Tag: ಡಿಜಿಎಫ್‌ಟಿ

  • ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಭಾರತ

    ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಭಾರತ

    ನವದೆಹಲಿ: ಭಾರತ ಸರ್ಕಾರ ಗೋಧಿ ರಫ್ತಿಗೆ ಈ ಹಿಂದೆ ನಿಷೇಧ ಹೇರಿದ ಬಳಿಕ ಇದೀಗ ಮೈದಾ, ರವೆ ಸೇರಿದಂತೆ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದೆ.

    Wheat

    ಡೈರೆಕ್ಟರೇಟ್ ಜನರಲ್ ಆಫ್ ಫಾರಿನ್ ಟ್ರೇಡ್ (ಡಿಜಿಎಫ್‍ಟಿ)ಯ ಅಧಿಸೂಚನೆಯ ಪ್ರಕಾರ, ಈ ನಿರ್ಧಾರವು ಜುಲೈ 12 ರಿಂದ ಜಾರಿಗೆ ಬರಲಿದೆ. ಗೋಧಿ ಮತ್ತು ಗೋಧಿ ಹಿಟ್ಟಿನ ರಫ್ತಿನ ಕುರಿತಾಗಿ ಜುಲೈ 6 ರಂದು ಹೊರಡಿಸಲಾದ ಅಧಿಸೂಚನೆಯ ಪ್ರಕಾರ ಈಗಾಗಲೇ ರಫ್ತಿಗೆ ಸಿದ್ಧಗೊಂಡಿರುವ ಹಿಟ್ಟಿಗೆ ಸಚಿವಾಲಯದ ಸಮಿತಿಯಿಂದ ಪೂರ್ವಾನುಮತಿ ಪಡೆಯಬಹುದಾಗಿದೆ. ಆದರೆ ಜುಲೈ 12 ರಿಂದ ಸಂಪೂರ್ಣ ನಿಷೇಧ ಹೇರಲಾಗಿದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ರಫ್ತು ನಿಲ್ಲಿಸಿದ ಭಾರತ – ಗೋಧಿಗಾಗಿ ರಷ್ಯಾ ಕಡೆ ಮುಖ ಮಾಡಿದ ಬಾಂಗ್ಲಾದೇಶ

    WHEAT

    ಗೋಧಿ ಮತ್ತು ಗೋಧಿ ಹಿಟ್ಟಿನ ಜಾಗತಿಕ ಪೂರೈಕೆ ಅಡೆತಡೆಗಳಿಂದಾಗಿ ಅನೇಕ ಏರುಪೇರು ಕಾಣುತ್ತಿದೆ. ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ದೇಶದ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿ ಈ ಕ್ರಮಕ್ಕೆ ಮುಂದಾಗಿದೆ. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿದೆ. ಇದನ್ನೂ ಓದಿ: ಆರ್ಥಿಕ ಹಿಂಜರಿತ ಭೀತಿ – ಅಂತಾರಾಷ್ಟ್ರೀಯ ತೈಲಬೆಲೆ ಭಾರೀ ಇಳಿಕೆ

    ಗೋಧಿ ರಫ್ತು ನಿಷೇಧವಾದಾಗ ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ಈ ನಿರ್ಧಾರದ ವಿರುದ್ಧ ಮಾತನಾಡಿದ್ದವು. ಇದೀಗ ಗೋಧಿ ಹಿಟ್ಟಿನ ರಫ್ತಿಗೆ ನಿಷೇಧ ಹೇರಿದ ಬಳಿಕ ಇನ್ನಷ್ಟು ಅಪಸ್ವರ ಕೇಳಿ ಬರುತ್ತಿದೆ. ಕೇಂದ್ರ ಸರ್ಕಾರವು ಗೋಧಿಯ ರಫ್ತು ನೀತಿಯನ್ನು ನಿಷೇಧಿತ ವರ್ಗದ ಅಡಿಯಲ್ಲಿ ತಿದ್ದುಪಡಿ ಮಾಡಿದ ಬಳಿಕ ಈ ನಿರ್ಧಾರಕ್ಕೆ ಮುಂದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ಕೊರೊನಾ ಲಸಿಕೆಯಂತೆ ಗೋಧಿ ರಫ್ತು ಮಾಡಲಾಗುದಿಲ್ಲ: ಭಾರತ

    ಪ್ಯಾರಿಸ್: ಭಾರತದಲ್ಲಿ ಗೋಧಿ ರಫ್ತು ನಿಷೇಧಿಸಿದ ಬೆನ್ನಲ್ಲೇ ವಿಶ್ವ ಮಾರುಕಟ್ಟೆಯಲ್ಲಿ ಗೋಧಿ ಬೆಲೆಯು ದಾಖಲೆ ಪ್ರಮಾಣದಲ್ಲಿ ಏರಿಕೆ ಆಗಿದೆ. ಈ ಹಿನ್ನೆಲೆ ಭಾರತ ವಿಶ್ವಸಂಸ್ಥೆ(ಯುಎನ್)ಯಲ್ಲಿ ಮೊದಲ ಬಾರಿಗೆ ಗೋಧಿ ರಫ್ತು ನಿಷೇಧದ ಬಗ್ಗೆ ಮಾತನಾಡಿದೆ.

    ಮೇ 13ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ(ಡಿಜಿಎಫ್‍ಟಿ) ಕಳೆದ ವಾರದ ಅಧಿಸೂಚನೆಯಲ್ಲಿ, ಭಾರತವು ಕೇಂದ್ರ ಸರ್ಕಾರ ನೀಡುವ ಅನುಮತಿಯ ಆಧಾರದ ಮೇಲೆ ಗೋಧಿ ರಫ್ತಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದೆ. ಈ ಹಿನ್ನೆಲೆ ಮೇ ತಿಂಗಳ ಯುಎನ್ ಸೆಕ್ಯುರಿಟಿ ಕೌನ್ಸಿಲ್ ಯುಎಸ್ ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕನ್ ಅವರ ಅಧ್ಯಕ್ಷತೆಯಲ್ಲಿ ನಡೆದ ‘ಜಾಗತಿಕ ಆಹಾರ ಭದ್ರತಾ ಕರೆ ಟು ಆಕ್ಷನ್’ ಕುರಿತು ಸಚಿವರ ಸಭೆ ನಡೆಯಿತು. ಈ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಮುರಳೀಧರನ್ ಮಾತನಾಡಿದರು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    ಪಾಶ್ಚಿಮಾತ್ಯ ದೇಶಗಳನ್ನು ಕರೆ ನೀಡಿದ ಭಾರತವು, ಕೋವಿಡ್-19 ಲಸಿಕೆಗಳ ವಿಷಯದಲ್ಲಿ ಭಾರತಕ್ಕೆ ದೊಡ್ಡಮಟ್ಟದಲ್ಲಿ ಖರ್ಚು ಆಗಿದೆ. ಇದನ್ನು ನಾವು ನೋಡಿದ್ದೇವೆ. ಗೋಧಿಯು ಕೋವಿಡ್-19 ಲಸಿಕೆಗಳ ದಾರಿಯಲ್ಲಿ ಹೋಗಬಾರದು. ಕೊರೊನಾ ಲಸಿಕೆಯಂತೆ ಗೋಧಿಯನ್ನು ರಫ್ತು ಮಾಡಲಾಗುವುದಿಲ್ಲ.  ಏಕೆಂದರೆ ಯುಎನ್‍ನಲ್ಲಿ ಆಹಾರದ ಬೆಲೆಗಳಲ್ಲಿ ನ್ಯಾಯಸಮ್ಮತವಲ್ಲದೆ ಹೆಚ್ಚಳವಾಗುತ್ತಿದೆ. ಇದರಿಂದ ಆಹಾರ ಸಂಗ್ರಹಣೆಯಲ್ಲಿ ತಾರತಮ್ಯ ಉಂಟಾಗಬಹುದು ಎಂಬ ಬಗ್ಗೆ ಕಳವಳ ಉಂಟಾಗುತ್ತಿದೆ. ಆಹಾರ ಧಾನ್ಯಗಳ ವಿಷಯಕ್ಕೆ ಬಂದಾಗ ನಾವೆಲ್ಲರೂ ಪ್ರವೇಶದ ಪ್ರಾಮುಖ್ಯತೆಯನ್ನು ಸಮರ್ಪಕವಾಗಿ ತಿಳಿದುಕೊಳ್ಳುವುದು ಅವಶ್ಯಕ ಎಂದು ಹೇಳಿದರು.

    ಕಡಿಮೆ ಆದಾಯ ಹೊಂದಿದ ದೇಶಗಳು ಇಂದು ಹೆಚ್ಚುತ್ತಿರುವ ವೆಚ್ಚ ಮತ್ತು ಆಹಾರ ಧಾನ್ಯಗಳ ತೊಂದರೆಗಳಿಂದ ಹಲವು ಸವಾಲುಗಳನ್ನು ಎದುರಿಸುತ್ತಿವೆ. ಸಾಕಷ್ಟು ದಾಸ್ತಾನುಗಳನ್ನು ಹೊಂದಿರುವ ಭಾರತದಂತಹ ದೇಶಗಳು ಸಹ ಆಹಾರದ ಬೆಲೆಗಳಲ್ಲಿ ಅಸಮರ್ಥನೀಯ ಹೆಚ್ಚಳವನ್ನು ಕಂಡಿವೆ. ಈ ನಿರ್ಧಾರವು ಗೋಧಿ ಮತ್ತು ಗೋಧಿ ಹಿಟ್ಟಿನ ಚಿಲ್ಲರೆ ಬೆಲೆಗಳನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಇದು ಕಳೆದ ಒಂದು ವರ್ಷದಲ್ಲಿ ಸರಾಸರಿ 14-20 ಶೇಕಡಾ ಏರಿಕೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕೋಟ್ಯಂತರ ರೂಪಾಯಿ ತೆರಿಗೆ ಕಟ್ಟುವ ಶಾಸಕನ ತಾಯಿ BPL ಹೋಲ್ಡರ್

  • ನೋಂದಾಯಿತ ಪ್ರಮಾಣದ ಗೋಧಿ ರಫ್ತಿಗೆ ಕೇಂದ್ರಸರ್ಕಾರ ನಿರ್ಧಾರ

    ನೋಂದಾಯಿತ ಪ್ರಮಾಣದ ಗೋಧಿ ರಫ್ತಿಗೆ ಕೇಂದ್ರಸರ್ಕಾರ ನಿರ್ಧಾರ

    ನವದೆಹಲಿ: ಉತ್ಪಾದನೆ ಇಳಿಕೆಯಾದ ಹಿನ್ನೆಲೆಯಲ್ಲಿ ಭಾರತವು ಗೋಧಿ ರಫ್ತಿಗೆ ನಿಷೇಧ ಹೇರಿತ್ತು. ಆದರೆ ನಿಷೇಧ ಹೇರುವುದಕ್ಕೂ ಮುನ್ನವೇ ಕಸ್ಟಮ್ಸ್ ಪ್ರಾಧಿಕಾರದಲ್ಲಿ ನೋಂದಾಯಿಸಲಾದ ನಿಗದಿತ ಪ್ರಮಾಣದ ಗೋಧಿಯನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

    ಮೇ 13ಕ್ಕೂ ಮುನ್ನವೇ ಕಸ್ಟಮ್ಸ್ ವ್ಯವಸ್ಥೆಗಳಲ್ಲಿ ನೋಂದಾಯಿಸಲಾಗಿದ್ದು, ಅಂತಹ ಸರಕುಗಳನ್ನು ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿಸಿದೆ ಎಂದು ವಾಣಿಜ್ಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಉಕ್ರೇನ್‌ ಯುದ್ಧ – ಭಾರತದಿಂದ ಈಜಿಪ್ಟ್‌ಗೆ ರಫ್ತು ಆಗಲಿದೆ ಗೋಧಿ

    Wheat 1

    ಜೊತೆಗೆ ಗೋಧಿ ರಫ್ತು ಮಾಡಲು ತೊಡಗಿರುವ ಮೇರಾ ಇಂಟರ್‌ನ್ಯಾಶನಲ್ ಇಂಡಿಯಾ ಪ್ರೈ.ಲಿ. ಈಜಪ್ಟ್‌ 61,500 ಮೆಟ್ರಿಕ್ ಟನ್ ಲೋಡ್ ಗೋಧಿ ರಫ್ತಿಗೆ ಅನುಮತಿ ನೀಡಿದೆ. ಅದರಲ್ಲಿ 44,340 ಮೆಟ್ರಿಕ್ ಟನ್ ಈಗಾಗಲೇ ಲೋಡ್ ಮಾಡಲಾಗಿದೆ. ಇನ್ನು 17,160 ಮೆಟ್ರಿಕ್ ಟನ್ ಮಾತ್ರ ಬಾಕಿ ಉಳಿದಿದೆ. ಕೇಂದ್ರ ಸರ್ಕಾರ ಪೂರ್ಣ ಪ್ರಮಾಣದ ಗೋಧಿಯನ್ನು ಸರಬರಾಜು ಮಾಡಲು ನಿರ್ಧರಿಸಿದೆ ಎಂದು ಹೇಳಿದೆ.

    WHEAT

    ರಫ್ತಿಗೆ ನಿಷೇಧ ಹೇರಿದ್ದು ಏಕೆ?: ಭಾರತದಲ್ಲಿ ಉಷ್ಣತೆಯಲ್ಲಿ ಏರಿಕೆ ಕಂಡಿದ್ದರಿಂದ ಗೋಧಿ ಉತ್ಪಾದನೆಗೆ ಹೊಡೆತ ಬಿದ್ದಿತ್ತು. ಇದರ ಜೊತೆಗೆ ಕಡಿಮೆ ಉತ್ಪಾದನೆ ಮತ್ತು ಜಾಗತಿಕ ಬೆಲೆಗಳು ತೀವ್ರವಾಗಿ ಹೆಚ್ಚಿರುವುದು ಸೇರಿದಂತೆ ತನ್ನದೇ ಆದ 1.4 ಶತಕೋಟಿ ಜನರ ಆಹಾರ ಭದ್ರತೆಯ ಬಗ್ಗೆ ಭಾರತ ಚಿಂತಿಸಿತ್ತು. ಇದರಿಂದಾಗಿ ರಫ್ತು ವ್ಯಾಪಾರಕ್ಕೆ ನಿಷೇಧದ ನಿರ್ಧಾರವನ್ನು ತೆಗೆದುಕೊಂಡಿತ್ತು. ಇದನ್ನೂ ಓದಿ: ರಫ್ತಿಗೆ ನಿಷೇಧ ಹೇರಿದ ಭಾರತ- ಗೋಧಿ ಬೆಲೆ ದಾಖಲೆ ಮಟ್ಟದಲ್ಲಿ ಏರಿಕೆ

    WHEAT EXPORT

    ಭಾರತದ ಈ ನಿರ್ಧಾರವನ್ನು US, ಕೆನಡಾ, EU ಮತ್ತು ಆಸ್ಟ್ರೇಲಿಯಾ ಸೇರಿದಂತೆ ಅನೇಕ ಪಾಶ್ಚಿಮಾತ್ಯ ರಾಷ್ಟ್ರಗಳು ತರಾಟೆಗೆ ತೆಗೆದುಕೊಂಡಿದೆ. ಆದರೆ ಭಾರತದಲ್ಲಿ ಗೋಧಿಯ ರಫ್ತು ನಿಷೇಧ ಮಾಡಿರುವುದಕ್ಕೆ ಚೀನಾ ಬೆಂಬಲ ನೀಡಿದೆ. ಅಭಿವೃದ್ಧಿಶೀಲ ರಾಷ್ಟ್ರಗಳನ್ನು ದೂಷಿಸುವುದು ಸರಿಯಲ್ಲ. G7 ರಾಷ್ಟ್ರಗಳು ತಮ್ಮ ರಫ್ತುಗಳನ್ನು ಹೆಚ್ಚಿಸುವ ಮೂಲಕ ಆಹಾರ ಮಾರುಕಟ್ಟೆ ಪೂರೈಕೆಯನ್ನು ಸ್ಥಿರಗೊಳಿಸಲು ಏಕೆ ಮುಂದಾಗುವುದಿಲ್ಲ ಎಂದು ಚೀನಾ ಪ್ರಶ್ನಿಸಿದೆ.