Tag: ಡಿಜೆ ಹಳ್ಳಿ ಗಲಭೆ

  • ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನ ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡ್ತಿದ್ದಾರೆ: ಅಖಂಡ

    ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನ ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡ್ತಿದ್ದಾರೆ: ಅಖಂಡ

    ಬೆಂಗಳೂರು: ನಮ್ಮ ಮನೆಗೆ ಬೆಂಕಿ ಹಚ್ಚಿದವರನ್ನು ಪಕ್ಷದ ಅಧ್ಯಕ್ಷರು ಜೊತೆಯಲ್ಲಿಟ್ಟುಕೊಂಡು ಓಡಾಡುತ್ತಿದ್ದಾರೆ ಎಂದು ಹೆಸರು ಹೇಳಿದೆಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಆರೋಪ ಮಾಡಿದರು.

    ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ಅತಿ ಹೆಚ್ಚು ಮತ ಪಡೆದೆ ಎಂಬ ಕಾರಣಕ್ಕೆ ನನ್ನ ಮೇಲೆ ಹಿರಿಯ ನಾಯಕರು ಷಡ್ಯಂತ್ರ ರೂಪಿಸಿದರು. ಈ ಚುನಾವಣೆಯಲ್ಲಿ ಟಿಕೆಟ್ ಕೂಡ ತಪ್ಪಿಸಿದರು. ನನ್ನನ್ನು ಸೋಲಿಸಲು ಪ್ರಯತ್ನಿಸಿದರು. ಉಳಿದ ಶಾಸಕರಿಗಾದರೂ ನ್ಯಾಯ ಕೊಡಿ ಅವರಿಗೆ ಅನ್ಯಾಯ ಮಾಡಬೇಡಿ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ವಿವಾದ – ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

    2020 ರಲ್ಲಿ ನನ್ನ ಮನೆಗೆ ಬೆಂಕಿ ಹಾಕಿ ಪೊಲೀಸ್ ಠಾಣೆಗೂ ಬೆಂಕಿ ಹಚ್ಚಿದ್ದರು. ಗಾಡಿಗಳಿಗೂ ಬೆಂಕಿ ಹಾಕಿದ್ದರು. ಸಿಸಿಟಿವಿ ಫೂಟೇಜ್ ನೋಡಿಯೆ ಆರೋಪಿಗಳನ್ನ ಹುಡುಕಿ ಕೇಸು ಹಾಕಿದ್ದಾರೆ. ಅಮಾಯಕರನ್ನ ಕೇಸಿನಿಂದ ಅವಾಗಲೇ ಕೈ ಬಿಟ್ಟಿದ್ದಾರೆ. ಈಗ ಈ ಬೆಳವಣಿಗೆ ಆಗಿದೆ. ಇದರ ಹಿಂದೆ ಯಾರೋ ಕಿಂಗ್‌ಪಿನ್ ಇದ್ದಾರೆ. ಹಿರಿಯ ನಾಯಕರ ಶಡ್ಯಂತ್ರ ಇದೆ ಎಂದು ಆರೋಪಿಸಿದರು.

    ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ಕೋರ್ಟ್‌ಗೂ ಮನವಿ ಮಾಡುತ್ತೇನೆ. ನಮ್ಮ ವಕೀಲರ ಮೂಲಕ ಸರ್ಕಾರದ ನಡೆ ಬಗ್ಗೆ ಕೋರ್ಟ್‌ಗೆ ಮನವಿ ಮಾಡುತ್ತೇನೆ. ಅಮಾಯಕರಿದ್ದರೆ ಅವರನ್ನ ಬಿಡಿ ಎಂದು ಹಿಂದೆ ನಾನೇ ಹೇಳಿದ್ದೆ. ಸಿಸಿ ಕ್ಯಾಮೆರಾ ಫೂಟೇಜ್ ನೋಡಿಯೆ ಪೊಲೀಸರು ಹಾಗೂ ಎನ್‌ಐಎ ತಪ್ಪಿತಸ್ಥರನ್ನ ಬಂಧಿಸಿರುವುದು. ಈಗ ಹೀಗೆ ಮಾಡುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಫ್ರೆಂಡ್ಸ್ ನಡುವಿನ ಘಟನೆಯನ್ನ ಎಲ್ಲಿಗೋ ತೆಗೆದುಕೊಂಡು ಹೋಗ್ಬೇಡಿ: ಉಡುಪಿ ಕೇಸ್ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ

    ನಾನು ದಲಿತ ಶಾಸಕ. ನನಗೆ ರಕ್ಷಣೆ ಕೊಡಲಿಲ್ಲ. ಅಂದು ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ. ತನ್ವಿರ್ ಸೇಠ್ ಪತ್ರದ ಹಿಂದೆ ಹಿರಿಯ ನಾಯಕರು ಇದ್ದಾರೆ. ನಾನು 2018 ರಲ್ಲಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದೆ. ಸಿಎಂ ಹಾಗೂ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ಸರ್ಕಾರದ ಈ ನಡೆ ವಿರುದ್ಧ ಕೋಟ್‌ನಲ್ಲೂ ಹೋರಾಟ ಮಾಡ್ತೀನಿ ಎಂದು ತಿಳಿಸಿದರು.

    ಆರೋಪಿಗಳನ್ನ ಬಿಡುಗಡೆ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ಹಾಗೂ ಸಂಪತ್ ರಾಜು ವಿರುದ್ಧ ಅಖಂಡ ಶ್ರೀನಿವಾಸ ಮೂರ್ತಿ ಗುಡುಗಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಾಜಿ ಮೇಯರ್ ಸಂಪತ್ ರಾಜ್‍ಗೆ ಕೊರೊನಾ- ಗುಣಮುಖರಾದ ಬಳಿಕ ಸಿಸಿಬಿ ಎದುರು ಹಾಜರು

    ಮಾಜಿ ಮೇಯರ್ ಸಂಪತ್ ರಾಜ್‍ಗೆ ಕೊರೊನಾ- ಗುಣಮುಖರಾದ ಬಳಿಕ ಸಿಸಿಬಿ ಎದುರು ಹಾಜರು

    ಬೆಂಗಳೂರು: ಶಾಸಕರ ಮನೆ ಹಾಗೂ ಪೊಲೀಸ್ ಠಾಣೆ ಧ್ವಂಸಗೊಳಿಸಿದ್ದ ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಸಿಸಿಬಿ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಇದರ ನಡುವೆ ಸಂಪತ್ ರಾಜ್ ಕೊರೊನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

    ಸದ್ಯ ಸಂಪತ್ ರಾಜ್ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೊರೊನಾ ಸೋಂಕಿನಿಂದ ಗುಣಮುಖವಾದ ಬಳಿಕ ವಿಚಾರಣೆಗೆ ಹಾಜರಾಗಲು ನಿರ್ಧರಿಸಿದ್ದಾರೆ. ಇತ್ತ ಸಂಪತ್ ರಾಜ್ ಅವರ ನಿವಾಸ ಗೋಡೆಗೆ ಕೋವಿಡ್ ಸ್ಟಿಕ್ಕರ್ ಸಹ ಅಂಟಿಸಲಾಗಿದೆ. ಸೋಂಕಿನಿಂದ ಬಳಲುತ್ತಿರುವ ಕಾರಣ ಅವರು ವಿಚಾರಣೆಗೆ ಹಾಜರಾಗುವುದು ಬಹುತೇಕ ಅನುಮಾನವಾಗಿದೆ.

    ತೀವ್ರ ಸಂಚಲನ ಸೃಷ್ಟಿಸಿದ್ದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಹೀಗಾಗಿ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ ಎನ್ನಲಾಗಿದೆ. ಪ್ರಕರಣದ ಸಂಬಂಧ ಬುಧವಾರ ಸಂಪತ್ ರಾಜ್ ಅವರಿಗೆ ನೋಟಿಸ್ ಕೊಡಲು ತೆರಳಿದ್ದಾಗ ಕಳೆದ 1 ವಾರದಿಂದ ಮನೆಯಲ್ಲಿ ಇಲ್ಲದಿರುವುದರ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ನಾಳೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಪ್ರಕರಣದಲ್ಲಿ ಸಂಪತ್ ರಾಜ್ ಭಾಗಿಯಾಗಿರುವ ಕುರಿತು ಮಹತ್ವದ ಸಾಕ್ಷ್ಯ ಸಿಕ್ಕಿದೆ ಎನ್ನಲಾಗಿದೆ.

    ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚುವ ಸಂದರ್ಭದಲ್ಲಿ ಘಟನಾ ಸ್ಥಳದಿಂದ 100 ಮೀಟರ್ ದೂರದಲ್ಲಿ ಸಂಪತ್ ರಾಜ್ ಇದ್ದರು ಎನ್ನಲಾಗಿದೆ. ಸಂತೋಷ್ ಮನೆಯಲ್ಲಿ ಆಶ್ರಯ ಪಡೆದಿದ್ದರು. ಆಗಸ್ಟ್ 4ರಂದು ಸಭೆ ನಡೆಸಿದ್ದ ಬಗ್ಗೆ ತಾಂತ್ರಿಕ ಮಾಹಿತಿ ಬಹಿರಂಗವಾಗಿದೆ. ಈ ಹಿನ್ನೆಲೆಯಲ್ಲಿ ಸಂಪತ್ ರಾಜ್‍ಗೆ ಇದೀಗ ಸಂಕಷ್ಟ ಶುರುವಾಗಿದೆ.

  • ಶಾಸಕ ಅಖಂಡ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಕೊನೆಗೂ ಅರೆಸ್ಟ್

    ಶಾಸಕ ಅಖಂಡ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಕೊನೆಗೂ ಅರೆಸ್ಟ್

    ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಇಟ್ಟಿದ್ದ ಆರೋಪಿ ಮುಜಾಯಿದ್‍ನನ್ನು ಕೊನೆಗೂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ವಾಟರ್ ಮ್ಯಾನ್ ಕೆಲಸ ಮಾಡ್ಕೊಂಡಿದ್ದ ಮುಜಾಯಿದ್, ಗಲಭೆ ದಿನ ನೂರಕ್ಕೂ ಹೆಚ್ಚು ಮಂದಿಯನ್ನು ಡಿಜೆ ಹಳ್ಳಿ ಠಾಣೆ ಬಳಿಯಿಂದ ಅಖಂಡ ಮನೆ ಬಳಿ ಕರೆದೊಯ್ದಿದ್ದ. ಇಷ್ಟು ದಿನ ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ತಲೆಮರೆಕೊಂಡಿದ್ದ ಎಂಬ ಮಾಹಿತಿ ಲಭಿಸಿದೆ.

    ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ್ದ ಆರೋಪಿ, ಗಲಭೆ ಬಳಿಕ ಒಂದೊಂದು ದಿನ ಒಂದೊಂದು ಜಿಲ್ಲೆಯಲ್ಲಿ ತಲೆಮರೆಸಿಕೊಳ್ಳುತ್ತಿದ್ದ. ಸದ್ಯ ಆರೋಪಿಯನ್ನು ಬೆಂಗಳೂರಿನಲ್ಲೇ ಬಂಧಿಸಲಾಗಿದೆ. ನವೀನ್ ಮಾಡಿದ್ದ ಪೋಸ್ಟ್ ನೆಪವಾಗಿಸಿಕೊಂಡು ಪ್ರಚೋದಿಸಿ ಶಾಸಕರ ವಿರುದ್ಧ ಎಲ್ಲರೂ ಕೋಪಗೊಳ್ಳುವಂತೆ ಮಾಡಿದ್ದ. ಸಿಕ್ಕ ಸಿಕ್ಕ ವಸ್ತುಗಳನ್ನ ಧ್ವಂಸ ಮಾಡಿ, ಮನೆಗೆ ಬೆಂಕಿ ಹಚ್ಚಿ ಸ್ಥಳದಿಂದ ಎಸ್ಕೇಪ್ ಆಗಿದ್ದ.

    ಘಟನೆಯ ಬಳಿಕ ವಾಟರ್ ಮುಜಾಯಿದ್ ಬಗ್ಗೆ ಅನುಮನ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಕೂಡ ವ್ಯಕ್ತಪಡಿಸಿದ್ದರು. ಕಳೆದ ಇಪ್ಪತ್ತೈದು ದಿನದಿಂದ ಮುಜಾಯಿದ್‍ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಕೋಲಾರ, ಮುಳಬಾಗಲು, ರಾಮನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೊಬೈಲ್ ಸ್ಚಿಚ್ ಆಪ್ ಮಾಡಿ ಒಂದೊಂದು ದಿನ ಸಂಬಂಧಿಕರ ಮನೆಯಲ್ಲಿ ಉಳಿಯುತ್ತಿದ್ದ. ಸದ್ಯ ಡ್ರಗ್ಸ್ ಪ್ರಕರಣದಲ್ಲಿ ಪೊಲೀಸರು ಬ್ಯುಸಿಯಾದ ಹಿನ್ನೆಲೆಯಲ್ಲಿ ನಮ್ಮನ್ನು ಮರೆತಿರುತ್ತಾರೆ ಎಂದು ಮತ್ತೆ ಬೆಂಗಳೂರಿಗೆ ವಾಪಸ್ ಆಗಿದ್ದ ಎನ್ನಲಾಗಿದೆ. ಆದರೆ ಆರೋಪಿ ಬಗ್ಗೆ ತೀವ್ರ ನಿಗಾ ವಹಿಸಿದ್ದ ಪೊಲೀಸರು ಚಾಮರಾಜಪೇಟೆ ಠಾಣಾ ವ್ಯಾಪ್ತಿಯಲ್ಲಿ ಸಂಬಂಧಿಕರ ಮನೆಯಲ್ಲಿದ್ದಾಗ ಆರೋಪಿಯನ್ನು ಬಂಧಿಸಿದ್ದಾರೆ.