Tag: ಡಿಜಿಸಿಎ

  • ಡಿಜಿಸಿಎ ಸೂಚನೆ ಸ್ವಾಗತಾರ್ಹ: ಸ್ಪೈಸ್‌ಜೆಟ್

    ಡಿಜಿಸಿಎ ಸೂಚನೆ ಸ್ವಾಗತಾರ್ಹ: ಸ್ಪೈಸ್‌ಜೆಟ್

    ನವದೆಹಲಿ: ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ(ಡಿಜಿಸಿಎ) ಸೂಚನೆಯನ್ನು ನಾವು ಸ್ವಾಗತಿಸುತ್ತೇವೆ. ಇಂತಹ ಆತಂಕದ ಸಮಯದಲ್ಲಿ ನಾವು ಅವರೊಂದಿಗೆ ಕೆಲಸ ಮಾಡಲು ಸಂತೋಷಪಡುತ್ತೇವೆ ಎಂದು ಸ್ಪೈಸ್‌ಜೆಟ್ ಅಧ್ಯಕ್ಷ ಅಜಯ್ ಸಿಂಗ್ ತಿಳಿಸಿದ್ದಾರೆ.

    ಕಳೆದ 18 ದಿನಗಳಲ್ಲಿ ಸ್ಪೈಸ್‌ಜೆಟ್ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬಂದಿದ್ದ ಹಿನ್ನೆಲೆ ಡಿಜಿಸಿಎ ಕಾರಣ ಕೇಳಿ ಶೋಕಾಸ್ ನೋಟಿಸ್ ನೀಡಿತ್ತು.

    ಈ ಬಗ್ಗೆ ತಿಳಿಸಿದ ಅಜಯ್ ಸಿಂಗ್, ದೇಶದಲ್ಲಿ ಮಾತ್ರವಲ್ಲದೇ ಪ್ರಪಂಚದಾದ್ಯಂತ ನಾವು ಅತ್ಯುತ್ತಮ ಸುರಕ್ಷತಾ ದಾಖಲೆಗಳನ್ನು ಹೊಂದಿದ್ದೇವೆ. ನಾವು ಪ್ರತಿ ಸಂದರ್ಭದಲ್ಲೂ ಸುರಕ್ಷತೆಗೆ ಅತ್ಯಂತ ಪ್ರಮುಖ ಆದ್ಯತೆ ನೀಡುತ್ತೇವೆ ಹಾಗೂ ಈ ದಾಖಲೆಯನ್ನು ಉಳಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕನ್ಹಯ್ಯ ಲಾಲ್ ಪುತ್ರರಿಗೆ ಸರ್ಕಾರಿ ನೌಕರಿ – ಗೆಹ್ಲೋಟ್ ನಿರ್ಧಾರ

    ಭಾರತೀಯ ವಿಮಾನಯಾನದಲ್ಲಿ ಪ್ರತಿ ದಿನ ಸರಾಸರಿ 30 ರಷ್ಟು ತಾಂತ್ರಿಕ ದೋಷಗಳು ಕಂಡುಬರುತ್ತವೆ. ನಾವು ಇಂತಹ ಘಟನೆಗಳನ್ನು ಮರುಗಳಿಸದಂತೆ ಎಷ್ಟೇ ಪ್ರಯತ್ನ ಪಟ್ಟರೂ ಅವು ಮತ್ತೆ ಮತ್ತೆ ಸಂಭವಿಸುತ್ತದೆ. ಆದರೆ ಅವು ಅಷ್ಟೊಂದು ಗಂಭೀರವಾಗಿಲ್ಲ. ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೂಸ್ಟರ್ ಡೋಸ್ ನಡುವಿನ ಅಂತರ 9 ರಿಂದ 6 ತಿಂಗಳಿಗೆ ಇಳಿಕೆ

    ಮಂಗಳವಾರ ದೆಹಲಿಯಿಂದ ದುಬೈಗೆ ಪ್ರಯಾಣಿಸುತ್ತಿದ್ದ ವಿಮಾನ ಅಸಮರ್ಪಕ ಇಂಧನದ ಸೂಚಕದ ಕಾರಣ ಕರಾಚಿಗೆ ತಿರುಗಿಸಲಾಯಿತು. ವಿಮಾನದ ಎಂಜಿನ್ ಹೆಚ್ಚು ಇಂಧನವನ್ನು ಬಳಸುತ್ತಿದೆ ಎಂದು ಭಾವಿಸಿ, ಹತ್ತಿರದ ವಿಮಾನ ನಿಲ್ದಾಣದಲ್ಲಿ ಇಳಿಸಲಾಗಿತ್ತು. ಇದು ತುರ್ತು ಲ್ಯಾಂಡಿಂಗ್ ಆಗಿರಲಿಲ್ಲ. ಪ್ರಯಾಣಿಕರ ಸುರಕ್ಷತೆ ನಮಗೆ ಅತ್ಯಂತ ಮುಖ್ಯ. ಕರಾಚಿಯಲ್ಲಿ ಇಳಿಸಿದ ನಿರ್ಧಾರ ಸರಿಯಾಗಿಯೇ ಇತ್ತು. ಈ ಬಗ್ಗೆ ನಾವೇ ಪರಿಶೀಲನೆ ನಡೆಸಿದ್ದೇವೆ. ಇದು ಗಂಭೀರ ಘಟನೆಯಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಮಾನಗಳಲ್ಲಿ ತಾಂತ್ರಿಕ ದೋಷ – ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌

    ವಿಮಾನಗಳಲ್ಲಿ ತಾಂತ್ರಿಕ ದೋಷ – ಸ್ಪೈಸ್‌ಜೆಟ್‌ಗೆ ಶೋಕಾಸ್‌ ನೋಟಿಸ್‌

    ನವದೆಹಲಿ: ಕಳೆದ 18 ದಿನಗಳಲ್ಲಿ ಸ್ಪೈಸ್‌ಜೆಟ್‌ ಸಂಸ್ಥೆಯ ವಿಮಾನಗಳಲ್ಲಿ ನಿರಂತರವಾಗಿ ತಾಂತ್ರಿಕ ದೋಷಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಕಾರಣ ಕೇಳಿ ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಶೋಕಾಸ್‌ ನೋಟಿಸ್‌ ನೀಡಿದೆ.

    ಸಂಸ್ಥೆಯ ವಿಮಾನಗಳಲ್ಲಿ ನಿರಂತರ ತಾಂತ್ರಿಕ ದೋಷಗಳು ಕಂಡುಬರುತ್ತಿವೆ. ಈ ಸಂಬಂಧ ಸ್ಪೈಸ್‌ಜೆಟ್‌ ಸಂಸ್ಥೆಗೆ ಡಿಜಿಸಿಎ ನೋಟಿಸ್‌ ನೀಡಿದೆ. ಅಲ್ಲದೇ ಮೂರು ವಾರಗಳಲ್ಲಿ ಉತ್ತರ ನೀಡುವಂತೆ ನೋಟಿಸ್‌ನಲ್ಲಿ ಸೂಚಿಸಿದೆ. ಇದನ್ನೂ ಓದಿ: ಸ್ಪೈಸ್‍ಜೆಟ್‍ನಲ್ಲಿ ಮುಂದುವರಿದ ತಾಂತ್ರಿಕ ದೋಷ: ಕಾಂಡ್ಲಾದಿಂದ ಬಂದ ವಿಮಾನ ಮುಂಬೈನಲ್ಲಿ ತುರ್ತು ಭೂಸ್ಪರ್ಶ

    ನೋಟಿಸ್‌ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ಡಿಜಿಸಿಎ, ಸುರಕ್ಷತೆ, ಸಮರ್ಥ ಹಾಗೂ ವಿಶ್ವಾಸಾರ್ಹ ವಿಮಾನ ಸೇವೆಗಳನ್ನು ಒದಗಿಸುವಲ್ಲಿ ಸ್ಪೈಸ್‌ಜೆಟ್‌ ವಿಫಲವಾಗಿದೆ. ಹೀಗಾಗಿ ಕಂಪನಿಗೆ ನೋಟಿಸ್‌ ನೀಡಲಾಗಿದೆ. ಸೂಕ್ತ ನಿರ್ವಹಣೆ ಇಲ್ಲದಿರುವುದು ಸುರಕ್ಷತಾ ಕ್ರಮಗಳ ಪಾಲನೆಯಲ್ಲಿ ಲೋಪ ಕಂಡುಬರಲು ಪ್ರಮುಖ ಕಾರಣವಾಗಿದೆ ಎಂದು ಅಭಿಪ್ರಾಯಪಟ್ಟಿದೆ.

    ವರದಿಯಾಗುತ್ತಿರುವ ಬಹಳಷ್ಟು ಘಟನೆಗಳು ಅಷ್ಟು ಗಂಭೀರವೇನಲ್ಲ. ಇದು ಪ್ರತಿ ಏರ್‌ಲೈನ್‌ನಲ್ಲೂ ಸಂಭವಿಸುತ್ತದೆ. ಸ್ಪೈಸ್‌ಜೆಟ್‌ನ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿವೆ ಎಂದು ವಿಮಾನಯಾನ ನಿಯಂತ್ರಕರು ಭಾವಿಸಿದರೆ, ನಾವು ಅವುಗಳನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಸ್ಪೈಸ್‌ಜೆಟ್‌ ಸಿಎಂಡಿ ಅಜಯ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಡೋಲೋ 650 ಮಾತ್ರೆ ತಯಾರಿಕಾ ಸಂಸ್ಥೆ ಮೈಕ್ರೋ ಲ್ಯಾಬ್ಸ್ ಮೇಲೆ ಐಟಿ ದಾಳಿ

    Live Tv
    [brid partner=56869869 player=32851 video=960834 autoplay=true]

  • ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ಟಿಕೆಟ್ ಇದ್ದೂ ಪ್ರವೇಶ ನಿರಾಕರಿಸಿದ ಏರ್‌ಇಂಡಿಯಾಕ್ಕೆ 10 ಲಕ್ಷ ದಂಡ

    ನವದೆಹಲಿ: ಟಿಕೆಟ್ ಇದ್ದರೂ ಪ್ರಯಾಣಿಕರಿಗೆ ಬೋರ್ಡಿಂಗ್ ನಿರಾಕರಿಸಿದ್ದಕ್ಕಾಗಿ ಹಾಗೂ ಮಾರ್ಗಸೂಚಿ ಉಲ್ಲಂಘಿಸಿ ಪರಿಹಾರ ಕೊಡಲು ನಿರಾಕರಿಸಿದ್ದಕ್ಕಾಗಿ ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ.

    ಬೆಂಗಳೂರು, ಹೈದರಾಬಾದ್ ಹಾಗೂ ದೆಹಲಿಯಲ್ಲಿ ನಮ್ಮ ಕಣ್ಗಾವಲು ಘಟಕವು ಪರಿಶೀಲನೆ ನಡೆಸಿದಾಗ, ಏರ್ ಇಂಡಿಯಾ ಸಂಸ್ಥೆ ಮಾರ್ಗಸೂಚಿ (ಪ್ರಯಾಣಿಕರಿಗೆ ಪರಿಹಾರ ನೀಡುವುದಕ್ಕೆ ಸಂಬಂಧಿಸಿದ್ದು) ಉಲ್ಲಂಘಿಸಿರುವುದು ಕಂಡುಬಂದಿದೆ. ಈ ಕುರಿತು ಶೋಕಾಸ್ ನೋಟಿಸ್ ನೀಡಿ ವಿಚಾರಣೆಯನ್ನೂ ನಡೆಸಲಾಗಿತ್ತು ಎಂದು ಡಿಜಿಸಿಎ ತಿಳಿಸಿದೆ. ಇದನ್ನೂ ಓದಿ: ಅಂದು ಜಯಾ ಜೈಲಿಗೆ, ಇಂದು ಸಂಕಷ್ಟದಲ್ಲಿ ಸೋನಿಯಾ, ರಾಹುಲ್‌ – ಇದು ಸ್ವಾಮಿ ದೂರಿನ ಕರಾಮತ್ತು

    ಈ ವಿಚಾರಕ್ಕೆ ಸಂಬಂಧಿಸಿ ಏರ್ ಇಂಡಿಯಾವು ನೀತಿ ಹೊಂದಿಲ್ಲದಿರಬಹುದು. ಹೀಗಾಗಿ ಪರಿಹಾರ ನೀಡದೇ ಇದ್ದಿರಬಹುದು. ಆದರೆ ಇದು ಗಂಭೀರ ಮತ್ತು ಸ್ವೀಕಾರಾರ್ಹವಲ್ಲದ ಪ್ರಕರಣ. ನಿರ್ದಿಷ್ಟ ಪ್ರಕರಣಗಳಲ್ಲಿ ಶೋಕಾಸ್ ನೋಟಿಸ್ ನೀಡಿ ವಿವರಣೆ ಕೋರಲಾಗಿದೆ. ಏರ್ ಇಂಡಿಯಾ ನೀಡಿರುವ ವಿವರಣೆಯನ್ನು ಪರಿಶೀಲಿಸಿದ ಬಳಿಕ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಅಲ್ಲದೆ, ಮುಂದಿನ ಕ್ರಮ ಕೈಗೊಳ್ಳುವುದಕ್ಕೂ ಮುನ್ನವೇ ಪ್ರಯಾಣಿಕರಿಗೆ ಪರಿಹಾರ ನೀಡುವಂತೆ ಡಿಜಿಸಿಎ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‌ ʼಸೂಪರ್‌ ಚೀಫ್‌ ಜಸ್ಟಿಸ್‌ʼನಂತೆ ವರ್ತಿಸುತ್ತಿದ್ದಾರೆ: ಓವೈಸಿ ಟೀಕೆ

    ಸಾಂದರ್ಭಿಕ ಚಿತ್ರ

    ಮೇ 7 ರಂದು ರಾಂಚಿ ವಿಮಾನ ನಿಲ್ದಾಣದಲ್ಲಿ ಅಂಗವಿಕಲ ಬಾಲಕನಿಗೆ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ ಇಂಡಿಗೊ ಏರ್‌ಲೈನ್ಸ್ಗೆ ಡಿಜಿಸಿಎ 5 ಲಕ್ಷ ರೂ. ದಂಡ ವಿಧಿಸಿತ್ತು. ಈ ಘಟನೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಇದಾದ ಕೆಲ ದಿನಗಳ ನಂತರ ಏರ್‌ಇಂಡಿಯಾಗೆ 10 ಲಕ್ಷ ರೂ. ದಂಡ ವಿಧಿಸಿದೆ.

  • ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA

    ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸುವ ಪ್ರಯಾಣಿಕರನ್ನು ಹೊರಹಾಕಿ – DGCA

    ನವದೆಹಲಿ: ಕೋವಿಡ್ ನಿಯಮಗಳನ್ನು ಪಾಲಿಸುವಂತೆ ಎಚ್ಚರಿಕೆ ನೀಡಿದ ನಂತರವೂ ವಿಮಾನದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದ್ರೆ ಅಂತಹ ಪ್ರಯಾಣಿಕರನ್ನು ವಿಮಾನಯಾನ ಸಂಸ್ಥೆಯು ಹೊರಹಾಕಬೇಕು ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತಿಳಿಸಿದೆ.

    ಪ್ರಯಾಣಿಕರು ಮಾಸ್ಕ್ ಧರಿಸುವುದನ್ನು ವಿಮಾನಯಾನ ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು. ಜೊತೆಗೆ ವಿಶೇಷ ಸಂದರ್ಭದಲ್ಲಿ ಅನುಮತಿಯೊಂದಿಗೆ ಮಾತ್ರ ವಿನಾಯಿತಿ ನೀಡುವಂತೆ ಹೇಳಿದೆ. ಇದನ್ನೂ ಓದಿ: ಮಾಸ್ಕ್‌ ಧರಿಸಲ್ಲ ಎಂದ ಪ್ರಯಾಣಿಕ – ಅರ್ಧದಲ್ಲಿಯೇ ವಿಮಾನ ವಾಪಸ್‌

    ಮಾಸ್ಕ್ ಧರಿಸದವರಿಗೆ ದಂಡ ವಿಧಿಸಬೇಕು. ಮಾಸ್ಕ್ ನಿರಾಕರಿಸಿದರೆ ಅಥವಾ ಪ್ರಯಾಣದ ಮಧ್ಯದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದರೆ, ಅಂತಹವರನ್ನು ಅಶಿಸ್ತಿನ ಪ್ರಯಾಣಿಕ ಎಂದು ಪರಿಗಣಿಸುವಂತೆ ತಾಕೀತು ಮಾಡಿದೆ.

    ಸಿಐಎಸ್‌ಎಫ್ ಮತ್ತು ಇತರೆ ಪೊಲೀಸ್ ಸಿಬ್ಬಂದಿ ಮಾಸ್ಕ್ ಧರಿಸದವರಿಗೆ ಒಳಗೆ ಪ್ರವೇಶಿಸಲು ಅನುಮತಿ ನೀಡಬಾರದು. ಟರ್ಮಿನಲ್‌ನ ಪ್ರಮುಖ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಒದಗಿಸಬೇಕು ಎಂದೂ ಸೂಚನೆ ನೀಡಿದೆ. ಇದನ್ನೂ ಓದಿ: ವಿಮಾನ ತುರ್ತು ಭೂಸ್ಪರ್ಶ – ನನ್ನ ಶಿಫ್ಟ್‌ ಮುಗಿಯಿತು ಮತ್ತೆ ಫ್ಲೈ ಮಾಡಲ್ಲ ಎಂದ ಪಾಕ್‌ ಪೈಲಟ್‌!

    ಇದೇ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ ಡಿಜಿಸಿಎ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಛತೆ ಕಾಪಾಡದವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗಳ್ಳಲು ಗಗನಸಖಿಯರು, ಕ್ಯಾಪ್ಟನ್‌ಗಳು, ಪೈಲಟ್‌ಗಳು, ವಿಮಾನ ನಿಲ್ದಾಣ ಹಾಗೂ ವಿಮಾನದಲ್ಲಿ ನಿಯೋಜಿಸಿರುವ ಸಿಬ್ಬಂದಿಗೆ ಡಿಜಿಸಿಎ ಪ್ರತ್ಯೇಕ ನಿರ್ದೇಶನ ನೀಡಬೇಕು ಎಂದು ಹೈಕೋರ್ಟ್ ಹೇಳಿತ್ತು.

  • ಕೊರೊನಾ ಭೀತಿ – ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟ ನಿರ್ಬಂಧ ಫೆ.28 ರವರೆಗೆ ವಿಸ್ತರಣೆ

    ಕೊರೊನಾ ಭೀತಿ – ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಹಾರಾಟ ನಿರ್ಬಂಧ ಫೆ.28 ರವರೆಗೆ ವಿಸ್ತರಣೆ

    ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ, ಕಳೆದ ಎರಡು ವರ್ಷದಿಂದ ಅಂತರಾಷ್ಟ್ರೀಯ ಪ್ರಯಾಣಿಕರ ವಿಮಾನ ಸೇವೆ ಸ್ಥಗಿತಗೊಳಿಸಲಾಗಿದ್ದು, ಇದೀಗ ಅದನ್ನು 2022ರ ಫೆಬ್ರವರಿ 28 ರವರೆಗೆ ವಿಸ್ತರಿಸಲಾಗಿದೆ.

    ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹೊರಡಿಸಿರುವ ಆದೇಶದ ಪ್ರಕಾರ, ಕೊರೊನಾ ಪ್ರಕರಣ ವಿಶ್ವದಲ್ಲಿ ಮತ್ತೆ ಹೆಚ್ಚಾಗುತ್ತಿರುವುದರಿಂದ ಭಾರತದಲ್ಲಿ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆಗೆ ವಿಧಿಸಲಾಗಿದ್ದ ನಿರ್ಬಂಧವನ್ನು 2022, ಫೆಬ್ರವರಿ 28ರ ವರೆಗೆ ವಿಸ್ತರಿಸಲಾಗಿದೆ ಎಂದು ಡಿಜಿಸಿಎ ಇಂದು ಅಧಿಸೂಚನೆ ಹೊರಡಿಸಿದೆ. ಇದನ್ನೂ ಓದಿ: ಗಾಂಜಾ ಮಾರುತ್ತಿದ್ದ ಪೊಲೀಸರನ್ನು ಅರೆಸ್ಟ್ ಮಾಡಿದ್ದ ಇನ್‌ಸ್ಪೆಕ್ಟರ್ ಸಸ್ಪೆಂಡ್

    ಕೊರೊನಾ ಮೂರನೇ ಅಲೆ ಭಾರತದಲ್ಲಿ ಈಗಾಗಲೇ ಕಾಣಿಸಿಕೊಂಡಿರುವುದರಿಂದ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ಸೇವೆ ವಿಧಿಸಿದ ನಿರ್ಬಂಧ ವಿಸ್ತರಿಸಲು ನಿರ್ಧರಿಸಿದ್ದು, ಗೃಹ ಸಚಿವಾಲಯದಿಂದ ಅನುಮತಿ ಪಡೆದವರು ಮಾತ್ರವೇ ನಿಗದಿತ ವಿಮಾನದಲ್ಲಿ ಪ್ರಯಾಣಿಸಬಹುದಾಗಿದೆ. ಈ ನಿರ್ಬಂಧವೂ, ಕಾರ್ಗೋ ವಿಮಾನ ಸೇವೆಗೆ ಅನ್ವಯವಾಗುವುದಿಲ್ಲ ಎಂದು ಡಿಜಿಸಿಎ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಸೀದಿಯನ್ನು ಒಡೆದು ಹಾಕಿ ಎಂದ ಕಾಳಿ ಸ್ವಾಮೀಜಿಗೆ ಷರತ್ತು ಬದ್ಧ ಜಾಮೀನು

    ಕಳೆದ ವರ್ಷ ಮಾರ್ಚ್ 25ರಂದು ಕೊರೊನಾ ವೈರಸ್ ನಿಯಂತ್ರಿಸುವುದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಲಾಕ್ ಡೌನ್ ಘೋಷಿಸಿದ ನಂತರ ಎಲ್ಲಾ ದೇಶಿಯ ಮತ್ತು ಅಂತರಾಷ್ಟ್ರೀಯ ವಿಮಾನ ಸೇವೆಯನ್ನು ರದ್ದುಗೊಳಿಸಲಾಗಿತ್ತು. ಆ ಬಳಿಕ ಡಿಜಿಸಿಎ ಕಳೆದ ಡಿಸೆಂಬರ್ 15 ರಿಂದ ನಿಗದಿತ ಅಂತರಾಷ್ಟ್ರೀಯ ವಿಮಾನ ಸೇವೆ ಆರಂಭಿಸಲು ನಿರ್ಧರಿಸಿತ್ತು. ಈ ಸಂದರ್ಭ ಕೊರೊನಾ ಹೊಸ ರೂಪಾಂತರಿ ಓಮಿಕ್ರಾನ್ ಪ್ರಕರಣಗಳು ವರದಿಯಾದ ಬೆನ್ನಲ್ಲೇ ಇದೀಗ ವಿಶ್ವದ ಹಲವು ದೇಶಗಳು ಮತ್ತೆ ಕೊರೊನಾ ಸೋಂಕಿಗೆ ತತ್ತರಿಸಿದೆ ಹಾಗಾಗಿ ಭಾರತದಲ್ಲಿ ಕೊರೊನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಂತರಾಷ್ಟ್ರೀಯ ವಿಮಾನ ಸೇವೆಯ ನಿರ್ಬಂಧವನ್ನು ವಿಸ್ತರಿಸಿದೆ.

    ಈ ನಡುವೆ ಭಾರತವು ಯುನೈಟೆಡ್ ಸ್ಟೇಟ್ಸ್,  ಯುನೈಟೆಡ್ ಅರಬ್ ಎಮಿರೇಟ್ಸ್, ಯುನೈಟೆಡ್ ಕಿಂಗ್‍ಡಮ್, ಕೀನ್ಯಾ, ಭೂತಾನ್ ಮತ್ತು ಫ್ರಾನ್ಸ್ ಸೇರಿದಂತೆ ಹಲವಾರು ದೇಶಗಳೊಂದಿಗೆ ಏರ್ ಬಬಲ್ ಒಪ್ಪಂದಗಳನ್ನು ಮಾಡಿಕೊಂಡಿದೆ. ಈ ಒಪ್ಪಂದದ ಪ್ರಕಾರ ಎರಡು ದೇಶಗಳು ವಿಶೇಷ ಅಂತರಾಷ್ಟ್ರೀಯ ವಿಮಾನಗಳನ್ನು ತಮ್ಮ ವಿಮಾನಯಾನ ಸಂಸ್ಥೆಗಳು ಪ್ರಾಂತ್ಯಗಳ ನಡುವೆ ನಿರ್ವಹಿಸಬಹುದಾಗಿದೆ. ಇದನ್ನೂ ಓದಿ: UP Election- 30 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

  • ದಸರಾ ಹೆಲಿರೈಡ್: ಹದ್ದು ಡಿಕ್ಕಿಯಾಗಿ ಹೆಲಿಕಾಪ್ಟರ್ ಗಾಜು ಪುಡಿ

    ದಸರಾ ಹೆಲಿರೈಡ್: ಹದ್ದು ಡಿಕ್ಕಿಯಾಗಿ ಹೆಲಿಕಾಪ್ಟರ್ ಗಾಜು ಪುಡಿ

    ಮೈಸೂರು: ದಸರಾ ಪ್ರಯುಕ್ತ ಹೆಲಿಕಾಪ್ಟರ್ ಮೂಲಕ ಪ್ರವಾಸಿಗರಿಗೆ ಮೈಸೂರು ದರ್ಶನ ಮಾಡಿಸುವಾಗ ಹದ್ದೊಂದು ಬಡಿದು ಪೈಲೆಟ್ ಮುಂಬದಿಯ ಗಾಜು ಪುಡಿಯಾಗಿರುವ ಘಟನೆ ನಡೆದಿದೆ.

    ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭಾನುವಾರ ಬೆಳಗ್ಗೆ 9 ಗಂಟೆಯ ವೇಳೆ 9 ಮಂದಿಯನ್ನು ಕರೆದುಕೊಂಡು ಹೆಲಿಕಾಪ್ಟರ್ ಮೇಲೆ ಹಾರಿತ್ತು. ಹಾರಾಟ ನಡೆಸುತ್ತಿರುವಾಗ ಅಗಸದಲ್ಲಿ ಏಕಾಏಕಿ ಹದ್ದು ಡಿಕ್ಕಿ ಹೊಡೆದಿದೆ.

    ಹದ್ದು ಸಾವನ್ನಪ್ಪಿದ್ದು, ಹೆಲಿಕಾಪ್ಟರ್ ಮುಂದಿನ ಬಲಬದಿಯ ಗಾಜು ಒಡೆದು ಹೋಗಿದೆ. ಪೈಲಟ್ ಶ್ರೀನಿವಾಸ ರಾವ್ ತಕ್ಷಣ ನಿಯಂತ್ರಣ ತಪ್ಪದಂತೆ ಜಾಗೃತಿ ವಹಿಸಿ ಸುರಕ್ಷಿತವಾಗಿ ಹೆಲಿಕಾಪ್ಟರ್ ಅನ್ನು ಕೆಳಗಡೆ ಇಳಿಸಿದ್ದಾರೆ.

    ದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ತೊಂದರೆಗಳಾಗಿಲ್ಲ. ಯಾರೂ ಗಾಬರಿ ಪಡಬೇಕಾಗಿಲ್ಲ ಎಂದು ಪವನ್ ಹನ್ಸ್ ಸಂಸ್ಥೆ ತಿಳಿಸಿದೆ.

    ಕಳೆದ ಹತ್ತು ದಿನಗಳಿಂದ ಹೆಲಿಕಾಪ್ಟರ್ ಮೂಲಕ ಆಕಾಶದಿಂದ ಮೈಸೂರು ನೋಡುವ ಅವಕಾಶವನ್ನು ಸಾರ್ವಜನಿಕರಿಗೆ ಒದಗಿಸಲಾಗಿತ್ತು. 2500 ರೂಪಾಯಿ ದರ ನಿಗದಿ ಮಾಡಿ ಮೈಸೂರಿನ ವೈಮಾನಿಕ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು.