Tag: ಡಿಕೆಸುರೇಶ್

  • ಟ್ಯಾಕ್ಸ್ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರಿಗೆ ಅನ್ಯಾಯ: ಡಿ.ಕೆ.ಸುರೇಶ್

    ಟ್ಯಾಕ್ಸ್ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರಿಗೆ ಅನ್ಯಾಯ: ಡಿ.ಕೆ.ಸುರೇಶ್

    ಬೆಂಗಳೂರು: ತೆರಿಗೆ ವಿಚಾರದಲ್ಲಿ ಕನ್ನಡಿಗರಿಗೆ ಅನ್ಯಾಯ ಅಗುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ (D.K.Suresh) ಹೇಳಿದ್ದಾರೆ.

    ಹಿಂದೂಗಳ ಟ್ಯಾಕ್ಸ್ ಹಿಂದೂಗಳಿಗೆ ಕೊಡಬೇಕು ಎಂಬ ಹರೀಶ್ ಪೂಂಜಾ (Harish Poonja) ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಒಳ್ಳೆಯದು, ಒಬೊಬ್ಬರು ಒಂದೊಂದಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಎಲ್ಲರೂ ಮೌನವಾಗಿದ್ರು. ಇಂದು ಚರ್ಚೆ ವ್ಯಾಖ್ಯಾನ ಬೇರೆ ಬೇರೆ ರೀತಿಯಲ್ಲಿ ನಡೆಯುತ್ತಿದೆ. ನಿರಂತರವಾಗಿ ಕರ್ನಾಟಕದ ಕನ್ನಡಿಗರಿಗೆ ಅನ್ಯಾಯ ಆಗುತ್ತಿದೆ. ಇದನ್ನೂ ಓದಿ:  ನಮ್ಮದು ಹೆದರುವ ಬ್ಲಡ್ ಅಲ್ಲ, ತಂಟೆಗೆ ಬಂದವರಿಗೆ ಸೆಟ್ಲ್ಮೆಂಟ್ ಆಗುತ್ತಿದೆ: ಡಿಕೆಶಿ

    ನಮ್ಮ ತೆರಿಗೆ ಪಾಲು ಎಷ್ಟಿದೆ ಎಂದು ವರದಿ ಮಾಡ್ತೀದ್ದೀರಾ. ಬೇರೆ ರಾಜ್ಯಕ್ಕೆ ಎಷ್ಟು ಟ್ಯಾಕ್ಸ್ ಕೊಡ್ತೀರಾ? ಕರ್ನಾಟಕ ರಾಜ್ಯಕ್ಕೆ ಎಷ್ಟು ತೆರಿಗೆ ಪಾಲು ಬರುತಿದೆ? ಯಾವೆಲ್ಲ ಯೋಜನೆಗಳು ಕರ್ನಾಟಕಕ್ಕೆ ಸಿಕ್ಕಿದೆ. ಎಷ್ಟು ವರ್ಷಗಳಿಂದ ಯೋಜನೆಗಳು ರಾಜ್ಯಕ್ಕೆ ಸಿಗುತ್ತಿದೆ? ಎಲ್ಲದರಲ್ಲೂ ತಡೆದುಕೊಳ್ಳಬೇಕಾ ನಾವು? ನ್ಯಾಷನಲ್ ಹೈವೇ ಜಾಸ್ತಿ ಆಗಿದೆ. ಯೋಜನೆ ತಡೆದಿದ್ದಾರೆ ಅಂದರೆ ಯಾರನ್ನು ಕೇಳಬೇಕು ಎಂದು ಲೇವಡಿ ಮಾಡಿದ್ದಾರೆ. ಇದನ್ನೂ ಓದಿ: ಮೋದಿಯವರ 10 ವರ್ಷ ರಾಜ್ಯಕ್ಕೆ ಅನ್ಯಾಯದ ಕಾಲ: ಸಿದ್ದರಾಮಯ್ಯ

    ನಾನೇನು ಭಾರತದ ವಿರೋಧಿ ಅಲ್ಲ. ಭಾರತದ ಒಕ್ಕೂಟದ ವ್ಯವಸ್ಥೆಯಲ್ಲಿ ಇದ್ದೇನೆ. ನಾನು ಸಂವಿಧಾನ ಆಶಯದ ಅಡಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನನ್ನನ್ನು ದೇಶದ್ರೋಹಿ ಎಂದು ಕೊಲ್ಲುವ ಇಚ್ಛಾಶಕ್ತಿ ಇದ್ದರೆ ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ. ಈಶ್ವರಪ್ಪ  (Eshwarappa) ಅವರೇ ಖಂಡಿತ ನಿಮ್ಮ ಮುಂದೆ ಬಂದು ನಿಲ್ಲುತ್ತೇನೆ ರೆಡಿಯಾಗಿ ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ: ಸಿದ್ದರಾಮಯ್ಯ

    ನಮಗೆ 13 ಪೈಸೆ ಸಾಕು ಅಂದರೆ ಅದನ್ನೇ ಹೇಳಲಿ. ನಾವೂ ಉದ್ಯೋಗ ಕೊಡ್ತಿದ್ದೇವೆ, ಬದುಕು ಕೊಡ್ತಿದ್ದೇವೆ, ನೀರು ಕೊಡ್ತಿದ್ದೇವೆ. ತೆರಿಗೆಯಲ್ಲಿ ಆಗುತ್ತಿರುವ ವಂಚನೆ ಎಷ್ಟು ದಿನ ಸಹಿಸಲಿ. ಬೇಕಾದರೆ ಆರ್.ಅಶೋಕ್ (R.Ashok)  ಚರ್ಚೆಗೆ ಬರಲಿ ಮಾತಾಡೋಣ ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:  ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿ: ಅಮಿತ್‌ ಶಾ ಘೋಷಣೆ

  • ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ಕೇಂದ್ರವನ್ನು ರಾಜ್ಯ ಸರ್ಕಾರದವರು ದೂರುವುದು ಸರಿಯಲ್ಲ, ಅಗತ್ಯವಿದ್ದಾಗಲೆಲ್ಲ ನೆರವು ನೀಡಿದೆ: ಪ್ರಜ್ವಲ್ ರೇವಣ್ಣ

    ಹಾಸನ: ಕೇಂದ್ರ ಸರ್ಕಾರವನ್ನು ರಾಜ್ಯ ಸರ್ಕಾರದವರು (State Government) ದೂರುವುದು ಸರಿಯಲ್ಲ. ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ ಎಂದು ಕಾಂಗ್ರೆಸ್ ವಿರುದ್ಧ ಸಂಸದ ಪ್ರಜ್ವಲ್ ರೇವಣ್ಣ  (Prajwal Revanna) ಕಿಡಿಕಾರಿದ್ದಾರೆ.

    ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ (Congress) ಪ್ರತಿಭಟನೆ ಕುರಿತು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಗಿದ್ದರೆ ಜನರ ತೆರಿಗೆ ಹಣವನ್ನು ಇವರ ಉಚಿತ ಗ್ಯಾರಂಟಿಗೆ ಬಳಸಿದ್ದಾರೆ. ಮುಂದೆ ತೆರಿಗೆ ಪಾವತಿದಾರರು ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೋರಾಟ ಮಾಡಿದರೆ ಏನು ಮಾಡೋದು ಎಂದು ಪ್ರಶ್ನಿಸಿದ್ದಾರೆ. ಕೇಂದ್ರ ಸರ್ಕಾರ ಅಗತ್ಯ ಇದ್ದಾಗಲೆಲ್ಲ ನೆರವು ನೀಡಿದೆ. ಕೇಂದ್ರದಿಂದ ಅನುದಾನ ಬಂದೇ ಇಲ್ಲ ಎಂಬ ಭಾವನೆ ಮೂಡಿಸುವುದು ತಪ್ಪು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ನಮ್ಮ ಹಕ್ಕು ಕೇಳಲು ದೆಹಲಿಯಲ್ಲಿ ಪ್ರತಿಭಟನೆ: ಸತೀಶ್ ಜಾರಕಿಹೊಳಿ

    ದಕ್ಷಿಣ ಭಾರತ ಪ್ರತ್ಯೇಕವಾಗಬೇಕು ಎಂಬ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಹೇಳಿಕೆಯನ್ನು ಖಂಡಿಸಿ, ದೇಶ ಒಡೆಯುವ ಹೇಳಿಕೆ ಯಾರೂ ಕೊಡಬಾರದು. ಭಾರತ ಒಂದಾಗಿರುತ್ತದೆ. ಭಾರತೀಯರು ಎಂದು ಹೇಳಿಕೊಳ್ಳಲು ನಮಗೆ ಹೆಮ್ಮೆ ಇದೆ. ಈ ರೀತಿಯ ಹೇಳಿಕೆ ಅವರಿಗೆ ಶೋಭೆ ತರಲ್ಲ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:  ಯಡಿಯೂರಪ್ಪರಿಂದ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆಗೆ ಚಾಲನೆ

    ಹೆಚ್.ಡಿ.ಕುಮಾರಸ್ವಾಮಿ ಕೇಸರಿ ಶಾಲು ಧರಿಸಿದ್ದಕ್ಕೆ ಮಾಜಿ ಪ್ರಧಾನಿ ದೇವೇಗೌಡ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ಕೇಸರಿ ಶಾಲು ಎಂದರೆ ಬಿಜೆಪಿ ಎಂದು ಯಾಕೆ ಭಾವಿಸಬೇಕು? ದೇಗುಲ ಉದ್ಘಾಟನೆ ವೇಳೆ ನಮ್ಮ ಕಾರ್ಯಕರ್ತರೇ ಕೇಸರಿ ಶಾಲು ಹಾಕಿರುತ್ತಾರೆ. ಅದು ಧಾರ್ಮಿಕ ಸಂಕೇತ ಅಷ್ಟೆ. ಕೇಸರಿ ಶಾಲು ಹಾಕಿರೋರು ಬಿಜೆಪಿ ಕಾರ್ಯಕರ್ತರು ಎನ್ನೋಕೆ ಆಗುತ್ತಾ. ಮಂಡ್ಯ ಪ್ರತಿಭಟನೆ ವೇಳೆ ಕುಮಾರಸ್ವಾಮಿಗೆ ಯಾರೋ ಕಾರ್ಯಕರ್ತ ಬಂದು ಕೇಸರಿ ಶಾಲು ಹಾಕಿದ್ದರು. ಇದಕ್ಕೆ ತಪ್ಪಾಗಿ ತಿಳಿಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಸವದಿ ಹುಟ್ಟುಹಬ್ಬದ ಫ್ಲೆಕ್ಸ್‌ನಲ್ಲಿ ಕೈ ಚಿಹ್ನೆ ಮಾಯ!

    ಹಾಸನ ರೈಲ್ವೆ ಮೇಲ್ಸೇತುವೆ ಕಾಮಗಾರಿ ಬಗ್ಗೆ ಮಾತನಾಡಿ, ಹಾಸನ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಕೊಡಲ್ಲ ಅಂತ ಹೇಳಿದೆ. ಆ ನಂತರ ಕೇಂದ್ರದ ಬಳಿ ಹೋಗಿದ್ದೇವೆ. ಮತ್ತೆರಡು ಮಾರ್ಗದ ಮೇಲ್ಸೇತುವೆಗಾಗಿ ಕೇಂದ್ರ ಸರ್ಕಾರದಲ್ಲಿ 48 ಕೋಟಿ ಅನುಮೋದನೆಗೆ ಹೋಗಿದೆ ಎಂದು ಹೇಳಿದರು. ಅದೇನು ಬಿಬಿಎಂಪಿ ಕೆಲಸ ಕೆಟ್ಟೋಯ್ತಾ, ಅದೇ ಚರಂಡಿಗೆ ಅದೇ ಕಲ್ಲು ಹಾಕೋಕೆ. ಹಣ ಕೊಡಿ ಎಂಬ ನಮ್ಮ ಮನವಿಗೆ, ಪತ್ರ ವ್ಯವಹಾರಕ್ಕೆ ನಾವು ಹಣ ಕೊಡಲು ಆಗಲ್ಲ ಎಂದು ಕಠಿಣವಾಗಿಯೇ ಉತ್ತರ ನೀಡಿದ್ದಾರೆ. ಸಹಕಾರವನ್ನೂ ಸಹ ಕೊಡಲ್ಲ ಎಂದಿದ್ದಾರೆ. ಅಲ್ಲಿಗೆ ಅದು ಮುಗಿದಿದೆ. ನಮಗೆ ರಾಜ್ಯ ಸರ್ಕಾರದಿಂದ ರೈಲ್ವೆ ಮೇಲ್ಸೇತುವೆಗೆ ಸಹಕಾರ ಬೇಕಾಗಿಲ್ಲ. ಮೂರು ಸಾರಿ ಕೊಡಲ್ಲ ಎಂದ ಮೇಲೆ ಬೇಡ ಎಂದು ನೇರವಾಗಿ ಹೇಳಿದ್ದಾರೆ. ಇದನ್ನೂ ಓದಿ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ – 11 ಮಂದಿ ದುರ್ಮರಣ, 60 ಮಂದಿಗೆ ಗಾಯ