ದಕ್ಷಿಣದ ಖ್ಯಾತ ನಟಿ ನಯನತಾರಾ (Nayantara) ನಟನೆಯ ‘ಅನ್ನಪೂರ್ಣಿ’ (Annapurni) ಸಿನಿಮಾವನ್ನು ಕೊನೆಗೂ ನೆಟ್ ಫಿಕ್ಸ್ ತೆಗೆದು ಹಾಕಿದೆ. ಈ ಸಿನಿಮಾ ಬಗ್ಗೆ ಸಾಕಷ್ಟು ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಸಿನಿಮಾ ಬಗ್ಗೆ ದೂರು ಕೂಡ ದಾಖಲಾಗಿತ್ತು. ಹಿಂದೂ ಭಾವನೆಗಳಿಗೆ ಧಕ್ಕೆ ಮಾಡಲಾಗಿದೆ ಎನ್ನುವ ಕಾರಣಕ್ಕಾಗಿ ಚಿತ್ರದ ವಿರುದ್ಧ ಪ್ರತಿಭಟನೆ ಕೂಡ ಮಾಡಲಾಗಿತ್ತು.
ನಾನಾ ಕಡೆಗಳಲ್ಲಿ ಅನ್ನಪೂರ್ಣಿ ಸಿನಿಮಾ ಬಗ್ಗೆ ದೂರುಗಳು ದಾಖಲಾಗುತ್ತಿದ್ದಂತೆಯೇ ಒಟಿಟಿಯಿಂದಲೇ ಚಿತ್ರವನ್ನು ತೆಗೆದು ಹಾಕಲಾಗಿದೆ. ಈ ಚಿತ್ರದಲ್ಲಿ ಶ್ರೀರಾಮನನ್ನು ಮಾಂಸಾಹಾರಿಯಾಗಿ ತೋರಿಸಲಾಗಿತ್ತು. ಇಂತಹ ವಿವಾದಿತ ದೃಶ್ಯಗಳನ್ನು ತೆಗೆದು ಹಾಕುವವರೆಗೂ ಅನ್ನಪೂರ್ಣಿ ಒಟಿಟಿಯಲ್ಲಿ ಸಿಗಲಾರದು.
ಲೇಡಿ ಸೂಪರ್ ಸ್ಟಾರ್ ನಯನತಾರಾಗೆ ಇದು 75ನೇ ಸಿನಿಮಾ. ಈ ಸಿನಿಮಾದಲ್ಲಿ ನಯನತಾರಾ ಹೊಸ ಬಗೆಯ ಪಾತ್ರ ಮಾಡಿದ್ದಾರೆ. ಅವರ ಗೆಟಪ್ ಕಂಡು ಅಭಿಮಾನಿಗಳು ಸಂಭ್ರಮಿಸಿದ್ದರು. ಪಕ್ಕಾ ಸಂಪ್ರದಾಯಸ್ಥ ಕುಟುಂಬದ ಹುಡುಗಿಯಾಗಿ ನಯನತಾರಾ ಈ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.
ಡಿಸೆಂಬರ್‌ನಲ್ಲಿ ‘ಅನ್ನಪೂರ್ಣಿ’ ಎಂಬ ಸಿನಿಮಾ ರಿಲೀಸ್ ಆಗಿತ್ತು. ಒಟಿಟಿಯಲ್ಲಿ ರಿಲೀಸ್ ಆಗಿ ಪ್ರೇಕ್ಷಕರ ಮೆಚ್ಚುಗೆ ಪಡೆದಿತ್ತು. ಚಿತ್ರದಲ್ಲಿ ನಯನತಾರಾ ತಂದೆ ಪಾತ್ರದಲ್ಲಿ ಕನ್ನಡದ ನಟ ಅಚ್ಯುತ್ ಕುಮಾರ್ ನಟಿಸಿದ್ದರು. ಅವರ ಮನೋಜ್ಞ ನಟನೆಗೆ ನಯನತಾರಾ ಮೆಚ್ಚುಗೆ ಸೂಚಿಸಿದ್ದರು.
ಸ್ಯಾಂಡಲ್ ವುಡ್ ನ ಪ್ರತಿಭಾವಂತ ನಟ ಕಿಶೋರ್ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ವಿವಾದವನ್ನು ಸುಖಾಸುಮ್ಮನೆ ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ. ಮೊನ್ನೆಯಷ್ಟೇ ಕರಾವಳಿ ದೈವಗಳ ಬಗ್ಗೆ ಪೋಸ್ಟ್ ಮಾಡಿ, ನಂಬಿಕೆ ಅಪನಂಬಿಕೆ ಬಗ್ಗೆ ಮಾತನಾಡಿದ್ದರು. ಅದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಇದೀಗ ಕೆಜಿಎಫ್ 2 ಚಿತ್ರದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಅದು ಕೂಡ ವಿವಾದಕ್ಕೀಡಾಗಿದೆ. ಅವರ ನೇರ ನುಡಿಯ ಮಾತುಗಳು ಚಿತ್ರರಂಗದಲ್ಲಿ ಸಾಕಷ್ಟು ಕುತೂಹಲವನ್ನೂ ಮೂಡಿಸುತ್ತಿವೆ.
ಯಶ್ ನಟನೆಯ ಕೆಜಿಎಫ್ 2 ಸಿನಿಮಾ ಕುರಿತು ಮಾತನಾಡಿರುವ ಅವರು, ‘ನಾನು ಕೆಜಿಎಫ್ 2 ಸಿನಿಮಾ ಈವರೆಗೂ ನೋಡಿಲ್ಲ. ನೋಡಬೇಕು ಅಂತ ಅನಿಸಿಲ್ಲ. ನಾನು ನೋಡುವ ಚಿತ್ರಗಳೇ ಬೇರೆ. ನನ್ನ ಅಭಿರುಚಿಯ ಸಿನಿಮಾದಲ್ಲಿ ಅದು ಇಲ್ಲ’ ಎಂದು ಹೇಳುವ ಮೂಲಕ ಯಶ್ ಫ್ಯಾನ್ಸ್ ಅನ್ನು ಅವರು ಕೆಣಕಿದ್ದಾರೆ. ಹಾಗಾದರೆ, ಕಿಶೋರ್ ಯಾವ ರೀತಿಯ ಚಿತ್ರಗಳನ್ನು ನೋಡುತ್ತಾರೆ ಎನ್ನುವ ಪಟ್ಟಿಯನ್ನು ಕೊಡಲಿ ಎಂದು ಯಶ್ ಫ್ಯಾನ್ಸ್ ನಟನ ಮೇಲೆ ಗರಂ ಆಗಿದ್ದಾರೆ. ಕಿಶೋರ್ ನಟಿಸಿರುವ ಸಿನಿಮಾಗಳು, ಅವರ ಅಭಿರುಚಿಗೆ ತಕ್ಕದ್ದಾದ ಚಿತ್ರಗಳಾ ಎಂದು ಪ್ರಶ್ನೆಯನ್ನೂ ಹಲವರು ಮಾಡಿದ್ದಾರೆ.
ಈ ಹಿಂದೆಯೂ ಕಿಶೋರ್ ಅವರು ಕಾಂತಾರ ಸಿನಿಮಾದ ದೈವದ ಬಗ್ಗೆ ಕೆಲವು ಮಾತುಗಳನ್ನು ಬರೆದಿದ್ದರು. ನಂಬಿಕೆ, ಮೂಢನಂಬಿಕೆಗಳ ಬಗ್ಗೆ ಚರ್ಚೆ ಮಾಡಿದ್ದರು. ದೈವಗಳನ್ನು ಯಾರು ಹೇಗೆ ನಂಬಿದರೂ, ಮೂಢನಂಬಿಕೆಗಳ ಬಗ್ಗೆ ಜಾಗ್ರತೆ ಎನ್ನುವಂತೆ ಅವರ ಪೋಸ್ಟ್ ಹಿಂದಿನ ಕಾಳಜಿ ಆಗಿತ್ತು. ಆದರೆ, ಅದನ್ನು ಜನರು ಬೇರೆ ರೀತಿಯಲ್ಲೇ ತಗೆದುಕೊಂಡರು. ಸೋಷಿಯಲ್ ಮೀಡಿಯಾದಲ್ಲಿ ಹಿಡಿದು ಜಗ್ಗಾಡಿದರು. ಅದು ಪರ ವಿರೋಧದ ಚರ್ಚೆಯೂ ಆಗಿತ್ತು. ಇದೇ ಸಮಯದಲ್ಲೇ ಟ್ವಿಟರ್ ಖಾತೆ ಡಿಲಿಟ್ ಆಗಿ, ಅನೇಕ ಅನುಮಾನಗಳಿಗೂ ಕಾರಣವಾಗಿತ್ತು. ಇದನ್ನೂ ಓದಿ: ‘ವಿರಾಟಪುರ ವಿರಾಗಿ’ ಚಿತ್ರವನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ತೋರಿಸುವೆ : ಸಚಿವ ಸಿ.ಸಿ. ಪಾಟೀಲ್
ಪ್ರಗತಿಪರ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಕಿಶೋರ್, ಅನೇಕರ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಕಾಂತಾರ ವಿಷಯದಲ್ಲಿ ಪ್ರಗತಿಪರರೇ ಅವರಿಗೆ ಅನೇಕ ಪ್ರಶ್ನೆಗಳನ್ನು ಮಾಡಿದ್ದರು. ಇದು ಏನೇ ಇರಲಿ, ಕಿಶೋರ್ ಅವರ ಟ್ವಿಟರ್ ಖಾತೆಯನ್ನು ವಾಪಸ್ಸು ಮಾಡುವುದಾಗಿ ಸಂಸ್ಥೆ ತಿಳಿಸಿದೆ. ಅತೀ ಶೀಘ್ರದಲ್ಲೇ ಅವರ ಖಾತೆ ಅವರಿಗೆ ವಾಪಸ್ಸು ಸಿಗಲಿದೆ. ಈ ಮೂಲಕ ಎದ್ದಿದ್ದ ಮತ್ತೊಂದು ವಿವಾದ ಸುಖಾಂತ್ಯ ಕಾಣಲಿದೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್ ವುಡ್ ನ ಪ್ರತಿಭಾನ್ವಿತ ನಟ ಕಿಶೋರ್ ಅವರ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆಗಿರುವ ವಿಚಾರ ಹಲವು ಅನುಮಾನಗಳಿಗೆ ಕಾರಣವಾಗಿತ್ತು. ದೈವದ ಕುರಿತಾಗಿ ಅವರು ಪೋಸ್ಟ್ ಮಾಡಿದ್ದರು ಎನ್ನುವ ಕಾರಣಕ್ಕಾಗಿ ಟ್ವಿಟರ್ ಅಕೌಂಟ್ ಅನ್ನು ಡಿಲಿಟ್ ಮಾಡಲಾಗಿದೆ ಎಂದು ಹೇಳಲಾಗಿತ್ತು. ಈ ನಡೆಯನ್ನು ಹಲವರು ಪ್ರಶ್ನಿಸಿದ್ದರು. ನೇರವಾಗಿ ಟ್ವಿಟರ್ ಸಂಸ್ಥೆಗೂ ಈ ವಿಷಯವನ್ನು ಮುಟ್ಟಿಸಿದ್ದರು. ಆದರೆ, ಅಕೌಂಟ್ ಡಿಲಿಟ್ ಆಗಿರುವುದಕ್ಕೆ ಬೇರೆ ಕಾರಣವೇ ಇದೆ. ಅದನ್ನು ಸ್ವತಃ ಕಿಶೋರ್ ಅವರೇ ಹಂಚಿಕೊಂಡಿದ್ದಾರೆ.
ತಮ್ಮ ಟ್ವಿಟರ್ ಖಾತೆಯು ಡಿಲಿಟ್ ಆಗಿರುವ ಕಾರಣದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿರುವ ಕಿಶೋರ್, ‘ಅನವಶ್ಯಕ ಊಹಾಪೋಹಗಳನ್ನು ತಡೆಯಲಿಕ್ಕಾಗಿಯಷ್ಟೇ ನನ್ನ ಟ್ವಿಟರ್ ಅಕೌಂಟ್ ಸಸ್ಪೆಂಡ್ ಆದದ್ದು. ನನ್ನ ಯಾವ ಪೋಸ್ಟ್ ನಿಂದಲೂ ಅಲ್ಲ. ಡಿಸೆಂಬರ್ 20ನೇ ತಾರೀಖು ಅಕೌಂಟ್ ಹ್ಯಾಕ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ತಕ್ಕ ಕ್ರಮ ಕೈಗೊಳ್ಳುವ ಭರವಸೆ ಟ್ವಿಟರ್ ಕೂಡ ಕೊಟ್ಟಿದೆ. ಎಲ್ಲರ ಕಾಳಜಿಗೆ ಧನ್ಯವಾದಗಳು’ ಎಂದು ಬರೆದಿದ್ದಾರೆ.
ಕಿಶೋರ್ ಅವರು ಕಾಂತಾರ ಸಿನಿಮಾದ ದೈವದ ಬಗ್ಗೆ ಕೆಲವು ಮಾತುಗಳನ್ನು ಬರೆದಿದ್ದರು. ನಂಬಿಕೆ, ಮೂಢನಂಬಿಕೆಗಳ ಬಗ್ಗೆ ಚರ್ಚೆ ಮಾಡಿದ್ದರು. ದೈವಗಳನ್ನು ಯಾರು ಹೇಗೆ ನಂಬಿದರೂ, ಮೂಢನಂಬಿಕೆಗಳ ಬಗ್ಗೆ ಜಾಗ್ರತೆ ಎನ್ನುವಂತೆ ಅವರ ಪೋಸ್ಟ್ ಹಿಂದಿನ ಕಾಳಜಿ ಆಗಿತ್ತು. ಆದರೆ, ಅದನ್ನು ಜನರು ಬೇರೆ ರೀತಿಯಲ್ಲೇ ತಗೆದುಕೊಂಡರು. ಸೋಷಿಯಲ್ ಮೀಡಿಯಾದಲ್ಲಿ ಹಿಡಿದು ಜಗ್ಗಾಡಿದರು. ಅದು ಪರ ವಿರೋಧದ ಚರ್ಚೆಯೂ ಆಗಿತ್ತು. ಇದೇ ಸಮಯದಲ್ಲೇ ಟ್ವಿಟರ್ ಖಾತೆ ಡಿಲಿಟ್ ಆಗಿ, ಅನೇಕ ಅನುಮಾನಗಳಿಗೂ ಕಾರಣವಾಗಿತ್ತು.
ಪ್ರಗತಿಪರ ವಿಚಾರಗಳನ್ನು ಹಂಚಿಕೊಳ್ಳುವ ಮೂಲಕ ಕಿಶೋರ್, ಅನೇಕರ ಕಂಗೆಣ್ಣಿಗೆ ಗುರಿಯಾಗಿದ್ದಾರೆ. ಕಾಂತಾರ ವಿಷಯದಲ್ಲಿ ಪ್ರಗತಿಪರರೇ ಅವರಿಗೆ ಅನೇಕ ಪ್ರಶ್ನೆಗಳನ್ನು ಮಾಡಿದ್ದರು. ಇದು ಏನೇ ಇರಲಿ, ಕಿಶೋರ್ ಅವರ ಟ್ವಿಟರ್ ಖಾತೆಯನ್ನು ವಾಪಸ್ಸು ಮಾಡುವುದಾಗಿ ಸಂಸ್ಥೆ ತಿಳಿಸಿದೆ. ಅತೀ ಶೀಘ್ರದಲ್ಲೇ ಅವರ ಖಾತೆ ಅವರಿಗೆ ವಾಪಸ್ಸು ಸಿಗಲಿದೆ. ಈ ಮೂಲಕ ಎದ್ದಿದ್ದ ಮತ್ತೊಂದು ವಿವಾದ ಸುಖಾಂತ್ಯ ಕಾಣಲಿದೆ.
Live Tv
[brid partner=56869869 player=32851 video=960834 autoplay=true]
ಕಾಂತಾರ (Kantara) ಸಿನಿಮಾದ ವರಾಹ ರೂಪಂ (Varaha Rupam) ಹಾಡನ್ನು ಕಾಪಿ ಮಾಡಲಾಗಿದೆ ಎನ್ನುವ ವಿಚಾರ ಹಲವು ದಿನಗಳಿಂದ ಸದ್ದು ಮಾಡುತ್ತಿದೆ. ನಮ್ಮ ಹಾಡನ್ನು ಕಾಪಿ ಮಾಡಲಾಗಿದೆ ಎಂದು ಮಲಯಾಳಂ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ಕಂಪನಿಯು ಹೇಳಿತ್ತು. ನ್ಯಾಯಾಲಯಕ್ಕೂ ದೂರು ಸಲ್ಲಿಕೆಯಾಗಿತ್ತು. ಆದರೆ, ನಿರ್ದೇಶಕ ರಿಷಬ್ ಶೆಟ್ಟಿ ಅದಕ್ಕೆ ಒಪ್ಪಿರಲಿಲ್ಲ. ನವರಸಮ್ ಆಲ್ಬಂನಿಂದ ಕದ್ದಿಲ್ಲ ಎಂದೇ ಹೇಳುತ್ತಾ ಬಂದಿದ್ದರು. ಆದರೆ, ನಿನ್ನೆಯಿಂದ ನಿರ್ಮಾಣ ಸಂಸ್ಥೆಯ ಯ್ಯೂಟ್ ನಿಂದ ಹಾಡನ್ನು ಡಿಲಿಟ್ (Delete) ಮಾಡಲಾಗಿದೆ.
ಕಾಂತಾರ ಸಿನಿಮಾದಲ್ಲಿ ಕ್ಲೈಮ್ಯಾಕ್ಸ್ ನಲ್ಲಿ ಬರುವ ವರಾಹ ರೂಪಂ ಹಾಡನ್ನು (Song) ನಾವು ಕದ್ದಿಲ್ಲ. ಸುಖಾಸುಮ್ಮನೆ ಜನರನ್ನು ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಯಾರೇ ಕೇಳಿದರೂ, ನಾವು ಅದನ್ನು ಕದ್ದ ಹಾಡಲ್ಲ ಎಂದು ಸಾಬೀತು ಪಡಿಸುತ್ತೇವೆ ಎಂದು ರಿಷಬ್ ಶೆಟ್ಟಿ (Rishabh Shetty) ಪ್ರತಿಕ್ರಿಯೆ ನೀಡಿದ್ದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಅವರು, ಯಾವುದೇ ಕಾರಣಕ್ಕೂ ಅದು ಕದ್ದ ಮ್ಯೂಸಿಕ್ ಅಲ್ಲ ಎಂದು ನುಡಿದಿದ್ದರು. ಇದನ್ನೂ ಓದಿ:ಭಾರತಕ್ಕೆ ಬೈ ಹೇಳಿದ ಬೆನ್ನಲ್ಲೇ ಕ್ರಿಸ್‌ಮಸ್‌ಗೆ ಪ್ರಿಯಾಂಕಾ ಚೋಪ್ರಾ ತಯಾರಿ
ಕಾಂತಾರ ಸಿನಿಮಾ ಅಂದಾಕ್ಷಣ ಥಟ್ಟನೆ ನೆನಪಾಗುವ ಹಾಡು ‘ವರಾಹ ರೂಪಂ’ ಗೀತೆ. ಚಿತ್ರದ ಕ್ಲೈಮ್ಯಾಕ್ಸ್ ನಲ್ಲಿ ಬರುವ ಈ ಗೀತೆಯು ಸಿನಿಮಾದ ಗಟ್ಟಿತನವನ್ನು ಮತ್ತಷ್ಟು ಹೆಚ್ಚಿಸಿತ್ತು. ಕ್ಲೈಮ್ಯಾಕ್ಸ್ ಜನರ ಮನಸ್ಸಿನಲ್ಲಿ ಉಳಿದುಕೊಳ್ಳಲು ಕಾರಣವೂ ಆಗಿತ್ತು. ಈ ಹಾಡಿನ ವಿರುದ್ಧ ಟ್ಯೂನ್ ಕದ್ದ ಆರೋಪ ಕೇಳಿ ಬಂದಿತ್ತು. ಇತ್ತೀಚೆಗಷ್ಟೇ ತೈಕ್ಕುಡಂ ಬ್ರಿಡ್ಜ್ ಬ್ಯಾಂಡ್ ನ ಸದಸ್ಯರು ಕೋರ್ಟಿಗೆ ಮೊರೆ ಹೋಗಿದ್ದರು. ಹಾಗಾಗಿ ಕೋಯಿಕ್ಕೋಡ್ ಕೋರ್ಟ್ ಸಿನಿಮಾದಲ್ಲಿ ಈ ಹಾಡು ಬಳಸದಂತೆ ತಡೆಯಾಜ್ಞೆ ನೀಡಿತ್ತು.
ಆದರೂ, ಕಾಂತರ ಸಿನಿಮಾದ ತಂಡ ನಾವು ಯಾವುದೇ ರೀತಿಯಲ್ಲಿ ಹಾಡನ್ನು ಕಾಪಿ ಮಾಡಿಲ್ಲ. ಹಾಗಾಗಿ ಚಿತ್ರದಲ್ಲಿ ಆ ಹಾಡು ಇರತ್ತೆ ಎಂದು ಈವರೆಗೂ ಥಿಯೇಟರ್ ನಲ್ಲಿ ಅದನ್ನು ಮುಂದುವರೆಸಿಕೊಂಡು ಬಂದಿದ್ದರು. ಇದೀಗ ಮತ್ತೊಂದು ಕೇಸ್ ದಾಖಲಾಗಿದ್ದು, ಮಾತೃಭೂಮಿ ಮ್ಯೂಸಿಕ್ ಸಂಸ್ಥೆಯು ಮತ್ತೆ ಕೋರ್ಟ್ ಮೊರೆ ಹೋಗಿದೆ. ಹಾಗಾಗಿ ಅರ್ಜಿಯ ವಿಚಾರಣೆ ನಡೆಸಿರುವ ಪಾಲಕ್ಕಾಡ್ ಕೋರ್ಟ್ ಮುಂದಿನ ಆದೇಶ ಬರುವವರೆಗೂ ಈ ಹಾಡನ್ನು ಎಲ್ಲಿಯೂ ಹಂಚಿಕೆ ಮಾಡುವಂತಿಲ್ಲ ಎಂದು ತಡೆಯಾಜ್ಞೆ ನೀಡಿತ್ತು.
ಇನ್ನೂ ಕೋರ್ಟ್ ಆದೇಶದ ಪ್ರತಿ ಚಿತ್ರತಂಡಕ್ಕೆ ಸಿಗದೇ ಇರುವ ಕಾರಣದಿಂದಾಗಿ ಥಿಯೇಟರ್ ನಲ್ಲಿ ಈ ಹಾಡು ಕೇಳಿ ಬರುತ್ತಿದೆ. ಆದೇಶ ಪ್ರತಿ ಸಿಕ್ಕ ನಂತರ ಯಾವ ನಿರ್ಧಾರ ತಗೆದುಕೊಳ್ಳುತ್ತಾರೋ ಕಾದು ನೋಡಬೇಕು. ಅಷ್ಟೇ ಅಲ್ಲದೇ, ಮೊನ್ನೆಯಷ್ಟೇ ಬ್ಯಾಂಡ್ ನ ಸದಸ್ಯರೊಬ್ಬರು ಫೇಸ್ ಬುಕ್ ನಲ್ಲಿ ಬರೆದುಕೊಂಡು, ‘ಕ್ರೆಡಿಟ್ ಕೊಟ್ಟು ಈ ಹಾಡನ್ನು ಬಳಸಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ, ಮ್ಯೂಸಿಕ್ ಸಂಸ್ಥೆ ಆ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ.
ಎರಡೆರಡು ಕೋರ್ಟಿನಿಂದ ಈ ಹಾಡಿಗೆ ತಡೆಯಾಜ್ಞೆ ನೀಡಿದೆ. ಆದರೂ, ಕನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ಈ ಸಿನಿಮಾ ಪ್ರದರ್ಶನವಾಗುತ್ತಿದೆ. ಮುಂದಿನ ದಿನಗಳಲ್ಲಿ ಕೋರ್ಟ್ ಮಾತಿಗೆ ಚಿತ್ರತಂಡ ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತದೆಯೋ ಕಾದು ನೋಡಬೇಕು. ಅಷ್ಟರಲ್ಲಿ ಸಂಧಾನ ಏನಾದರೂ ನಡೆದರೂ ಅಚ್ಚರಿ ಪಡಬೇಕಿಲ್ಲ ಎನ್ನಲಾಗುತ್ತಿದೆ. ಆದರೆ, ಹಾಡನ್ನೇ ಹೊಂಬಾಳೆ ಸಂಸ್ಥೆ ತಗೆದುಹಾಕಿದೆ.
Live Tv
[brid partner=56869869 player=32851 video=960834 autoplay=true]