Tag: ಡಿಲೀಟ್

  • ಈ ಬಾರಿ 7.43 ಲಕ್ಷ ನಕಲಿ MGNREGA ಜಾಬ್ ಕಾರ್ಡ್ ಡಿಲೀಟ್ – ಯುಪಿಯಲ್ಲೇ ಅತಿ ಹೆಚ್ಚು

    ಈ ಬಾರಿ 7.43 ಲಕ್ಷ ನಕಲಿ MGNREGA ಜಾಬ್ ಕಾರ್ಡ್ ಡಿಲೀಟ್ – ಯುಪಿಯಲ್ಲೇ ಅತಿ ಹೆಚ್ಚು

    ನವದೆಹಲಿ: 2022-23ರ ಆರ್ಥಿಕ ವರ್ಷದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಅಡಿಯಲ್ಲಿ 7.43 ಲಕ್ಷಕ್ಕೂ ಹೆಚ್ಚು ನಕಲಿ ಉದ್ಯೋಗ ಕಾರ್ಡ್‌ಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ.

    ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿ ಈ ವಿವರಗಳನ್ನು ಹಂಚಿಕೊಂಡಿದ್ದಾರೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ಬಾರಿ ನಕಲಿ ಜಾಬ್ ಕಾರ್ಡ್‌ಗಳನ್ನು ತೆಗೆದುಹಾಕುವಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. 2021-22 ರಲ್ಲಿ 3,06,944 ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿತ್ತು. ಆದರೆ ಈ ಬಾರಿ ಅದರ ಸಂಖ್ಯೆ 7,43,457 ಕ್ಕೆ ಏರಿಕೆಯಾಗಿದೆ.

    ಈ ಪ್ರಕ್ರಿಯೆಯಲ್ಲಿ ಉತ್ತರ ಪ್ರದೇಶದಲ್ಲಿ 2.96 ಲಕ್ಷಕ್ಕೂ ಹೆಚ್ಚು ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸಲಾಗಿದೆ. ಇದು ದೇಶದಲ್ಲೇ ಅತಿ ಹೆಚ್ಚು ಎಂದು ವರದಿಯಾಗಿದೆ. ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಒದಗಿಸಿರುವ ವಿವರದಲ್ಲಿ, ಉತ್ತರ ಪ್ರದೇಶದಲ್ಲಿ 2,96,464 ನಕಲಿ ಜಾಬ್ ಕಾರ್ಡ್‌ಗಳನ್ನು ಅಳಿಸುವ ಮೂಲಕ ದೇಶದಲ್ಲೆ ಅಗ್ರ ಸ್ಥಾನದಲ್ಲಿದೆ. ಒಡಿಶಾದಲ್ಲಿ 1,14,333 ನಕಲಿ ಜಾಬ್ ಕಾರ್ಡ್ ಅಳಿಸುವ ಮೂಲಕ ನಂತರದ ಸ್ಥಾನದಲ್ಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

    ಜಾಬ್ ಕಾರ್ಡ್‌ಗಳನ್ನು ಅಳಿಸುವ ಮತ್ತು ಅಪ್ಡೇಟ್ ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ. MGNREGA ಕಾಯಿದೆಯ ಸೆಕ್ಷನ್ 25ರ ಪ್ರಕಾರ ಇದನ್ನು ಉಲ್ಲಂಘಿಸುವವರು 1,000 ರೂ.ವರೆಗೆ ದಂಡವನ್ನು ಕಟ್ಟಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆ ಪ್ರಕರಣ – ಇಬ್ಬರು ಶೂಟರ್ ಸೇರಿ ಮೂವರು ಅರೆಸ್ಟ್

  • ನಾಗಚೈತನ್ಯ ನೆನಪುಗಳನ್ನು ಅಳಿಸಿ ಹಾಕಿದ ಸಮಂತಾ

    ನಾಗಚೈತನ್ಯ ನೆನಪುಗಳನ್ನು ಅಳಿಸಿ ಹಾಕಿದ ಸಮಂತಾ

    ಹೈದರಾಬಾದ್: ಟಾಲಿವುಡ್ ನಟಿ ಸಮಂತಾ, ನಾಗಚೈತನ್ಯ ಜೊತೆ ಕ್ಲಿಕ್ಕಿಸಿಕೊಂಡಿದ್ದ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಡಿಲೀಟ್ ಮಾಡುವ ಮೂಲಕ ಮಾಜಿ ಪತಿಯ ನೆನಪುಗಳನ್ನು ಅಳಿಸಿ ಹಾಕಿದ್ದಾರೆ.

    ಟಾಲಿವುಡ್ ಕ್ಯೂಟ್ ಪೇರ್ ಎಂದೇ ಫೇಮಸ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನಾ ಪಡೆದ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಸದ್ಯ ದಾಂಪತ್ಯ ಜೀವನದಲ್ಲಿ ನಡೆದ ಕಹಿ ಘಟನೆಗಳನ್ನು ಮರೆಯಲು ಸಮಂತಾ ಪ್ರವಾಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ರಿಷಿಕೇಷಕ್ಕೆ ಭೇಟಿ ನೀಡಿದ್ದ ಅವರು, ಇದೀಗ ದುಬೈಗೆ ಹಾರಿದ್ದಾರೆ. ಇದನ್ನೂ ಓದಿ:  ‘ಪುಷ್ಪ’ ಸಾಂಗ್ ನಲ್ಲಿ ಪಡ್ಡೆ ಹೈಕ್ಳ ನಿದ್ದೆ ಕೆಡಿಸಿದ ರಶ್ಮಿಕಾ

    ವಿಚ್ಛೇದನ ಬಳಿಕ ಪ್ರವಾಸ ಕೈಗೊಂಡಿರುವ ಸಮಂತಾ ತಮ್ಮ ದಿನಚರಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡುವುದರ ಜೊತೆಗೆ ವಿವಿಧ ಸಾಲುಗಳನ್ನು ಹಾಕುವ ಮೂಲಕ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಇದನ್ನೂ ಓದಿ: ವಿಚ್ಛೇದನದ ನಂತ್ರ ಚಾರ್ ಧಾಮ್ ಯಾತ್ರೆಯಲ್ಲಿ ನಟಿ ಸಮಂತಾ

    ಬಹುವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಸಮಂತಾ ಹಾಗೂ ನಾಗಚೈತನ್ಯ ಸಾಕಷ್ಟು ಸಮಯ ಒಟ್ಟಿಗೆ ಕಳೆದಿದ್ದಾರೆ. ಈ ವೇಳೆ ಇಬ್ಬರು ಹಲವಾರು ರೀತಿಯ ಸಾಕಷ್ಟುಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದರು. ಇವುಗಳನ್ನು ಒಂದಷ್ಟು ಚೆಂದದ ಫೋಟೋಗಳನ್ನು ಸಮಂತಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದರು. ಆದರೆ ಇದೀಗ ನಾಗಚೈತನ್ಯಯಿಂದ ದೂರ ಇರುವ ಸಮಂತಾ ಅವರ ಜೊತೆ ಕಳೆದ ನೆನಪುಗಳನ್ನು ಮರೆಯಲು ಪ್ರಯತ್ನಿಸುತ್ತಿದ್ದು, ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಮಾಜಿ ಪತಿ ಜೊತೆಗಿರುವ ಎಲ್ಲಾ ಫೋಟೋಗಳನ್ನು ಡಿಲೀಟ್ ಮಾಡಿದ್ದಾರೆ. ಇದನ್ನೂ ಓದಿ: ಕಷ್ಟಕರವಾದ ರಸ್ತೆಗಳು ಸುಂದರ ತಾಣಗಳಿಗೆ ದಾರಿ ಮಾಡಿಕೊಡುತ್ತೆ: ದೀಪಿಕಾ ದಾಸ್

    ವಿಶೇಷವೆಂದರೆ ಸಮಂತಾ ನಾಗಚೈತನ್ಯ ಜೊತೆಗಿರುವ ಫೋಟೋಗಳನ್ನು ಮಾತ್ರ ಡಿಲೀಟ್ ಮಾಡಿದ್ದಾರೆ. ಆದರೆ ಇಬ್ಬರು ಇನ್‍ಸ್ಟಾಗ್ರಾಮ್‍ನಲ್ಲಿ ಪರಸ್ಪರ ಫಾಲೋ ಮಾಡುತ್ತಿದ್ದಾರೆ. ಇದನ್ನೂ ಓದಿ: ವಿಚ್ಛೇದನ ಪಡೆದ ಬೆನ್ನಲ್ಲೇ ಆಶ್ರಮಕ್ಕೆ ಹೋಗಿದ್ದಾರಾ ಸಮಂತಾ?

  • ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ಮದುವೆ ಊಟಕ್ಕೆ ಕರೆದಿಲ್ಲವೆಂದು ಫೋಟೋಗಳನ್ನೇ ಡಿಲೀಟ್ ಮಾಡಿದ ಫೋಟೋಗ್ರಾಫರ್!

    ನವದೆಹಲಿ: ಮದುವೆಗೆ ಬರುವ ಅತಿಥಿಗಳಿಗೆ ಊಟ ಮಾಡಿಕೊಂಡು ಹೋಗಿ ಎಂದು ಹೇಳುತ್ತಾರೆ. ಆದರೆ ಮದುವೆಗೆ ಬರುವ ಫೋಟೋಗ್ರಾಫರ್ ಅಥವಾ ಇನ್ನಿತರ ಕೆಲಸಗಾರರನ್ನು ಕಡೆಗಣಿಸಲಾಗುತ್ತದೆ. ಊಟ, ತಿಂಡಿ ವೇಳೆಯಾದರೂ ಫೋಟೋ ತೆಗೆದುಕೊಳ್ಳುವಲ್ಲಿ ಬಿಜಿಯಾಗಿರುವ ಮದುಮಕ್ಕಳು, ಕುಟುಂಬಸ್ಥರು ಅವರಿಗೆ ಊಟ ಮಾಡಿದ್ರಾ ಎಂದು ಕೇಳುವುದು ಕಡಿಮೆ. ಇದಕ್ಕೆ ಊದಾಹರಣೆ ಎನ್ನುವಂತಹ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ.

    ಊಟ, ತಿಂಡಿ, ನೀರನ್ನೂ ಕೊಡದೆ ದಿನಪೂರ್ತಿ ದುಡಿಸಿಕೊಂಡ ಕಾರಣ ಫೋಟೋಗ್ರಾಫರ್ ಒಬ್ಬ ಸಿಟ್ಟಿನಿಂದ ಸಂಜೆ ಮದುವೆ ಸಮಾರಂಭ ಸಂಪೂರ್ಣ ಫೋಟೋಗಳನ್ನು ವಧು, ವರನ ಎದುರಿಗೆ ಡಿಲೀಟ್ ಮಾಡಿ ಮದುವೆ ಮನೆಯಿಂದ ಹೊರನಡೆದಿದ್ದಾನೆ. ಇದನ್ನೂ ಓದಿ:  ನವಜೋತ್ ಸಿಂಗ್ ಸಿಧುನಂತೆ ಕನ್ಹಯ್ಯ ಕುಮಾರ್ ಕಾಂಗ್ರೆಸ್ಸನ್ನು ನಾಶ ಮಾಡುತ್ತಾರೆ: ಆರ್​​ಜೆಡಿ

    ಹಣವನ್ನು ಊಳಿಸುವುದಕ್ಕಾಗಿ ಮುಮಗ ತನ್ನ ಸ್ನೇಹಿತನಿಗೆ ಫೋಟೋಗ್ರಾಫರ್ ಆಗಿ ಬರಲು ಹೇಳಿದ್ದಾನೆ. ನಾಯಿಯ ಫೋಟೋ ತೆಗೆದು ಸಾಮಾಜಿ ಜಾಲತಾಣದಲ್ಲಿ ಅವುಗಳನ್ನು ಶೇರ್ ಮಾಡುವುದರಲ್ಲಿ ಪಳಗಿರುವ ಸ್ನೇಹಿತ ತಾನು ಮದುವೆ ಫೋಟೋಗ್ರಾಫಿಗೆ ಬರುವುದಿಲ್ಲ ಎಂದರೂ ಕೇಳದೇ ಮದುಮಗ ಒತ್ತಾಯ ಮಾಡಿದ್ದಾನೆ. ಕೊನೆಗೆ ಇಂತಿಷ್ಟು ದುಡ್ಡು ಎಂದು ಮಾತುಕತೆ ನಡೆಸಿ ಸ್ನೇಹಿತ ಒಪ್ಪಿಕೊಂಡಿದ್ದಾನೆ.

    ಬೆಳಗಿನ ಜಾವದಿಂದ ಸಂಜೆಯವರೆಗೂ ಮದುವೆ ಕಾರ್ಯಕ್ರಮ ನಡೆದಿದೆ. ಆದರೆ ಒಂದೇ ಒಂದು ಸಲವು ಯಾರೂ ಫೋಟೋಗ್ರಾಫರ್‍ನನ್ನು ಮಾತನಾಡಿಸಿಲ್ಲ. ಊಟ, ತಿಂಡಿಗೂ ಕೇಳಿಲ್ಲ. ಈತ ಅಲ್ಲಿರುವವರ ಬಳಿ ಬಾಯಿಬಿಟ್ಟು ಹೇಳಿದರು ಇದೊಂದು ಫೋಟೋ ಎನ್ನುತ್ತಲೇ ಕಾಲ ಕಳೇದಿದ್ದಾರೆ. ಇದರಿಂದ ಸಿಟ್ಟಿಗೆದ್ದ ಫೋಟೋಗ್ರಾಫರ್ ಮದುವೆ ಕಾರ್ಯಕ್ರಮ ಮುಗಿಯುವವರೆಗೆ ಕಾದು ನಂತರ ಸಂಪೂರ್ಣ ಫೋಟೋ ಡಿಲೀಟ್ ಮಾಡಿ ಸೇಡು ತೀರಿಸಿಕೊಂಡಿದ್ದಾನೆ.
    ಸಂಜೆಯವರೆಗೂ ಊಟ, ತಿಂಡಿ ನೀಡಿಲ್ಲ. ಸಿಕ್ಕಾಪಟ್ಟೆ ಶಕೆ ಇದೆ. ಯಾರು ಒಂದು ಲೋಟ ನೀರನ್ನು ಕೊಟ್ಟಿಲ್ಲ. ಆದ್ದರಿಂದ ಹೀಗೆ ಮಾಡಿದೆ ಎಂದು ತನಗಾಗಿರುವ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾನೆ. ಇದಕ್ಕೆ ನೂರಾರು ಕಾಮೆಂಟ್‍ಗಳು ಬಂದಿದೆ.
  • ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಟ್ವೀಟ್ ಡಿಲೀಟ್ ಮಾಡಿದ್ದಕ್ಕೆ ಜಗ್ಗೇಶ್ ಸ್ಪಷ್ಟನೆ

    ಬೆಂಗಳೂರು: ಮಗನ ಕಾರ್ ಅಪಘಾತದ ಕುರಿತು ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಬಳಿಕ ಡಿಲೀಟ್ ಮಾಡಿದ್ದರು. ಇದರಿಂದಾಗಿ ಹಲವು ಪ್ರಶ್ನೆಗಳು ಎದ್ದಿದ್ದವು. ಇದಕ್ಕೆ ಇದೀಗ ಜಗ್ಗೇಶ್ ಟ್ವೀಟ್ ಮೂಲಕವೇ ಸ್ಪಷ್ಟನೆ ನೀಡಿದ್ದಾರೆ.

    ಮಗನ ಕಾರ್ ಅಪಘಾತದ ಚಿತ್ರ ನೋಡಿದರೆ ನನಗೆ ಹೃದಯ ಬಡಿತ ಹೆಚ್ಚಾಗುತ್ತಿದೆ. ಕೆಟ್ಟ ಭಯ ಆವರಿಸುತ್ತದೆ. ಬೆಳಗ್ಗೆಯಿಂದ ಏನೂ ತಿನ್ನಲಾಗದೆ, ಕೆಟ್ಟ ಕಲ್ಪನೆಗಳು ನನ್ನ ಕಾಡುತ್ತಿವೆ. ಮನೆಯವರು ಅದನ್ನು ನೋಡದಂತೆ ವಿನಂತಿ ಮಾಡಿದರು. ಹೀಗಾಗಿ ಹಾಕಿದ ವಿಷಯ ಡಿಲೀಟ್ ಮಾಡಿದೆ ಎಂದು ತಿಳಿಸಿದ್ದಾರೆ.

    ಬೆಳಗ್ಗೆ ಟ್ವೀಟ್ ಮಾಡಿದ್ದ ನಟ ಜಗ್ಗೇಶ್, ಕೊರೊನಾ ಬಂದಾಗಿನಿಂದ ಹೊರ ಹೋಗಿಲ್ಲ, ಹೋಗಿಬರುವೆ ಎಂದು ಅಮ್ಮನಿಗೆ ಹೇಳಿ ಯತಿರಾಜ್ ಮನೆಯಿಂದ ಹೋರ ಹೋಗಿದ್ದನು. ಪ್ರತಿಬಾರಿ ಅವನ ಇಷ್ಟದ ಬೆಂಗಳೂರು-ಚಿಕ್ಕಬಳ್ಳಾಪುರಕ್ಕೆ ಹೋಗಿ ಬರುವಾಗ ಅಡ್ಡ ಬಂದ ನಾಯಿ ರಕ್ಷಿಸಲು ಹೋಗಿ ರಸ್ತೆ ವಿಭಜಕ್ಕೆ ಕಾರ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದಿದೆ. ರಾಯರ ದಯೆ ಹಾಗೂ ನಿಮ್ಮ ಶುಭಹಾರೈಕೆ ಯತಿರಾಜನಿಗೆ ಸಣ್ಣ ಗಾಯವೂ ಇಲ್ಲ.

    ರಾಯರು ನನ್ನ ಜೊತೆ ಸದಾ ಇರುತ್ತಾರೆ, ಇದ್ದಾರೆ. ಇಂಥ ಘಟನೆಗಳು ಚಮತ್ಕಾರ ನನ್ನ ಬದುಕಲ್ಲಿ ನಡೆಯುವುದೇ ನಾನಿದ್ದೀನೋ, ಇರುತ್ತೀನೋ ನಿನ್ನ ಜೊತೆ ಯಾವಾಗಲು ಎಂದು ರಾಯರು ಅವರ ಪವಾಡ ನಿರೂಪಿಸಲು. ನಿನ್ನೆ ಪೂಜೆಯಲ್ಲಿ ಕುಟುಂಬದ ರಕ್ಷಣೆಗೆ ಪ್ರಾರ್ಥಿಸಿದ್ದೆ. ಸದಾ ಅವರ ಸ್ಮರಣೆಯಲ್ಲೇ ಬದುಕುವ ನನಗೆ ಇದು ಮತ್ತೊಂದು ಪವಾಡ. ನಂಬಿ ಕೆಟ್ಟವರಿಲ್ಲಾ ಗುರುರಾಯರ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದರು.

    ಅಪಘಾತ ಆಗಿದ್ದೇಗೆ?: ಚಿಕ್ಕಬಳ್ಳಾಪುರ ನಗರ ಹೊರವಲಯದ ಬೆಂಗಳೂರು ಹೈದರಾಬಾದ್ ಹೈವೆಯಲ್ಲಿ ಅಗಲಗುರ್ಕಿ ಸೇತುವೆ ಬಳಿ ನಟ ಜಗ್ಗೇಶ್ ಪುತ್ರ ಯತಿರಾಜ್ ಕಾರು ಅಪಘಾತಕ್ಕೀಡಾಗಿದೆ. ಕಾರಿನಲ್ಲಿದ್ದ ಯತಿರಾಜ್ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ಕಡೆಯಿಂದ ಬೆಂಗಳೂರು ಕಡೆಗೆ ಬಿಎಂಡಬ್ಲ್ಯೂ ಕಾರಿನಲ್ಲಿ ಬರ್ತಿದ್ದ ವೇಳೆ ಅಗಲಗುರ್ಕಿ ಸೇತುವೆ ಅಂತ್ಯಕ್ಕೆ ಯೂ ಟರ್ನ್ ಇದೆ. ಅಡ್ಡ ಬಂದ ನಾಯಿ/ಬೈಕ್ ತಪ್ಪಿಸಲು ಹೋಗಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರು ಚಲಿಸುತ್ತಿದ್ದ ವಿರುದ್ಧ ದಿಕ್ಕಿನ ರಸ್ತೆಗೆ ಜಂಪ್ ಮಾಡಿದೆ. ತದನಂತರ ರಸ್ತೆ ಬದಿ 200-300 ಮೀಟರ್ ದೂರ ಕಾರು ರಭಸವಾಗಿ ನುಗ್ಗಿದ್ದು, ಕೊನೆಯಲ್ಲಿ ಮರವೊಂದಕ್ಕೆ ಡಿಕ್ಕಿ ಹೊಡೆದು ನಿಂತಿದೆ.

    ಅಪಘಾತದ ರಭಸಕ್ಕೆ ಮರದ ಕೊಂಬೆ ಸಹ ಮುರಿದಿದ್ದು, ಮರಕ್ಕೆ ಡಿಕ್ಕಿ ಹೊಡೆದು ಮತ್ತೆ ರಸ್ತೆ ಬದಿಗೆ ಉಲ್ಟಾ ತಿರುಗಿ ನಿಂತಿದೆ. ಪರಿಣಾಮ ಕಾರಿನಲ್ಲಿದ್ದ 4 ಏರ್ ಬ್ಯಾಗ್ ಗಳು ಬಿಚ್ಚಿಕೊಂಡಿವೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ ಯತಿರಾಜ್ ಕೆಳಗಿಳಿದಿದ್ದು ಅಷ್ಟರಲ್ಲೇ ಅಲ್ಲೇ ರಸ್ತೆ ಬದಿ ಜಮೀನಿನಲ್ಲಿ ವಿದ್ಯುತ್ ಕಂಬ ಆಳವಡಿಸುತ್ತಿದ್ದ ಕಾರ್ಮಿಕರು ಯತಿರಾಜ್ ರಕ್ಷಣೆಗೆ ಧಾವಿಸಿದ್ದಾರೆ. ತತ್ ಕ್ಷಣ ನೀರು ಕುಡಿಸಿ ಗಾಬರಿಯಾಗಿದ್ದ ಯತಿರಾಜ್ ರನ್ನ ಸಮಾಧಾನ ಮಾಡಿ ಆಟೋ ಮೂಲಕ ಕರೆದುಕೊಂಡು ಆಸ್ಪತ್ರೆಯತ್ತ ಹೋಗಿದ್ದಾರೆ. ಆದ್ರೆ ಆಸ್ಪತ್ರೆಗೆ ಹೋದ್ರಾ ಇಲ್ಲ ಎಂಬುದು ತಿಳಿದುಬಂದಿಲ್ಲ. ವಿಷಯ ತಿಳಿದು ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಘಟನಾ ಸ್ಥಳದಲ್ಲಿದ್ದ ಕಾರನ್ನ ಪೊಲೀಸ್ ಠಾಣಾ ಆವರಣಕ್ಕೆ ಶಿಫ್ಟ್ ಮಾಡಿದ್ದಾರೆ.

  • ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

    ಯುಟ್ಯೂಬ್‍ನಿಂದ ದಿಢೀರ್ ಡಿಲೀಟ್ ಆಯ್ತು ಚಂದನವನ ತಾರೆಯರೆಲ್ಲ ಅಭಿನಯಿಸಿದ್ದ ಹಾಡು

    ಬೆಂಗಳೂರು: ಇತ್ತೀಚೆಗೆ ಬದಲಾಗು ನೀನು ಬದಲಾಯಿಸು ನೀನು ಹಾಡಿನ ಮೂಲಕ ಸ್ಯಾಂಡಲ್‍ವುಡ್ ಎಲ್ಲ ತಾರೆಯರು ಸೇರಿ ಕೊರೊನಾ ವಿರುದ್ಧ ಜಾಗೃತಿ ಮೂಡಿಸಿದ್ದರು.

    ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಸ್ತುತ ಪಡಿಸಿದ್ದ ಹಾಡನ್ನು ಪವರ್ ಓಡೆಯರ್ ನಿರ್ದೇಶನ ಮಾಡಿದ್ದರು. ಎಲ್ಲ ಕಲಾವಿದರ ಮನೆಗೆ ಹೋಗಿ ಹಾಡನ್ನು ಚಿತ್ರೀಕರಣ ಮಾಡಿದ್ದರು. ಅಂತಯೇ ಜೂನ್ 5ರಂದು ಈ ಹಾಡು ಸೋಷಿಯಲ್ ಮೀಡಿಯಾದಲ್ಲಿ ದಿ ಬೀಟ್ ಆಡಿಯೋದಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಿತ್ತು.

    ಆದರೆ ಈಗ ಏಕಾಏಕಿ ಬದಲಾಗು ನೀನು ಬದಲಾಯಿಸು ನೀನು ಹಾಡು ಡಿಲೀಟ್ ಆಗಿದೆ. ಈ ಒಂದು ಹಾಡಿನಲ್ಲಿ ಸುದೀಪ್ ಅವರನ್ನು ಹೊರತು ಪಡಿಸಿ ದರ್ಶನ್, ಯಶ್, ಅಪ್ಪು, ಶಿವಣ್ಣ, ಗಣೇಶ್, ಸುಮಲತಾ, ಅಬಿಷೇಕ್, ಉಪೇಂದ್ರ ಸೇರಿದಂತೆ ಬಹುತೇಕ ಕನ್ನಡದ ಕಾಲವಿದರು ಹಾಡಿನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಈ ಹಾಡಿ ದಿಢೀರ್ ಡಿಲೀಟ್ ಆಗಿರೋದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

    ಸಾರ್ವಜನಿಕರಲ್ಲಿ ಕೊರೊನಾ ನಂತರದ ದಿನಗಳ ಬಗ್ಗೆ ಅರಿವು ಮೂಡಿಸಲು ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಈ ಹಾಡನ್ನು ಮಾಡಿಸಲಾಗಿತ್ತು. ಸ್ಯಾಂಡಲ್‍ವುಡ್‍ನ ಎಲ್ಲಾ ಗಾಯಕರು ಇದರಲ್ಲಿ ಧನಿಯಾಗಿದ್ದರು. ಈ ಹಾಡು ಪವನ್ ಒಡೆಯರ್ ಮತ್ತು ಇಮ್ರಾನ್ ಸರ್ಧರಿಯಾ ಅವರ ನೇತೃತ್ವದಲ್ಲಿ ಮೂಡಿ ಬಂದಿತ್ತು. ಇದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ಸಾಥ್ ನೀಡಿದ್ದರು. ಜೊತೆಗೆ ರಾಜಕಾರಣಿಗಳು ಕೂಡ ಸಾಂಗಿನಲ್ಲಿ ಕಾಣಿಸಿಕೊಂಡಿದ್ದರು.

  • ಅಧಿಕಾರಿಗಳ ನಿರ್ಲಕ್ಷ್ಯ – ಮತದಾನದ ಹಕ್ಕು ಕಳೆದುಕೊಂಡ ರಾಯಚೂರು ಜನತೆ

    ಅಧಿಕಾರಿಗಳ ನಿರ್ಲಕ್ಷ್ಯ – ಮತದಾನದ ಹಕ್ಕು ಕಳೆದುಕೊಂಡ ರಾಯಚೂರು ಜನತೆ

    ರಾಯಚೂರು: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜಿಲ್ಲೆಯಲ್ಲಿ ನೂರಾರು ಜನ ಮತದಾರರು ಮತದಾನದ ಹಕ್ಕು ಕಳೆದುಕೊಂಡಿದ್ದಾರೆ.

    ಮತದಾರರ ಪಟ್ಟಿಯಲ್ಲಿ ಮಹಾಗೊಂದಲವನ್ನ ಸೃಷ್ಟಿಸಿರುವ ಅಧಿಕಾರಿಗಳು ಬದುಕಿರುವ ಮತದಾರರ ಹೆಸರನ್ನೆ ಮತದಾರರ ಪಟ್ಟಿಯಿಂದ ತೆಗೆದುಹಾಕಿದ್ದಾರೆ. ರಾಯಚೂರು ತಾಲೂಕಿನ ಜಾಗೀರ್ ವೆಂಕಟಾಪುರ ಗ್ರಾಮವೊಂದರಲ್ಲೆ 20ಕ್ಕೂ ಹೆಚ್ಚು ಮತದಾರರಿಗೆ ವಂಚನೆಯಾಗಿದೆ.

    ಬೇರೆ ಬೇರೆ ಗ್ರಾಮಗಳು ಸೇರಿದಂತೆ ನೂರಾರು ಮತದಾರರ ಹೆಸರು ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದೆ. ಹೀಗಾಗಿ ಗ್ರಾಮಸ್ಥರು ನಾವು ಬದುಕಿದ್ದೇವೆ ನಮಗೆ ಮತದಾನಕ್ಕೆ ಅವಕಾಶ ಕೊಡಿ ಎಂದು ಆಗ್ರಹಿಸಿದ್ದಾರೆ.

    ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಫೋಟೋದಲ್ಲೂ ತಪ್ಪು ಮಾಹಿತಿಯನ್ನ ಮುದ್ರಿಸಿದ್ದರಿಂದ ಗೊಂದಲ ಸೃಷ್ಟಿಯಾಗಿದೆ. ಅರ್ಜಿ ಸಲ್ಲಿಸದೇ ಇದ್ದರೂ ಮತದಾರರ ಬೂತ್‍ಗಳ ಬದಲಾವಣೆ ಮಾಡಿ ಮತದಾರರಿಗೆ ಅನಾನುಕೂಲ ಮಾಡಲಾಗಿದೆ.

    ರಾಯಚೂರಿನಲ್ಲಿ ಮುಸ್ಲಿಮರು ವಾಸಮಾಡುವ ಎಲ್‍ಬಿಎಸ್ ನಗರ ಸೇರಿ ಇತರ ವಾರ್ಡ್ ಗಳ ಮತದಾರರನ್ನು ಬೇರೆ ವಾರ್ಡ್ ಗಳಿಗೆ ವರ್ಗಾವಣೆ ಮಾಡಲಾಗಿದೆ. ಈ ಗೊಂದಲಕ್ಕೆ ರಾಯಚೂರು ತಹಶಿಲ್ದಾರ್ ಡಾ.ಹಂಪಣ್ಣ ಸಜ್ಜನ್ ಹಾಗೂ ಶಿರಸ್ತೆದಾರ್ ಕಾರಣ ಅಂತ ಮುಸ್ಲಿಂ ಮತದಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಡಿಲೀಟ್ ಪ್ರಕ್ರಿಯೆ ಹೇಗೆ ನಡೆಯುತ್ತೆ?
    ಮತದಾರ ಒಂದು ಗ್ರಾಮದಲ್ಲಿ ವಾಸಿಸುತ್ತಿದ್ದರೆ ಆತ ಬದುಕಿರುವವರೆಗೂ ಮತದಾನದ ಪಟ್ಟಿಯಲ್ಲಿ ಹೆಸರು ಇರುತ್ತದೆ. ಒಂದು ವೇಳೆ ಮತದಾರ ಮೃತಪಟ್ಟರೆ ಮಾತ್ರ ಮತದಾನದ ಪಟ್ಟಿಯಿಂದ ಹೆಸರನ್ನು ಡಿಲೀಟ್ ಮಾಡಲಾಗುತ್ತದೆ. ಇಲ್ಲವಾದಲ್ಲಿ ಮತದಾರ ಬೇರೆ ಗ್ರಾಮ-ನಗರಕ್ಕೆ ಹೋಗಿ ನೆಲೆಸಿದರೆ, ಮತದಾರ ತಮ್ಮ ಮತದಾನದ ಬೂತ್‍ಗಳ ಬದಲಾವಣೆ ಮಾಡಿ ಎಂದು ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬೇಕು. ಆಗ ಅಧಿಕಾರಿಗಳು ಪರಿಶೀಲನೆ ನಡೆಸಿ ಮತದಾರನ ವಿಳಾಸಕ್ಕೆ ಬೂತ್‍ಗಳ ಬದಲಾವಣೆ ಮಾಡಿ ನಂತರ ಪಟ್ಟಿಯಿಂದ ಡಿಲೀಟ್ ಮಾಡಬೇಕಾಗುತ್ತದೆ.

  • ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಟ್ವೀಟ್ ಡಿಲೀಟ್ ಮಾಡಿದ್ರು ತೇಜಸ್ವಿ ಸೂರ್ಯ

    ಮಹಿಳಾ ಮೀಸಲಾತಿಗೆ ಸಂಬಂಧಿಸಿದ ಟ್ವೀಟ್ ಡಿಲೀಟ್ ಮಾಡಿದ್ರು ತೇಜಸ್ವಿ ಸೂರ್ಯ

    ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಅತಿ ಕಿರಿಯ ಅಭ್ಯರ್ಥಿ ಎಂದೇ ಬಿಂಬಿತವಾಗುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ 28 ವರ್ಷದ ತೇಜಸ್ವಿ ಸೂರ್ಯ 2014ರ ಒಂದು ಟ್ವೀಟ್ ಡಿಲೀಟ್ ಮಾಡಿದ್ದಾರೆ.

    ವೃತ್ತಿಯಲ್ಲಿ ವಕೀಲರಾಗಿರುವ ತೇಜಸ್ವಿ ಅವರು 2014ರ ಜೂನ್ 10 ರಂದು, “ಮಹಿಳಾ ಮೀಸಲಾತಿ ಮಸೂದೆ ಹೊರತು ಪಡಿಸಿ ಮೋದಿ ಸರ್ಕಾರದ ಕಾರ್ಯಗಳು ಸ್ಫೂರ್ತಿದಾಯಕ. ಮಹಿಳಾ ಮೀಸಲಾತಿ ವಾಸ್ತವವಾಗಿ ಜಾರಿಗೆ ಬಂದರೆ ಭಯ ಉಂಟಾಗುತ್ತದೆ” ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಅವರು ಈಗ ಡಿಲೀಟ್ ಮಾಡಿದ್ದಾರೆ.

    ಬೆಂಗಳೂರು ದಕ್ಷಿಣ ಕ್ಷೇತ್ರದ ಟಿಕೆಟ್ ಘೋಷಣೆಯಾದ ಬಳಿಕ ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭವಾಗಿದೆ.

    ಕಾನೂನು ಪದವಿ ಓದಿರುವ ತೇಜಸ್ವಿ ಸೂರ್ಯ, ಪ್ರಸ್ತುತ ರಾಜ್ಯ ಬಿಜೆಪಿ ಯುವ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಾಮಾಜಿಕ ಜಾಲತಾಣದ ಸದಸ್ಯರಾಗಿರುವ ಇವರು ಶಾಸಕ ರವಿ ಸುಬ್ರಮಣ್ಯ ಅವರ ಅಣ್ಣನ ಮಗ. ಎಬಿವಿಪಿ, ಆರ್ ಎಸ್ಎಸ್ ಮೂಲಕ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮಾಧ್ಯಮಗಳಲ್ಲಿ ಪಕ್ಷದ ಪರವಾಗಿ ಭಾಗವಹಿಸುತ್ತಿರುವ ಇವರು ಉತ್ತಮ ಭಾಷಣಕಾರರಾಗಿದ್ದಾರೆ.

  • ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಬೆಂಗಳೂರಿನಿಂದ ಮೈಸೂರಿಗೆ ತೆರಳಿದ್ರೂ ಚಿಕ್ಕಣ್ಣ ವೋಟ್ ಹಾಕಿಲ್ಲ!

    ಮೈಸೂರು: ಮತದಾನದ ಹಕ್ಕಿನಿಂದ ಹಾಸ್ಯನಟ ಚಿಕ್ಕಣ್ಣ ವಂಚಿತರಾಗಿದ್ದಾರೆ.

    ಚಿಕ್ಕಣ್ಣ ಮೈಸೂರಿನ ಬಲ್ಲಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತದಾರರಾಗಿದ್ದರು. ಅಲ್ಲದೇ ಹುಟ್ಟೂರಿನಲ್ಲಿ ಮತದಾನದ ಹಕ್ಕನ್ನು ಉಳಿಸಿಕೊಂಡಿದ್ದರು. ಮತದಾನಕ್ಕಾಗಿ ಬೆಂಗಳೂರಿನಿಂದ ಮೈಸೂರಿಗೂ ಕೂಡ ಆಗಮಿಸಿದ್ದರು.

    ಚಿಕ್ಕಣ್ಣ ಇಂದು ಮತಗಟ್ಟೆಗೆ ಭೇಟಿ ನೀಡಿದಾಗ ತನ್ನ ಹೆಸರಿನ ಮೇಲೆ ಡಿಲೀಟ್ ಎಂದು ಉಲ್ಲೇಖಿಸಿದ್ದಾರೆ. ವಾಸವಿಲ್ಲದ ಕಾರಣ ಡಿಲೀಟ್ ಆಗಿದೆ ಎಂದು ಮತಗಟ್ಟೆ ಸಿಬ್ಬಂದಿಗಳು ಸಬೂಬು ಹೇಳಿದ್ದಾರೆ. ಅಲ್ಲದೇ ಗ್ರಾಮದ ಹಲವರ ಹೆಸರನ್ನು ಡಿಲೀಟ್ ಮಾಡಿರುವ ಬಗ್ಗೆ ಆರೋಪಿಸಿದ್ದಾರೆ.

    ಕೊನೆಗೂ ಚಿಕ್ಕಣ ತಮ್ಮ ಮತದಾನ ಮಾಡದೆ ವಾಪಸ್ ಆಗಿದ್ದಾರೆ. ಚಿಕ್ಕಣ್ಣ ಮತದಾನಕ್ಕಾಗಿಯೇ ಬೆಂಗಳೂರಿನಿಂದ ಮೈಸೂರಿಗೆ ಬಂದಿದ್ದರು ಆದರೆ ಈಗ ಬೇಸರದಿಂದ ವಾಪಸ್ ಆಗಿದ್ದಾರೆ.

  • ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಫೋಟೋ ಡಿಲೀಟ್ ಮಾಡಿ ಮನೆ ಬಿಟ್ಟು ಓಡಿ ಹೋದ ಬಾಲಕ!

    ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಫೋಟೋ ಡಿಲೀಟ್ ಮಾಡಿ ಮನೆ ಬಿಟ್ಟು ಓಡಿ ಹೋದ ಬಾಲಕ!

    ದಾವಣಗೆರೆ: ಕ್ಲಾಸ್ ಟೀಚರ್ ಮೊಬೈಲ್ ನಲ್ಲಿ ಇದ್ದ ಫೋಟೋ ಡಿಲೀಟ್ ಮಾಡಿದ್ದಕ್ಕೆ, ಪೋಷಕರು ಹೊಡೆಯುತ್ತಾರೆ ಎಂದು ಹೆದರಿ ಬಾಲಕನೊಬ್ಬ ಮನೆ ಬಿಟ್ಟು ಪರಾರಿಯಾದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅಣ್ಣೀಗೆರೆ ಗ್ರಾಮದಲ್ಲಿ ನಡೆದಿದೆ.

    ಪ್ರಜ್ವಲ್(15) ಮನೆ ಬಿಟ್ಟು ಪರಾರಿಯಾದ ಬಾಲಕನಾಗಿದ್ದು, ಬುಧವಾರ ಕ್ಲಾಸ್ ನಲ್ಲಿ ಟೀಚರ್ ನ ಮೊಬೈಲ್ ತೆಗೆದುಕೊಂಡಿದ್ದ ಪ್ರಜ್ವಲ್ ಅದರಲ್ಲಿದ್ದ ಫೋಟೋಗಳನ್ನು ಡಿಲೀಟ್ ಮಾಡಿದ್ದನು. ಇದರಿಂದ ಸಿಟ್ಟಾದ ಟೀಚರ್ ನಿಮ್ಮ ಮನೆಯವರಿಗೆ ಹೇಳುತ್ತೇನೆ ಎಂದು ಹೆದರಿಸಿದ್ದಾರೆ.

    ಮನೆಗೆ ಹೋದರೆ ಎಲ್ಲಿ ತನ್ನ ತಾಯಿ ಹೊಡೆಯುತ್ತಾರೆ ಎಂದು ಹೆದರಿ ಪ್ರಜ್ವಲ್ ಮನೆ ಬಿಟ್ಟು ಓಡಿ ಹೋಗಿದ್ದಾನೆ. ಓಡಿ ಹೋದ ಮಗನನ್ನು ನೋಡಬೇಕೆಂದು ಪ್ರಜ್ವಲ್ ತಾಯಿ ರೋಧನೆ ಅನುಭವಿಸುತ್ತಿದ್ದಾರೆ.

    ಈ ಬಗ್ಗೆ ಸಂತೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಬಾಲಕನಿಗಾಗಿ ಪೊಲೀಸರು ಹಾಗೂ ಬಾಲಕನ ಸಂಬಂಧಿಕರು ಹುಡುಕಾಟ ನಡೆಸುತ್ತಿದ್ದಾರೆ.