Tag: ಡಿಬಿಟಿ

  • ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    ಅನ್ನಭಾಗ್ಯ ಫಲಾನುಭವಿಗಳಿಗೆ ಸರ್ಕಾರ ಶಾಕ್ – ಕಳೆದೆರಡು ತಿಂಗಳಿಂದ ಸಿಕ್ಕಿಲ್ಲ ಅಕ್ಕಿ ದುಡ್ಡು

    ಬೆಂಗಳೂರು: ಕಾಂಗ್ರೆಸ್‌ನ (Congress) ಮಹತ್ವದ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯಕ್ಕೆ (Annabhagya) ವಿಘ್ನ ಎದುರಾಗಿದೆ. ಸರ್ಕಾರ ಬಿಪಿಎಲ್ ಕಾರ್ಡ್‌ದಾರರಿಗೆ (BPL Card Holders) ಶಾಕ್ ನೀಡಿದೆ. ಜನರಿಗೆ ಕಳೆದ ಎರಡು ತಿಂಗಳ ಅಕ್ಕಿ ಹಣ ಸಿಕ್ಕಿಲ್ಲ. ಹೀಗಾಗಿ ಜನ ನ್ಯಾಯಬೆಲೆ ಅಂಗಡಿಯವರ ಜೊತೆ ಜಗಳ ಮಾಡುತ್ತಿದ್ದಾರೆ. ನಮಗೆ ದುಡ್ಡು ಕೊಡದಿದ್ರೂ ಪರವಾಗಿಲ್ಲ, ಆಹಾರ ಪದಾರ್ಥನಾದ್ರೂ ಕೊಡಿ ಎನ್ನುತ್ತಿದ್ದಾರೆ.

    ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಐದು ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆ ಕೂಡಾ ಒಂದು. ಬಿಪಿಎಲ್ ಕುಟುಂಬಗಳಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಹಿಂದೆ ಅನ್ನಭಾಗ್ಯ ವಿಚಾರದಲ್ಲಿ ಕರ್ನಾಟಕದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡುವ ವಿಚಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಜಟಾಪಟಿ ನಡೆಯುತ್ತಿತ್ತು. ಸದ್ಯ ಸರ್ಕಾರ ಬಿಪಿಎಲ್ ಕಾರ್ಡ್ದಾರ ಕುಟುಂಬಗಳ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಬದಲಾಗಿ ಖಾತೆಗೆ ಹಣ ವರ್ಗಾವಣೆ ಮಾಡುತ್ತಿದೆ. ಪ್ರತಿ ಕೆಜಿ ಅಕ್ಕಿಗೆ ತಲಾ 34 ರೂ.ನಂತೆ ಒಟ್ಟು 5 ಕೆಜಿ ಅಕ್ಕಿಗೆ 170 ರೂ. ನೀಡಲಾಗುತ್ತಿತ್ತು. ಆದರೆ ಕಳೆದ ಎರಡು ತಿಂಗಳಿಂದ ಅನ್ನಭಾಗ್ಯ ಫಲಾನುಭವಿಗಳಿಗೆ ಯಾವುದೇ ಹಣ ಪಾವತಿ ಆಗಿಲ್ಲ. ಈ ಬಗ್ಗೆ ಜನರಿಂದ ಹಾಗೂ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ಬೆಂಗಳೂರು | ಬಿಎಂಟಿಸಿ ಚಾಲಕನ ಮೇಲೆ ಬೈಕ್ ಸವಾರನಿಂದ ಹಲ್ಲೆ

    ಕಳೆದ ಎರಡು ದಿನದ ಹಿಂದೆ ಅಗಸ್ಟ್ ತಿಂಗಳ ಡಿಬಿಟಿ ಅಥವಾ ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ ಹಣ ಬಂದಿದೆ. ಆದರೆ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ಎರಡು ತಿಂಗಳ ಹಣವನ್ನು ಆಹಾರ ಹಾಗೂ ನಾಗರೀಕ ಸರಬರಾಜು ಇಲಾಖೆ ಕೊಟ್ಟಿಲ್ಲ. ಹೀಗಾಗಿ ಅಕ್ಕಿಯೂ ಇಲ್ಲದೇ ಹಣವೂ ಇಲ್ಲದೇ ಬಡವರ್ಗದ ಜನ ಪರದಾಡುತ್ತಿದ್ದಾರೆ. ಹೀಗಾಗಿ ಪಡಿತರ ವಿತರಕರ ಜೊತೆ ಪ್ರತಿನಿತ್ಯ ವಾಗ್ವಾದಕ್ಕೆ ಇಳಿಯುತ್ತಿದ್ದಾರೆ. ಇದನ್ನೂ ಓದಿ: ಮೈಸೂರಿನ ಸರ್ಕಾರಿ ಶಾಲೆ ಜಾಗ ವಕ್ಫ್ ಆಸ್ತಿ – ಅಭಿನಂದನೆಗಳು ಸರ್ ಎಂದು ಸಿಎಂಗೆ ಪ್ರತಾಪ್ ಸಿಂಹ ಟಾಂಗ್

    ಈ ಬಗ್ಗೆ ಮಾತನಾಡಿದ ಕೃಷ್ಣಪ್ಪ, ಜನರ ಸಮೀಕ್ಷೆಯಂತೆ 95% ಜನ ಹಣದ ಬದಲಾಗಿ, ಆಹಾರ ಪದಾರ್ಥಗಳಾಗಿ ಸಕ್ಕರೆ, ಬೇಳೆ, ಅಡುಗೆ ಎಣ್ಣೆ, ಉಪ್ಪು ಕೊಡಿ ಎಂದಿದ್ದಾರೆ. ಕೇಂದ್ರದಿಂದ ಸರ್ಕಾರ ಅಕ್ಕಿ ಖರೀದಿಸಲಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರೇಯಸಿ ತಾಯಿಗಾಗಿ ಚೈನ್ ಕಳ್ಳತನ – ಡ್ಯಾನ್ಸ್ ಮಾಸ್ಟರ್ ಅರೆಸ್ಟ್

  • Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ

    Budget 2024: ಜನಸಂಖ್ಯಾ ಸ್ಫೋಟ ತಡೆಗೆ ಉನ್ನತ ಅಧಿಕಾರಿಗಳ ಸಮಿತಿ

    ನವದೆಹಲಿ: ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆಯಿಂದ (Population) ಉಂಟಾಗುವ ಸವಾಲುಗಳನ್ನ ನಿಭಾಯಿಸಲು ಉನ್ನತ ಅಧಿಕಾರ ಸಮಿತಿ ರಚಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ತಿಳಿಸಿದ್ದಾರೆ.

    ಲೋಕಸಭೆಯಲ್ಲಿ ಮಧ್ಯಂತರ ಬಜೆಟ್ (Interim Budget 2024) ಮಂಡಿಸಿದ ಅವರು, ವೇಗವಾಗಿ ಬೆಳೆಯುತ್ತಿರುವ ಸಂಖ್ಯೆ ಮತ್ತು ಜನಸಂಖ್ಯೆಯಿಂದ ಸೃಷ್ಟಿಯಾಗುವ ಸವಾಲುಗಳನ್ನು ಪರಿಗಣಿಸಿ, ಸಮರ್ಥವಾಗಿ ಎದುರಿಸಲು ಉನ್ನತ ಅಧಿಕಾರ ಸಮಿತಿಯನ್ನು ರಚಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆದಾಯ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

    `ವಿಕ್ಷಿತ್ ಭಾರತ್’ (ಅಭಿವೃದ್ಧಿ ಹೊಂದಿದ ಭಾರತ) ನಿರ್ಮಾಣ ಮಾಡುವ ಗುರಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಈ ಸವಾಲುಗಳನ್ನು ಎದುರಿಸುವ ನಿಟ್ಟಿನಲ್ಲಿ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಹೇಳಿದ್ದಾರೆ.

    ಇದರೊಂದಿಗೆ ಹಣಕಾಸು ಸಚಿವರು, ಮುಂಬರುವ ರಾಷ್ಟ್ರೀಯ ಚುನಾವಣೆಯಲ್ಲಿ ನರೇಂದ್ರ ಮೋದಿ (Narendra Modi) ಸರ್ಕಾರ ಮತ್ತೊಮ್ಮೆ ಆಯ್ಕೆಯಾಗಲಿದೆ. ಕೇಂದ್ರ ಸರ್ಕಾರದ ಉತ್ತಮ ನೀತಿಗಳು ಮತ್ತು ಕೆಲಸಗಳು ಸತತ 3ನೇ ಬಾರಿಗೆ ಬಿಜೆಪಿ ಅಧಿಕಾರಕ್ಕೆ ಮರಳಲು ಸಹಾಯ ಮಾಡುತ್ತದೆ. ಮುಂದಿನ ಜುಲೈನಲ್ಲಿ ನಮ್ಮ ಸರ್ಕಾರವು ಅಭಿವೃದ್ಧಿ ಹೊಂದಿದ ಭಾರತದ ಪರಿಕಲ್ಪನೆಗಾಗಿ ಪೂರ್ಣಪ್ರಮಾಣದ ಬಜೆಟ್ ಮಂಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪಿಎಂ ಸೂರ್ಯೋದಯ ಯೋಜನೆಗೆ ವಿಶೇಷ ಒತ್ತು – ಒಂದು ಕೋಟಿ ಮನೆಗಳಿಗೆ ಸೋಲಾರ್ ಮೇಲ್ಛಾವಣಿ

    ಜನಸಂಖ್ಯೆಯಲ್ಲಿ ಭಾರತವೇ ನಂ.1: ಜಗತ್ತಿನಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದ ಚೀನಾವನ್ನು ಭಾರತ ಹಿಂದಿಕ್ಕಿದೆ. ವಿಶ್ವಸಂಸ್ಥೆಯ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಭಾರತವು 142.86 ಕೋಟಿ ಜನಸಂಖ್ಯೆ ಹೊಂದುವ ಮೂಲಕ ಮೊದಲ ಸ್ಥಾನಕ್ಕೆ ಏರಿದ್ದು, 142.57 ಕೋಟಿ ಜನಸಂಖ್ಯೆಯನ್ನು ಹೊಂದುವ ಮೂಲಕ ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ. ಇದನ್ನೂ ಓದಿ: ಜನಸಂಖ್ಯೆ ಸ್ಫೋಟ, ಚೀನಾ ಹಿಂದಿಕ್ಕಿದ ಭಾರತ – ದೇಶದ ಒಟ್ಟು ಜನಸಂಖ್ಯೆ ಎಷ್ಟು ಗೊತ್ತಾ?

  • ಡಿಬಿಟಿ ಮೂಲಕ 34 ಲಕ್ಷ ಕೋಟಿ ರೂ. ವಿತರಣೆ : ನಿರ್ಮಲಾ ಸೀತಾರಾಮನ್‌

    ಡಿಬಿಟಿ ಮೂಲಕ 34 ಲಕ್ಷ ಕೋಟಿ ರೂ. ವಿತರಣೆ : ನಿರ್ಮಲಾ ಸೀತಾರಾಮನ್‌

    ನವದೆಹಲಿ: ಫಲಾನುಭವಿಗಳಿಗೆ ಒಟ್ಟು 34 ಲಕ್ಷ ಕೋಟಿ ರೂ. ಸಬ್ಸಿಡಿ ಹಣವನ್ನು ನೇರ ವರ್ಗಾವಣೆ (DBT) ಮಾಡಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ.

    ಹೊಸ ಲೋಕಸಭೆಯಲ್ಲಿ ಬಜೆಟ್‌ (Union Budget) ಮಂಡನೆ ಮಾಡಿದ ಅವರು ಡಿಬಿಟಿಯಿಂದಾಗಿ 2.7 ಲಕ್ಷ ಕೋಟಿ ರೂ. ಹಣ ಸರ್ಕಾರಕ್ಕೆ ಉಳಿತಾಯವಾಗಿದೆ ಎಂದು ತಿಳಿಸಿದರು.  ಇದನ್ನೂ ಓದಿ: BUDGET2024: LIVE Updates – ಕೇಂದ್ರ ಬಜೆಟ್‌ 2024

    ಕಾಲಕಾಲ ರೈತರಿಗೆ ನೀಡುವ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಸಬ್ಕಾ ಸಾಥ್‌, ಸಬ್ಕಾ ವಿಕಾಸ್‌ ನಮ್ಮ ಸರ್ಕಾರ ಮಂತ್ರವಾಗಿದೆ. ಒಟ್ಟು ಇಲ್ಲಿಯವರೆಗೆ 80 ಕೋಟಿ ಜನರಿಗೆ ಉಚಿತ ಪಡಿತರ ವಿತರಣೆ ಮಾಡಲಾಗಿದೆ ಎಂದು ಹೇಳಿದರು.

  • ಪ್ರತಿ ಎಕರೆಗೆ 250 ರೂ. ಡೀಸೆಲ್‌ ಸಬ್ಸಿಡಿ – ತಿಂಗಳಾಂತ್ಯಕ್ಕೆ ರೈತ ಶಕ್ತಿ ಯೋಜನೆಗೆ ಚಾಲನೆ

    ಪ್ರತಿ ಎಕರೆಗೆ 250 ರೂ. ಡೀಸೆಲ್‌ ಸಬ್ಸಿಡಿ – ತಿಂಗಳಾಂತ್ಯಕ್ಕೆ ರೈತ ಶಕ್ತಿ ಯೋಜನೆಗೆ ಚಾಲನೆ

    ಬೆಂಗಳೂರು: ರೈತಾಪಿ ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್‌ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆಗೆ (Karnataka Raitha Shakti Scheme) ಈ ತಿಂಗಳಾಂತ್ಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಾಲನೆ‌ ನೀಡಲಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ (BC Patil) ಹೇಳಿದ್ದಾರೆ.

    ರೈತರಿಗೆ ಕೃಷಿ ಯಾಂತ್ರೀಕರಣವು ಡೀಸೆಲ್‌ (Diesel) ಇಂಧನದ ಮೇಲೆ ಬಹುತೇಕ‌ ಅವಲಂಬಿತವಾಗಿದೆ. ಹೀಗಾಗಿ ರೈತರ (Farmers) ಮೇಲಿನ ಆರ್ಥಿಕ ಹೊರೆ ಆದಷ್ಟು ಕಡಿತಗೊಳಿಸುವ ನಿಟ್ಟಿನಲ್ಲಿ 2022 -23 ನೇ ಸಾಲಿನ ಬಜೆಟ್‌ನಲ್ಲಿ ರೈತ ಶಕ್ತಿ ಯೋಜನೆಯನ್ನು ಪ್ರಕಟಿಸಲಾಗಿತ್ತು.

    ಪ್ರತಿ ಎಕರೆಗೆ 250 ರೂ.ನಂತೆ ಗರಿಷ್ಠ ಐದು ಎಕರೆಗೆ ನೇರ ನಗದು ವರ್ಗಾವಣೆ (DBT) ಮೂಲಕ ಡೀಸೆಲ್ ಸಹಾಯಧನವನ್ನು ನೀಡಲಾಗುತ್ತದೆ. ಸುಮಾರು 45 ಲಕ್ಷಕ್ಕೂ ಹೆಚ್ಚಿನ ರೈತಾಪಿ ಕುಟುಂಬಗಳಿಗೆ ಡಿಬಿಟಿ ಮೂಲಕ ಸಬ್ಸಿಡಿಯನ್ನು ನೇರವಾಗಿ ರೈತರ ಖಾತೆಗೆ ಸಿಎಂ ನೇರವಾಗಿ ಬಿಡುಗಡೆ ಮಾಡಲಿದ್ದಾರೆ.

    ರಾಜ್ಯದ ರೈತರಿಗೆ ಕೃಷಿ ಇಲಾಖೆಯ ಎಲ್ಲಾ ಯೋಜನೆಗಳನ್ನು ರೈತರಿಗೆ FRUITS ಫೋರ್ಟಲ್‌‌ ಮೂಲಕ ನೋಂದಣಿ ಗುರುತಿನ ಸಂಖ್ಯೆ ಬಳಸಿ ಕಿಸಾನ್ ತಂತ್ರಾಂಶದ ಮೂಲಕವೇ ಅನುಷ್ಠಾನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ FRUITS ಪೋರ್ಟಲ್‌ನಲ್ಲಿ ನೋಂದಣಿಗೊಂಡ ರಾಜ್ಯದ ಎಲ್ಲಾ ರೈತರಿಗೆ ರೈತ ಶಕ್ತಿ ಯೋಜನೆಯನ್ನು ಕಿಸಾನ್ ತಂತ್ರಾಂಶ ಬಳಸಿಕೊಂಡು ನೇರ ವರ್ಗಾವಣೆ (DBT) ಮೂಲಕವೇ ಯೋಜನೆ ಅನುಷ್ಠಾನ ಮಾಡಲಾಗುತ್ತಿದೆ.  ಇದನ್ನೂ ಓದಿ: ಪ್ರೇಕ್ಷಕರಿಲ್ಲದೇ ಖಾಲಿ ಹೊಡೆದ ಸ್ಟೇಡಿಯಂ – ಕೇರಳ ಕ್ರೀಡಾ ಸಚಿವರ ವಿವಾದಾತ್ಮಕ ಹೇಳಿಕೆ ವಿರುದ್ಧ ನಿಲ್ಲದ ಆಕ್ರೋಶ

    ನಗದು ಯೋಜನೆಯ FRUITS ಪೋರ್ಟಲ್ ನಲ್ಲಿ ನೊಂದಣಿಗೊಂಡ ರಾಜ್ಯದ ಎಲ್ಲಾ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಈ ಯೋಜನೆಯು ಅರ್ಹತಾಧಾರಿತ ಯೋಜನೆಯಾಗಿರುವುದರಿಂದ ಯಾವುದೇ ರೈತರು ಪ್ರತ್ಯೇಕವಾಗಿ ವೈಯಕ್ತಿಕ ಅರ್ಜಿ ಸಲ್ಲಿಸುವ ಅವಶ್ಯಕತೆಯಿರುವುದಿಲ್ಲ. ದಾಖಲೆಗಳ ಪರಿಶೀಲನೆಯನ್ನು ಸರ್ಕಾರದ FRUITS ಪೋರ್ಟಲ್ ನಲ್ಲಿ ಲಭ್ಯವಿರುವ ದತ್ತಾಂಶಗಳ ಆಧಾರದ ಮೇಲೆ ಮಾಡಲಾಗುತ್ತದೆ.

    FRUITS ಪೋರ್ಟಲ್‌ನಲ್ಲಿ ನಮೂದಿಸಲಾದ ಜಾಗದ ವಿಸ್ತೀರ್ಣದ ಆಧಾರದ ಮೇಲೆ ರೈತರಿಗೆ ಡೀಸೆಲ್‌ ಸಹಾಯಧನವನ್ನು ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. FRUITS ತಂತ್ರಾಂಶದಲ್ಲಿ ನೋಂದಣಿಗೊಂಡ ರೈತರು ಹೊಂದಿರುವ ಭೂ ಹಿಡುವಳಿಯ ಆಧಾರದ ಮೇಲೆ ಪ್ರತಿಯೊಬ್ಬ ರೈತರಿಗೆ ಪ್ರತಿ ಎಕರೆಗೆ 250 ರೂ. ಗರಿಷ್ಠ ಐದು ಎಕರೆಗೆ 1250 ರೂ. ವರೆಗೆ ಡೀಸೆಲ್ ಸಹಾಯಧನವನ್ನು ಒದಗಿಸಲಾಗುತ್ತದೆ.

    ಅರ್ಹ ರೈತರಿಗೆ ಡೀಸಲ್ ಸಹಾಯಧನದ ಮೊತ್ತವನ್ನು ಸರ್ಕಾರದ ಡಿಬಿಟಿ ವೋರ್ಟಲ್ ಮೂಲಕ ಸೀಡೆಡ್ ಬ್ಯಾಂಕ್ / ಪೋಸ್ಟ್ ಆಫೀಸ್ ಖಾತೆಗೆ ವರ್ಷಕ್ಕೊಮ್ಮೆ ವರ್ಗಾಯಿಸಲಾಗುತ್ತದೆ ಎಂದು ಕೃಷಿ ಸಚಿವರ ಕಚೇರಿ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಡಿಬಿಟಿ ಮೊಬೈಲ್ ಅಪ್ಲಿಕೇಷನ್‍ಗೆ ಮುಖ್ಯಮಂತ್ರಿ ಚಾಲನೆ

    ಡಿಬಿಟಿ ಮೊಬೈಲ್ ಅಪ್ಲಿಕೇಷನ್‍ಗೆ ಮುಖ್ಯಮಂತ್ರಿ ಚಾಲನೆ

    – 12 ಸಾವಿರ ಕೋಟಿ ರೂ.ಗೂ ಅಧಿಕ ನೆರವು ವಿತರಣೆ

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಸಿಬ್ಬಂದಿ ಮತ್ತು ಆಡಳಿ ಸುಧಾರಣೆ ಇಲಾಖೆ (ಇ-ಆಡಳಿತ) ಅಭಿವೃದ್ಧಿ ಪಡಿಸಿರುವ ‘ಡಿ.ಬಿ.ಟಿ’ ಮೊಬೈಲ್ ಅಪ್ಲಿಕೇಶನ್‍ಗೆ ಚಾಲನೆ ನೀಡಿದರು.

    ರಾಜ್ಯದಲ್ಲಿ ಈವರೆಗೆ ಸುಮಾರು 120 ಯೋಜನೆಗಳನ್ನು ಈ ವೇದಿಕೆಗೆ ಒಳಪಡಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ 12 ಸಾವಿರ ಕೋಟಿ ರೂ. ಗಳಿಗೂ ಹೆಚ್ಚು ಮೊತ್ತವನ್ನು ಫಲಾನುಭವಿಗಳ ಆಧಾರ್ ಜೋಡಣೆಯಾದ ಖಾತೆಗೆ ನೇರ ವರ್ಗಾವಣೆ ಮಾಡಲಾಗಿದೆ. ಈ ವ್ಯವಸ್ಥೆಯಿಂದ ಹಣ ದುರುಪಯೋಗ, ಲೋಪ ದೋಷ ಅಥವಾ ಮಧ್ಯವರ್ತಿಗಳ ಹಾವಳಿ ಇಲ್ಲ ಎಂದು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.

    ಕೋವಿಡ್-19ರ ಮೊದಲನೆ ಮತ್ತು ಎರಡನೆಯ ಅಲೆಯ ಸಂದರ್ಭದಲ್ಲಿ ಸರ್ಕಾರವು ಘೋಷಿಸಿದ ಎಲ್ಲಾ ಪ್ಯಾಕೇಜ್‍ಗಳು ಈ ವೇದಿಕೆ ಮೂಲಕವೇ ಪಾವತಿ ಮಾಡಲಾಗಿದೆ. ಈ ಬಾರಿಯ ಆಯವ್ಯಯದಲ್ಲಿ ಘೋಷಿಸಿದಂತೆ ರಾಜ್ಯದಲ್ಲಿ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಎಲ್ಲ ಯೋಜನೆಗಳನ್ನು ಡಿಬಿಟಿ ವೇದಿಕೆಯಡಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಈ ವೇದಿಕೆಯು ಫಲಾನುಭವಿಯನ್ನು ಆಧಾರ್ ಸಂಖ್ಯೆ ಮೂಲಕ ಗುರುತಿಸಿ ಫಲಾನುಭವಿಯ ಆಧಾರ್ ಅನ್ನು ಆರ್ಥಿಕ ವಿಳಾಸವಾಗಿ (Financial Address) ಪರಿಗಣಿಸಿ ನಗದು ವರ್ಗಾವಣೆಯನ್ನು ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾವಣೆ ಮಾಡಲಾಗುವುದು. ಬ್ಯಾಂಕ್ ಖಾತೆಗೆ ಆಧಾರ್ ಜೋಡನೆ ಮಾಹಿತಿಯು ಯು.ಐ.ಡಿ.ಐ. ಜಾಲತಾಣದಲ್ಲಿ ಮಾತ್ರ ಲಭ್ಯವಿದ್ದು ನಾಗರಿಕರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿರುವ ಬಗ್ಗೆ ತಿಳಿದುಕೊಳ್ಳಲು ಕಷ್ಟವಾಗಿತ್ತು. ನಾಗರಿಕರ ಆಧಾರ್ ಬ್ಯಾಂಕ್ ಖಾತೆಗೆ ಜೋಡಣೆಯಾಗದೇ ಇದ್ದಲ್ಲಿ ರಾಜ್ಯ ಸರ್ಕಾರವು ನಗದು ಸೌಲಭ್ಯ ವರ್ಗಾವಣೆಗೆ ಬಳಸುತ್ತಿರುವ ಆಧಾರ್ ಆಧಾರಿತ ನಗದು ವರ್ಗಾವಣೆ ವ್ಯವಸ್ಥೆ (Aadhaar Based Payment System) ಮೂಲಕ ಹಣ ಪಡೆಯಲು ಸಾಧ್ಯವಾಗುವುದಿಲ್ಲ.

    ಬಹಳಷ್ಟು ನಾಗರಿಕರಿಗೆ ತಮ್ಮ ಯಾವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿದೆ ಎಂಬ ಮಾಹಿತಿ ತಿಳಿದಿರುವುದಿಲ್ಲ. ಇದರಿಂದ ಸರ್ಕಾರವು ಯಾವ ಬ್ಯಾಂಕ್ ಖಾತೆಗೆ ನಗದು ಸೌಲಭ್ಯವನ್ನು ಜಮೆ ಮಾಡಿದೆ ಎಂಬ ವಿವರಗಳನ್ನು ತಿಳಿದುಕೊಳ್ಳಲು ಇವರುಗಳಿಗೆ ಬಹಳ ಕಷ್ಟವಾಗುತ್ತದೆ. ಅಲ್ಲದೆ ಇತ್ತೀಚೆಗೆ ರಾಜ್ಯ ಸರ್ಕಾರವು ನಾಗರಿಕರಿಂದ ಯಾವುದೇ ಅರ್ಜಿ ಪಡೆಯದೇ ಅರ್ಹತೆ ಆಧಾರದ ಮೇಲೆ ನಗದು ವರ್ಗಾವಣೆಯನ್ನು ಮಾಡುತ್ತಿರುವುದರಿಂದ ಇವರುಗಳಿಗೆ ಹಣ ಬ್ಯಾಂಕ್ ಖಾತೆಯಲ್ಲಿ ಜಮೆಯಾಗುವ ಬಗ್ಗೆಯು ಮಾಹಿತಿ ಲಭ್ಯ ಇರುವುದಿಲ್ಲ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರವು ಡಿ.ಬಿ.ಟಿ ಮೊಬೈಲ್ ಆಪ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

    ಈ ಆ್ಯಪ್ ಅನ್ನು ನಾಗರೀಕರು ಹೆಚ್ಚು-ಹೆಚ್ಚಾಗಿ ಬಳಸಿದಾಗ ಪಾರದರ್ಶಕತೆ ಇರುವ ಸರ್ಕಾರದ ಉದ್ದೇಶ ಯಶಸ್ವಿಯಾಗಲು ಸಾಧ್ಯ. ಆದ್ದರಿಂದ ನಾಗರೀಕರು ಈ ಆ್ಯಪ್‍ನ ಸದುಪಯೋಗ ಪಡೆದುಕೊಂಡು ಫಲಾನುಭವಿಗಳಿಗೆ ವರ್ಗಾವಣೆಯಾಗಿರುವ ನಗದು ವಿವರವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

    ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ಇ-ಆಡಳಿತ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ, ಡಿಬಿಟಿ ಯೋಜನಾ ನಿರ್ದೇಶಕ ಶ್ರೀವತ್ಸ, ಎನ್.ಐ.ಸಿ ಉಪ ನಿರ್ದೇಶಕರಾದ ಜಯಂತಿ ಮತ್ತಿತರರು ಉಪಸ್ಥಿತರಿದ್ದರು.

    ಡಿ.ಬಿ.ಟಿ ಅಪ್ಲಿಕೇಷನ್ ಬಗ್ಗೆ: ಈ ಆ್ಯಪ್‍ನ್ನು ಗೂಗಲ್ ಪ್ಲೇ-ಸ್ಟೋರ್ನ ಮೂಲಕ ಡೌನ್‍ಲೋಡ್ ಮಾಡಿಕೊಂಡು, ಆಧಾರ್ e-ಕೆವೈಸಿ ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಈ ಆ್ಯಪ್ NPCI (National Payment Corporation of India) ಗೆ ಸಂಪರ್ಕಿಸಿ ಆಧಾರ್ ಬ್ಯಾಂಕ್ ಸೀಡಿಂಗ್ನ ಪ್ರಸ್ತುತ ಸ್ಥಿತಿಯನ್ನು ನೀಡುತ್ತದೆ. ಡಿ.ಬಿ.ಟಿ ಮೊಬೈಲ್ ಆಪ್ ಯೋಜನೆವಾರು ವಿವಿಧ ಕಂತುಗಳಲ್ಲಿ ವರ್ಗಾಹಿಸಿದ ಪಾವತಿ ಮೊತ್ತ, ಪಾವತಿ ದಿನಾಂಕ, ಬ್ಯಾಂಕ್ ಖಾತೆ ಸಂಖ್ಯೆ ಮತ್ತು ಯು.ಟಿ.ಆರ್ ಸಂಖ್ಯೆಯನ್ನು ಒದಗಿಸುತ್ತದೆ.