Tag: ಡಿಕ್ಕಿ

  • ಟ್ರಕ್ ಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಇಬ್ಬರು ಗಂಭೀರ

    ಟ್ರಕ್ ಗೆ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರು- ಇಬ್ಬರು ಗಂಭೀರ

    ಬೆಂಗಳೂರು: ಚಲಿಸುತ್ತಿದ್ದ ಟ್ರಕ್‍ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಯುವಕರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಬೆಳ್ಳಂದೂರು ಬಳಿ ತಡರಾತ್ರಿ ನಡೆದಿದೆ.

    ಕಾರು ಚಲಾಯಿಸುತ್ತಿದ್ದ ಸಂಜೀವ್ ಕುಮಾರ್ ಸಿನ್ಹಾ ಹಾಗೂ ಆತನ ಸ್ನೇಹಿತನಿಗೆ ಗಂಭೀರ ಗಾಯವಾಗಿದ್ದು, ಯುವಕ ಸಂಜೀವ್ ಕುಮಾರ್ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದನು. ಈ ವೇಳೆ ಕಾರು ನಿಯಂತ್ರಣ ಕಳೆದುಕೊಂಡು ಟ್ರಕ್‍ಗೆ ಡಿಕ್ಕಿ ಹೊಡೆದಿದೆ.

    ಟ್ರಕ್‍ಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಅಪಘಾತದ ವೇಳೆ ಕಾರಿನಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದೆ. ಅಪಘಾತದ ಬಳಿಕ ಸ್ಥಳೀಯರು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಎಚ್‍ಎಸ್‍ಆರ್ ಲೇಔಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಇನ್ನೋವಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ- ಯುವತಿಗೆ ಗಾಯ

    ಇನ್ನೋವಾಕ್ಕೆ ದ್ವಿಚಕ್ರ ವಾಹನ ಡಿಕ್ಕಿ- ಯುವತಿಗೆ ಗಾಯ

    ಮಡಿಕೇರಿ: ಇನ್ನೋವಾಕ್ಕೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೊಬ್ಬಳು ಗಾಯಗೊಂಡಿರುವ ಘಟನೆ ನಡೆದಿದೆ.

    ಶೈಲಜಾ ಅಪಘಾತದಲ್ಲಿ ಗಾಯಗೊಂಡ ಯುವತಿ. ಶೈಲಜಾ ಕುಶಾಲನಗರ ಸಮೀಪದ ಕೂಡುಮಂಗಳೂರು ನವಗ್ರಾಮದ ಅಕ್ಕಿಮಂಟಿ ಎಂಬಲ್ಲಿನ ಚಂದ್ರ ಎಂಬವರ ಪುತ್ರಿಯಾಗಿದ್ದು, ಕೊಪ್ಪದ ಹಾರ್ಡ್ ವೇರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

    ಶೈಲಜಾ ಗುರುವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಮನೆಯಲ್ಲಿ ತುರ್ತು ಕೆಲಸವಿದೆ ಎಂದು ಹೇಳಿ ಎಂದಿಗಿಂತ ಬೇಗ ಮನೆ ಕಡೆಗೆ ಕೆ.ಎ. 12 ಕ್ಯೂ 2358 ದ್ವಿಚಕ್ರ ವಾಹನದಲ್ಲಿ ಹೊರಟಿದ್ದಾರೆ. ಮಧ್ಯಾಹ್ನ 3.20ಕ್ಕೆ ಮಾರ್ಗಮಧ್ಯದಲ್ಲಿ ಕುಶಾಲನಗರ ನಕ್ಷತ್ರ ಹೊಟೇಲ್ ಮುಂಭಾಗದಲ್ಲಿ ಇನ್ನೋವಾ ಕಾರೊಂದು ಎದುರಾಗಿದೆ.

    ತನಗಿಂತ ಮುಂದಿದ್ದ ವಾಹನವೊಂದನ್ನು ಹಿಂದಿಕ್ಕುವ ಭರಾಟೆಯಲ್ಲಿ ಶೈಲಜಾ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ಕಳೆದುಕೊಂಡು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೋವಾದ ಮುಂಭಾಗಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಶೈಲಜಾರವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಈ ಬಗ್ಗೆ ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾರು, ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಕಾರು, ಟ್ರ್ಯಾಕ್ಟರ್ ಮುಖಾಮುಖಿ ಡಿಕ್ಕಿ- ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ಬೆಂಗಳೂರು: ಹುಲ್ಲು ತುಂಬಿದ್ದ ಟ್ರ್ಯಾಕ್ಟರ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತಿಬ್ಬರು ಗಾಯಗೊಂಡಿರುವ ಘಟನೆ ನಗರದ ಹೊರವಲಯ ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿ ನಂದಗುಡಿ ಬಳಿ ನಡೆದಿದೆ.

    ಹುಲ್ಲು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಿಫ್ಟ್ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಿಂದ ಕಾರಿನಲ್ಲಿದ್ದ ನಂಜುಂಡಪ್ಪ(67) ಸ್ಥಳದಲ್ಲೇ ಸಾವನ್ನಪ್ಪಿದ್ದು, ಪತ್ನಿ ನಾರಾಯಣಮ್ಮ(55) ಹಾಗು ಸೊಸೆ ಶೀಲಾ ಗಂಭೀರ ಗಾಯಗೊಂಡಿದ್ದಾರೆ.

    ಗಂಭೀರವಾಗಿ ಗಾಯಗೊಂಡ ನಾರಾಯಣಮ್ಮ ಹಾಗೂ ಶೀಲಾರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದೆ. ಮೃತ ನಂಜುಂಡಪ್ಪ ಹಾಗೂ ಕುಟುಂಬದವರು ಮೂಲತಃ ಕೋಲಾರದ ಜಯನಗರ ನಿವಾಸಿಗಳು. ಕುಟುಂಬ ಸಮೇತ ಸಂಬಂಧಿಕರ ಮನೆಗೆ ಕಾರಿನಲ್ಲಿ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಚಾಲಕನ ಅತೀ ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

    ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ನಂದಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ

    ಹೊಸ ವರ್ಷ ಸಂಭ್ರಮಾಚರಣೆ ಮುಗಿಸಿ ಬರೋವಾಗ ಡಿವೈಡರ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ಮೂವರ ದುರ್ಮರಣ

    ಬೆಂಗಳೂರು: ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ನಡೆದಿದೆ.

    ಬೆಳಗಿನ ಜಾವ ಮೂರು ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದೆ. ಆಂಧ್ರದ ಪಶ್ಚಿಮ ಗೋದಾವರಿ ಮೂಲದ ಶ್ರೀನಾಥ್(40), ಶ್ರೀಲೇಖಾ(36), ಶ್ರೀಲತಾ(32) ಮೃತ ದುರ್ದೈವಿಗಳು.

    ಹೊಸ ವರ್ಷಾಚರಣೆ ಮುಗಿಸಿ ಆಂಧ್ರದಿಂದ ಬೆಂಗಳೂರಿನ ವೈಟ್ ಫೀಲ್ಡ್ ನತ್ತ 5 ಮಂದಿ ಕಾರಿನಲ್ಲಿ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್ ಬಳಿ ಬರುತ್ತಿದ್ದ ವೇಳೆ ಡಿವೈಡರ್‌ಗೆ ಟಾಟಾ ಸಫಾರಿ ಕಾರು ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಗಾಯಗೊಂಡ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ಘಟನೆ ಕುರಿತು ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎರಡು ಲಾರಿ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ- ಒಂದೇ ಕುಟುಂಬದ 10 ಮಂದಿ ದುರ್ಮರಣ

    ಎರಡು ಲಾರಿ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ- ಒಂದೇ ಕುಟುಂಬದ 10 ಮಂದಿ ದುರ್ಮರಣ

    ಗಾಂಧಿನಗರ: 2 ಲಾರಿ ಮತ್ತು ಎಸ್‍ಯುವಿ ಕಾರು ಮಧ್ಯೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ 10 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಗುಜರಾತ್‍ನ ಕಚ್ ಜಿಲ್ಲೆಯ ಭಚೌ ಹೆದ್ದಾರಿಯಲ್ಲಿ ಭಾನುವಾರದಂದು ನಡೆದಿದೆ.

    ಭಾನುವಾರ ಸಂಜೆ ಉಪ್ಪನ್ನು ಸಾಗಿಸುತ್ತಿದ್ದ ಲಾರಿಯೊಂದು ಹೆದ್ದಾರಿಯಲ್ಲಿದ್ದ ಡಿವೈಡರ್​ಗೆ ಡಿಕ್ಕಿ ಹೊಡೆದು ಬಳಿಕ ಪಕ್ಕದ ರಸ್ತೆಯಲ್ಲಿ ಬರುತ್ತಿದ್ದ ಎಸ್‍ಯುವಿ ಕಾರಿಗೆ ಡಿಕ್ಕಿ ಹೊಡೆಡಿದೆ. ಇದೇ ವೇಳೆ ಕಾರಿನ ಹಿಂದೆ ಇನ್ನೊಂದು ಲಾರಿ ಬಂದ ಪರಿಣಾಮ ಎರಡು ಲಾರಿಗಳ ನಡುವೆ ಕಾರು ಸಿಲುಕಿ ನಜ್ಜುಗುಜ್ಜಾಗಿದೆ.

    ಕಾರಿನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದು, 10 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಹಾಗೂ ಓರ್ವನ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದಲ್ಲಿ ಮೃತ ಪಟ್ಟವರೆಲ್ಲ ತಮ್ಮ ಹುಟ್ಟೂರು ಭಚ್‍ಗೆ ಹೊಸ ವರ್ಷ ಆಚರಿಸಲು ತೆರಳುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

    ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಗುಜರಾತ್‍ನ ಸಿಎಂ ವಿಜಯ್ ರೂಪಾಣಿ ಮೃತರ ಕುಟುಂಬಕ್ಕೆ ಪರಿಹಾರವನ್ನು ನೀಡಲಾಗುವುದು, ಯಾವುದೇ ಸಹಾಯ ಬೇಕಾದರೂ ಸರ್ಕಾರ ಮಾಡಲು ಸಿದ್ಧವಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಬೋಗಿಬೆಲ್ ಸೇತುವೆ ನೋಡುವ ಸಂಭ್ರಮದಲ್ಲಿ ಜೀವ ಕಳೆದುಕೊಂಡ ಬಾಲಕ..!

    ಬೋಗಿಬೆಲ್ ಸೇತುವೆ ನೋಡುವ ಸಂಭ್ರಮದಲ್ಲಿ ಜೀವ ಕಳೆದುಕೊಂಡ ಬಾಲಕ..!

    – ಅಪಘಾತದ ವಿಡಿಯೋ ವೈರಲ್

    ಗುವಾಹಟಿ: ದೇಶದಲ್ಲೇ ಅತ್ಯಂತ ಉದ್ದವಾಗಿರುವ ಅಸ್ಸಾಂನ ಬೋಗಿಬೆಲ್ ಸೇತುವೆಯನ್ನು ನೋಡುವ ಸಂಭ್ರಮದಲ್ಲಿ 7 ವರ್ಷದ ಬಾಲಕನೊಬ್ಬ ತನ್ನ ಜೀವವನ್ನೇ ಕಳೆದುಕೊಂಡಿದ್ದು, ಅಪಘಾತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಮೃತಪಟ್ಟ ಬಾಲಕನನ್ನು ಸೌರಭ್ ಮೋರನ್ ಎಂದು ಗುರುತಿಸಲಾಗಿದ್ದು, ಈತ ತಿನ್ಸುಕ್ ಬಾಘಜನ್‍ನ ಗ್ರಾಮದ ನಿವಾಸಿಯಾಗಿದ್ದಾನೆ. ಹೊಸದಾಗಿ ಉದ್ಘಾಟನೆಗೊಂಡಿದ್ದ ಸೇತುವೆಯನ್ನು ನೋಡಲು ಬಾಲಕ ತನ್ನ ಕುಟುಂಬದೊ0ದಿಗೆ ಆಗಮಿಸಿದ್ದನು. ಸೇತುವೆಯ ಇನ್ನೊಂದು ಬದಿಗೆ ಹೋಗಲು ರಸ್ತೆ ಮೇಲೆ ಏಕಾಏಕಿ ಓಡಿದ್ದಾನೆ. ಈ ವೇಳೆ ಕಾರೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡು ಬಿದ್ದಿದ್ದನು. ಕೂಡಲೇ ಬಾಲಕನನ್ನು ದಿಬ್ರುಘರ್‍ನ ಅಸ್ಸಾಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಬಾಲಕ ಮಾರ್ಗಮಧ್ಯೆಯೇ ಅಸುನೀಗಿದ್ದಾನೆ.

    ಇದೇ ಕ್ರಿಸ್‍ಮಸ್ ದಿನದಂದು ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂನ ಬೋಗಿಬೆಲ್ ಸೇತುವೆಯನ್ನು ಲೋಕಾರ್ಪಣೆ ಮಾಡಿದ್ದರು. ಆದರೆ ಇಂದು ಸೇತುವೆ ನೋಡುವ ಭರದಲ್ಲಿ ಬಾಲಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಬಾಲಕನಿಗೆ ಕಾರು ಡಿಕ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಓದಿ: ದೇಶದ ಉದ್ದದ ರೈಲು, ರಸ್ತೆ ಸೇತುವೆ ಉದ್ಘಾಟಿಸಿ ಕಾಂಗ್ರೆಸ್ಸಿಗೆ ಟಾಂಗ್ ಕೊಟ್ಟ ಮೋದಿ

    ವಿಡಿಯೋದಲ್ಲಿ ಏನಿದೆ?
    ಕಾರಿನಲ್ಲಿದ್ದ ಪ್ರಯಾಣಿಕರು ಸೇತುವೆ ಮೇಲಿನ ತಮ್ಮ ಮೊದಲ ಪ್ರಯಾಣವನ್ನು ಮೊಬೈಲ್ ನಲ್ಲಿ ಸೆರೆ ಹಿಡಿಯುತ್ತಿದ್ದರು. ಈ ವೇಳೆ ರಸ್ತೆಯ ಬದಿ ನಿಂತಿದ್ದ ಮತ್ತೊಂದು ಕಾರಿನ ಮುಂಭಾಗದಿಂದ ಬಾಲಕನೋರ್ವ ಏಕಾಏಕಿ ಬಲಬದಿಗೆ ಓಡಿ ಬಂದಿದ್ದಾನೆ. ಕಾರ್ ಅಡ್ಡ ಇದ್ದ ಕಾರಣ ಚಾಲಕನಿಗೆ ಬಾಲಕ ಬಂದಿದ್ದು ಗಮನಕ್ಕೆ ಬಂದಿರಲಿಲ್ಲ. ಪರಿಣಾಮ ಕಾರ್ ಬಾಲಕನಿಗೆ ಗುದ್ದಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರೈಲು ಡಿಕ್ಕಿ- ಟ್ರ್ಯಾಕ್ ಮ್ಯಾನ್, ಗ್ಯಾಂಗ್ ಮ್ಯಾನ್ ದುರ್ಮರಣ

    ರೈಲು ಡಿಕ್ಕಿ- ಟ್ರ್ಯಾಕ್ ಮ್ಯಾನ್, ಗ್ಯಾಂಗ್ ಮ್ಯಾನ್ ದುರ್ಮರಣ

    ಸಾಂದರ್ಭಿಕ ಚಿತ್ರ

    ಕೋಲಾರ: ರೈಲು ಡಿಕ್ಕಿ ಹೊಡೆದ ಪರಿಣಾಮ ರೈಲ್ವೇ ಟ್ರ್ಯಾಕ್ ಮ್ಯಾನ್ ಹಾಗೂ ಗ್ಯಾಂಗ್ ಮ್ಯಾನ್ ಮೃತಪಟ್ಟಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ವರದಾಪುರ ಬಳಿಯ ರೈಲ್ವೇ ಗೇಟ್ ಬಳಿ ನಡೆದಿದೆ.

    ರಾಜಸ್ಥಾನ ಮೂಲದ ಹರೀ ಸಿಂಗ್ ಮೀನಾ (30) ಹಾಗೂ ಕುಪ್ಪಂ ತಾಲೂಕಿನ ಬಂಡಪಲ್ಲಿ ಗ್ರಾಮದ ರಾಮಸ್ವಾಮಿ(28) ಮೃತಪಟ್ಟ ರೈಲ್ವೇ ನೌಕರರು. ಬುಧವಾರ ರಾತ್ರಿ ಎಂದಿನಂತೆ ಇಬ್ಬರೂ ನೌಕರರು ರೈಲ್ವೇ ಟ್ರ್ಯಾಕ್ ಗಳನ್ನು ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ವೇಗವಾಗಿ ಬಂದ ರೈಲು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ರೈಲ್ವೇ ಪೊಲೀಸರು ಹಾಗೂ ಸ್ಟೇಷನ್ ಮಾಸ್ಟರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಂಗಾರಪೇಟೆ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಸುಟ್ಟು ಕರಕಲಾದ ಸವಾರ

    ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ- ಸ್ಥಳದಲ್ಲೇ ಸುಟ್ಟು ಕರಕಲಾದ ಸವಾರ

    ಕೋಲಾರ: ಖಾಸಗಿ ಬಸ್ ಗೆ ಬೈಕ್ ಡಿಕ್ಕಿ ಹೊಡಿದ ಪರಿಣಾಮ ಬೆಂಕಿ ಹೊತ್ತಿ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಭೀಕರ ಘಟನೆ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ.

    ಬಂಗಾರಪೇಟೆಯ ವಿವೇಕಾನಂದ ನಗರದ ಯುವಕ ನೀರಜ್(20) ಸ್ಥಳದಲ್ಲಿ ಸುಟ್ಟು ಕರಕಲಾದ ಬೈಕ್ ಸವಾರ. ಬೆಳ್ಳಂಬೆಳಗ್ಗೆ ನೀರಜ್ ಹಾಗೂ ಆತನ ಸ್ನೇಹಿತ ಬೈಕ್‍ನಲ್ಲಿ ತೆರೆಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಖಾಸಗಿ ಬಸ್‍ಗೆ ಬೈಕ್ ಡಿಕ್ಕಿ ಹೊಡಿದಿದೆ. ಈ ಭೀಕರ ಅಪಘಾತವಾದ ಪರಿಣಾಮ ಬೈಕ್‍ಗೆ ಬೆಂಕಿ ಹೊತ್ತಿಕೊಂಡು ನೀರಜ್ ಸ್ಥಳದಲ್ಲೇ ಸುಟ್ಟು ಕರಕಲಾಗಿ ಸಾವನ್ನಪ್ಪಿದ್ದಾನೆ.

    ಬೈಕ್‍ನಲ್ಲಿದ್ದ ಇನ್ನೋರ್ವ ಯುವಕ ಮಾತ್ರ ಅಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಸುಮಾರು ಎರಡುವರೆ ಲಕ್ಷ ಮೌಲ್ಯದ ಯಮಹ ಆರ್1 ಬೈಕ್ ಅಪಘಾತದಲ್ಲಿ ಸುಟ್ಟು ಕರಕಲಾಗಿದೆ. ಘಟನೆ ಕುರಿತು ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ- ಬಾಲಕಿ ಸ್ಥಳದಲ್ಲೇ ಸಾವು

    ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ- ಬಾಲಕಿ ಸ್ಥಳದಲ್ಲೇ ಸಾವು

    ಮೈಸೂರು: 13 ವರ್ಷದ ಬಾಲಕಿಯನ್ನು ಕೆಎಸ್‌ಆರ್‌ಟಿಸಿ ಬಸ್ ಬಲಿ ತೆಗೆದುಕೊಂಡಿದೆ. ಜಿಲ್ಲೆಯ ನಂಜನಗೂಡಿನ ಚಾಮರಾಜನಗರ ರಸ್ತೆಯ ಮೇದಿಗರ ಬೀದಿ ಬಳಿ ಕೆಎಸ್‌ಆರ್‌ಟಿಸಿ ಬಸ್ ಬಾಲಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

    ಅಶ್ವಿನಿ ಅಪಘಾತದಲ್ಲಿ ಮೃತಪಟ್ಟ ಬಾಲಕಿ. ಮೃತ ಅಶ್ವಿನಿ ನಂಜನಗೂಡು ಪಟ್ಟಣದ ಮೇದಿಗರ ಬೀದಿ ನಿವಾಸಿ ಸಿದ್ದರಾಜು ಎಂಬವರ ಪುತ್ರಿ. ಬಸ್ ಬಾಲಕಿಗೆ ಡಿಕ್ಕಿ ಹೊಡೆದ ವೇಳೆ ಆಕ್ರೋಶಗೊಂಡ ಜನರು ಕಲ್ಲು ತೂರಾಟ ನಡೆಸಿ ಬಸ್ಸಿನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿದ್ದಾರೆ.

    ಈ ವೇಳೆ ಗಾಯಗೊಂಡ ಬಸ್ ಚಾಲಕನನ್ನು ನಂಜನಗೂಡು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನು ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಭಾರೀ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ. ಈ ಸಂಬಂಧ ನಂಜನಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಮಿಕಲ್ ಕಂಟೇನರ್, ಲಾರಿ ನಡುವೆ ಭೀಕರ ಅಪಘಾತ- ಓರ್ವ ಸಜೀವ ದಹನ

    ಕೆಮಿಕಲ್ ಕಂಟೇನರ್, ಲಾರಿ ನಡುವೆ ಭೀಕರ ಅಪಘಾತ- ಓರ್ವ ಸಜೀವ ದಹನ

    ಸಾಂದರ್ಭೀಕ ಚಿತ್ರ

    ಬೆಳಗಾವಿ (ಚಿಕ್ಕೋಡಿ): ಕೆಮಿಕಲ್ ತುಂಬಿದ ಕಂಟೇನರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ವಿಟಾ ಪಟ್ಟಣದಲ್ಲಿ ನಡೆದಿದೆ.

    ವಿಟಾ ಪಟ್ಟಣದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ತುಂಬಿದ ಕಂಟೇನರ್ ಲಾರಿಗೆ ಎದುರಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ವಾಹನಗಳು ಸ್ಫೋಟಗೊಂಡಿದೆ. ಎರಡೂ ಲಾರಿಗಳಿಗೂ ಬೆಂಕಿ ಹತ್ತಿದ ಪರಿಣಾಮ ವಾಹನದಲ್ಲಿ 5 ರಿಂದ 6 ಮಂದಿ ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ಸದ್ಯ ಅಪಘಾತ ಸ್ಥಳದಲ್ಲಿ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಘಟನೆ ಕುರಿತು ವಿಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv