Tag: ಡಿ

  • ಅಂಜನಾದ್ರಿ ಅಭಿವೃದ್ಧಿ ಮಾಡ್ತೇವೆ, ಯುವಕರಿಗೆ ಆಂಜನೇಯನ ವಿಚಾರಗಳ ಬೆಳೆಸಲು ವಿಶೇಷ ಕಾರ್ಯಕ್ರಮ: ಡಿಕೆಶಿ

    ಅಂಜನಾದ್ರಿ ಅಭಿವೃದ್ಧಿ ಮಾಡ್ತೇವೆ, ಯುವಕರಿಗೆ ಆಂಜನೇಯನ ವಿಚಾರಗಳ ಬೆಳೆಸಲು ವಿಶೇಷ ಕಾರ್ಯಕ್ರಮ: ಡಿಕೆಶಿ

    ಮೈಸೂರು: ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದರೆ ಆಂಜನೇಯ ಹುಟ್ಟಿದ ಸ್ಥಳ ಅಂಜನಾದ್ರಿ (Anjanadri) ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ವಿಶೇಷ ಮಂಡಳಿ ರಚನೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮೈಸೂರಿನಲ್ಲಿ (Mysuru) ಗುರುವಾರ ಹೇಳಿದ್ದಾರೆ. ಇದನ್ನೂ ಓದಿ: ತಂದೆಗೆ ಟಿಕೆಟ್ ಸಿಕ್ಕಿದ್ದಕ್ಕೆ ಗಾಳಿಯಲ್ಲಿ ಗುಂಡು ಹಾರಿಸಿದ ಬಿಜೆಪಿ ಅಭ್ಯರ್ಥಿಯ ಪುತ್ರ – ಕಾಂಗ್ರೆಸ್‍ನಿಂದ ವೀಡಿಯೋ ರಿಲೀಸ್

    ನಗರದ ಚಾಮುಂಡೇಶ್ವರಿ ದೇವಾಲಯಕ್ಕೆ (Chamundeshwari Temple) ಭೇಟಿ ನೀಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪ್ರಣಾಳಿಕೆ ನೋಡಿ ಬಿಜೆಪಿಗರಿಗೆ (BJP) ಗಾಬರಿಯಾಗಿದೆ. ಬಜರಂಗದಳಕ್ಕೂ ಆಂಜನೇಯನಿಗೂ ವ್ಯತ್ಯಾಸವಿದೆ. ಬಜರಂಗದಳ ಒಂದು ರಾಜಕೀಯ ಪಕ್ಷದ ಭಾಗ. ಹುಟ್ಟುವ ಎಲ್ಲವೂ ಬಸವ ಆಗುವುದಕ್ಕೆ ಸಾಧ್ಯವಿಲ್ಲ. ಹನುಮಂತನ ಹೆಸರಿಟ್ಟುಕೊಂಡವರೆಲ್ಲಾ ಹನುಮಂತ ಆಗಲು ಸಾಧ್ಯವೇ ಎಂದು ಪ್ರಶ್ನಿಸಿ ಬಿಜೆಪಿ ವಿರುದ್ಧ ಗುಡುಗಿದ್ದಾರೆ.

    ಬಜರಂಗದಳದವರು (Bajrang Dal) ನೈತಿಕ ಪೊಲೀಸ್ ಗಿರಿ ಮಾಡುತ್ತಿದ್ದಾರೆ. ಬಜರಂಗ ಬಲಿಯ ನಿಜವಾದ ಭಕ್ತರು ನಾವು. ಬಜರಂಗಿಯ ಕುಂಕುಮ ನನ್ನ ಹಣೆಯಲ್ಲಿಯೇ ಇದೆ. ಈ ನಾಡಿನಲ್ಲಿ ಆಂಜನೇಯ ಹುಟ್ಟಿದ್ದಕ್ಕೆ ಸಾಕ್ಷಿ ಇದೆ. ಇತಿಹಾಸ ಸೃಷ್ಟಿಸಿದ ಆಂಜನೇಯ ದೇವಾಲಯ ಅಭಿವೃದ್ಧಿಗೆ ಕಾಂಗ್ರೆಸ್ ವಿಶೇಷ ಒತ್ತು ನೀಡಲಿದೆ. ಯುವಕರಿಗೆ ಆಂಜನೇಯನ ವಿಚಾರಗಳನ್ನು ಬೆಳೆಸಲು ವಿಶೇಷ ಕಾರ್ಯಕ್ರಮ ಮಾಡುತ್ತೇವೆ ಎಂದು ಹೇಳುವ ಮೂಲಕ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸಿದರು.

    ಬಿಜೆಪಿಯವರು ಒಂದಾದರೂ ಆಂಜನೇಯನ ದೇವಾಲಯವನ್ನು ಕಟ್ಟಿದ್ದಾರಾ? ಯಾರಿಗೆ ಏನೂ ಸಹಾಯ ಮಾಡಿದ್ದೇವೆ, ಕೆಲಸ ಮಾಡಿದ್ದೇವೆ ಎಂದು ಪ್ರಧಾನಿಗಳು ಭಾಷಣದಲ್ಲಿ ಹೇಳುತ್ತಿಲ್ಲ. ದೇವರ ಹೆಸರಿನಲ್ಲಿ ಪ್ರಧಾನಿ ಹಾಗೂ ಬಿಜೆಪಿ ರಾಜಕೀಯ ನಡೆಸಲು ಯತ್ನಿಸುತ್ತಿದೆ. ಬಿಜೆಪಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

    ಕಾಂಗ್ರೆಸ್ ಪ್ರಾಣಾಳಿಕೆಯನ್ನು ಈಶ್ವರಪ್ಪ ಸುಟ್ಟು ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಭ್ರಷ್ಟಾಚಾರದ ಫಲವಾಗಿ ಬಿಜೆಪಿಗರು ಈಶ್ವರಪ್ಪನನ್ನೆ ಸುಟ್ಟು ಹಾಕಿದ್ದಾರೆ ಎಂದು ಹೇಳಿ ತಿರುಗೇಟು ನೀಡಿದರು.

    ಗರ್ಭಗುಡಿಯಲ್ಲಿ ರುದ್ರಾಕ್ಷಿ ಜಪ ಮಾಡಿದ್ದೇನೆ, ರಾಜ್ಯಕ್ಕೆ ಬಂದಿರುವ ದುಃಖವನ್ನು ದೂರ ಮಾಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ. ದುಷ್ಟರನ್ನು ದೂರ ಮಾಡಿ ಶಿಷ್ಟರನ್ನು ದೇವರು ಕಾಪಾಡುತ್ತಾರೆ ಎಂದು ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮಾಜಿ ಸಿಎಂ ಸಿದ್ಧರಾಮಯ್ಯ ಪರವಾಗಿ ರಮ್ಯಾ, ಶಿವಣ್ಣ ದುನಿಯಾ ವಿಜಯ್ ಕ್ಯಾಂಪೇನ್

  • ಡಿಕೆಶಿಗೆ ಕೆಪಿಸಿಸಿ ಪಟ್ಟ – ತಾಯಿ ಗೌರಮ್ಮರಿಂದ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ

    ಡಿಕೆಶಿಗೆ ಕೆಪಿಸಿಸಿ ಪಟ್ಟ – ತಾಯಿ ಗೌರಮ್ಮರಿಂದ ಕಬ್ಬಾಳಮ್ಮ ದೇವಿಗೆ ವಿಶೇಷ ಪೂಜೆ

    ರಾಮನಗರ: ಮಾಜಿ ಸಚಿವ, ಕನಕಪುರ ಬಂಡೆ ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟದ ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದ್ದು, ಡಿಕೆಶಿ ಬೆಂಬಲಿಗರಲ್ಲಿ ಸಂತೋಷ ಮನೆ ಮಾಡಿದರೆ, ಇತ್ತ ಡಿಕೆಶಿ ತಾಯಿ ಗೌರಮ್ಮ ಶಕ್ತಿದೇವತೆ ಕಬ್ಬಾಳಮ್ಮದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿನ ಶಕ್ತಿದೇವತೆ ಕಬ್ಬಾಳಮ್ಮ ದೇವಿಗೆ ಡಿಕೆಶಿ ತಾಯಿ ಗೌರಮ್ಮ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿಕೆಶಿ ಹೆಚ್ಚು ನಂಬಿರುವ ಕಬ್ಬಾಳಮ್ಮ ದೇವಿಗೆ ತಮ್ಮ ಕುಟುಂಬದಲ್ಲಿ ಏನೇ ವಿಶೇಷವಿದ್ದರೂ ಸಹ ಡಿಕೆಶಿ ಕುಟುಂಬದವರು ಪೂಜೆ ಸಲ್ಲಿಸುತ್ತಲೇ ಬಂದಿದ್ದಾರೆ. ಇದೀಗ ತಮ್ಮ ಮಗ ಡಿಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ ಒಲಿಯುತ್ತಿರುವ ಹಿನ್ನೆಲೆಯಲ್ಲಿ ಗೌರಮ್ಮನವರು ಕಬ್ಬಾಳಮ್ಮ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ತಮ್ಮ ಮಕ್ಕಳ ಹೆಸರಿನಲ್ಲಿ ಅರ್ಚನೆ ಮಾಡಿಸಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.

    ಡಿಕೆಶಿ ಸಹ ಯಾವುದೇ ಕಾರ್ಯ ಮಾಡಬೇಕಿದ್ರೂ ಸಹ ಈ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸುತ್ತಾರೆ. ಚುನಾವಣೆ ಸ್ಪರ್ಧೆಗೆ ನಾಮಪತ್ರ ಸಲ್ಲಿಕೆ ದಿನ, ಚುನಾವಣೆ ಫಲಿತಾಂಶ, ಅಧಿಕಾರ ಸ್ವೀಕಾರ ಪಡೆಯುವ ವೇಳೆಯಲ್ಲಿ ಅಲ್ಲದೇ ಕಳೆದ ವರ್ಷ ತಿಹಾರ್ ಜೈಲಿನಿಂದ ಹೊರಬಂದ ಸಂದರ್ಭದಲ್ಲಿಯೂ ಸಹ ಪೂಜೆ ಸಲ್ಲಿಸಿದ್ದರು.

  • ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ಡಿಕೆಶಿ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

    ನವದೆಹಲಿ: ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತಿಹಾರ್ ಜೈಲು ಸೇರಿರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

    ದೆಹಲಿ ಹೈಕೋರ್ಟಿನ ನ್ಯಾ. ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಬೇಕಿತ್ತು. ಆದರೆ ಕೋರ್ಟಿಗೆ ಡಿಕೆಶಿ ಪರ ವಕೀಲರು ಬರಲಿಲ್ಲ. ಹೀಗಾಗಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.

    ಕಳೆದ ವಿಚಾರಣೆಯಲ್ಲಿ ಡಿಕೆಶಿ ಪ್ರಕರಣದ ಸಂಪೂರ್ಣ ತನಿಖಾ ಪ್ರಗತಿಯನ್ನು ಕೋರ್ಟಿಗೆ ಸಲ್ಲಿಸಬೇಕು ಅಂತ ನ್ಯಾಯಾಧೀಶರು ಇಡಿ ಅಧಿಕಾರಿಗಳಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ, ತನಿಖೆ ಪ್ರಗತಿ ವರದಿಯನ್ನು ಕೋರ್ಟಿಗೆ ಇಡಿ ಅಧಿಕಾರಿಗಳು ಸಲ್ಲಿಸಿ, ಹೆಚ್ಚುವರಿ ವರದಿ ಸಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

    ಡಿಕೆಶಿ ನ್ಯಾಯಂಗ ಬಂಧನ ನಾಳೆಗೆ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಇಡಿ ಕೋರ್ಟಿಗೆ ನಾಳೆ ಡಿಕೆಶಿ ಹಾಜರಾಗಲಿದ್ದಾರೆ. ಇತ್ತ ಹೈಕೋರ್ಟಿನಲ್ಲಿ ವಿಚಾರಣೆ ಇನ್ನೂ ಬಾಕಿಯಿದೆ.

    ಈ ಹಿಂದೆ ವಿಚಾರಣೆ ನಡೆಸಿದ್ದ ಪೀಠ ದಸರಾ ಹಬ್ಬದ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡಲಾಗಿತ್ತು. ಡಿಕೆಶಿ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ, ಮುಕುಲ್ ರೋಹಟಗಿ, ದಯಾನ್ ಕೃಷ್ಣನ್ ವಾದ ಮಂಡಿಸಬೇಕಿತ್ತು.