Tag: ಡಿಕ್ಕಿ

  • ಕಲ್ಲುಕಂಬಕ್ಕೆ ಕಾರ್ ಡಿಕ್ಕಿ- ಓರ್ವ ಸಾವು, ಇಬ್ಬರಿಗೆ ಗಾಯ

    ಕಲ್ಲುಕಂಬಕ್ಕೆ ಕಾರ್ ಡಿಕ್ಕಿ- ಓರ್ವ ಸಾವು, ಇಬ್ಬರಿಗೆ ಗಾಯ

    ಚಿಕ್ಕಮಗಳೂರು: ಕೆರೆ ಏರಿಯ ಬದಿಯಲ್ಲಿದ್ದ ಕಲ್ಲುಕಂಬಕ್ಕೆ ಕಾರ್ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಅಂತರಗಟ್ಟೆ ಗ್ರಾಮದ ಬಳಿ ನಡೆದಿದೆ.

    ಶನಿವಾರ ರಾತ್ರಿ ಅಜ್ಜಂಪುರದಿಂದ ಕಡೂರಿಗೆ ಬರುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಮೂವರು ಯುವಕರಲ್ಲಿ 21 ವರ್ಷದ ಕಿರಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರೋ ಇಬ್ಬರನ್ನ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದರು ಎಂದು ಹೇಳಲಾಗುತ್ತಿದೆ.

    ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಡಿವೈಡರ್ ಗೆ ಕಾರು ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

    ಡಿವೈಡರ್ ಗೆ ಕಾರು ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು

    ಹಾವೇರಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯವಾದ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಕಮದೋಡ ಗ್ರಾಮದಲ್ಲಿ ನಡೆದಿದೆ.

    ಮೃತರನ್ನ ಗುರುರಾಜ ರಾಯಚೂರು (76) ಮತ್ತು ರಾಮಣ್ಣ ರಾಯಚೂರು (59) ಎಂದು ಗುರುತಿಸಲಾಗಿದೆ. ಗಾಯಾಳುವನ್ನ ತಾಲೂಕು ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ಮೃತರು ಹಾವೇರಿ ಜಿಲ್ಲೆ ಸವಣೂರು ಮೂಲದವರಾಗಿದ್ದು, ಸವಣೂರಿನಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ಬೆಳಗಿನ ಜಾವ ಈ ದುರ್ಘಟನೆ ನಡೆದಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಲಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲಗೇರಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

  • ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ- ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯ

    ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ- ಇಬ್ಬರು ಅಧಿಕಾರಿಗಳಿಗೆ ಗಂಭೀರ ಗಾಯ

    ಕೊಪ್ಪಳ: ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಅಧಿಕಾರಿಗಳು ತೀವ್ರವಾಗಿ ಗಾಯವಾಗಿರೋ ಘಟನೆ ಕೊಪ್ಪಳ ದಲ್ಲಿ ನಡೆದಿದೆ.

    ಕುಷ್ಟಗಿ ತಾಲೂಕಿನ ತಾವರಗೇರಾದ ಕಳಮಳ್ಳಿ ಕ್ರಾಸ್ ಬಳಿ ರಸ್ತೆ ಅಪಘಾತ ಸಂಭವಿಸಿದ್ದು, ಗಂಗಾವತಿ ನಗರ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಉದಯರವಿ ಹಾಗೂ ಮೈಸೂರು ಕೆಎಸ್‍ಆರ್ ಟಿಸಿ ಡಿಪೋ ಮ್ಯಾನೇಜರ್ ಷಡಕ್ಷರಯ್ಯರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

    ಗಾಯಗೊಂಡ ಅಧಿಕಾರಿಗಳನ್ನು ಗಂಗಾವತಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆ ಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವನಿಸಿದ್ದಾರೆ. ಕಾರಿನಲ್ಲಿದ್ದ ಹುಸೇನ್ ಎನ್ನುವರಿಗೂ ಗಾಯಗಳಾಗಿವೆ. ತಾವರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಂಗ್ಳೂರಿನಲ್ಲಿ ಬೈಕ್ ಗಳ ನಡುವೆ ಡಿಕ್ಕಿ- ಒಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    ಬೆಂಗ್ಳೂರಿನಲ್ಲಿ ಬೈಕ್ ಗಳ ನಡುವೆ ಡಿಕ್ಕಿ- ಒಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    ಬೆಂಗಳೂರು: ಬೈಕ್‍ ಗಳ ನಡುವೆ ಡಿಕ್ಕಿಯಾಗಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನ ಕೆಆರ್ ಮಾರುಕಟ್ಟೆಯ ಮೇಲ್ಸೆತುವೆ ಮೇಲೆ ನಡೆದಿದೆ.

    ಸತೀಶ್ ಪಂಡಿತ್ ಮೃತ ದುರ್ದೈವಿ. ಸ್ವಾತಿ ಪಂಡಿತ್ ಹಾಗೂ ಇನ್ನೊಬ್ಬ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದೆ. ಬೆಳಗ್ಗೆ ಒಂಭತ್ತು ಗಂಟೆಗೆ ಈ ಘಟನೆ ನಡೆದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಸ್ವಾತಿ ತಮ್ಮ ತಂದೆ ಸತೀಶ್ ಜೊತೆಯಲ್ಲಿ ಬೈಕಿನಲ್ಲಿ ತೆರಳುತ್ತಿದ್ದಾಗ ಹಿಂಬಂದಿಯಿಂದ ಇನ್ನೊಂದು ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಸತೀಶ್ ಪಂಡಿತ್ ಬೈಕ್ ನಿಯಂತ್ರಣ ಕಳೆದುಕೊಂಡು ಕೆಳಗಡೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ತಂದೆ ಸ್ಥಳದಲ್ಲೇ ಸಾವನಪ್ಪಿದ್ದರೆ ಮಗಳು ಸ್ವಾತಿಯ ಪರಿಸ್ಥಿತಿ ಗಂಭೀರವಾಗಿದೆ.

    ಹೊಸಕೆರೆಹಳ್ಳಿ ದ್ವಾರಕ ನಗರ ನಿವಾಸಿಯಾದ ಗೋವಿಂದ ದಿವಾಕರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಸಿಟಿ ಮಾರ್ಕೆಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ವೋಲ್ವೋ ಬಸ್ ಡಿಕ್ಕಿ- ಬಸ್ ಚಾಲಕ ದುರ್ಮರಣ

    ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ವೋಲ್ವೋ ಬಸ್ ಡಿಕ್ಕಿ- ಬಸ್ ಚಾಲಕ ದುರ್ಮರಣ

    ಚಿಕ್ಕಬಳ್ಳಾಪುರ: ಕೆಟ್ಟು ನಿಂತಿದ್ದ ಕ್ಯಾಂಟರ್ ಗೆ ಹಿಂದಿನಿಂದ ವೋಲ್ವೋ ಬಸ್ ಡಿಕ್ಕಿಯಾದ ಪರಿಣಾಮ ಬಸ್ ಚಾಲಕ ಮೃತಪಟ್ಟ ಘಟನೆ ನಡೆದಿದೆ.

    ಈ ಘಟನೆ ರಾಷ್ಟ್ರೀಯ ಹೆದ್ದಾರಿ 7ರ ಆರೂರು ಗ್ರಾಮದ ಬಳಿ ನಡೆದಿದೆ. ಮೃತ ದುರ್ದೈವಿ ಚಾಲಕನನ್ನು ಕಲ್ಲಪ್ಪ(45) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಸದ್ಯ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ವೋಲ್ವೋ ಬಸ್ ಬೆಂಗಳೂರಿನಿಂದ ಹೈದರಾಬಾದ್ ಕಡೆ ಸಂಚರಿಸುತ್ತಿತ್ತು ಎಂಬುದಾಗಿ ತಿಳಿದುಬಂದಿದೆ. ದಟ್ಟ ಮಂಜು ಆವರಿಸಿದ್ದ ಹಿನ್ನಲೆಯಲ್ಲಿ ಸರಿಯಾಗಿ ದಾರಿ ಕಾಣದೆ ನಿಂತಿದ್ದ ಕ್ಯಾಂಟರ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

    ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • ಕಲಬುರಗಿಯಲ್ಲಿ ಭೀಕರ ಅಪಘಾತ- ಕಾರ್, ಟಂಟಂ ಡಿಕ್ಕಿಯಾಗಿ ಇಬ್ಬರ ದುರ್ಮರಣ

    ಕಲಬುರಗಿಯಲ್ಲಿ ಭೀಕರ ಅಪಘಾತ- ಕಾರ್, ಟಂಟಂ ಡಿಕ್ಕಿಯಾಗಿ ಇಬ್ಬರ ದುರ್ಮರಣ

    ಕಲಬುರಗಿ: ಕಾರ್ ಹಾಗೂ ಟಂಟಂ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪೂರನ ಚವಡಾಪೂರ ಗ್ರಾಮದ ಬಳಿ ನಡೆದಿದೆ.

    ಘಟನೆಯಲ್ಲಿ ಟಂಟಂನಲ್ಲಿದ್ದ ಗಾಣಗಾಪುರ ನಿವಾಸಿಗಳಾದ ಬೋರಮ್ಮ ಶಿರೂರಮಠ ಮತ್ತು ಮಹೇಶ ಶೆಟ್ಟಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಹಲವರಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಇಂದು ಮುಂಜಾನೆ ಕಲಬುರಗಿಯಿಂದ ಚಿನ್ಮಯಗಿರಿ ದೇವಸ್ಥಾನದ ಜಾತ್ರೆಗೆ ತಮ್ಮ ಟಂಟಂ ವಾಹನದಲ್ಲಿ ಹೊರಟಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

    ಈ ಕುರಿತು ಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

  • ದೇವಯ್ಯ ಪಾರ್ಕ್ ಬಳಿ ಫ್ಲೈಓವರ್ ಮೇಲೆ ಕಾರುಗಳ ಡಿಕ್ಕಿ- ಕೆಳಗೆ ಬೀಳಬೇಕಿದ್ದ ಕಾರು ಜಸ್ಟ್ ಮಿಸ್

    ದೇವಯ್ಯ ಪಾರ್ಕ್ ಬಳಿ ಫ್ಲೈಓವರ್ ಮೇಲೆ ಕಾರುಗಳ ಡಿಕ್ಕಿ- ಕೆಳಗೆ ಬೀಳಬೇಕಿದ್ದ ಕಾರು ಜಸ್ಟ್ ಮಿಸ್

    ಬೆಂಗಳೂರು: ಮಲ್ಲೇಶ್ವರಂ ನ ದೇವಯ್ಯ ಪಾರ್ಕ್ ಬಳಿಯ ಫ್ಲೈಓವರ್ ಮೇಲೆ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಫ್ಲೈಓವರ್ ಕೆಳಗೆ ಬೀಳಬೇಕಿದ್ದ ಕಾರು ಸ್ವಲ್ಪದರಲ್ಲೇ ಪಾರಾಗಿದೆ.

    ಫ್ಲೈಓವರ್ ಮೇಲೆ ಬರುತ್ತಿದ್ದ ಫೋರ್ಡ್ ಫಿಗೊ ಕಾರಿಗೆ ಹಿಂಬದಿಯಿಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಿಂದ ಕೆಳಗಿಳಿದು ಚಾಲಕ ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಬಾರಿ ಅನಾಹುತ ತಪ್ಪಿದೆ. ಕಾರು ಫ್ಲೈಓವರ್ ಕೆಳಗೆ ಬೀಳದೆ ತಡೆಗೋಡೆಯ ಮೇಲೆ ಸಿಲುಕಿಕೊಂಡಿದೆ.

    ಘಟನೆ ನಡೆದ ಸ್ಥಳಕ್ಕೆ ಮಲ್ಲೇಶ್ವರಂ ಸಂಚಾರಿ ಪೊಲೀಸರು ಭೇಟಿ ನೀಡಿದ್ದು, ಕಾರನ್ನು ತೆರವುಗೊಳಿಸಿದ್ದಾರೆ. ಇತ್ತ ಡಿಕ್ಕಿ ಹೊಡೆದ ಸ್ವಿಫ್ಟ್ ಕಾರಿನ ಚಾಲಕ ಪರಾರಿಯಾಗಿದ್ದಾರೆ. ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ: ಯಶವಂತಪುರ ಮೇಲ್ಸೇತುವೆಯಿಂದ ಕೆಳಗೆ ಬಿದ್ದ ಕ್ಯಾಂಟರ್- ಚಾಲಕನಿಗೆ ಗಂಭೀರ ಗಾಯ

  • ಹಬ್ಬ, ಮಗನ ಹುಟ್ಟುಹಬ್ಬ ಮುಗಿಸಿ ಬೆಂಗ್ಳೂರಿಗೆ ಮರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ತಂದೆ ಸಾವು!

    ಹಬ್ಬ, ಮಗನ ಹುಟ್ಟುಹಬ್ಬ ಮುಗಿಸಿ ಬೆಂಗ್ಳೂರಿಗೆ ಮರಳುತ್ತಿದ್ದಾಗ ಬೈಕ್ ಡಿಕ್ಕಿಯಾಗಿ ತಂದೆ ಸಾವು!

    ಚಿಕ್ಕಬಳ್ಳಾಪುರ: ದ್ವಿಚಕ್ರ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಗರ ಹೊರವಲಯದ ಶೀತಲೀಕರಣ ಕೇಂದ್ರದ ಬಳಿ ನಡೆದಿದೆ.

    ಅಪಘಾತದಲ್ಲಿ ಆಂಧ್ರದ ಪರಿಗಿ ಮೂಲದ ಬೈಕ್ ಸವಾರ ಕಾರ್ತಿಕ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಬೈಕ್ ಸವಾರ ರವಿಕುಮಾರ್ ಅವರ ಕಾಲು ಮುರಿದಿದೆ. ಗಾಯಾಳು ಗೌರಿಬಿದನೂರು ಮೂಲದ ರವಿಕುಮಾರ್ ರನ್ನ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೃತ ಕಾರ್ತಿಕ್ ಬೆಂಗಳೂರಿನಲ್ಲಿ ಮೆಡಿಕಲ್ ರೆಪ್ರಿಸೆಂಟೀವ್ ಆಗಿ ಕೆಲಸ ಮಾಡುತ್ತಿದ್ದು, ಹಬ್ಬದ ಪ್ರಯುಕ್ತ ಸ್ವಗ್ರಾಮ ಆಂಧ್ರಕ್ಕೆ ಬಂದಿದ್ದರು. ಕಳೆದ ರಾತ್ರಿಯಷ್ಟೇ ಮಗನ ಬರ್ತ್‍ಡೇ ಆಚರಣೆ ಮಾಡಿದ್ದ ಮೃತ ಕಾರ್ತಿಕ್, ಮಗ ಹಾಗೂ ಪತ್ನಿಯನ್ನ ಸ್ವಗ್ರಾಮದಲ್ಲೇ ಬಿಟ್ಟು ಬೆಂಗಳೂರಿಗೆ ಬೈಕ್ ನಲ್ಲಿ ಮರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

    ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮತ್ತೊಬ್ಬಳ ಜೊತೆ ಪತಿಯನ್ನು ನೋಡಿ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತಾ?

    ಮತ್ತೊಬ್ಬಳ ಜೊತೆ ಪತಿಯನ್ನು ನೋಡಿ ರೊಚ್ಚಿಗೆದ್ದ ಪತ್ನಿ ಮಾಡಿದ್ದೇನು ಗೊತ್ತಾ?

    ವಾಷಿಂಗ್ಟನ್: ತನ್ನ ಪತಿ ಬೇರೊಬ್ಬಳ ಜೊತೆ ಇದ್ದುದ್ದನ್ನು ನೋಡಿ ರೊಚ್ಚಿಗೆದ್ದ ಪತ್ನಿ, ಗಂಡನ ಕಾರಿಗೆ ತನ್ನ ಕಾರನ್ನು ಡಿಕ್ಕಿ ಹೊಡೆದು ಕೋಪವನ್ನು ತೀರಿಸಿಕೊಂಡ ಘಟನೆ ಅಮೆರಿಕದ ಚಿಲಿಯಾನ್ ಪ್ರದೇಶದ ಅರಿಕಾ ನಗರದಲ್ಲಿ ನಡೆದಿದೆ.

    ಪತಿ ಶಾಪ್‍ನಿಂದ ಬೇರೊಬ್ಬ ಹುಡುಗಿಯನ್ನು ಪಿಕ್ ಮಾಡುತ್ತಿರುವುದನ್ನು ಹೆಂಡತಿ ನೋಡಿದ್ದಾಳೆ. ಇದನ್ನು ನೋಡಿ ಸಿಟ್ಟಾದ ಪತ್ನಿ ಶಾಪ್ ಮುಂದೆ ಪಾರ್ಕ್ ಮಾಡಿದ್ದ ಪತಿಯ ಕಪ್ಪು ಬಣ್ಣದ ಕಾರಿನ ಮುಂಭಾಗಕ್ಕೆ ತನ್ನ ಕೆಂಪು ಬಣ್ಣದ ಬಿಎಂಡ್ಲ್ಯೂ ಕಾರಿನಿಂದ ಮನಸೋ ಇಚ್ಛೆ ಡಿಕ್ಕಿ ಹೊಡೆಯಲು ಪ್ರಾರಂಭಿಸಿದ್ದಾಳೆ.

    ರಸ್ತೆಯಲ್ಲಿ ಓಡಾಡುತ್ತಿದ್ದ ಜನರು ಅದನ್ನು ವಿಡಿಯೋ ಮಾಡಿದ್ದಾರೆ. ಪತ್ನಿಯ ಸ್ವಲ್ಪ ದೂರ ಹೋಗುವುದು ಮತ್ತೆ ಬಂದು ಪತಿಯ ಕಾರಿಗೆ ಡಿಕ್ಕಿ ಹೊಡೆಯುವುದು. ಅಲ್ಲೇ ಇದ್ದ ಪತಿ ಇದನ್ನು ನೋಡಿ ತಡೆಯಲು ಪ್ರಯತ್ನಿಸಿದ್ದಾನೆ. ಆದರೆ ಗಂಡನ ಮಾತನ್ನು ಲೆಕ್ಕಿಸದೇ ಮತ್ತೆ ಮತ್ತೆ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾಳೆ.

    ಪತಿ ಸೆನೋರಿಟಾ ಎಂದು ಕೂಗುತ್ತಾ, ಅವಳ ಕಾರಿನ ಬಾಗಿಲ ಬಳಿ ಹೋಗಿ ನಿಲ್ಲಿಸಲು ಪ್ರಯತ್ನಿಸಿದ್ದಾನೆ. ಆದರೆ ಯಾವುದಕ್ಕೂ ಜಗ್ಗದೆ ಪತ್ನಿ ಇಷ್ಟ ಬಂದಂತೆ ಡಿಕ್ಕಿ ಹೊಡೆದಿದ್ದಾಳೆ. ಈ ಸಂದರ್ಭದಲ್ಲಿ ಪತಿಯ ಕಾರು ಅಲ್ಲದೇ ಅವಳ ಕಾರು ಕೂಡ ಡ್ಯಾಮೇಜ್ ಆಗಿದೆ.

    ಪತಿ ತಡೆಯಲು ಪ್ರಯತ್ನಿಸಿ ಕೊನೆಗೆ ಸುಮ್ಮನೆ ನಿಂತು ನೋಡುತ್ತಿದ್ದರೆ, ಅಲ್ಲೆ ಇದ್ದ ವ್ಯಕ್ತಿಯೊಬ್ಬ ಈ ಇಬ್ಬರ ಗಲಾಟೆಯನ್ನು ನೋಡಿ ನಿಲ್ಲಿಸಲು ಪ್ರಯತ್ನಿಸಿದರು.

  • ಸ್ಪಿರಿಟ್ ತುಂಬಿದ್ದ ಟ್ಯಾಂಕರ್‍ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರ ಸಾವು, 30 ಜನರಿಗೆ ಗಾಯ

    ಸ್ಪಿರಿಟ್ ತುಂಬಿದ್ದ ಟ್ಯಾಂಕರ್‍ಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರ ಸಾವು, 30 ಜನರಿಗೆ ಗಾಯ

    ಹಾವೇರಿ: ಸ್ಪಿರಿಟ್ ತುಂಬಿದ್ದ ಟ್ಯಾಂಕರ್ ಗೆ ಹಿಂಬದಿಯಿಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 30 ಜನರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಹಲಗೇರಿ ಬ್ರಿಡ್ಜ್ ಬಳಿ ನಡೆದಿದೆ.

    ಬಸ್‍ನಲ್ಲಿದ್ದ ರಾಜಸ್ಥಾನ ಮೂಲದ 54 ವರ್ಷ ವಯಸ್ಸಿನ ಅರವಿಂದ ಕೊಠಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತ ಮಹಿಳೆ ಹೆಸರು ತಿಳಿದುಬಂದಿಲ್ಲ. ಗಾಯಾಳುಗಳನ್ನು ರಾಣೇಬೆನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

    ಖಾಸಗಿ ಬಸ್ ಮುಂಬೈನಿಂದ ಮೈಸೂರಿಗೆ ಹೊರಟ್ಟಿತ್ತು. ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗ್ತಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ನಿಂದ ಸ್ಪಿರಿಟ್ ಸೋರಿಕೆಯಾಗಿದೆ. ಹೀಗಾಗಿ ಸ್ಥಳದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಕ್ರೇನ್ ಮೂಲಕ ವಾಹನವನ್ನ ಬೇರೆ ಕಡೆಗೆ ವರ್ಗಾವಣೆ ಮಾಡಲಾಗುತ್ತಿದೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರಾಣೇಬೆನ್ನೂರು ಪೊಲೀಸರು ಹಾಗೂ ಎಸ್ಪಿ ಕೆ.ಪರಶುರಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.