ಇಂದು ಬೆಳಗ್ಗೆ 9.30ರ ಸುಮಾರಿಗೆ ಲುಮುಟ್ ನೌಕಾ ನೆಲೆಯಲ್ಲಿ ಈ ಅವಘಡ ಸಂಭವಿಸಿದೆ. ಸದ್ಯ ಹೆಲಿಕಾಪ್ಟರ್‌ಗಳ ಡಿಕ್ಕಿಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ತಂದೆಯ ಕಾರು ಹರಿದು ಪುಟ್ಟ ಕಂದಮ್ಮ ದುರ್ಮರಣ
ಮಹಿತಿಗಳ ಪ್ರಕಾರ, ರಾಯಲ್ ಮಲೇಷಿಯನ್ ನೇವಿ ಪರೇಡ್‌ಗಾಗಿ ಹೆಲಿಕಾಪ್ಟರ್‌ಗಳು ಪೂರ್ವಾಭ್ಯಾಸ ಮಾಡುತ್ತಿದ್ದಾಗ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಹೆಲಿಕಾಪ್ಟರ್‌ನಲ್ಲಿದ್ದ 10 ಮಂದಿ ಸಿಬ್ಬಂದಿ ಮೃತಪಟ್ಟಿರುವ ಬಗ್ಗೆ ನೌಕಾಪಡೆ ದೃಢಪಡಿಸಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.
ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದಾಗ ನಡೆದ ಘನಘೋರ ಅಪಘಾತದಿಂದ ಆಸ್ಪತ್ರೆ ಸೇರಿದ್ದಾರೆ. ರಸ್ತೆ ದಾಟುತ್ತಿದ್ದಾಗ ಕಾರೊಂದು ಡಿಕ್ಕಿ (Car Accident) ಹೊಡೆದಿದ್ದು, ಯುವತಿ ಎತ್ತರಕ್ಕೆ ಹಾರಿಬಿದ್ದಿದ್ದಾರೆ. ಈ ಘಟನೆಯ ಸಿಸಿಟಿವಿ ದೃಶ್ಯ ಬೆಚ್ಚಿಬೀಳುವಂತಿದೆ.
ವಿದ್ಯಾರ್ಥಿನಿಯನ್ನು ಸ್ವಾತಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿ ಮೂಲದ ಈಕೆ ಮೈಸೂರು ಬೆಂಗಳೂರು ಹೈವೇಯಲ್ಲಿರುವ ಪಿಜಿನಲ್ಲಿ ಇದ್ದರು. ಅದೇ ರಸ್ತೆಯಲ್ಲಿರೋ ಬಿಮ್ಸ್ ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಎ ಓದುತ್ತಿದ್ದರು. ಫೆಬ್ರವರಿ 2ರ ಮಧ್ಯಾಹ್ನ 1.30ರ ವೇಳೆಗೆ ಮೈಸೂರು ರಸ್ತೆ ಪಟ್ಟಣಗೆರೆ ಮೆಟ್ರೋ ನಿಲ್ದಾಣ (Metro Station) ಬಳಿಯ ಆರ್.ವಿ ಕಾಲೇಜು ಮುಂಭಾಗ ರಸ್ತೆ ದಾಟುತ್ತಿದ್ದ ಸ್ವಾತಿಗೆ, ಕೆಂಗೇರಿ ಕಡೆಯಿಂದ ಬಂದ ಕೆಂಪು ಕಾರು ಡಿಕ್ಕಿ ಹೊಡೆದಿದೆ. ಕೆಎ 51 ಎಂಎಚ್ 7575 ನಂಬರಿನ ಕಾರನ್ನು ಕೃಷ್ಣಭಾರ್ಗವ್ ನಿರ್ಲಕ್ಷ್ಯದಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ರಭಸಕ್ಕೆ ಸ್ವಾತಿ ಕಾರಿನಿಂದ ಮೇಲೆ ಹಾರಿ ಪಲ್ಟಿ ಹೊಡೆದು ಬಿದ್ದಿದ್ದಾರೆ. ಬೆನ್ನು, ಕಾಲು ಮೊಳೆ ಮುರಿದಿದ್ದು, ತಲೆಗೂ ತೀವ್ರ ಪೆಟ್ಟು ಬಿದ್ದಿದೆ. ತಕ್ಷಣವೇ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಮಾಡಿದ ಕಾರು ಚಾಲಕ ಕೃಷ್ಣಭಾರ್ಗವ್ ಆರ್.ಆರ್.ಕಾಲೇಜಿನಲ್ಲಿ ಮೊದಲ ವರ್ಷದ ಎಂಬಿಬಿಎಸ್ ಓದುತ್ತಿದ್ದಾನೆ. ಅಪಘಾತ ಬಳಿಕ ಕಾರು ನಿಲ್ಲಿಸದೇ ಯೂ ಟರ್ನ್ ಮಾಡಿಕೊಂಡು ಆರ್.ವಿ ಕಾಲೇಜಿನೊಳಗೆ ಹೋಗಿಬಿಟ್ಟಿದ್ದ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ ಆತನನ್ನ ಬಂಧಿಸಿದ್ದಾರೆ. ಇದನ್ನೂ ಓದಿ: ದೇವರ ದರ್ಶನ ಪಡೆದುಕೊಂಡ ಮರಳುವಾಗ ಕಂಟೇನರ್, ಕ್ರೂಸರ್ ವಾಹನ ಅಪಘಾತ- ಮಹಿಳೆ ಸಾವು
ಘಟನೆಗೆ ಬಿಬಿಎಂಪಿ ಹಾಗೂ ಟ್ರಾಫಿಕ್ ಪೊಲೀಸರ ನಿರ್ಲಕ್ಷ್ಯ ಕಾರಣ ಎನ್ನಲಾಗ್ತಿದೆ. ಯಾಕಂದ್ರೆ ಕೆಂಗೇರಿ ಕಡೆಯಿಂದ ಬರುವ ರಸ್ತೆಯಲ್ಲಿ ಮೊದಲು ಹಂಪ್ ಹಾಕಲಾಗಿತ್ತು. 8 ತಿಂಗಳ ಹಿಂದೆ ಪ್ರಧಾನಿ ಮೋದಿ (Narendra Modi) ಇದೇ ಮಾರ್ಗವಾಗಿ ಬಂದಾಗ ಹಂಪ್ ಅನ್ನ ತೆಗೆದುಹಾಕಲಾಗಿದೆ. ಅಲ್ಲದೇ ಸಿಗ್ನಲ್ ಕೂಡ ಅಳವಡಿಸಿಲ್ಲ. ಹಾಗಾಗಿ ವಾಹನಗಳು ಅತಿ ವೇಗದಿಂದ ಬಂದು ಈ ರೀತಿಯ ಅಪಘಾತಗಳು ಸಂಭವಿಸುತ್ತಿವೆ ಎಂದು ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ.
ಘಟನೆಗೆ ಪ್ರತಿಕ್ರಿಯೆ ಕೊಟ್ಟಿರುವ ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ವಿವಿಐಪಿ ಮೂವ್‍ಮೆಂಟ್ ಆದ್ಮೇಲೆ ಟ್ರಾಫಿಕ್‍ನವರು ಹೇಳಿದಂತೆ ಹಂಪ್ ಹಾಕುತ್ತಿದ್ದೇವೆ. ಇವತ್ತು ಘಟನೆ ನಡೆದಿರುವ ಜಾಗಕ್ಕೆ ಹಂಪ್ ಹಾಕುವಂತೆ ಟ್ರಾಫಿಕ್‍ನವರು ಮನವಿ ಕೊಟ್ಟಿರೋದು ಗೊತ್ತಿಲ್ಲ. ಇದನ್ನ ವಿಚಾರಣೆ ಮಾಡ್ತೇವೆ ಎಂದಿದ್ದಾರೆ.
Live Tv
[brid partner=56869869 player=32851 video=960834 autoplay=true]
ನವದೆಹಲಿ: ಸ್ಪೈಸ್‌ಜೆಟ್ ವಿಮಾನ ಕಂಬಕ್ಕೆ ಡಿಕ್ಕಿ ಹೊಡೆದಿರುವ ಘಟನೆ ದೆಹಲಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ನಡೆದಿದೆ. ಡಿಕ್ಕಿಯ ಪರಿಣಾಮ ವಿಮಾನದ ರೆಕ್ಕೆ ಹಾಗೂ ಕಂಬಕ್ಕೆ ಹಾನಿಯಾಗಿದೆ.
ಸೋಮವಾರ ಸ್ಪಯಸ್‌ಜೆಟ್ ಏಳು ವಿಮಾನಗಳನ್ನು ಪ್ರಾರಂಭಿಸುವುದಾಗಿ ಘೋಷಿಸಿತ್ತು. ಅವುಗಳಲ್ಲಿ ಗೋರಖ್‌ಪುರ-ವಾರಣಾಸಿಗೆ ಸಂಚರಿಸಲಿದ್ದ ವಿಮಾನವನ್ನು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಭಾನುವಾರ ಚಾಲನೆ ನೀಡಿದ್ದರು. ಇದನ್ನೂ ಓದಿ: ಚಂಡೀಗಢದ ಮೇಲಿನ ಹಕ್ಕಿಗಾಗಿ ಪಂಜಾಬ್ ವಿಲ್ ಫೈಟ್: ಭಗವಂತ್ ಮಾನ್
ಗೋರಖ್‌ಪುರ-ವಾರಣಾಸಿ ವಿಮಾನದ ಹೊರತಾಗಿ ಪ್ರಾದೇಶಿಕ ಸಂಪರ್ಕ ಯೋಜನೆಯ ಉಡಾನ್(UDAN) ಅಡಿಯಲ್ಲಿ ಹೈದರಾಬಾದ್-ಪುದುಚೇರಿ-ಹೈದರಾಬಾದ್, ವಾರಣಾಸಿ-ಕಾನ್ಪುರ್-ವಾರಣಾಸಿ ಹಾಗೂ ವಾರಣಾಸಿ-ಪಾಟ್ನಾ ವಿಮಾನಗಳನ್ನು ಪ್ರಾರಂಭಿಸುವುದಾಗಿ ಸ್ಪೈಸ್‌ಜೆಟ್ ಘೋಷಿಸಿತ್ತು.
ಚಿತ್ರದುರ್ಗ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಕಂದಮ್ಮ ಸೇರಿ ಮೂವರು ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟ ಘಟನೆ ತಡರಾತ್ರಿ ಚಿತ್ರದುರ್ಗದಲ್ಲಿ ನಡೆದಿದೆ.
ಮೃತರನ್ನು ಗೀತಾ(32), ಶಾರದಾ (60) ಹಾಗೂ ಧೃತಿ (5) ಎಂದು ಗುರುತಿಸಲಾಗಿದ್ದು, ಇವರು ಕುಂದಾಪುರ ಮೂಲದವರಾಗಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ 5 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರಿಗೆ ಗಾಯಗಳಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಬೈಕ್ ಹಾಗೂ ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಕೊಡಗಿನ ವಿರಾಜಪೇಟೆಯ ಪಂಜರುಪೇಟೆಯಲ್ಲಿ ನಡೆದಿದೆ. ಸದ್ಯ ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರರಿಬ್ಬರಿಗೂ ಬಲವಾಗಿ ಪೆಟ್ಟಾಗಿದ್ದು, ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಇಬ್ಬರು ಪ್ರಥಮ ಚಿಕಿತ್ಸೆ ಪಡೆದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ ರವಾನಿಸಲಾಗಿದೆ.
ವಿರಾಜಪೇಟೆಯಿಂದ ಗೋಣಿಕೊಪ್ಪ ಕಡೆ ಹೋಗುತ್ತಿದ್ದ ಸ್ಕೂಟರ್ ಹಾಗೂ ಬೈಕ್‍ಗೆ, ಗೋಣಿಕೊಪ್ಪ ಕಡೆಯಿಂದ ಬರುತ್ತಿದ್ದ ಕಾರು, ಪಟ್ಟಣದ ಪಂಜಾರುಪೇಟೆಯಲ್ಲಿ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸ್ಕೂಟರ್ ಚಾಲಕ ಪೊನ್ನಂಪೇಟೆ ವಕೀಲ ಪಿ.ಕೆ.ರವಿಂದ್ರ ಅವರ ಎಡಗಾಲಿಗೆ ಬಲವಾದ ಪೆಟ್ಟಾಗಿದೆ.
ಕೃಷಿ ಇಲಾಖೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಮೀಪದ ಕಿರುಮಕ್ಕಿಯ ನಿವಾಸಿಯಾದ ಬೈಕ್ ಸವಾರ ಅಶ್ವಿನ್ ಕುಮಾರ್ ಗೆ ಕಾಲು ಮತ್ತು ತಲೆ ಭಾಗಕ್ಕೆ ಪೆಟ್ಟಾಗಿದ್ದು ಗಾಯಾಳುಗಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಸಂಬಂಧ ಪ್ರಕರಣ ದಾಖಲಿಸಿದ ವಿರಾಜಪೇಟೆ ನಗರ ಠಾಣೆ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಕಾರನ್ನು ವಶಪಡಿಸಿಕೊಂಡು ಕಾರು ಚಾಲಕ ಎಸ್.ವಿನೋದ್ ಎಂಬಾತನ ಮೇಲೆ ಪ್ರಕರಣ ದಾಖಲಿಸಿರುವುದಾಗಿ ನಗರ ಠಾಣಾಧಿಕಾರಿ ಜಗದೀಶ್ ದೂಳ್‍ಶೆಟ್ಟಿ ತಿಳಿಸಿದ್ದಾರೆ.
ಗದಗ: ತಾಲೂಕಿನ ಹುಲಕೋಟಿ ರೂರಲ್ ಎಂಜಿನಿಯರಿಂಗ್ ಕಾಲೇಜ್ ಬಳಿ ಕಾರು ಹಾಗೂ ಲಾರಿ ಮಧ್ಯೆ ಡಿಕ್ಕಿ ವೇಳೆ ಇಬ್ಬರು ಸಾವನ್ನಪ್ಪಿದ್ದು, ಮೂವರಿಗೆ ಗಾಯಗಳಾಗಿವೆ.
ಕಾರು ಚಾಲಕ ಅನ್ವರ್ (57) ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಈಶ್ವರಗೌಡ ಪಾಟೀಲ್(54) ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಶಿವಾಬಾಯಿ, ರುದ್ರಗೌಡ ಹಾಗೂ ಮಹಾರಾಜ ಎಂಬವರಿಗೆ ಗಾಯಗಳಾಗಿವೆ.
ಮೃತ ಹಾಗೂ ಗಾಯಾಳು ಮೂಲತಃ ರೋಣ ತಾಲೂಕಿನ ಮಾಳವಾಡ ಗ್ರಾಮದವರು. ಸದ್ಯ ಧಾರವಾಡದಲ್ಲಿ ವಾಸವಿದ್ದರು. ಮಾಳವಾಡದ ತಮ್ಮ ಜಮೀನು ನೋಡಿಕೊಂಡು ಧಾರವಾಡಕ್ಕೆ ಮರಳುತ್ತಿರುವಾಗ ದಾರಿ ಮಧ್ಯೆ ಈ ದುರ್ಘಟನೆ ನಡೆದಿದೆ.
ಲಾರಿ ಹೊಡೆತಕ್ಕೆ ಕಾರು ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಪ್ಪಳ: ಬೈಕ್ ಹಾಗೂ ಟೆಂಪೋ ನಡುವೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ನಡೆದಿದೆ.
ಬೈಕ್ ಹಾಗೂ ಟೆಂಪೋ ನಡುವೆ ಡಿಕ್ಕಿ ಸಂಭವಿಸಿ, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಈ ವೇಳೆ ಸ್ಥಳದಲ್ಲೇ ನಾಲ್ವರು ಸಾನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬೈಕ್ ಸವಾರನ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ.
ಮಿನಿ ಬಸ್ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಅಗಸನಕೊಪ್ಪ ಗ್ರಾಮದಿಂದ ಕೊಪ್ಪಳ ತಾಲೂಕು ಹಿರೇಸಿಂಧೋಗಿಗೆ ಬರುತ್ತಿತ್ತು. ಈ ವೇಳೆ ಬೈಕ್ ವೇಗವಾಗಿ ಬಂದಿದ್ದರಿಂದ ಮಿನಿ ಬಸ್‍ಗೆ ಡಿಕ್ಕಿ ಹೊಡೆದಿದ್ದು, ಬಳಿಕ ಟೆಂಪೋ ಮರಕ್ಕೆ ಗುದ್ದಿದೆ. ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಿನಿ ಬಸ್ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
– ಯುವತಿಯನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಖಾದರ್
– ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಮಂಗಳೂರು: ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಕಾರಿನಡಿ ಸಿಲುಕಿದ ಯುವತಿಯನ್ನು ಧರಧರನೇ ಎಳೆದೊಯ್ದ ಭೀಕರ ಘಟನೆ ನಗರದ ಕದ್ರಿ ಕಂಬಳದಲ್ಲಿ ನಡೆದಿದೆ.
ಅಪಘಾತದ ಭೀಕರತೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಾರಿನಡಿ ಸಿಲುಕಿದ್ದ ಯುವತಿಯನ್ನು ಕೂಡಲೇ ಮಾಜಿ ಸಚಿವ ಯು.ಟಿ ಖಾದರ್ ಅವರು ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ.
ನಡೆದಿದ್ದೇನು?
ಯುವತಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದು, ಕಾರು ಬಂದು ಡಿಕ್ಕಿಯಾಗಿದೆ. ಕಾರು ದ್ವಿಚಕ್ರ ವಾಹನಕ್ಕೆ ಗುದ್ದಿದ ರಭಸಕ್ಕೆ ಯುವತಿ ಹಾರಿ ಕಾರಿನ ಎದುರು ಬಿದ್ದಿದ್ದಾಳೆ. ಈ ವೇಳೆ ಕಾರು ಆಕೆಯನ್ನು ಧರಧರನೇ ಎಳೆದುಕೊಂಡು ಮುಂದೆ ಚಲಿಸಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಮತ್ತು ಆ ಮಾರ್ಗವಾಗಿ ಬರುತ್ತಿದ್ದ ಪೊಲೀಸ್ ಸಿಬ್ಬಂದಿ ಕಾರನ್ನು ಮೇಲಕ್ಕೆತ್ತಿ ಅಡಿಗೆ ಬಿದ್ದಿದ್ದ ಯುವತಿಯನ್ನು ಹೊರಗಡೆ ತೆಗೆದಿದ್ದಾರೆ. ಯುವತಿಯ ತಲೆಗೆ ಮತ್ತು ಪಕ್ಕೆಲುಬುಗಳಿಗೆ ತೀವ್ರ ಗಾಯಗಳಾಗಿದೆ. ಇದೇ ಮಾರ್ಗವಾಗಿ ಬರುತ್ತಿದ್ದ ಶಾಸಕ ಯು.ಟಿ ಖಾದರ್ ಕೂಡಲೇ ಗಂಭೀರ ಗಾಯಗೊಂಡ ಯುವತಿಯನ್ನು ತಮ್ಮ ಕಾರಿನಲ್ಲಿ ಹಾಕಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದಿದ್ದಾರೆ.
ಯುವತಿ ಕಾರಿನಡಿಗೆ ಬಿದ್ದರೂ ಕಾರನ್ನು ಚಲಾಯಿಸಿದ ಕಾರು ಚಾಲಕನ ವಿರುದ್ಧ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ಕಾರು ಚಾಲಕನ ವಿರುದ್ಧ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ಗೇಟಿನ ಬಳಿ ನಿಂತಿದ್ದ ಕಾರಿಗೆ ಮಹಿಳಾ ಚಾಲಕಿಯೊಬ್ಬಳು ತನ್ನ ಕಾರಿನಿಂದ ಐದು ಬಾರಿ ಡಿಕ್ಕಿ ಹೊಡೆದು ಜಖಂ ಮಾಡಿರುವ ಘಟನೆ ಮುಂಬೈನ ಪುಣೆಯಲ್ಲಿ ನಡೆದಿದೆ.
ಮನೆಯ ಗೇಟ್‍ವೊಂದರ ಬಳಿ ನಿಲ್ಲಿಸಿದ್ದ ಇಂಡಿಕಾ ಕಾರಿಗೆ ಡಸ್ಟರ್ ಕಾರಿನಲ್ಲಿ ಬಂದ ಮಹಿಳೆಯೊಬ್ಬರು ಐದು ಬಾರಿ ಡಿಕ್ಕಿ ಹೊಡೆದಿರುವ ದೃಶ್ಯ ಸ್ಥಳದಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆದರೆ ಮಹಿಳೆ ಈ ರೀತಿ ಏಕೆ ಮಾಡಿದ್ದಾರೆ ಎಂದು ತಿಳಿದುಬಂದಿಲ್ಲ.
#WATCH A driver hits her car against a parked car repeatedly, in Pune's Ramnagar area. Additional CP, Pimpri-Chinchawad says, "A woman driver damaged three cars with her car in Ramnagar area; Case registered, further investigation underway." (20th August) pic.twitter.com/QE1kLrWsJF
ಈ ಘಟನೆ ಸಾರ್ವಜನಿಕರ ಎದುರೇ ನಡೆದಿದ್ದು, ನಿಂತಿದ್ದ ಕಾರಿಗೆ ಮೊದಲು ಹಿಂಬದಿಯಿಂದ ಮಹಿಳೆ ಕಾರಿನಲ್ಲಿ ಡಿಕ್ಕಿ ಹೊಡೆಸುತ್ತಾರೆ. ಆ ಬಳಿಕ ಮತ್ತೆ ವಾಪಸ್ ತಿರುಗಿಸಿಕೊಂಡು ಮುಂದಿನಿಂದಲೂ ಡಿಕ್ಕಿ ಹೊಡೆಯುತ್ತದೆ. ಹೀಗೆ ಜನರ ಮುಂದೆಯೇ ಒಂದು ಕಾರಿಗೆ ಐದು ಬಾರಿ ಡಿಕ್ಕಿ ಹೊಡೆದು ನಂತರ ವೇಗವಾಗಿ ಕಾರು ಚಲಾಯಿಸಿಕೊಂಡು ಸ್ಥಳದಿಂದ ಪರಾರಿಯಾಗುತ್ತಾರೆ. ಈ ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಈ ವಿಚಾರದ ಬಗ್ಗೆ ಮಾತನಾಡಿರುವ ಪುಣೆಯ ಹೆಚ್ಚುವರಿ ಪೊಲೀಸ್ ಆಯುಕ್ತ ಪಿಂಪ್ರಿ ಚಿಂಚವಾಡ್, ಈ ಕಾರು ಸೇರಿ ರಾಮ್‍ನಗರ ಪ್ರದೇಶದಲ್ಲಿ ಇನ್ನೂ ಮೂರು ಕಾರುಗಳನ್ನು ಜಖಂಗೊಳಿಸಿದ್ದಾರೆ. ಕಾರಿನ ಚಲಾಕಿ ವಿರುದ್ಧ ಪ್ರಕರಣವನ್ನು ನೋಂದಾಯಿಸಲಾಗಿದೆ, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.