Tag: ಡಾ. ಹೆಚ್.ಸಿ ಮಹದೇವಪ್ಪ

  • ಸಿಎಂ ಆಪ್ತ ಮಹದೇವಪ್ಪರನ್ನ ಭೇಟಿಯಾದ ಸತೀಶ್ ಜಾರಕಿಹೊಳಿ – ರಾಜ್ಯ ರಾಜಕಾರಣದಲ್ಲಿ ಸಂಚಲನ

    ಸಿಎಂ ಆಪ್ತ ಮಹದೇವಪ್ಪರನ್ನ ಭೇಟಿಯಾದ ಸತೀಶ್ ಜಾರಕಿಹೊಳಿ – ರಾಜ್ಯ ರಾಜಕಾರಣದಲ್ಲಿ ಸಂಚಲನ

    ಮೈಸೂರು: `ಮುಂದಿನ ಸಿಎಂ ಸತೀಶ್ ಜಾರಕಿಹೊಳಿ’ ಎಂಬ ಕೂಗು ಎದ್ದಿರುವ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದಿಢೀರ್ ಮೈಸೂರಿಗೆ ಆಗಮಿಸಿದ್ದು, ಸಿಎಂ ಆಪ್ತ ಸಚಿವ (CM Personal Secretary) ಡಾ.ಹೆಚ್.ಸಿ ಮಹದೇವಪ್ಪ (HC Mahadevappa) ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ರಾಜ್ಯ ರಾಜಕಾರಣದಲ್ಲಿ ಕೂತುಹಲ ಮೂಡಿಸಿದೆ.

    ಇತ್ತೀಚಿಗಷ್ಟೇ ದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರನ್ನು ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ದೆಹಲಿ (Delhi) ಭೇಟಿ ನಂತರ ರಾಜ್ಯ ನಾಯಕರುಗಳನ್ನು ಭೇಟಿ ಮಾಡಲಿದ್ದು, ಇಂದು (ಅ.8) ಮೈಸೂರಿನಲ್ಲಿ ಮಹದೇವಪ್ಪ, ಶಾಸಕ ಹರೀಶ್ ಗೌಡ ಸೇರಿ ಹಲವು ಶಾಸಕರ ಭೇಟಿಗೆ ಸತೀಶ್ ಜಾರಕಿಹೊಳಿ ಮುಂದಾಗಿದ್ದಾರೆ. ದಿಢೀರ್ ಮೈಸೂರಿಗೆ (Mysuru) ಆಗಮಿಸಿ ಭೇಟಿಯಾಗುತ್ತಿರುವುದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಸಿಎಂ ತವರು ಜಿಲ್ಲೆಯ ಶಾಸಕರನ್ನು ಸತೀಶ್ ಜಾರಕಿಹೊಳಿ ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದಾರೆ ಎನ್ನುವುದನ್ನು ಈ ಭೇಟಿ ಎತ್ತಿಹಿಡಿಯುತ್ತದೆ. ಇಂದು ಪೂರ್ತಿ ದಿನ ಯಾವುದೇ ಅಧಿಕೃತ ಕಾರ್ಯಕ್ರಮ ಇಲ್ಲದೆ ನಾಯಕರ ಭೇಟಿಗೆ ಸಮಯವನ್ನು ಮೀಸಲಿಟ್ಟಿದ್ದಾರೆ.

    ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇರುತ್ತಾರೆ. 5 ವರ್ಷ ಇರುತ್ತಾರೋ, 3 ವರ್ಷವೋ ಇರುತ್ತಾರೋ ಅದು ನನಗೆ ಗೊತ್ತಿಲ್ಲ. ನೀವು ಅದನ್ನ ಹೈ ಕಮಾಂಡ್‌ಗೆ ಕೇಳಬೇಕು. ಆದರೆ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು. ಇದರಲ್ಲಿ ಬೇರೆ ಯಾವುದೇ ಪ್ರಶ್ನೆ ಇಲ್ಲ. ನಾನು ಅವರ ಜೊತೆಯಲ್ಲಿ ಸಚಿವನಾಗಿ ಕೆಲಸ ಮಾಡುತ್ತೇನೆ. ಸಿಎಂ ಬದಲಾವಣೆ ಪ್ರಶ್ನೆಯೇ ಉದ್ಭವಿಸಿಲ್ಲ. ಆ ರೀತಿಯ ಯಾವುದೇ ಚರ್ಚೆಗಳೂ ನಡೆದಿಲ್ಲ. ವಿಪಕ್ಷಗಳು, ಮಾಧ್ಯಮಗಳು, ಚರ್ಚೆ ಮಾಡುತ್ತಿವೆ. ವಿಪಕ್ಷ ನಾಯಕರು ಪ್ರೀತಿಯಿಂದ ನಮ್ಮ ಹೆಸರು ಹೇಳುತ್ತಿದ್ದಾರೆ ಅಷ್ಟೇ. ಆದರೆ ನಮ್ಮ ಪಕ್ಷದಲ್ಲಿ ಯಾವುದೇ ರೀತಿಯ ಚರ್ಚೆ ನಡೆದಿಲ್ಲ. ನಾನು ಈ ವಿಚಾರವನ್ನು ಹಲವು ಬಾರಿ ಸ್ಪಷ್ಟ ಪಡಿಸಿದ್ದೇನೆ. ಅವರ ಬೆಂಬಲಿಗರು ಅವರ ನಾಯಕರಿಗೆ ಮುಂದಿನ ಸಿಎಂ ಎಂದು ಜೈಕಾರ ಹಾಕುವುದು ಸರ್ವೇ ಸಾಮಾನ್ಯ. ಅದನ್ನು ಇಟ್ಟುಕೊಂಡು ಏನೋ ಬದಲಾವಣೆ ಆಗುತ್ತದೆ ಎನ್ನುವುದು ಸರಿಯಲ್ಲ ಎಂದು ಹೇಳಿದರು.ಇದನ್ನೂ ಓದಿ: Haryana Results| ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧಿ: ಕೈ ಸಂಸದೆ ಸೆಲ್ಜಾ

    ಡಿಕೆಶಿ ವಿಚಾರ, ಮತ್ತೊಬ್ಬರ ವಿಚಾರ ನನಗೆ ಹೇಳಲು ಆಗುವುದಿಲ್ಲ. ರಾಜಕಾರಣಿಗಳು ಸೇರಿದಾಗ ರಾಜಕಾರಣದ ಬಗ್ಗೆ ಚರ್ಚೆ ಮಾಡುತ್ತೇವೆ. ಅದರಲ್ಲಿ ವಿಶೇಷವೇನೂ ಇಲ್ಲ. ಇವತ್ತಿನ ಮೈಸೂರು ಭೇಟಿಯಲ್ಲಿ ಮಹತ್ತರ ವಿಚಾರವಿಲ್ಲ. ಇಡೀ ದಿನ ಮೈಸೂರಲ್ಲಿ ಓಡಾಡಿಕೊಂಡು ದಸರಾ ನೋಡುತ್ತೇನೆ ಅಷ್ಟೇ ಎಂದು ತಿಳಿಸಿದರು.

    ವಿಜಯೇಂದ್ರ ಹಾಗೂ ಸತೀಶ್ ಜಾರಕಿಹೊಳಿ ಭೇಟಿ:
    ಸೋಮವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅವರ ಸರ್ಕಾರಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದರು. ಈ ಸಂದರ್ಭದಲ್ಲಿ ಶಿಕಾರಿಪುರದಲ್ಲಿ ಹೊಸದಾಗಿ ನಿರ್ಮಾಣವಾಗಲಿರುವ ಕುಟ್ರಳ್ಳಿ ಟೋಲ್‌ನಿಂದ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿದರು. ಭೇಟಿ ಬಳಿಕ ಮಾತನಾಡಿದ ವಿಜಯೇಂದ್ರ, ನಮ್ಮ ಕ್ಷೇತ್ರದ ಮುಖಂಡರೊಂದಿಗೆ ಸಚಿವರನ್ನು ಭೇಟಿ ಮಾಡಿದ್ದೇವೆ. ನಮ್ಮ ಜಿಲ್ಲೆಯಲ್ಲಿ ಎರಡು ಹೈವೇ ಟೋಲ್‌ಗಳು ಬಂದಿವೆ. ಇದರಿಂದ ಮೂರು ಜಿಲ್ಲೆಗಳ ಜನರಿಗೆ ಸಮಸ್ಯೆ, ಬಡವರಿಗೆ ತೊಂದರೆ ಆಗುತ್ತಿದೆ. ಟೋಲ್ ಸ್ಥಳಾಂತರ ಮಾಡುವಂತೆ ಒತ್ತಾಯಿಸಿದ್ದೇವೆ. ಸಚಿವರು ಅಧಿಕಾರಿಗಳ ಸಭೆ ಕರೆದು ಚರ್ಚಿಸುತ್ತೇನೆ ಎಂದಿದ್ದಾರೆ ಎಂದು ತಿಳಿಸಿದ್ದರು.

    ಸದ್ಯ ಇಂದು ಸತೀಶ್ ಜಾರಕಿಹೊಳಿ ಅವರು ಸಿಎಂ ಆಪ್ತ ಸಚಿವ ಡಾ.ಎಚ್.ಸಿ ಮಹದೇವಪ್ಪ ಅವರನ್ನು ದಿಢೀರ್ ಭೇಟಿ ನೀಡುತ್ತಿರುವುದು ಕುತೂಹಲವನ್ನುಂಟುಮಾಡಿದೆ.ಇದನ್ನೂ ಓದಿ: Haryana Result | ಬಿಜೆಪಿಗೆ ಹ್ಯಾಟ್ರಿಕ್‌ ಗೆಲುವು ಖಚಿತ – ಸಿಎಂ ನಯಾಬ್‌ ಸಿಂಗ್‌ ಸೈನಿ ವಿಶ್ವಾಸ

  • ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

    ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡ್ತಿದ್ದೀರಿ?- ಮಹದೇವಪ್ಪ ವಿರುದ್ಧ ರೊಚ್ಚಿಗೆದ್ದ ಯತ್ನಾಳ್

    ಬೆಂಗಳೂರು: ಅಂಗರಕ್ಷನ ಬಳಿಯಿಂದ ಶೂ (Shoe) ಹಾಕಿಸಿಕೊಂಡು ವಿವಾದಕ್ಕೀಡಾದ ಬಳಿಕ ಸಮರ್ಥನೆ ಮಾಡಿಕೊಂಡು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr. H.C Mahadevappa) ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

    ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಯತ್ನಾಳ್ (Basangouda Patil Yatnal), ಇಷ್ಟು ಆರೋಗ್ಯ ಸಮಸ್ಯೆ ಇರುವವರು ಮನೆಯಲ್ಲಿ ವಿಶ್ರಾಂತಿ ಪಡೆಯಿರಿ. ಯಾವ ವ್ಯಕ್ತಿ ಗೌರವದ ಬಗ್ಗೆ ಮಾತನಾಡುತ್ತಿದ್ದಿರಿ?. ವಿವಾದವಾಗಿದ್ದು ದುರದೃಷ್ಟಕರವಲ್ಲ ನಿಮ್ಮಂತಹ ನಾಟಕೀಯ ಮಜವಾದಿಗಳು ಸಮಾಜವಾದದ ಬಗ್ಗೆ ಮಾತನಾಡುವುದು ದುರದೃಷ್ಟಕರ ಎಂದು ಗರಂ ಆಗಿದ್ದಾರೆ. ಇದನ್ನೂ ಓದಿ: ಅಂಗರಕ್ಷಕನಿಂದ ಶೂ ಹಾಕಿಸಿಕೊಂಡ ಸಚಿವರು- ವಿವಾದದ ಬಳಿಕ ಸೊಂಟ ನೋವೆಂದು ಸಮರ್ಥನೆ

    ಮಹದೇವಪ್ಪ ಸಮರ್ಥನೆ ಏನು..?: ಧಾರವಾಡಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅಂಗ ರಕ್ಷಕರು ಶೂ ಹಾಕಿದ್ದಾರೆಂಬ ಸಂಗತಿಯು ವಿವಾದದ ಸ್ವರೂಪ ಪಡೆದಿರುವುದು ದುರದೃಷ್ಟಕರ ಬೆಳವಣಿಗೆ. ವೈಯಕ್ತಿಕವಾಗಿ ವ್ಯಕ್ತಿ ಗೌರವ ಮತ್ತು ಘನತೆಯಲ್ಲಿ ನಂಬಿಕೆ ಇಟ್ಟಿರುವ ನನಗೆ ಒಬ್ಬರಿಂದ ಶೂ ಹಾಕಿಸಿಕೊಳ್ಳಬೇಕೆಂಬ ದರ್ಪದ ಇರಾದೆ ಇಲ್ಲ. ಆದರೆ ಹಿಂದೆ  Hip Joint Knee ತೊಂದರೆ ಸಿಲುಕಿ ಶಸ್ತ್ರಚಿಕಿತ್ಸೆಗೆ ಒಳಗಾದ ಸಂದರ್ಭದಿಂದ ಬಾಗುವುದು ಕಷ್ಟವಾಗಿದ್ದ ಕಾರಣ ನಮ್ಮ ಆತ್ಮೀಯ ವಲಯದಿಂದ ಸಹಾಯ ಪಡೆದಿದ್ದೇನೆ.

    ಬಹು ವರ್ಷಗಳ ಕಾಲ ನನ್ನೊಡನೆಯೇ ಒಂದು ಕುಟುಂಬದಂತೆ ಇರುವ ನಮ್ಮ ಕೆಲ ಸಿಬ್ಬಂದಿ ಬಳಿ ಕಾಲಿನ ಸಮಸ್ಯೆಯ ಹಿನ್ನೆಲೆಯಲ್ಲಿ ಪಡೆದುಕೊಂಡಿರುವ ಈ ಸಹಾಯಕ್ಕೆ ಮಾನವೀಯ ನೆಲೆ ಇದೆ. ಸಹಾಯಕ್ಕೆ ಅಂಹಕಾರ, ಅಧಿಕಾರದ ಅಮಲು ಎಂಬ ಶಬ್ದಗಳನ್ನು ಬಳಸುವುದು ಸರಿಯಾದ ಕ್ರಮವಲ್ಲ. ಇನ್ನು ನನ್ನನ್ನು ಬಲ್ಲ ಎಲ್ಲರಿಗೂ ವ್ಯಕ್ತಿ ಗೌರವಕ್ಕೆ ಸಂಬಂಧಿಸಿದ ನನ್ನ ನಿಲುವುಗಳ ಬಗ್ಗೆ ಚೆನ್ನಾಗಿಯೇ ತಿಳಿದಿರುವ ಕಾರಣ ಇಂತಹ ಸಣ್ಣಪುಟ್ಟ ವಿವಾದಗಳಿಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ. ಸಹಾಯಕ್ಕಾಗಿ ನನ್ನ ಅಂಗರಕ್ಷಕನಿಗೆ ಧನ್ಯವಾದಗಳು ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಆಗಿದ್ದೇನು..?: ಧಾರವಾಡ ಸಪ್ತಾಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿಗಳ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿದ ಸಚಿವ ಮಹಾದೇವಪ್ಪ ಅವರು ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲನೆ ನಡೆಸಿದರು. ಅಲ್ಲದೇ ಊಟದ ವ್ಯವಸ್ಥೆ ಬಗ್ಗೆಯೂ ವಿದ್ಯಾರ್ಥಿಗಳ ವಿಚಾರಿಸಿ, ವಿದ್ಯಾರ್ಥಿಗಳಿಂದ ಅಹವಾಲು ಕೂಡ ಸ್ವೀಕರಿಸಿದರು. ಹಾಸ್ಟೆಲ್‍ಗೆ ಭೇಟಿ ನೀಡಿ ಎಲ್ಲವನ್ನೂ ಪರಿಶೀಲಿಸಿದ ನಂತರ ವಾಪಸ್ ಹೋಗುತ್ತಿದ್ದ ಸಂದರ್ಭದಲ್ಲಿ ಸಚಿವರು ತಮ್ಮ ಅಂಗರಕ್ಷಕನಿಂದಲೇ ಶೂ ಹಾಕಿಸಿಕೊಂಡ ಪ್ರಸಂಗ ನಡೆಯಿತು. ಸಚಿವರ ಈ ನಡೆಗೆ ಭಾರೀ ಖಂಡನೆ ವ್ಯಕ್ತವಾಗುತ್ತಿದೆ.

  • ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್

    ಹೇ ನಡೀಯಪ್ಪ ನೀನು, ನಮಗೆ ತಲೆ ಬಿಸಿಯಾಗಿದೆ: ಸಿದ್ದರಾಮಯ್ಯ ಇನ್ ಟೆನ್ಶನ್

    ಮೈಸೂರು: ಹೇ ನಡೀಯಪ್ಪ ನೀನು ನಮಗೆ ತಲೆ ಬಿಸಿಯಾಗಿದೆ ಎಂದು ಹೇಳಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಹೊರಟ ಪ್ರಸಂಗ ಇಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

    ಹೌದು. ನಂಜನಗೂಡು ಟಿಕೆಟ್ ಟೆನ್ಷನ್ ನಲ್ಲಿ ಸಿದ್ದರಾಮಯ್ಯ ಇದ್ದಾರೆ ಎನ್ನಲಾಗಿದೆ. ಇಂದು ಬೆಳ್ಳಂಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ಮಾಜಿ ಸಚಿವ ಡಾ.ಎಚ್.ಸಿ ಮಹದೇವಪ್ಪ (Dr. H C Mahadevappa) ದೌಡಾಯಿಸಿದ್ದಾರೆ. ಕೆಲಕಾಲ ನಂಜನಗೂಡು ಟಿಕೆಟ್ ವಿಚಾರವಾಗಿ ಮಾತುಕತೆ ನಡೆದಿದ್ದು, ನಗರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೆ ಸಿದ್ದರಾಮಯ್ಯ ಹೊರಟಿದ್ದು, ಟೆನ್ಶನ್ ನಲ್ಲಿರುವುದಕ್ಕೆ ಪುಷ್ಠಿ ನೀಡಿತ್ತು. ಇದನ್ನೂ ಓದಿ: ಸುಳ್ಳು ಪ್ರಚಾರ ಮಾಡಿ ಅಧಿಕಾರಕ್ಕೆ ಬರುವುದಕ್ಕಿಂತ ವಿಪಕ್ಷದಲ್ಲಿ ಇರೋದೆ ಒಳ್ಳೆಯದು: ಜಾರಕಿಹೊಳಿ

    ಧ್ರುವನಾರಾಯಣ (Dhruvanarayan) ಮಗನಿಗೆ ಟಿಕೆಟ್ ನೀಡಬೇಕೆಂದು ಗಲಾಟೆಯಾದ ವಿಚಾರಕ್ಕೆ ನಂಜನಗೂಡು ಟಿಕೆಟ್ ಆಕಾಂಕ್ಷಿ ಡಾ.ಹೆಚ್‍ಸಿ ಮಹದೇವಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಯಾರಿಗೆ ಜೀವನದ ಮೂಲ್ಯದ ಬಗ್ಗೆ ಮಹತ್ವ ಇಲ್ಲವೋ ಅವರೆಲ್ಲಾ ಈ ರೀತಿ ಮಾತನಾಡುತ್ತಾರೆ. ಅಧಿಕಾರ, ಅಂತಸ್ತಿಗಿಂತಾ ಜೀವ ಮುಖ್ಯ. ಜೀವ ಹೋದ್ರೆ ಮತ್ತೊಂದು ಬಾರಿ ಸಿಕ್ಕಲ್ಲ. ಅಘಾಕಾರಿ ಘಟನೆ ನಡೆದು ಧ್ರುವನಾರಾಯಣ ತೀರಿ ಹೋಗಿದ್ದಾರೆ. ಆ ನೋವು ಎಲ್ಲರಲ್ಲೂ ನನ್ನಲ್ಲೂ ಸೇರಿದಂತೆ ಇದೆ. ಜೀವದ ಮುಂದೆ ಪೊಲಿಟಿಕಲ್ ಪವರ್, ಟಿಕೆಟ್ ಯಾವುದೇ ಇಂಪಾರ್ಟೆಂಟ್ ಅಲ್ಲ ಎಂದ ಹೇಳಿದರು.

  • ಕತ್ತಿ ನನಗೆ ಒಳ್ಳೆಯ ಸ್ನೇಹಿತ, ಆದ್ರೆ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ

    ಕತ್ತಿ ನನಗೆ ಒಳ್ಳೆಯ ಸ್ನೇಹಿತ, ಆದ್ರೆ ಅವನೊಬ್ಬ ಬುದ್ದಿ ಇಲ್ಲದ ಅವಿವೇಕಿ: ಹೆಚ್.ಸಿ ಮಹಾದೇವಪ್ಪ

    – ಮುರ್ಮು ಆಯ್ಕೆ ಮಾಡಿರೋದು ಸಾಮಾಜಿಕ ನ್ಯಾಯದ ಸಂಕೇತವಲ್ಲ

    ಮೈಸೂರು: ಸಚಿವ ಉಮೇಶ್ ಕತ್ತಿ ನನಗೆ ಒಳ್ಳೆಯ ಸ್ನೇಹಿತ. ಆದರೆ ಅವನೊಬ್ಬ ಬುದ್ಧಿ ಇಲ್ಲದ ಅವಿವೇಕಿ. ಮಾಡೋದಕ್ಕೆ ಕೆಲಸ ಇಲ್ಲದೇ ಏನೇನೋ ಕೆರೆದುಕೊಳ್ಳುತ್ತಿದ್ದಾನೆ. ಅರಣ್ಯ ಇಲಾಖೆಯಂತ ಬಹುಮುಖ್ಯ ಖಾತೆ ಇದ್ದರೂ ಕೆಲಸ ಇಲ್ಲದಂತೆ ಇದ್ದಾನೆ ಎಂದು ಮಾಜಿ ಸಚಿವ ಹೆಚ್.ಸಿ.ಮಹಾದೇವಪ್ಪ ಆಕ್ರೋಶ ಹೊರಹಾಕಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಇದ್ರೆ ಇಲ್ಲೇ ಆಗಲಿ. ಅದಕ್ಯಾಕೆ ಪ್ರತ್ಯೇಕ ರಾಜ್ಯ ಬೇಕು ನಿನಗೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಲಿಲ್ಲ ಅಂದ್ರೆ ಅದಕ್ಕೆ ಹೊಣೆ ಯಾರಪ್ಪ..?, ಅವತ್ತಿನಿಂದ ಅಲ್ಲಿ ಅಧಿಕಾರದಲ್ಲಿ ಇರುವವರು ನೀವೇ ತಾನೆ. ಏನು ಆಗಿದೆ, ಏನೂ ಆಗಿಲ್ಲ ಎಂಬ ಪಟ್ಟಿ ನಿನ್ನ ಬಳಿಯೇ ಇರುತ್ತೆ ನೋಡಿಕೋ. ಲಕ್ಷಾಂತರ ಜನರ ಹೋರಾಟದ ಫಲವಾಗಿ ಅಖಂಡ ಕರ್ನಾಟಕ ಸೃಷ್ಠಿಯಾಗಿದೆ. ಇದನ್ನು ಪದೇ ಪದೇ ಒಡೆಯುವ ಮಾತನಾಡಬೇಡಿ. ಚುನಾವಣೆ ಹತ್ತಿರ ಬಂದಾಗಲೆಲ್ಲಾ ಇಂತಹ ಬೇಜವಾಬ್ದಾರಿ ಕೂಗು ಶುರು ಮಾಡುತ್ತಾರೆ ಎಂದು ಕಿಡಿಕಾರಿದರು.

    ಮೈಸೂರಿನ ಅಭಿವೃದ್ಧಿ ಚರ್ಚೆಗೆ ಸಿದ್ದರಾಮಯ್ಯ ಹಾಗೂ ಮಹಾದೇವಪ್ಪ ಬರಲಿ ಎಂಬ ಪ್ರತಾಪ್ ಸಿಂಹ ಹೇಳಿಕೆಗೆ ಪ್ರತಿಕ್ರಿಯಿಸಿ ತಿರುಗೇಟು ನೀಡಿದರು. ನಾವು ಮಾಡಿರೋ ಅಭಿವೃದ್ಧಿ ಕಣ್ಣಿಗೆ ಕಾಣುತ್ತಿದೆ. ಏನೂ ಕೆಲಸ ಮಾಡದೇ ಬರೀ ಬೊಗಳೆ ಬಿಟ್ಟುಕೊಂಡು ಅವರು ಓಡಾಡುತ್ತಿದ್ದಾರೆ. ಬರಿ ಬೊಗಳೆ ಬಿಟ್ಟು ಓಡಾಡುವವರ ಜೊತೆ ಏನು ಚರ್ಚೆ ಮಾಡೊದು. ಅವರು ಏನಾದರೂ ಅಭಿವೃದ್ಧಿ ಮಾಡಿದ್ದರೆ ತಾನೆ ಚರ್ಚೆ ಮಾಡೋದು. ಸುಮ್ಮನೆ ಕೆಲಸಕ್ಕೆ ಬಾರದ ಮಾತುಗಳನ್ನು ಆಡುತ್ತಾ ಕೂತಿದ್ದಾರೆ. ನಾವು ಜಿಲ್ಲಾಸ್ಪತ್ರೆ ಕಟ್ಟದಿದ್ದರೆ ಕೋವಿಡ್ ಸಂದರ್ಭದಲ್ಲಿ ರೋಗಿಗಳನ್ನು ಎಲ್ಲಿ ಮಲಗಿಸುತ್ತಿದ್ದರು. ಇಂತಹ ನೂರು ಕೆಲಸ ಮಾಡಿದ್ದೇವೆ ಎಂದು ಗುಡುಗಿದರು. ಇದನ್ನೂ ಓದಿ: ಮೋದಿಜೀ ಕೇಂದ್ರ ಸಚಿವರು ಶರದ್ ಪವಾರ್‌ಗೆ ಬೆದರಿಕೆ ಹಾಕುತ್ತಿದ್ದಾರೆ ಇದು ನಿಮ್ಮ ಕೀಳುಮಟ್ಟದ ರಾಜಕೀಯ: ಸಂಜಯ್ ರಾವತ್

    ಇದೇ ವೇಳೆ ಪರಿಷ್ಕೃತ ಪಠ್ಯಕ್ರಮ ವಾಪಸ್ ಪಡೆಯುವುದಿಲ್ಲವೆಂಬ ಸರ್ಕಾರದ ನಿಲುವಿನ ವಿಚಾರಕ್ಕೆ ಪ್ರತಿಕ್ರಿಯಿಸಿ, ಇದು ದಪ್ಪ ಚರ್ಮದ ಸರ್ಕಾರ. ಅವರಿಗೆ ಕಣ್ಣು ಕಾಣುವುದಿಲ್ಲ, ಕಿವಿಯೂ ಕೇಳುವುದಿಲ್ಲ. ಜನಾಭಿಪ್ರಾಯಕ್ಕೆ ಈ ಸರ್ಕಾರ ಯಾವತ್ತೂ ಮನ್ನಣೆ ನೀಡಿಲ್ಲ. ಇದು ಕೋಮುವಾದದ ಅಫೀಮನ್ನು ಪಠ್ಯಪುಸ್ತಕದಲ್ಲಿ ಸೇರಿಸುವುದು ಇವರ ಉದ್ದೇಶ. ಇದಕ್ಕಾಗಿ ಯಾರ ಮಾತನ್ನೂ ಕೇಳುತ್ತಿಲ್ಲ. ಈ ಸರ್ಕಾರಕ್ಕೆ ಅಂಬೇಡ್ಕರ್, ಬಸವಣ್ಣ, ಕುವೆಂಪು, ಕನಕದಾಸರು ಯಾರ ಮೇಲೂ ಗೌರವ ಇಲ್ಲ. ಇದು ಪಠ್ಯಪರಿಷ್ಕರಣೆಯ ಮೂಲಕ ಮತ್ತೆ ಸಾಬೀತಾಗಿದೆ. ಬರಗೂರು ಸಮಿತಿ ತಪ್ಪು ಮಾಡಿಲ್ವಾ ಎಂದು ಇವರು ಈಗ ಹೇಳುವುದು ಸಮರ್ಥನೀಯವಲ್ಲ ಎಂದರು.

    ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡಿರುವುದು ಸಾಮಾಜಿಕ ನ್ಯಾಯದ ಸಂಕೇತವಲ್ಲ. ಪ್ರಧಾನಿ ಹುದ್ದೆ, ರಾಷ್ಟ್ರಪತಿ ಹುದ್ದೆ, ಮುಖ್ಯಮಂತ್ರಿ ಹುದ್ದೆಯನ್ನು ಜಾತಿಯಿಂದ ನೋಡುವುದೇ ಸಂವಿಧಾನಕ್ಕೆ ಮಾಡುವ ಅಪಮಾನ. ದ್ರೌಪದಿ ಮುರ್ಮು ಅವರು ಬಿಜೆಪಿಯಲ್ಲಿ ಹಲವು ಘಟಕಗಳಲ್ಲಿ ಕೆಲಸ ಮಾಡಿದ್ದಾರೆ. ಜಾತಿ ನೋಡಿ ಅವರಿಗೆ ಸ್ಥಾನಕೊಡುವುದಾದರೆ ಅದು ತಪ್ಪು. ಅವರ ಕಾರ್ಯ ವೈಖರಿ ನೋಡಿ ಸ್ಥಾನ ಕೊಡಬೇಕು. ಬಿಜೆಪಿ ಇದರಲ್ಲೂ ಜಾತಿ ನಮೂದಿಸುತ್ತಾ ಸಂವಿಧಾನಕ್ಕೆ ಅಗೌರವ ತೋರುತ್ತಿದೆ ಎಂದು ತಿಳಿಸಿದರು.

    Live Tv