Tag: ಡಿಎ

  • ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ದೀಪಾವಳಿಗೆ ಸಿಹಿ ಸುದ್ದಿ- ರಾಜ್ಯದ ಸರ್ಕಾರಿ ನೌಕರರ DA 2% ಏರಿಕೆ

    ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ತುಟ್ಟಿ ಭತ್ಯೆಯನ್ನು (Dearness Allowance) ಶೇ. 2ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ.

    ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜುಲೈ 2025 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ.12.25 ರಿಂದ ಶೇ.14.25 ಗೆ ಏರಿಕೆ ಮಾಡಿದೆ.  ಇದನ್ನೂ ಓದಿ:  ಬೆಂಗಳೂರು ನಿವಾಸಿಗಳಿಗೆ ದೀಪಾವಳಿಗೂ ಮೊದಲೇ ಗಿಫ್ಟ್‌; ಬಿ-ಖಾತಾ ಪರಿವರ್ತನೆಗೆ ಹೊಸ ಪೋರ್ಟಲ್‌

    ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿ ಭತ್ಯೆ ಘೋಷಿಸಿದ ಬೆನ್ನಲ್ಲೇ ಸಾಮಾನ್ಯವಾಗಿ ರಾಜ್ಯ ಸರ್ಕಾರವೂ ಏರಿಕೆ ಮಾಡುತ್ತದೆ. ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಹೆಚ್ಚುವರಿ 3% ತುಟ್ಟಿ ಭತ್ಯೆ ನೀಡಲು ಒಪ್ಪಿಗೆ ನೀಡಿತ್ತು.  ಇದನ್ನೂ ಓದಿ:  ಕೇದಾರನಾಥ ಯಾತ್ರಿಗಳಿಗೆ ಗುಡ್ ನ್ಯೂಸ್ – 12.9 ಕಿಮೀ ರೋಪ್‌ವೇ ನಿರ್ಮಿಸಲಿದೆ ಅದಾನಿ ಕಂಪನಿ

    ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿತ್ತು.

  • ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ಕೇಂದ್ರ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್‌ – ಡಿಎ 3% ಏರಿಕೆ

    ನವದೆಹಲಿ: ವಿಜಯದಶಮಿಯ (Vijayadashami) ಮುನ್ನ ದಿನ ಕೇಂದ್ರ ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಗಿಫ್ಟ್‌ ನೀಡಿದೆ. ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ 3% ತುಟ್ಟಿ ಭತ್ಯೆ (Dearness Allowance) ನೀಡಲು ಒಪ್ಪಿಗೆ ನೀಡಿದೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, ಬೆಲೆ ಏರಿಕೆಯನ್ನು ಸರಿದೂಗಿಸಲು, ಕೇಂದ್ರ ಸರ್ಕಾರಿ ನೌಕರರಿಗೆ ಹೆಚ್ಚುವರಿ ಕಂತು ತುಟ್ಟಿ ಭತ್ಯೆ (DA) ಮತ್ತು ಪಿಂಚಣಿದಾರರಿಗೆ ತುಟ್ಟಿ ಪರಿಹಾರ (DR) ನೀಡಲು ಅನುಮೋದನೆ ನೀಡಿದೆ.

     

    ಈ ವರ್ಷದಲ್ಲಿ ಮಾರ್ಚ್ ತಿಂಗಳಿನಲ್ಲಿ 2% ರಷ್ಟು ಡಿಎ ಏರಿಕೆ ಮಾಡಲಾಗಿತ್ತು. ಈಗ ಮೊತ್ತೊಮ್ಮೆ ಡಿಕೆ ಏರಿಕೆ ಮಾಡಿ ಉದ್ಯೋಗಿಗಳಿಗೆ ಸಿಹಿ ಸುದ್ದಿ ನೀಡಿದೆ. ಇದು ಮೂಲ ವೇತನ/ಪಿಂಚಣಿಯ 55% ಹಾಲಿ ದರಕ್ಕಿಂತ 3% ಹೆಚ್ಚಳವಾಗಿದೆ. ತುಟ್ಟಿ ಭತ್ಯೆ ಮತ್ತು ತುಟ್ಟಿ ಪರಿಹಾರ ಎರಡರ ಹೆಚ್ಚಳದಿಂದಾಗಿ ಬೊಕ್ಕಸದ ಮೇಲೆ ಒಟ್ಟಾರೆಯಾಗಿ ವಾರ್ಷಿಕ 1,0083.96 ಕೋಟಿ ರೂ.ಗಳ ಹೊರೆ ಬೀಳಲಿದೆ. ಇದನ್ನೂ ಓದಿ: RSS ಶತಮಾನೋತ್ಸವ – ಭಾರತ ಮಾತೆಯ ಚಿತ್ರವಿರುವ 100 ರೂ. ನಾಣ್ಯ ಬಿಡುಗಡೆ

    7ನೇ ಕೇಂದ್ರ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ. ಜೀವನ ವೆಚ್ಚ ಏರಿಕೆಗೆ ಅನುಗುಣವಾಗಿ ತುಟ್ಟಿಭತ್ಯೆಯನ್ನು ಪ್ರತಿ ವರ್ಷ ನೀಡಲಾಗುತ್ತದೆ. ಕೇಂದ್ರದ ನಿರ್ಧಾರದಿಂದ ಮಾರು 49.19 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 68.72 ಲಕ್ಷ ಪಿಂಚಣಿದಾರರಿಗೆ ಪ್ರಯೋಜನವಾಗಲಿದೆ.

    ಗ್ರಾಹಕರ ಬೆಲೆ ಸೂಚ್ಯಂಕದ ಆಧಾರದ ಮೇಲೆ ವರ್ಷದಲ್ಲಿ 2 ಬಾರಿ ಕೇಂದ್ರ ಸರ್ಕಾರ ಡಿಎ ಏರಿಕೆ ಮಾಡುತ್ತೆ. ಪ್ರತಿ ವರ್ಷ ಜನವರಿ ಮತ್ತು ಜುಲೈ ತಿಂಗಳಿನಲ್ಲಿ ಡಿಎ, ಡಿಆರ್ ನೀಡಲಾಗುತ್ತದೆ.

  • ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ 4% ಹೆಚ್ಚಳ

    ಬೆಂಗಳೂರು: ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ (Karnataka Government) ಸಿಹಿ ಸುದ್ದಿ ನೀಡಿದೆ.

    ತುಟ್ಟಿ ಭತ್ಯೆಯನ್ನು (Dearness Allowance) 4% ಹೆಚ್ಚಿಸಿ ಸರ್ಕಾರ ಆದೇಶ ಪ್ರಕಟಿಸಿದೆ. ಜನವರಿಯಿಂದ ಪೂರ್ವಾನ್ವಯವಾಗುವಂತೆ ಇದು ಜಾರಿಯಾಗಲಿದೆ. ಇದನ್ನೂ ಓದಿ: ಉಡುಪಿ, ದ.ಕ, ಶಿವಮೊಗ್ಗದಲ್ಲಿ ಖಾಸಗಿ ಬಸ್‌ಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಿ: ಸುನಿಲ್ ಕುಮಾರ್

    ಇಲ್ಲಿಯವರೆಗೆ 31% ತುಟ್ಟಿ ಭತ್ಯೆ ಇತ್ತು. ಈಗ ಇದು 35% ಏರಿಕೆಯಾಗಿದೆ.

  • ನೀನು ಶಿಕ್ಷಕ ಅಲ್ಲ, ರಾಜಕಾರಣಿಯಂತೆ ಕಾಣುತ್ತೀಯ: ಕುರ್ತಾ, ಪೈಜಾಮಾ ಧರಿಸಿದ್ದಕ್ಕೆ ಮುಖ್ಯೋಪಾಧ್ಯಾನಿಗೆ ಡಿಎಂ ನಿಂದನೆ

    ನೀನು ಶಿಕ್ಷಕ ಅಲ್ಲ, ರಾಜಕಾರಣಿಯಂತೆ ಕಾಣುತ್ತೀಯ: ಕುರ್ತಾ, ಪೈಜಾಮಾ ಧರಿಸಿದ್ದಕ್ಕೆ ಮುಖ್ಯೋಪಾಧ್ಯಾನಿಗೆ ಡಿಎಂ ನಿಂದನೆ

    ಪಾಟ್ನಾ: ಶಾಲೆಯಲ್ಲಿ ಕುರ್ತಾ ಪೈಜಾಮಾ ಧರಿಸಿದ್ದಕ್ಕೆ ಶಾಲೆಯ ಮುಖ್ಯೋಪಾಧ್ಯಾಯನಿಗೆ ಜಿಲ್ಲಾ ಮ್ಯಾಜಿಸ್ಟ್ರೇಟ್(ಡಿಎಂ) ತರಾಟೆಗೆ ತೆಗೆದುಕೊಂಡ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಡಿಎಂ ಮುಖ್ಯೋಪಾಧ್ಯಾಯನಿಗೆ ನಿಂದಿಸುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದರೊಂದಿಗೆ, ಇದೀಗ ಶಿಕ್ಷಕರು ಭಾರತೀಯ ಉಡುಗೆ ಕುರ್ತಾ, ಪೈಜಾಮಾ ಧರಿಸುವುದು ಅಪರಾಧವೇ ಎಂಬ ಪ್ರಶ್ನೆಯನ್ನು ನೆಟ್ಟಿಗರು ಕೇಳುತ್ತಿದ್ದಾರೆ. ಇದನ್ನೂ ಓದಿ: ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ- ದಿಗ್ಭ್ರಮೆಗೊಂಡ ಪೊಲೀಸರು

    ಬಿಹಾರದ ಲಖಿಸರಾಯ್ ಜಿಲ್ಲೆಯ ಡಿಎಂ ಸಂಜಯ್ ಕುಮಾರ್ ಸಿಂಗ್ ಅವರು, ಬಾಲಕಿಯರ ಪ್ರಾಥಮಿಕ ಶಾಲೆಯ ಬಾಲ್‌ಗುಡಾರ್ ಅವರನ್ನು ಕುರ್ತಾ, ಪೈಜಾಮ ಧರಿಸಿದ್ದಕ್ಕಾಗಿ ಗದರಿದ್ದಾರೆ. ನೀನು ಶಿಕ್ಷಕ ಅಲ್ಲ ರಾಜಕಾರಣಿಯಂತೆ ಕಾಣಿಸುತ್ತಿದ್ದೀಯ ಎಂದು ನಿಂದಿಸಿದ್ದಾರೆ. ಇದನ್ನೂ ಓದಿ: ಶೋಭಾ ಕರಂದ್ಲಾಜೆ ನೋಡಲು ನೆರೆ ನೀರಿನಲ್ಲಿ ಈಜಿ ಬಂದ ಜನ

    ಸರ್ಕಾರದ ಆದೇಶದ ಮೇರೆಗೆ ಡಿಎಂ ಸಂಜಯ್ ಕುಮಾರ್ ಶಾಲೆಗೆ ತಪಾಸಣೆಗೆ ಬಂದಿದ್ದಾಗ ಮುಖ್ಯೋಪಾಧ್ಯಾಯರ ಉಡುಗೆ ಕಂಡು ಛೀಮಾರಿ ಹಾಕಿದ್ದಾರೆ. ಬಳಿಕ ಸ್ಥಳದಲ್ಲೇ ಅವರು ಶಿಕ್ಷಣಾಧಿಕಾರಿಗಳಿಗೆ ಕರೆ ಮಾಡಿ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸುವಂತೆ ಕೇಳಿದ್ದಾರೆ ಹಾಗೂ ವೇತನ ಕಡಿತಗೊಳಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • DA: ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3 ತುಟ್ಟಿ ಭತ್ಯೆ ಹೆಚ್ಚಳ

    DA: ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3 ತುಟ್ಟಿ ಭತ್ಯೆ ಹೆಚ್ಚಳ

    ನವದೆಹಲಿ: ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿ ಭತ್ಯೆಯನ್ನು (DA) ಶೇ.3 ರಷ್ಟು ಹೆಚ್ಚಿಸಲಾಗಿದೆ. ನೌಕರರು ಹಾಗೂ ಪಿಂಚಣಿದಾರರಿಗೆ ಇದರ ಲಾಭ ದೊರೆಯಲಿದೆ.

    ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಶೇ.3 ಡಿಎ ಹೆಚ್ಚಳಕ್ಕೆ ಬುಧವಾರ ಅನುಮೋದನೆ ನೀಡಲಾಯಿತು. ಇದನ್ನೂ ಓದಿ: ಮಮತಾ ಬ್ಯಾನರ್ಜಿ ʼಮಾಫಿಯಾʼ ಹಿಡಿತದಲ್ಲಿ ಬಂಗಾಳ: ಬಿಜೆಪಿ ವರದಿ

    ಡಿಎ ಮತ್ತು ಡಿಆರ್‌ನ ಹೊಸ ಭತ್ಯೆ 2022ರ ಜ.1ರಿಂದಲೇ ಜಾರಿಗೆ ಬರಲಿದೆ. ಪ್ರಸ್ತುತ ಮೂಲ ವೇತನದ ಶೇ.31ರಷ್ಟು ಮೊತ್ತವನ್ನು ತುಟ್ಟಿ ಭತ್ಯೆ ಅಥವಾ ಪರಿಹಾರವಾಗಿ ನೀಡಲಾಗುತ್ತಿದ್ದು, ಸರ್ಕಾರದ ಅನುಮೋದನೆಯ ಬಳಿಕ ಡಿಎ ಶೇ.34ಕ್ಕೆ ಏರಿಕೆಯಾದಂತಾಗಿದೆ.

    ಈ ಹೆಚ್ಚಳವು 7ನೇ ಕೇಂದ್ರೀಯ ವೇತನ ಆಯೋಗದ ಶಿಫಾರಸುಗಳನ್ನು ಆಧರಿಸಿದ ಸ್ವೀಕೃತ ಸೂತ್ರಕ್ಕೆ ಅನುಗುಣವಾಗಿದೆ. ತುಟ್ಟಿ ಭತ್ಯೆ ಹೆಚ್ಚಿಸುವ ನಿರ್ಧಾರದಿಂದಾಗಿ ಸರ್ಕಾರಕ್ಕೆ ವಾರ್ಷಿಕ 9,544.50 ಕೋಟಿ ರೂ. ಹೊರೆಯಾಗಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು

    ಡಿಎ ಹೆಚ್ಚಳವು ಕೇಂದ್ರ ಸರ್ಕಾರದ 47.68 ಲಕ್ಷ ನೌಕರರು ಮತ್ತು 68.62 ಲಕ್ಷ ಪಿಂಚಣಿದಾರರಿಗೆ 2022ರ ಜನವರಿ 1ರಿಂದಲೇ ಅನ್ವಯವಾಗಲಿದೆ.