Tag: ಡಾ.ಸರೋಜಿನಿ ಮಹಿಷಿ ವರದಿ

  • ಬಂದ್‍ಗೆ ಬೆಂಬಲವಿಲ್ಲ, ಆದ್ರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು – ಉರುಳು ಸೇವೆ ಮಾಡಿದ ಪ್ರತಿಭಟನಾಕಾರರು

    ಬಂದ್‍ಗೆ ಬೆಂಬಲವಿಲ್ಲ, ಆದ್ರೆ ಸರೋಜಿನಿ ಮಹಿಷಿ ವರದಿ ಜಾರಿಗೆ ಬರಬೇಕು – ಉರುಳು ಸೇವೆ ಮಾಡಿದ ಪ್ರತಿಭಟನಾಕಾರರು

    ಬೆಂಗಳೂರು: ಡಾ. ಸರೋಜಿನಿ ಮಹಿಷಿಯವರ ಪರಿಷ್ಕೃತ ವರದಿ ಜಾರಿಗೆ ಆಗ್ರಹಿಸಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿಗಾಗಿ ಆಗ್ರಹಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜಿಲ್ಲೆಯಲ್ಲಿ ನಮ್ಮ ಜನಸೈನ್ಯ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ಮಾಡಿದರು. ಐಬಿ ಸರ್ಕಲ್‍ನಲ್ಲಿ ಜಮಾಯಿಸಿ ಉರುಳು ಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಬಂದ್‍ಗೆ ವಿರೋಧ ವ್ಯಕ್ತಪಡಿಸಿ ಬಂದ್‍ನಿಂದ ಯಾವುದೇ ಪ್ರಯೋಜನವಿಲ್ಲ, ಬಂದ್ ನಿಂದ ಕೇವಲ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಅನಾನುಕೂಲ ಹೀಗಾಗಿ ಕರ್ನಾಟಕ ಬಂದ್‍ಗೆ ನಮ್ಮ ವಿರೋಧವಿದೆ. ಆದರೆ ಡಾ. ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಕೂಡಲೇ ಜಾರಿಗೆ ಬರುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

    ನಮ್ಮ ಕರ್ನಾಟಕ ಜನಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಮಾತನಾಡಿ, ಈ ಬಂದ್ ಜನಸಾಮಾನ್ಯರಿಗೆ ಮತ್ತಷ್ಟು ಸಮಸ್ಯೆ ತಂದಿದೆ. ನಾವು ಕಾನೂನು ಹೋರಾಟದ ಮೂಲಕ ನ್ಯಾಯ ಪಡೆಯಬೇಕು ಇಂತಹ ಬಂದ್‍ಗೆ ನಮ್ಮ ಸಂಘಟನೆಯ ವಿರೋಧ ಇದೆ ಎಂದು ತಿಳಿಸಿದರು.

  • ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬಂದ್!

    ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಬಂದ್!

    ಬೆಂಗಳೂರು: ಕಳೆದ ಮೂರು ತಿಂಗಳಿಂದ ವಿವಿಧ ಕನ್ನಡಪರ ಸಂಘಟನೆಗಳು ಡಾ. ಸರೋಜಿನಿ ಮಹಿಷಿ ವರದಿಯನ್ನ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ.

    ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಮಾಡುತ್ತಿರುವ ಧರಣಿ ಸತ್ಯಾಗ್ರಹ ಇಂದಿಗೆ 90 ದಿನ ಪೂರೈಸಿದೆ. ಆದರೆ ರಾಜ್ಯ ಸರ್ಕಾರದ ಮಾತ್ರ ಇನ್ನೂ ಈ ಬಗ್ಗೆ ಗಮನ ಹರಿಸಿಲ್ಲ. ಈ ನಡುವೆ ಇದೇ ತಿಂಗಳ 13ಕ್ಕೆ ವಿವಿಧ ಕನ್ನಡ ಪರ ಸಂಘಟನೆಗಳು ರಾಜ್ಯ ಬಂದ್ ಗೆ ಕರೆ ನೀಡಿವೆ.

    ಇತ್ತ ಕರ್ನಾಟಕ ಬಂದ್‍ಗೆ ಹತ್ತು ಹಲವು ಕನ್ನಡ ಪರ ಸಂಘಟನೆಗಳು ಬೆಂಬಲ ನೀಡುತ್ತಿಲ್ಲ. ಜೊತೆಗೆ ನಮ್ಮ ಹೋರಾಟಕ್ಕೆ ನಮ್ಮ ಬೆಂಬಲವಿದೆ ರಾಜ್ಯ ಬಂದ್ ಬೆಂಬಲವಿಲ್ಲವೆಂದು ಹೇಳಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕರ್ನಾಟಕ ಬಂದ್ ಮಾಡಬಾರದು ಅದಕ್ಕೆ ಅನುಮತಿ ನೀಡಬಾರದೆಂದು ಅನೇಕ ಸಂಘಟನೆಗಳು ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಪತ್ರ ನೀಡಿದ್ದಾರೆ.

  • ಕರುನಾಡಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ – 81ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

    ಕರುನಾಡಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ – 81ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

    ಬೆಂಗಳೂರು: ಕನ್ನಡಿಗರಿಗೆ ಕರ್ನಾಟಕದ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಿ ಎಂದು ಕನ್ನಡ ಪರ ಸಂಘಟನೆಗಳು ಮಾಡುತ್ತಿರೋ ಧರಣಿ ಸತ್ಯಾಗ್ರಹ 81ನೇ ದಿನಕ್ಕೆ ಕಾಲಿಟ್ಟಿದೆ.

    ಕಳೆದ ನವಂಬರ್ ಒಂದರಿಂದ ಕನ್ನಡ ಸಂಘಟನೆಗಳ ಒಕ್ಕೂಟ ವತಿಯಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಬೆಂಗಳೂರಿನ ಮೌರ್ಯ ಸರ್ಕಲ್ ನಲ್ಲಿ ಪ್ರಾರಂಭವಾಗಿದೆ. 80 ದಿನ ಧರಣಿ ಮಾಡಿದರು ಸರ್ಕಾರದಿಂದ ಡಾ. ಸರೋಜಿನಿ ಮಹಿಷಿ ವರದಿಯನ್ನು ಅನುಷ್ಠಾನಗೊಳಿಸುವ ಯಾವುದೇ ಭರವಸೆಗಳು ಸಿಕಿಲ್ಲ.

    ಡಾ. ಸರೋಜಿನಿ ಮಹಿಷಿ ವರದಿಯನ್ನು ಜಾರಿಗೆ ತಂದರೆ ಕನ್ನಡಿಗರಿಗೆ ಉದ್ಯೋಗಾವಕಾಶಗಳು ಹೆಚ್ಚಾಗುತ್ತದೆ. ಆ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಕನ್ನಡ ರಾಜ್ಯೋತ್ಸವದ ದಿನದಿಂದ ಹೋರಾಟವನ್ನು ಮಾಡಿಕೊಂಡು ಬಂದಿದ್ದಾರೆ. ವರದಿ ಜಾರಿಗೆ ತರಲೇಬೇಕು ಇಲ್ಲವಾದಲ್ಲಿ ಫೆಬ್ರವರಿ 13 ಕ್ಕೆ ಕರ್ನಾಟಕ ಬಂದ್ ಕರೆ ನೀಡಲಾಗುತ್ತದೆ ಎಂದು ಸಂಘಟನೆಗಳು ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿವೆ. ಇಂದು 81 ನೇ ದಿನದ ಧರಣಿ ಸತ್ಯಾಗ್ರಹ ಮುಂದುವರಿದಿದೆ.

  • ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆಗೆ ಆಗ್ರಹಿಸಿ ಬಂದ್‍ಗೆ ಕರೆ

    ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆಗೆ ಆಗ್ರಹಿಸಿ ಬಂದ್‍ಗೆ ಕರೆ

    ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆಗೆ ಆಗ್ರಹಿಸಿ 2020ರ ಫೆಬ್ರವರಿ 13ರಂದು ಕರ್ನಾಟಕ ಬಂದ್‍ಗೆ ಕರ್ನಾಟಕ ರಾಜ್ಯ ಕನ್ನಡ ಒಕ್ಕೂಟಗಳು ನಿರ್ಧರಿಸಿವೆ.

    ಐಟಿ, ಬಿಟಿ ಸೇರಿದಂತೆ ರಾಜ್ಯದ ಎಲ್ಲಾ ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಜಾರಿ, ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವುದು ಸೇರಿ 14 ಪ್ರಮುಖ ಶಿಫಾರಸುಗಳನ್ನು ಒಳಗೊಂಡ ಮಾಜಿ ಕೇಂದ್ರ ಸಚಿವೆ ಡಾ.ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ಜಾರಿಗೊಳಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಹೇಳಿ ಕನ್ನಡ ಒಕ್ಕೂಟಗಳು ಬಂದ್‍ಗೆ ನಿರ್ಧರಿಸಿವೆ.

    ಡಾ.ಸರೋಜಿನಿ ಮಹಿಷಿ ವರದಿ ಜಾರಿಗಾಗಿ ನಗರದ ಮೌರ್ಯ ಸರ್ಕಲ್ ಬಳಿ ವಿವಿಧ ಕನ್ನಡ ಒಕ್ಕೂಟಗಳು ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿವೆ. ಈ ಪ್ರತಿಭಟನೆಯು ಫೆಬ್ರವರಿ 13ರಂದು 100 ದಿನಕ್ಕೆ ಕಾಲಿಡಲಿದೆ. ಅಷ್ಟರೊಳಗೆ ಡಾ.ಸರೋಜಿನಿ ಮಹಿಷಿ ವರದಿ ಜಾರಿಯಾಗದಿದ್ದಲ್ಲಿ ಕರ್ನಾಟಕ ಬಂದ್ ಮಾಡಿ, ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗುತ್ತದೆ ಎಂದು ಕನ್ನಡ ಒಕ್ಕೂಟಗಳ ಅಧ್ಯಕ್ಷ ನಾಗೇಶ್ ಹೇಳಿದ್ದಾರೆ.

    ಇಗಾಗಲೇ ಈ ಪ್ರತಿಭಟನೆ 47ನೇ ದಿನಕ್ಕೆ ಕಾಲಿಟ್ಟಿದೆ. ಕೆಲ ದಿನಗಳ ಹಿಂದೆ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್ ನಾರಾಯಣ್ ಡಾ.ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವ ಭರವಸೆ ನೀಡಿದ್ದಾರೆ. ಕೊಟ್ಟ ಭರವಸೆ ಆದಷ್ಟು ಬೇಗ ಈಡೇರದಿದ್ದರೆ ಕರ್ನಾಟಕ ಬಂದ್ ಮಾಡಲಾಗುವು ಎಂದು ಕನ್ನಡ ಒಕ್ಕೂಟಗಳು ಎಚ್ಚರಿಸಿವೆ.