Tag: ಡಿಡಿಪಿಐ

  • ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್

    ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್

    ಚಿತ್ರದುರ್ಗ: ಡಿಡಿಪಿಐ ಕಚೇರಿಯಲ್ಲೇ (DDPI Office) ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ (Party) ನಡೆದಿರುವ ಆರೋಪ ಚಿತ್ರದುರ್ಗದಲ್ಲಿ (Chitradurga) ಕೇಳಿಬಂದಿದೆ. ಕಚೇರಿಯ ಸಿಬ್ಬಂದಿಯೋರ್ವ ಹೊಸ ಕಾರು ಖರೀದಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಎಣ್ಣೆ ಪಾರ್ಟಿ ನಡೆಸಿರೊ ವೀಡಿಯೋ ವೈರಲ್ ಆಗಿದೆ.

    20 ಲೀಟರ್‌ನ ವಾಟರ್ ಕ್ಯಾನ್‌ಗೆ ಉಪನಿರ್ದೇಶಕರ ಕಾರಿನ ಚಾಲಕ ಮದ್ಯ ಬೆರೆಸಿದ್ದು, ಇನ್ನಿತರೆ ಸಿಬ್ಬಂದಿ ಅಯ್ಯಪ್ಪ ಸ್ವಾಮಿಗೆ ಬಂಗಾರ ಮೀಸಲು ಹೋಗುತ್ತಲ್ಲ ಹಾಗಾಯ್ತು ಇದು ಅಂತ ಸಂಭಾಷಣೆ ನಡೆಸಿದ್ದಾರೆ. ಹೀಗಾಗಿ ಇಡೀ ಸಮಾಜಕ್ಕೆ ಮಾದರಿಯಾಗಿರಬೇಕಿದ್ದ ಶಿಕ್ಷಣ ಇಲಾಖೆ ಸಿಬ್ಬಂದಿ ಕಚೇರಿಯನ್ನೇ ಎಣ್ಣೆ ಪಾರ್ಟಿಗೆ ದುರ್ಬಳಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಅ.18ರವರೆಗೆ ಭಾರೀ ಮಳೆ – ಇಂದು ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಹಾಗೆಯೇ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿ ಕುಡಿದು ಮೋಜು ಮಸ್ತಿ ಮಾಡಿರುವ ವೀಡಿಯೋ ವೈರಲ್ ಆದ ಪರಿಣಾಮ ಜಿಲ್ಲೆಯಾದ್ಯಂತ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: 1 ರೂಪಾಯಿ ಬಡ್ಡಿಗೆ ಲೋನ್‌ ಕೊಡಿಸ್ತೀವಿ ಅಂತ ಬರ್ತಾರೆ ಹುಷಾರ್‌ – ಬೆಂಗಳೂರಲ್ಲೊಂದು ಖತರ್ನಾಕ್ ಲೇಡಿ ಗ್ಯಾಂಗ್

  • ಕರ್ತವ್ಯ ಲೋಪ ಆರೋಪ – ವಿಜಯಪುರ ಡಿಡಿಪಿಐ ಅಮಾನತು

    ಕರ್ತವ್ಯ ಲೋಪ ಆರೋಪ – ವಿಜಯಪುರ ಡಿಡಿಪಿಐ ಅಮಾನತು

    ವಿಜಯಪುರ: ಕರ್ತವ್ಯ ನಿರ್ಲಕ್ಷ್ಯ (Neglect of Duty) ಆರೋಪ ಹಿನ್ನೆಲೆ ವಿಜಯಪುರ (Vijayapura) ಡಿಡಿಪಿಐ (DDPI) ಹಾಗೂ ವಿಜಯಪುರ ಡಯಟ್‌ನ ಹಿರಿಯ ಉಪನ್ಯಾಸಕರಿಬ್ಬರನ್ನು ಅಮಾನತು (Suspend) ಮಾಡಲಾಗಿದೆ.

    ಐಇಡಿಎಸ್‌ಎಸ್ ಯೋಜನೆ ಅನುಷ್ಠಾನ ಮಾಡುವಲ್ಲಿ ಗಂಭೀರ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖಾ ವಿಚಾರಣೆ ಕಾಯ್ದಿರಿಸಿ ಅಮಾನತು ಆದೇಶ ಹೊಡಿಸಲಾಗಿದೆ. ವಿಜಯಪುರ ಡಿಡಿಪಿಐ ಎನ್‌ಹೆಚ್ ನಾಗೂರ, ವಿಜಯಪುರ ಡಯಟ್ ಹಿರಿಯ ಉಪನ್ಯಾಸಕರಾದ ಎಸ್‌ಎ ಮುಜಾವರ, ಎಎಸ್ ಹತ್ತಳ್ಳಿ ಅಮಾನತು ಆದ ಅಧಿಕಾರಿಗಳು. ಇದನ್ನೂ ಓದಿ: ಹನುಮಧ್ವಜ ಇಳಿಸಿದಂತೆಯೇ ನಿಮ್ಮನ್ನು ಹಿಂದೂಗಳು ಕುರ್ಚಿಯಿಂದ ಇಳಿಸುವ ದಿನ ದೂರವಿಲ್ಲ: ಸಿಎಂಗೆ ಆರ್.ಅಶೋಕ್ ಠಕ್ಕರ್

    2009-10 ಹಾಗೂ 2011-12 ರಲ್ಲಿ ಐಇಡಿಎಸ್‌ಎಸ್ ಯೋಜನೆ ಅನುದಾನ ದುರುಪಯೋಗ ಮಾಡಿರೋ ಆರೋಪ ಇವರ ಮೇಲೆ ಇದೆ. ಇವರು ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆ ಮಾಡಲು ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ದೇವಾಲಯದ ಆವರಣದಲ್ಲಿ ಮಾಂಸಾಹಾರ ಸೇವನೆ – ಇದು ಪಿಕ್ನಿಕ್‌ ಸ್ಪಾಟ್‌ ಅಲ್ಲ ಎಂದು ಕೋರ್ಟ್‌ ಗರಂ

    ನಿಯಮ ಬಾಹಿರವಾಗಿ ಅಸ್ತಿತ್ವದಲ್ಲಿ ಇರದ ಎನ್‌ಜಿಓಗಳಿಗೆ ಹಣ ಬಿಡುಗಡೆ ಮಾಡಿರೋ ಆರೋಪ ಇದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸರ್ಕಾರದ ಅಧೀನ ಕಾರ್ಯದರ್ಶಿ ಅವರಿಂದ ಅಮಾನತು ಆದೇಶ ಮಾಡಲಾಗಿದೆ. ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪರಿಂದ ಅಮಾನತು ಆದೇಶ ಮಾಡಲಾಗಿದೆ. ಇದನ್ನೂ ಓದಿ: ಬೆಂಗಳೂರಿನ ಪಿಜಿಗಳಿಗೆ ಪೊಲೀಸ್ ಇಲಾಖೆಯಿಂದ ಹೊಸ ಮಾರ್ಗಸೂಚಿ – ಐಡಿ ಕಾರ್ಡ್ ವಿತರಣೆಗೆ ಚಿಂತನೆ
  • ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ

    ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ..?- ಬಿ.ಸಿ.ನಾಗೇಶ್ ಗರಂ

    ಬೆಂಗಳೂರು: ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳ್ಬೇಕಿತ್ತಾ? ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರಶ್ನಿಸಿದ್ದಾರೆ.

    TEXTBOOK

    ಪಠ್ಯಪುಸ್ತಕ ವಿವಾದಕ್ಕೆ ಸಂಬಂಧಿಸಿದಂತೆ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಮಕ್ಕಳಿಗೆ ಸಾವಿನ ಬಗ್ಗೆ ಓದಿಸೋ ಅವಶ್ಯಕತೆ ಇತ್ತಾ? ಸೆಕ್ಸ್ ಬಗ್ಗೆ ಚಿಕ್ಕ ಮಕ್ಕಳಿಗೆ ಹೇಳಬೇಕಿತ್ತಾ? ಇದೆಲ್ಲವನ್ನು ಬರಗೂರು ರಾಮಚಂದ್ರಪ್ಪ ಸಮಿತಿ ಮಾಡಿತ್ತು. ಒಡೆಯರ್ ಬಗ್ಗೆ ಯಾಕೆ ಪಠ್ಯ ಬಿಟ್ಟಿದ್ದರು? ಬೆಂಗಳೂರಿನಲ್ಲಿ ದೇವಸ್ಥಾನ ಇರಲಿಲ್ಲವಾ? ಯಾಕೆ ದೇವಾಲಯದ ಫೋಟೋ ಹಾಕಿಲ್ಲ? ಈಗ ಇದನ್ನ ಸರಿ ಮಾಡುವ ಕೆಲಸ ಮಾಡುತ್ತಿದ್ದೇವೆ. ಅದನ್ನೂ ವಿವಾದಕ್ಕೆ ಎಳೆಯುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ವಜಾ? – ಸಚಿವರ ವರದಿ ಆಧರಿಸಿ ಕ್ರಮ ಕೈಗೊಳ್ತೇನೆಂದ ಸಿಎಂ

    Text book

    ಗೊಂದಲವಿದ್ದರೆ ನಾನೇ ಪರಿಹಾರ ಮಾಡ್ತೇನೆ: ಮೊದಲು ಟಿಪ್ಪು ಅಂದ್ರು, ಅಮೇಲೆ ಭಗತ್ ಸಿಂಗ್ ಬಗ್ಗೆ ವಿವಾದ ಮಾಡಿದ್ರು, ನಂತರ ಕುವೆಂಪು ಅಂದವರೇ ಈಗ ಬಸವಣ್ಣ ಎನ್ನುತ್ತಿದ್ದಾರೆ. ಸತ್ಯ ಹೊರಗಡೆ ಬಂದಹಾಗೇ ಅವರ ನಿಲುವು ಬದಲಾವಣೆ ಮಾಡ್ತಿದ್ದಾರೆ. ಬೇಕು ಅಂತ ವಿವಾದ ಸೃಷ್ಟಿ ಮಾಡ್ತಿದ್ದಾರೆ. ಪಠ್ಯಪುಸ್ತಕದ ಬಗ್ಗೆ ಯಾರಿಗೇ ಗೊಂದಲ ಇರಲಿ. ಸ್ವಾಮೀಜಿಗಳಿಗೆ ಗೊಂದಲ ಇದ್ದರೂ ನಾನೇ ಭೇಟಿ ಮಾಡಿ ಪರಿಹಾರ ಮಾಡ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್, ಜೆಡಿಎಸ್‍ನಲ್ಲಿ ಬಹಳ ಜನ ಸ್ನೇಹಿತರಿದ್ದಾರೆ- ರಾಜಕೀಯ ದಾಳ ಉರುಳಿಸಿದ ಸಿಎಂ

    bc nagesh

    ಪರಿಷ್ಕರಣೆ ಕೆಲಸ ಈಗ ಮುಕ್ತಾಯ ಆಗಿದೆ. ಪದೇ ಪದೇ ಪರಿಷ್ಕರಣೆ ಮಾಡಲು ಆಗೋದಿಲ್ಲ. ಈಗಾಗಲೇ ಶೇ.75 ಪಠ್ಯಪುಸ್ತಕ ಮುದ್ರಣದ ಕಾರ್ಯ ಮುಗಿದಿದೆ. ಶೇ.66 ರಷ್ಟು BEO ಕಚೇರಿಗಳಿಗೆ ತಲುಪಿದೆ. ಕಲಿಕಾ ಚೇತರಿಕೆ ಮುಗಿಯೋ ಒಳಗೆ ಪಠ್ಯ ಪುಸ್ತಕ ತಲುಪಿಸುವ ಪ್ರಯತ್ನ ಮಾಡ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯೂ ಮಂಗಳೂರು ಕೋರ್ಟ್‌ನಲ್ಲಿ ಮಳಲಿ ವಿಚಾರಣೆ

    ಇದರಲ್ಲಿ ಬಸವಣ್ಣನವರ ಪಠ್ಯ ತೆಗೆದಿಲ್ಲ. ಆದರೆ ಬರಗೂರು ಸಮಿತಿಯಲ್ಲಿ ಏನಿತ್ತು? ಈಗ ಏನು ಸೇರ್ಪಡೆಯಾಗಿದೆ ಎಂಬುದನ್ನು ಚೆಕ್ ಮಾಡ್ತೀವಿ ಎಂದು ಸ್ಪಷ್ಟಪಡಿಸಿದ್ದಾರೆ.

  • ವಿದ್ಯಾರ್ಥಿಗಳನ್ನು ಸೌಪರ್ಣಿಕಾ ನದಿ ದಾಟಿಸಿ SSLC ಪರೀಕ್ಷೆ ಬರೆಸಿದ ಉಡುಪಿ ಡಿಡಿಪಿಐ

    ವಿದ್ಯಾರ್ಥಿಗಳನ್ನು ಸೌಪರ್ಣಿಕಾ ನದಿ ದಾಟಿಸಿ SSLC ಪರೀಕ್ಷೆ ಬರೆಸಿದ ಉಡುಪಿ ಡಿಡಿಪಿಐ

    – ಶಿಕ್ಷಕರ ಮುತುವರ್ಜಿಗೆ ಜಿಲ್ಲೆಯ ಜನರ ಶ್ಲಾಘನೆ

    ಉಡುಪಿ: ತುಂಬಿ ಹರಿಯುತ್ತಿರುವ ಸೌಪರ್ಣಿಕಾ ನದಿಯನ್ನು ದಾಟಿ ಇಬ್ಬರು ವಿದ್ಯಾರ್ಥಿನಿಯರು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆದಿದ್ದಾರೆ. ಸ್ವತಃ ಉಡುಪಿ ಡಿಡಿಪಿಐ ನದಿ ದಾಟಿಸಿ ಕುದ್ರು ಪ್ರದೇಶದ ಮಕ್ಕಳಿಗೆ ಬೆಂಬಲವಾಗಿ ನಿಂತಿದ್ದಾರೆ.

    ಜಿಲ್ಲೆಯ ಬೈಂದೂರು ತಾಲೂಕಿನ ಕುರು ದ್ವೀಪದ ಇಬ್ಬರು ವಿದ್ಯಾರ್ಥಿನಿಯನ್ನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ದೋಣಿಯ ಮೂಲಕ ನದಿಯನ್ನು ದಾಟಿಸಿ ಡಿಡಿಪಿಐ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿಯವರು ಪರೀಕ್ಷಾ ಕೇಂದ್ರಕ್ಕೆ ಕರೆ ತಂದಿದ್ದಾರೆ.

    ಬೈಂದೂರು ವಲಯದ ಮರವಂತೆ ಸರ್ಕಾರಿ ಪ್ರೌಢ ಶಾಲೆಯ ಶಿಲ್ಪಾ ಹಾಗೂ ಸಂಜನಾ ಅವರ ಮನೆ ಕುರು ದ್ವೀಪದಲ್ಲಿದ್ದರು. ಊರಿಂದಾಚೆಗೆ ಬರಬೇಕೆಂದರೆ ಮರವಂತೆ, ಇಲ್ಲವಾದರೆ ನಾಡಾ ಮೂಲಕ ಸಾಗಿ ಬರಬೇಕಾಗುತ್ತದೆ. ದೋಣಿ ಮೂಲಕ ಸಾಗಿ ಬಂದರೂ ಇಲ್ಲಿನ ವಿದ್ಯಾರ್ಥಿಗಳು ಬಯಲು ದಾರಿಯಲ್ಲಿ ಮತ್ತೆ ಅರ್ಧ ಕಿ.ಮೀ ಗೂ ಹೆಚ್ಚು ನಡೆದುಕೊಂಡೇ ಕ್ರಮಿಸಿಬೇಕು. ನಿರಂತರ ಸುರಿದ ಭಾರೀ ಮಳೆಯಿಂದಾಗಿ ಪರೀಕ್ಷೆ ಬರೆಯಲು ಈ ವಿದ್ಯಾರ್ಥಿನಿಯರಿಗೆ ತುಂಬಾ ಸಮಸ್ಯೆಯಾಗಿತ್ತು. ಇದು ಪರೀಕ್ಷೆಯ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ಅವರ ಗಮನಕ್ಕೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ಮಕ್ಕಳನ್ನು ಕರೆತರಲು ಎಲ್ಲ ವ್ಯವಸ್ಥೆಗಳನ್ನು ಮಾಡಿದೆ.

    ಇಬ್ಬರು ಶಿಕ್ಷಕರನ್ನು ನಿಯೋಜಿಸಿ ಮಕ್ಕಳನ್ನು ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗಿದೆ. ವಿಶೇಷ ಕಾಳಜಿಯೊಂದಿಗೆ ಖುದ್ದು ಡಿಡಿಪಿಐ ಎಚ್.ಎನ್.ನಾಗೂರ ಹಾಗೂ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮೀ ಸ್ವತಃ ದೋಣಿ ಮೇಲೇರಿ ಮಕ್ಕಳನ್ನು ಪರೀಕ್ಷಾ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದಾರೆ. ಡಿಡಿಪಿಐ ಹಾಗೂ ಬೈಂದೂರು ತಹಸೀಲ್ದಾರ್ ಮರವಂತೆ ರಾ.ಹೆದ್ದಾರಿಯಿಂದ ಅರ್ಧ ಕಿ.ಮೀ ಬಯಲು ದಾರಿಯಲ್ಲಿ ನಡೆದು ಆ ಬಳಿಕ ದೋಣಿ ಮೂಲಕ ಕುರುವಿಗೆ ಪ್ರಯಾಣ ಬೆಳೆಸಿ ಮತ್ತೆ ಅದೇ ದೋಣಿಯಲ್ಲಿ ವಿದ್ಯಾರ್ಥಿಗಳನ್ನು ಕರೆತಂದು ಪರೀಕ್ಷಾ ಕೇಂದ್ರಕ್ಕೆ ಸುರಕ್ಷಿತವಾಗಿ ಬಿಟ್ಟು ಗಮನ ಸೆಳೆದಿದ್ದಾರೆ. ಮಕ್ಕಳ ಬಗೆಗಿನ ಶಿಕ್ಷಣ ಇಲಾಖೆಯ ಈ ಕಾಳಜಿಯನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

    ನದಿ ದಾಟಿಸಿ ಗ್ರಾಮಸ್ಥರೇ ಮಕ್ಕಳನ್ನು ಪರೀಕ್ಷೆ ಬರೆಸುವ ವ್ಯವಸ್ಥೆ ಮಾಡಬಹುದಿತ್ತು. ಗ್ರಾಮೀಣ ಭಾಗಕ್ಕೂ ಶಿಕ್ಷಣದ ಒತ್ತುಕೊಡುವ ಹಿನ್ನೆಲೆಯಲ್ಲಿ ಶಿಕ್ಷಕರ ಜೊತೆಗೆ ಸ್ವತಃ ನಾನೇ ಹೋಗಿದ್ದೇನೆ ಎಂದು ಡಿಡಿಪಿಐ ತಿಳಿಸಿದ್ದಾರೆ.

  • ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಣ ಇಲಾಖೆ ಇದೆ: ಡಿಡಿಪಿಐ ಹಂಚಾಟೆ

    ವಿಶೇಷ ಚೇತನ ಮಕ್ಕಳೊಂದಿಗೆ ಶಿಕ್ಷಣ ಇಲಾಖೆ ಇದೆ: ಡಿಡಿಪಿಐ ಹಂಚಾಟೆ

    ಧಾರವಾಡ: ವಿಶೇಷ ಚೇತನ ಮಕ್ಕಳಲ್ಲಿ ವಿಶೇಷ ಸಾಮರ್ಥ್ಯವಿದ್ದು, ಅದನ್ನು ಪ್ರಬುದ್ಧ ಮಟ್ಟಕ್ಕೆ ಬೆಳೆಸಲು ಪಾಲಕರು ಪ್ರಯತ್ನಿಸುವದರೊಂದಿಗೆ ಜೀವನ ಕೌಶಲ್ಯಗಳನ್ನು ರೂಢಿ ಮಾಡಿಸಬೇಕು. ಅವರೊಂದಿಗೆ ಸದಾ ಶಿಕ್ಷಣ ಇಲಾಖೆ ಇದೆ ಎಂದು ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನ್‍ಕುಮಾರ್ ಹಂಚಾಟೆಯವರು ಭರವಸೆ ನೀಡಿದ್ದಾರೆ.

    ಧಾರವಾಡ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಫೋರ್ಥ್ ವೇವ್ ಫೌಂಡೇಶನ್ ಸಂಯುಕ್ತ ಆಶ್ರಯದಲ್ಲಿ ಇಂದು ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ವಲಯದ ಶಾಲಾ ಸಿದ್ಧತಾ ಕೇಂದ್ರದ 50 ವಿಶೇಷ ಚೇತನ ಮಕ್ಕಳಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು. ಇದನ್ನೂ ಓದಿ: ಕಣ್ಣು ಬಿಟ್ಟಿದ್ದ ದೇವರ ಕಣ್ಣನ್ನು ಪೂಜಾರಿ ಕೈಯಿಂದಲೇ ತೆಗೆಸಿದ ತಹಶೀಲ್ದಾರ್

    ಕಿಟ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಂಚಾಟೆ ಅವರು, ವಿಶೇಷ ಚೇತನ ಮಕ್ಕಳಲ್ಲಿ ವಿಶೇಷಸಾಮರ್ಥ್ಯವಿರುತ್ತದೆ, ಅದನ್ನು ಪಾಲಕರು ಗುರುತಿಸಿ ಪ್ರೋತ್ಸಾಹಿಸಬೇಕು. ಮಕ್ಕಳಿಗೆ ಪೌಷ್ಟಿಕಾಂಶದ ಕೊರತೆಯಾಗದಂತೆ ಎಚ್ಚರವಹಿಸಬೇಕು. ವಿಶೇಷ ಚೇತನ ಮಕ್ಕಳು ಆರೋಗ್ಯವಾಗಿರಲು ಪಾಲಕರೆಲ್ಲ ತಪ್ಪದೇ ಲಸಿಕೆಯನ್ನು ಹಾಕಿಸಿಕೊಳ್ಳಿ. ಫೋರ್ಥ್ ವೇವ್ ಫೌಂಡೇಶನ್‍ನವರು ನಮ್ಮ ಜಿಲ್ಲೆಯ 200 ಮಕ್ಕಳಿಗೆ ಆಹಾರ ಧಾನ್ಯದ ಕಿಟ್ ವಿತರಿಸಿದ್ದು, ಅವರ ಕೆಲಸ ಶ್ಲಾಘನೀಯವಾದುದು ಎಂದು ಅಭಿಪ್ರಾಯಪಟ್ಟರು.

  • ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆಗೆ ಡಿಡಿಪಿಐಗಳಿಗೆ ಸುರೇಶ್ ಕುಮಾರ್ ಸೂಚನೆ

    ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆಗೆ ಡಿಡಿಪಿಐಗಳಿಗೆ ಸುರೇಶ್ ಕುಮಾರ್ ಸೂಚನೆ

    – ವಿದ್ಯಾರ್ಥಿಗಳೊಂದಿಗೆ ಸುರೇಶ್ ಕುಮಾರ್ ಸಂವಾದ

    ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಗಾಗಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಡಿಡಿಪಿಐಗೆಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

    ಪರೀಕ್ಷೆ ದಿನಾಂಕ ಘೋಷಣೆ ಹಿನ್ನೆಲೆ ಸಚಿವ ಸುರೇಶ್ ಕುಮಾರ್ ಅವರು ಡಿಡಿಪಿಐಗಳಿಗೆ ಪತ್ರ ಬರೆದಿದ್ದು, ಈ ಬಾರಿ ಪರೀಕ್ಷೆಯಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಆರೋಗ್ಯ ಪಾಲನೆಯ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳ ಕಲಿಕೆಯ ಹಿತಕ್ಕಾಗಿ ಪುನರ್ಮನನ ತರಗತಿಗಳನ್ನ ಪ್ರಾರಂಭ ಮಾಡಲಾಗಿದೆ. ಪರೀಕ್ಷೆಗೆ ಇಲಾಖೆ ತೆಗೆದುಕೊಂಡ ಮುಂಜಾಗ್ರತಗೆ ಅಗತ್ಯ ಕ್ರಮವಹಿಸಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಊರಿಗೆ ತೆರಳಿರೋ ಸಿಇಟಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

    ಅಷ್ಟೇ ಅಲ್ಲದೆ ಸ್ವತಃ ಸಚಿವರೇ ವಿದ್ಯಾರ್ಥಿಗಳ ಮನಸ್ಥಿತಿ ಅರಿಯಲು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರೀಕ್ಷೆಗೆ ಸಜ್ಜಾಗಿರುವ ಕುರಿತಂತೆ ವಿಚಾರಿಸಿದ್ದಾರೆ. ತಮ್ಮ ಕಚೇರಿಯಿಂದ ಶಿವಮೊಗ್ಗ, ಹೊಸಕೋಟೆ, ಬೆಂಗಳೂರು, ಬಾಗಲಕೋಟೆ, ಇಳ್ಕಲ್, ಹಾನಗಲ್, ಸವಣೂರು, ಗದಗ, ಹುಬ್ಬಳ್ಳಿ ಮತ್ತಿತರ ಭಾಗದ 40ಕ್ಕೂ ಹೆಚ್ಚು ವಿದ್ಯಾರ್ಥಿ ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿದ ಸಚಿವರು, ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆ ಈ ಬಾರಿ ಸ್ವಲ್ಪ ತಡವಾಗಿ ಆರಂಭವಾಗುತ್ತಿರುವುದಕ್ಕೆ ಬೇಜಾರು ಮಾಡಿಕೊಳ್ಳದೇ ಚೆನ್ನಾಗಿ ಓದಬೇಕು ಎಂದು ಸಲಹೆ ನೀಡಿದರು.

    ಆರೋಗ್ಯದ ಕಡೆ ಹೆಚ್ಚಿನ ಗಮನ ನೀಡುವುದು ಸೇರಿದಂತೆ ದೂರದರ್ಶನ ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ನೋಡುತ್ತಿದ್ದೀರಾ ಎಂದು ಪ್ರಶ್ನಿಸಿದರು. ಸಚಿವರ ಕಚೇರಿಯಿಂದ ಫೋನ್ ಕರೆ ಬಂದ ಸಂದರ್ಭದಲ್ಲಿ ಇಳಕಲ್‍ನ ವಿದ್ಯಾರ್ಥಿನಿಯೊಬ್ಬಳು ಚಂದನ ವಾಹಿನಿಯಲ್ಲಿ ಪುನರ್ಮನನ ತರಗತಿಗಳನ್ನು ವೀಕ್ಷಿಸುತ್ತಿದ್ದಳು. ಪುನರ್ಮನನ ತರಗತಿಗಳು ಚೆನ್ನಾಗಿ ಮೂಡಿಬರುತ್ತಿದ್ದು, ಈಗ ಶಾಲಾ ತರಗತಿಗಳು ನಡೆಯುತ್ತಿಲ್ಲವಾದ್ದರಿಂದ ಇದರಿಂದ ಸಾಕಷ್ಟು ಉಪಯೋಗವಾಗುತ್ತಿದೆ ಎಂದು ತಿಳಿಸಿದ್ದು ಗಮನಾರ್ಹವಾಗಿತ್ತು.

    ಶಿವಮೊಗ್ಗದ ಆದಿಚುಂಚನಗಿರಿ ಶಾಲೆಯ ವಿದ್ಯಾರ್ಥಿನಿ ಎನ್.ಎಸ್.ಶ್ರದ್ಧಾ ಒಡೆಯರಪುರ ವಿದ್ಯಾರ್ಥಿನಿ ತಮ್ಮ ಮನೆಯಲ್ಲಿ ಟಿ.ವಿ. ಇಲ್ಲವಾದ್ದರಿಂದ ಚಂದನ ವಾಹಿನಿ ನೋಡಲು ಆಗುತ್ತಿಲ್ಲ ಎಂದು ಹೇಳಿದ ತಕ್ಷಣವೇ ಶಿವಮೊಗ್ಗದ ಬಿಇಒಗೆ ಫೋನ್ ಮಾಡಿದ ಸಚಿವರು, ವಿದ್ಯಾರ್ಥಿನಿಯ ಫೋನ್ ನಂಬರ್ ನೀಡಿದ್ದಲ್ಲದೇ ಆಕೆಗೆ ಚಂದನ ವಾಹಿನಿಯ ಪುನರ್ಮನನ ತರಗತಿ ವೀಕ್ಷಿಸಲು ಸೂಕ್ತ ವ್ಯವಸ್ಥೆ ಮಾಡಿಕೊಡಲು ಸೂಚಿಸಿದರು.

    ಸಚಿವರೊಂದಿಗೆ ಮಾತನಾಡಿದ ಎಲ್ಲ ವಿದ್ಯಾರ್ಥಿಗಳು ಕೊನೆಗೂ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದರಿಂದ ಖುಷಿಯಾಗಿದ್ದು, ನಿನ್ನೆಯಿಂದಲೇ ಪರೀಕ್ಷೆಗೆ ಗಂಭೀರವಾಗಿ ಓದುತ್ತಿರುವುದಾಗಿ ಹೇಳಿಕೊಂಡರು. ಪರೀಕ್ಷೆಯೆಂದರೆ ಭೂತವಲ್ಲ, ಅದೊಂದು ಕ್ರೀಡೆ ಇದ್ದಂತೆ ಎಂದು ತಿಳಿದು ಸಂತೋಷದಿಂದ ಪರೀಕ್ಷಾ ಕೊಠಡಿಗೆ ತೆರಳುವಂತೆ ಸಚಿವರು ತಿಳಿಸಿದರು. ಹಾಗೆಯೇ ಕೊರೊನಾ ಹಿನ್ನೆಲೆಯಲ್ಲಿ ಪರೀಕ್ಷೆಗೆ ಕೈಗೊಂಡ ಸಿದ್ಧತೆಗಳನ್ನು ವಿವರಿಸಿದರಲ್ಲದೇ ತಾವು ಕಷ್ಟಪಟ್ಟು ಓದಿ ಪರೀಕ್ಷೆಯನ್ನು ಖುಷಿಯಿಂದ ಬರೆಯುವುದಷ್ಟೇ ನಿಮ್ಮ ಕೆಲಸ ಎಂದು ಸಲಹೆ ಮಾಡಿದರು.

    ಹಾಗೆಯೇ ನಿಮ್ಮ ಸ್ನೇಹಿತರಾರಾದರೂ ತಮ್ಮ ಶಾಲೆಯಿಂದ ದೂರದ ಊರಿನಲ್ಲಿದ್ದರೆ, ಅವರಿಗೆ ಹತ್ತಿರದ ಪರೀಕ್ಷಾ ಕೇಂದ್ರಕ್ಕೆ ಬದಲಾಯಿಸಿಕೊಂಡು ಅವರು ಇರುವ ಊರಿನ ಸಮೀಪದಲ್ಲೇ ಪರೀಕ್ಷೆ ಬರೆಯಲು ಅವಕಾಶ ಇರುವ ಕುರಿತು ತಿಳಿಸಬೇಕೆಂದೂ ಸುರೇಶ್ ಕುಮಾರ್ ಸಲಹೆ ನೀಡಿದರು.

  • ಪ್ರೌಢಶಾಲೆ ನಿರ್ಮಾಣಕ್ಕೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ವಿದ್ಯಾರ್ಥಿಗಳ ಧರಣಿ

    ಪ್ರೌಢಶಾಲೆ ನಿರ್ಮಾಣಕ್ಕೆ ಆಗ್ರಹಿಸಿ ಡಿಡಿಪಿಐ ಕಚೇರಿ ಮುಂದೆ ವಿದ್ಯಾರ್ಥಿಗಳ ಧರಣಿ

    ರಾಯಚೂರು: ತಾಲೂಕಿನ ಗಂಜಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆಯಲು ಒತ್ತಾಯಿಸಿ ವಿದ್ಯಾರ್ಥಿಗಳು ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಹೋರಾಟ ನಡೆಸಿದ್ದಾರೆ.

    ಗ್ರಾಮದಲ್ಲಿ 8ನೇ ತರಗತಿವರೆಗೆ ಮಾತ್ರ ಶಾಲೆ ಇದ್ದು, ಪ್ರೌಢಶಾಲೆಗಾಗಿ ದೂರದ ಊರುಗಳಿಗೆ ಹೋಗಬೇಕಾದ ಅನಿರ್ವಾಯತೆಯಿದೆ. ಹೀಗಾಗಿ ಶಾಲೆಯಿಲ್ಲದ ಕಾರಣ ಹೆಣ್ಣುಮಕ್ಕಳಿಗೆ ಬೇಗನೇ ಮದುವೆ ಮಾಡುವುದು, ಬಾಲ್ಯವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ಹೆಚ್ಚಾಗುತ್ತಿದೆ ಅಂತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಗ್ರಾಮದಲ್ಲಿ ಎಂಟನೇ ತರಗತಿ ಮುಗಿಸಿರುವ ವಿದ್ಯಾರ್ಥಿಗಳೆಲ್ಲಾ ಒಟ್ಟಾಗಿ ಪ್ರೌಢಶಾಲೆ ತೆರೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾ ಉಸ್ತುವಾರಿ ಹೊತ್ತಿರುವ ತನ್ವೀರ್ ಸೇಠ್ ಸ್ವತಃ ಶಿಕ್ಷಣ ಸಚಿವರಾಗಿರುವುದರಿಂದ ಕೂಡಲೇ ಸಮಸ್ಯೆಗೆ ಸ್ಪಂದಿಸಬೇಕು ಅಂತ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.