿಎಸ್‍ವೈ ಉದ್ಘಾಟಿಸಲಿದ್ದು, ಸಿಎಂ ಬೊಮ್ಮಾಯಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಲಿಂಗ ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಠಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತಗಣ, ಅಭಿಮಾನಿಗಳು, ಹಳೆ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆ ಇದೆ.

    ಗೋಸಲ ಸಿದ್ಧೇಶ್ವರ ವೇದಿಕೆಯಲ್ಲಿ ಬೃಹತ್ ಸಭಾಮಂಟಪವನ್ನು ನಿರ್ಮಿಸಲಾಗುತ್ತಿದ್ದು, ಕೈಗಾರಿಕಾ ವಸ್ತುಪ್ರದರ್ಶನದ ಆವರಣ, ಸಾದರ ಕೊಪ್ಪಲು, ಕೆಂಪಹೊನ್ನಯ್ಯ ಅತಿಥಿಗೃಹ, ಹೊಸ ಪ್ರಸಾದ ನಿಲಯ, ಹಳೆ ಪ್ರಸಾದ ನಿಲಯ ಹೀಗೆ ಐದು ಕಡೆ ಪ್ರಸಾದದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳಿಗೆ ಉಣ ಬಡಿಸಲು ವಿಶೇಷ ಖಾದ್ಯವನ್ನು ಕಳೆದ ಮೂರು ದಿನದಿಂದ ಅಡುಗೆ ಭಟ್ಟರು ತಯಾರಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k