Tag: ಡಿನೋಟಿಫೈ

  • ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು

    ಮೈಸೂರು: ರಾಜಕೀಯ ಜಂಜಾಟದಿಂದ ಸ್ವಲ್ಪಕಾಲ ದೂರ ಉಳಿದು ಆರೋಗ್ಯ ಸುಧಾರಿಸಿಕೊಳ್ಳಲು ಧರ್ಮಸ್ಥಳದ ಶಾಂತಿವನದಲ್ಲಿ ವಿಶ್ರಾಂತಿಯಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಕಳೆದ ಒಂದು ವಾರದ ಹಿಂದಷ್ಟೇ ಮೈಸೂರಿನ ಸಿವಿಲ್ ನ್ಯಾಯಾಲಯ ಸಿದ್ದರಾಮಯ್ಯ ವಿರುದ್ಧ ಎಫ್ ಐಆರ್ ದಾಖಲಿಸಲು ಆದೇಶ ನೀಡಿತ್ತು. ಇದರ ಅನ್ವಯ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಮಾಜಿ ಸಿಎಂ ಸೇರಿ ನಾಲ್ಕು ಜನರ ವಿರುದ್ಧ 9 ಐಪಿಸಿ ಸೆಕ್ಷನ್ ಗಳಡಿ [ಸೆಕ್ಷನ್ 120ಬಿ, 197, 166, 167, 169, 200, 417, 409, 420 ಹಾಗೂ ಸೆಕ್ಷನ್ 468] ಪ್ರಕರಣ ದಾಖಲಿಸಲಾಗಿದೆ. ಎಫ್‍ಐಆರ್ ದಾಖಲಾಗಿರುವ ಕುರಿತು ಡಿಸಿಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ.

    ಏನಿದು ಪ್ರಕರಣ?
    ಮೈಸೂರಿನ ವಿಜಯನಗರದಲ್ಲಿರುವ ಸಿದ್ದರಾಮಯ್ಯ ನಿವಾಸದ ಜಾಗದ ಕುರಿತಾಗಿ ಅಕ್ರಮ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ನಗರದ ಗಂಗರಾಜು ಅಕ್ರಮದ ಬಗ್ಗೆ ಕ್ರಮ ಕೈಗೊಳ್ಳುವಂತೆ ಮೈಸೂರು ನ್ಯಾಯಾಲಯದ ಮೊರೆ ಹೋಗಿದ್ದರು.

    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ವಶಪಡಿಸಿಕೊಂಡಿದ್ದ ಜಾಗವನ್ನು ಸಿದ್ದರಾಮಯ್ಯ ಪ್ರಭಾವ ಬಳಸಿ ಡಿನೋಟಿಫೈ ಮಾಡಿಸಿದ್ದಾರೆ. ಅದೇ ಜಾಗವನ್ನು ಸಿದ್ದರಾಮಯ್ಯ ಖರೀದಿ ಮಾಡಿ ಮನೆ ಕಟ್ಟಿದ್ದಾರೆ. ಅಷ್ಟೇ ಅಲ್ಲದೇ ನಗರಾಭಿವೃದ್ಧಿ ಪ್ರಾಧಿಕಾರದ ಅನುಮತಿ ಪಡೆಯದೆ ಗ್ರಾಮ ಪಂಚಾಯಿತಿಯಿಂದ ಅನುಮತಿ ಪಡೆದಿದ್ದಾರೆ ಎಂದು ಗಂಗಾರಾಜು ಆರೋಪ ಮಾಡಿದ್ದರು.

    ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದ ಗಂಗರಾಜು, 30 ಗುಂಟೆ ಜಾಗ ಅದರ ಸುತ್ತಾ 400-500 ಎಕರೆ ಜಾಗವನ್ನು ಭೂಸ್ವಾಧಿನ ಮಾಡಿಕೊಳ್ಳುತ್ತಾರೆ. ಅದರಲ್ಲಿ ಲೇಔಟ್ ಮಾಡಲು ನಿರ್ಧಾರ ಮಾಡಿದ್ದರು. ಆದರೆ ಈ 30 ಗುಂಟೆ ಜಾಗವನ್ನು ಭೂಸ್ವಾಧಿನ ಮಾಡಿಕೊಳ್ಳದೆ ಪರೋಕ್ಷವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ತಿಳಿಸಿದ್ದರು.

    ಸದ್ಯ ಸಿದ್ದರಾಮಯ್ಯ ಜೊತೆ ಮುಡಾದ ಮಾಜಿ ಅಧ್ಯಕ್ಷರಾದ ಸಿ. ಬಸವೇಗೌಡ, ಡಿ ಧೃವಕುಮಾರ್ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಸಿ. ಬಸವೇಗೌಡ ಕೂಡ ಸಿದ್ದರಾಮಯ್ಯ ಅವರಿಗೆ ಸಹಾಯ ಮಾಡಿದ್ದಾರೆ ಎಂದು ಗಂಗರಾಜು ಆರೋಪಿಸಿದ್ದರು.

  • ಡಿನೋಟಿಫೈ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬಿಎಸ್‍ವೈ ವಿರುದ್ಧ ಸುಳ್ಳು ಹೇಳಲು ಭೂಸ್ವಾಧೀನಾಧಿಕಾರಿಗೆ ಒತ್ತಡ?

    ಡಿನೋಟಿಫೈ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಬಿಎಸ್‍ವೈ ವಿರುದ್ಧ ಸುಳ್ಳು ಹೇಳಲು ಭೂಸ್ವಾಧೀನಾಧಿಕಾರಿಗೆ ಒತ್ತಡ?

    ಬೆಂಗಳೂರು: ಗಣಿ ಉಪಕಾರ್ಯದರ್ಶಿ ಹಾಗೂ ಕೆಎಎಸ್ ಅಧಿಕಾರಿ ಬಸವರಾಜೇಂದ್ರ ಎಂಬವರು ಸಿಡಿಸಿರೋ ಹೊಸ ಬಾಂಬ್‍ನಿಂದ ರಾಜ್ಯದಲ್ಲಿ ದ್ವೇಷ ರಾಜಕಾರಣ ನಡೆಯುತ್ತಿದ್ಯಾ ಎನ್ನುವ ಪ್ರಶ್ನೆಗೆ ಈಗ ಎದ್ದಿದೆ.

    2010ರಿಂದ 14 ತಿಂಗಳು ಭೂಸ್ವಾಧೀನಾಧಿಕಾರಿಯಾಗಿದ್ದ ಬಸವರಾಜೇಂದ್ರ ಅವರು ಮುಖ್ಯಕಾರ್ಯದರ್ಶಿ ಕುಂಠಿಯ ಅವರಿಗೆ ಪತ್ರ ಬರೆದಿದ್ದಾರೆ. ಬಿಎಸ್ ಯಡಿಯೂರಪ್ಪ ವಿರುದ್ಧ ಸುಳ್ಳು ಹೇಳಿಕೆ ನೀಡುವಂತೆ ಎಸಿಬಿಯ ಇಬ್ಬರು ಅಧಿಕಾರಿಗಳು ನನಗೆ ಬೆದರಿಕೆ ಹಾಕಿದ್ದಾರೆ ಎಂದು ಬಸವರಾಜೇಂದ್ರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಒಂದು ವೇಳೆ, ಬಿಎಸ್‍ವೈ ವಿರುದ್ಧ ಸುಳ್ಳು ಹೇಳದಿದ್ದರೆ ನನ್ನನ್ನು ಆರೋಪಿಯನ್ನಾಗಿ ಮಾಡಿ ಜೈಲಿಗೆ ಹಾಕುತ್ತೇವೆ ಎಂದು ಡಿವೈಎಸ್ಪಿ ಬಾಲರಾಜ್ ಹಾಗೂ ಆಂಥೋಣಿ ಒತ್ತಡ ಹೇರಿದ್ದಾರೆ ಎಂದು ರಾಜ್ಯಪಾಲ ವಾಲಾ ಹಾಗೂ ಮುಖ್ಯ ಕಾರ್ಯದರ್ಶಿ ಕುಂಠಿಯಾ ಬಸವರಾಜೇಂದ್ರ ದೂರು ನೀಡಿದ್ದಾರೆ.

    ಇಷ್ಟೇ ಅಲ್ಲದೇ ಸುಳ್ಳು ಹೇಳದೇ ಇದ್ದರೆ ಬಡ್ತಿ ನೀಡುವುದಿಲ್ಲ ಎಂದು ಸರ್ಕಾರದಿಂದ ಬ್ಲಾಕ್‍ಮೇಲ್ ಮಾಡಿದ್ದಾರೆ ಎನ್ನುವ ವಿಚಾರವನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಬಸವರಾಜೇಂದ್ರ ಅವರು ದೂರು ನೀಡಿದ ಪತ್ರ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.