Tag: ಡಾ.ಶ್ರೀ.ಶ್ರೀ.ಶ್ರೀ.ಶಿವಕುಮಾರ ಮಹಾಸ್ವಾಮಿ ಇಂಜಿನಿಯರಿಂಗ್ ಕಾಲೇಜ್

  • ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ: ಮೋದಿ

    ಶಿವಕುಮಾರ ಸ್ವಾಮೀಜಿ ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ: ಮೋದಿ

    ನವದೆಹಲಿ: ಪೂಜನೀಯರಾದ ಗೌರವಾನ್ವಿತ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಜಯಂತಿಯಂದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಗೌರವ ನಮನ ಸಲ್ಲಿಸಿದ್ದಾರೆ.

    ಲಿಂಗೈಕ್ಯ ಶಿವಕುಮಾರ ಶ್ರೀಗಳ ಜನ್ಮದಿನೋತ್ಸವ ಹಿನ್ನೆಲೆ, ಕನ್ನಡ ಮತ್ತು ಇಂಗ್ಲೀಷ್‍ನಲ್ಲಿ ಮೋದಿ ಟ್ವೀಟ್ ಮಾಡಿದ್ದಾರೆ. ಸ್ವಾಮೀಜಿಯವರು ಅಸಂಖ್ಯಾತ ಜನರ ಹೃದಯದಲ್ಲಿ ಅಮರರಾಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕವಾಗಿ ನಮನ ಸಿಲ್ಲಿಸಿದ್ದಾರೆ. ಇದನ್ನೂ ಓದಿ: ನಡೆದಾಡುವ ದೇವರ ಗದ್ದುಗೆ ದರ್ಶನ ಪಡೆದ ಗೃಹ ಸಚಿವ ಅಮಿತ್ ಶಾ

    ಟ್ವೀಟ್‍ನಲ್ಲಿ ಏನಿದೆ?: ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳು ಅವರ ಜಯಂತಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರು ಅಸಂಖ್ಯಾತ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರ ಅಪ್ರತಿಮ ಸಮುದಾಯ ಸೇವೆ ಮತ್ತು ಆರೋಗ್ಯ ಮತ್ತು ಶಿಕ್ಷಣಕ್ಕೆ ಅವರು ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ಸ್ಮರಿಸುತ್ತೇವೆ. ಅವರ ಕನಸುಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತಲೇ ಇರುತ್ತೇವೆ. ಇದನ್ನೂ ಓದಿ: ಇಂದು ಶಿವಕುಮಾರ ಶ್ರೀಗಳ 115 ನೇ ಜನ್ಮ ದಿನೋತ್ಸವ – ಪೂಜಾ ಕೈಂಕರ್ಯಗಳು ಆರಂಭ

    ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಪ್ರಾಮುಖ್ಯ ಹಾಗು ಸರಿಸಾಟಿಯಿಲ್ಲದ ಅವರ ಸಾಮುದಾಯಿಕ ಸೇವೆಯಿಂದಾಗಿ ಅವರು ಸದಾ ಸ್ಮರಣೀಯರು. ಅವರ ಕನಸುಗಳನ್ನು ಈಡೇರಿಸಲು ನಾವು ಶ್ರಮಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

  • ಗ್ರಾಮೀಣ ಭಾಗದ ವಿದ್ಯಾರ್ಥಿಗೆ ಎಂಟೆಕ್ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಚಿನ್ನದ ಪದಕ

    ಗ್ರಾಮೀಣ ಭಾಗದ ವಿದ್ಯಾರ್ಥಿಗೆ ಎಂಟೆಕ್ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಚಿನ್ನದ ಪದಕ

    ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿ ಇಂಜಿನಿಯರಿಂಗ್ ಕಾಲೇಜಿನ 2021-22 ಸಾಲಿನ ವಿಟಿಯುವಿನ ಘಟಿಕೋತ್ಸವದಲ್ಲಿ ಮೆಟೆಕ್ನ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಚಿನ್ನದ ಪದಕ ಪಡೆದ ವಿದ್ಯಾರ್ಥಿ ಮೊಹಮ್ಮದ್ ಸುಹೆಲ್ಪಾಷ ಅವರನ್ನು ಕಾಲೇಜುವತಿಯಿಂದ ಗೌರವಿಸಲಾಯಿತು.

    ಸಮಾಜದಲ್ಲಿ ಸರ್ವಧರ್ಮ ಸಮನ್ವಯತೆಯನ್ನು ಹಾಗೂ ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಎಲ್ಲ ಜಾತಿ ಮತ್ತು ಧರ್ಮದವರ ಸಹಬಾಳ್ವೆ ತುಂಬಾ ಮುಖ್ಯ. ನಮ್ಮ ಕಾಲೇಜಿನಲ್ಲಿ ಉತ್ತಮ ವಾತಾವರಣ ಮತ್ತು ನುರಿತ ಬೋಧಕರ ಶ್ರಮದಿಂದ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಬೇಕಾಗುವ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲಾಗುತ್ತೆ.

    ಈ ಮೂಲಕ ಕಾಲೇಜಿಗೆ ಇಂದು ಸುಹೆಲ್ ಕೀರ್ತಿಯನ್ನು ತಂದಿದ್ದಾರೆ. ಬಡ ಕುಟುಂಬದಲ್ಲಿ ಹುಟ್ಟಿದ ಮಕ್ಕಳನ್ನು ಸಾಧನೆಯನ್ನು ಮಾಡಬಹುದು ಎಂಬುದಕ್ಕೆ ಚನ್ನಿಗಪ್ಪ ಅವರು ಹಾಗೂ ಇಂದು ನಮ್ಮ ಕಾಲೇಜಿನಲ್ಲಿ ಓದುತ್ತಿರುವ ಎಲ್ಲ ವಿದ್ಯಾಥಿಗಳು ಸಾಕ್ಷಿಯಾಗಿದ್ದಾರೆ ಎಂದು ಕಾಲೇಜಿನ ಮುಖ್ಯಸ್ಥ ವೇಣುಗೋಪಾಲ್ ಅಭಿಪ್ರಾಯಪಟ್ಟರು. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ದೇವರಹೋಸಹಳ್ಳಿ ಬ್ರಹ್ಮರಥೋತ್ಸವ – ಹಿಂದೂ, ಮುಸ್ಲಿಂ ಭಾವೈಕ್ಯ ಸಾಕ್ಷಿ

    ಕಾಲೇಜಿಗೆ ಕೀರ್ತಿ ತಂದ ಸುಹೆಲ್ ಪಾಷ ಬಡಕುಟುಂಬದಿಂದ ಬಂದವರು ಅವರ ವಿದ್ಯಾಭ್ಯಾಸಕ್ಕೆ ಸಹಕಾರವಾಗಲಿ ಎಂದು ಹಾಗೂ ಅವರ ಸಾಧನೆಗೆ ನಮ್ಮ ತಂದೆ ಚನ್ನಿಗಪ್ಪ ಅವರ ಸ್ಮರಣಾರ್ಥವಾಗಿ ಒಂದು ಲಕ್ಷ ರೂಪಾಯಿಯನ್ನು ವಿದ್ಯಾರ್ಥಿ ವೇತನವಾಗಿ ವಿತರಣೆ ಮಾಡಿದರು. ಮುಂದಿನ ಶೈಕ್ಷಣಿಕ ವರ್ಷಗಳಲ್ಲಿ ಚಿನ್ನದ ಪದಕ ಪಡೆಯುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರೂಪಾಯಿಗಳನ್ನು ನೀಡುತ್ತೇನೆ ಎಂದು ಕಾಲೇಜಿನ ಅಧ್ಯಕ್ಷರಾದ ವೇಣುಗೋಪಾಲ್ ತಿಳಿಸಿದರು.

    ಈ ವೇಳೆ ವಿದ್ಯಾರ್ಥಿ ಮಾತನಾಡಿದ್ದು, ಬಾಕ್ಸ್ ಕಲಿಗೆ ಅಗತ್ಯವಾಗಿ ಬೇಕಾಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಕಡಿಮೆ ಶುಲ್ಕದಲ್ಲಿ ನಮ್ಮ ಕಾಲೇಜು ನೀಡುತ್ತಿತ್ತು. ಅದಕ್ಕೆ ನಮ್ಮ ಕಾಲೇಜಿಗೆ ಕೀರ್ತಿಯನ್ನು ತರಬೇಕು ಎಂಬ ಹಂಬಲದಿಂದ ಉಪನ್ಯಾಸಕರ ಸಹಕಾರ ಮತ್ತು ಕಾಲೇಜು ಆಡಳಿತ ಮಂಡಳಿಯ ಬೆಂಬಲದಿಂದ ಇಂದು ಚಿನ್ನದ ಪದಕವನ್ನು ಪಡೆದಿದ್ದೇನೆ. ನಮ್ಮ ಪ್ರಯತ್ನಗಳು ಪ್ರಾಮಾಣಿಕತೆ ಮತ್ತು ಸತತ ಶ್ರಮದಿಂದ ಮಾತ್ರ ಜೀವನದಲ್ಲಿ ಏನಾದರೂ ಸಾಧಿಸುವುದಕ್ಕೆ ಅವಕಾಶ ಮಾಡಿಕೊಡುತ್ತದೆ. ಕಲಿಕೆಯ ಜೀವನವನ್ನು ಅರ್ಥಪೂರ್ಣವಾಗಿಸಿದರೆ ಜೀವನ ಪೂರ್ತಿ ಸುಖಕರವಾಗಿರಬಹುದು ಎಂದು ಶ್ರಮದ ಬಗ್ಗೆ ವಿವರಿದರು. ಇದನ್ನೂ ಓದಿ: ಟ್ರಾನ್ಸ್‌ಫಾರ್ಮರ್ ಸ್ಫೋಟ- ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ಸುನೀಲ್ ಕುಮಾರ್

    ಈ ಕಾರ್ಯಕ್ರಮದಲ್ಲಿ ಕಾಲೇಜಿನ ಸಿಇಓ ರಾಹುಲ್, ಪ್ರಾಂಶುಪಾಲರಾದ ಡಾ.ಹೆಚ್.ಡಿ ರಮೇಶ್, ಉಪಪ್ರಾಂಶುಪಾಲರಾದ ಡಾ.ಸಿ.ಸದಾಶಿವಯ್ಯ, ಉಪನ್ಯಾಸಕರಾದ ಚಂದ್ರಶೇಖರ್, ಸೇರಿದಂತೆ ಕಾಲೇಜಿನ ಎಲ್ಲ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.